Author: main-admin

ಚುನಾವಣಾ ಕರ್ತವ್ಯಕ್ಕೆ ಕುಡಿದು ಬಂದಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಮಾನತುಗೊಂಡವರನ್ನು ಮಾಲತೇಶ್ ಹಾಗು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಮಾಲತೇಶ್ ಶಿಕ್ಷಕ ಎನ್ನಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್‌ ನಲ್ಲಿ ಇಬ್ಬರೂ ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದನ್ನು ಗಮನಿಸಿದ ಚುನಾವಣಾ ಅಧಿಕಾರಿ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ತಪಾಸಣೆಗೆ ಒಳಪಡಿಸಿದ ಬಳಿಕ ಇವರಿಬ್ಬರೂ ಪಾನಮತ್ತರಾಗಿರುವುದು ಸಾಬೀತಾಗಿದೆ. ಹೀಗಾಗಿ ಇಬ್ಬರನ್ನೂ ಅಮಾನತು ಮಾಡುವಂತೆ ಆದೇಶ ಹೊರಡಿಸಿದ್ದಾರೆ.

Read More

ಮಂಗಳೂರು: ಮತದಾನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಬಂದೋ ಬಸ್ತ್ ಏರ್ಪಡಿಸಲಾಗಿದ್ದು 4,500ಕ್ಕೂ ಅಧಿಕ ಪೊಲೀಸ್‌/ಅರೆಸೇನಾ ಪಡೆಯ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ 10 ಅಂತಾರಾಜ್ಯ, 7 ಅಂತರ್‌ ಜಿಲ್ಲಾ, 9 ಸ್ಥಳೀಯ ಚೆಕ್‌ಪೋಸ್ಟ್‌ ಗಳಿದ್ದು ಅಂತಾರಾಜ್ಯ ಚೆಕ್‌ಪೋಸ್ಟ್‌ಗಳಲ್ಲಿ ಕೇಂದ್ರ ಅರೆಸೇನಾ ಪಡೆ (ಸಿಪಿಎಂಎಫ್), ಸ್ಥಳೀಯ ಪೊಲೀಸ್‌ ಮತ್ತು ಸರ್ವೇಕ್ಷಣ ತಂಡಗಳು 24 ತಾಸು ಕಣ್ಗಾವಲು ಇರಿಸಿವೆ. ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯ 7 ಮತ್ತು ಜಿಲ್ಲಾ ಪೊಲೀಸ್‌ ವ್ಯಾಪ್ತಿಯ 163 ಸೂಕ್ಷ್ಮ ಮತಗಟ್ಟೆಗಳು, ಗಡಿಭಾಗದ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.

Read More

ಶ್ರೀನಗರ: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಇಬ್ಬರು ಸಹಚರರನ್ನು ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಬಂಧಿಸಿದೆ. ಬಂಧಿತರನ್ನು ಶಾಹಿದ್ ಅಹ್ಮದ್ ಲೋನ್ ಹಾಗೂ ವಸೀಮ್ ಅಹ್ಮದ್ ಗನಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಸ್ಥಳಿಯ ನಿವಾಸಿಗಳಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ. ಓರ್ವ ಉಗ್ರನಿಂದ 1 ಪಿಸ್ತೂಲ್, 1 ಪಿಸ್ತೂಲ್ ಮ್ಯಾಗಜೀನ್, 4 ಪಿಸ್ತೂಲ್ ರೌಂಡ್ಸ್, 1 ರಿವಾಲ್ವಾರ್ ಸೈಲೆನ್ಸರ್, 1 ಐಇಡಿ, 1 ರಿಮೋಟ್ ಕಂಟ್ರೋಲ್, 2 ಬ್ಯಾಟರಿಗಳು, ಎಕೆ 47 ರೈಫಲ್‍ನ 1 ಖಾಲಿ ಮ್ಯಾಗಜೀನ್ ಹಾಗೂ ಇನ್ನಿತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೋರ್ವನಿಂದ 1 ಎಕೆ ಸಿರೀಸ್ ರೈಫಲ್, 1 ಮ್ಯಾಗಜೀನ್ ಮತ್ತು 10 ಸುತ್ತಿನ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಇಸ್ಲಾಮಾಬಾದ್; ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನವನ್ನು ಖಂಡಿಸಿ ದೇಶದಾದ್ಯಂತ ಹಿಂಸಾಚಾರ ನಡೆದಿದೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಇಸ್ಲಾಮಾಬಾದ್‌ನಲ್ಲಿ ಪ್ರತಿಭಟನೆ ಮತ್ತು ಗದ್ದಲ ಸೃಷ್ಟಿಸಿದೆ. ಇದಾದ ಬಳಿಕ ಪಾಕಿಸ್ತಾನ ಪೊಲೀಸರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಪಾಕಿಸ್ತಾನ ಸೇನೆಯ ರಾವಲ್ಪಿಂಡಿ ಪ್ರಧಾನ ಕಚೇರಿಯನ್ನು ಧ್ವಂಸಗೊಳಿಸಲಾಗಿದ್ದು,. ಕಾರ್ಪ್ಸ್ ಕಮಾಂಡರ್ ಮನೆಗೆ ಇಮ್ರಾನ್ ಖಾನ್ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲದೆ ಪಾಕ್ ಸೇನೆಯು ಪ್ರತಿಭಟನಾಕಾರರಿಗೆ ಕಂಡಲ್ಲಿ ಗುಂಡಿಕ್ಕುವ ಆದೇಶವನ್ನು ನೀಡಿದೆ.

