Author: main-admin

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಮದನಿನಗರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನೌಫಲ್ (32) ಎಂದು ತಿಳಿದು ಬಂದಿದೆ. ಈತ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದಂತೆ ವರ್ತಿಸುತ್ತಿದ್ದ. ಈತನನ್ನು ಅನುಮಾನದ ದೃಷ್ಟಿಯಿಂದ ಉಳ್ಳಾಲ ಠಾಣಾ ಸಿ ಹೆಚ್ ಸಿ ಶಿವನಾಯಕ್ ಮತ್ತು ಆನಂದ ಬಾಡಗಿ ರವರು ವಶಕ್ಕೆ ಪಡೆದು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ ‌ ಈ ಕುರಿತು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Read More

ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ನ್ಯಾಯಾಲಯವು ಐಪಿಸಿ ಕಲಂ 304 (II) ಅನ್ವಯ ಅಪರಾಧಿಗೆ 4 ವರ್ಷಗಳ ಸಜಾ ಶಿಕ್ಷೆ ಹಾಗೂ ₹10,000 ದಂಡ ಮತ್ತು ಸಾಕ್ಷ್ಯ ನಾಶಪಡಿಸಿದ ಐಪಿಸಿ ಕಲಂ 201ರ ಅನ್ವಯ 1 ವರ್ಷ ಶಿಕ್ಷೆ ಹಾಗೂ ₹1,000 ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ. 2019ರ ಆಕ್ಟೋಬರ್‌ 8 ರ ಮಧ್ಯಾಹ್ನ ಸುಮಾರು 12 ಗಂಟೆಗೆ ಕಂಬಳಪದವಿನಲ್ಲಿರುವ ತನ್ನ ಮನೆಯಲ್ಲಿ ಆರೋಪಿ ಸ್ಯಾಮ್ಸನ್, ತನ್ನ ತಂಗಿ ಫಿಯೋನಾ ಸ್ವೀಡಲ್ ಕುಟಿನ್ಹಾ ಬಳಿ ಮೊಬೈಲ್ ಫೋನ್ ಬಳಸಲು ನೀಡುವಂತೆ ಕೇಳಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಈ…

Read More

ಬೆಂಗಳೂರು: ಆನ್‌ಲೈನ್ ವೇದಿಕೆಗಳಲ್ಲಿ ಮಾರಾಟವಾಗುವ ತರಕಾರಿಗಳು ತಾಜಾವಾಗಿ ಕಾಣಲು ಅಪಾಯಕಾರಿ ರಾಸಾಯನಿಕ (ಕೆಮಿಕಲ್) ಸ್ಪ್ರೇ ಮಾಡುತ್ತಿರುವ ಕುರಿತು ದೂರುಗಳು ಕೇಳಿಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ. ಖಾದರ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಶೀಘ್ರದಲ್ಲೇ ಈ ಜಾಲದ ವಿರುದ್ಧ ಕಟ್ಟುನಿಟ್ಟಿನ ಚಟುವಟಿಕೆ ಆರಂಭಿಸಲಾಗುವುದು ಎಂದರು. ಇತ್ತೀಚೆಗೆ ರಾಜ್ಯದ ವಿವಿಧ ಹೋಟೆಲ್‌ಗಳು ಹಾಗೂ ಕ್ಲಬ್‌ಗಳ ಮೇಲೆ ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ಹಲವಾರು ಲೋಪದೋಷಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯ ಕಾಪಾಡುವ ಕುರಿತು ಮಹತ್ವದ ಯೋಜನೆ ರೂಪಿಸಲಾಗಿದೆ. ಮುಂದಿನ ಒಂದು ವಾರ ಅಥವಾ 15 ದಿನಗಳಲ್ಲಿ ಹೋಟೆಲ್ ಹಾಗೂ ರೆಸ್ಟೋರೆಂಟ್ ಅಸೋಸಿಯೇಷನ್ ಮುಖಂಡರು ಮತ್ತು ಇಂದಿರಾ ಕ್ಯಾಂಟಿನ್ ಗುತ್ತಿಗೆದಾರರೊಂದಿಗೆ ವಿಶೇಷ ಸಭೆ ನಡೆಸಲಾಗುವುದು. ಆಹಾರ ತಯಾರಿಕೆ, ಸುರಕ್ಷತೆ ಮತ್ತು…

