Author: main-admin

ಬೆಳ್ತಂಗಡಿ: ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೂವರು ಯುವಕರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಈ ಮೂವರು ಯುವಕರೊಂದಿಗೆ ಮೇ 20 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಜಲಪಾತಕ್ಕೆ ತೆರಳಿರುತ್ತಾರೆ. ಈ ವೇಳೆ ಯುವಕರು, ತಮ್ಮೊಂದಿಗಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುತ್ತಾರೆ.ಈ ವೇಳೆ ಸಂತ್ರಸ್ತ ಯುವತಿಯರು ಪ್ರತಿರೋಧಿಸಿದ್ದು, ಸ್ಥಳದಲ್ಲಿದ್ದ ಜನರು ಯುವಕರನ್ನು ತಡೆದು, ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುತ್ತಾರೆ. ಬಳಿಕ ಈ ಮೂವರು ಯುವಕರನ್ನು ಪೊಲೀಸರು ಬೆಳ್ತಂಗಡಿ ಠಾಣೆಗೆ ಕರೆತರಲಾಗಿದೆ.ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ:60/2026 ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ. ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.

Read More

ಮಂಗಳೂರು: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ ಗೊಳ್ಳಲಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಜೆ ಪಾಲೆಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಹಾದಿಯ ಸವಿನೆನಪಿಗಾಗಿ ಕರಾವಳಿ ಜನತೆಗೆ ಸಂದ ವಿಶಿಷ್ಟ ಕೊಡುಗೆ ಮಂಗಳೂರಿನ ನಾಲ್ಕು ಕಡೆಗಳಲ್ಲಿ ನಾಲ್ಕು ಅತ್ಯಾಧುನಿಕ ಸಭಾಂಗಣಗಳು ಉದ್ಘಾಟನೆ ಗೊಳ್ಳಲಿದೆ ಎಂದು ಪಾಲೆಮಾರ್ ತಿಳಿಸಿದ್ದಾರೆ.ಕರಾವಳಿಯ ಹೆಮ್ಮೆಯ ಹಾಗೂ ಅತ್ಯಂತ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ಲ್ಯಾಂಡ್ ಲಿಂಕ್ಸ್, ಕರಾವಳಿ ಭಾಗದಲ್ಲಿ ಕಳೆದ 45 ವರ್ಷಗಳಿಂದ ತನ್ನ ಪ್ರಾಮಾಣಿಕ ಮತ್ತು ಯಶಸ್ವಿ ಉದ್ಯಮದ ಮೂಲಕ ಲಕ್ಷಾಂತರ ಜನರ ನಂಬಿಕೆಯನ್ನು ಗಳಿಸಿದೆ. ಈ ಸುದೀರ್ಘ ಯಶಸ್ವಿ ಹಾದಿಯ ಸವಿನೆನಪಿಗಾಗಿ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ಪ್ರಪ್ರಥಮ ಬಾರಿಗೆ ಅತ್ಯಾಧುನಿಕ ಸೌಲಭ್ಯಗಳನ್ನೊಳ ಗೊಂಡ, ನಾಡಿನ ಜನತೆಗೆ ಯೋಗ್ಯವಾದ ನಾಲ್ಕು ಭವ್ಯ ಸಭಾಭವನಗಳನ್ನು ಏಕಕಾಲದಲ್ಲಿ ಲೋಕಾರ್ಪಣೆ…

