ಚಿಕ್ಕಮಗಳೂರು: ನೂತನ ಸಭಾಧ್ಯಕ್ಷರಾದ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ವಿರುದ್ದ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್ ದಾಖಲಾಗಿದೆ. ಪ್ರೀತೇಶ್ ಚಿಕ್ಕಮಗಳೂರು ಎಂಬಾತ ಖಾದರ್ ವಿರುದ್ಧ ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರೀತೇಶ್ ವಿರುದ್ದ ದೂರು ಸಲ್ಲಿಸಿದ್ದಾರೆ.ಈ ಕೂಡಲೇ ಇತನ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಶ್ರೀರಾಮಸೇನೆ ಮುಖಂಡ ಪ್ರೀತೇಶ್ ಎಂಬಾತ ‘ಸದನದಲ್ಲಿ ಸಭಾಧ್ಯಕ್ಷರೇ ಅನ್ನಬೇಕಾ ಅಥವಾ ಸಾಬಾ ಧ್ಯಕ್ಷರೇ ಅನ್ನಬೇಕಾ? ಎಂಬತಹ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ. ಇತನ ಕುರಿತು ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ನೂತನ ಸರಕಾರದ ಸ್ಪೀಕರ್ ಆಗಿ ಮೊನ್ನೆಯಷ್ಟೇ ಯು ಟಿ ಖಾದರ್ ಸದನದಲ್ಲಿ ಸರ್ವಾನುಮತದಿಂದ ಆಯ್ಕೆಯಾಗಿದ್ದರು.ಖಾದರ್ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.
Author: main-admin
ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ. ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ, ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭರವಸೆ ನೀಡಿದ್ದರು. ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ. 22ರಂದು ನೇಮಿಸಲಾಗಿತ್ತು. ಈಗ ಕೆಲಸದಿಂದ ಬಿಡುಗಡೆಗೊಳಿಸಿರುವ ಆದೇಶ ಅವರ ಕೈ ತಲುಪಿದೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು. ನೂತನ ಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ಸ್ಥಳೀಯವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು. ಅವರು ಅಕ್ಟೋಬರ್ 14ರಂದು ಕರ್ತವ್ಯಕ್ಕೆ ಹಾಜರಾಗಿದ್ದರು.…
ನವದೆಹಲಿ: ತಿಹಾರ್ ಜೈಲಿನಲ್ಲಿ ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಗ್ಯಾಂಗ್‌ವಾರ್ ನಡೆದಿತ್ತು. ಪರಿಣಾಮ ಭೂಗತ ಪಾತಕಿ ತಿಲ್ಲು ತಾಜ್‌ಪುರಿಯಾ ನನ್ನ ತಿಹಾರ್ ಜೈಲಿನೊಳಗೆ ಪ್ರತಿಸ್ಪರ್ಧಿ ಗ್ಯಾಂಗ್‌ನ ಸದಸ್ಯರು ಹತ್ಯೆ ಮಾಡಿದ್ದರು. ಘಟನೆ ನಡೆದು ಹಲವು ವಾರಗಳ ನಂತ್ರ ದೆಹಲಿಯ 80 ಜೈಲು ಅಧಿಕಾರಿಗಳನ್ನ ಇಂದು ವರ್ಗಾವಣೆ ಮಾಡಲಾಗಿದೆ. ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ತಿಲ್ಲು ತಾಜ್‌ಪುರಿಯಾ ಹತ್ಯೆಯನ್ನ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ಜೈಲಿನೊಳಗಿನ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಮತ್ತು ಕೆಳಹಂತದಲ್ಲಿ ಬದಲಾವಣೆ ತರಲು ಅಧಿಕಾರಿ ಹಾಗೂ ಸಿಬ್ಬಂದಿಯ ವರ್ಗಾವಣೆ ಮಾಡಲಾಗಿದೆ.