Read More

ಕಡಬ: ಶೀಘ್ರವಾಗಿ ಹಣ ಗಳಿಸುವ ಅವಕಾಶ ಹಾಗೂ ಕಡಿಮೆ ದರದಲ್ಲಿ ಹೆಚ್ಚಿನ ಬೆಲೆಯ ವಸ್ತುಗಳನ್ನು ನೀಡುವುದಾಗಿ ಆಮಿಷವೊಡ್ಡಿ, ಜನರನ್ನು ಯೋಜನೆಗೆ ಸೇರಿಸಿದರೆ ಕಮಿಷನ್ ನೀಡುವುದಾಗಿ ಭರವಸೆ ನೀಡಿ ಅಕ್ರಮವಾಗಿ ಹಣಪರಿಚಲನೆ ಯೋಜನೆ ನಡೆಸುತ್ತಿದ್ದ ಆರೋಪದ ಮೇಲೆ ಕಡಬ ಪೊಲೀಸರು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಬ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಹಾವೇರಿ ಮೂಲದ KINGS Bazaar ಸಂಸ್ಥೆಯ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸ್ವೀಕರಿಸಿ ನಿಷೇಧಿತ ಹಣಪರಿಚಲನೆ ಯೋಜನೆ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಕೊಕ್ಕಡ ನಿವಾಸಿಗಳಾದ ಸುಬ್ರಹ್ಮಣ್ಯ ಶಗ್ರಿತ್ತಾಯ (50), ಗುರುಮೂರ್ತಿ (54), ಕಡಬ ಬಿಳಿನೆಲೆ ನಿವಾಸಿಗಳಾದ ಸುರೇಶ್ ಆರ್.ಎಸ್. (55), ಕಿರಣ್ ಕುಮಾರ್ (21), ಶ್ರೀನಾಥ್ (48), ಕಡಬ ಕೌಕ್ರಾಡಿ ನಿವಾಸಿ ಬಾಲಕೃಷ್ಣ ಪಿ.ಹೆಚ್. (42) ಹಾಗೂ ಪುತ್ತೂರು ನಿವಾಸಿ ಸಂದೇಶ್ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Prize Chits and Money Circulation Schemes (Banning) Act,…

Read More

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ ಗ್ರಾಹಕರ ದೂರಿನ ಮೇರೆಗೆ ಜಿಲ್ಲಾ ಆಹಾರ ಸುರಕ್ಷತಾ ನಿಯೋಜಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಅವರು ಉಳ್ಳಾಲದ ತೊಕ್ಕೊಟ್ಟುನಲ್ಲಿರುವ ವೃಂದಾವನ್ ಹೋಟೆಲ್ ಮೇಲೆ ದಿಡೀರ್‌ ದಾಳಿ ನಡೆಸಿದ್ದಾರೆ. ಅಧಿಕಾರಿಯು ತಮ್ಮ ಚಾಲಕನೊಂದಿಗೆ, ಮಧ್ಯಾಹ್ನ 1:30 ಕ್ಕೆ ಹೋಟೆಲ್‌ನ ಶೆಟರ್‌ಗಳನ್ನು ತೆಗೆದು ಅಡುಗೆಮನೆಯನ್ನು ಕೂಲಂಕಷವಾಗಿ ಪರಿಶೀಲಿಸಿದರು. ಗ್ರಾಹಕರ ದೂರಿನ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಪ್ರವೀಣ್ ಕುಮಾರ್, ತಪಾಸಣೆಯ ಸಮಯದಲ್ಲಿ, ಹೋಟೆಲ್‌ನಲ್ಲಿ ಆಹಾರ ಪದಾರ್ಥಗಳಿಗಾಗಿ ಪ್ರತ್ಯೇಕ ಶೇಖರಣಾ ಕೊಠಡಿ ಇಲ್ಲದಿರುವುದು ಮತ್ತು ಅಡುಗೆ ಮನೆಯಾದ್ಯಂತ ಪದಾರ್ಥಗಳು ಅಡ್ಡಲಾಗಿ ರಾಶಿ ಬಿದ್ದಿರುವುದು ಕಂಡುಬಂದಿದೆ. ಅಧಿಕಾರಿಗಳು ಸರಿಯಾಗಿ ಸಂಗ್ರಹಿಸದ ಎಲ್ಲಾ ಆಹಾರ ಪದಾರ್ಥಗಳನ್ನು ತೆರವುಗೊಳಿಸಿದರು ಮತ್ತು ಅಡುಗೆಮನೆಯನ್ನು ಸಂಪೂರ್ಣವಾಗಿ ತೊಳೆದು ಸ್ವಚ್ಛಗೊಳಿಸಲಾಗಿದೆಯೆ ಎಂದು ಪರಿಶೀಲಿಸಿದರು. ಹೋಟೆಲ್ ಮಾಲೀಕರಿಗೆ ಆಹಾರ ಪದಾರ್ಥಗಳನ್ನು ಪ್ರತ್ಯೇಕ ಪ್ರದೇಶಗಳಲ್ಲಿ ವ್ಯವಸ್ಥಿತವಾಗಿ ಜೋಡಿಸಿ ಸಂಗ್ರಹಿಸಲು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಲಾಯಿತು.ಹೋಟೆಲ್‌ನಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವಲ್ಲಿ ವಿಫಲವಾದ ಕಾರಣ, ಹೋಟೆಲ್ ಮಾಲೀಕರಿಗೆ ನೋಟಿಸ್ ನೀಡಲಾಗಿದೆ ಮತ್ತು ಹೆಚ್ಚುವರಿ…