Read More

ಇಸ್ಲಾಮಾಬಾದ್: ಪಾಕಿಸ್ತಾನದ ಜಲಗಡಿಯೊಳಗೆ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿ ಪಾಕ್‌ ಜೈಲಿನಲ್ಲಿದ್ದ 199 ಮಂದಿ ಭಾರತೀಯರನ್ನು ಮೇ 12ರ ಶುಕ್ರವಾರದಂದು ಪಾಕ್‌ ಅಧಿಕಾರಿಗಳು ಬಿಡುಗಡೆ ಮಾಡಲಿದ್ದಾರೆ. ಸಿಂಧ್‌ನ ಜೈಲು ವಿಭಾಗದ ಪೊಲೀಸ್‌ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಭಾರತೀಯ ಮೀನುಗಾರರನ್ನು ಲಾಹೋರ್‌ಗೆ ಕಳುಹಿಸಿ, ಅಲ್ಲಿಂದ ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ. ಸದ್ಯಕ್ಕೆ ಈ ಮೀನುಗಾರರು ಲಾಂಧಿ ಜೈಲಿನಲ್ಲಿ ಇರಿಸಲಾಗಿದೆ. 654 ಭಾರತೀಯ ಮೀನುಗಾರರು ಕರಾಚಿ ಜೈಲುಗಳಲ್ಲಿ ಇದ್ದಾರೆ. ಅಂದಾಜು 83 ಪಾಕಿಸ್ತಾನಿ ಮೀನುಗಾರರು ಭಾರತೀಯ ಜೈಲುಗಳಲ್ಲಿದ್ದಾರೆ. 654 ಭಾರತೀಯ ಮೀನುಗಾರರ ಪೈಕಿ 631 ಮಂದಿ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ.

Read More

ನವದೆಹಲಿ : ಕರ್ನಾಟಕದಲ್ಲಿ ನಾಳೆ (ಮೇ 10) ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಪ್ರಚಾರ ಕೊನೆಗೊಂಡ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಜ್ಯದ ಜನತೆಗೆ ಅವರ ಕನಸುಗಳನ್ನು ತಮ್ಮ ಕನಸು ಎಂಬ ಭರವಸೆ ನೀಡಿದರು. ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಪ್ರಧಾನಿ ಮೋದಿ, “ಪ್ರತಿಯೊಬ್ಬ ಕನ್ನಡಿಗನ ಕನಸು ನನ್ನ ಸ್ವಂತ ಕನಸು, ನಿಮ್ಮ ನಿರ್ಣಯವೇ ನನ್ನ ನಿರ್ಣಯ” ಎಂದು ಹೇಳಿದ್ದಾರೆ. ಇದೇ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಪ್ರಧಾನಿಗಳು ಮಾತಮಾಡಿದರು 

