ಪೂಂಜಾಲಕಟ್ಟೆ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತಶ್ವರಿಪದವು ನಿವಾಸಿ ಸದಾನಂದ ಪೂಜಾರಿ ಮಗ ಸಂಕೇತ್ (28) ಎಂದು ಗುರುತಿಸಲಾಗಿದೆ. ಈತನನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ನಿಷೇಧಿತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದ. ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
Author: main-admin
ನವದೆಹಲಿ: ಬ್ಲೂಫಿಲಂಗಳ ನಿಷೇಧ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಗೆ ಮನ್ನಣೆ ನೀಡಲು ಹಿಂದೇಟು ಹಾಕಿರುವ ಸುಪ್ರೀಂ ಕೋರ್ಟ್, ನೇಪಾಳದಲ್ಲಿ ಸೋಷಿಯಲ್ ಮೀಡಿಯಾ ನಿಷೇಧದ ವಿರುದ್ಧ ಉಂಟಾಗಿದ್ದ ಜೆನ್‌ಝೀ ದಂಗೆಯನ್ನು ಉದಾಹರಣೆಯಾಗಿ ನೀಡಿದೆ.‘ನೇಪಾಳದಲ್ಲಿ ನಿಷೇಧ ಹೇರಲು ಯತ್ನಿಸಿದಾಗ ಏನಾಯಿತು ಎಂದು ಗೊತ್ತಿದೆಯಲ್ಲವೇ?’ ಎಂದು ಹೇಳಿದೆ. ಅಲ್ಲದೆ, ‘ಆನ್‌ಲೈನ್ ಕಂಟೆಂಟ್ ನಿಷೇಧವು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ’ ಎಂದು ಅಭಿಪ್ರಾಯಪಟ್ಟಿದೆ. ಆದಾಗ್ಯೂ ವಿಚಾರಣೆಯನ್ನು 4 ವಾರಗಳ ಕಾಲ ಮುಂದೂಡಿದೆ. ‘ಪೋರ್ನ್ ಚಿತ್ರಗಳ ವೀಕ್ಷಣೆಯಿಂದ ವ್ಯಕ್ತಿ, ವಿಶೇಷವಾಗಿ 13ರಿಂದ 18ರ ಹರೆಯದವರು ಮತ್ತು ಸಮಾಜದ ಮೇಲೆ ಕೆಟ್ಟ ಪರಿಣಾಮಗಳಾಗುತ್ತಿವೆ. ಅಂತಹ ದೃಶ್ಯಗಳು ಜನರಿಗೆ ಸುಲಭವಾಗಿ ಸಿಗುವುದನ್ನು ತಡೆಯಲು ಯಾವುದೇ ಕ್ರಮಗಳಿಲ್ಲ. ಅಶ್ಲೀಲ ಚಿತ್ರಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ನೀತಿ ರೂಪಿಸಬೇಕು’ ಎಂದು ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಸಿಜೆಐ ನ್ಯಾ। ಬಿ.ಆರ್. ಗವಾಯಿ ಅವರ ಪೀಠ, ‘ಬ್ಯಾನ್‌ನಿಂದಾಗಿ ನೇಪಾಳದಲ್ಲಿ ಏನಾಯಿತು ನೋಡಿ’ ಎಂದು ಅಲ್ಲಿ ನಡೆದ ಜೆನ್‌ಝೀ ದಂಗೆಯನ್ನು ಉಲ್ಲೇಖಿಸಿದರು ಹಾಗೂ ‘ಆನ್‌ಲೈನ್ ಕಂಟೆಂಟ್…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ಅತಿಥಿ ಗೃಹದ ಕೊಠಡಿಯನ್ನು ಕಾಯ್ದಿರಿಸುವುದಾಗಿ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಸ್ಥಾನದ ಅಧಿಕೃತ ವೆಬ್‌ಸೈಟ್ http://karnatakatemplesaccommodation.com ಇದರ ಬದಲಿಗೆ ವೆಬ್‌ಸೈಟನ್ನು ತೆರೆದು, ನಕಲಿ ವೆಬ್‌ಸೈಟ್ karnataka temple accommodation ಮೂಲಕ ಲಲಿತಾಂಬಿಕಾ ಅತಿಥಿ ಗ್ರಹದ ಕೊಠಡಿಯನ್ನು ಕಾಯ್ದಿರಿಸುವುದಾಗಿ ನಂಬಿಸಿ, ಕ್ಯೂ ಆರ್‌ಕೋಡ್ ಮೂಲಕ ಹಣ ಪಡೆದು ವಂಚಿಸಲಾಗಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ದೂರು ನೀಡಲಾಗಿದೆ. ಅದರಂತೆ ಕೊಲ್ಲೂರು ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 53/2025 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿದೆ.
ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ -2015 ಸೆಕ್ಷನ್ 80 ಮತ್ತು 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ. 1.00 ಲಕ್ಷಗಳವರೆಗೆ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಂದ 7 ವರ್ಷಗಳವರೆಗೆ ವಿಧಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡು ಬಂದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಲ್ಕೋಳ, ಶಿವಮೊಗ್ಗ ದೂ.ಸಂ.: 08182-295709 ಇಲ್ಲಿಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
ಮಂಗಳೂರು : ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭ ದೊರೆಯುವುದಾಗಿ ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಸೆ.9ರಂದು ಫೇಸ್‌ಬುಕ್ ನೋಡುತ್ತಿರುವಾಗ ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ಸ್ ರಿಕ್ವೆಸ್ಟ್ ಬಂದಿದೆ. ಅದನ್ನು ಅಕ್ಸೆಪ್ಟ್ ಮಾಡಿ ಅವರೊಂದಿಗೆ ಚಾಟ್ ಮಾಡಿದ್ದಾರೆ. ಆಕೆ ತಾನು ಮುಂಬಯಿನಲ್ಲಿ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದು, ಅದರಿಂದ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿದ್ದಾಳೆ. ಇದರಿಂದ ಆಸಕ್ತಿಗೊಂಡು ಟ್ರೇಡಿಂಗ್‌ನಲ್ಲಿ ಕೆಲಸ ಮಾಡಲು ಒಪ್ಪಿದ ದೂರುದಾರಿಗೆ ಅನಂತರ ಕಾವ್ಯ ಶೆಟ್ಟಿ ತನ್ನ ವಾಟ್ಸಾಪ್ ನಂಬರ್‌ನಿಂದ ಲಿಂಕ್ ಕಳುಹಿಸಿ ಅದಕ್ಕೆ ಸೇರುವಂತೆ ತಿಳಿಸಿದ್ದಾಳೆ. ಲಿಂಕ್ ಒತ್ತಿದಾಗ ಟ್ರೇಡಿಂಗ್ ಆ್ಯಪ್ ತೆರೆದುಕೊಂಡಿದೆ. ಬಳಿಕ ಹೆಸರು, ಮೇಲ್ ಐಡಿ ಹಾಗೂ ವೈಯಕ್ತಿಕ ವಿವರಗಳನ್ನು ನಮೂದಿಸಿದ್ದಾರೆ. ಬಳಿಕ ಟ್ರೇಡಿಂಗ್‌ನಲ್ಲಿ ಷೇರ್ ಖರೀದಿಸಲು 40,000 ರೂ. ಪಾವತಿ ಮಾಡಲು ತಿಳಿಸಿದಂತೆ ಸೆ.13ರಂದು ಪಾವತಿ ಮಾಡಿದ್ದು, ಲಾಭಾಂಶವಾಗಿ 9,504 ರೂ. ಹಣ ಖಾತೆಗೆ ಜಮೆಯಾಗಿದೆ. ಅನಂತರ 2,00,000 ರೂ.…
ಪುತ್ತೂರು: ಮಾಣಿ ಸಮೀಪದ ಕೊಡಾಜೆಯಲ್ಲಿ ಓಮ್ನಿ ಕಾರು ಪಲ್ಟಿಯಾಗಿ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ. ಕುಶಾಲನಗರ ಮೂಲದ ಕುಟುಂಬವಿದ್ದ ಓಮ್ನಿ ಕಾರು ಮಂಗಳೂರಿನಿಂದ ಬರುತ್ತಿದ್ದ ವೇಳೆ ಕೊಡಾಜೆಯಲ್ಲಿ ವೀಲ್ ತುಂಡಾಗಿ ರಸ್ತೆ ಸಮೀಪದ ಹೊಂಡಕ್ಕೆ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಐವರು ಪ್ರಯಾಣಿಕರಲ್ಲಿ ವಾಹನ ಚಾಲನೆ ಮಾಡುತ್ತಿದ್ದ ವ್ಯಕ್ತಿಯ ಕಾಲಿಗೆ ಗಂಭೀರ ಗಾಯವಾಗಿದೆ. ಇತರರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದಾಗಿ ಕಾರು ಜಖಂಗೊಂಡಿದ್ದು, ಕಾರಿನೊಳಗೆ ಸಿಲುಕಿದವರನ್ನು ಸ್ಥಳೀಯ ಯುವಕರ ಸಹಾಯದಿಂದ ಹೊರತೆಗೆಯಲಾಯಿತು. