Author: main-admin

ಬಂಟ್ವಾಳ: ಮಾಣಿಯಲ್ಲಿ ನಡೆದ ಇತ್ತಂಡದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಇತ್ತಂಡದ ಇಬ್ಬರು ಗ್ರಾ.ಪಂ ಸದಸ್ಯರು ಸೇರಿದಂತೆ ಒಟ್ಟು 9 ಮಂದಿ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಅನಂತಾಡಿ ನಿವಾಸಿ ಈಶ್ವರ ನಾಯ್ಕ ಯಾನೆ ಪ್ರವೀಣ್ ನಾಯ್ಕ (28) ಅವರು ನೀಡಿದ ದೂರಿನಂತೆ ಮಹೇಂದ್ರ, ಪ್ರಶಾಂತ್, ಚಿರಂಜೀವಿ, ಪ್ರವೀಣ್, ದೇವಿಪ್ರಸಾದ್, ಹರೀಶ್ ಅವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಕೊಡಾಜೆ ನಿವಾಸಿ ಮಹೇಂದ್ರ (26) ಅವರು ನೀಡಿದ ದೂರಿನಂತೆ ಆರೋಪಿಗಳಾದ ಮಂಜುನಾಥ, ರಾಕೇಶ್, ಪ್ರವೀಣ್ ಅನಂತಾಡಿ ಅವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಪ್ರವೀಣ್‌ ನೀಡಿದ ದೂರಿನಲ್ಲೇನಿದೆ..?ನಾನು ಬ್ಯಾಂಕ್ ರಿಕವರಿ ಕರ್ತವ್ಯ ನಿರ್ವಹಿಸಿಕೊಂಡು ಸಂಗ್ರಹವಾದ ಹಣದೊಂದಿಗೆ ಬೈಕ್‌ನಲ್ಲಿ ಮಾಣಿ ಕಡೆಗೆ ಹೊರಟು ಸುಮಾರು 2.00 ಗಂಟೆಯ ವೇಳೆಗೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಪಟ್ಟಕೋಡಿ ಎಂಬಲ್ಲಿ ತಲುಪಿದಾಗ ಪರಿಚಯದ ಮಹೇಂದ್ರ, ಪ್ರಶಾಂತ್, ಚಿರಂಜೀವಿ, ಪ್ರವೀಣ್ ರವರು ಬಿಳಿ ಬಣ್ಣದ ಸ್ವೀಫ್ಟ್ ಕಾರು, ಪಿಕ್ ಅಪ್ ಹಾಗೂ…

Read More

ಮಂಗಳೂರು: ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಆಗಿರುವ ಗಾಯಾಳುವಿನ ಆರೋಗ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಚಾರಿಸಿದ್ದಾರೆ. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಮತ್ತು ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಹೇಂದ್ರರನ್ನು ಪುತ್ತೂರು ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಂಗಳೂರಿಗೆ ಶಿಫ್ಟ್ ಆಗುತ್ತಿದ್ದಂತೆಯೇ ನಳಿನ್ ಕುಮಾರ್ ಕಟೀಲ್ ಅವರು ಗಾಯಾಳು ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ತೆರಳಿದ್ದಾರೆ. ಇನ್ನು ಸುದ್ದಿ ತಿಳಿದು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ರಾಜೇಶ್ ನಾಯ್ಕ್ ಕೂಡ ಕಟೀಲ್ ಗೆ ಸಾಥ್ ನೀಡಿದರುಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರ ಶಂಕೆ ವ್ಯಕ್ತವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ತಂಡದಿಂದ ದಾಳಿ ನಡೆದಿರುವ ಮಾಹಿತಿ ಸಿಕ್ಕಿತ್ತು. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್…

