ಬೆಂಗಳೂರು: ಕರ್ನಾಟಕ ಸಿಎಂ ಆಯ್ಕೆ ಅಂತಿಮ ಹಂತಕ್ಕೆ ಬಂದು ನಿಂತಿದೆ. ಕರ್ನಾಟಕದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ಧರಾಮಯ್ಯ ಆಯ್ಕೆಯಾಗಿದ್ದರೆ, ಡಿಕೆ ಶಿವಕುಮಾರ್ ಗೆ ಉಪ ಮುಖ್ಯಮಂತ್ರಿ ಪಟ್ಟ ದೊರೆತಿದೆ. ಈ ಆಯ್ಕೆ ನಡೆದಿರೋದು ಅಧಿಕಾರ ಹಂಚಿಕೆ ಸೂತ್ರದಿಂದ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಪಕ್ಷದಕ್ಕೆ ಸ್ಪಷ್ಟ ಬಹುಮತ ವಿಧಾನಸಭಾ ಚುನಾವಣೆಯಲ್ಲಿ ಬಂದು ಐದು ದಿನಗಳ ನಂತ್ರ, ಇಂದು ಕರ್ನಾಟಕ ಸಿಎಂ ಆಯ್ಕೆ ಫೈನಲ್ ಆಗಿದೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳಿಂದ ಸಿಎಂ ಹುದ್ದೆಗಾಗಿ ನಡೆಯುತ್ತಿದ್ದಂತ ಗದ್ದುಗೆ ಗುದ್ದಾಟಕ್ಕೆ ಹೈಕಮಾಂಡ್ ಕೊನೆಗೂ ಅಧಿಕಾರ ಹಂಚಿಕೆ ಸೂತ್ರದ ಮೂಲಕ ಬ್ರೇಕ್ ಹಾಕಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ಹಂಚಿಕೆ ಸೂತ್ರಕ್ಕೆ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಒಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮೊದಲ 30 ತಿಂಗಳ ಅವಧಿಗೆ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿದ್ದಾರೆ. ಆ ಬಳಿಕ ಎರಡೂವರೆ ವರ್ಷ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಮುನ್ನಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು…
Author: main-admin
ಕಟೀಲು: ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಬಸ್ ನಲ್ಲಿ ಇಬ್ಬರ ಮಹಿಳೆಯರು ಮತ್ತು ಬಸ್ ಚಾಲಕ ಇದ್ದರು ಎಂದು ಹೇಳಲಾಗಿದ್ದು, ಮೂವರು ಬಸ್ ನಿಂದ ಇಳಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ನೀರು ಸರಬರಾಜು ಮಾಡುವ ಟ್ಯಾಂಕರ್ ಇದ್ದ ಕಾರಣ ಕೂಡಲೇ ಬೆಂಕಿಯನ್ನು ನಂದಿಸಲಾಗಿದೆ. ಕೂಡಲೇ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.
ವಿಟ್ಲ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕನ್ಯಾನ ಗ್ರಾಮದ ಅಬೂಬಕ್ಕರ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಬನ ಎಂಬಲ್ಲಿ ಮೋಟಾರ್ ಸೈಕಲ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊರ್ವ ಮೋಟಾರ್ ಬೈಕ್ ನ್ನು ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಈ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಅಬೂಬಕ್ಕರ್ ಕೆ ಎಂಬಾತನನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿ ತನಿಖೆ ಕೈಗೊಂಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸುರತ್ಕಲ್:ಮೀನುಗಾರ ಬಲೆ ಹಾಕುತ್ತಿದ್ದ ವೇಳೆ ಸಮುದ್ರದಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಜಯರಾಜ್ (46 ವರ್ಷ) ಮೀನುಗಾರ ಬಲೆ ಹಾಕುತ್ತಿದ್ದ ವೇಳೆ ಸಮುದ್ರದಲ್ಲಿ ಮುಳುಗಿ ಮೃತ ಪಟ್ಟಿದ್ದು, ಸಮುದ್ರಕ್ಕೆ ಹಾಕಿದ ಬಲೆ ಕಾಲಿಗೆ ಸಿಲುಕಿದ್ದಲ್ಲದೆ, ಸಮುದ್ರದ ಅಲೆ ಅಪ್ಪಳಿಸಿ ಮುಳುಗಿದರು ಎನ್ನಲಾಗಿದೆ.ಅಲ್ಲಿ ಇದ್ದ ಮೀನುಗಾರ ತಕ್ಷಣ ಸ್ಥಳೀಯರಿಗೆ ತಿಳಿಸಿದ್ದು, ಸಹಾಯಕ್ಕೆ ಧಾವಿಸಿದ ಸ್ಥಳೀಯರು ಜಯರಾಜ್ ನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರೂ ಕೂಡ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.ಇನ್ನೂ ಮೃತ ಜಯರಾಜ್ ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.
ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಹರ್ಯಾಣ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಧ್ಯಪ್ರದೇಶದ 6 ರಾಜ್ಯಗಳ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಭಯೋತ್ಪಾದಕ, ಮಾದಕ ದ್ರವ್ಯ ಕಳ್ಳಸಾಗಣೆದಾರರು, ದರೋಡೆಕೋರರ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಿದೆ. ರಾಜ್ಯ ಪೊಲೀಸ್ ಪಡೆಗಳೊಂದಿಗೆ ನಿಕಟ ಸಮನ್ವಯದೊಂದಿಗೆ ಭಯೋತ್ಪಾದನಾ ನಿಗ್ರಹ ಸಂಸ್ಥೆ ಬುಧವಾರ ಮುಂಜಾನೆಯಿಂದ ಶಂಕಿತರಿಗೆ ಸಂಬಂಧಿಸಿದ ಇತರ ಸ್ಥಳಗಳಲ್ಲಿ ಈ ದಾಳಿಗಳನ್ನು ನಡೆಸಿದ್ದು, ದಾಳಿಗಳು ಇನ್ನೂ ಮುಂದುವರೆಯಲಿವೆ ಎನ್ನಲಾಗಿದೆ. ಕಳೆದ ವರ್ಷ NIA ದಾಖಲಿಸಿದ ಮೂರು ಪ್ರತ್ಯೇಕ ಪ್ರಕರಣಗಳಿಗೆ (RC 37, 38, 39/2022/NIA/DLI)ಸಂಬಂಧಿಸಿದಂತೆ ಈ ದಾಳಿಗಳನ್ನು ನಡೆಸಲಾಗುತ್ತಿದೆ .ಏಜೆನ್ಸಿ ಈ ವರ್ಷದ ಜನವರಿ 25 ರಂದು ಉತ್ತರ ಪ್ರದೇಶದ ಗೋರಖ್‌ಪುರದಿಂದ RC-37/2022/NIA/DLI ಪ್ರಕರಣದಲ್ಲಿ ಮೇ 2022 ರಲ್ಲಿ ಮೊಹಾಲಿಯಲ್ಲಿ ಪಂಜಾಬ್ ಪೊಲೀಸ್ ಗುಪ್ತಚರ ಕೇಂದ್ರ ಕಚೇರಿಯ ಮೇಲೆ RPG ದಾಳಿಯ ಪ್ರಮುಖ ಶೂಟರ್ ದೀಪಕ್ ರಂಗನನ್ನು ಬಂಧಿಸಿತು.
ಪುತ್ತೂರು: ಶಾಸಕ ಅಶೋಕ್ ರೈ ಪ್ರಮುಖ ಅಪ್ತರಾದ ಕಾಂಗ್ರೆಸ್ ಇಂಟಕ್ ಅಧ್ಯಕ್ಷರೂ ,ಡಿಸಿಸಿ ಸದಸ್ಯರೂ ಹಾಗೂ ಕೋಡಿಂಬಾಡಿ ಪಂಚಾಯಿತಿ ಸದಸ್ಯರು ಆಗಿರುವ ಜಯಪ್ರಕಾಶ್ ಬದಿನಾರ್ ರವರ ಮನೆಯಲ್ಲಿ ನಡೆದ ಸತ್ಯನಾರಾಯಣ ಪೂಜೆಯಲ್ಲಿ ಶಾಸಕ ಅಶೋಕ್ ರೈ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.
