Author: main-admin

ಮಂಗಳೂರು: ಪ್ರಜ್ವಲ್ ಫಿಲಂಸ್ ನಿರ್ಮಾಣದ ಕೀರ್ತನ್ ಭಂಡಾರಿ ರಚಿಸಿ ನಿರ್ದೇಶಿಸುತ್ತಿರುವ “ಗಜಾನನ ಕ್ರಿಕೆಟರ್ಸ್” ತುಳು ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಸೋಮವಾರ ಸಂಜೆ ಲಾಲ್ ಭಾಗ್ ನಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. “ಚಿತ್ರರಂಗದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಅಂಡರ್ ಆರ್ಮ್ ಕ್ರಿಕೆಟ್ ಜಗತ್ತನ್ನು ತೆರೆದಿಡುವಂತಹ ಪ್ರಯತ್ನವನ್ನು ಈ ಚಿತ್ರತಂಡ ಮಾಡುತ್ತಿದ್ದು ಚಿತ್ರವು ಹಾಸ್ಯಮಯ ಕಥಾಹಂದರವನ್ನು ಹೊಂದಿದ್ದು ಕುಟುಂಬ ಸಮೇತ ನೋಡುವಂತಹ ಚಿತ್ರ ಇದಾಗಿರುತ್ತದೆ, ಕ್ರಿಕೆಟ್ ಪ್ರೇಮಿಗಳಿಗೆ ಮನೋರಂಜನೆ ನೀಡುವಂತಹ ಹಲವಾರು ಸನ್ನಿವೇಶಗಳು ಚಿತ್ರದಲ್ಲಿದೆ ಎಂದು ಹಾಗೂ ಚಿತ್ರದ ಚಿತ್ರೀಕರಣವು ಮೇ 18ರಿಂದ ಮಂಗಳೂರಿನಾದ್ಯಂತ ನಡೆಯಲಿದ್ದು ಅತೀ ಶೀಘ್ರದಲ್ಲಿ ಬೆಳ್ಳಿತರೆಗೆ ಬರಲಿದೆ. ನಾನು ಚಿತ್ರದ ಕಥೆಯನ್ನು ಒಪ್ಪಿಕೊಂಡು ಅದರ ಭಾಗವಾಗಿದ್ದೇನೆ” ಎಂದು ತುಳು ರಂಗಭೂಮಿಯ ಹಿರಿಯ ನಟ ಭೋಜರಾಜ್ ವಾಮಂಜೂರ್ ಹೇಳಿದರು. “ಚಿತ್ರದ ನಾಯಕ ನಟನಾಗಿ ವಿನೀತ್ ಕುಮಾರ್ ನಟಿಸುತ್ತಿದ್ದು ಇವರಿಗೆ ನಾಯಕಿಯರಾಗಿ ಅನ್ವಿತಾ ಸಾಗರ್ ಹಾಗೂ ಸಮತ ಅಮೀನ್ ಜೊತೆಯಾಗಲಿದ್ದಾರೆ, ತಾರಾಗಣದಲ್ಲಿ ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ…

Read More

ಮಂಗಳೂರು: ಮಣಪುರಂ ಫೈನಾನ್ಸ್ ಶಾಖೆಯ ಕಚೇರಿಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಮಂಗಳೂರಿನ ಚಿಲಿಂಬಿಯ ಆರ್‌ಎನ್ ಟವರ್ಸ್ ಕಟ್ಟಡದ ಒಂದನೇ ಮಹಡಿಯಲ್ಲಿ  ಮಣಪುರಂ ಫೈನಾನ್ಸ್ ಶಾಖೆಯ ಕಚೇರಿಯಲ್ಲಿ ನಡೆದಿದೆ. ಈ ಬಗ್ಗೆ ಶಾಖಾಧಿಕಾರಿ ಸವಿತಾ ಕೆ. ದೂರು ನೀಡಿದ್ದಾರೆ. ಮೇ 15ರಂದು ಯಾರೋ ಅಪರಿಚಿತ ವ್ಯಕ್ತಿಯು ಕಬ್ಬಿಣದ ರಾಡ್ ಬಳಸಿ ಮಣಪುರಂ ಫೈನಾನ್ಸ್ ನ ಹೊರಗಡೆ ಅಳವಡಿಸಿದ್ದ ಶಟರ್ ಬೀಗವನ್ನು ಒಡೆದು ಕಳ್ಳತನಕ್ಕೆ ಪ್ರಯತ್ನಿಸಿರುವುದಾಗಿ ತಿಳಿಸಿದ್ದಾರೆ.