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮಂಗಳೂರು: ನಗರ ಹೊರವಲಯದ ಅಡ್ಯಾರ್ ಪದವು ಎಂಬಲ್ಲಿನ ಮನೆಯೊಂದರಲ್ಲಿ ರವಿವಾರ ಸಂಜೆ ಎಸಿ ಸ್ಫೋಟಗೊಂಡು ಅಪಾರ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಫೈಝಲ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಕೃತ್ಯ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ ಮತ್ತು ಮನೆಗೆ ಬೀಗ ಹಾಕಲಾಗಿತ್ತು ಎನ್ನಲಾಗಿದೆ. ಸಂಜೆಯ ವೇಳೆಗೆ ಮನೆಯೊಳಗಿನಿಂದ ಹೊಗೆ ಹೊರಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ತಕ್ಷಣ ಮನೆಯ ಬಾಗಿಲು ಮುರಿದು ಒಳಹೊಕ್ಕಿ ಬೆಂಕಿ ನಂದಿಸಿರುವುದಾಗಿ ತಿಳಿದು ಬಂದಿದೆ. ಫೈಝಲ್ ಅವರು ಬೇರೊಂದು ಮನೆಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಈ ಮನೆಯಲ್ಲಿ ಮತ್ತೆ ವಾಸಿಸಲು ಬೇಕಾದ ಸಿದ್ಧತೆ ಮಾಡಿಕೊಂಡಿದ್ದರು. ಅದರಂತೆ ನಾಲೈದು ದಿನದ ಹಿಂದೆ ಎಸಿ ಅಳವಡಿಸಿದ್ದರು ಎನ್ನಲಾಗಿದೆ. ರವಿವಾರ ಸಂಜೆ ಈ ಎಸಿ ಸ್ಪೋಟಗೊಂಡಿದೆ. ಮನೆಯ ಬಾಗಿಲು ಮುಚ್ಚಲ್ಪಟ್ಟ ಕಾರಣ ಹೊಗೆ ಆವರಿಸಿದೆ, ಬೆಂಕಿ ಕಾಣಿಸಿದೆ. ಇದರಿಂದ ಪೀಠೋಪಕರಣಗಳು, ಬಟ್ಟೆಬರೆ, ನಗದು, ಪಾಸ್‌ಪೋರ್ಟ್ ಸಹಿತ ಮನೆಯ ಬೆಲೆ ಬಾಳುವ ಸಾಮಗ್ರಿಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.
ಕಾರ್ಕಳ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಕೆರೆಕಟ್ಟೆ ಬಳಿ ಇಬ್ಬರು ರೈತರ ಪ್ರಾಣವನ್ನು ಬಲಿ ಪಡೆದಿದ್ದ ಕಾಡು ಆನೆಯನ್ನು ಅರಣ್ಯ ಇಲಾಖೆ ಎರಡು ದಿನಗಳ ವ್ಯಾಪಕ ಕಾರ್ಯಾಚರಣೆಯ ನಂತರ ಕೊನೆಗೂ ಸೆರೆಹಿಡಿಯಲಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಭಾಗವತಿ ಪ್ರಕೃತಿ ಶಿಬಿರದ ಬಳಿಯ ಕಾಡಿನಲ್ಲಿ ಒಂಟಿ ಆನೆ ಅಡಗಿತ್ತು. ಮಂಗಳೂರು ಅರಣ್ಯ ವಿಭಾಗ ಮತ್ತು ಕುದುರೆಮುಖ ವನ್ಯಜೀವಿ ವಿಭಾಗದ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಈ ಬೃಹತ್ ಸೆರೆಹಿಡಿಯುವ ಕಾರ್ಯಾಚರಣೆಯನ್ನು ನಡೆಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್, ಕೊಡಗು ಜಿಲ್ಲೆಯ ದುಬಾರೆ ಮತ್ತು ನಾಗರಹೊಳೆ ಆನೆ ಶಿಬಿರದಿಂದ ಅನುಭವಿ ತಂಡಗಳು ಮತ್ತು ಐದು ತರಬೇತಿ ಪಡೆದ ಆನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು. ಡ್ರೋನ್‌ಗಳನ್ನು ಬಳಸಿ, ಅರಣ್ಯ ಅಧಿಕಾರಿಗಳು ಕುದುರೆಮುಖದ ಗುಡ್ಡಗಾಡು ಪ್ರದೇಶದಲ್ಲಿ ವ್ಯಾಪಕ ಹುಡುಕಾಟ ನಡೆಸಿದರು. ಆನೆಯು ಬೆಳಗಿನ ಜಾವ ಭಗವತಿ ಶಿಬಿರದ ಬಳಿ ಇದ್ದು, ನಿಖರವಾದ ಯೋಜನೆಯ ನಂತರ ಭಾನುವಾರ ಸಂಜೆಯ ವೇಳೆಗೆ ಸೆರೆಹಿಡಿಯಲಾಯಿತು. 50 ಕ್ಕೂ ಹೆಚ್ಚು ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ…
