ಉಪ್ಪಿನಂಗಡಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು ೭ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ: 457, 380 ಐಪಿಸಿ ಪ್ರಕರಣದ ಆರೋಪಿಯಾಗಿರುವ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಯಾನೆ ಬೋಜ ಅಕ್ರ ಬಂಧಿತ ಆರೋಪಿ.ಪೊಲೀಸರು ಆರೋಪಿಯನ್ನು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸೈ ರವರಾದ ಕೌಶೀಕ್ ಬಿಸಿ, ಸಿಬ್ಬಂದಿಯವರಾದ ಹೆಡ್ ಕಾನ್ಸ್ಟೇಬಲ್ ಶಿವರಾಮ್ ರೈ, ಪೊಲೀಸ್ ಕಾನ್ಸ್ಟೇಬಲ್ ಮಹದೇವರವರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.ಆರೊಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುತ್ತದೆ.
Author: main-admin
ಮಣಿಪಾಲ: ಅನುಮಾನಾಸ್ಪದವಾಗಿ ನಿಂತಿದ್ದ ದಂಪತಿಯನ್ನು ಇಂದ್ರಾಳಿ ರೈಲ್ವೆ ಸ್ಟೇಷನ್ ಬಳಿ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ರಮೇಶ ಬಂಡಿ ವಡ್ಡರ(45) ಹಾಗೂ ಆತನ ಪತ್ನಿ ಸುಧಾ(30) ಬಂಧಿತ ಆರೋಪಿಗಳು.ರಮೇಶ್ ಕೈಯಲ್ಲಿ ಎರಡು ಮೊಬೈಲ್ ಇದ್ದು ಅದರಲ್ಲಿ ಒಂದು ಸಿಮ್ ಹಾಗೂ ಸುಧಾ ಕೈಯಲ್ಲಿ ಒಂದು ಮೊಬೈಲ್ ಇತ್ತು. ಈ ಬಗ್ಗೆ ಸಮರ್ಪಕ ಉತ್ತರ ನೀಡದೆ ಇರುವುದರಿಂದ ಪೊಲೀಸರು ಅನುಮಾನ ಗೊಂಡು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಮುಂಗಾರು ಮಳೆಯ ಸಂದರ್ಭ ಗುಡ್ಡಕುಸಿತ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಪ್ರಾಣ ಹಾನಿ ತಪ್ಪಿಸಲು ಜೂ. 1ರಿಂದ ಸೆಪ್ಟಂಬರ್ 30ರವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ, ಗುಡ್ಡ ಹಾಗೂ ಮಣ್ಣು ಅಗೆಯುವುದನ್ನು ನಿಷೇಧಿಸಲಾಗಿದೆ. ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್ ಅವರು ಈ ಬಗ್ಗೆ ಪ್ರಕಟನೆಯಲ್ಲಿ ಸೂಚನೆ ನೀಡಿದ್ದು, ಇಂತಹ ಯಾವುದೇ ರೀತಿಯ ಅಗೆತದ ಕಾಮಗಾರಿ ನಡೆಸದಂತೆ ಹಾಗೂ ಈ ಅವಧಿಯಲ್ಲಿ ಮಣ್ಣು ಸಾಗಾಟ ಮಾಡುವುದನ್ನು ಸಂಪೂರ್ಣ ವಾಗಿ ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.