ಉಳ್ಳಾಲ ಕೋಟೆಕಾರು ನೆತ್ತಿಲ ಪರಿಸರದ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಕೋಟೆಕಾರು ಪಟ್ಟಣ ಪಂಚಾಯತ್ ಮುಂಬಾಗದಲ್ಲಿ ಕೋಟೆಕಾರು ಪರಿಸರದ ನಾಗರಿಕರು ಮತ್ತು ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರು ನೀರಿನ ಖಾಲಿ ಬಿಂದಿಗೆಗಳನ್ನು ಇಟ್ಟು ವಿನೂತನ ರೀತಿಯಲ್ಲಿ ಇಂದು ಪ್ರತಿಭಟನೆ ನಡೆಸಿದರುಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು, ನೀರು ಪ್ರಕೃತಿಯ ನೈಸರ್ಗಿಕ ಕೊಡುಗೆಗಳಲ್ಲಿ ಪ್ರಮುಖವಾದುದು.ಆದ್ದರಿಂದಅದರ ಸದ್ಬಳಕೆ ಇಂದಿನ ಕಾಲಘಟ್ಟದಲ್ಲಿ ಅತಿ ಅವಶ್ಯಕ. ಕೋಟೆಕಾರು ನೆತ್ತಿಲ ಪ್ರದೇಶ ಉಳ್ಳಾಲ ತಾಲೂಕಿನ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರದೇಶಗಳಲ್ಲೊಂದು.ಇಲ್ಲಿ ಖಾಸಗಿ ಬಡಾವಣೆಗಳು ನಿರ್ಮಾಣವಾಗಿದ್ದು ಹಾಗೂ ಸಣ್ಣಗಾತ್ರದ ಕೈಗಾರಿಕೆಗಳು ಕಾರ್ಯಚರಿಸುತ್ತಿವೆ. ಸಹಜವಾಗಿ ಬೇಸಿಗೆ ಕಾಲದಲ್ಲಿ ಮಾರ್ಚ್ ತಿಂಗಳಿನಿಂದ ಇಲ್ಲಿ ನೀರಿಗಾಗಿ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅದರಲ್ಲೂ ಕಳೆದ ಕೆಲವು ವರ್ಷಗಳಿಂದ ಮನೆಗಳ ಬಾವಿಗಳು ಬೇಸಿಗೆ ಕಾಲದಲ್ಲಿ ಬತ್ತಿ ಹೋಗುತ್ತಿರುವುದು ಆತಂಕದ ವಿಷಯ. ಜನರು ತಮ್ಮ ಮೂಲಭೂತ ಅವಶ್ಯಕತೆಗಳಾದ ಶೌಚಾಲಯ ಹಾಗೂ ಅಡುಗೆ ಕಾರ್ಯಕ್ಕೆ ನೀರಿಲ್ಲದೆ ಪರದಾಡುತ್ತಿದ್ದಾರೆ. ಕೋಟೆಕಾರು…
ಮಂಗಳೂರು : ಆರ್ ಎಸ್ ಎಸ್ ಮತ್ತು ಭಜರಂಗದಳದ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಡುಗಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ. ಭಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ಪಿಎಫ್ಐ ಅನ್ನ ನಾವು ನಿಷೇಧ ಮಾಡಿದ್ದೇವೆ, ಇವರೇನು ನಿಷೇಧ ಮಾಡೋದು? ಎಂದು ಪ್ರಶ್ನಿಸಿದ್ದಾರೆ.ನೆಹರೂ ಆರ್ ಎಸ್ಎಸ್ ನಿಷೇಧಕ್ಕೆ ಕೈ ಹಾಕಿ ಸುಟ್ಟುಕೊಂಡಿದ್ದಾರೆ, ಭಜರಂಗದಳ, ಆರ್‌ಎಸ್‌ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ. ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಿ. ನಿಮ್ಮ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಅದು ಬಿಟ್ಟು ರಾಜ್ಯವನ್ನ ವಿಭಜನಾವಾದದ ಮೂಲಕ ಕಟ್ಟೋದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೇಸ್ ತನ್ನ ಗ್ಯಾರಂಟಿಗಳನ್ನು…