Read More

ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ವಾರದ ಹಿಂದೆ ನಡೆದಿದ್ದ ಯುವತಿಯ ಕೊಲೆ ಯತ್ನ ಪ್ರಕರಣವನ್ನು ಬೇಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಮಣಿಪಾಲ- ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ವಾಗ್ಲೆ ಸ್ಟೋರ್ ಬಳಿಯಿರುವ ಮಹಿಳಾ ಪಿಜಿಯಲ್ಲಿ ವಾಸವಿದ್ದ ಅಂಕೋಲಾ ಮೂಲದ ಯೋಗಿತಾ ಎಂಬಾಕೆಯ ಕೊಲೆ ಯತ್ನ ನಡೆದಿತ್ತು. ಪಿಜಿಯಲ್ಲಿ ಒಬ್ಬಳೇ ಮಲಗಿದ್ದ ಯೋಗಿತ ತಲೆ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಮಾರಣಾಂತಿಕ ದಾಳಿ ನಡೆಸಲಾಗಿತ್ತು. ಅಲ್ಲದೇ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ ಮಣಿಪಾಲ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರ ತಂಡ ಇದೀಗ ಯುವತಿಯೊಬ್ಬಳನ್ನು ವಶಕ್ಕೆ ಪಡೆದಿದ್ದಾರೆ. ಯೋಗಿತಾ ವಾಸವಿದ್ದ ಪಿಜಿಯ ಇನ್ನೊಂದು ರೂಮಿನಲ್ಲಿ ವಾಸವಿದ್ದ ಯುವತಿ ಸುಷ್ಮಾ ನಾಯ್ಕ್ (30) ಬಂಧಿತ ಯುವತಿ. ಆರೋಪಿ ಸುಷ್ಮಾ ನಾಯ್ಕ್ ಒಬ್ಬಳೇ ಈ ಕೃತ್ಯ ಎಸಗಿರುವುದಾಗಿ ಇದೀಗ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ. ಬಂಧಿತಳಿಂದ ಚಿನ್ನದ ಸರವನ್ನು ವಶಕ್ಕೆ ಪಡೆಯಲಾಗಿದೆ. ಯುವತಿ ಯೋಗೀತಾ ಹಾಗೂ ಸುಷ್ಮಾ ನಾಯ್ಕ್ ಅಕ್ಕಪಕ್ಕದ…

Read More

ಉಡುಪಿ : ಗೌರವಾನ್ವಿತ ಲೋಕಾಯುಕ್ತರವರ 2026 ರ ಏಪ್ರಿಲ್ 23 ರ ದಿನಾಂಕ ಆದೇಶದನ್ವಯ, ಈ ಪ್ರಕರಣವನ್ನು ಇಂದು ಪರಿಶೀಲನೆಗೆ ತೆಗೆದುಕೊಳ್ಳಲಾಗಿದೆ. ಮೊದಲನೇ ಎದುರುದಾರರಾದ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯವರು ಆಡಳಿತಾತ್ಮಕ ಕಾರಣಗಳನ್ನು ನೀಡಿ ಖುದ್ದಾಗಿ ಹಾಜರಾಗುವುದರಿಂದ ವಿನಾಯಿತಿ ಕೋರಿದ್ದಾರೆ. ಅವರು ಈ ಪ್ರಾಧಿಕಾರಕ್ಕೆ ಬರೆದಿರುವ ಪತ್ರದಲ್ಲಿ, ತಮ್ಮ ಪರವಾಗಿ ಉಡುಪಿ ಜಿಲ್ಲೆಯ ಹಿರಿಯ ಭೂವಿಜ್ಞಾನಿಯಾದ ವಿಂಧ್ಯಾ ಅವರು ಅಗತ್ಯ ಮಾಹಿತಿಯೊಂದಿಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ. ದೂರುದಾರರಾದ ಶ್ರೀ ಗಣೇಶ್ ಶೆಟ್ಟಿ ಅವರು ಹಾಜರಿದ್ದರು. ದೂರಿನ ಆರೋಪಗಳಿಗೆ ಸಂಬAಧಿಸಿದAತೆ ವರದಿ ಸಲ್ಲಿಸುವಂತೆ ಉಡುಪಿ ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಲಾಗಿದ್ದರೂ, ಅವರು ಯಾವುದೇ ವರದಿಯನ್ನು ಸಲ್ಲಿಸಿರುವುದಿಲ್ಲ. ದೂರಿನಲ್ಲಿ ಮಾಡಲಾದ ಆರೋಪಗಳ ಗಂಭೀರತೆಯನ್ನು ಪರಿಗಣಿಸಿ, ಉಡುಪಿ ಜಿಲ್ಲಾಧಿಕಾರಿಯವರು ತಮ್ಮ ವರದಿಯನ್ನು ಸಲ್ಲಿಸಬೇಕಾಗಿತ್ತು. ಏಕೆಂದರೆ ಈ ವಿಷಯವು ಅಕ್ರಮ ಮರಳು ಗಣಿಗಾರಿಕೆಗೆ ಸಂಬ0ಧಿಸಿದ್ದಾಗಿದ್ದು, ಇದು ರಾಜ್ಯದ ಹಲವು ಭಾಗಗಳಲ್ಲಿ ನಡೆಯುತ್ತಿರುವ ಒಂದು ದೊಡ್ಡ ದಂಧೆ ಮತ್ತು ಹಗರಣವಾಗಿದೆ. ಮಾಡಲಾದ ಆರೋಪಗಳ ಪ್ರಕಾರ ಮರಳು ಗಣಿಗಾರಿಕೆಯ ಬಗ್ಗೆ ಮೂಡಿಬಂದಿರುವ ಆತಂಕಕಾರಿ…