ಅಧಿಕೃತ ಅನುಮತಿ ಪಡೆದ ನಂತರ ಈಗಾಗಲೇ ಪ್ರಾರಂಭವಾಗಿರುವ ನಿರ್ಮಾಣ ಯೋಜನೆಗಳು ಸಾಕಷ್ಟು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡರೆ ಮುಂದುವರಿಯಬಹುದು ಎಂದು ನಿಗಮ ಸ್ಪಷ್ಟಪಡಿಸಿದೆ. ಪಕ್ಕದ ಆಸ್ತಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮತ್ತು ನಿರ್ಮಾಣ ಸ್ಥಳಗಳಲ್ಲಿ ಸರಿಯಾದ ಬ್ಯಾಕ್‌ಫಿಲ್ಲಿಂಗ್ ಕೆಲಸವನ್ನು ಕೈಗೊಳ್ಳಲು ಬಿಲ್ಡರ್‌ಗಳು ಮತ್ತು ಆಸ್ತಿ ಮಾಲೀಕರಿಗೆ ಸೂಚನೆ ನೀಡಲಾಗಿದೆ.ಯಾವುದೇ ಅಪಘಾತ ಅಥವಾ ವಿಪತ್ತು ಸಂಭವಿಸಿದಲ್ಲಿ, ಆಸ್ತಿ ಮಾಲೀಕರು ಮತ್ತು ಸಂಬಂಧಪಟ್ಟ ಎಂಜಿನಿಯರ್ ನೇರ ಹೊಣೆಗಾರರಾಗಿರುತ್ತಾರೆ ಎಂದು ಎಂಸಿಸಿ ಮತ್ತಷ್ಟು ಎಚ್ಚರಿಸಿದೆ.…
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಶನಿವಾರದಂದು ಮತ್ತೊಮ್ಮೆ ಹೆಚ್ಚಿಸಲಾಗಿದ್ದು, ಕಳೆದ 10 ದಿನಗಳಿಗಿಂತಲೂ ಕಡಿಮೆ ಅವಧಿಯಲ್ಲಿ ಇದು ಮೂರನೇ ದರ ಏರಿಕೆಯಾಗಿದೆ. ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಸಂಘರ್ಷಕ್ಕೆ ಸಂಬಂಧಿಸಿದಂತೆ ಹೆಚ್ಚುತ್ತಿರುವ ಇಂಧನ ವೆಚ್ಚದ ಹೊರೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಗ್ರಾಹಕರ ಮೇಲೆ ವರ್ಗಾಯಿಸುವುದನ್ನು ಮುಂದುವರಿಸಿರುವುದು ಇದಕ್ಕೆ ಕಾರಣವಾಗಿದೆ. ಪಿಟಿಐ (PTI) ವರದಿಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 87 ಪೈಸೆ ಏರಿಕೆಯಾಗಿದ್ದು, 98.64 ರೂಪಾಯಿಯಿಂದ 99.51 ರೂಪಾಯಿಗೆ ತಲುಪಿದೆ. ಇತ್ತ ಡೀಸೆಲ್ ದರವು ಲೀಟರ್‌ಗೆ 91 ಪೈಸೆ ಹೆಚ್ಚಳವಾಗಿದ್ದು, 91.58 ರೂಪಾಯಿಯಿಂದ 92.49 ರೂಪಾಯಿಗೆ ಏರಿಕೆಯಾಗಿದೆ. ದೆಹಲಿಯ ಇಂಧನ ವಿತರಕರನ್ನು ಉಲ್ಲೇಖಿಸಿ ರಾಯಿಟರ್ಸ್ (Reuters) ವರದಿಯು ಸಹ ಈ ಬೆಳವಣಿಗೆಯನ್ನು ಖಚಿತಪಡಿಸಿದೆ.ಈ ಇತ್ತೀಚಿನ ದರ ಪರಿಷ್ಕರಣೆಯು ಮೇ 15 ರಂದು ನಡೆದ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳ ಮತ್ತು ಮೇ 19 ರಂದು ನಡೆದ ಮತ್ತೊಂದು 90 ಪೈಸೆ ಏರಿಕೆಯ ಬೆನ್ನಲ್ಲೇ ಬಂದಿದೆ.…
