ಪುತ್ತೂರು:ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇ 8ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಮೇ13ರಂದು ಮಧ್ಯರಾತ್ರಿಯವರೆಗೆ ಸೇರಿದಂತೆ ಮೂರು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ. ಈ ಸಂಬಂಧ ಜಿಲ್ಲಾಡಳಿತದಿಂದ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಮತದಾನದ ಪ್ರಯುಕ್ತ ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಏಣಿಕೆ ಪ್ರಯುಕ್ತ ಮೇ13ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆಯವೆರೆಗ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತದಾನ ಮತ್ತು ಮತಎಣಿಕೆಯ ಸಂದರ್ಭದಲ್ಲಿ ಮದ್ಯದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಿ, ಶುಷ್ಕ ದಿನ(ಡ್ರೈ ಡೇ)ಎಂದು ಘೋಷಿಸಿ ಆದೇಶಿಸಿದೆ. ಈ ದಿನಗಳಂದು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ತರಹದ ಮದದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮದ್ಯ ಮಾರಾಟವನ್ನು ಸಂಪೂರ್ಣ…
Author: main-admin
ಉಳ್ಳಾಲ: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್‍ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಸಂಭವಿಸಿದೆ. ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾದವರು. ನಾಟೆಕಲ್ ಸಮೀಪ ಅಸೈಗೋಳಿಯಿಂದ ಚೆಂಬುಗುಡ್ಡೆ ಸಾರ್ವಜನಿಕ ಸಭೆಗೆ ತೆರಳುತ್ತಿದ್ದ ಕಾಂಗ್ರೆಸ್ ಪ್ರಚಾರದ ವಾಹನ ಎಸ್ ಡಿಪಿಐ ಅವರ ರ್‍ಯಾಲಿಗೆ ನಾಟೆಕಲ್ ಸಮೀಪ ಎದುರಾಗಿತ್ತು. ಈ ಸಂದರ್ಭ ಎಸ್ ಡಿಪಿಐ ಕಾರ್ಯಕರ್ತರ ಬೈಕ್ ಹಾಗೂ ರಿಕ್ಷಾ ರ್‍ಯಾಲಿಯಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಇದೇ ಸಂದರ್ಭ ಕಾಂಗ್ರೆಸ್ ಪರವಾದ ಹಾಡನ್ನು ಚುನಾವಣಾ ಪ್ರಚಾರ ವಾಹನದಲ್ಲಿ ಹಾಕಲಾಗಿತ್ತು. ಇದನ್ನು ಎಸ್‍ಡಿಪಿಐ ಕಾರ್ಯಕರ್ತರು ಆಕ್ಷೇಪಿಸಿ, ನಿಲ್ಲಿಸುವಂತೆ ಸೂಚಿಸಿದ್ದರು. ಗಣನೆಗೆ ತೆಗೆದುಕೊಳ್ಳದ ಚಾಲಕ ವಾಹನಕ್ಕೆ ಅಡ್ಡ ಇದ್ದವರಿಗೆ ಹಾರ್ನ್ ಹಾಕಲು ಆರಂಭಿಸಿದ್ದಾರೆ. ಇದರಿಂದ ಕೆರಳಿದ ಎಸ್ ಡಿಪಿಐ ಕಾರ್ಯಕರ್ತರು ಚಾಲಕ ನೌಫಾಲ್ ಕಾಲರ್ ಪಟ್ಟಿ ಹಿಡಿದೆಳೆದು ಕೆನ್ನೆಗೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ…
