ಬಂಟ್ವಾಳ:ದ್ವಿಚಕ್ರ ವಾಹನದಲ್ಲಿ ಬಂದ ಯುವಕನೋರ್ವ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ವಿಟ್ಲ ಠಾಣಾ ವ್ಯಾಪ್ತಿಯ ಕಡಂಬು ಎಂಬಲ್ಲಿಂದ ಕೇಳಿ ಬಂದಿದೆ. ವಿಟ್ಲ ಕಸಬ ಗ್ರಾಮದ ಕಡಂಬು ಸಮೀಪದ ಬನ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಅನ್ಯಕೋಮೀನ ಯುವತಿಯ ಜೊತೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಕೂಡಲೇ ಬಂಧಿಸುವಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ರವರು ವಿಟ್ಲ ಠಾಣಾ ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಬಡತನದಲ್ಲಿರುವ ಕುಟುಂಬಕ್ಕೆ ತನ್ನ ಕೈಲಾದ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆ.ಈ ಕುರಿತು ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಜೊತೆ ಮಾತುಕತೆ ನಡೆಸಿ, ಆರೋಪಿಯನ್ನು ತಕ್ಷಣ ಬಂಧಿಸಲು ಆಗ್ರಹಿಸಿದ್ದಾರೆ. ಈ ಕುರಿತು ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ತನಿಖೆ ನಡೆಸುವ ಭರವಸೆ ನೀಡಿದ್ದಾರೆ.
Author: main-admin
ರಾಜ್ಯದ ವಿಧಾನಸಭಾ ಚುನಾವಣಾ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ಗಳಲ್ಲಿ ಶಾಂತಿಯುತ ಮತದಾನ, ಚುನಾವಣಾ ಪ್ರಕ್ರಿಯೆ ಹಾಗೂ ಮತ ಎಣಿಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದರು.ಮೇ.13ರ ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 2ಗಂಟೆಯವರೆಗೆ ನಡೆದ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರ ಗಳ ಮತ ಎಣಿಕೆ ಶಾಂತಿ ಯುತವಾಗಿ ನಡೆದಿದೆ. 6ಕ್ಷೇತ್ರ ಗಳಲ್ಲಿ ಬಿಜೆಪಿ ಅಭ್ಯರ್ಥಿ ಗಳು, 2 ಕ್ಷೇತ್ರ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳು ಜಯಗಳಿಸಿದ್ದಾರೆ. ವಿಜೇತರಿಗೆ ಅಭಿನಂದನೆಗಳು. ಈ ಚುನಾವಣೆಯ ಮತ ಎಣಿಕೆಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲಾ ಅಧಿಕಾರಿಗಳು, ವಿವಿಧ ಪಕ್ಷಗಳ ಅಭ್ಯರ್ಥಿಗಳು,ಏಜೆಂಟರು, ಶಾಂತಿ ಸುವ್ಯವಸ್ಥೆಗೆ ಹಗಲು ರಾತ್ರಿ ಜಿಲ್ಲಾಡಳಿತದ ಜೊತೆ ಸಹಕಾರ ನೀಡಿದ ಮಂಗಳೂರು ಪೊಲೀಸ್ ಕಮೀಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ತಂಡ ಹಾಗೂ ಚುನಾವಣಾ ಕರ್ತವ್ಯ ದಲ್ಲಿ ನನ್ನ ಜೊತೆ ಸಹಕಾರ ನೀಡಿದ ಜಿಲ್ಲೆಯ…