Read More

ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮಾಟೋಗ್ರಾಫ್, ದೃಶ್ಯಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126 ರ ಪ್ರಕಾರ ನಿಷೇದಿಸಲಾಗಿದೆ. ಚುನಾವಣಾ ಸಂಬಂಧೀ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವಂತಹ ವಿಷಯಗಳಾಗಿರುತ್ತವೆ.ಈ ಕಾಯ್ದೆಯನ್ನು ಉಲ್ಲಂಘಿಸುವವರಿಗೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿದೆ.ಟಿವಿ/ರೇಡಿಯೋ/ಕೇಬಲ್ ನೆಟ್.ವರ್ಕ್ ಮತ್ತು ಎಲ್ಲ ಡಿಜಿಟಲ್ ಮಾಧ್ಯಮಗಳು ಮತದಾನಪೂರ್ವ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳು ಪ್ರಸಾರ ಮಾಡದಂತೆ ಕ್ರಮವಹಿಸಬೇಕು.ಕಾರ್ಯಕ್ರಮದಲ್ಲಿ ಭಾಗವಹಿಸುವವರು(ಪ್ಯಾನಲಿಸ್ಟ್) ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು/ಮನವಿಗಳು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಕೂಡ ಪ್ರಸಾರ ಮಾಡಕೂಡದು.ನಿಗದಿತ 48 ಗಂಟೆಗಳ ಅವಧಿಯಲ್ಲಿ ಓಪಿನಿಯನ್ ಪೋಲ್ ಫಲಿತಾಂಶ ಪ್ರಕಟಿಸುವುದು ಚರ್ಚೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು. ಅದೇ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು…

Read More

ಬೆಂಗಳೂರು: ಮಾರ್ಚ್‌ 29 ರಂದು ಜಾರಿಯಾದ ಚುನಾವಣೆ ನೀತಿ ಸಂಹಿತೆ ಆರಂಭವಾದ ಬಳಿಕ ₹ 147.46 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. 2018ರ ಚುನಾವಣೆಗೆ ಹೋಲಿಕೆ ಮಾಡಿದರೆ ಇದು ಶೇ 100 ರಷ್ಟು ಹೆಚ್ಚು. ಸುಮಾರು ₹ 100 ಕೋಟಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ವಶಪಡಿಸಿಕೊಳ್ಳಲಾಗಿದ್ದು, ₹ 24.22 ಕೋಟಿ ಮೌಲ್ಯದಷ್ಟು ಮತದಾರರಿಗೆ ವಿತರಿಸಲು ಸೀರೆ, ಕುಕ್ಕರ್‌ ಹಾಗೂ ಇನ್ನಿತರ ವಸ್ತುಗಳನ್ನು ಜ‍ಪ್ತಿಮಾಡಲಾಗಿದೆ.

Read More

ಮಂಗಳೂರು: ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ, ಮತದಾರರು ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ, ಮೇ.10ರ ಬುಧವಾರ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳು) ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಡಿಪಿಎಆರ್‌ನ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಮತದಾನವು ಮೇ 10ರಂದು ಪೂರ್ವಾಹ್ನ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಜರುಗಲಿದ್ದು, ಈ ಬಗ್ಗೆ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ತಿಳಿಸಿದರು. ಅವರು ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ವಿವರಣೆ ನೀಡಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಮತದಾನವು ಮೇ ೧೦ರಂದು ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಜರುಗಲಿದ್ದು, ಈ ಬಗ್ಗೆ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ.ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳಿಗೆ ಅಂತಿಮ ಮತದಾರರ ಪಟ್ಟಿಯ ಪ್ರತಿಯನ್ನು ನೀಡಲಾಗಿದೆ. ಎಲ್ಲಾ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಮತಗಟ್ಟೆಗಳ ಪಟ್ಟಿಯನ್ನು ಒದಗಿಸಲಾಗಿದೆ.ಮತದಾರರು EPIC CARD ಅಥವಾ ಚುನಾವಣಾ ಆಯೋಗ ಅನುಮೋದಿಸಿದ ಆಧಾರ್ ಕಾರ್ಡ್,ನರೇಗಾ ಉದ್ಯೋಗ ಗುರುತಿನ ಚೀಟಿ,, ಅಂಚೆ ಕಛೇರಿ ಮತ್ತು ಬ್ಯಾಂಕ್‌ಗಳಲ್ಲಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ ಗುರುತಿನ ದಾಖಲೆಗಳೊಂದಿಗೆ ಹಾಜರಾಗಬೇಕು.ವಿಶೇಷ ಚೇತನ…

Read More