Author: main-admin

ಬೆಳ್ತಂಗಡಿ: ರಸ್ತೆ ದಾಟುತ್ತಿರುವ ವೇಳೆ ಪಿಕಪ್‌ ವಾಹನವೊಂದು ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಅರ್ತಿಲಾ ಮನೆಯ ಮಹಮ್ಮದ್ ರಫೀಕ್ ಅವರ ಮಗ ಮಹಮ್ಮದ್ ರಂಝಿನ್ (10) ಶಾಲಾ ರಜೆಯ ಹಿನ್ನಲೆ ಸಂಬಂಧಿಕರ ಮನೆಗೆ ಬಂದಿದ್ದು, ಇಂದು 11:50ರ ಸುಮಾರಿಗೆ ಅಂಗಡಿಗೆ ಹೋಗಿ ವಾಪಾಸ್‌ ರಸ್ತೆ ದಾಟುವಾಗ ಲಾಯಿಲ ಜಂಕ್ಷನ್‌ ಬಳಿ ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾನೆ. ತಕ್ಷಣ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಪಿಕಪ್ ವಾಹನ ಚಾಲಕ ವೇಣೂರಿನ ನಿವಾಸಿ ಜಯ ವಿರುದ್ಧ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ನಡೆಸಿದ ಕಾಮಗಾರಿ ನಡೆಸಿದ ಬಳಿಕ ಸ್ಥಳದ ಮೆಟೀರಿಯಲ್ ಪರಿಶೀಲನೆ ನಡೆಸಿ ವರದಿ ನೀಡಲು ಬೆಳ್ತಂಗಡಿಯ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರಿನ ಬೋಂದೆಲ್ ನಲ್ಲಿರುವ ಸಹಾಯಕ ಕಾರ್ಯಪಾಲ ಇಂಜಿನಿಯರವರ ಕಛೇರಿ, ಲೋಕೋಪಯೋಗಿ ಇಲಾಖೆ ಗುಣ ಭರವಸೆ ಉಪವಿಭಾಗದ ಇದರ ಕಿರಿಯ ಇಂಜಿನಿಯರ್-2 ಲೋಕಾಯಕ್ತ ಬಲೆಗೆ ಬಿದ್ದ ಘಟನೆ ಇಂದು ನಡೆದಿದೆ. ಮಂಗಳೂರು ಬೋಂದೆಲ್ ನಲ್ಲಿರುವ ಸಹಾಯಕ ಕಾರ್ಯಪಾಲಕ ಇಂಜಿನಿಯರವರ ಕಚೇರಿ ಲೋಕೋಪಯೋಗಿ ಇಲಾಖೆಯ ಗುಣ ಭರವಸೆ ಉಪವಿಭಾಗದ ಕಿರಿಯ ಇಂಜಿನಿಯರ್ -2 ಅಗಿರುವ ರೋನಾಲ್ಡ್ ಲೋಬೋ ಎಂಬಾತ ಬೆಳ್ತಂಗಡಿಯ ಗುತ್ತಿಗೆದಾರರೊಬ್ಬರಿಂದ 20,000/- ಲಂಚದ ಹಣ ಸ್ವೀಕರಿಸುತ್ತಿದ್ದಾಗ ಇಂದು ಮಧ್ಯಾಹ್ನದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಆರೋಪಿ ಕಿರಿಯ ಇಂಜಿನಿಯರ್ ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ, ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಭಯಾನಕ ಅಂಶ ಬಾಯಿಬಿಟ್ಟಿದ್ದಾನೆ. ಕರ್ನಾಟಕದಲ್ಲಿ ಮೂರು ಸ್ಥಳಗಳಲ್ಲಿ ಬಾಂಬ್​​ ಬ್ಲಾಸ್ಟ್​ ಮಾಡಲು ಸಂಚು ರೂಪಿಸಿದ್ದೇವು ಎಂದು ಹೇಳಿದ್ದಾನೆ. ಕದ್ರಿ ದೇವಸ್ಥಾನ ಟಾರ್ಗೇಟ್ ಮಾಡಲಾಗಿತ್ತು ಎಂದು ಈ ಹಿಂದೆ ಹೇಳಿದ್ದ. ಇದೀಗ ಉಡುಪಿ ಮಠ, ಚಿಕ್ಕಮಗಳೂರಿನ ಬಿಜೆಪಿ ಕಚೇರಿಯನ್ನೂ ಕೂಡ ಟಾರ್ಗೆಟ್ ಮಾಡಲಾಗಿತ್ತು ಎಂದು ಹೇಳಿದ್ದಾನೆ. ಕದ್ರಿ ಬ್ಲಾಸ್ಟ್ ಸಕ್ಸಸ್ ಆಗಿದ್ದರೇ ನಂತರ ಉಡುಪಿ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿಯನ್ನು ಬ್ಲಾಸ್ಟ್​ ಮಾಡುತ್ತಿದ್ದೇವು. ಆದರೆ ಕದ್ರಿ ದೇವಸ್ಥಾನ ತಲುಪುವ ಮುನ್ನವೇ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ಹೀಗಾಗಿ ಉಡುಪಿ ಕೃಷ್ಣ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿ ಬ್ಲಾಸ್ಟ್ ಪ್ಲಾನ್ ಪ್ಲಾಫ್ ಆಗಿದೆ ಎಂದು ಹೇಳಿರುವುದು ಎನ್‌ ಐ ಎ ತನಿಖೆಯಲ್ಲಿ ಬಯಲಾಗಿದೆ ಎಂದು ತಿಳಿದು ಬಂದಿದೆ.

