ಸುರತ್ಕಲ್: ಗುಂಡು ಹಾರಿಸಿಕೊಂಡು ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.22ರ ರವಿವಾರ ಮುಂಜಾನೆ ಪಣಂಬೂರು ಎನ್.ಎಂ.ಪಿ.ಟಿ. ಮುಖ್ಯ ಗೇಟ್ ಬಳಿ ನಡೆದಿದೆ. ರಾಯಚೂರು ನಿವಾಸಿ, ಸಿಐಎಸ್‌ಎಫ್ ಪಿಎಸ್‌ಐ ಜಾಕೀರ್ ಹುಸೇನ್ (58) ತನ್ನ ಸೇವಾ ಆಯುಧದಿಂದ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಜಾಕೀರ್ ಹುಸೇನ್ ಅವರನ್ನು ಎನ್.ಎಂ.ಪಿ.ಟಿ ಮುಖ್ಯ ಗೇಟ್‌ನಲ್ಲಿ ನೈಟ್ ಶಿಫ್ಟ್‌ನಲ್ಲಿ ನಿಯೋಜಿಸಲಾಗಿತ್ತು. ರಾತ್ರಿ ಪಾಳಿಯ ಕೆಲಸ ಮುಗಿಸಿ ಮುಂಜಾನೆ ಸುಮಾರು 6.30 ರ ಸಮಯಕ್ಕೆ ಮುಖ್ಯ ಗೇಟ್‌ನ ಪಕ್ಕದಲ್ಲಿರುವ ವಾಶ್‌ರೂಮ್‌ಗೆ ತೆರಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ. ಶವವನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
Author: main-admin
ಉಳ್ಳಾಲ: ಉಳ್ಳಾಲದಲ್ಲಿ ಶುಕ್ರವಾರ ಮಧ್ಯಾಹ್ನ ಪಿಡಬ್ಲ್ಯೂಡಿ ಗುತ್ತಿಗೆದಾರನಿಗೆ ಚಾಕುವಿನಿಂದ ಇರಿದು ಕಾರು, ಲ್ಯಾಪ್ ಟಾಪ್ ದರೋಡೆ ಮಾಡಲಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ರೌಡಿ ಶೀಟರ್ ಹಸೈನಾರ್‌ನನ್ನ ಕಾರು ಸಮೇತ ಅರೆಸ್ಟ್ ಮಾಡಲಾಗಿದ್ದು, ತಲೆಮರೆಸಿ ಕೊಂಡಿರುವ ಮತ್ತಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಉಳ್ಳಾಲ ದರ್ಗಾದಲ್ಲಿ ನಮಾಝ್ ಮುಗಿಸಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಶಮೀರ್(33) ಎಂಬ ಗುತ್ತಿಗೆದಾರನನ್ನು ಉಳ್ಳಾಲದ ಸುಂದರಿ ಭಾಗ್ ನಿವಾಸಿ ಹಸೈನಾರ್ ತಡೆದು ಪರಿಚಯಿಸಿದ್ದಾನೆ. ಕಟ್ಟಡವೊಂದರ ಕಾಮಗಾರಿ ಇದೆ ಮಾಡುತ್ತೀರಾ ಎಂದು ಶಮೀರ್‌ನನ್ನ ಯಾಮಾರಿಸಿದ ಹಸೈನಾರ್ ಗುತ್ತಿಗೆದಾರನ ಕಾರನ್ನೇರಿ ಅಬ್ಬಕ್ಕ ಸರ್ಕಲ್ ಕಡೆ ತೆರಳಿದ್ದಾನೆ. ಅಬ್ಬಕ್ಕ ಸರ್ಕಲ್ ಬಳಿ ಹಸೈನಾರ್‌ನ ಮತ್ತಿಬ್ಬರು ಸಹಚರರಾದ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಎಂಬಿಬ್ಬರು ಕಾರು ಹತ್ತಿದ್ದಾರೆ. ಉಳ್ಳಾಲದ ಬಸ್ತಿ ಪಡ್ಪು ಎಂಬಲ್ಲಿ ಕಾರು ತಲುಪುತ್ತಿದ್ದಂತೆ ಶಮೀರ್ ಕಾಲಿಗೆ ಆರೋಪಿಗಳು ಚಾಕುವಿನಿಂದ ಇರಿದು ಹಲ್ಲೆಗೈದು ಹಣ ಸಿಗದಾಗ ಕಾರು, ಲ್ಯಾಪ್ ಟಾಪ್ ದರೋಡೆಗೈದಿದ್ದಾರೆ. ರೌಡಿಗಳಿಂದ ತಪ್ಪಿಸಿದ…
ಮಂಗಳೂರು: ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಎಂಡಿ ಪೂರೈಸಿ, 10 ವರ್ಷಗಳಿಂದ ಬಹರೇನ್‌ನಲ್ಲಿ ವಾಸವಿರುವ ಸುನಿಲ್ ರಾವ್ ಅವರನ್ನು ಇಸ್ರೇಲ್ ಪರ ಪೋಸ್ಟ್ ಹಾಕಿದ ಆರೋಪದ ಮೇಲೆ ಬಹರೇನ್ ಪೊಲೀಸರು ಬಂಧಿಸಿದ್ದಾರೆ. ಡಾ. ಸುನಿಲ್ ರಾವ್ ಅವರು ಹಮಾಸ್ ಉಗ್ರರನ್ನು ವಿರೋಧಿಸಿ ಟ್ವೀಟರ್ ನಲ್ಲಿ ಹಾಕಿರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಕೆಲವರು ಈ ಪೋಸ್ಟ್‌ಗೆ ಆಕ್ಷೇಪ ವ್ಯಕ್ತಪಡಿಸಿ, ಬಹರೇನ್ ಆಡಳಿತವನ್ನು ಟ್ಯಾಗ್ ಮಾಡಿದ್ದರು. ಈ ವಿಚಾರವನ್ನು ಆಧರಿಸಿ, ಅಲ್ಲಿನ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಈ ಘಟನೆಯ ಬೆನ್ನಲ್ಲೇ ಅವರು ಕಾರ್ಯ ನಿರ್ವಹಿಸುತ್ತಿದ್ದ ಬಹರೇನ್‌ನ ರಾಯಲ್ ಆಸ್ಪತ್ರೆ, ಅವರನ್ನು ಕರ್ತವ್ಯದಿಂದ ಬಿಡುಗಡೆ ಗೊಳಿಸಿದೆ. ಈ ಸಂಬಂಧ ಆಸ್ಪತ್ರೆ ತನ್ನ ‘X’ ನಲ್ಲಿ ಪೋಸ್ಟ್ ಹಾಕಿಕೊಂಡಿದೆ.
ಉಡುಪಿ: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ. ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್ ಕುಮಾರ್‌ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲಾ ಶಿಕ್ಷಕಿ ಭಾರತಿ ದಂಪತಿಯ ಪುತ್ರ ಪೃಥ್ವಿರಾಜ್ ಶೆಟ್ಟಿ (12) ಕುಸಿದು ಬಿದ್ದು ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ.7ನೇ ತರಗತಿಯ ವಿದ್ಯಾರ್ಥಿ ಪೃಥ್ವಿರಾಜ್ ಶೆಟ್ಟಿ ಅಕ್ಕ ವರ್ಷದ ಹಿಂದೆಯಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದಳು, ಅಕ್ಕನ ಸಾವಿನ ನೋವಲ್ಲಿರುವ ಪೋಷಕರಿಗೆ ಮಗನ ಸಾವು ಮತ್ತಷ್ಟು ಆಘಾತ ಉಂಟು ಮಾಡಿದೆ.ಶನಿವಾರ ಬೆಳಗ್ಗೆ ಮನೆಯ ಬಳಿ ಶಾಲೆಯ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಪೃಥ್ವಿರಾಜ್ ಪೋಷಕರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಬಾಲಕನನ್ನು ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ಪೋಷಕರಿಗೆ ತಿಳಿಸಿದ್ದಾರೆ. ಹೃದಯಾಘಾತದಿಂದ ಬಾಲಕ ಪೃಥ್ವಿರಾಜ್ ಮೃತಪಟ್ಟಿರಬಹುದು ಎಂದು ವೃದ್ಯರು ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಪೃಥ್ವಿರಾಜ್ ಸಾವಿಗೆ ಕಾರಣ ತಿಳಿಯಲಿದೆ. ಮರುಕಳಿಸಿದ ದುರಂತ…
ಮಂಗಳೂರು: ನಿವೃತ್ತ ಅರಣ್ಯಾಧಿಕಾರಿಯೊಬ್ಬರಿಂದ ಬಿಲ್ ಪಾವತಿ ಗೆ ಬಿಲ್ ಮೊತ್ತದ 15 % ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರು ವಿಭಾಗದ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ.2022-23ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಧೀನದಲ್ಲಿ ಬರುವ ಜಲಾನಯನ ಅಭಿವೃದ್ಧಿ ವಿಭಾಗದ “ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ WDC 20” ಯೋಜನೆಯಡಿ ಬಂಟ್ವಾಳ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಸರಕಾರದ ವತಿಯಿಂದ ಉಚಿತವಾಗಿ ವಿವಿಧ ಜಾತಿ ಅರಣ್ಯ ಮತ್ತು ತೋಟಗಾರಿಕಾ ಗಿಡಗಳನ್ನು ನೀಡಲಾಗಿತ್ತು. ಇದನ್ನು