Read More

ಪಂಜಾಬ್: ಕಳೆದ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಂಜಾಬಿ ಗಾಯಕಿ ಇಂದರ್ ಕೌರ್ (29) ಅವರು ಪಂಜಾಬ್‌ನ ಲೂಧಿಯಾನದ ಕಾಲುವೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇಂದರ್ ಕೌರ್ ಅವರನ್ನು ಗನ್ ತೋರಿಸಿ ಅಪಹರಣ ಮಾಡಲಾಗಿತ್ತು. ಮಂಗಳವಾರ ಮುಂಜಾನೆ ಸ್ಥಳೀಯ ಪೊಲೀಸರು ನೀಲೋ ಕಾಲುವೆಯಿಂದ ಗಾಯಕಿಯ ಶವವನ್ನು ಹೊರತೆಗೆದಿದ್ದಾರೆ. ಸುಖ್ವಿಂದರ್ ಸಿಂಗ್ ಎಂಬಾತ ಇಂದರ್ ಕೌರ್ ಅವರನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಇದೀಗ ಆತನ ಮೇಲೆಯೇ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.ಮೇ 13ರಂದು ರಾತ್ರಿ ಸುಮಾರು ೮.೩೦ಕ್ಕೆ ಇಂದರ್ ಕೌರ್ ಅವರು ತಮ್ಮ ಫೋರ್ಡ್ ಫಿಗೊ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ಖರೀದಿಸಲು ಮನೆಯಿಂದ ಹೊರಟಿದ್ದರು. ಆದರೆ ಅವರು ಮತ್ತೆ ಮನೆಗೆ ಮರಳಲೇ ಇಲ್ಲ. ಗಾಯಕಿ ನಾಪತ್ತೆಯಾದ ಬಳಿಕ ಆಕೆಯ ಸಹೋದರ ಜೋತಿಂದರ್ ಸಿಂಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇಂದರ್ ಕೌರ್ ಮತ್ತು ಆರೋಪಿ ಸುಖ್ವಿಂದರ್ ಸಿಂಗ್ ಮೂರು ವರ್ಷಗಳ ಹಿಂದೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಸ್ನೇಹಿತರಾಗಿದ್ದರು. ಆದರೆ, ಸುಖ್ವಿಂದರ್‌ನಿಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದಾರೆ ಎಂಬ ಸತ್ಯ ತಿಳಿದ…