ಬೆಂಗಳೂರು :ಪೊಲೀಸ್ ಇಲಾಖೆಯ ಪಿಸಿ ಹಾಗೂ ಹೆಚ್‌ಸಿ ರವರುಗಳಿಗೆ NAVY BLUE PEAK CAP ಗಳನ್ನು ವಿತರಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸೆಬಲ್ ಮತ್ತು ಹೆಡ್ ಕಾನ್ಸಬಲ್ ರವರುಗಳಿಗೆ ನೀಡಲಾಗುತ್ತಿರುವ ಖಾಕಿ ಗ್ಲೋಚ್ ಹ್ಯಾಟ್ ಬದಲಿಗೆ NAVY BLUE PEAK CAP ಗಳನ್ನು ವಿತರಿಸುವ ಕುರಿತು ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಸಹಮತಿ ನೀಡಿ ಆದೇಶಿಸಲಾಗಿದೆ. ಅದರಂತೆ, ದಿನಾಂಕ: 28.10.2025 ರಂದು ನಡೆದ ಪೊಲೀಸ್ ಸಿಬ್ಬಂದಿಗಳ ಪೀಕ್-ಕ್ಯಾಪ್ ಪರಿಚಯಮತ್ತು ವಿತರಣೆ ಸಮಾರಂಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಹಾಗೂ ಮುಖ್ಯ ಅತಿಥಿಗಳ ಉಪಸ್ಥಿತಿಯಲ್ಲಿ NAVY BLUE PEAK CAP ಗಳನ್ನು ಬಿಡುಗಡೆ ಮಾಡಲಾಗಿರುತ್ತದೆ. “ಸದರಿ ಸಮಾರಂಭದಲ್ಲಿ ಪೊಲೀಸ್ ಪ್ರಧಾನ ಕಛೇರಿ ವತಿಯಿಂದ 600 ಸಂಖ್ಯೆಯ ಪೀಕ್ ಕ್ಯಾಪ್ ಗಳನ್ನು ತಲಾ ಒಂದಕ್ಕೆ ರೂ.226/-(ತೆರಿಗೆ ಸೇರಿ) ಗಳ ವೆಚ್ಚದಲ್ಲಿ ಖರೀದಿಸಿ ವಿತರಿಸಲಾಗಿರುತ್ತದೆ. ಸರ್ಕಾರದ ವತಿಯಿಂದ ನೀಡಿಲಾದ ಆದೇಶದಂತೆ, ಇಲಾಖೆಯ ಎಲ್ಲಾ ಪೊಲೀಸ್ ಕಾನ್ಸಬಲ್…
ಕೇರಳ: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗೆ ನ್ಯಾಯಾಂಗ ನಿಂದನೆ ಆರೋಪದಡಿ 2 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿ ಶ್ರೀ ದೇವನ್ ರಾಮಚಂದ್ರನ್ ಅವರಿದ್ದ ನ್ಯಾಯಪೀಠ ಈ ಶಿಕ್ಷೆ ವಿಧಿಸಿದೆ. ಅಲತ್ತೂರು ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ವಿ.ಆರ್. ರಿನೀಶ್ ವಕೀಲರೊಬ್ಬರಿಗೆ ನಿಂದಿಸಿದ ಕುರಿತಂತೆ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ. “ಕಾನೂನು ವೃತ್ತಿಪರರನ್ನು ಅಗೌರವಿಸುವ ಪರಿಣಾಮಗಳ ಬಗ್ಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಈ ತೀರ್ಪು ಎಚ್ಚರಿಕೆಯಂತಿರಬೇಕು. ಈ ಪ್ರಕರಣ ಎಲ್ಲರಿಗೂ ಉದಾಹರಣೆಯಾಗಬೇಕು” ಎಂದು ಹೈಕೋರ್ಟ್ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಹೇಳಿದೆ. ಇದೇ ವೇಳೆ, ಶಿಕ್ಷೆಯನ್ನು ಷರತ್ತಿನ ಮೇಲೆ ಅಮಾನತಿನಲ್ಲಿಟ್ಟಿರುವ ಹೈಕೋರ್ಟ್, ತಪ್ಪಿತಸ್ಥ ಪೊಲೀಸ್ ಅಧಿಕಾರಿ ಮುಂದಿನ ಒಂದು ವರ್ಷ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಬಾರದು. ಭಾಗಿಯಾದಲ್ಲಿ ಶಿಕ್ಷೆ ಜಾರಿಯಾಗಲಿದೆ ಎಂದು ಸ್ಪಷ್ಟಪಡಿಸಿದೆ. ಆಲತ್ತೂರಿನಲ್ಲಿ ಎಸ್‌ಐ ರಿನೀಶ್ ಅವರು ವಕೀಲರ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ…