ಜೈಪುರ: ರಾಜಸ್ಥಾನದ ಹನುಮಾನ್ ಗಢ್ ಬಳಿ ಮಿಗ್-21 ಯುದ್ಧ ವಿಮಾನ ಪತನಗೊಂಡು ಇಬ್ಬರು ಸ್ಥಳೀಯರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ವಿಮಾನದಲ್ಲಿದ್ದ ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಐಎಎಫ್ ಮೂಲಗಳ ಪ್ರಕಾರ, ಯುದ್ಧವಿಮಾನವು ಸೂರತ್‌ಗಢದಿಂದ ಹೊರಟಿತ್ತುಎನ್ನಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಮೈಸೂರು: ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ಸಾಗುತ್ತಿದ್ದ ಬಲರಾಮ (67) ಇದೀಗ ಸಾವನ್ನಪ್ಪಿದ್ದಾನೆ. ಬರೋಬ್ಬರಿ 14 ಬಾರಿ ಅಂಬಾರಿಯನ್ನು ಹೊತ್ತಿದ್ದ ಸೌಮ್ಯ ಸ್ವಭಾವದ ಬಲರಾಮನ ಬಾಯಲ್ಲಿ ಹುಣ್ಣಾಗಿತ್ತು. ಕಳೆದ ಹತ್ತು ದಿನಗಳಿಂದ ನೋವಿನಿಂದ ಬಳಲುತ್ತಿದ್ದ ಬಲರಾಮನಿಗೆ ಆಹಾರ ಸೇವನೆ ಕಷ್ಟವಾಗುತ್ತಿತ್ತು. ಕೂಡಲೇ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ವಿಶ್ವ ಪ್ರಸಿದ್ಧ ಮೈಸೂರು ದಸರಾ ಮೆರವಣಿಗೆಯ ಪ್ರಮುಖ ಆನೆಗಳಲ್ಲಿ ಬಲರಾಮನೂ ಒಬ್ಬನಾಗಿದ್ದ. ಬಲರಾಮನನ್ನು 1987 ರಲ್ಲಿ ಕರ್ನಾಟಕದ ಕೊಡಗು ಪ್ರದೇಶದ ಸೋಮವಾರಪೇಟೆ ಬಳಿಯ ಕಟ್ಟೆಪುರ ಅರಣ್ಯದಲ್ಲಿ ಸೆರೆಹಿಡಿಯಲಾಗಿತ್ತು. ನಂತರ ಈತನನ್ನು ತರಬೇತಿ ಮೂಲಕ ಪಳಗಿಸಲಾಗಿತ್ತು. ದ್ರೋಣನ ನಂತರ ಅಂಬಾರಿಯನ್ನು ಹೊರಲು ಬಲರಾಮ ಆಯ್ಕೆಯಾದನು. ಆದರೆ ಅಂಬಾರಿ ಹೊರಲು ಬಲರಾಮ ಮೊದಲ ಆಯ್ಕೆಯಾಗಿರಲಿಲ್ಲ. 5,600 ಕಿಲೋ ತೂಕ ಇರುವ ಆನೆ ಅರ್ಜುನ, ಆಕಸ್ಮಿಕವಾಗಿ ಮಾವುತನನ್ನು ಕೊಂದಿದ್ದಕ್ಕಾಗಿ ಅಂಬಾರಿ ಹೊರುವ ಅವಕಾಶದಿಂದ ವಂಚಿತನಾಗಿದ್ದನು. ಹೀಗಾಗಿ ಬಲರಾಮನನ್ನು ಆಯ್ಕೆ…
ಕೇರಳದ ಮಲಪ್ಪುರಂ ಜಿಲ್ಲೆಯ ತಾನೂರು ಬಳಿ ಪ್ರವಾಸಿ ದೋಣಿಯೊಂದು ಮುಳುಗಿ 21 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನಾ ಸ್ಥಳದಲ್ಲಿ ಇನ್ನೂ ಹಲವರು ನೀರಿನಲ್ಲಿ ಮುಳುಗಿದ್ದು, ರಕ್ಷಣಾಕಾರ್ಯ ಭರದಿಂದ ಸಾಗುತ್ತಿದೆ. ವರದಿಗಳ ಪ್ರಕಾರ ದೋಣಿಯಲ್ಲಿ ಸುಮಾರು 40 ಮಂದಿ ಇದ್ದರು. ನಿನ್ನೆ ರಾತ್ರಿ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಹೀಗಿದ್ದೂ, ಟಾರ್ಚ್ಗಳ ಸಹಾಯದಿಂದ ಹಲವರನ್ನು ರಕ್ಷಣೆ ಮಾಡಲಾಗಿದೆ. ರಕ್ಷಣಾ ಕಾರ್ಯ ನಡೆಯುತ್ತಿದೆ. ರಾತ್ರಿ ಅಪಘಾತ ಸಂಭವಿಸಿದ್ದರಿಂದ ರಕ್ಷಣೆ ಮಾಡಲು ಕಷ್ಟವಾಗಿದೆ ಎಂದು ಕೇರಳ ಸಚಿವ ಅಬ್ದುರಹ್ಮಾನ್ ತಿಳಿಸಿದ್ದಾರೆ. ಇಂದು ಘಟನಾ ಸ್ಥಳಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ನೀಡಲಿದ್ದಾರೆ. ದುರಂತ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಗಳು ರದ್ದು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದ ಕೂಡ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಕೂಡ ದುರ್ಘಟನೆಗೆ ಕಂಬನಿ ಮಿಡಿದಿದ್ದಾರೆ.