Read More

ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್‌ (KGF) ನಗರದಲ್ಲಿ ಸಿನಿಮೀಯ ಶೈಲಿಯ ಪೊಲೀಸ್ ಕಾರ್ಯಾಚರಣೆಯೊಂದು ನಡೆದಿದೆ. ಮಗಳ ಮದುವೆ ಖರ್ಚಿಗಾಗಿ ಉದ್ಯಮಿಯೊಬ್ಬರಿಗೆ ಹೆದರಿಸಿ, ಬೆದರಿಕೆ ಹಾಕಿ ಹಪ್ತಾ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ, ಈಗಾಗಲೇ ಗಡಿಪಾರಾಗಿದ್ದ ರೌಡಿಶೀಟರ್‌ನನ್ನು ಪೊಲೀಸರು ಮದುವೆ ಮಂಟಪದಿಂದಲೇ ವಶಕ್ಕೆ ಪಡೆದಿದ್ದಾರೆ. ಕೆಜಿಎಫ್ ನಗರದ ಸುಸೈಪಾಳ್ಯಂ ಏರಿಯಾದ ನಿವಾಸಿ, ಕುಖ್ಯಾತ ರೌಡಿಶೀಟರ್ ಸ್ಟಾನ್ಲಿ ಬಂಧಿತ ಆರೋಪಿಯಾಗಿದ್ದಾನೆ. ಚರ್ಚ್‌ನಲ್ಲಿ ಮಗಳ ಮದುವೆ ಸಂಭ್ರಮದಲ್ಲಿದ್ದ ರೌಡಿಯನ್ನು ಪೊಲೀಸರು ಏಕಾಏಕಿ ಕಾರ್ಯಾಚರಣೆ ನಡೆಸಿ ಹೊತ್ತೊಯ್ದಿರುವ ದೃಶ್ಯ ಈಗ ವೈರಲ್ ಆಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮಗಳ ಮದುವೆಗೆ ಪೆಂಡಾಲ್ ಹಾಗೂ ಡೆಕೋರೇಷನ್ ಕೆಲಸ ಮಾಡಿಕೊಡುತ್ತಿದ್ದ ಅಂಗಡಿ ಮಾಲೀಕ ಮೊಹಮ್ಮದ್ ಸಕ್ಲೇನ್ ಎಂಬುವರಿಗೆ ರೌಡಿಶೀಟರ್ ಸ್ಟಾನ್ಲಿ ಭೀತಿ ಹುಟ್ಟಿಸಿದ್ದ. ತನಗೆ ಹೆದರಿಸಿ, ಬೆದರಿಕೆ ಹಾಕಿ ತನ್ನ ಮಗಳ ಮದುವೆಗೆ ಹಣ ನೀಡುವಂತೆ ಪೀಡಿಸುತ್ತಿದ್ದಾನೆ ಎಂದು ಸಂತ್ರಸ್ತ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದರು. ಈಗಾಗಲೇ ನಗರದಿಂದ ಗಡಿಪಾರಾಗಿದ್ದರೂ ಕಾನೂನು ಉಲ್ಲಂಘಿಸಿ ನಗರದೊಳಗೆ ಪ್ರವೇಶಿಸಿದ್ದಲ್ಲದೆ, ಸಾರ್ವಜನಿಕರಿಗೆ ಹಪ್ತಾ ವಸೂಲಿಗಾಗಿ ಕಿರುಕುಳ…

Read More

ನವದೆಹಲಿ: ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಮತ್ತು ಸ್ಲೀಪರ್ ಸೆಲ್ ಸ್ಥಾಪಿಸಲು ಪಾಕಿಸ್ತಾನದಿಂದ ನುಸುಳಿ ಬಂದಿದ್ದ ಲಷ್ಕರ್-ಎ-ತೊಯ್ಬಾ (LeT) ಉಗ್ರನೊಬ್ಬನ ಕರಾಳ ಮಿಷನ್ ಕೊನೆಗೂ ವಿಫಲಗೊಂಡಿದೆ. ಆದರೆ, ಆತನ ಮಿಷನ್ ವಿಫಲವಾಗಲು ಕಾರಣ ಭಾರತೀಯ ಸೇನೆಯಲ್ಲ, ಬದಲಿಗೆ ಆತನಿಗೆ ಕಾಡುತ್ತಿದ್ದ ಕೂದಲು ಉದುರುವಿಕೆ ಸಮಸ್ಯೆ ಮತ್ತು ಸುಂದರವಾಗಿ ಕಾಣಬೇಕೆಂಬ ಗೀಳು. ಮಿಷನ್ ಬಿಟ್ಟು ಕೂದಲು ಕಸಿಗೆ ಮುಂದಾದ ಉಗ್ರ ಉಸ್ಮಾನ್ ಜಟ್ ಭಾರತದಲ್ಲಿ ಭೀಕರ ವಿಧ್ವಂಸಕ ಕೃತ್ಯಕ್ಕೆ ಸ್ಲೀಪರ್ ಸೆಲ್ ಸ್ಥಾಪಿಸುವ ದೊಡ್ಡ ಜವಾಬ್ದಾರಿಯೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ಲಷ್ಕರ್ ಉಗ್ರ ಉಸ್ಮಾನ್ ಜಟ್ ಅಲಿಯಾಸ್ ಚೈನೀಸ್ ಯಶಸ್ವಿಯಾಗಿ ನುಸುಳಿದ್ದ. ಭಾರತದ ದೈನಂದಿನ ಶಾಂತಿಯುತ ಜೀವನವನ್ನು ಕಂಡ ತಕ್ಷಣ ಆತನ ಉತ್ಸಾಹ ಕುಸಿದುಹೋಗಿತ್ತು. ಇದೇ ಸಮಯದಲ್ಲಿ ಆತನಿಗೆ ತನ್ನ ತಲೆಯ ಕೂದಲು ಉದುರುತ್ತಿರುವುದು ದೊಡ್ಡ ಚಿಂತೆಯಾಗಿ ಕಾಡಲಾರಂಭಿಸಿತು. ಕೂದಲು ಉದುರುವಿಕೆಯಿಂದ ತನ್ನ ವೈಯಕ್ತಿಕ ಆತ್ಮವಿಶ್ವಾಸ ಮತ್ತು ಸ್ವಾಭಿಮಾನಕ್ಕೆ ತೀವ್ರ ಹಾನಿಯಾಗಿದೆ ಎಂದು ಒಪ್ಪಿಕೊಂಡ ಆತ, ತನಗೆ ಒಪ್ಪಿಸಿದ್ದ ದೇಶದ್ರೋಹದ ಮಹಾ ಮಿಷನ್ ಅನ್ನೇ ಬದಿಗಿಟ್ಟು,…

