Author: main-admin

ಉಡುಪಿ: ಮಣಿಪಾಲದಲ್ಲಿ 2020ರ ಸೆಪ್ಟೆಂಬರ್ 10ರಂದು ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಮಣಿಪಾಲ ಪೊಲೀಸರಿಂದ ಬಂಧಿಸಲ್ಪಟ್ಟ ಧಾರವಾಡ ಮೂಲದ ಫಾರೂಕ್ ಶೇಖ್ ಹಾಗೂ ಅಬ್ದುಲ್ ರಜಾಕ್ ಎಂಬ ಆರೋಪಿಗಳಿಗೆ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ಇವರು ಒಂದು ವರ್ಷದ ಕಠಿಣ ಸಜೆ ಹಾಗೂ ತಲಾ 20,000ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಆರೋಪಿಗಳಿಬ್ಬರು 2020ರ ಸೆಪ್ಟೆಂಬರ್ 10ರಂದು ಸಂಜೆ 4ಗಂಟೆ ಸುಮಾರಿಗೆ ಮಣಿಪಾಲದ ಶಿಂಬ್ರಾ ಎಂಬಲ್ಲಿರುವ ಬಾಬಾ ಪಾಯಿಂಟ್ ಕ್ರಾಸ್ ಬಳಿ ಕಾರು ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತಿದ್ದಾಗ ಮಾಹಿತಿ ಪಡೆದು ಸ್ಥಳಕ್ಕೆ ದಾಳಿ ನಡೆಸಿದ ಮಣಿಪಾಲ ಠಾಣೆ ಪಿಎಸ್‌ಐ ರಾಜಶೇಖರ್ ವಂದಲಿ ಇವರಿಂದ ಬಂಧಿಸಲ್ಪಟ್ಟಿದ್ದರು. ಈ ವೇಳೆ ಅವರ ಬಳಿ ಎರಡು ಕೆ.ಜಿ.7ಗ್ರಾಂ ತೂಕದ ಗಾಂಜಾ ಪತ್ತೆಯಾಗಿತ್ತು. ಗಾಂಜಾದೊಂದಿಗೆ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಕಾರನ್ನು ವಶಪಡಿಸಿಕೊಂಡಿದ್ದರು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸಿದ ಮಣಿಪಾಲ ವೃತ್ತ ನಿರೀಕ್ಷಕ ಮಂಜುನಾಥ ಆರೋಪಿಗಳಿಬ್ಬರ…

Read More

ಮೂಲ್ಕಿ : ರೈಲ್ವೆ ಮೇಲ್ಸೆತುವೆ ಮೇಲೆ ನಡೆದ ಆತ್ಮಹತ್ಯೆ ಪ್ರಕರಣದ ತನಿಖೆಗೆ ಪೊಲೀಸರು ತೆರಳಿದ್ದ ವೇಳೆ ರೈಲೊಂದು ಹಾದು ಹೋದ ಘಟನೆ ನಡೆದಿದ್ದು, ಪೊಲೀಸರು ಹಳಿಯ ಬದಿಗೆ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಬೆವೂರು ರೈಲ್ವೇ ಮೇಲ್ವೇತುವೆಯ ಕೆಳಗಡೆ ಮೂಲ್ಕಿ ರೈಲ್ವೇ ಸ್ಟೇಷನ್ ಸಿಬ್ಬಂದಿ ಕುಮಾರ್ ಎಂಬವರ ಪುತ್ರನಾದ ಮೂಲತಃ ತಮಿಳುನಾಡು ನಿವಾಸಿ ವಿಶ್ಲೇಶ್ (26) ಭಾನುವಾರ ರಾತ್ರಿ 8:30 ಸುಮಾರಿಗೆ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ಲೇಶ್ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿ ಸುರತ್ಕಲ್ ಎನ್‌ಐಟಿಕೆ ಯಲ್ಲಿ ತರಬೇತಿ ಮಾಡುತ್ತಿದ್ದರು ಎನ್ನಲಾಗಿದ್ದು, ಕೆಲಸ ಇಲ್ಲದೆ ಇರುವ ಚಿಂತೆ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಈ ನಡುವೆ ಯುವಕನ ಆತ್ಮಹತ್ಯೆಯ ತೀವ್ರ ಇಕ್ಕಟ್ಟಾಗಿರುವ ಕುಬೆವೂರು ರೈಲ್ವೆ ಮೇಲ್ವೇತುವೆ ಕೆಳಗಡೆ ನಡೆದಿದ್ದು, ತನಿಖೆಗೆ ಹೋದ ನಾಲ್ವರು ಮೂಲ್ಕಿ ಪೊಲೀಸ್ ಠಾಣೆಯ ಅಧಿಕಾರಿಗಳಾದ ಎಎಸ್‌ಐ ಸಂಜೀವ, ಚಂದ್ರಶೇಖರ್, ಶಂಕರ್ ಬಸವರಾಜ್ ತನಿಖೆ…