ಉಡುಪಿ : ಮಲ್ಪೆ ಸಮೀಪ ಕೊಡವೂರಿನ ಗರಡಿಮಜಲು ಎಂಬಲ್ಲಿ ಬಾವಿ ತೋಡುವ ಕೆಲಸದ ವೇಳೆ ಒಂದು ಭಾಗ ಕುಸಿದು ಕೊಪ್ಪಳದ 25 ವರ್ಷದ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ರಮೇಶ್ (25) ಎಂದು ಗುರುತಿಸಲಾಗಿದ್ದು, ಇವರು ಕಾರ್ಕಳದ ಪ್ರಭಾತ್ ಶೆಟ್ಟಿ ಎಂಬವರ ಗುತ್ತಿಗೆಯಡಿ ಬಾವಿ ತೋಡುವ ಕೆಲಸಲ್ಲೆ ಇತರ ಐದು ಮಂದಿಯೊಂದಿಗೆ ಕಾರ್ಕಳದಿಂದ ಬಂದಿದ್ದರು. ಬಾವಿ ತೋಡಿ ಕಾರ್ಮಿಕರು ಮೇಲೆ ಬರುವಾಗ ಕುಸಿತ ಸಂಭವಿಸಿದೆ. ಉಳಿದವರು ಅದಾಗಲೇ ಮೇಲೆ ಬಂದಾಗಿತ್ತು. ಹೀಗಾಗಿ ಅವರ ಪ್ರಾಣ ಉಳಿದಿದೆ. ರಮೇಶ್ ಮೇಲೆ ಬರುವಷ್ಟರಲ್ಲಿ ಕುಸಿತ ಉಂಟಾಗಿ ಅವರು ಭಾರಿ ಮಣ್ಣಿನ ರಾಶಿಯಡಿ ಸಿಲುಕಿ ಮೃತಪಟ್ಟಿದ್ದಾರೆ. ಅವಘಡದ ಬಗ್ಗೆ ಮಾಹಿತಿ ಬಂದ ಕೂಡಲೇ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ಪೊಲೀಸರೊಂದಿಗೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಕುಸಿದ ಮಣ್ಣಿನ ಅಡಿಯಿಂದ ರಕ್ಷಣಾ ತಂಡಗಳು ಕಾರ್ಮಿಕನ ಮೃತದೇಹವನ್ನು ಹೊರತೆಗೆದಿವೆ. ಉಡುಪಿ ಶಾಸಕ ಯಶಪಾಲ್ ಸುವರ್ಣ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.…
ಹಲವು ದಿನಗಳಿಂದ ನಾಪತ್ತೆಯಾಗಿದ್ದ ಕಾರ್ಕಳದ ವ್ಯಕ್ತಿಯೊಬ್ಬರು ಉಡುಪಿಯ ವಿದ್ಯೋದಯ ಶಾಲೆಯ ಬಳಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಅಸ್ವಸ್ಥನಾಗಿ ಅಸಹಾಯಕ ಸ್ಥಿತಿಯನ್ನು ಎದುರಿಸುತ್ತಿದ್ದ ಅಪರಿಚಿತನನ್ನು ಗಮನಿಸಿದ 112 ತುರ್ತು ಸಹಾಯವಾಣಿ ಪೊಲೀಸರು, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ತಕ್ಷಣ ನೆರವಿಗೆ ಬಂದ ಒಳಕಾಡು ಅವರು ವ್ಯಕ್ತಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.ವಿಚಾರಣೆಯಲ್ಲಿ ರಕ್ಷಿಸಲ್ಪಟ್ಟ ವ್ಯಕ್ತಿ ಕಾರ್ಕಳದ ನಿವಾಸಿ ದಯಾನಂದ್ ನಾಯಕ್ ಎಂದು ತಿಳಿದು ಬಂದಿದೆ. ದಯಾನಂದ್ ನಾಯಕ್ ಅವರು ದೊಡ್ಡಣಗುಡ್ಡೆಯಿಂದ ಕಾಣೆಯಾಗಿರುವ ಬಗ್ಗೆ ಮಣಿಪಾಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಎಂದು ತಿಳಿದುಬಂದಿತು.ತುರ್ತು ಸಹಾಯವಾಣಿಯ ಹೆಡ್ ಕಾನ್ಸ್ಟೇಬಲ್ ಗಣೇಶ್ ಡಿ, ಅವಿನಾಶ್ ಸಹಕರಿಸಿದರು.
ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ. ಭಾರತ್ ಸಿನಿಮಾಸ್ ನಲ್ಲಿ ಸಿನಿಮಾದ ಬಿಡುಗಡೆ ಸಮಾರಂಭ ಜರಗಿತು. ಅತಿಥಿಗಳು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು. ಹಿರಿಯ ನಿರ್ದೇಶಕ ವಿಜಯಕುಮಾರ್ ಕೊಡಿಯಲ್ ಬೈಲ್ ಮಾತನಾಡಿ ತುಳು ಸಿನಿಮಾ ರಂಗದಲ್ಲಿ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಕಿರಿಯರು, ಹೊಸಬರು ಸಿನಿಮಾರಂಗದಲ್ಲಿ ಮಿಂಚುತ್ತಿದ್ದಾರೆ. ಯುವ ಪ್ರತಿಭಾವಂತರು ಸಿನಿಮಾರಂಗದಲ್ಲಿ ಬೌಂಡರಿ, ಸಿಕ್ಸರ್ ಬಾರಿಸುವ ಮೂಲಕ ಚೆನ್ನಾಗಿ ಆಡಲಿ ಎಂದರು. ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ ಗಜಾನನ ಕ್ರಿಕೆಟರ್ಸ್ ಸಿನಿಮಾದ ಪ್ರೀಮಿಯರ್ ಶೋಗಳನ್ನು ಪ್ರೇಕ್ಷಕರು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ನಿರ್ಮಾಪಕ ಪ್ರಜ್ವಲ್ ಶೆಟ್ಟಿ, ರೋಹನ್ ಪಿರೇರ, ಸಂತೋಷ್ ಲಾಡ್ ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು.ಉದ್ಯಮಿ ಮೈಕಲ್ ಡಿ ಸೋಜ ಶುಭ…
ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ. ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಮಹಮ್ಮದ್ ಎಂಬವರ ಪುತ್ರ ಇರ್ಫಾನ್ (36) ಅವರ ಮೃತದೇಹ ಎಂದು ತಿಳಿದು ಬಂದಿದೆ. ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ಮಾಡುತ್ತಿದ್ದ ವೇಳೆ ಮೃತದೇಹ ನದಿಯಲ್ಲಿ ಕಂಡು ಬಂದಿದ್ದು, ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ಪೊಲೀಸರು ಹಾಗೂ ಗೂಡಿನಬಳಿಯ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ, ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ಕಾರಣಕ್ಕಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದ ಶೀತಲೀಕರಣದಲ್ಲಿ ಇಡಲಾಗಿತ್ತು. ಸಂಜೆ ವೇಳೆ ಮೃತದೇಹದ ಗುರುತು ಪತ್ತೆಯಾಗಿದ್ದು, ಗೂಡಿನಬಳಿ ನಿವಾಸಿ ಇರ್ಫಾನ್ ಎಂದು ಹೇಳಲಾಗಿದೆ. ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಈತ ಮೂರು ವರ್ಷಗಳ ಹಿಂದೆಯಷ್ಟೆ ಊರಿಗೆ ಮರಳಿ ಬಳಿಕ ರಿಕ್ಷಾ ಖರೀದಿಸಿ ದುಡಿಯುತ್ತಿದ್ದರು. ವಿವಾಹಿತನಾಗಿರುವ ಅವರಿಗೆ ಮೂವರು ಮಕ್ಕಳಿದ್ದಾರೆ. ಆದರೆ ಮೂರು ದಿನಗಳಿಂದ ಕಾಣೆಯಾಗಿದ್ದರು ಎಂದು ಹೇಳಲಾಗಿದ್ದು, ಗುರುವಾರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮೃತ ದೇಹದ ಕೈಗಳಲ್ಲಿ…
