Author: main-admin

ಕಾಸರಗೋಡು : ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಕಾಸರಗೋಡಿನ ಉಪ್ಪಳ ಸೋಂಗಲ್ ಬದರಿಯಾ ಜುಮಾ ಮಸೀದಿ ವ್ಯಾಪ್ತಿಯ ಮಹ್ಮದ್ ಎಂಬವರ ಪುತ್ರ ಇಬ್ರಾಹಿಂ ಖಲೀಲ್ (21) ಮೃತ ಯುವಕನಾಗಿದ್ದಾನೆ . ಇಬ್ರಾಹಿಂ ಖಲೀಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದರು.ಭಾನುವಾರ ರಾತ್ರಿ 8 ಗಂಟೆಗೆ ನಾರಾಯಣ ಮಂಗಲದಲ್ಲಿ ಸೀತಾಂಗೋಳಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಖಲೀಲ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.ಖಲೀಲ್ ಸಹಿತ ಗಾಯಗೊಂಡಿರುವ ಮಣಿಮುಂಡ ಮೂಲದ ಮೊಹಮ್ಮದ್ ಮಹಸಿಲ್ (24) ಇನ್ನೂ ತೀವ್ರ ನಿಗಾ ಘಟಕದಲ್ಲಿದ್ದಾರೆ. ಮಹ್ಸಿಲ್ ಮಂಗಲ್ಪಾಡಿ ಪಂಚಾಯತ್ ಸದಸ್ಯ ಮಹ್ಮೂದ್ ಅವರ ಪುತ್ರರಾಗಿದ್ದು ಕುಂಬಳೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

Read More

ಕಾಪು: ತಾಲೂಕಿನ ಬೆಳಪು ಕೆಐಎಡಿಬಿ ಯೋಜನಾ ಪ್ರದೇಶದ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಬೆಳಪು ವಸತಿ ಬಡಾವಣೆಯ ಕಸ್ತೂರಿ ಅವರ ಪುತ್ರ ಇನ್ನಂಜೆ ಎಸ್‌ ಎಸ್ ಆಂಗ್ಲಮಾಧ್ಯಮ ಶಾಲೆ ಏಳನೇ ತರಗತಿ ವಿದ್ಯಾರ್ಥಿ ವಿಶ್ವಾಸ್ ನಾಯಕ್ (11) ಮೃತ ಬಾಲಕ. ಗುರುವಾರ ಸಂಜೆ ಶಾಲೆಯಿಂದ ಬಂದ ವಿಶ್ವಾಸ್ ನೆರೆಮನೆಯ ಶಶಾಂಕ್ ಮತ್ತು ನೌಷಾದ್‌ ಜತೆಗೆ ಮನೆ ಹಿಂಬದಿಯಲ್ಲಿರುವ ಕೆರೆಗೆ ಈಜಲೆಂದು ತೆರಳಿದ್ದನು. ಈಜುತ್ತಿದ್ದ ವಿಶ್ವಾಸ್ ಮುಳುಗಿ ಅಸ್ವಸ್ಥಗೊಂಡಿದ್ದು ಅದನ್ನು ಗಮನಿಸಿದ ಸ್ನೇಹಿತರಿಬ್ಬರು ಮೇಲಕ್ಕೆ ಬಂದು ಮಹಿಳೆಯೊಬ್ಬರಿಗೆ ವಿಷಯ ತಿಳಿಸಿದರು. ಮಕ್ಕಳು ಮತ್ತು ಮಹಿಳೆಯರ ಬೊಬ್ಬೆ ಕೇಳಿ ಸ್ಥಳೀಯರು ಧಾವಿಸಿ ಬಂದು ಬಾಲಕನನ್ನು ಮೇಲಕ್ಕೆತ್ತಿದ್ದರು. ತತ್ ಕ್ಷಣ ಬಾಲಕನನ್ನು ಉಡುಪಿಯ ಆಸ್ಪತ್ರೆಗೆ ಕೊಂಡೊಯ್ಯಲು ಯತ್ನಿಸಲಾಯಿತಾದರೂ ದಾರಿಯಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Read More