ಶಿವಮೊಗ್ಗ : ಚಲಿಸುತ್ತಿದ್ದ ರೈಲಿನ ಇಂಜಿನ್ ಕಳಚಿಹೋದ ಘಟನೆ ಇಲ್ಲಿನ ಬಿದರೆ ಬಳಿ ನಡೆದಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದೆ. ತಾಳಗುಪ್ಪ-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರಿ ದೊಡ್ಡ ಅನಾಹುತ ತಪ್ಪಿದೆ.ಶಿವಮೊಗ್ಗದ ಸಮೀಪ ಬಿದರೆ ಬಳಿ ಬರುತ್ತಿದ್ದಂತೆ ಬೋಗಿಗಳಿಂದ ಇಂಜಿನ್ ಬೇರ್ಪಟ್ಟಿದೆ. ಬೋಗಿಗಳನ್ನು ಬಿಟ್ಟು ಇಂಜಿನ್ ಸ್ವಲ್ಪ ದೂರ ಚಲಿಸಿದೆ. ಕೂಡಲೇ ರೈಲ್ವೇ ಅಧಿಕಾರಿಗಳು ಸಮಸ್ಯೆಯನ್ನು ಸರಿಪಡಿಸಿ ಸಂಚಾರಕ್ಕೆ ಅನುವು ಮಾಡಿದರು. ಇದರಿಂದ ಪ್ರಯಾಣಿಕರಿಗೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಕಡಬ: ವ್ಯಕ್ತಿಯೋರ್ವರು ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ. ಆಲಂಕಾರಿನಲ್ಲಿ ಉದ್ಯಮಿಯಾಗಿರುವ ಚಂದ್ರಶೇಖರ್ ಪೂಜಾರಿ (60) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮನೆಯಲ್ಲಿ ಇಂದು ಬೆಳಗ್ಗೆ ಚೀಟಿ ಬರೆದಿಟ್ಟು, ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನೀರಿಗೆ ಹಾರಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಮತ್ತು ಕಡಬ ಪೊಲೀಸರು ಆಗಮಿಸಿ ಮಾಹಿತಿ ಪಡೆಯುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ ಪೂಜಾರಿ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜೀ ಅಧ್ಯಕ್ಷ ಹಾಗೂ ಪ್ರಸ್ತುತ ನಿರ್ದೇಶಕರಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕುಂದಾಪುರ: ನಾಲ್ಕು ಜನರನ್ನು ಒಂದೇ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೆದ್ದಾರಿಯಲ್ಲಿ ಪೊಲೀಸರೆದುರೇ ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದು ಪರಾರಿಯಾದ ವ್ಯಕ್ತಿಯ ವಿರುದ್ಧ ಪೊಲೀಸರು ಸೊಮೊಟೋ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪಾರಂಪಳ್ಳಿ ಗ್ರಾಮದ ಸಾಲಿಗ್ರಾಮ ಗಣೇಶ ಗ್ರ್ಯಾಂಡ್ ಹೋಟೆಲ್ ಬಳಿ ನಡೆದಿದೆ. ಬುಧವಾರ ಕೋಟ ಪೊಲೀಸರು ಪಾರಂಪಳ್ಳಿ ಗ್ರಾಮದ ಸಾಲಿಗ್ರಾಮ ಗಣೇಶ ಗ್ರ್ಯಾಂಡ್ ಹೋಟೆಲ್ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭ ಹೆಲ್ಮೆಟ್ ಧರಿಸದೇ ಹಿಂಬದಿಯಲ್ಲಿ ಮೂವರನ್ನು ಕುಳ್ಳಿರಿಸಿಕೊಂಡು ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವ್ಯಕ್ತಿಯನ್ನು ಕಂಡು ಬೈಕ್ ಪೊಲೀಸರು ನಿಲ್ಲಿಸುವಂತೆ ಸೂಚಿಸಿದ್ದಾರೆ. ಈ ವೇಳೆ ಸವಾರ ವೇಗ ಹೆಚ್ಚಿಸಿಕೊಂಡು ಬೇಕಾಬಿಟ್ಟಿಯಾಗಿ ಬೈಕ್ ಚಲಾಯಿಸಿದ್ದಾನೆ. ಪೊಲೀಸರು ಇದರಿಂಡ ಕೂದಲೆಳೆಯಲ್ಲಿ ಪಾರಾಗಿದ್ದು, ಕರ್ತವ್ಯದಲ್ಲಿದ್ದವರ ದೈಹಿಕ ಸುರಕ್ಷತೆಗೆ ಧಕ್ಕೆ ಮತ್ತು ಪ್ರಾಣಕ್ಕೆ ಅಪಾಯವಾಗುವಂತೆ ಚಲಾಯಿಸಿಕೊಂಡು ಪರಾರಿಯಾಗಿರುವುದಾಗಿ ಕೋಟ ಎಸೈ ನರೇಂದ್ರ ದೂರು ದಾಖಲಿಸಿದ್ದಾರೆ.