ಮಂಗಳೂರು: ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಮನೆಯೊಂದರ ಆವರಣ ಗೋಡೆ ನಿರ್ಮಾಣ ಕಾಮಗಾರಿ ವೇಳೆ ಗೋಡೆ ಹಾಗೂ ಮಣ್ಣು ಏಕಾಏಕಿ ಕುಸಿದು ಬಿದ್ದು, ಹಿರಿಯ ಕಂಟ್ರಾಕ್ಟರ್ ಒಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೇ 21ರ ಗುರುವಾರ ನಡೆದಿದೆ. ನಗರದ ಅಶೋಕನಗರ ನಿವಾಸಿ ಆಂಟನಿ ಮಸ್ಕರೇನಸ್ (65) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.ಆಂಟನಿ ಮಸ್ಕರೇನಸ್ ಅವರು ಕುಂಟಿಕಾನದ ಲೋಹಿತ್ ನಗರದಲ್ಲಿ ಮನೆಯೊಂದರ ಹಿಂಭಾಗದ ಆವರಣ ಗೋಡೆ ನಿರ್ಮಾಣದ ಗುತ್ತಿಗೆಯನ್ನು ವಹಿಸಿಕೊಂಡಿದ್ದರು. ಈಗಾಗಲೇ ಒಂದಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದವು. ಗುರುವಾರದಂದು ಅವರು ಎಂದಿನಂತೆ ಕಾರ್ಮಿಕರ ಜೊತೆ ನಿಂತು ಕಾಮಗಾರಿಯ ಮೇಲ್ವಿಚಾರಣೆ ನಡೆಸುತ್ತಾ, ಗೋಡೆಯ ಅಳತೆ ಕಾರ್ಯದಲ್ಲಿ ತೊಡಗಿದ್ದರು.ಈ ವೇಳೆ ತಡೆಗೋಡೆಯ ಮಣ್ಣು ಹಾಗೂ ಗೋಡೆ ಏಕಾಏಕಿ ಇವರ ಮೇಲೆಯೇ ಕುಸಿದು ಬಿದ್ದಿದೆ. ಇದರ ಪರಿಣಾಮವಾಗಿ ಆಂಟನಿ ಅವರು ಸಂಪೂರ್ಣವಾಗಿ ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.ತಕ್ಷಣವೇ ಅಲ್ಲಿದ್ದ ಕಾರ್ಮಿಕರು ಹಾಗೂ ಸ್ಥಳೀಯರು ಧಾವಿಸಿ ತೀವ್ರ ಕಾರ್ಯಾಚರಣೆ ನಡೆಸಿ ಆಂಟನಿ ಅವರನ್ನು ಮಣ್ಣಿನಡಿಯಿಂದ ಮೇಲೆತ್ತಿದ್ದಾರೆ. ತಕ್ಷಣವೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ…
ಉತ್ತರ ಪ್ರದೇಶ: ಅನಾರೋಗ್ಯದಿಂದ ನಿಧನರಾದ ಅತ್ತೆಯ ಅಂತ್ಯಕ್ರಿಯೆಗೆ ನದಿ ತೀರದಲ್ಲಿ ಚಿತೆ ಸಿದ್ಧಪಡಿಸುತ್ತಿದ್ದ ವೇಳೆ, ಅಳಿಯನನ್ನು ಮೊಸಳೆಯೊಂದು ನದಿಗೆ ಎಳೆದೊಯ್ದು ಜೀವಂತವಾಗಿ ನುಂಗಿರುವ ಅತ್ಯಂತ ಭೀಕರ ಘಟನೆಯೊಂದು ಉತ್ತರ ಪ್ರದೇಶದ ಗೋಂಡಾ ಜಿಲ್ಲೆಯ ಉಮ್ರಿ ಬೇಗಮ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ (ಮೇ 20) ಸಂಭವಿಸಿದೆ.ಮೃತ ದುರ್ದೈವಿಯನ್ನು ಗ್ರೇಟರ್ ನೋಯ್ಡಾದ ನಿವಾಸಿ ದೀಪಕ್ ಶರ್ಮಾ (30) ಎಂದು ಗುರುತಿಸಲಾಗಿದೆ. ಅತ್ತೆಯ ಚಿತೆ ಸಿದ್ಧಪಡಿಸುವಾಗಲೇ ಅಳಿಯನೂ ದುರ್ಮರಣಕ್ಕೀಡಾಗಿರುವುದು ಇಡೀ ಕುಟುಂಬವನ್ನು ತೀವ್ರ ಶೋಕ ಸಾಗರದಲ್ಲಿ ಮುಳುಗಿಸಿದೆ. ಉಮ್ರಿ ಗ್ರಾಮದ ನಿವಾಸಿ ಉರ್ಮಿಳಾ ದೇವಿ ಅವರ ನಿಧನದ ಕಾರಣ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ದೀಪಕ್ ಶರ್ಮಾ ಅವರು ತಮ್ಮ ಪತ್ನಿ ರೇಖಾ ಹಾಗೂ 4 ವರ್ಷದ ಹೆಣ್ಣು ಮಗಳೊಂದಿಗೆ ಆಗಮಿಸಿದ್ದರು. ಬುಧವಾರ ಮಧ್ಯಾಹ್ನ ಸುಮಾರು 12 ಗಂಟೆಯ ಸುಮಾರಿಗೆ ಸೋನೌಲಿ ಮೊಹಮ್ಮದ್‌ಪುರ ಉದಯಭಾನ್ ಪಾಹಿ ಗ್ರಾಮದ ಬಳಿಯ ಸರಯೂ ನದಿ ತೀರದಲ್ಲಿ ದೀಪಕ್ ಹಾಗೂ ಇತರ ಸಂಬಂಧಿಕರು ಚಿತೆಗಾಗಿ ಹೊಂಡ ತೋಡುವ ಕೆಲಸದಲ್ಲಿ ನಿರತರಾಗಿದ್ದರು.ಕೆಲಸ ಮುಗಿದ…