ಬೆಂಗಳೂರು: ಕಾಂಗ್ರಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ನೀಡಿರುವಂತ ಬಸವರಾಜ ಬೊಮ್ಮಾಯಿ ಅವರು, ಕರ್ನಾಟಕದ ಜನತೆಯ ತೀರ್ಪನ್ನು ಗೌರವಿಸಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದೆನು. ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ. ಬಸವರಾಜ ಬೊಮ್ಮಾಯಿಯವರು ಇಂದು ರಾಜ್ಯಪಾಲ ಥಾವರಚಂದ ಗೆಲ್ಹೋತ್ ಅವರನ್ನು ಭೇಟಿ ಮಾಡಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಬೈರತಿ ಬಸವರಾಜ್, ಸುರೇಶ್ ಕುಮಾರ್ , ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಜರಿದ್ದರು. ಅಂದಹಾಗೇ, ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ನಡೆದಂತ ಮತದಾನ ಮತಎಣಿಕೆ ಕಾರ್ಯ ಇಂದು ನಡೆಯಿತು. ಕಾಂಗ್ರೆಸ್ ಸ್ಪಷ್ಟ ಬಹುಮತದ ಮೂಲಕ ಸರ್ಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. 224 ಕ್ಷೇತ್ರಗಳಲ್ಲಿ ಮ್ಯಾಜಿಕ್ ನಂಬರ್ 113ರ ಗಡಿದಾಟಿ 136 ಸೀಟುಗಳನ್ನು ಗೆದ್ದಿದೆ.…
ಕರ್ನಾಟಕ ವಿಧಾನಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡಿದ್ದು ಇದರ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಮತದಾರರಿಗೆ ಧನ್ಯವಾದ ತಿಳಿಸುತ್ತ ಒಳ್ಳೆಯಕಾರ್ಯಗಳಿಗೆ ಸಹಕಾರ ನೀಡುತ್ತ, ವಿರೋಧ ಪಕ್ಷವಾಗಿ ಜವಬ್ದಾರಿಯುತ ಕಾರ್ಯ ನಿರ್ವಹಿಸುತ್ತೇವೆ. ಹಾಗೇ ಬಿಜೆಪಿಯ ಸೋಲಿನ ಹೊಣೆ ನನ್ನದು, ಮುಂಬರುವ ಎಂಪಿ ಚುನಾವಣೆಯತ್ತ ಗಮನ ಹರಿಸಿ ಗೆಲ್ಲುತ್ತೇನೆ. ಈ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಮೇ 10ರಂದು 224 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಮೇ 13ರಂದು ಮತ ಎಣಿಕೆ ನಡೆದಿದ್ದು ರಾಜ್ಯದಲ್ಲಿ ಬಿಜೆಪಿ 63ನೇ ಸ್ಥಾನ ಮತ್ತು ಕಾಂಗ್ರೇಸ್ 137ನೇ ಸ್ಥಾನ ಪಡೆದಿದ್ದು ಸ್ಪಷ್ಟಬಹುಮತೊಂದಿಗೆ ಸರ್ಕಾರ ರಚಿಸುತ್ತಿದೆ.
ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಣಿಕೆ ಪೂರ್ಣಗೊಂಡಿದ್ದು ಸುಳ್ಯ, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಬೆಳ್ತಂಗಡಿ, ಮೂಡುಬಿದಿರೆ, ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಸುಳ್ಯ ಕ್ಷೇತ್ರದ ಭಾಗೀರಥಿ ಮುರುಳ್ಯ, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಕ್ಷೇತ್ರದ ಭರತ್ ಶೆಟ್ಟಿ, ಬೆಳ್ತಂಗಡಿಯ ಹರೀಶ್ ಪೂಂಜ, ಮೂಡುಬಿದಿರೆಯ ಉಮನಾಥ್ ಕೋಟ್ಯಾನ್, ಬಂಟ್ವಾಳದ ರಾಜೇಶ್ ನಾಯ್ಕ್ ಅವರು ಗೆಲುವು ಸಾಧಿಸಿದ್ದಾರೆ. ಉಳ್ಳಾಲದಲ್ಲಿ ಈಗಾಗಲೇ ಖಾದರ್ ಅವರು ಜಯ ಗಲಿಸಿದ್ದು, ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಶೋಕ್ ರೈ ಮತ್ತು ಪಕ್ಷೇತರ ಅಭ್ಯರ್ಥಿ ನಡುವೆ ಪೈಪೋಟಿ ನಡೆಯುತ್ತಿದೆ.