Read More

ಮಂಗಳೂರು: ಕೊಂಕಣ ರೈಲು ಮಾರ್ಗದಲ್ಲಿ ಮಂಗಳೂರು ಸಮೀಪದ ತೋಕೂರು ನಿಲ್ದಾಣದ ಪಾಯಿಂಟ್ ನಂ.122ರಲ್ಲಿ ಅ.18ರಿಂದ 20ರವರೆಗೆ ಬದಲಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಈ ಮೂರು ದಿನಗಳಂದು ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಕೊಂಕಣ ರೈಲ್ವೆ ಪ್ರಕಟನೆ ತಿಳಿಸಿದೆ. ಅ.18ರ ಬೆಳಗ್ಗೆ 7:15ರಿಂದ 9:45ರವರೆಗೆ ವಿವಿಧ ಕಾಮಗಾರಿ ನಡೆಯಲಿದ್ದು, ಈ ವೇಳೆ ಅ.17ರಂದು ಮುಂಬೈಯಿಂದ ಹೊರಟ ರೈಲು ನಂ.12619 ಲೋಕಮಾನ್ಯ ತಿಲಕ ಮುಂಬೈ ಹಾಗೂ ಮಂಗಳೂರು ಸೆಂಟ್ರಲ್‌ ನಡುವಿನ ಮತ್ಸ್ಯಗಂಧ ಎಕ್ಸ್‌ ಪ್ರೆಸ್‌ನ್ನು 30 ನಿಮಿಷಗಳ ಕಾಲ ಸುರತ್ಕಲ್ ನಿಲ್ದಾಣದಲ್ಲಿ ತಡೆ ಹಿಡಿಯಲಾಗುವುದು. ಅ.19ರ ಮುಂಜಾನೆ 6:40ರಿಂದ 9:10ರವರೆಗೆ ವಿವಿಧ ಕಾಮಗಾರಿ ನಡೆಯಲಿದ್ದು, ಈ ವೇಳೆ ಅ.17ರಂದು ಹೊರಟ ರೈಲು ನಂ.16311 ಗಾಂಧಿ ನಗರ ಹಾಗೂ ಕೊಚ್ಚುವೇಲಿ ಎಕ್ಸ್‌ಪ್ರೆಸ್‌ನ್ನು 30 ನಿಮಿಷ ಸುರತ್ಕಲ್ ನಿಲ್ದಾಣದಲ್ಲಿ ತಡೆ ಹಿಡಿಯಲಾಗುವುದು. ಅ.20ರ ಬೆಳಗ್ಗೆ 6:40ರಿಂದ 9:40ರವರೆಗೆ ಕಾಮಗಾರಿ ಹಾಗೂ ಪರೀಕ್ಷೆಗಳು ನಡೆಯಲಿದ್ದು, ಈ ವೇಳೆ ಅ.19ರಂದು ಮುಂಬೈಯಿಂದ ಹೊರಟ ರೈಲು ನಂ.12619 ಲೋಕಮಾನ್ಯ…