ಕೆಲವು ನರ್ಸರಿಗಳ ಮೂಲಕ ಪಡೆದುಕೊಳ್ಳಲಾಗಿತ್ತು, ಅಲ್ಲದೆ ಅರಣ್ಯ ಇಲಾಖೆ ಗುತ್ತಿಗೆದಾರರಿಂದ ಗಿಡಗಳನ್ನು ನಾಟಿ ಮಾಡಿಸಿತ್ತು. ಈ ಒಟ್ಟಾರೆ ಕಾಮಗಾರಿಗೆ 50 ಲಕ್ಷದಷ್ಟು ಹಣ ಸರಕಾರದಿಂದ ಬರಬೇಕಾಗಿತ್ತು. ಈ ಹಿನ್ನಲೆ ಕೃಷಿ ಇಲಾಖೆಯಲ್ಲಿ ಅಂದು ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತರಾಗಿರುವ ಪರಮೇಶ್ ಎನ್.ಪಿ ಅವರು ಬಿಲ್ ಬಾಕಿ ಪಾವತಿಗೆ ಮಂಗಳೂರು…
ಕಾರ್ಕಳ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಶೃತಿನ್ ಶೆಟ್ಟಿ(35) ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ ಗುರುವಾರ ರಾತ್ರಿ 7.30ಕ್ಕೆ ಪತ್ನಿಗೆ ಕರೆ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಬಳಿಕ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. 2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆಗಿ ಬಂದಿದ್ದರು. ಅ.17ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಅ.18ಕ್ಕೆ ವಾರದ ರಜೆಯಿತ್ತು ಅ.19ರಂದು ಸಿ.ಎಲ್ ರಜೆ ಹಾಕಿದ್ದರು. ದೃಢಕಾಯ, 178 ಸೆ. ಮೀ. ಎತ್ತರವಿರುವ ಶೃತಿನ್ ಶೆಟ್ಟಿ ಅವರನ್ನು ಕಂಡವರು 0820-2555452 ನಂಬರ್ ನ್ನು ಸಂಪರ್ಕಿಸಲು ಕೋರಲಾಗಿದೆ. ಶೃತಿನ್ ಶೆಟ್ಟಿ ಇಂಗ್ಲಿಷ್, ಕನ್ನಡ, ತುಳು,…
ಬೆಂಗಳೂರು:ಶೀಘ್ರದಲ್ಲೇ 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಇಂದು ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಆರು ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತದೆ ಐದು ಸಂಚಾರಿ ಪೋಲಿಸ್ ಠಾಣೆಯನ್ನು ಸ್ಥಾಪಿಸಲಾಗುವುದು ಎಂದರು. “ಖಾಲಿ ಇರುವ ಹುದ್ದೆಗಳಿಗೆ 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತದೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ” ಎಂದರು. “ದೇಶದಲ್ಲಿ ರಾಜ್ಯ ಪೊಲೀಸ್ ಇಲಾಖೆ ಉತ್ತಮ ಹೆಸರು ಪಡೆದಿದೆ. ಪೊಲೀಸ್ ಕಾನೂನು ಸುವ್ಯವಸ್ಥೆ ಕಾಪಾಡುವವರು. ಕೆಲಸ ಮಾಡುವಾಗ ಅನೇಕ ಅಪಾಯ ಎದುರಿಸುತ್ತಾರೆ. ಈ ವೇಳೆ ಪ್ರಾಣವನ್ನೂ ಕಳೆದುಕೊಳ್ಳುತ್ತಾರೆ. ಭಾರತದಲ್ಲಿ ಸೆಪ್ಟೆಂಬರ್ 22ರಿಂದ ಆಗಸ್ಟ್ 23 ರವರೆಗೆ ಸುಮಾರು 189 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 16 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರೆಲ್ಲರಿಗೂ ಶ್ರದ್ಧಾಂಜಲಿ…