ಕಾರ್ಕಳ: ವೇಗವಾಗಿ ಸಾಗುತಿದ್ದ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವಿಗೀಡಾದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ.ಕಾರ್ಕಳದಿಂದ ಮುದ್ರಾಡಿ ಕಡೆಗೆ ಅತ್ಯಂತ ವೇಗವಾಗಿ ಸಾಗುತ್ತಿದ್ದ ಇನ್ನೋವಾ ಕಾರು ಚಿರತೆಗೆ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ‌ನಡೆಸಿದರು. ಡಿಕ್ಕಿ ಹೊಡೆದು ಪರಾರಿಯಾದ ವಾಹನ ಪತ್ತೆಗೆ ಪೊಲೀಸರು ಯತ್ನಿಸಿದ್ದಾರೆ.

Read More

ಉಡುಪಿ : ಮಹಿಷ ಮಂಡಲವನ್ನಾಳಿದ ದ್ರಾವಿಡ ದೊರೆ ಮಹಿಷಾಸುರನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 15 ರಂದು ಉಡುಪಿಯಲ್ಲಿ ಮೊದಲ ಬಾರಿಗೆ ಮಹಿಷ ದಸರಾ ಹಾಗೂ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬವನ್ನು ಆಚರಿಸಲಾಗುವುದು ಎಂದು ಉಡುಪಿ ಜಿಲ್ಲಾ ಅಂಬೇಡ್ಕರ್‌ಯುವ ಸೇನೆ ಜಿಲ್ಲಾಧ್ಯಕ್ಷ ಹರೀಶ್‌ ಕೋಟ್ಯಾನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಿಷಾಸುರ ಒಬ್ಬ ದುಷ್ಟ ಪ್ರಜಾಕಂಟಕ ಎಂಬಂತೆ ಚಿತ್ರಿಸಲಾಗಿದೆ. ಆದರೆ ಮಹಿಷಾಸುರ ಈ ದೇಶದ ಅಸುರ ಸಾಮ್ರಾಜ್ಯದ ನಾಯಕರಲ್ಲಿ ಅಗ್ರಗಣ್ಯನಾಗಿದ್ದ ಎಂದರು. ಅಕ್ಟೋಬರ್ 15ರಂದು ಬೆಳಗ್ಗೆ ಮಹಿಷ ರಾಜನ ಸ್ತಬ್ಧ ಚಿತ್ರವನ್ನು ಉಡುಪಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದಿಂದ ಆದಿವುಡುಪಿಯ ಅಂಬೇಡ್ಕರ್‌ಭವನದವರೆಗೆ ಜಾಥಾ ನಡೆಸಲಾಗುತ್ತದೆ. ಬಳಿಕ ‘ಮಹಿಷಾಸುರ ಯಾರು’ ಎಂಬ ವಿಚಾರಸಂಕಿರಣವನ್ನು ಕಲಬುರಗಿಯ ಸಂಶೋಧಕ ಡಾ.ವಿಠಲ ವಗ್ಗನ್ ಕಾರ್ಯಕ್ರಮ ಉದ್ಘಾಟಿಸಿ ವಿಚಾರ ಮಂಡನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಲಿತ ಚಿಂತಕ ನಾರಾಯಣ ಮಣೂರು ಹಾಗೂ ಪ್ರಗತಿಪರ ಚಿಂತಕ ಶ್ರೀರಾಮ ದಿವಾಣ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Read More