ಕಾಸರಗೋಡು: ಬ್ಯೂಟಿಶಿಯನ್ ರೋರ್ವಳನ್ನು ವಸತಿಗ್ರಹದಲ್ಲಿ ಕೊಲೆಗೈದ ದಾರುಣ ಘಟನೆ ಮಂಗಳವಾರ ಸಂಜೆ ಕಾಞ೦ಗಾಡ್’ನಲ್ಲಿ ನಡೆದಿದೆ. ಉದುಮ ಮಾಂಗಾಡ್ ನ ದೇವಿಕಾ(34) ಹತ್ಯೆಗೀಡಾದವರು. ಕೃತ್ಯ ನಡೆಸಿದ ಬಳಿಕ ಈಕೆಯ ಪ್ರಿಯಕರನೆನ್ನಲಾದ ಯುವಕ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಬೋವಿಕ್ಕಾನ ದ ಸತೀಶ್ ಭಾಸ್ಕರ್(36) ಪೊಲೀಸ್ ಠಾಣೆಗೆ ಶರಣಾದ ಆರೋಪಿ.ಈತ ಕಾಞ೦ಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದ. ಇಬ್ಬರ ನಡುವೆ ಸ್ನೇಹ ಬೆಳೆದಿದ್ದು, ಪರಸ್ಪರ ಉಂಟಾದ ವೈಮನಸ್ಸು ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಕೊಲೆ ಬಳಿಕ ಆರೋಪಿ ಕೊನೆಗೆ ಹೊರಗಿನಿಂದ ಬೀಗ ಜಡಿದು ಪೊಲೀಸ್ ಠಾಣೆ ಗೆ ಶರಣಾಗಿದ್ದಾನೆ. ಇಬ್ಬರ ನಡುವೆ ಕೌಟುಂಬಿಕ ಸಮಸ್ಯೆ ಉಂಟಾಗಿದ್ದು, ದೇವಿಕಾ ವಿರುದ್ಧ ಸತೀಶ್ ಭಾಸ್ಕರ್ ನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಮೇಲ್ಪರಂಬ ಠಾಣಾ ಪೊಲೀಸರು ಎರಡು ಕುಟುಂಬದವರನ್ನು ಕರೆದು ಮಾತುಕತೆ ನಡೆಸಿದ್ದರು. ಸತೀಶ್ ಕಳೆದ ಒಂದು ವಾರದಿಂದ ವಸತಿಗ್ರಹದಲ್ಲಿ ವಾಸವಾಗಿದ್ದರು. ಈ ನಡುವೆ ಮಧ್ಯಾಹ್ನ ದೇವಿಕಾಳನ್ನು ವಸತಿಗೃಹಕ್ಕೆ ಕರೆಸಿದ್ದು, ಬಳಿಕ ಈತ ಕೃತ್ಯ…
ಖಾಸಗಿ ಬಸ್ ಚಾಲಕನೊರ್ವ ಏಕಾಏಕಿ ಬಸ್‍ನ್ನು ಹೆದ್ದಾರಿಗಡ್ಡವಾಗಿ ತಿರುಗಿಸಿದ್ದರ ಪರಿಣಾಮ ನಡೆದ ಸರಣಿ ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಪಡುಬಿದ್ರಿಯ ಅಪಾಯಕಾರಿ ತಿರುವು ಸಹಿತ ಜಂಕ್ಷನ್‍ನಲ್ಲಿ ಮಂಗಳೂರು ಕಡೆಯಿಂದ ಬಂದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಉಡುಪಿ ಕಡೆಯಿಂದ ಹೆದ್ದಾರಿಯಲ್ಲಿ ವಾಹನಗಳು ಬರುತ್ತಿದ್ದರೂ ಕ್ಯಾರೇ ಎನ್ನದೆ ಏಕಾಏಕಿ ಹೆದ್ದಾರಿಗಡ್ಡವಾಗಿ ಬಸ್ ಚಲಾಯಿಸಿದಾಗ ಹೆದ್ದಾರಿಯಲ್ಲಿ ಬರುತ್ತಿದ್ದ ವಿಆರ್ ಎಲ್ ಕಂಪನಿಯ ಬೃಹತ್ ಲಾರಿ ಡಿಕ್ಕಿಯಾಗಿದ್ದು, ನಿಯಂತ್ರಣ ಕಳೆದುಕೊಂಡ ಬಸ್ ಜಂಕ್ಷನ್ ನಲ್ಲಿದ್ದ ಬೂತ್ ಸಹಿತ ಅಟೋ ರಿಕ್ಷಾ ನಿಲ್ದಾಣದಲ್ಲಿ ನಿಂತಿದ್ದ ರಿಕ್ಷಾವೊಂದನ್ನು ಎಳೆದುಕೊಂಡು ಹೋಗಿ ಪಕ್ಕದ ಎಸ್‍ಬಿಐ ಎಟಿಎಂಗೆ ಡಿಕ್ಕಿಯಾಗುವುದರಲ್ಲಿ ಸ್ವಲ್ಪವೇ ತಪ್ಪಿದೆ. ಬಸ್ಸಿನಲ್ಲಿದ್ದ ಹತ್ತಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂಬುದಾಗಿ ಪ್ರತ್ಯೇಕ್ಷ ಧರ್ಶಿಗಳು ತಿಳಿಸಿದ್ದಾರೆ.ಅಪಘಾತ ಸಂಭವಿಸಿದ ಅಟೋ ನಿಲ್ದಾಣದ ಬಳಿ ಅಟೋ ಚಾಲಕರು ಸಹಿತ ಸಾರ್ವಜನಿಕರು ವಿದ್ಯಾರ್ಥಿಗಳು ಗುಂಪು ಸೇರಿ ನಿಲ್ಲುತ್ತಿದ್ದು ಅದೃಷ್ಟವಶಾತ್ ಯಾರು ಆ ಭಾಗದಲ್ಲಿ ಆ ಸಂದರ್ಭ ಇದ್ದಲ್ಲ ಒಂದು ಕಡೆಯಾದರೆ, ಮತ್ತೊಂದು ಕಡೆ ಅಟೋ ಚಾಲಕ ಕೂಡಾ ಅಟೋ ದಲ್ಲಿ…
