Author: main-admin

ಮಂಗಳೂರು; ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಸುರೇಂದ್ರ ದೇವಾಡಿಗ (31) ನಾಪತ್ತೆಯಾದ ಯುವಕ. ಸುರೇಂದ್ರ ಅವರು ಅ.20ರಂದು ಕೆಲಕ್ಕೆ ಹೋಗುವುದಾಗಿ ಮನೆಯಿಂದ ತೆರಳಿರುವವರು ಮನೆಗೆ ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಾರೆ. ಅವರು ನಾಪತ್ತೆಯಾಗಿರುವ ಕುರಿತು ಸಂಬಂಧಿಕರು ಮತ್ತು ಸ್ನೇಹಿತರಲ್ಲಿ ವಿಚಾರಿಸಿದ್ದು. ಎಲ್ಲೂ ಪತ್ತೆಯಾಗಿಲ್ಲ. ನಾಪತ್ತೆಯಾದ ದಿನದಿಂದ ಅವರ ಮೊಬೈಲ್‌ ಸ್ವಿಚ್ ಆಫ್‌ ಆಗಿದೆ ಎಂದು ಅವರ ಅಣ್ಣ ಪ್ರಸಾದ್‌ ಎಂಬವರು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ವಿಟ್ಲ: ಸ್ಕೂಟಿ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಟೋ ಪ್ರಯಾಣಿಕ ಮೃತಪಟ್ಟ ಘಟನೆ ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ನಡೆದಿದೆ. ಆಟೋ ಪ್ರಯಾಣಿಕ ಪೆರುವೋಡಿ ನಿವಾಸಿ ನಾಗೇಶ್ ಮೃತ ದುರ್ದೈವಿ.ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಆಟೋ ಪ್ರಯಾಣಿಕ ನಾಗೇಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Read More

ಮಂಗಳೂರು: ಖಾಸಗಿ ಬಸ್‌ನ ಧಾವಂತಕ್ಕೆ ಪಾದಚಾರಿಯೊಬ್ಬರು ಬಸ್ ನಡಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಗರದ ಸ್ಟೇಟ್‌ಬ್ಯಾಂಕ್ ಬಳಿಯ ರಾವ್ ಆ್ಯಂಡ್ ರಾವ್ ಸರ್ಕಲ್‌ನಲ್ಲಿ ಸಂಭವಿಸಿದೆ. ಕೊಣಾಜೆಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ 54 ಸಂಬರ್‌ನ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿತ್ತು. ಈ ವೇಳೆ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದರು. ಆಗ ನೇರವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಮುಂದಿನ ಚಕ್ರದಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ವ್ಯಕ್ತಿಯ ತಲೆ ಸಂಪೂರ್ಣ ಛಿದ್ರಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖವೂ ಛಿದ್ರಗೊಂಡ ಪರಿಣಾಮ ಅವರ ಮುಖ ಪರಿಚಯವೂ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು ಪಾಂಡೇಶ್ವರ ಪೊಲೀಸರು ಸೆಕ್ಷನ್ 304 ಅಡಿ ಕೊಲೆಗೆ ಸಮಾನ ಆಗಬಲ್ಲ ಅಪರಾಧ ಎಸಗಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ವ್ಯಕ್ತಿ 40-42 ವಯಸ್ಸಿನವರು ಎನ್ನಲಾಗುತ್ತಿದ್ದು ಅಪರಿಚಿತನ ಪತ್ತೆಗಾಗಿ ಸಂಶಯ ಇದ್ದವರು…

Read More

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಕಡಲತೀರದಲ್ಲಿ ಮುಳುಗುತ್ತಿದ್ದ ಮೂವರು ಯುವಕರ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ.ಬಾಗಲಕೋಟೆಯ ಬಸವನಗೌಡ ಪಾಟೀಲ್, ಶರಣು, ರವಿಚಂದ್ರನ್ ರಕ್ಷಣೆಗೊಳಗಾದವರು.ಲೈಫ್‌ಗಾರ್ಡ್ ಸಿಬ್ಬಂದಿ ಶಶಿ, ಪಾಂಡು, ರಾಮಚಂದ್ರ ಮೂವರ ರಕ್ಷಣೆ ಮಾಡಿದ್ದು, ಅಸ್ವಸ್ಥಗೊಂಡ ಪ್ರವಾಸಿಗನಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ..