ಬೆಂಗಳೂರು: ಮೇ.08ರಂದು (ಸೋಮವಾರ) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ನೀಡಿದೆ. ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ. ಇನ್ನು ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು. ಸೋಮವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, 11 ಗಂಟೆಯ ಬಳಿಕ ಜಾಲತಾಣದಲ್ಲಿ ವೀಕ್ಷಿಸಬಹುದು.
ಇಂಫಾಲ: ಈಶಾನ್ಯ ಭಾಗದ ಮಣಿಪುರ ರಾಜ್ಯದಲ್ಲಿ ಮುಂದುವರಿದಿದ್ದು, ಇದೀಗ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ಕರೆ ನೀಡಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತರೂರ್ ಅವರು ಬರವಣಿಗೆಯಲ್ಲಿ ಹಂಚ್ಚಿಕೊಂಡಿದ್ದು ಹೀಗೆ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಂತೆ ಬಲ ಚಿಂತನೆಯುಳ್ಳ ಭಾರತೀಯರು ತಮಗೆ ಭರವಸೆ ನೀಡಿ ಉತ್ತಮ ಆಡಳಿತಕ್ಕೆ ಏನಾಯ್ತು ಎಂಬುದನ್ನು ತಮಗೆ ತಾವೇ ಕೇಳಿಕೊಳ್ಳಬೇಕು. ಮಣಿಪುರದ ಮತದಾರರು ತಮ್ಮ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಕೇವಲ 1 ವರ್ಷದ ಬಳಿಕ ದೊಡ್ಡ ದ್ರೋಹವನ್ನು ಅನುಭವಿಸುತ್ತಿದ್ದಾರೆ ಹಾಗೂ ಆಯ್ಕೆಯಾಗಿರುವುದಕ್ಕೆ ಕಾರಣವಾದ ಕೆಲಸಗಳನ್ನೇ ರಾಜ್ಯ ಸರ್ಕಾರ ಮಾಡಲು ಸಿದ್ಧವಾಗಿಲ್ಲ. ಇದೀಗ ರಾಷ್ಟ್ರಪತಿಗಳು ಆಳ್ವಿಕೆ ನಡೆಸಲು ಸಮಯ ಬಂದಿದೆ ಎಂದು ಹೇಳಿದ್ದಾರೆ.ಮಣಿಪುರದ ಆದಿವಾಸಿಗಳು ಹಾಗೂ ಬಹುಸಂಖ್ಯಾತ ಮೈತೆ ಸಮುದಾಯಕ್ಕೆ ಸೇರಿದ ಜನರ ನಡುವೆ ಹಿಂಸಾತ್ಮಕ ಘರ್ಷಣೆ ಬುಧವಾರದಂದು ಪ್ರಾರಂಭವಾಯಿತು, ಇದರ ಪರಿಣಾಮ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದ್ದು, ಘರ್ಷಣೆಯಲ್ಲಿ 54 ಜನರು ಸಾವನ್ನಪ್ಪಿದ್ದಾರೆ.ಶನಿವಾರ ರಾಜ್ಯದಲ್ಲಿ ಶಾಂತಿಯ ಉಪಕ್ರಮಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ಪ್ರತಿ ವಿಧಾನಸಭಾ…