Read More

ಉಳ್ಳಾಲ: ಗಾಂಜಾ ಸೇವಿಸಿ ರೌಡಿಸಂ ನಡೆಸಿದ್ದ ಮಾಜಿ ರೌಡಿ ಶೀಟರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೇವಂತಿಗುಡ್ಡೆ ನಿವಾಸಿ ಶಮೀರ್ (41) ಆತ್ಮ ಹತ್ಯೆಕ್ಕೀಡಾದ ವ್ಯಕ್ತಿ.. ಶಮೀರ್ ಕ್ಯಾನ್ಸರ್‌ನಿಂದ ಮೃತಪಟ್ಟ ನಟೋರಿಯಸ್ ರೌಡಿ ಶಬರಿಯ ಸಹಚರನಾಗಿದ್ದು ಉಳ್ಳಾಲ ಠಾಣೆಯಲ್ಲಿ ಹಳೆಯ ರೌಡಿ ಶೀಟರ್ ಆಗಿದ್ದ. ಗಾಂಜಾ, ಮದ್ಯ ವ್ಯಸನಿಯಾಗಿದ್ದ ಶಮೀರ್ ಜೀವನ ನಿರ್ವಹಣೆಗೆ ಇತ್ತೀಚಿಗೆ‌ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ನಿನ್ನೆ ಸಂಜೆ ಒಳಪೇಟೆಯ ರಿಕ್ಷಾ ಚಾಲಕರಲ್ಲಿ ಗಲಾಟೆ ನಡೆಸಿದ್ದ ಶಮೀರ್ ಯಾರೊಬ್ಬರಿಗೂ ಪಾರ್ಕಲ್ಲಿ ಆಟೋ ರಿಕ್ಷಾ ಪಾರ್ಕ್ ಮಾಡಲು ಬಿಡುವುದಿಲ್ಲವೆಂದು ಆವಾಜ್ ಹಾಕಿದ್ದನಂತೆ. ಶಮೀರನ ತಾಯಿ ಒಂದು ತಿಂಗಳ ಹಿಂದಷ್ಟೆ ಮೃತ ಪಟ್ಟಿದ್ದರಂತೆ. ಕಳೆದ ಮೂರು ದಿನಗಳ ಹಿಂದಷ್ಟೆ ಶಮೀರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾವೂ ಪಲ್ಟಿ ಹೊಡೆದಿದ್ದು,ರಿಕ್ಷಾದ ಲೋನ್ ಬಾಕಿಯಿತ್ತು. ಮೃತ ಶಮೀರ್‌ಗೆ ಎರಡು ಹೆಣ್ಣು, ಒಂದು ಗಂಡು ಮಕ್ಕಳಿದ್ದು ಪತ್ನಿಯೂ ಅನಾರೋಗ್ಯದಲ್ಲಿ ಬಳಲುತ್ತಿದ್ದರು ಎನ್ನಲಾಗುತ್ತಿದೆ. ನವರಾತ್ರಿ ರಜೆ ಸಿಕ್ಕ ಕಾರಣ ಪತ್ನಿ ,ಮಕ್ಕಳು ತವರು ತೆರಳಿದ್ದರು. ಇಂದು ಬೆಳಿಗ್ಗೆ ಮನೆಯಲ್ಲಿ…