ಮಂಗಳೂರು: ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿ ಒಟ್ಟು 6.41 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಮಂಗಳೂರು ಹೊರ ವಲಯದ ಉಳ್ಳಾಲ ತಾಲೂಕಿನ ನರಿಂಗಾನದ ತೌಡುಗೋಳಿ ನಿವಾಸಿ ಅಬ್ದುಲ್ ಅಝೀಝ್ ಯಾನೆ ಪೋಕರ್ ಅಝೀಝ್ (42)ಬಂಧಿತ ಆರೋಪಿ. ಈ ಹಿಂದೆ ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ ಅಬ್ಬುಲ್ ಅಝೀಝ್ ದೇರಳಕಟ್ಟೆ ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆತನನ್ನು ಹೆಡೆಮುರಿ ಕಟ್ಟಿದ್ದಾರೆ. ಆತನಿಂದ ಒಟ್ಟು 26 ಗ್ರಾಂ ತೂಕದ 1,30,000 ರೂಪಾಯಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ಮತ್ತು ಅದನ್ನು ಸಾಗಿಸಲು ಉಪಯೋಗಿಸಿದ ಕಾರು, 2 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 6,41,500 ರೂಪಾಯಿ ಮೌಲ್ಯದ ಸೊತ್ತುಗಳನ್ನು…
ಮಂಗಳೂರು: ಉಳಾಯಿಬೆಟ್ಟು ಗ್ರಾಮದ ಇಡ್ಮ ಎಂಬಲ್ಲಿ ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ರಾತ್ರಿ ದಾಳಿ ನಡೆಸಿ ಟಿಪ್ಪರ್ ಲಾರಿ ಮತ್ತು ಮರಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಾತ್ರಿ 10.45ರ ಸುಮಾರಿಗೆ ದಾಳಿ ನಡೆಸಿದ್ದು ಈ ವೇಳೆ ಇಬ್ಬರು ವ್ಯಕ್ತಿಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಟಿಪ್ಪರ್ ಲಾರಿ ಹಾಗೂ ಒಂದು ಲೋಡ್ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ: ದನಗಳನ್ನು ಕಡಿದು ಮಾಂಸ ಮಾಡಿದ ಬಳಿಕ ಉಳಿದ ತ್ಯಾಜ್ಯ ವಸ್ತುಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಬಸ್ ನಿಲ್ದಾಣದ ಬಳಿ ನಡೆದಿದೆ. ಕಲ್ಲಡ್ಕ – ವಿಟ್ಲ ರಸ್ತೆಯ ಮಧ್ಯ ಭಾಗದ ಕೆಲಿಂಜ ಎಂಬಲ್ಲಿ ಬಸ್ ನಿಲ್ದಾಣದ ಬಳಿ ರಸ್ತೆಯ ಬದಿಯಲ್ಲಿ ದನದ ಬೇರೆ ಬೇರೆ ಭಾಗವನ್ನು ಎಸೆದು ಹೋದ ಘಟನೆ ನಡೆದಿದ್ದು, ಇದನ್ನು ನೋಡಿದ ಸ್ಥಳೀಯರು ಗ್ರಾ.ಪಂ.ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.ಗ್ರಾ.ಪಂ.ಸದಸ್ಯರು ವಿಟ್ಲ ಪೋಲೀಸರಿಗೆ ಮಾಹಿತಿ ನೀಡಿದ್ದು,ಸ್ಥಳಕ್ಕೆ ವಿಟ್ಲ ಪೋಲಿಸರು ಬೇಟಿ ನೀಡಿ ತ್ಯಾಜ್ಯ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಮೇಲ್ನೋಟಕ್ಕೆ ದನಗಳ ಕೈ ಕಾಲು,ಚರ್ಮ,ಹಲ್ಲು,ತಲೆಯ ಭಾಗದಂತೆ ಕಂಡು ಬಂದಿದ್ದು ಹೆಚ್ಚಿನ ಮಾಹಿತಿಯನ್ನು ತನಿಖೆಯಬಳಿಕ ಪೊಲೀಸರು ತಿಳಿಸಬೇಕಾಗಿದೆ.ಈ ಸ್ಥಳದಲ್ಲಿ ಇದು ಮೊದಲ ಬಾರಿ ಎಸೆದು ಹೋಗಿರುವ ಪ್ರಸಂಗ ಅಲ್ಲ.ಅನೇಕ ಬಾರಿ ಇದೇ ರೀತಿ ತ್ಯಾಜ್ಯವನ್ನು ಎಸೆದು ಹೋಗಿದ್ದಾರೆ ಎಂಬ ವಿಚಾರವನ್ನು ಸ್ಥಳೀಯರು ತಿಳಿಸಿದ್ದಾರೆ. ಇಂತಹ ಸಮಾಜಘಾತುಕ ಕಾರ್ಯವನ್ನು ಯಾರು ಮಾಡುತ್ತಿದ್ದಾರೆ ಎಂಬುದರ ತನಿಖೆ ಮಾಡುತ್ತೇವೆ, ಅಂತಹವರ…