Read More

ಮಂಗಳೂರು : ನಗರದ ದೆರೆಬೈಲ್ ಗ್ರಾಮದ ಕೊಂಚಾಡಿ ಜಂಕ್ಷನ್‌ನಲ್ಲಿ ಕರ್ತವ್ಯ ನಿರತ ಹೊಯ್ಸಳ ಪೊಲೀಸ್ ಸಿಬ್ಬಂದಿಯ ಮೇಲೆ ಮೂವರು ವ್ಯಕ್ತಿಗಳು ಅವಾಚ್ಯ ಶಬ್ದಗಳಿಂದ ಬೈದು, ತಳ್ಳಾಡಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ವೇಳೆ ಪೊಲೀಸ್ ಸಿಬ್ಬಂದಿಯ ಎಡಗೈನ ಮಣಿಗಂಟು ಮುರಿತಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಪ್ರಸಾದ್, ಉದಯ ಮತ್ತು ಪ್ರಶಾಂತ್ ಎಂಬ ಮೂವರು ಆರೋಪಿಗಳ ವಿರುದ್ಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆ ಪ್ರಕರಣ ದಾಖಲಾಗಿದೆ. ಮೇ 17 ರಂದು ರಾತ್ರಿ ಕೊಂಚಾಡಿ ಜಂಕ್ಷನ್‌ನಲ್ಲಿರುವ ಬಾರ್ ಮತ್ತು ರೆಸ್ಟೊರೆಂಟ್‌ನಲ್ಲಿ ಗಲಾಟೆ ನಡೆಯುತ್ತಿರುವ ಬಗ್ಗೆ ಹೊಯ್ಸಳ ನಿಯಂತ್ರಣ ಕೊಠಡಿಗೆ ದೂರು ಕರೆ ಬಂದಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಹೊಯ್ಸಳ ಸಿಬ್ಬಂದಿ ಸಿಪಿಸಿ ಅಪ್ಪಣ್ಣ ಶೇಡಬಾಳ ಹಾಗೂ ಎಹೆಚ್‌ಸಿ ಭೀಮಾಶಂಕರ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಬಾರ್‌ನಿಂದ ಹೊರಬಂದಿದ್ದ ಮೂವರು ಆರೋಪಿಗಳನ್ನು ಸೆಕ್ಯೂರಿಟಿ ಸಿಬ್ಬಂದಿ ಗುರುತಿಸಿಕೊಟ್ಟಿದ್ದಾರೆ. ಪೊಲೀಸರು ಅವರನ್ನು ವಿಚಾರಿಸಲು ಹೋದಾಗ ಉಡಾಫೆ ಉತ್ತರ ನೀಡಿದ್ದಾರೆ.