Read More

ನವದೆಹಲಿ: ಹೊಸ ಸಂಸತ್ ಭವನದ ಉದ್ಘಾಟನೆಯ ಬಗ್ಗೆ ರಾಜಕೀಯ ಹೋರಾಟ ನಡೆಯುತ್ತಿದೆ. ಅಧ್ಯಕ್ಷ ದ್ರೌಪದಿ ಮುರ್ಮು ಅವರು ಹೊಸ ಕಟ್ಟಡವನ್ನು ಉದ್ಘಾಟಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ. ಇದುವರೆಗೆ 19 ವಿರೋಧ ಪಕ್ಷಗಳು ಇದನ್ನು ವಿರೋಧಿಸಿವೆ. ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ಹೊಸ ಸಂಸತ್ತನ್ನು ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅದೇ ಸಮಯದಲ್ಲಿ, ಹೊಸ ಸಂಸತ್ತಿನಲ್ಲಿ ‘ಸೆಂಗೋಲ್’ ಅನ್ನು ಇರಿಸಲಾಗುವುದು ಎಂದು ಅವರು ಹೇಳಿದ್ದಾರೆ. ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರು ಸೆಂಗೋಲ್ ಅನ್ನು ಸ್ವೀಕರಿಸಿದ್ದರು ಎಂದು ಅಮಿತ್ ಶಾ ಹೇಳಿದರು. ಇದು ನಮ್ಮ ಇತಿಹಾಸಕ್ಕೆ ದೊಡ್ಡ ಕೊಡುಗೆ ನೀಡಿದೆ. ಇದನ್ನು ಹೊಸ ಸಂಸತ್ ಕಟ್ಟಡದಲ್ಲಿ ಸ್ಪೀಕರ್ ಕುರ್ಚಿಯ ಪಕ್ಕದಲ್ಲಿ ಇರಿಸಲಾಗುವುದು. ‘ಸೆಂಗೋಲ್ ಅನ್ನು ಮ್ಯೂಸಿಯಂನಲ್ಲಿ ಇಡುವುದು ಸರಿಯಲ್ಲ. ಇದು ಬ್ರಿಟಿಷರಿಂದ ಅಧಿಕಾರ ವರ್ಗಾವಣೆಯ ಸಂಕೇತವಾಗಿದೆ. ಇದು ಅಮೃತ ಅವಧಿಯ ಪ್ರತಿಬಿಂಬವಾಗಿರುತ್ತದೆ ಅಂತ ಅವರು ಹೇಳಿದ್ದಾರೆ. ಸೆಂಗೋಲ್ ನ ಇತಿಹಾಸಇದನ್ನು…

Read More

ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ಬುಧವಾರ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ ನಡೆದಿದೆ. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಕಾಲು ಮತ್ತು ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಮಾರಣಾಂತಿಕ ಹಲ್ಲೆಗೊಳಗಾದ ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಕೃತ್ಯ ಎಸಗಿದೆ. ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಾಹಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ‌ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ವಿಟ್ಲ ಪೋಲೀಸರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಇನ್ನು ಘಟನೆ ಬಗ್ಗೆ ಸ್ಪಷ್ಟನೆ ನೀಡಿರುವ ದಕ್ಷಿಣ ಕನ್ನಡ…

Read More

ಮಂಗಳೂರು: 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಹರೀಶ್ ಪೂಂಜಾ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ಯರು, ಸಿಎಂ ಸಿದ್ದರಾಮಯ್ಯನವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪುತ್ತೂರು ನಗರ ಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಅಲ್ಲದೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊಹಮ್ಮದ್ ರಿಯಾಝ್ ದೂರಿನಲ್ಲಿ ಒತ್ತಾಯಿಸಿದ್ದಾರೆ. ಹರೀಶ್ ಪುಂಜಾ ಹೇಳಿದ್ದೇನು? ಇದೇ ತಿಂಗಳ 22ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಹರೀಶ್ ಪೂಂಜಾ, 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು…

