ಮಂಗಳೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿಗೆ ಮೇ 7ರಂದು(ಇಂದು) ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಇನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ ಭಂಡಾರಿ ತಿಳಿಸಿದ್ದಾರೆ.
Author: main-admin
ಲಾಹೋರ್: ನಿಯೋಜಿತ ಭಯೋತ್ಪಾದಕ ಮತ್ತು ಖಲಿಸ್ತಾನ್ ಕಮಾಂಡೋ ಫೋರ್ಸ್ (ಕೆಸಿಎಫ್) ಮುಖ್ಯಸ್ಥ ಪರಮ್‌ಜಿತ್ ಸಿಂಗ್ ಪಂಜ್ವಾರ್ ಅವರನ್ನು ಪಾಕಿಸ್ತಾನದ ಲಾಹೋರ್‌ನ ಜೋಹರ್ ಟೌನ್‌ನಲ್ಲಿ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಗುಪ್ತಚರ ಮೂಲಗಳು ಈ ಮಾಹಿತಿಯನ್ನು ದೃಢಪಡಿಸಿವೆ. ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಜೋಹರ್ ಟೌನ್‌ನಲ್ಲಿರುವ ಸೂರ್ಯಕಾಂತಿ ಸೊಸೈಟಿಯಲ್ಲಿರುವ ಅವರ ಮನೆಯ ಸಮೀಪ ಪರಮ್‌ಜಿತ್ ಸಿಂಗ್ ಪಂಜ್ವಾರ್ ಅಲಿಯಾಸ್ ಮಲಿಕ್ ಸರ್ದಾರ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ ಅವರ ಬಂದೂಕುಧಾರಿ ಗಾಯಗೊಂಡಿದ್ದಾರೆ. ಪಂಜ್ವಾರ್ ಗ್ರಾಮದಲ್ಲಿ ಜನಿಸಿದ 59 ವರ್ಷದ ಪರಮ್‌ಜಿತ್ ಸಿಂಗ್ ಪಂಜ್ವಾರ್, ಸಿಖ್ ದಂಗೆ, ಕೊಲೆ, ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯನ್ನು ಪುನರುಜ್ಜೀವನಗೊಳಿಸುವಲ್ಲಿ ತೊಡಗಿಸಿಕೊಂಡಿದ್ದ. ಸಿಂಗ್ 1986 ರಲ್ಲಿ ಕೆಸಿಎಫ್‌ಗೆ ಸೇರಿದ್ದ, ಅದಕ್ಕೂ ಮೊದಲು ಅವರು ಸೋಹಾಲ್‌ನ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ. ಪಂಜ್ವಾರ್ 1990ರ ದಶಕದಲ್ಲಿ ಕೆಸಿಎಫ್‌ನ ಉಸ್ತುವಾರಿ ವಹಿಸಿಕೊಂಡಿದ್ದ. ಹೆಂಡತಿ ಮತ್ತು ಮಕ್ಕಳು ಜರ್ಮನಿಗೆ ಸ್ಥಳಾಂತರಗೊಂಡಾಗ ಲಾಹೋರ್‌ನಲ್ಲಿಯೇ ಸಿಂಗ್ ವಾಸಿಸುತ್ತಿದ್ದ.…
ಮುಂಬೈ: ಹಣಕಾಸು ಬಿಕ್ಕಟ್ಟಿನ ಕಾರಣ ‘ಗೋ ಫಸ್ಟ್’ ವಿಮಾನಯಾನ ಕಂಪನಿಯು ಮೇ. 12ರವರೆಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ. ಕಾರ್ಯಾಚರಣೆಯ ಕಾರಣಗಳಿಂದಾಗಿ 2023 ರ ಮೇ 12 ರವರೆಗೆ ನಿಗದಿಯಾಗಿದ್ದ ಎಲ್ಲಾ ಗೋ ಫಸ್ಟ್ ವಿಮಾನಗಳ ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಟ್ವೀಟ್‌ನಲ್ಲಿ ತಿಳಿಸಿದೆ. ವಾಡಿಯಾ ಸಮೂಹ-ಮಾಲೀಕತ್ವದ ವಿಮಾನಯಾನ ಕಂಪನಿ, ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮುಂದೆ ಸ್ವಯಂಪ್ರೇರಿತ ದಿವಾಳಿತನ ಪರಿಹಾರ ಪ್ರಕ್ರಿಯೆಗಾಗಿ ಮನವಿ ಸಲ್ಲಿಸಿತ್ತು ಮತ್ತು ನ್ಯಾಯಮಂಡಳಿ ಮೇ.4 ರಂದು ತನ್ನ ಆದೇಶವನ್ನು ಕಾಯ್ದಿರಿಸಿತು. ಆರಂಭದಲ್ಲಿ ಮೇ 3 ರಿಂದ ಎಲ್ಲಾ ವಿಮಾನಗಳ ಸೇವೆಯನ್ನು ‘ಗೋ ಫಸ್ಟ್’ ವಿಮಾನಯಾನ ಕಂಪನಿ ರದ್ದುಗೊಳಿಸಿತ್ತು. ನಂತರ ನಂತರ ಅದನ್ನು ಮೇ 9 ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಮತ್ತೆ ಮೇ 12 ರವರೆಗೆ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ವಿಮಾನಯಾನ ಸಂಸ್ಥೆಯು ಮೇ 15 ರವರೆಗೆ ಟಿಕೆಟ್‌ಗಳ ಮಾರಾಟವನ್ನು ಸ್ಥಗಿತಗೊಳಿಸಿದೆ ಎಂದು ವಿಮಾನಯಾನ ನಿಯಂತ್ರಕ ಡಿಜಿಸಿಎ ಗುರುವಾರ ಹೇಳಿತ್ತು. ಸಂಬಂಧಿತ ನಿಯಮಾವಳಿಗಳಲ್ಲಿ ಪ್ರಯಾಣಿಕರಿಗೆ ಮರುಪಾವತಿ…
ಗುವಾಹಟಿ : ಮಣಿಪುರದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ನಡೆದ ಹಿಂಸಾಚಾರಕ್ಕೆ ಇಂಫಾಲ್‌ನಲ್ಲಿ ನಿಯೋಜನೆಗೊಂಡ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಕಂದಾಯ ಸೇವಾ ಸಂಘ ಶುಕ್ರವಾರ ತಿಳಿಸಿದೆ. ಇಂಫಾಲ್‌ನಲ್ಲಿ ತೆರಿಗೆ ಸಹಾಯಕರಾದ Sh. ಲೆಟ್ಮಿಂಥಾಂಗ್ ಹಾಕಿಪ್ ಅವರ ಸಾವಿಗೆ ಕಾರಣವಾದ ಹಿಂಸಾಚಾರದ ಭೀಕರ ಕೃತ್ಯವನ್ನು ಸಂಘ ಬಲವಾಗಿ ಖಂಡಿಸುತ್ತದೆ. ಯಾವುದೇ ಸಿದ್ಧಾಂತ ಕರ್ತವ್ಯದಲ್ಲಿದ್ದ ಅಮಾಯಕ ಅಧಿಕಾರಿಯ ಹತ್ಯೆಯನ್ನು ಸಮರ್ಥಿಸುವುದಿಲ್ಲ” ಇತ್ತೀಚಿನ ಟ್ವೀಟ್‌ನಲ್ಲಿ ಸಂಘ ಹೇಳಿದೆ. ಇನ್ನು ಮಣಿಪುರ ಹಿಂಸಾಚಾರವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ 355ನೇ ವಿಧಿ ಜಾರಿಗೊಳಿಸಿ, ಭದ್ರತೆಯ ಸಂಪೂರ್ಣ ಹೊಣೆ ವಹಿಸಿಕೊಂಡಿದೆ. 355ನೇ ವಿಧಿಯು ಆಂತರಿಕ ಅಡಚಣೆಗಳು ಮತ್ತು ಬಾಹ್ಯ ಆಕ್ರಮಣಗಳ ವಿರುದ್ಧ ರಾಜ್ಯವನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಕೇಂದ್ರಕ್ಕೆ ಅಧಿಕಾರ ನೀಡುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲು ಕರ್ನಾಟಕ ಚುನಾವಣಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ ಗುರುವಾರ ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ…