ಬೆಂಗಳೂರು : ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಐದು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಹೈಕೋರ್ಟ್ ನ್ಯಾಯಾಧೀಶರು ಇಂದು ತೀರ್ಪು ಪ್ರಕಟಿಸಿದ್ದಾರೆ. ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ವಾರದ ಹಿಂದೆ ರದ್ದುಗೊಳಿಸಿದ್ದ ಹೈಕೋರ್ಟ್ ಆರೋಪಿಗಳು ದೋಷಿಗಳೆಂದು ತೀರ್ಪು ನೀಡಿತ್ತು. ಡಾ.ರೇಣುಕಾ ಪ್ರಸಾದ್ ಕೆ.ವಿ. ಸೇರಿದಂತೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ ಐದನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದು ಕೋರಿ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿ ಶ್ರೀನಿವಾಸ್, ಹರೀಶ್ ಕುಮಾರ್ ಅವರಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಸೆ.27ರಂದು ಈ ಆದೇಶ ನೀಡಿತ್ತು. ಡಾ.ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿದ್ದ ಹೈಕೋರ್ಟ್ ಎಲ್ಲರನ್ನೂ ಕೊಲೆ, ಒಳಸಂಚು,…

Read More

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುದ್ದಿ ಸುಳ್ಳು, ವದಂತಿ ಹಬ್ಬಿಸದಂತೆ ತಿಮ್ಮಕ್ಕನವರ ದತ್ತುಪುತ್ರ ಉಮೇಶ್‌ ಮನವಿ ಮಾಡಿದರು. ತಿಮ್ಮಕ್ಕನವರು ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದೆಲ್ಲಾ ವದಂತಿ ನಂಬಬೇಡಿ ಎಂದಿದ್ದಾರೆ. ಸದ್ಯ ಸಾಲುಮರದ ತಿಮ್ಮಕ್ಕ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದರು. ಆಸ್ಪತ್ರೆಯಲ್ಲಿರುವ ತಿಮ್ಮಕ್ಕನವರ ವಿಡಿಯೋವನ್ನು ಉಮೇಶ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡು, ಅವರ ಆರೋಗ್ಯದ ಬಗ್ಗೆ ಹರಡುತ್ತಿರುವ ವದಂತಿಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ. ಎಲ್ಲಿಯೂ ಸುಳ್ಳು ಸುದ್ದಿ ಹರಡದಂತೆ ಈ ಮೂಲಕ ಮನವಿ ಮಾಡಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಲಳುತ್ತಿರುವ ತಿಮ್ಮಕ್ಕನವರು ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಮಂಗಳೂರು: ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳೂರು ಪಾಲಿಕೆಗೆ ಗುರುವಾರ ಮುತ್ತಿಗೆ ಹಾಕಲಾಯಿತು. ನೂರಾರು ಸಂಖ್ಯೆಯಲ್ಲಿ ಆಗಮಿಸಿದ ವ್ಯಾಪಾಸ್ಥರು ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿದರು. ಬೀದಿ ಬದಿ ವ್ಯಾಪಾರದ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡಿರುವ ಐಡಿ ಮುದ್ರಣಗೊಂಡಿದ್ದರೂ ವ್ಯಾಪಾರಸ್ಥರಿಗೆ ದೊರಕದೆ ಇರುವುದರಿಂದ ಬಿಡಿ ಬದಿ ವ್ಯಾಪಾರಸ್ಥರು ಆಕ್ರೋಶಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಆಯುಕ್ತ ಆನಂದ್ ಸಿಎಲ್, ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಐಡಿ ಕಾರ್ಡ್ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ ಒಂದು ವೇಳೆ ಐಡಿ ಕಾರ್ಡ್‌ ವಿತರಿಸದಿದ್ದರೆ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬರುವ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಹೋರಾಟಗಾರ ಬಿ.ಕೆ.‌ಇಮ್ತಿಯಾಜ್ ಎಚ್ಚರಿಕೆ ನೀಡಿದ್ದಾರೆ.

Read More

ಕಾರ್ಕಳ: ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೆಬೈಲು ಎಂಬಲ್ಲಿ ರಬ್ಬರ್ ಸ್ಮೋಕ್ ಹೌಸ್‌ ಬೆಂಕಿ ಬಿದ್ದು ರಬ್ಬರ್ ಶೀಟ್ ಗಳಿಗೆ ಹಾನಿಯಾದ ಘಟನೆ ನಡೆದಿದೆ. ರಬ್ಬರ್ ಶೀಟ್ ಮಾಡಲು ಹಾಕಿದ್ದ ಬೆಂಕಿ ಕಟ್ಟಡಕ್ಕೆ ತಗುಲಿ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇದರ ಪರಿಣಾಮವಾಗಿ 50 ರಬ್ಬರ್ ಶೀಟ್, ಕಟ್ಟಡದ ಮೇಲ್ಬಾವಣಿಗೆ ಹಾಕಿದ್ದ ಶೀಟ್‌ ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ. ಎಂ. ಸಂಜೀವ್, ಸಿಬ್ಬಂದಿ ಸುರೇಶ್, ಜಯ ಮೂಲ್ಯ ಕೇಶವ್, ಸುಜಯ್, ವಿನಾಯಕ್ ಪಾಲ್ಗೊಂಡು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More

ಬೆಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಸಂಚಿಗೆ ಸಂಬಂಧಿಸಿ ಕೆ.ಇಸ್ಮಾಯಿಲ್‌ ಶಫಿ, ಕೆ.ಮೊಹಮ್ಮದ್‌ ಇಕ್ಬಾಲ್ ಹಾಗೂ ಎಂ.ಶಾಹೀದ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕಳೆದ ವರ್ಷ ಜು. 26 ರಂದು ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಹಲವರ ಬಂಧನ ನಡೆದಿತ್ತು.

Read More

ನವದೆಹಲಿ: ಕೆಲ ತಿಂಗಳ ಹಿಂದಷ್ಟೇ ಉಜ್ವಲ್ ಯೋಜನೆಯ ಎಲ್ ಪಿಜಿ ಸಿಲಿಂಡರ್ ಸಬ್ಸಿಡಿ ದರವನ್ನು 200ರೂ.ಗೆ ಕೇಂದ್ರ ಸರ್ಕಾರ ಹೆಚ್ಚಳ ಮಾಡಿ ಸಿಹಿಸುದ್ದಿ ನೀಡಿತ್ತು. ಇಂದು ಮತ್ತೆ 200 ರೂಗಳಿಂದ 300 ರೂ.ಗಳಿಗೆ ಹೆಚ್ಚಳ ಮಾಡಿ ಭರ್ಜರಿ ಗುಡ್ ನ್ಯೂಸ್ ಅನ್ನು ಉಜ್ವಲ್ ಯೋಜನೆ ಫಲಾನುಭವಿಗಳಿಗೆ ನೀಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಸಬ್ಸಿಡಿ ಮೊತ್ತವನ್ನು ಪ್ರತಿ ಎಲ್ಪಿಜಿ ಸಿಲಿಂಡರ್ಗೆ 200 ರೂ.ಗಳಿಂದ 300 ರೂ.ಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಬುಧವಾರ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು. ರಕ್ಷಾ ಬಂಧನದ ಸಂದರ್ಭದಲ್ಲಿ, ಎಲ್ಪಿಜಿ ಬೆಲೆಯಲ್ಲಿ 200 ರೂ.ಗಳ ಕಡಿತವನ್ನು ಘೋಷಿಸಲಾಯಿತು, ಇದು ಎಲ್ಪಿಜಿ ದರವನ್ನು 1100 ರೂ.ಗಳಿಂದ 900 ರೂ.ಗೆ ಇಳಿಸಲು ಕಾರಣವಾಯಿತು. ಇಂದು, ಉಜ್ವಲ ಯೋಜನೆಯ ಫಲಾನುಭವಿಗಳು ಈಗ 200 ರೂ.ಗಳ ಬದಲು 300 ರೂ.ಗಳ ಸಬ್ಸಿಡಿಯನ್ನು ಪಡೆಯುವ ಹೊಸ ಘೋಷಣೆಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Read More