Read More

ಕಾಪು : ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರ್ ರೇಸ್ ಮಾಡಲು ಹೋದು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಸಂಬಂಧ ನಾಲ್ವರು ಚಾಲಕರ ಸಹಿತ ನಾಲ್ಕು ವಾಹನಗಳನ್ನು ಕಾಪು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಾಹನ ಚಾಲಕರನ್ನು ಉಡುಪಿಯ ಶಾನೂನ್ ಡಿಸೋಜ(25), ಉಡುಪಿ‌ ಕೊಡಂತೂರಿನ ವಿವೇಕ್(23), ಉದ್ಯಾವರ ಗುಡ್ಡೆ ಅಂಗಡಿ ನಿವಾಸಿ ಅಯಾನ್( 24) ಹಾಗೂ ಕುಂಜಿಬೆಟ್ಟು ನಿವಾಸಿ ಮಿಶಾಲುದ್ದೀನ್ (23) ಎಂದು ಗುರುತಿಸಲಾಗಿದೆ. ಇವರ ಮಹೀಂದ್ರಾ ಜೀಪು, ಕ್ರೆಟಾ ಕಾರು, ಫಾರ್ಚುನರ್‌ ಕಾರು, ಸ್ವಿಫ್ಟ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ರಾ.ಹೆ 66 ರಸ್ತೆಯಲ್ಲಿ 1 ಜೀಪು ಹಾಗೂ 3 ಕಾರುಗಳನ್ನು ಅದರ ಚಾಲಕರುಗಳು ಅತೀ ವೇಗ ಮತ್ತು ತೀವ್ರ ಅಜಾಗರೂಕತೆಯಿಂದ ಸಾರ್ವಜನಿಕರ ಪ್ರಾಣಕ್ಕೆ ಅಪಾಯಕರವಾಗುವ ರೀತಿಯಲ್ಲಿ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ವಿಡಿಯೋ ವೈರಲ್‌…

Read More

ಉಡುಪಿ:ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.ಮೇ 21ರಂದು ರಾತ್ರಿ ವೇಳೆ  ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ. ಮೇ22ಕ್ಕೆ ಇವರ ಎರಡನೇ ಮಗಳಿಗೆ ಉಡುಪಿ ಶ್ಯಾಮಿಲಿ ಸಭಾಭವನದಲ್ಲಿ ಮದುವೆ ನಿಶ್ಚಯವಾಗಿದ್ದು,  ಈ ಸಂದರ್ಭದಲ್ಲಿ  ಮೇ19ರಂದು ಇಡೀ ಕುಟುಂಬ ಸಮೇತರಾಗಿ ಬಂದು ಉಡುಪಿಯ ಹೊಟೋಲ್‌ನಲ್ಲಿ  ಉಳಿದಿದ್ದರು, ಹೊಟೇಲ್ ರೂಮ್ ಒಳಗಡೆ ನಡೆಯುವಾಗ ಆಕಸ್ಮಿಕವಾಗಿ ತುಂಡಾದ ಕಾಲಿಗೆ ಅಳವಡಿಸಿದ ಬೆಲ್ಟ್ ಜಾರಿ ನೆಲಕ್ಕೆ ಬಿದ್ದಿದರಿಂದ  ತಲೆಗೆ ತೀವ್ರವಾಗಿ ಗಾಯಗೊಂಡ ಇವರು ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು..? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡೊಲ್ಲ. ಮಂಗಳೂರು, ಬಿಜಾಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ. ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡೊಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತರಾಟೆಗೆ ತೆಗೆದುಕೊಂಡರು. ಮಂಗಳವಾರ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದಂತ ಅವರು, PSI ಅಕ್ರಮದಲ್ಲಿ ಒಬ್ಬ ಎಡಿಜಿಪಿ ಓಎಂಆರ್ ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ನೋಡಿ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದವರನ್ನೇ ಹರಾಸ್ ಮಾಡಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡರು. ಪ್ರಿಯಾಂಕ್ ಖರ್ಗೆ ಅವರಿಗೆ ಕಾಟ ಕೊಟ್ಟಿದ್ದೀರಾ.? ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ,…