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ನಡೆಸುತ್ತಿರುವ ಮೆಗಾ ರೋಡ್ ಶೋಗೆ ಭಾರೀ ಜನಬೆಂಬಲ ವ್ಯಕ್ತವಾಗಿದೆ. ರಸ್ತೆಯ ಎರಡೂ ಕಡೆ ಲಕ್ಷಾಂತರ ಜನ ನಿಂತು ಮೋದಿಯವರತ್ತ ಕೈಬೀಸುತ್ತಾ ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ. ಮಹಿಳೆಯರು, ಮಕ್ಕಳೂ ಮೋದಿಯವರನ್ನು ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಸೇರಿರುವುದು ವಿಶೇಷ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ದಾರಿಯುದ್ದಕ್ಕೂ ಅಭಿಮಾನಿಗಳು ಹೂವಿನ ಸುರಿಮಳೆ ಸುರಿಸುತ್ತಿದ್ದಾರೆ. ಮೋದಿ ಜನರತ್ತ ಕೈ ಮುಗಿಯುತ್ತಿದ್ದಾರೆ. ರೋಡ್ ಶೋ ಸಾಗುತ್ತಿರುವ ರಸ್ತೆಗಳಲ್ಲಿ ಅಲ್ಲಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯುತ್ತಿವೆ. ಮೋದಿಯವರಿಗೆ ಜೈಕಾರ ಹಾಕುತ್ತಿದ್ದಾರೆ. ಪ್ರಧಾನಿಯವರ ರೋಡ್ ಶೋ ಸಾಗುತ್ತಿರುವ ಮಾರ್ಗಗಳಲ್ಲಿ ಜನರ ಓಡಾಟಕ್ಕೆ, ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಜೆಪಿ ನಗರದ ಸೋಮೇಶ್ವರ ಸಭಾಭವನದಿಂದ ಹೊರಟ ಪ್ರಧಾನಿ ಮೋದಿ ರೋಡ್ ಶೋ ಭಾರೀ ಭದ್ರತೆಯೊಂದಿಗೆ ಸಾಗುತ್ತಿದೆ. ಪ್ರಧಾನಿ ಮೋದಿಯವರಿಗೆ ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಜತೆಯಾಗಿದ್ದಾರೆ. ಚಾಮರಾಜಪೇಟೆ, ರಾಜಾಜಿನಗರ, ವಿಜಯನಗರ, ಬಸವೇಶ್ವರ ನಗರ ಹಾಗೂ…
ಉಡುಪಿ : ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಮೇ 8 ರಂದು ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಮತದಾನವು ಮೇ 10 ರಂದು ನಡೆಯಲಿದ್ದು, ಚುನಾವಣೆಯು ಮುಕ್ತ , ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಯಬೇಕಾದ ಹಿನ್ನಲೆ, ಮತದಾನದ ಅಂತ್ಯದ 48 ಗಂಟೆ ಮುಂಚಿತವಾಗಿ ಯಾವುದೇ ರೀತಿಯ ಬಹಿರಂಗ ಪ್ರಚಾರಗಳನ್ನು ಕೈಗೊಳ್ಳಲು ಅನುಮತಿ ಇರುವುದಿಲ್ಲ, ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರಲ್ಲದವರು ನಿಗಧಿತ ಸಮಯಕ್ಕಿಂತ ಮುಂಚೆ ಹೊರಹೋಗಬೇಕು ಎಂದರು ಯಾವುದೆ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ ಅಥವಾ ಅಧಿಕೃತ ಅಭ್ಯರ್ಥಿಗಳ ಪ್ರಚಾರಕ್ಕಾಗಿ ವಿಧಾನಸಭಾ ಕ್ಷೇತ್ರದ ಹೊರಗಿನಿಂದ ಬಂದು ಉಳಿದುಕೊಂಡಿದ್ದಲ್ಲಿ ಅಂತಹವರು ನಿಗಧಿಪಡಿಸಿರುವ ಕಾಲಕ್ಕಿಂತ ಮುಂಚೆ ಕ್ಷೇತ್ರದಿಂದ…
