Author: main-admin

ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚಿಸಿದ ಚೈತ್ರಾ ಅಂಡ್ ಗ್ಯಾಂಗ್ ಸದ್ಯ ಜೈಲು ಸೇರಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್ ನೀಡಿದೆ. ಮಂಗಳೂರಿನ ಗುರುಪುರದಲ್ಲಿರುವ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಸದ್ಯದಲ್ಲೇ ವಜ್ರದೇಹಿ ಸ್ವಾಮೀಜಿ ಸಿಸಿಬಿ ವಿಚಾರಣೆ ಎದುರಿಸಲಿದ್ದಾರೆ. ಗೋವಿಂದ ಪೂಜಾರಿ ಟಿಕೆಟ್ ಪ್ರಕರಣಕ್ಕೆ ಸಂಬಂಧಿಸಿ ರಾಜಶೇಖರಾನಂದ ಸ್ವಾಮೀಜಿ ಅವರು ತನಗೆ ಫೋನ್ ಮಾಡಿದ್ದರು ಎಂದು ಚೈತ್ರಾ ಅವರು ಆದಾಯ ತೆರಿಗೆ ಇಲಾಖೆಗೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಉಲ್ಲೇಖವಾಗಿತ್ತು. ಪ್ರಕರಣದ ಪ್ರಧಾನ ಆರೋಪಿಯಾಗಿರುವ ಚೈತ್ರಾ , ಎರಡನೇ ಆರೋಪಿ ಗಗನ್ ಕಡೂರು, ನಾಲ್ಕನೇ ಆರೋಪಿ ರಮೇಶ್ ಕಡೂರು, ಐದನೇ ಆರೋಪಿ ಚನ್ನಾ ನಾಯ್ಕ್ ಆರನೇ ಆರೋಪಿ ಧನರಾಜ್ ಏಳನೇ ಆರೋಪಿ, ಚೈತ್ರಾ ಕುಂದಾಪುರಳ ಆಪ್ತ ಗೆಳೆಯ ಶ್ರೀಕಾಂತ್ ನಾಯಕ್ ಹಾಗೂ ಎಂಟನೇ ಆರೋಪಿ ಪ್ರಸಾದ್ ಬೈಂದೂರು ಅವರು 10 ದಿನಗಳ ಸಿಸಿಬಿ ಕಸ್ಟಡಿ ಮುಗಿಸಿದ್ದು, ನಂತರ ಅವರನ್ನು…

Read More

ಬೆಂಗಳೂರು : ಅತ್ತಿಬೆಲೆ ಅಗ್ನಿ ದುರಂತದಲ್ಲಿ 14 ಮಂದಿ ಸಜೀವ ದಹನವಾದ ಘಟನೆಯ ನಂತರ ರಾಜ್ಯ ಸರ್ಕಾರ ತಹಶೀಲ್ದಾರ್, ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಮುಖ್ಯ ಅಗ್ನಿಶಾಮಕ ಅಧಿಕಾರಿಯನ್ನು ಅಮಾನತುಗೊಳಿಸಿದೆ. ಮದುವೆಗಳು, ರಾಜಕೀಯ ಕಾರ್ಯಕ್ರಮಗಳು ಮತ್ತು ಗಣೇಶ ಹಬ್ಬಗಳಲ್ಲಿ ಪಟಾಕಿಗಳ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅತ್ತಿಬೆಲೆ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.”ಅತ್ತಿಬೆಲೆ ಬೆಂಕಿ ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ, ಒಬ್ಬರ ಸ್ಥಿತಿ ಗಂಭೀರವಾಗಿದೆ. ಮೃತರ ಕುಟುಂಬಗಳಿಗೆ 5 ಲಕ್ಷ ರೂ.ಗಳ ಪರಿಹಾರ ನೀಡುವಂತೆ ನಾವು ಆದೇಶಿಸಿದ್ದೆವು. ಗಾಯಗೊಂಡವರ ವೆಚ್ಚವನ್ನು ಸಹ ನಾವು ಭರಿಸುತ್ತೇವೆ” ಎಂದು ಸಿಎಂ ಹೇಳಿದರು.ದುರಂತಕ್ಕೆ ಕಾರಣರಾದ ಮೂವರು ಅಧಿಕಾರಿಗಳನ್ನು ಸರ್ಕಾರ…