Read More

ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ವಲಸೆ ಕಾರ್ಮಿಕರ ಮಧ್ಯೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗಂಗೊಳ್ಳಿ ಕಟ್ಟಿನಮಕ್ಕಿ ಎಂಬಲ್ಲಿ ರವಿವಾರ ರಾತ್ರಿ ವೇಳೆ ನಡೆದಿದೆ. ಕೊಲೆಯಾದವರನ್ನು ಬಾಗಲಕೋಟೆ ಮೂಲದ ಸಂಗಪ್ಪಯಾನೆ ಸಂಗಮೇಶ (42) ಎಂದು ಗುರುತಿಸಲಾಗಿದೆ. ಮಂಡ್ಯ ಮೂಲದ ರಾಜಾ(36) ಕೊಲೆ ಆರೋಪಿ. ವಲಸೆ ಕಾರ್ಮಿಕರಾಗಿರುವ ಇವರಿಬ್ಬರು ಕುಂದಾಪುರದಲ್ಲಿ ನೆಲೆಸಿದ್ದು, ಆಲೂರು ಗ್ರಾಪಂ ವ್ಯಾಪ್ತಿಯ ಕಟ್ಟಿನಮಕ್ಕಿಯ ನಾಗೇಂದ್ರ ಆಚಾರ್ಯ ಎಂಬವರ ಗುತ್ತಿಗೆ ಕೆಲಸ ಮಾಡುತ್ತಿದ್ದರು. ಹಾಗಾಗಿ ಇವರು ಅಲ್ಲೇ ಶೆಡ್ನಲ್ಲಿಯೇ ವಾಸ ಮಾಡಿಕೊಂಡಿದ್ದರು. ಮದ್ಯ ಸೇವಿಸಿದ್ದ ಇವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿದ್ದು ಈ ವೇಳೆ ರಾಜಾ, ಶೆಡ್ ಎದುರಿನ ಮನೆ ಪಂಚಾಂಗದ ಮೇಲೆ ಮಲಗಿದ್ದ ಸಂಗಮೇಶ ಅವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದಿರುವುದಾಗಿ ದೂರಲಾಗಿದೆ. ಬಳಿಕ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿಬೆಳ್ಳಿಯಪ್ಪ, ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಎ. ಕಾಯ್ಕಿಣಿ, ಗಂಗೊಳ್ಳಿ ಠಾಣೆಯ ಪಿಎಸ್ಐ ವಿನಯ್ ಎಂ. ಭೇಟಿ ನೀಡಿ…