Read More

ಪುತ್ತೂರು: ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.3 ಲಕ್ಷ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.ಕಡಬ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಅ.ಕ್ರ. 06/2020ರ ಪ್ರಕರಣದಲ್ಲಿ ಕಡಬ ಕೊಡಿಯಂಬಳ ನಿವಾಸಿ ಜಯಾನಂದ ಕೆ. (60) ಆರೋಪಿ ಆಗಿದ್ದರು. ಪ್ರಕರಣದಲ್ಲಿ ಐಪಿಸಿ ಕಲಂ 354A, 509, 504, 506, 448, 307 ಹಾಗೂ 326A ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಆಗಿನ ತನಿಖಾಧಿಕಾರಿ ಹಾಗೂ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಕುಸುಮಧರ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಪುತ್ತೂರಿನಲ್ಲಿ ನಡೆದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಆರೋಪಿಗೆ ಐಪಿಸಿ ಕಲಂ 326A ಅಡಿಯಲ್ಲಿ 10 ವರ್ಷಗಳ…

Read More

ಉಡುಪಿ : ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ, ಉದ್ಯಮಿ, ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟ್‌ಔಟ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅದಾನಿ ಯುಪಿಸಿಎಲ್‌ನ ಗುತ್ತಿಗೆ ಕೈತಪ್ಪಿದ ಕಾರಣಕ್ಕಾಗಿ ಗುತ್ತಿಗೆದಾರ ಕಿಶೋ‌ರ್ ಪೂಜಾರಿ, ತನ್ನ ಸಹೋದರ ಭೂಗತ ಪಾತಕಿ ಹೇಮಂತ್ ಪೂಜಾರಿ ಮೂಲಕ ಈ ಕೃತ್ಯ ಎಸಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕ‌ರ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಶೂಟ್‌ಔಟ್ ಪ್ರಕರಣದ ಬೆಳವಣಿಗೆಯ ಮಾಹಿತಿಗಳನ್ನು ನೀಡಿದರು. ಉಚ್ಚಿಲ ನಿವಾಸಿ ಕಿಶೋರ್ ರಾಮ ಪೂಜಾರಿ ಈ ಹಿಂದೆ ಯುಪಿಸಿಎಲ್ ನಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದನು. ಆರು ತಿಂಗಳ ಹಿಂದೆ ಎರ್ಮಾಳಿನಲ್ಲಿ ಯುಪಿಸಿಎಲ್ ಕಂಪೆನಿಯ ಪೈಪ್‌ಲೈನ್ ಮತ್ತು ಕಾಂಕ್ರಿಟ್ ರಸ್ತೆ ಕಾಮಗಾರಿ ಯೋಜನೆಯ ಗುತ್ತಿಗೆಯನ್ನು ತನಗೆ ನೀಡುವಂತೆ ಕಿಶೋರ್ ಪೂಜಾರಿ ಕೇಳಿ ಕೊಂಡಿದ್ದನು. ಅದಕ್ಕೆ ಕಂಪೆನಿಯವರು ಕೂಡ ಒಪ್ಪದೆ ಡೇವಿಡ್ ಡಿಸೋಜಗೆ ನೀಡಿದ್ದರು. ಈ ಕೋಟ್ಯಂತರ ರೂ. ಮೊತ್ತದ ಯೋಜನೆ ಕೈತಪ್ಪಿ ಹೋದ ಸಿಟ್ಟಿನಲ್ಲಿ ಕಿಶೋರ್ ಪೂಜಾರಿ, ಡೇವಿಡ್ ಡಿಸೋಜರನ್ನು ಕೊಲೆ…