Read More

ಮಂಗಳೂರು: ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ಇಲ್ಲಿಯವರೆಗೆ 1,600 ಮಂದಿ ಬಲಿಯಾಗಿದ್ದಾರೆ. ಯಾವುದೇ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯಲ್ಲಿ ನಾಗರಿಕರ ಮೇಲೆ ದಾಳಿ ನಡೆದರೆ ಹಮಾಸ್ ಭಯೋತ್ಪಾದಕರು ಒತ್ತೆಯಾಳಾಗಿರಿಸಿಕೊಂಡಿರುವ ಇಸ್ರೇಲಿ ನಾಗರಿಕರನ್ನು ಒಬ್ಬೊಬ್ಬರನ್ನಾಗಿಯೇ ಕೊಲ್ಲುತ್ತೇವೆ ಎಂದು ಹಮಾಸ್ ಉಗ್ರರು ಬೆದರಿಕೆ ಹಾಕಿದ್ದಾರೆ. ಇನ್ನು ಉದ್ಯೋಗ ನಿಮಿತ್ತ ಇಸ್ರೇಲ್ ನಲ್ಲಿ ಕರಾವಳಿಯ ಸಾವಿರಾರು ಜನರು ಸಿಲುಕಿದ್ದಾರೆ. ಹಾಗಾಗಿ ಇಸ್ರೇಲ್ ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಪ್ರಕಟನೆಯೊಂದನ್ನು ಹೊರಡಿಸಿದ್ದಾರೆ. ಇಸ್ರೇಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಯವರ ಕಚೇರಿ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ: 1077/ 0824-2442590 ಗೆ ಕರೆ ಮಾಡಿ ಕೂಡಲೇ ನೀಡುವಂತೆ ಕೋರಲಾಗಿದೆ. ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ 080-22340676, 080-22253707 ಮಾಹಿತಿ ನೀಡುವಂತೆ ತಿಳಿಸಿದೆ.

Read More

ಮಂಗಳೂರು: ಬೆಂಕಿ ಆಕಸ್ಮಿಕಕ್ಕೆ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ.ಇಂದು ಮುಂಜಾನೆ 4.30 ಕ್ಕೆ ಈ ಘಟನೆ ನಡೆದಿದ್ದು, ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಆವರಿಸಿ ಕೋಟ್ಯಾಂತರ ಮೌಲ್ಯದ ವಸ್ತು ನಾಶವಾಗಿದೆ. ಬೆಂಕಿ ಬಂದರಿನಲ್ಲಿ ಲಂಗರು ಹಾಕಿರುವ ಇನ್ನಷ್ಟು ಬೋಟ್ ಗಳಿಗೆ ಹರಡುವ ಮುನ್ಸೂಚನೆ ದೊರೆತ ಹಿನ್ನಲೆಯಲ್ಲಿ ಸ್ಥಳೀಯರು ಬೆಂಕಿ ತಗುಲಿದ ಬೋಟನ್ನು ಬಂದರಿನಿಂದ ನದಿ ಕಡೆಗೆ ಕೊಂಡೊಯ್ದಿದ್ದಾರೆ.ಇದರಿಂದಾಗಿ ಸಂಭವಿಸುತ್ತಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಅರುಣ್ ಎಂಬವರು ಈ ಬೋಟ್ ಅನ್ನು ನಡೆಸುತ್ತಿದ್ದು, ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