Read More

ನವದೆಹಲಿ : ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಕೇಂದ್ರ ಸರ್ಕಾರ ಸೂಚಿಸಿದ್ದು, ಲಿಂಕ್ ಮಾಡದಿದ್ದರೆ ಪಡಿತರ ಚೀಟಿ ರದ್ದು ಮಾಡುವುದಾಗಿ ತಿಳಿಸಿದೆ. ಅದ್ರಂತೆ, ಜೂನ್ 30ರೊಳಗೆ ಪಡಿತರ ಚೀಟಿಯನ್ನ ಆಧಾರ್ ಕಾರ್ಡ್’ಗೆ ಲಿಂಕ್ ಮಾಡದಿದ್ದರೆ ಪಡಿತರ ಚೀಟಿ ತಾನಾಗಿಯೇ ರದ್ದಾಗುತ್ತದೆ. ಜುಲೈ 1ರಿಂದ ಪಡಿತರಕ್ಕೆ ಸಿಗುವ ಉಚಿತ ಅಕ್ಕಿ ಲಭ್ಯವಾಗುವುದಿಲ್ಲ. ತಪ್ಪು ಜನರು ಪಡಿತರ ಚೀಟಿ ಪಡೆಯುವುದನ್ನ ತಪ್ಪಿಸಲು ಸರ್ಕಾರ ಈ ಕ್ರಮ ಸರ್ಕಾರ ತೆಗೆದುಕೊಂಡಿದೆ. ಇನ್ನು ಅರ್ಹರಿಗೆ ಮಾತ್ರ ಗ್ಯಾಸ್ ಅಥವಾ ಸಬ್ಸಿಡಿ ದೊರೆಯುತ್ತದೆ ಎಂದು ತಿಳಿಸಲಾಗಿದೆ. ನಕಲು ಪಡಿತರ ಚೀಟಿಗಳು ಬರುತ್ತಿರುವುದರಿಂದ ಈ ರೀತಿಯ ಸಂಪರ್ಕ ಕಲ್ಪಿಸಿದರೆ ಅನುಕೂಲವಾಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಅಲ್ಲದೇ ಆಯಾ ರಾಜ್ಯ ಸರ್ಕಾರಗಳು ಕೂಡ ಹೊಸ ಅರ್ಜಿಗಳನ್ನ ಸ್ವೀಕರಿಸಿ ತಮ್ಮ ನಿಯಮಾನುಸಾರ ಹೊಸ ಪಡಿತರ ಚೀಟಿಯನ್ನ ಜಾರಿಗೊಳಿಸುತ್ತಿವೆ. ಅದಕ್ಕಾಗಿಯೇ ಎಲ್ಲರೂ ಒಂದೇ ಆಧಾರ್ ಕಾರ್ಡ್‌ನೊಂದಿಗೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ಸೂಚಿಸಿದೆ. ಯಾರಾದರೂ ಪಡಿತರ ಚೀಟಿಯನ್ನ…

Read More

ಪಂಜಾಬ್; ಕರ್ನಾಟಕದಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಬಗ್ಗೆ ಉಲ್ಲೇಖಿಸಿದ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ನ ಸಂಗ್ರೂರು ಕೋರ್ಟ್ ಸಮನ್ಸ್ ನೀಡಿದೆ. ಹಿಂದೂ ಸುರಕ್ಷಾ ಪರಿಷತ್ ಬಜರಂಗದಳ ಹಿಂದ್ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ಅವರು ಸ್ಥಳೀಯ ನ್ಯಾಯಾಲಯದಲ್ಲಿ ಖರ್ಗೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ ಮತ್ತು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ ಎಂದ ಹಿತೇಶ್ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 10 ರಂದು ಹಾಜರಾಗುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಂಗ್ರೂರ್ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

Read More

ಬೆಳ್ತಂಗಡಿ:ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಯವರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ದಯಾನಂದ ಪೂಜಾರಿ ಯವರನ್ನು ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಬೇಟಿ ಮಾಡಿ ಧೈರ್ಯ ತುಂಬಿದರು.ತಾಲೂಕಿನಲ್ಲಿ ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಹಲವು ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮಕ್ಕೆ ಪೋಲಿಸ್ ಇಲಾಖೆಗೆ ಆಗ್ರಹಿಸಲಾಗುತ್ತದೆ ಎಂದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಮಂಗಳೂರು: ಜೋಕಟ್ಟೆ ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ.ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ.ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.