ಬೆಳ್ತಂಗಡಿ : ಖಾಸಗಿ ಬಸ್ಸೊಂದು ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾವೂರು ಬಳಿ ಶನಿವಾರ ನಡೆದಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಸುಂದರಿ (60) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಐವರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕುಂದಾಪುರ: ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಗೆ ಸ್ನೇಹಿತರೊಂದಿಗೆ ಜಲಕ್ರೀಡೆಯಾಡಲೆಂದು ಹೋಗಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ಶನಿವಾರ ಪತ್ತೆಯಾಗಿದೆ. ಸುಳ್ಯದ ನಿವಾಸಿ ಸುಹಾಸ್ ಎಂ (21) ಮೃತ ಯುವಕ.ಮೇ 5 ರಂದು ಸೌಡ ಸಮೀಪದ ಹೊಳೆಯಲ್ಲಿ ನೀರಿಗಿಳಿದ ಸುಹಾಸ್ ಆಕಸ್ಮಿಕವಾಗಿ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಜೊತೆಗಿದ್ದ ಯುವಕರು ತಕ್ಷಣ ಸ್ಥಳೀಯರಿಗೆ ಸುದ್ಧಿ ತಲುಪಿಸಿ ಹುಡುಕಾಟ ಆರಂಭಿಸಿದ್ದಾರೆ.ಇನ್ನು ಶನಿವಾರ ಬೆಳಗ್ಗೆ ಸುಹಾಸ್ ಮೃತದೇಹ ಮುಳುಗಿದ ಸ್ಥಳದಿಂದ ಸುಮಾರು 200 ಮೀಟರ್ ದೂರದಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕೋಟ ಪೊಲೀಸರು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಸುಹಾಸ್ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಬೆಳಿಗ್ಗೆಯಷ್ಟೇ ತನ್ನ ಮನೆಯಾದ ಐವರ್ನಾಡಿನ ಮಡ್ತಿಲದಿಂದ ಮೂಡಬಿದ್ರೆಗೆ ಬಂದಿದ್ದ. ಅಲ್ಲಿಂದ ಸ್ನೇಹಿತರೊಂದಿಗೆ ಸೌಡ ಹೊಳೆಗೆ ಆಟವಾಡಲು ಬಂದಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೆಕ್ಸಾಸ್(ಅಮೆರಿಕ): ಶನಿವಾರ ಡಲ್ಲಾಸ್‌ನ ಮಾಲ್‌ವೊಂದರಲ್ಲಿ ಬಂದೂಕುಧಾರಿಯೊಬ್ಬ ಒಂಬತ್ತು ಜನರನ್ನು ಗುಂಡಿಕ್ಕಿ ಕೊಂದಿದ್ದಾನೆ. ಈ ವೇಳೆ ಕನಿಷ್ಟ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟೆಕ್ಸಾಸ್‌ನ ಅಲೆನ್‌ನಲ್ಲಿರುವ ಅಲೆನ್ ಪ್ರೀಮಿಯಂ ಔಟ್‌ಲೆಟ್‌ಗಳ ಮಾಲ್‌ನ ಹೊರಗೆ ಈ ಘಟನೆ ನಡೆದಿದೆ. ಈ ಮಾಲ್ ಡಲ್ಲಾಸ್‌ನಿಂದ 40 ಕಿಮೀ ದೂರದಲ್ಲಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಅಧಿಕಾರಿಯೊಬ್ಬರು ಅಪರಿಚಿತ ಬಂದೂಕುಧಾರಿಯನ್ನು ಗುಂಡಿಟ್ಟು ಹತ್ಯೆಗೈದಿದ್ದಾರೆ ಎಂದು ನಗರದ ಪೊಲೀಸ್ ಮುಖ್ಯಸ್ಥ ಬ್ರಿಯಾನ್ ಹಾರ್ವೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.