ಮಂಗಳೂರು: ಟೇಕ್ ಆಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಬೆಳಗ್ಗೆ 8:30ಕ್ಕೆ ಹೊರಟಿತ್ತು, ಈ ವೇಳೆ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೇಯಲ್ಲಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಕೂಡಲೇ ಪೈಲೆಟ್ ಟೇಕ್ ಆಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಿಮಾನವು ವಾಪಸ್ ತರುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಯಾಣಿಕರನ್ನು ಇಳಿಸಿ ವಿಮಾನವನ್ನು ತಪಾಸಣೆ ಮಾಡಲಾಗಿದೆ. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ದುಬೈಗೆ ತೆರಳಲು ಪ್ರಯಾಣಕ್ಕೆ ವ್ಯವಸ್ಥೆ ಮಾಡಗಿದೆ.
ನವದೆಹಲಿ : ನೂತನ ಸಂಸತ್ ಕಟ್ಟಡವನ್ನು ರಾಷ್ಟ್ರಪತಿಗಳಿಂದ ಉದ್ಘಾಟಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಕಾಂಗ್ರೆಸ್, ಟಿಎಂಸಿ, ಆಪ್, ಜೆಡಿಯು ಸೇರಿದಂತೆ 20 ವಿರೋಧ ಪಕ್ಷಗಳು ಬಹಿಷ್ಕಾರ ಹಾಕಿದ ಬೆನ್ನಲ್ಲೇ ಸುಪ್ರೀಂನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ರಾಷ್ಟ್ರಪತಿ ಅವರಿಂದ ಉದ್ಘಾಟನೆ ಮಾಡದೇ ಪ್ರಧಾನಿ ಮೋದಿ ಉದ್ಘಾಟಿಸುತ್ತಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅವಮಾನ ಎಂದು ವಕೀಲ ಸಿಆರ್ ಜಯ ಸುಕಿನ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಯಾವುದೇ ಸದನವನ್ನು ಕರೆಯುವ ಮತ್ತು ಮುಂದೂಡುವ ಅಧಿಕಾರ ರಾಷ್ಟ್ರಪತಿಗಳಿಗೆ ಇದೆ. ಸಂಸತ್ತು ಅಥವಾ ಲೋಕಸಭೆಯನ್ನು ವಿಸರ್ಜಿಸುವ ಅಧಿಕಾರ ರಾಷ್ಟ್ರಪತಿಗಳಿಗೆ ಇರುವುದರಿಂದ ಅವರಿಂದಲೇ ಲೋಕಾರ್ಪಣೆ ಮಾಡಬೇಕೆಂದು ಮನವಿ ಮಾಡಲಾಗಿದೆ. ರಾಷ್ಟ್ರಪತಿ ಸಂಸತ್ತಿನ ಅವಿಭಾಜ್ಯ ಅಂಗ. ಶಿಲಾನ್ಯಾಸ ಸಮಾರಂಭದಿಂದ ರಾಷ್ಟ್ರಪತಿಯನ್ನು ದೂರವಿಟ್ಟಿದ್ದು ಏಕೆ? ಈಗ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಯವರನ್ನು ಆಹ್ವಾನಿಸುತ್ತಿಲ್ಲ. ಸರಕಾರದ ಈ ನಿರ್ಧಾರ ಸರಿಯಲ್ಲ ಎಂದು ದೂರಲಾಗಿದೆ. ಲೋಕಸಭಾ ಸಚಿವಾಲಯ, ಗೃಹ ಸಚಿವಾಲಯ, ಕಾನೂನು ಸಚಿವಾಲಯಗಳನ್ನು ಅರ್ಜಿದಾರರು ಈ ಪ್ರಕರಣದಲ್ಲಿ ಪಾರ್ಟಿ ಮಾಡಿದ್ದಾರೆ. ಲೋಕಸಭೆ…