Read More

ಪುತ್ತೂರು : ಸಿಡಿಲಾಘಾತಕ್ಕೆ ಫೋಟೋ ಸ್ಟುಡಿಯೋ ಸುಟ್ಟು ಭಸ್ಮವಾದ ಘಟನೆ ಪುತ್ತೂರಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಜಿಎಲ್ ಕಾಂಪ್ಲೆಕ್ಸ್ ನಲ್ಲಿರುವ ಪೊನ್ನಪ್ಪ ಎಂಬವರಿಗೆ ಸೇರಿದ ಅಡ್ಲ್ಯಾಬ್ ಸ್ಟುಡಿಯೋಗೆ ಸಿಡಿಲು ಬಡಿದಿದೆ. ಪರಿಣಾಮ ಪೋಟೊ ಸ್ಟುಡಿಯೋ ಸುಟ್ಟು ಭಸ್ಮವಾಗಿದೆ.ಸ್ಟುಡಿಯೋದಲ್ಲಿದ್ದ ಸಿಬ್ಬಂದಿ ಅದೃಷ್ಟವಶತ್ ಅಪಾಯದಿಂದ ಪಾರಾಗಿದೆ. ಸಿಡಿಲ ಹೊಡೆತಕ್ಕೆ ಸ್ಟುಡಿಯೋದಲ್ಲಿದ್ದ ಕಂಪ್ಯೂಟರ್ ಸಿಸ್ಟಂ, ಫೋಟೊ ಮೆಷಿನರಿ, ಪ್ಯಾನ್, ಫೋಟೊ ಆಲ್ಬಂ, ಇನ್ನಿತರ ವಸ್ತಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಸುಮಾರು 6 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಘಟನೆಯ ಮಾಹಿತಿ ಪಡೆದ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಬೆಂಕಿ ನಂದಿಸಿದ್ದಾರೆ.

Read More

ಉಡುಪಿ: ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ (ಅ.20ರವರೆಗೆ) ಕರಾವಳಿ ಸಮುದ್ರದ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಎಚ್ಚರಿಕೆ ನೀಡಿದ್ದಾರೆ. ಚಂಡಮಾರುತದ ಅವಧಿಯಲ್ಲಿ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು, ಗಾಳಿಯ ವೇಗವು ಗಂಟೆಗೆ 40-45ರಿಂದ 55ಕಿ.ಮೀ. ಇರುವುದರಿಂದ ಸಮುದ್ರ ಪ್ರಕ್ಷುಬ್ಧಗೊಳ್ಳಲಿದೆ. ಹೀಗಾಗಿ ಸಮುದ್ರ ತೀರದಲ್ಲಿ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವುದೇ ತುರ್ತು ಸಂದರ್ಭದಲ್ಲಿ ಸೇವೆಗಾಗಿ ಶುಲ್ಕ ರಹಿತ:1077 ಅಥವಾ ದೂರವಾಣಿ ಸಂಖ್ಯೆ:0820-2574802ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Read More

ನವದೆಹಲಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.ಹಾಗೂ ಈ ಬಗ್ಗೆ ಅಭಿಪ್ರಾಯ ಕೇಳಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ನವೆಂಬರ್ 7 ಕ್ಕೆ ಮುಂದೂಡಿದೆ. ಕರ್ನಾಟಕ ಹೈಕೋರ್ಟ್ ನ ಜೂನ್ 12 ರ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ನ್ಯಾಯಪೀಠವು ಶಿವಕುಮಾರ್ ಅವರಿಗೆ ನೋಟಿಸ್ ನೀಡಿದೆ.ಈ ತಡೆಯಾಜ್ಞೆಯಿಂದಾಗಿ ಕೇಂದ್ರ ಏಜೆನ್ಸಿಯ ಹೆಚ್ಚಿನ ತನಿಖೆಯನ್ನು ನಿಲ್ಲಿಸಲಾಗಿದೆ.ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಸಿಬಿಐ ತನಿಖೆಯ ಶೇಕಡಾ 90 ರಷ್ಟು ಮುಗಿದಿದೆ ಆದರೆ ಹೈಕೋರ್ಟ್ ನ ಮಧ್ಯಂತರ ತಡೆಯಾಜ್ಞೆಯಿಂದಾಗಿ ಅದು ಮುಂದುವರಿಯುತ್ತಿಲ್ಲ ಎಂದು ಹೇಳಿದರು.ಮಧ್ಯಂತರ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದ ಆದೇಶವನ್ನು ತಡೆಹಿಡಿಯುವಂತೆ ಅವರು ನ್ಯಾಯಪೀಠವನ್ನು ಒತ್ತಾಯಿಸಿದರು. ಶಿವಕುಮಾರ್ ಅವರಿಗೆ ನವೆಂಬರ್ 7ರೊಳಗೆ…