Read More

ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ನ ಉಗ್ರಗಾಮಿ ಗುಂಪು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧವು ಅತ್ಯಂತ ವಿನಾಶಕಾರಿ ತಿರುವು ಪಡೆಯುತ್ತಿದ್ದು, ಈ ವರೆಗೂ ಈ ಯುದ್ಧದಲ್ಲಿ ಕನಿಷ್ಠ 500ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ. ಇತ್ತ ಇಸ್ರೇಲ್‌ಗೆ ಭಾರತ ಸೇರಿ ಬೇರೆ ಬೇರೆ ದೇಶಗಳು ಬೆಂಬಲ ನೀಡುತ್ತಿದ್ರೆ ಆ ಕಡೆ ಪ್ಯಾಲೆಸ್ಟೀನಿಯರ ಪರ ನಿಲ್ಲಲು ಪಾಕ್ ಧಾರ್ಮಿಕ ಮುಖಂಡರು ಪ್ರತಿಜ್ಞೆ ಮಾಡಿದ್ದಾರಲ್ಲದೇ ಇಸ್ರೇಲ್ ಮೇಲಿನ ದಾಳಿ ‘ಐತಿಹಾಸಿಕ ಯಶಸ್ಸು’ ಎಂದು ಬಣ್ಣಿಸಿ ತಮ್ಮ ಕ್ರೌರ್ಯತೆಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ಹೌದು ಪಾಕಿಸ್ತಾನದ ಫೈರ್ ಬ್ರಾಂಡ್ ಧಾರ್ಮಿಕ ಮತ್ತು ರಾಜಕೀಯ ನಾಯಕರೊಬ್ಬರು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಮಾರಣಾಂತಿಕ ದಾಳಿಯನ್ನ “ಐತಿಹಾಸಿಕ ಯಶಸ್ಸು” ಎಂದು ಬಣ್ಣಿಸಿದ್ದಾರೆ ಮತ್ತು ಪ್ಯಾಲೆಸ್ಟೈನ್ ಜನರೊಂದಿಗೆ ನಿಲ್ಲುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಪೇಶಾವರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಮಿಯತ್ ಉಲೇಮಾ-ಇ ಇಸ್ಲಾಂ-ಫಜಲ್ (ಜೆಯುಐ-ಎಫ್) ಮುಖ್ಯಸ್ಥ ಮೌಲಾನಾ ಫಜ್ಲುರ್ ರೆಹಮಾನ್, ಇಸ್ರೇಲ್ ಮೇಲಿನ ದಾಳಿಯು ಪ್ಯಾಲೆಸ್ಟೈನ್ ಸಮಸ್ಯೆ ಸತ್ತಿಲ್ಲ…

Read More

ಮಂಗಳೂರು  : ನಾಡಹಬ್ಬ ದಸರಾಕ್ಕೆ ಕ್ಷಣಗಣನೆ ಆರಂಭವಾಗಿದ್ದು ಕ್ಷೇತ್ರದ ನವೀಕರಣದ ರೂವಾರಿ ಗೌರವಾನ್ವಿತ ಬಿ.ಜನಾರ್ಧನ ಪೂಜಾರಿಯವರ ನೇತೃತ್ವದಲ್ಲಿ ನಡೆಯಲಿರುವ ಮಂಗಳೂರು ದಸರಾ ಸಂದರ್ಭದಲ್ಲಿ ಈ ಬಾರಿಯೂ ಸಹ ಕಳೆದ ವರ್ಷಗಳಂತೆ ಪಾಲಿಕೆ ವತಿಯಿಂದಲೇ 1.30 ಕೋಟಿ ರೂ ವೆಚ್ಚದಲ್ಲಿ ನಗರಕ್ಕೆ ವಿದ್ಯುದ್ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಮಂಗಳೂರಿನ ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ನಡೆಯುವ ದಸರಾ ಉತ್ಸವವು ಬಹಳ ಅದ್ದೂರಿಯಾಗಿ ವಿಜೃಂಭಣೆಯಿಂದ ನಡೆಯಬೇಕೆಂಬ ಉದ್ದೇಶದಿಂದ ಕ್ಷೇತ್ರದ ಮುಂದಾಳುಗಳು, ಮಹಾನಗರ ಪಾಲಿಕೆ ಆಡಳಿತ ಪಕ್ಷದವರು, ವಿರೋಧ ಪಕ್ಷದವರು, ಅಧಿಕಾರಿಗಳು ಸೇರಿದಂತೆ ಎಲ್ಲರೂ ಒಟ್ಟಾಗಿ ಸೇರಿಕೊಂಡು ಈ ಪೂರ್ವಭಾವಿ ಸಭೆಯನ್ನು ಆಯೋಜಿಸಿದ್ದು, ಕಳೆದ ಮೂರು ವರ್ಷಗಳಿಂದ ಅಂದರೆ ಹಿಂದಿನ ಮೇಯರ್ ದಿವಾಕರ್ ಪಾಂಡೇಶ್ವರ ಅವರ ಅವಧಿಯಲ್ಲಿ ಆರಂಭವಾದ ದಸರಾ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದಲೇ ಬೀದಿಬದಿ ವಿದ್ಯುದ್ದೀಪಾಲಂಕಾರದ ವ್ಯವಸ್ಥೆಯನ್ನು ನಂತರ ಪ್ರೇಮಾನಂದ ಶೆಟ್ಟಿ, ಜಯಾನಂದ ಅಂಚನ್, ಪ್ರಸ್ತುತ ಸುಧೀರ್ ಶೆಟ್ಟಿ ಕಣ್ಣೂರು ಮುಂದುವರೆಸಿದ್ದಾರೆ ಎಂದರು. ಕ್ಷೇತ್ರದ ಒಳಗಡೆ…

