ವಿಟ್ಲ : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಕಂಬಳ ಕೋಣ ಎಂದು ನೆಪವೊಡ್ಡಿ ಜಾನುವಾರುಗಳನ್ನು ಮಾಡಲು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
Author: main-admin
ಉಡುಪಿ : ಉಡುಪಿ ಜಿಲ್ಲೆಯ ಹಿರಿಯ ರಾಜಕಾರಣಿ ಮಾಜಿ ಶಾಸಕ ಯು.ಆರ್ ಸಭಾಪತಿ ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ ಅವರು ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. 1952 ರಲ್ಲಿ ಹುಟ್ಟಿದ ಅವರು,1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ(ಕೆಸಿಪಿ) ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಅನಂತರ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು. 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಎಂಎಲ್ ಎ ಆಗಿ ಮರು ಆಯ್ಕೆಯಾಗಿದ್ದರು. ಅನಂತರ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.
ಉಳ್ಳಾಲ : ಯುವಕನೊಬ್ಬ ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಓಳಪೇಟೆ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಬಿಹಾರ ಮೂಲದ ಶ್ರವಣ್ ದಾಸ್ (40) ಎಂದು ಗುರುತಿಸಲಾಗಿದೆ ಶ್ರವಣ್ ದಾಸ್ ಕಲ್ಕಟ್ಟದಲ್ಲಿ ಕೆಲಸ ಮುಗಿಸಿ ತೊಕ್ಕೊಟ್ಟುವಿನಲ್ಲಿರುವ ನಿವಾಸಕ್ಕೆ ಬಂದಿದ್ದರು. ಈ ವೇಳೆ ಸಾಂಬಾರ್ ತರಲೆಂದು ಹೊಟೇಲ್ ಗೆ ಹೋಗಿ ವಾಪಸ್ ರೈಲ್ವೆ ಹಳಿ ದಾಟಿ ಬರುವಾಗ ರೈಲು ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಿಸೆಯಲ್ಲಿ ದೊರೆತ ಆಧಾರ್ ಕಾರ್ಡ್ ಮೂಲಕ ಗುರುತು ಪತ್ತೆ ಹಚ್ಚಿದ್ದಾರೆ. ಅವರ ಪತ್ನಿ ಮಕ್ಕಳು ಬಿಹಾರದಲ್ಲಿದ್ದು, ಶ್ರವಣ್ ದಾಸ್ ಬಾಡಿಗೆ ಕೊಠಡಿಯಲ್ಲಿ ಒಂಟಿಯಾಗಿ ಇದ್ದರು ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನ ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಬಳಿ ನಡೆದಿದೆ. ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಬಾಬುನನ್ನ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಅಲ್ಯೂಮಿನಿಯಂ ಬಾಬುನನ್ನ ಅಪಹರಣ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಮಿಳುನಾಡಿನ ಕೃಷ್ಣಗಿರಿ ತಾಲೂಕಿನ ಡೆಂಕಣಕೋಟೆ ಅರಣ್ಯ ಪ್ರದೇಶದಲ್ಲಿ ಆತನ ಶವ ಪತ್ತೆಯಾಗಿದೆ. ಕೊಲೆ, ಸುಲಿಗೆ, ಬೆದರಿಕೆ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಅಲ್ಯೂಮಿನಿಯಂ ಬಾಬು ಭಾಗಿಯಾಗಿದ್ದ. ಇತ್ತೀಚೆಗೆ ಬೆಂಗಳೂರಿನಿಂದ ತಮಿಳುನಾಡಿಗೆ ರೌಡಿಶೀಟರ್ ಬಾಬು ವಾಸ್ತವ್ಯ ಬದಲಿಸಿದ್ದ. ಘಟನೆ ಸಂಬಂಧ ತಮಿಳುನಾಡಿನ ತಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : 2,000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ಆರ್‌ಬಿಐ ನಿರ್ಧಾರ ತೆಗೆದುಕೊಂಡಿದ್ದು, ಆದಾಗ್ಯೂ, ಕರೆನ್ಸಿ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನು ಬದ್ಧವಾಗಿ ಮುಂದುವರಿಯುತ್ತದೆ ಎಂದು ಕೇಂದ್ರ ಬ್ಯಾಂಕ್ ಹೇಳಿದೆ. ಸೆಪ್ಟೆಂಬರ್ 30, 2023 ರವರೆಗೆ 2,000 ರೂ ನೋಟುಗಳಿಗೆ ಠೇವಣಿ ಮತ್ತು/ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸಲು RBI ಬ್ಯಾಂಕ್‌ಗಳನ್ನು ಕೇಳಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ 2000 ರೂಪಾಯಿ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚಿಸಿದೆ. ಆರ್‌ಬಿಐನ “ಕ್ಲೀನ್ ನೋಟ್ ನೀತಿ” ಯ ಅನುಸಾರವಾಗಿ ಈ ಬದಲಾವಣೆಯನ್ನು ತರಲಾಗಿದೆ ಎಂದು ಸೆಂಟ್ರಲ್ ಬ್ಯಾಂಕ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಸಾರ್ವಜನಿಕ ಸದಸ್ಯರು ತಮ್ಮ ಬ್ಯಾಂಕ್ ಖಾತೆಗಳಿಗೆ ರೂ 2,000 ನೋಟುಗಳನ್ನು ಠೇವಣಿ ಮಾಡಲು ಮತ್ತು/ಅಥವಾ ಯಾವುದೇ ಬ್ಯಾಂಕ್ ಶಾಖೆಯಲ್ಲಿ ಇತರ ಮುಖಬೆಲೆಯ ನೋಟುಗಳಿಗೆ ಬದಲಾಯಿಸಲು ಅನುಮತಿಸಲಾಗುತ್ತದೆ. ಬ್ಯಾಂಕ್ ಖಾತೆಗಳಿಗೆ ಠೇವಣಿ ಮಾಡುವುದನ್ನು ಸಾಮಾನ್ಯ ರೀತಿಯಲ್ಲಿ ಮಾಡಬಹುದು, ಅಂದರೆ ನಿರ್ಬಂಧಗಳಿಲ್ಲದೆ ಮತ್ತು ಅಸ್ತಿತ್ವದಲ್ಲಿರುವ ಸೂಚನೆಗಳು ಮತ್ತು ಇತರ ಅನ್ವಯವಾಗುವ ಶಾಸನಬದ್ಧ ನಿಬಂಧನೆಗಳಿಗೆ ಒಳಪಟ್ಟಿರುತ್ತದೆ…
ಕೇರಳ; ವ್ಯಕ್ತಿಯೋರ್ವರ ಶರ್ಟ್ ಜೇಬಿನಲ್ಲೇ ಮೊಬೈಲ್ ಸ್ಫೋಟಗೊಂಡ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ. 70 ವರ್ಷದ ಇಲಿಯಾಸ್ ಎಂಬ ವ್ಯಕ್ತಿ ಮರೋಟ್ಟಿಚಾಲ್ ಪ್ರದೇಶದ ಚಹಾ ಅಂಗಡಿಯಲ್ಲಿ ಕುರ್ಚಿಯ ಮೇಲೆ ಕುಳಿತಿದ್ದರು. ಆಗ ಅವರ ಶರ್ಟ್ ಜೇಬಿನಲ್ಲಿದ್ದ ಮೊಬೈಲ್ ಫೋನ್ ದಿಢೀರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ. ವೈರಲ್ ಆದ ವಿಡಿಯೋದಲ್ಲಿ ವ್ಯಕ್ತಿ ಅಂಗಡಿಯಲ್ಲಿನ ಟೇಬಲ್‌ನಲ್ಲಿ ಕುಳಿತು ಚಹಾ ಸೇವಿಸುವುದನ್ನು ನೋಡಬಹುದು.ಈ ವೇಳೆ ಅವನ ಶರ್ಟ್ ಜೇಬಿನಲ್ಲಿರುವ ಫೋನ್ ಸಿಡಿದು ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ವ್ಯಕ್ತಿ ತನ್ನ ಜೇಬಿನಿಂದ ಮೊಬೈಲ್ ಫೋನ್ ನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ.ಬಳಿಕ ಅಲ್ಲಿದ್ದವರು ಓಡಿ ಬಂದು ಶರ್ಟ್ ನ ಬೆಂಕಿ ನಂದಿಸಿದ್ದಾರೆ. ವ್ಯಕ್ತಿ ಈ ಮೊಬೈಲ್ ಅನ್ನು ವರ್ಷದ ಹಿಂದೆ 1000 ರೂ.ಗೆ ಖರೀದಿಸಿದ್ದರು ಎನ್ನಲಾಗಿದೆ.ಇದೀಗ ಮೊಬೈಲ್ ಸ್ಪೋಟಕ್ಕೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಯುತ್ತಿದೆ. ಒಂದೇ ವಾರದಲ್ಲಿ ಇದು ಕೇರಳದಲ್ಲಿ ನಡೆದ ಎರಡನೇ ಪ್ರಕರಣವಾಗಿದೆ. ಕೋಝಿಕ್ಕೋಡ್ ನಗರದಲ್ಲಿ ಇದೇ ರೀತಿಯ…
ಬೆಂಗಳೂರು: ಇಂದು ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ಹಲವು ರಾಜ್ಯಗಳು ಮುಖ್ಯಮಂತ್ರಿಗಳು, ಹಲವು ಗಣ್ಯರು ಭಾಗಿಯಾಗಿದ್ದಾರೆ. ಕರ್ನಾಟಕದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 8 ನೂತನ ಸಚಿವರು ಸಹ ಇಂದು ಪ್ರಮಾಣವಚನ ಸ್ವೀಕರಿಸಿದ್ದರೆ. ಕರ್ನಾಟಕದ ಉಪಮುಖ್ಯ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ನೂತನ ಸಚಿವರ ಪಟ್ಟಿ…