Read More

ಮಂಗಳೂರು: ಗೋವಾದಿಂದ ಅಕ್ರಮವಾಗಿ ಮದ್ಯವನ್ನು ಸಾಗಿಸಿ ಮಂಗಳೂರಿನ ಮೂಲಕ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಅಬಕಾರಿ ಪೊಲೀಸರು ಭೇದಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾರಿನ ಮಾಲೀಕ ಹಾಗೂ ಚಾಲಕ ಬಸವರಾಜು ಬೋವಿ ಮತ್ತು ನಾಗವೇಣಿ ನಾಯಕ್ ಎಂದು ಗುರುತಿಸಲಾಗಿದೆ. ಮಾನ್ಯ ಪರವಾನಗಿ ಇಲ್ಲದೆ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ವಿಶೇಷ ಅಬಕಾರಿ ತಂಡ ಕಾರ್ಯಾಚರಣೆ ನಡೆಸಿ ಕಾರನ್ನು ತಡೆದು ಪರಿಶೀಲಿಸಿತು. ಈ ವೇಳೆ ಕಾರಿನಿಂದ 438 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮದ್ಯ ಸಾಗಣೆಗೆ ಬಳಸಿದ್ದ ಕಾರನ್ನೂ ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಎಚ್. ಅವರ ಮಾರ್ಗದರ್ಶನದಲ್ಲಿ ಹಾಗೂ ದಕ್ಷಿಣ ಕನ್ನಡ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಅವರ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ. ವಿಶೇಷ ತಂಡದಲ್ಲಿ ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಗಾಯತ್ರಿ ಸಿ.ಎಚ್., ಬಂಟ್ವಾಳ ಉಪವಿಭಾಗದ ಉಪ ಅಧೀಕ್ಷಕ ಸಂತೋಷ್ ಮೋಡಗಿ, ಬಂಟ್ವಾಳ…

Read More

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನನ್ನು ಕೊಲೆಗೈದ ಆರೋಪಿಯನ್ನು ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆ.24ರಂದು ರಾತ್ರಿ ಬೋಟ್‌ನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಆ.25ರಂದು ಬೆಳಗಿನ ಜಾವ ಗೋವಿಂದ, ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯ ಮಾಹಿತಿ ದೊರೆತ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ (ಕಾ&ಸು) ಅನಿಲ್ ಕುಮಾರ್ ಡಿ. ಅವರು ಸಿಬ್ಬಂದಿಗಳಾದ ಹೆಡ್ ಕಾನ್‌ಸ್ಟೆಬಲ್ ಆದರ್ಶ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಕುಬೇರ ಅವರೊಂದಿಗೆ ಆರೋಪಿ ಪತ್ತೆಗೆ ಕಾರ್ಯಾಚರಣೆ ಕೈಗೊಂಡರು. ಆರೋಪಿ ಗೋವಿಂದ ಉಡುಪಿಗೆ ತೆರಳಿ, ಅಲ್ಲಿಂದ ಹೈದರಾಬಾದ್ ಅಥವಾ ಮುಂಬೈ ಕಡೆಗೆ ರೈಲಿನಲ್ಲಿ ಪರಾರಿಯಾಗಲು ಮುಂದಾಗಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸರು ರೈಲು ನಿಲ್ದಾಣದ ಬಳಿ ಆತನನ್ನು ತಕ್ಷಣ ವಶಕ್ಕೆ ಪಡೆದಿದ್ದಾರೆ.ವಿಚಾರಣೆಯಲ್ಲಿ ಗೋವಿಂದ ಕಳೆದ ಸುಮಾರು 15 ವರ್ಷಗಳಿಂದ ಮನೆಗೆ ಹೋಗದೆ ಮುಂಬೈ,…

Read More

ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ನಡೆದಿದೆ. ಮೃತ ಯುವಕನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, ಸಹ ಮೀನು ಕಾರ್ಮಿಕನೊಬ್ಬ ಅಭಿಷೇಕ್‌ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಮೂಲದ, ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಯ ದೃಷ್ಟಿಯಿಂದ ವಶಕ್ಕೆ ಪಡೆದಿರುವ ಯುವಕನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದು, ವಿಚಾರಣೆ ಮುಂದುವರಿದಿದೆ.

Read More