Read More

ಕಾರ್ಕಳ: ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪರಶುರಾಮ ಥೀಂ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವ ಉದ್ದೇಶದಿಂದ ಅಕ್ಟೋಬರ್ 9ರಿಂದ ನವೆಂಬರ್ ಅಂತ್ಯದವರೆಗೆ ಕಾಲಾವಕಾಶ ಬೇಕಿರುವುದರಿಂದ ಪ್ರವೇಶಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಕಾರ್ಕಳ ತಹಶೀಲ್ದಾರ್ ತಿಳಿಸಿದ್ದಾರೆ. ಈ ಥೀಮ್ ಪಾರ್ಕ್ ಜನವರಿ 27ರಂದು ಉದ್ಘಾಟನೆಗೊಂಡು ಪ್ರವಾಸಿಗರ ವೀಕ್ಷಣೆಗೆ ತಾತ್ಕಾಲಿಕವಾಗಿ ಅನುಕೂಲ ಕಲ್ಪಿಸಲಾಗಿತ್ತು. ಈಗ ಕಾಮಗಾರಿಯಲ್ಲಿ ಪರಶುರಾಮಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಯ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಸೆಪ್ಟೆಂಬರ್ ವರೆಗೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿತ್ತು. ಈಗ ಕಾಮಗಾರಿ ಪೂರ್ಣಗೊಳಿಸಲು ನಿರ್ಮಿತಿ ಕೇಂದ್ರದವರು ಅನುಮತಿ ಕೋರಿರುವುದರಿಂದ ನವೆಂಬರ್ ಅಂತ್ಯದವರೆಗೆ ನಿಷೇಧಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು : ಅಕ್ರಮವಾಗಿ ವಿದೇಶದಿಂದ ಚಿನ್ನ ಸಾಗಾಟ ಮಾಡುವ ಸ್ಮಗ್ಲರ್ ಗಳು ಇದೀಗ ಹೊಸ ರೀತಿಯ ಅವಿಷ್ಕಾರ ಮಾಡಿದ್ದು, ಈ ಬಾರಿ ಖೀರ್ ಮಿಕ್ಸ್ ಪಾಕೆಟ್ ಗಳಲ್ಲಿ ಚಿನ್ನ ಇಟ್ಟು ಸಾಗಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಮಂಗಳೂರು ಅಂತಾರಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ದುಬೈನಿಂದ ಬಜಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ (ಎಂಐಎ) ಬಂದಿಳಿದ ಪ್ರಯಾಣಿಕರೊಬ್ಬರು ‘ಖೀರ್‌ ಮಿಕ್ಸ್‌’ ಪೊಟ್ಟಣಗಳಲ್ಲಿ ಕಳ್ಳಸಾಗಣೆ ಮಾಡಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರೋಪಿಯಿಂದ 24 ಕ್ಯಾರೆಟ್‌ನ 347 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ₹ 20 ಲಕ್ಷ ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ಸ್‌ ಇಲಾಖೆ ಟ್ವೀಟ್‌ ಮಾಡಿದೆ. ದುಬೈನಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಶುಕ್ರವಾರ ಎಂಐಎಗೆ ಬಂದಿಳಿದ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿ ಬಳಿ ‘ಕಿಚನ್‌ ಟ್ರೆಜರ್ಸ್‌’ ಖೀರ್‌ ಮಿಕ್ಸ್‌ನ ಐದು ಪೊಟ್ಟಣಗಳಿದ್ದವು. ಸಂದೇಹ ಬಂದಿದ್ದರಿಂದ ಅವುಗಳನ್ನು ತಪಾಸಣೆಗೊಳಪಡಿಸಿದಾಗ ಅದರಲ್ಲಿ ಚಿನ್ನ ಇರುವುದು ಗೊತ್ತಾಯಿತು‘ ಎಂದು ವಿಮಾನ ನಿಲ್ದಾಣದ ಕಸ್ಟಮ್ಸ್‌ ಇಲಾಖೆ ಮೂಲಗಳು ತಿಳಿಸಿವೆ.