Read More

ಕಾಸರಗೋಡು:  ಮಂಜೇಶ್ವರ ಚುನಾವಣಾ ಲಂಚ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರ ನ್ ಸೇರಿದಂತೆ ಎಲ್ಲಾ ಆರೋಪಿಗಳು ಬುಧವಾರ ಕಾಸರಗೋಡು ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆರೋಪಿಗಳಿಗೆ ಜಾಮೀನು ನೀಡಲಾಗಿದ್ದು, ಮುಂದಿನ ವಿಚಾರಣೆಯನ್ನು ನ.15ಕ್ಕೆ ಮುಂದೂಡಲಾಗಿದೆ. ಯುವ ಮೋರ್ಚಾ ರಾಜ್ಯ ಕೋಶಾಧಿಕಾರಿ ಸುನಿಲ್ ನಾಯ್ಕ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕೆ. ಸುರೇಶ್ ನಾಯ್ಕ್ , ಮಣಿಕಂಠ ರೈ, ಲೋಕೇಶ್ ನೋಂಡಾ ಇತರರು ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ. ಈ ಹಿಂದೆ ಮೂರು ಬಾರಿ ನ್ಯಾಯಾಲಯ ಹಾಜರಾಗಲು ನೋಟಿಸ್ ನೀಡಿತ್ತು. ಆದರೆ ಆರೋಪಿಗಳು ಹಾಜರಾಗಿರಲಿಲ್ಲ.ಬುಧವಾರ ನಡೆದ ವಿಚಾರಣೆ ವೇಳೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. 2021 ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ. ಸುರೇಂದ್ರ ನ್ ಬಿ ಎಸ್ಪಿ ಅಭ್ಯರ್ಥಿಯಾಗಿದ್ದ ಕೆ. ಸುಂದರರಿಂದ ನಾಮಪತ್ರ ಹಿಂತೆಗೆಯಲು ಎರಡೂವರೆ ಲಕ್ಷ ರೂ. ಹಾಗೂ ಮೊಬೈಲ್ ಫೋನ್ ನೀಡಿ ನಾಮಪತ್ರ ಹಿಂಪಡೆಯಲಾಗಿತ್ತು. ಚುನಾವಣೆ ಬಳಿಕ ಪ್ರಕರಣ ಬಳಿಕ…

Read More

ಬೆಂಗಳೂರು: ಸೆಲೆಬ್ರೆಟಿಗಳಿಗೆ ಈಗ ಹುಲಿ ಉಗುರು ಧರಿಸಿದ ಸಂಬಂಧ ಸಂಕಷ್ಟ ಎದುರಾಗಿದೆ. ಸಾಲು ಸಾಲು ನಟರ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ, ಅರಣ್ಯ ಇಲಾಖೆಯ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರೋದಲ್ಲದೇ, ಅವರ ನಿವಾಸದ ಮೇಲೆ ರೇಡ್ ಕೂಡ ಮಾಡಿ, ಪರಿಶೀಲನೆಯಲ್ಲಿ ತೊಡಗಿದ್ದಾರೆ. ಹೌದು ನಟ ಜಗ್ಗೇಶ್, ಛಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಅವರು ಹುಲಿ ಉಗುರು ಧರಿಸಿದ ಸಂಬಂಧ ಅರಣ್ಯ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಹುಲಿ ಉಗುರು ಧರಿಸಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಿ ಮಾಹಿತಿಯನ್ನು ವಿಚಾರಣಾಧಿಕಾರಿಗಳ ಮುಂದೆ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ. ಇನ್ನೂ ಇದಷ್ಟೇ ಅಲ್ಲದೇ ಮಲ್ಲೇಶ್ವರಂನಲ್ಲಿರುವಂತ ನಟ ಜಗ್ಗೇಶ್ ನಿವಾಸ, ಆರ್ ಆರ್ ನಗರದಲ್ಲಿರುವಂತ ನಟ ದರ್ಶನ್ ಮನೆ ಹಾಗೂ ಮಹಾಲಕ್ಷ್ಮೀ ಲೇಔಟ್ ನಲ್ಲಿ ಇರುವಂತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ನಿವಾಸದ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.…