ಬಂಟ್ವಾಳ: ಬಂಟ್ವಾಳ ತಾಲೂಕಿನ ವಗ್ಗ ಎಂಬಲ್ಲಿ ಪಾದಾಚಾರಿ ಮಹಿಳೆಯೋರ್ವಳಿಗೆ ಕಾರು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆಕೆ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ನಡೆದಿದೆ.ಕಾಡಬೆಡ್ಡು ನಿವಾಸಿ ಸೇಸಮ್ಮ ಮೃತಪಟ್ಟ ಮಹಿಳೆ.ಸೇಸಮ್ಮ ಅವರು ಮನೆಯಿಂದ ವಗ್ಗ ಪೇಟೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ.ಇನ್ನು ಬಡಕುಟುಂಬದ ಮಹಿಳೆಯಾಗಿರುವ ಈಕೆ ಸ್ವಸಹಾಯ ಸಂಘದ ಹಣವನ್ನು ಪಾವತಿ ಮಾಡಲು ಬರುತ್ತಿದ್ದ ವೇಳೆ ಮಂಗಳೂರಿನ ಕಡೆ ಕಾರಿನಲ್ಲಿ ಪ್ರಯಾಣ ಬೆಳೆಸುತ್ತಿದ್ದ ಮಹಿಳಾ ವೈದ್ಯೆಯ ಅಜಾಗರೂಕತೆಯ ಚಾಲನೆಯಿಂದ ಹಿಂದಿನಿಂದ ಪಾದಾಚಾರಿಗೆ ಡಿಕ್ಕಿಯಾಗಿದ್ದು, ಗಂಭೀರವಾದ ಗಾಯಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿಲು ಕೊಂಡುಹೋಗಲಾಯಿತಾದರೂ ದಾರಿಮಧ್ಯೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಇತ್ತೀಚೆಗೆ ಈಕೆಯ ಪತಿಗೆ ವಗ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಇದೇ ರೀತಿ ರಿಕ್ಷಾವೊಂದು ಡಿಕ್ಕಿಯಾಗಿದ್ದು, ಬಳಿಕ ಕಾಲಿಗೆ ಗಂಭೀರವಾದ ಗಾಯವಾಗಿ ನಡೆಯಲಾರದೆ ಮನೆಯಲ್ಲಿದ್ದು,ಸ್ವಲ್ಪ ಸಮಯದ ಬಳಿಕ ನಿಧನರಾಗಿದ್ದಾರೆ.ಸ್ಥಳಕ್ಕೆ ಟ್ರಾಫಿಕ್ ಎಸ್,ಐ ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ. ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಹಿಂದಿನಿಂದಲೂ ಹೈಕಮಾಂಡ್ ನ ಎಲ್ಲ ಆದೇಶ ತಪ್ಪದೆ ಪಾಲಿಸುತ್ತಾ ಬಂದಿದ್ದೇನೆ. ಈ ಬಾರಿ ನನ್ನ ಸೋಲಿನ ಮತಗಳ ಅಂತರ ಕಡಿಮೆಯಾಗಿದೆ. ಗೆಲುವಿನ ವಿಶ್ವಾಸವಿತ್ತು. ಆದರೂ ಸೋಲಾಗಿದೆ ಎಂದರು. ಜನರಿಗಾಗಿ ಸದಾ ಕೆಲಸ ಮಾಡುತ್ತೇನೆ. ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಆದರೆ ಇದರಿಂದ ಕಾರ್ಯಕರ್ತರು ಎದೆಗುಂದ ಬೇಕಾಗಿಲ್ಲ. ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ರಮಾನಾಥ ರೈ ಹೇಳಿದರು.