ಮಂಗಳೂರು ದಕ್ಷಿಣ ವಲಯದಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಮೊದಲ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ ಆರ್ ಲೋಬೋ, ಜನತಾ ದಳ ಪಕ್ಷದಿಂದ ಸುಮತಿ ಎಸ್ ಹೆಗೆಡೆ, ಹಾಗೂ ಆಮ್ ಆದ್‌ಮೀ ಪಕ್ಷದಿಂದ ಸಂತೋಷ್ ಕಾಮತ್ ಸ್ಪರ್ಧಿಸಿದ್ದು, ಇದೀಗ ಭಾರೀ ಮತಗಳ ಅಂತರದಿಂದ ಮಂಗಳೂರು ದಕ್ಷಿಣ ವಲಯದಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಗೆಲುವು ಸಾಧಿಸಿದ್ದಾರೆ.
ಮಂಗಳೂರು: ಸುರತ್ಕಲ್‌ನ ಎನ್‌ಐಟಿಕೆ ಕಾಲೇಜಿನಲ್ಲಿ ಮತ ಎಣಿಕೆಗೂ ಮುನ್ನ ಸ್ಟ್ರಾಂಗ್ ರೂಂ ತೆರೆಯುವ ವೇಳೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ಟ್ರಾಂಗ್ ರೂಂನ ಬೀಗದ ಕೀಯನ್ನು ಅಧಿಕಾರಿಗಳು ಕಳೆದುಹಾಕಿದ್ದರು. ಕೊನೆಗೆ ಜಿಲ್ಲಾಧಿಕಾರಿ ಬಡಗಿಯನ್ನು ಕರೆಸಿ ಬೀಗ ತುಂಡರಿಸಿದ ಘಟನೆಯೂ ನಡೆಯಿತು. ಸದ್ಯ ಅಂಚೆ ಮತ ಎಣಿಕೆ ಆರಂಭವಾಗಿದ್ದು, ಭಾರೀ ಭದ್ರತೆ ಏರ್ಪಡಿಸಲಾಗಿದೆ. ದ.ಕ ಜಿಲ್ಲೆಯ ಎಂಟು ಕ್ಷೇತ್ರಗಳ ಒಟ್ಟು 60 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 8 ಕ್ಷೇತ್ರಗಳ ಇವಿಎಂಗೆ ಒಟ್ಟು 112 ಹಾಗೂ ಪೋಸ್ಟಲ್ ಬ್ಯಾಲೆಟ್ ಗೆ 40 ಟೇಬಲ್ ಅಳವಡಿಕೆ ಮಾಡಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಇವಿಂಗೆ 14 ಟೇಬಲ್ ಗಳನ್ನು ಹಾಕಲಾಗಿದೆ. ಪೋಸ್ಟಲ್ ಬ್ಯಾಲೆಟ್ ಗಾಗಿ 5 ಟೇಬಲ್ ಗಳನ್ನ ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಗೆ ಮೊದಲು ಪೋಸ್ಟಲ್ ಬ್ಯಾಲೆಟ್ ಎಣಿಕೆ ಆರಂಭವಾಗಿದ್ದು, 8.30ರಿಂದ ಇವಿಎಂ ಮತ ಎಣಿಕಾ ಕಾರ್ಯ ಆರಂಭವಾಗಲಿದೆ. ಪ್ರತೀ ಕ್ಷೇತ್ರದ 19 ಟೇಬಲ್ ಗೂ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಒಟ್ಟು 16 ರಿಂದ 18 ಸುತ್ತುಗಳಲ್ಲಿ…
ಮಂಗಳೂರು : ಕದ್ರಿ ದೇವಸ್ಥಾನದ ಅಂಗಣಕ್ಕೆ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಮೂವರು ಮುಸ್ಲಿಂ ಯುವಕರು ನುಗ್ಗಿ ಅನುಮಾನಸ್ಪದವಾಗಿ ವರ್ತಿಸಿದ ಘಟನೆ ಕುರಿತಂತೆ ಇದೀಗ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಭದ್ರತಾ ಸಿಬ್ಬಂದಿ ಇರುವಾಗಲೇ ದೇವಸ್ಥಾನದ ಗೇಟ್ ಅಕ್ರಮ ಪ್ರವೇಶಿಸಿ ಪವಿತ್ರವಾದ ದೇವಸ್ಥಾನದ ಅಂಗಣದಲ್ಲಿ ಪಾದರಕ್ಷೆ ಸಹಿತ ದ್ವಿಚಕ್ರ ವಾಹನದಲ್ಲಿ ಸುತ್ತು ಬಂದು ಅಪವಿತ್ರಗೊಳಿಸುವ ಸಂಚು ನಡೆಸಿದ್ದು, ಈ ಹಿಂದೆ ಶಾಕೀರ್ ಅನ್ನುವಂತಹ ಭಯೋತ್ಪಾದಕ ಕುಕ್ಕರ್ ಬಾಂಬ್ ಮೂಲಕ ದೇವಸ್ಥಾನ ಗುರಿಯಾಗಿಟ್ಟುಕೊಂಡಿದ್ದು, ಈ ಯುವಕರು ಅಂತಹ ಭಯೋತ್ಪಾದಕ ಕೃತ್ಯ ಅಥವಾ ದೇವಸ್ಥಾನಕ್ಕೆ ಅಪವಿತ್ರ ನಡೆಸುವ ದುಷ್ಕೃತ್ಯಕ್ಕೆ ಸಂಚು ಇರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಕಾಂಗ್ರೆಸ್ ಬಹುಮತ ಸಮೀಕ್ಷೆ ಹಿನ್ನೆಲೆಯಲ್ಲಿ ಜಿಹಾದಿಗಳು ಇಂತಹ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಬಗ್ಗೆ ಸಂಶಯ ವ್ಯಕ್ತವಾಗಿದೆ ಎಂದಿದೆ.ಹಾಗಾಗಿ ಅವರನ್ನು ಉನ್ನತಮಟ್ಟದ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ , ಈಗಾಗಲೇ ಜಿಲ್ಲಾಧಿಕಾರಿಗಳು…
ಸುರತ್ಕಲ್: ಸುರತ್ಕಲ್‌ನ ಮುಕ್ಕದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ. ಇನ್ನು ಘಟನೆಯಲ್ಲಿ ಎರಡೂ ಬಸ್ ಗಳ ಸುಮಾರು 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ
ಮಂಗಳೂರು:ಕದ್ರಿ ದೇವಸ್ಥಾನದ ಆವರಣದಲ್ಲಿ ಗುರುವಾರ ರಾತ್ರಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರು ಯುವಕರನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಅಪರಿಚಿತರು ಓಡಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು, ದೇವಸ್ಥಾನಕ್ಕೆ ಭೇಟಿ ನೀಡಿದ ಅವರನ್ನು ವಿಚಾರಿಸಿದ್ದಾರೆ. ಯುವಕರು ದೇವಸ್ಥಾನದ ಅಂಗಣಕ್ಕೆ ಬೈಕ್ ತಂದಿದ್ದಲ್ಲದೇ ಚಪ್ಪಲಿ ಧರಿಸಿ ಅಡ್ಡಾಡುತ್ತಿದ್ದದ್ದು ಭಕ್ತರ ಅಕ್ರೋಶಕ್ಕೆ ಕಾರಣವಾಗಿತ್ತು. ಯುವಕರನ್ನು ವಿಚಾರಿಸಿದಾಗ ತಾವು ಅಸೈಗೋಳಿಯಿಂದ ಕಾಟಿಪಳ್ಳಕ್ಕೆ ಹೋಗುವವರಾಗಿದ್ದು,ತಪ್ಪಾಗಿ ಗೂಗಲ್ ಮ್ಯಾಪ್ ನೋಡಿಕೊಂಡು ಹೋಗುವಾಗ ದಾರಿ ತಪ್ಪಿ ಇಲ್ಲಿಗೆ ಬಂದಿರುವುದಾಗಿ ತಿಳಿಸಿದ್ದಾರೆ.ದೇವಸ್ಥಾನದ ಆವರಣವನ್ನು ಪ್ರವೇಶಿಸಿದ ಬಗ್ಗೆ ತಿಳಿಸುವಂತೆ ಪದೇ ಪದೇ ಕೇಳಿದಾಗ, ಅವರಿಂದ ಸೂಕ್ತ ಉತ್ತರ ನೀಡದಿದ್ದಾಗ ಪೊಲೀಸರಿಗೆ ಸ್ಥಳೀಯರು ಒಪ್ಪಿಸಿದರು.