Read More

2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ಸ್ (ಸಿವಿಲ್) ಪುರುಷ ಮತ್ತು ಮಹಿಳೆ, ತೃತೀಯ ಲಿಂಗ ಪುರುಷ ಮತ್ತು ಮಹಿಳೆ ಹಾಗೂ ಸೇವಾನಿರತ, ಬ್ಯಾಕ್ಲಾಗ್ – 454 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ನ.05 ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಬಳ್ಳಾರಿ ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಅವರು ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಹೆಸರು ಮತ್ತು ವಿಳಾಸ ಗಾಂಧಿನಗರ 2ನೇ ಕ್ರಾಸ್ನ ಬಾಲ ಭಾರತಿ ಶಾಲೆ, ಸಿರುಗುಪ್ಪ ರಸ್ತೆಯ ಕುರಿಹಟ್ಟಿಯ ಬಳ್ಳಾರಿ ಬಿಸಿನೆಸ್ ಕಾಲೇಜು, ಪಟೇಲ್ ನಗರದ ಬಸವರಾಜೇಶ್ವರಿ ಪಬ್ಲಿಕ್ ಸ್ಕೂಲ್ ಮತ್ತು ಕಾಲೇಜು, ರಿಸರ್ವ್ ಪೆÇಲೀಸ್ ಮೈದಾನ ಎದುರಿನ ಎಂ.ಜಿ.ಎಂ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪಟೇಲ್ ನಗರದ ನಂದಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಸೈನ್ಸ್ ಕಾಲೇಜು, ಹವಂಭಾವಿಯ ನ್ಯೂ ಶ್ರೀ ಚೈತನ್ಯ ಪಿ.ಯು.ಕಾಲೇಜು, ಕಂಟೋನ್ಮೆಂಟ್ನ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ಎಂಜಿನಿಯರಿಂಗ್ ಕಾಲೇಜು, ವೈ.ನಾಗೇಶ ಶಾಸ್ತ್ರಿ ನಗರದ ಎಸ್ಜಿ ಪದವಿ…

Read More

ಮಂಗಳೂರು :  ಮಂಗಳೂರು ದಸರಾದ ಶೋಭಾಯಾತ್ರೆಯಲ್ಲಿ ಧರ್ಮಸ್ಥಳದಲ್ಲಿ ಕೊಲೆಯಾದ ಸೌಜನ್ಯಳ ಭಾವ ಚಿತ್ರ ವಿರುವ ಟ್ಯಾಬ್ಲೋ ಗೆ ಅನುಮತಿ ನಿರಾಕರಿಸಿ ವಶಕ್ಕೆ ಪಡೆದ ಘಟನೆ ಮಂಗಳವಾರ ರಾತ್ರಿ ನಡೆದಿದೆ ದಸರಾ ಸಮಿತಿಯಿಂದ ಟ್ಯಾಬ್ಲೋ ಬಗ್ಗೆ ಆಕ್ಷೇಪ ಬಂದ ಕಾರಣ ಟ್ಯಾಬ್ಲೋವನ್ನು ಉರ್ವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಕಂಡು ಬಂತು. ಮಾಹಿತಿ ಪಡೆದ ಸೌಜನ್ಯ ಪರ ಹೋರಾಟ ಸಮಿತಿಯ ಪದಾಧಿಕಾರಿಗಳು ಪೊಲೀಸ್ ಠಾಣೆಗೆ ಧಾವಿಸಿ ಬಂದು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಪ್ರಯತ್ನ ನಡೆಸಿದರೂ ಇದಕ್ಕೆ ಒಪ್ಪದ ಪೊಲೀಸ್ ಅಧಿಕಾರಿಗಳು ಟ್ಯಾಬ್ಲೋ ಗೆ ಹೋಗಲು ಅನುಮತಿ ನಿರಾಕರಿಸಿದರು. ಪೋಲಿಸರ ಈ ನಡವಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೌಜನ್ಯ ಪರ ಹೋರಾಟಗಾರರು ಟ್ಯಾಬ್ಲೋದಲ್ಲಿ ಸೌಜನ್ಯಳ ಭಾವಚಿತ್ರ ಹೊರತು ಪಡಿಸಿ ಆಕ್ಷೇಪಾರ್ಹ ಯಾವುದೇ ಬರಹಗಳು, ಅಥವಾ ಇತರ ವಿಷಯ ಇರಲಿಲ್ಲ, ಈ ಟ್ಯಾಬ್ಲೋ ದಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ವಿರುದ್ದ ಯಾವುದೇ ಮಾನಹಾನಕಾರಕ ವಿಷಯಗಳನ್ನು ಹಾಕಿರಲಿಲ್ಲ. ರಕ್ತ ಬಿಜಾಸುರ…