ಪುತ್ತೂರು: ಇಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರ ಪುತ್ತೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಅವರ ಆಗಮನದ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಪುತ್ತೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದು, ನಗರದ ಹೊರವಲಯದ ಮೊಟ್ಟೆತ್ತಡ್ಕ ಎಂಬಲ್ಲಿರುವ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದಾರೆ. ಬಳಿಕ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ದೇವಳದ ಬಳಿಯಲ್ಲಿರುವ ಮುಖ್ಯ ಅಂಚೆ ಕಚೇರಿ ಬಳಿಯಿಂದ ಕಿಲ್ಲೆ ಮೈದಾನದ ತನಕ ರೋಡ್ ಶೋ ನಡೆಸಲಿದ್ದಾರೆ. ಅಂಚೆ ಕಚೇರಿ ಬಳಿಯಿಂದ ಹೊರಟು ಕೋರ್ಟ್ ರಸ್ತೆಯಾಗಿ ಸಾಗಿ ಕಿಲ್ಲೆ ಮೈದಾನದ ತನಕ ಜಾಥಾ ನಡೆಯಲಿದೆ.ಇನ್ನು ಆದಿತ್ಯನಾಥ್ ಆಗಮನದ ಹಿನ್ನಲೆಯಲ್ಲಿ ಸಾರ್ವಜನಿಕ ಸುಗಮ ಸಂಚಾರ ವ್ಯವಸ್ಥೆಯ ದೃಷ್ಠಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ವಾಹನ ಪಾರ್ಕಿಂಗ್ ಹಾಗೂ ವಾಹನಗಳು ಬದಲಿ ರಸ್ತೆ ಮಾರ್ಗದ ಮೂಲಕ ಸಂಚರಿಸುವಂತೆ ದ.ಕ. ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.…
ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ. ಪ್ರವೀಣ್ ಚಂದ್ರ ನಾಯಕ್ (45) ಮೃತಪಟ್ಟ ವ್ಯಕ್ತಿ. ಇನ್ನು ಪ್ರವೀಣ್ ಅವರು ವೃತ್ತಿಯಲ್ಲಿ ಛಾಯಗ್ರಾಹಕನಾಗಿದ್ದು, ಪಕ್ಷದ ಕ್ರಿಯಾಶೀಲ ಕಾರ್ಯಕರ್ತನಾಗಿದ್ದರು ಎನ್ನಲಾಗಿದೆ. ಪ್ರಗತಿ ಪರ ಕೃಷಿಕನಾಗಿಯೂ ಗುರುತಿಸಿಕೊಂಡಿದ್ದ ಪ್ರವೀಣ್ ಅವರು ಇಂದು ಚುನಾವಣಾ ಪ್ರಚಾರದ ವೇಳೆ ತಲೆ ಸುತ್ತು ಕಂಡು ನೆಲಕ್ಕೆ ಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮಂಗಳೂರು: ಪ್ರಸಕ್ತ ಋತುವಿನ ಏಳನೇ ವಿಹಾರ ನೌಕೆ ‘ಎಂವಿ ಇನ್‌ಸಿಗ್ನಿಯಾ’ ಬುಧವಾರ ನವಮಂಗಳೂರು ಬಂದರಿಗೆ ಆಗಮಿಸಿದೆ. ಮಾರ್ಷಲ್ ಐಲ್ಯಾಂಡ್ ಫ್ಲ್ಯಾಗ್ಡ್ ಹಡಗು ಒಟ್ಟು 466 ಪ್ರಯಾಣಿಕರು ಮತ್ತು 399 ಸಿಬ್ಬಂದಿ ಒಳಗೊಂಡಿತ್ತು. ಈ ಹಡಗಿನ ಒಟ್ಟಾರೆ ಉದ್ದವು 180.05 ಮೀಟರ್ ಆಗಿದ್ದು, 30,277 ಒಟ್ಟು ಟನ್ನೇಜ್ ಸಾಗಿಸುವ ಸಾಮರ್ಥ್ಯ ಮತ್ತು 6 ಮೀಟರ್ ಡ್ರಾಫ್ಟ್ ಹೊಂದಿದೆ. ಮಿಯಾಮಿಯಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಓಷಿಯಾನಿಯಾ ಕ್ರೂಸಸ್, ಹಡಗಿನ ಮಾಲೀಕತ್ವವನ್ನು ನಿರ್ವಹಿಸುತ್ತಿದೆ. ನಾರ್ವೇಜಿಯನ್ ಕ್ರೂಸ್ ಲೈನ್‌ನ ಅಂಗಸಂಸ್ಥೆಯಾಗಿದೆ. ಫುಜೈರಾ ಮತ್ತು ಮುಂಬೈ ಬಂದರುಗಳಿಂದ ನೌಕಾಯಾನ ಮಾಡುವ ಹಡಗಿನ ಕೊನೆಯ ಬಂದರು ಗೋವಾದ ಮೊರ್ಮುಗೋ ಬಂದರು. ಮಂಗಳೂರಿನಿಂದ ಹೊರಡುವ ಹಡಗು ನಂತರ ಕೊಚ್ಚಿನ್ ಬಂದರಿಗೆ ಪ್ರಯಾಣಿಸಲಿದೆ. “ಹೋಲ್ಡಿಂಗ್ಸ್ ಲಿಮಿಟೆಡ್”, ಪ್ರಮುಖ ಜಾಗತಿಕ ಕ್ರೂಸ್ ಬ್ರಾಂಡ್‌ಗಳ ವೈವಿಧ್ಯಮಯ ಕ್ರೂಸ್ ಆಪರೇಟರ್, ಇದರಲ್ಲಿ ನಾರ್ವೇಜಿಯನ್ ಕ್ರೂಸ್ ಲೈನ್, ಓಷಿಯಾನಿಯಾ ಕ್ರೂಸಸ್ ಮತ್ತು ರೀಜೆಂಟ್ ಸೆವೆನ್ ಸೀಸ್ ಕ್ರೂಸಸ್ ಗಳು ಸೇರಿವೆ. ಹಡಗಿನಿಂದ ಇಳಿಯುವಾಗ ಕ್ರೂಸ್ ಪ್ರಯಾಣಿಕರಿಗೆ ಡ್ರಮ್ ಬಾರಿಸುವ…
ಮುಂಬೈ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜ್ಞಾನಿಯೊಬ್ಬ ತನ್ನ ಎಲ್ಲಾ ಮಾಹಿತಿಯನ್ನು ಪಾಕಿಸ್ತಾನಿ ಏಜೆಂಟ್‍ಗೆ ನೀಡಿರುವ ಆರೋಪದ ಮೇಲೆ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದ್ದಾರೆ. ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನ ಗುಪ್ತಚರ ಏಜೆಂಟ್‍ನೊಂದಿಗೆ ಸಂಪರ್ಕದಲ್ಲಿದ್ದು ಹನಿಟ್ರ್ಯಾಪ್ ಮೂಲಕ ಆರೋಪಿಯನ್ನು ಬೆದರಿಸಿ ಈ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು ಎನ್ನಲಾಗಿದ್ದು, ಈ ಎಲ್ಲಾ ಮಾಹಿತಿಗಳು ತನಿಖೆಯ ನಂತರ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಪಾಕಿಸ್ತಾನಿ ದೇಶಗಳಿಗೆ ತನ್ನ ಬಳಿಯಿರುವ ಎಲ್ಲಾ ರಹಸ್ಯ ಮಾಹಿತಿಗಳನ್ನು ನೀಡಿ ದೇಶದ ಭದ್ರತೆಗೆ ಅಪಾಯವನ್ನು ತರಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆರೋಪಿಯ ವಿರುದ್ಧ ಮುಂಬೈನ ಕಲಾಚೌಕಿ ಎಟಿಎಸ್ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.