Read More

ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನ್ಯಾಯಾಲಯಕ್ಕೆ ಬೇಕಾಗಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಅಡ್ಯಾರ್ ವಲಚ್ಚಿಲ್ ರೈಲ್ವೆ ಗೇಟ್ ಬಳಿ ನಿವಾಸಿ ವವಾಜ್ ಶರೀಫ್ ಬಂಧಿತ ಆರೋಪಿ. ಆರೋಪಿ ನವಾಜ್ ಶರೀಫ್ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವಿವಿಧ ಐಪಿಸಿ ಸೆಕ್ಷನ್ ಸೇರಿದಂತೆ ಆರ್ಮ್ಸ್ ಆ್ಯಕ್ಟ್ ನಡಿಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ಆತ ಆ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 1 ವರ್ಷದ ಹಿಂದೆ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ. ಈತನ ಬಂಧನಕ್ಕೆ ಈಗಾಗಲೇ ನ್ಯಾಯಾಲಯವು ಹಲವು ಬಾರಿ ವಾರೆಂಟ್ ಗಳನ್ನು ಹೊರಡಿಸಿತ್ತು. ಗಲ್ಫ್ ದೇಶದಲ್ಲಿ, ತಲೆಮರೆಸಿಕೊಂಡ ಈತನ ವಿರುದ್ಧ ಎಲ್ ಓ ಸಿ ಯನ್ನು ಹೊರಡಿಸಲಾಗಿತ್ತು.‌ ಈ ಪ್ರಕಾರ ಈತನು ದುಬೈನಿಂದ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ. ಅಲ್ಲಿಂದ ಬಂದ ಮಾಹಿತಿಯಂತೆ ಈತನನ್ನು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ದೇಶಾದ್ಯಂತ ವಿವಾದದ ಕಿಡಿಯಿಂದಲೇ ಸದ್ದು ಮಾಡಿದ ‘ಲವ್‌ ಜಿಹಾದ್‌’ ಕಥೆಯಾಧಾರಿತ ಹಿಂದಿ ಸಿನಿಮಾ ‘ದಿ ಕೇರಳ ಸ್ಟೋರಿ’ (The Kerala Story) ನೋಡಲು ಜನರು ಧಾವಿಸುತ್ತಿದ್ದಾರೆ.  ಈ ಮಧ್ಯೆ ಇಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಕೇರಳ ಸ್ಟೋರಿ ಸಿನಿಮಾ ನೋಡಿದ ಬಳಿಕ ಅಂತರ್‌ಧರ್ಮೀಯ ಪ್ರೇಮಿಗಳ ಮಧ್ಯೆ ವಾಗ್ವಾದ ಶುರುವಾಗಿ ಯುವಕ ತನ್ನ ಪ್ರೇಯಸಿಯನ್ನೇ ಅತ್ಯಾಚಾರಗೈದಿರುವ ಘಟನೆ ಮಧ್ಯಪ್ರದೇಶದ ಇಂಧೋರ್‌ನಲ್ಲಿ ನಡೆದಿದೆ.   ಘಟನೆಯ ವಿವರ :  ಯುವಕ 12ನೇ ತರಗತಿವರೆಗೆ ಓದಿದ್ದು, ನಿರುದ್ಯೋಗಿಯಾಗಿದ್ದಾನೆ. ಯುವತಿ ಉನ್ನತ ಶಿಕ್ಷಣ ಪಡೆದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಳೆ. ಇವರಿಬ್ಬರಿಗೆ ನಾಲ್ಕು ವರ್ಷಗಳ ಹಿಂದೆ ಕೋಚಿಂಗ್ ಸೆಂಟರ್‌ನಲ್ಲಿ ಪರಿಚಯವಾಗಿದ್ದು, ನಂತರ ಪ್ರೇಮಾಂಕುರವಾಗಿತ್ತು. ಇತ್ತೀಚೆಗೆ ಈ ಪ್ರೇಮಿಗಳು ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಲು ಹೋಗಿದ್ದರು. ಸಿನಿಮಾ ನೋಡಿದ ನಂತರ ಯುವತಿ ತನ್ನ ಮುಸ್ಲಿಂ ಪ್ರಿಯಕರನ ಜೊತೆ ಚರ್ಚೆಗೆ ತೊಡಗಿದ್ದಾಳೆ. ಚರ್ಚೆ ಜಗಳವಾಗಿ ಮಾರ್ಪಟ್ಟು, ಕೋಪಗೊಂಡ ಆತ ಆಕೆಯ ಮೇಲೆ ಹಲ್ಲೆ ಮಾಡಿದ್ದು, ಜೊತೆಗೆ ಅತ್ಯಾಚಾರ ಎಸಗಿ…

Read More