Read More

ಮಂಗಳೂರು: ಮಂಗಳೂರು ದಸರಾ ಮೆರವಣಿಗೆ ಕಳೆದ ದಿನ(ಅ.24) ಅದ್ದೂರಿಯಾಗಿ ಆರಂಭಗೊಂಡು, ಸಂಪನ್ನಗೊಂಡಿದೆ. ದಸರಾ ಮಹೋತ್ಸವ ನಡೆಯುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಸಂಜೆ ಸುಮಾರು 4 ಗಂಟೆಗೆ ದಸರಾ ಮೆರವಣಿಗೆ ಆರಂಭಗೊಂಡಿತು.ವಿಘ್ನವಿನಾಶಕ ಗಣೇಶ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯ ಬೃಹತ್ ಶೋಭಾಯಾತ್ರೆ ಕೇಂದ್ರದ ಮಾಜಿ ಸಚಿವ ದಸರಾ ಮಹೋತ್ಸವದ ರೂವಾರಿ ಬಿ.ಜನಾರ್ದನ ಪೂಜಾರಿ ನೇತೃತ್ವದಲ್ಲಿ ನಡೆಯಿತು. ಒಂದು ಸಾವಿರ ಆಕರ್ಷಕ ಕೇರಳಾ ಕೊಡೆಗಳು, ನೂರಕ್ಕೂ ಅಧಿಕ ಬ್ಯಾಂಡ್ ಸೆಟ್‌ಗಳು, ಸುಮಾರು 40 ಜಾನಪದ ಕುಣಿತಗಳ ತಂಡ, ಕೇರಳಾ ಚೆಂಡೆವಾದನ, ಕೊಂಬು ಕಹಳೆ, ದೇಶದ ಇತಿಹಾಸವನ್ನು ಬಿಂಬಿಸುವ ಸುಮಾರು 60ಕ್ಕೂ ಹೆಚ್ಚು ಸ್ಥಬ್ದ ಚಿತ್ರಗಳು ಈ ದಸರಾ ಮೆವರಣಿಗೆಗೆ ಮೆರಗು ನೀಡಿತು. ನಗರದ ಸುಮಾರು 7 ಕಿಲೋ ಮೀಟರ್ ದಾರಿಯಲ್ಲಿ ಸಾಗುವ ಈ ಮೆರವಣಿಗೆ ಮುಂಜಾನೆ ಸಮಾಪನಗೊಂಡಿದೆ. ಕುದ್ರೋಳಿ ಕ್ಷೇತ್ರ ಪುಷ್ಕರಣಿಯಲ್ಲಿ ಗಣಪತಿ,ಆದಿಶಕ್ತಿ,ಶಾರದೆ ಹಾಗೂ ನವದುರ್ಗೆಯರ ಮೂರ್ತಿಗಳನ್ನು ಇಂದು ಮುಂಜಾನೆ ನವ ದುರ್ಗೆಯರನ್ನು ಜಲಸ್ಥಂಬನ ಮಾಡುವ ಮುಖೇನ ಸಮಾಪನಗೊಂಡಿತ್ತು. ಮೆರವಣಿಗೆ ಸಾಗುವ…