Read More

ಉಡುಪಿ : ಉಡುಪಿಯಲ್ಲಿ ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಶೃತಿನ್ ಶೆಟ್ಟಿ (35) ಮೃತ ದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದ್ದು ಅಸಹಜ ಸಾವೆಂದು ಪೊಲೀಸರಿಉ ಪ್ರಕರಣ ದಾಖಲು ಮಾಡಿದ್ದಾರೆ. ಅಕ್ಟೋಬರ್ 19 ಕ್ಕೆ ಶೃತಿನ್ ಶೆಟ್ಟಿ ನಾಪತ್ತೆಯಾಗಿದ್ದರು. ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್, ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) . ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಪೂಜಾ ಶೆಟ್ಟಿ ಶುಕ್ರವಾರದಂದು ದೂರು ದಾಖಲಿಸಿದ್ದಾರೆ.ಕಾರ್ಕಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶೃತಿನ್ ಶೆಟ್ಟಿ ಅಕ್ಟೋಬರ್ 16ರಂದು ರಜೆ ಹಾಕಿದ್ದು ತಾನು ಮನೆಗೆ ಬರುತ್ತಿರುವುದಾಗಿ ಪತ್ನಿಗೆ ಮೊಬೈಲ್ ಮೂಲಕ ತಿಳಿಸಿದ್ದರು. ಆದರೆ ಮನೆಗೂ ಬಾರದೆ, ಕಾರ್ಕಳ ನಗರ ಠಾಣೆಗೂ ಹೋಗದೆ ಶೃತಿನ್ ಶೆಟ್ಟಿ ನಾಪತ್ತೆಯಾಗಿದ್ದರು. ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಭಡ್ತಿಗೊಂಡು ಕಾರ್ಕಳ ನಗರ ಪೊಲೀಸ್…

Read More

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಾಲಿ ಸಂಸದೆ ಮತ್ತು ಹಾಲಿ ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಫಿಕ್ಸ್‌ ಆಗಿದ್ದು, ವಿಜಯ ದಶಮಿ ಹಬ್ಬದ ಬಳಿಕ ಈ ಹೆಸರನ್ನು ಹೈಕಮಾಂಡ್‌ ಘೋಷಣ ಮಾಡಲಿದ್ದಾರೆ ಎನ್ನಲಾಗಿದೆ. ಇದಲ್ಲದೇ ಸದ್ಯ ವಿ.ಪ ನಾಯಕನ ಸ್ಥಾನ ಕೂಡ ಖಾಲಿ ಉಳಿದಿದ್ದು, ಈಗಾಗಲೇ ರಾಜ್ಯ ಸರ್ಕಾರವು ಕೂಡ ವಿ.ಪ ನಾಯಕನ ಹೆಸರನ್ನು ತಿಳಿಸದೇ ಇರುವುದಕ್ಕೆ ಬಿಜೆಪಿ ವಿರುದ್ದ ವ್ಯಂಗ್ಯವಾಡುತ್ತಿದೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪ ನಾಯಕನ ಹೆಸರನ್ನು ಒಟ್ಟಿಗೆ ತಿಳಿಸಲಾಗುವುದು ಎನ್ನಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಆಯ್ಕೆಯಾದರೇ ಅವರು ಈ ಬಾರಿ ಸಂಸದ ಸ್ಥಾನದ ಚುನಾವಣೆಗೆ ನಿಲ್ಲುವುದಿಲ್ಲ ಎನ್ನಲಾಗತ್ತಿದ್ದು, ಉಡುಪಿ ಚಿಕ್ಕಮಗಳೂರಿನಿಂದ ಹೊಸಬರಿಗೆ ಸ್ಥಾನ ಕೊಡಲಿದ್ದಾರೆ ಎನ್ನಲಾಗಿದೆ. ಬಿಎಸ್‌ವೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಶೋಭಾ ಕರಂದ್ಲಾಜೆ ಅವರ ಕಾರ್ಯವೈಖರಿ ಬಗ್ಗೆ ಟೀಕೆಗಳು ಕೂಡ ಕೇಳಿ ಬಂದಿದ್ದು, ಅವರ ಆಯ್ಕೆಗೆ ಪಾರ್ಟಿಯಲ್ಲಿ ಅಸಮಾಧಾನ ಮೂಡುವುದು ಸುಳ್ಳಲ್ಲ ಅಂತ ಬಿಜೆಪಿ ನಾಯಕರೇ ಹೇಳುತ್ತಿದ್ದಾರಂತೆ.…

Read More

ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆ ದಿಬ್ಬಣದ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಲ್ತಾಡಿ ಬಳಿ ನಡೆದಿದೆ. ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇನ್ನು ಟೆಂಪೋದಲ್ಲಿ ಮಹಿಳೆಯರು ಕೂಡಾ ಇದ್ದರು. ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಂಗಳೂರು : ತಮ್ಮ ವೀಸಾ ಅವಧಿ ಮುಗಿದರೂ ಮಂಗಳೂರಿನಲ್ಲಿದ್ದ ಇಬ್ಬರು ವಿದೇಶಿಯರನ್ನು ಕದ್ರಿ ಪೊಲೀಸರು ವಶಕ್ಕ ಪಡೆದಿದ್ದಾರೆ. ವಶಕ್ಕೆ ಪಡೆದವರನ್ನು ಘಾನಾ ದೇಶದ ಸಲಾಂ ಕ್ರಿಸ್ಟೆನ್ ಮತ್ತು ನೈಜೀರಿಯಾದ ಅಂಕಿತೋಲ ಎಂಬ ಇಬ್ಬರು ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ಉಳಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಹಸ್ತಾಂತರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Read More