Read More

ಬಂಟ್ವಾಳ:ಬಜರಂಗದಳದ ಕಾರ್ಯಕರ್ತನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ಎಂಬಲ್ಲಿ ನಡೆದಿದೆ. ನೇಲ್ಯಪಲ್ಕೆ ನಿವಾಸಿ ನಿತಿನ್ ಪೂಜಾರಿ(3೦) ಮೃತಪಟ್ಟ ಯುವಕ.‌ನಿತಿನ್ ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ನಿತಿನ್ ಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈ ವೇಳೆ ಲಿವರ್ ಸಮಸ್ಯೆಯ ಬಗ್ಗೆ ವೈದ್ಯರು ಹೇಳಿದ್ದಾರೆ. ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದ ರೂಪೇಶ್ ಅವರು ಅವಿವಾಹಿತರಾಗಿದ್ದರು.ಬಜರಂಗದಳ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. ಇನ್ನು ಯುವಕನ ಸಾವಿನಲ್ಲಿ ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿದೆ.ಮೃತ ಯುವಕನ‌ ಶವವನ್ನು ಆಸ್ಪತ್ರೆ ಬಳಿ ಇಟ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

Read More

ಬೆಳ್ತಂಗಡಿ: ವಿವಾಹಿತ ಮಹಿಳೆಯೊಬ್ಬರನ್ನು ಅಪಹರಿಸಿ ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪದ ಮೇಲೆ, ಸಂತ್ರಸ್ತೆ ನೀಡಿದಂತ ದೂರಿನ ಮೇಲೆ, ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ದ ಎಫ್‌ಐಆರ್ ದಾಖಲಾಗಿದೆ. ಮಹವೀರ ಟೈಲ್ಸ್ ಮತ್ತು ಸೂಪರ್ ಮಾರ್ಕೆಟ್ ಮಾಲೀಕರಾಗಿ ಉದ್ಯಮಿ ಎನಿಸಿಕೊಂಡಿದ್ದಂತ ಪ್ರಭಾಗರ ಹೆಗ್ಡೆ ಎಂಬುವರು, ವಿವಾಹಿತ ಮಹಿಳೆಯೊಬ್ಬರನ್ನು ಅಪಹರಿಸಿ, ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪ ಕೇಳಿ ಬಂದಿದೆ. ಇಂದು ಸಂತ್ರಸ್ತ ಮಹಿಳೆ ಪತಿಯ ಜೊತೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ, ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ಧ ದೂರು ನೀಡಿದ್ದಾರೆ. ದೂರಿನಲ್ಲಿ ತಮ್ಮನ್ನು ಕಾರಿನಲ್ಲಿ ಅಪಹರಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿದ್ದಾರೆ. ಸಂತ್ರಸ್ತ ಮಹಿಳೆಯಿಂದ ಲೈಂಗಿಕ ಕಿರುಕುಳದ ದೂರು ದಾಖಲಾಗುತ್ತಿದ್ದಂತೆ, ಉದ್ಯಮಿ ಪ್ರಭಾಕರ ಹೆಗ್ಡೆ ನಾಪತ್ತೆಯಾಗಿದ್ದಾರೆ. ಇದೀಗ ದೂರಿನ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವಂತ ಬೆಳ್ತಂಗಡಿ ಪೊಲೀಸರು, ಉದ್ಯಮಿ ಪ್ರಭಾಕರ ಹೆಗ್ಡೆ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ (ಕಾಂಗ್ರೆಸ್) ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯು ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಮುಂದಿನ ಸಿಬಿಐ (ಸಿಬಿಐ) ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು ಎರಡು ವರ್ಷಗಳಿಗೆ ನಿಗದಿಪಡಿಸಲಾಗಿದೆ.ಸಮಿತಿಯ ಶಿಫಾರಸಿನ ಆಧಾರದ ಮೇಲೆ ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಸೂದ್ ಅವರ ನೇಮಕವನ್ನು ಅನುಮೋದಿಸಿದೆ ಎಂದು ವರದಿಯಾಗಿದೆ. ಆದರೂ ಆದೇಶಕ್ಕಾಗಿ ಕಾಯಲಾಗುತ್ತಿದೆ. ಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು ಎರಡು ವರ್ಷಗಳಿಗೆ ನಿಗದಿಪಡಿಸಲಾಗಿದೆ.

Read More