Read More

ಬಂಟ್ವಾಳ: ಹೆಸರಾಂತ ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ತಾಲೂಕಿನ ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಮನೆಯ ಕಪಾಟಿನೊಳಗೆ ಇರಿಸಲಾಗಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ಸಹಿತ ಲಕ್ಷಾಂತರ ರೂ ಹಣವನ್ನು ಮನೆಯ ಕೆಲಸದಾತನೇ ಕದ್ದುಕೊಂಡು ಹೋಗಿರುವುದಾಗಿ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಸುಮಾರು 27,50,000 ರೂ ನಗದು ಹಾಗೂ 4,96,000 ರೂ.  ಮೌಲ್ಯದ ವಿವಿಧ ಬಗೆಯ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.ಘಟನೆ ನಡೆದಿದ್ದು ಹೇಗೆ ಮತ್ತು ಯಾವಾಗ?ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಜೊತೆ ಸುಮಾರು 8 ತಿಂಗಳ ಹಿಂದೆ ಕಟ್ಟಡ ಕಾಮಗಾರಿಯ ಕೆಲಸಕ್ಕೆ ಮಂಜೇಶ್ವರ ಮೂಲದ ಆಲಿ ಎಂಬಾತ ಸೇರಿದ್ದ. ಆತನಿಗೆ ಫರಂಗಿಪೇಟೆ ಎಂಬಲ್ಲಿನ ಹುಡುಗಿಯ ಜೊತೆ ವಿವಾಹವಾಗಿದ್ಸು, ಮಾಲಕರ ಜೊತೆ…

Read More

ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಅರೆಸ್ಟ್ ವಾರಂಟ್ ಎದುರಿಸುತ್ತಿದ್ದ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ನಟೋರಿಯಸ್ ಶಾರ್ಪ್ ಶೂಟರ್ ಭೂಗತ ಪಾತಕಿ ರವಿ ಪೂಜಾರಿಯ ಕುಕೃತ್ಯಗಳಿಗೆ ಕರಾವಳಿಯ ಪ್ರತಿನಿಧಿಯಾಗಿದ್ದ ಶೂಟರ್ ಹನೀಫ್ ಯಾನೆ ಅಲಿ ಮುನ್ನಾ ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಅರೆಸ್ಟ್ ವಾರಂಟ್ ಎದುರಿಸುತ್ತಿದ್ದನು. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಹಲವಾರು ಪ್ರಕರಣ ದಾಖಲಾಗಿದೆ. 2010 ಮತ್ತು 2013ರಲ್ಲಿ ಕಾಸರಗೋಡು ಜಿಲ್ಲೆಯ ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್ ಪ್ರಕರಣ, ಮಂಜೇಶ್ವರದಲ್ಲಿ ಕಳ್ಳತನ, ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಮಂಗಳೂರು ಉತ್ತರ…

Read More

ಮಂಗಳೂರು: ಹುಲಿಕುಣಿತದ ವೇಳೆ ಹುಲಿ ವೇಷಧಾರಿಯೊಬ್ಬರು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ನಡೆದಿದೆ. ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮಂಗಳಾದೇವಿಯ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಘಟನೆ ನಡೆದಿದ್ದು, ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ದುರ್ಘಟನೆ ನಡೆದಿದೆ. ಹುಲಿವೇಷಧಾರಿಯೊಬ್ಬರು ಕಸರತ್ತು ಪ್ರದರ್ಶನದ ವೇಳೆ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯ ತಪ್ಪಿ ತಲೆ ನೆಲಕ್ಕೆ ಬಡಿದು ಅನಾಹುತ ನಡೆದಿದೆ. ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದ ಪರಿಣಾಮ ಹುಲಿವೇಷಧಾರಿಗೆ ಗಾಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಹುಲಿವೇಷಧಾರಿ ಯುವಕನಿಗೆ ಚಿಕಿತ್ಸೆ ನೀಡಲಾಗಿದೆ. ಸದ್ಯ ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಯುವಕ ಪಾರಾಗಿದ್ದಾರೆ. ಸದ್ಯ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Read More