ಮಂಗಳೂರು: ಯಾವುದೇ ಮಾಹಿತಿ ಇಲ್ಲದೆ ತನ್ನ ಬ್ಯಾಂಕ್ ಖಾತೆಯಿಂದ ಅಪಾರ ಮೌಲ್ಯದ ನಗದು ಕಡಿತಗೊಂಡು ಇತರ ಯಾರೋ ಅಪರಿಚಿತ ವ್ಯಕ್ತಿಗಳಿಗೆ ಹಣ ವರ್ಗಾವಣೆಗೊಂಡಿರುವುದಾಗಿ ಹಣ ಕಳೆದುಕೊಂಡಿರುವ ವ್ಯಕ್ತಿ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರಾದ ಅಬ್ದುಲ್ ಸಲೀಂ ಅವರ ಕೆನರಾ ಬ್ಯಾಂಕ್ ನರಿಂಗಾನ ಶಾಖೆ, ಕೆನರಾ ಬ್ಯಾಂಕ್‌ನ ಫಿಷರಿಸ್ ಖಾತೆ, ಕೆನರಾ ಬ್ಯಾಂಕ್‌ ದೇರಳಕಟ್ಟೆ ಶಾಖೆ ಹಾಗೂ ಯೂನಿಯನ್‌ ಬ್ಯಾಂಕ್ ದೇರಳಕಟ್ಟೆ ಶಾಖೆಯಿಂದ ಒಟ್ಟು 2,48,100 ರೂ., ಬೇರೆ ಬೇರೆ ದಿನಾಂಕಗಳಲ್ಲಿ ಕಡಿತಗೊಂಡಿದೆ. ಈ ಬಗ್ಗೆ ಬ್ಯಾಂಕ್‌ಗೆ ಲಿಂಕ್ ಆದ ಮೊಬೈಲ್‌ ನಿಂದ ಮಾಹಿತಿ ಬಂದ ಬಳಿಕ ಈ ಬಗ್ಗೆ ದೂರುದಾರರು ಬ್ಯಾಂಕ್‌ಗೆ ಹೋಗಿ ಪರಿಶೀಲಿಸಿದಾಗ ಅಬ್ದುಲ್ ಹೈ, ಅಬ್ದೇಶ್ ರಾಯ್, ಧರ್ಮದಾಸ್ ದಿಬಾ‌ರ್, ಬಿಪ್ಲಬ್ ಪಾಲ್ ಎಂಬವರ ಖಾತೆಗಳಿಗೆ ವರ್ಗಾವಣೆಗೊಂಡಿರುವುದು ಕಂಡು ಬಂದಿದೆ. ವಂಚನೆಗೊಳಗಾದ ವ್ಯಕ್ತಿ ತನ್ನ ಬ್ಯಾಂಕ್ ಖಾತೆಯಿಂದ ಹಣ ಕಡಿತಗೊಂಡು ಬೇರೆ ಅಪರಿಚಿತ ವ್ಯಕ್ತಿಗಳ ಖಾತೆಗಳಿಗೆ ವರ್ಗಾವಣೆಗೊಂಡಿರುವ ಬಗ್ಗೆ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ…

Read More

ಉಡುಪಿ: ಸ್ನಾನ ಮಾಡಲು ನದಿಗೆ ಇಳಿದಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ಬೆ ಸಂಜೆ ಹೆಬ್ರಿ ಸಮೀಪದ ಮತ್ತಾವು ಎಂಬಲ್ಲಿ ನಡೆದಿದೆ. ಕರ್ಜೆ ನಿವಾಸಿ ಉಮೇಶ್ ಶೆಟ್ಟಿ(48) ಹಾಗೂ ಚಾರಾ ಹುರ್ತುಕೆ ನಿವಾಸಿ ಪ್ರಸ್ತುತ್ ಹೆಗ್ಡೆ(21) ಮೃತ ದುರ್ದೈವಿಗಳು. ಇವರಿಬ್ಬರು ಸ್ನಾನಕ್ಕೆಂದು ಮತ್ತಾವು ನದಿಗೆ ತೆರಳಿದ್ದರು. ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಇವರ ಮೊಬೈಲ್ ಪೋನ್ ಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ್ದಾಗ ಮೊಬೈಲ್ ಲೋಕೇಶನ್ ಪತ್ತೆ ಹಚ್ಚಿ ಹುಡುಕಾಟ ನಡೆಸಿದ್ದರು. ರಾತ್ರಿ ಅವರಿಬ್ಬರ ಮೃತದೇಹಗಳು ಪತ್ತೆಯಾಗಿವೆ. ಎಂದು ಗುರುತಿಸಲಾಗಿದೆ. ಪ್ರಸ್ತುತ್ ಹೆಗ್ಡೆ ಅಂತಿಮ ವರ್ಷ ಇಂಜಿನಿಯರ್ ವಿದ್ಯಾರ್ಥಿಯಾಗಿದ್ದರು. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More