ಬೆಳ್ತಂಗಡಿ: ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು, ಪೋಲೀಸರು ಆಗಮಿಸಿ ಕೇಸು ದಾಖಲಿಸಿದ್ದಾರೆ. ಕ್ರಮ ಕಾವಿಶ್ವ ಹಿಂದು ಪರಿಷತ್ ವೇಣೂರು ಪ್ರಖಂಡದ ಕಾರ್ಯಕರ್ತರಿಂದ ಪೋಲೀಸರಿಗೆ ಮನವಿ ಕೂಡ ಕೊಡಲಾಯಿತು. ಕಸಾಯಿ ಖಾನೆ ನಡೆಸುವುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ಮರೋಡಿ ಗ್ರಾಮದ ಅಜೀದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಗೋಮಾಂಸವನ್ನು ಮಾಡುತ್ತಿರುವುದು ಸಂಘಟನೆಯ ಗಮನಕ್ಕೆ ಬಂದಿದ್ದು ಕೂಡಲೇ ಪೋಲೀಸ್ ಠಾಣೆಗೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಕೆಲವಡೆ ನಡೆಯುವ ಅಕ್ರಮ ಕಾಸಾಯಿಖಾನೆ ನಡೆಸುವುವವರನ್ನು ಪತ್ತೆ ಹಚ್ಚಿ ಅವರ ಆವರಣವನ್ನು ಮುಟ್ಟುಗೋಲು ಹಾಕಬೇಕು. ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವೇಣೂರು ಪೋಲೀಸ್ ಠಾಣೆಗೆ ವಿಶ್ವ ಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಮಂಗಳೂರು: ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯ ಫ್ಲೈಒವರ್ ಕೆಳಗೆ ಅಮಾಯಕ ಯುವಕನೋರ್ವನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ ಘಟನೆ ಸಂಜೆ ವೇಳೆ ನಡೆದಿದೆ. ಹಲವು ವರ್ಷಗಳಿಂದ ಇದೇ ಫ್ಲೈಒವರ್ ಕೆಳಗೆ ಸಂಜೆ ವೇಳೆ ಬೀಡು ಬಿಟ್ಟಿರುವ ಇಬ್ಬರು ಮಂಗಳಮುಖಿಯರು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾರೆ.ಘಟನೆ ನಡೆದ ತಕ್ಷಣ ಸ್ಥಳೀಯ ನಾಗರೀಕರು ಜಮಾಯಿಸಿದ್ದು, ಇನ್ನು ಮುಂದೆ ಇಲ್ಲಿ ಅನೈತಿಕ ಚಟುವಟಿಕೆಗೆ ಅವಕಾಶ ನೀಡಬಾರದೆಂದು ಒತ್ತಾಯಿಸಿದ್ದಾರೆ. ಇದೇ ವೇಳೆ ಮತ್ತಿಬ್ಬರು ಮಂಗಳಮುಖಿಯರು ಸ್ಥಳಕ್ಕಾಗಮಿಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಮಾಹಿತಿ ಪಡೆದ ಉರ್ವಾ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಘಟನೆ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.
ಬೆಂಗಳೂರು :ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Chief Minister Siddaramaiah) ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K Shivakumar) ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ (Deputy Chief Minister), 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿಯಲ್ಲಿ ತಡರಾತ್ರಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರೊಂದಿಗೆ ಸುಮಾರು 5 ಗಂಟೆಗಳ ಚರ್ಚೆ ನಡೆಸಿ ಸಿಎಂ ಡಿಸಿಎಂ ಸೇರಿ 10 ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಸಚಿವರ ಪಟ್ಟಿ ಇಲ್ಲಿದೆ ಡಾ.ಜಿ.ಪರಮೇಶ್ವರ್ ಕೆ.ಹೆಚ್. ಮುನಿಯಪ್ಪ ಕೆ.ಜೆ. ಜಾರ್ಜ್ ಎಂ.ಬಿ.ಪಾಟೀಲ್ ಸತೀಶ್ ಜಾರಕಿಹೊಳಿ ಪ್ರಿಯಾಂಕ್ ಖರ್ಗೆ ರಾಮಲಿಂಗ ರೆಡ್ಡಿ ಜಮೀರ್ ಅಹ್ಮದ್ ಖಾನ್