Read More

ಮುಲ್ಕಿ: ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವರಿಗೆ ಹುಚ್ಚು ನಾಯಿ ಕಡಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಹಳೆಯಂಗಡಿಯ ಕೊಳುವೈಲಿನ ನಿವಾಸಿ ಗ್ರಾಮ ಪಂಚಾಯತ್ ಬಳಿಯ ಟೈಲರ್, ಛಾಯಾ ಚಿತ್ರಗ್ರಾಹಕರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಏಕಾಏಕಿ ಹುಚ್ಚುನಾಯಿ ಕಡಿದಿದ್ದು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹುಚ್ಚುನಾಯಿ ಹಾವಳಿ ವಿಪರಿತವಾಗಿದ್ದು ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Read More

ರಾಂಚಿ: ಬಿಹಾರ ಪೊಲೀಸರು ಅಪಘಾತಕ್ಕೀಡಾದ ವ್ಯಕ್ತಿಯ ಶವವನ್ನು ಮುಜಾಫರ್ಪುರದಲ್ಲಿ ಕಾಲುವೆಗೆ ಎಸೆಯುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ವೈರಲ್‌ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾಜಿಪುರ-ಮುಜಾಫರ್ಪುರ ಎನ್‌ಎಚ್-22ರಲ್ಲಿ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಬದಲು ಫಕುಲಿಯ ಕಾಲುವೆಗೆ ಎಸೆದಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಮೃತರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಫಕುಲಿ ಒಪಿ ಮುಖ್ಯಸ್ಥ ಮೋಹನ್ ಕುಮಾರ್ ತಿಳಿಸಿದ್ದಾರೆ. “ಅವರ ದೇಹದ ಕೆಲವು ಭಾಗಗಳನ್ನು ಮರಣೋತ್ತರ ಪರೀಕ್ಷೆಗಾಗಿ ಎಸ್ಕೆಎಂಸಿಎಚ್ಗೆ ಕಳುಹಿಸಲಾಗಿದ್ದು, ರಸ್ತೆಗೆ ಅಂಟಿಕೊಂಡಿದ್ದ ಭಾಗವನ್ನು ಕಾಲುವೆಗೆ ಎಸೆಯಲಾಗಿದೆ” ಎಂದು ಕುಮಾರ್ ಹೇಳಿದ್ದಾರೆ.

Read More