Read More

ಕುಂದಾಪುರ: 2024ರ ಗಣರಾಜ್ಯೋತ್ಸವಕ್ಕೆ ಕುಂದಾಪುರದ ಬೀದಿ ಬದಿಯ ಚಪ್ಪಲಿ ರಿಪೇರಿ ಕಾರ್ಮಿಕನೊಬ್ಬನಿಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ. ಆ ಮೂಲಕ ಸಮಾಜದ ಕಟ್ಟಕಡೆಯ ಕಾರ್ಮಿಕನಿಗೂ ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವವನ್ನು ಕಣ್ಣುತುಂಬಿಸಿಕೊಳ್ಳುವ ಅವಕಾಶ ಬಂದಿದೆ.ಕುಂದಾಪುರದ ಶಾಸ್ತ್ರೀ ವೃತ್ತದ ಸಮೀಪ ಕಳೆದ ಎರಡೂವರೆ ದಶಕಗಳಿಂದ ಚಪ್ಪಲಿ, ಕೊಡೆ ರಿಪೇರಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ಮಣಿಕಂಠ ಎಂಬುವರೇ ಮುಂದಿನ ಬಾರಿಯ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವ ಅವಕಾಶ ಗಿಟ್ಟಿಸಿಕೊಂಡವರು.ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಶಾಸ್ತ್ರೀ ಸರ್ಕಲ್‌ನಲ್ಲಿ ಲಿಡ್ಕರ್‌ನ ಪಾದರಕ್ಷೆ ರಿಪೇರಿ ಮಾಡುವ ಪೆಟ್ಟಿಗೆ ಅಂಗಡಿಯಲ್ಲಿ ದುಡಿಯುತ್ತಿರುವ ಮಣಿಕಂಠ ಅವರನ್ನು ಈ ಬಾರಿ ಗಣರಾಜ್ಯೋತ್ಸವಕ್ಕೆ ಆಹ್ವಾನಿಸಿರುವ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.ಮೂಲತಃ ಭದ್ರಾವತಿಯವರಾದ ಅವರ ಅಜ್ಜ ಮುನುಸ್ವಾಮಿ ಸುಮಾರು 50 ವರ್ಷಗಳ ಹಿಂದೆ ಇಲ್ಲಿಗೆ ಬಂದು ಈ ಚಪ್ಪಲಿ ರಿಪೇರಿ ಅಂಗಡಿಯನ್ನು ಆರಂಭಿಸಿದರು. ಸ್ವಲ್ಪ ಸಮಯ ಮಣಿಕಂಠ ಅವರ ತಂದೆ ಇದನ್ನು ಮುಂದುವರಿಸಿದರು, ಅವರ ಅನಾರೋಗ್ಯದ ಮಣಿಕಂಠ ಈ ಕುಲಕಸುಬನ್ನು ಮುನ್ನಡೆಸುತ್ತಿದ್ದಾರೆ.ನಾನು ಸಾಮಾನ್ಯ ಜನರು ಮಾಡುವ ಕೆಲಸವನ್ನು ಮಾಡಿದ್ದೇನೆ.…

Read More

ವಿಟ್ಲ: ಪಿಕಪ್ ಕದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್, ತಬ್ರಿಜ, ಮೊಹಮ್ಮದ್ ಉಸೈನ್, ಹ್ಯಾರಿಸ್, ಮೊಹಮ್ಮದ್ ಅಯೂಬ ಖಾನ್ ಬಂಧಿತರು. ಆರೋಪಿಗಳು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ನಿಲ್ಲಿಸಲಾಗಿದ್ದ ಪಿಕಪ್‌ ಕಳ್ಳತನ ಮಾಡಿದ್ದರು. ಈ ಕುರಿತಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More