Read More

ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಬೆಳ್ತಂಗಡಿ ಮತ್ತು ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನದ ಸರಣಿಯಲ್ಲಿ ಭಾಗಿಯಾಗಿದ್ದಾನೆಂದು ಶಂಕಿಸಲಾಗಿರುವ ಕೇರಳದ ಕುಖ್ಯಾತ ಶಂಕಿತನ ಬಗ್ಗೆ ಮಾಹಿತಿ ಕೋರಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.ಶಂಕಿತನನ್ನು ಕೇರಳದ ಕಣ್ಣೂರಿನ ತಳಿಪರಂಬು ನಿವಾಸಿ ತಂಗಚ್ಚ, ಅಲಿಯಾಸ್ ಮ್ಯಾಧ್ಯೂ ಅಲಿಯಾಸ್ ಬಶೀರ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಶಂಕಿತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಈಗಾಗಲೇ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾರಿಯಲ್ಲಿದೆ.ಕಳೆದ 48 ಗಂಟೆಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದರಿಂದ, ಪೊಲೀಸರು ಆತನ ಕೈವಾಡದ ಬಗ್ಗೆ ಬಲವಾಗಿ ಅನುಮಾನ ವ್ಯಕ್ತಪಡಿಸಿದ್ದು, ಆತನ ಚಲನವಲನಗಳನ್ನು ಗಮನಿಸುತ್ತಿದ್ದು, ಶಂಕಿತನ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ಈ ಕೆಳಗಿನ ಸಂಖ್ಯೆಗಳಿಗೆ ತಕ್ಷಣ ಸಂಪರ್ಕಿಸಲು ಪೊಲೀಸರು ವಿನಂತಿಸಿದ್ದಾರೆ:ಉಪ್ಪಿನಂಗಡಿ ಪೊಲೀಸ್ ಠಾಣೆ: 08251-251055, 9480805362ಬೆಳ್ತಂಗಡಿ ಪೊಲೀಸ್‌ ಠಾಣೆ: 08256-232093, 9480805370ಪುತ್ತೂರು ಪೊಲೀಸ್ ಠಾಣಾ ಉಪನಿರೀಕ್ಷಕರು: 08251-230555, 9480805361ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ: 9480805300 / 0824…

Read More

ಬೆಂಗಳೂರು: ನಗರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಅಮೆರಿಕ ನಿರ್ಮಿತ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ ಪತ್ತೆಯಾಗಿದ್ದು, ಈ ಸಂಬಂಧ ಜೆ.ಸಿ. ನಗರ ಪೊಲೀಸರು ಆರೋಪಿ ಅರ್ಮಾನ್ ಮುತಾಹರ್ ಎಂಬಾತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಯುವತಿಯೊಬ್ಬಳೊಂದಿಗೆ ಲಾಡ್ಜ್​ಗೆ ಬಂದಿದ್ದ ಆರೋಪಿ, ಪಿಸ್ತೂಲ್ ಮ್ಯಾಗಜೀನ್ ಅನ್ನು ರೂಮ್​ನಲ್ಲಿಯೇ ಬಿಟ್ಟು ಹೋಗಿದ್ದ. ಅದನ್ನು ವಾಪಸ್ ತೆಗೆದುಕೊಂಡು ಹೋಗುವಂತೆ ಪದೇ ಪದೇ ಕೇಳಿದರೂ ಸರಿಯಾಗಿ ಸ್ಪಂದಿಸದ ಕಾರಣ ಹೋಟೆಲ್ ಮ್ಯಾನೇಜರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ನಡೆದಿದ್ದೇನು?ಕಳೆದ ಏಪ್ರಿಲ್ 27ರಂದು ರಾತ್ರಿ ಆರೋಪಿ ಅರ್ಮಾನ್ ಮುತಾಹರ್ ಯುವತಿಯೊಬ್ಬಳ ಜೊತೆ ಬಂದು ಜಯಮಹಲ್ ಪ್ಯಾಲೇಸ್ ಹೋಟೆಲ್‌ನಲ್ಲಿ ರೂಂ ಒಂದನ್ನು ಬುಕ್ ಮಾಡಿದ್ದ. ಆತನೊಂದಿಗೆ ಓರ್ವ ಯುವತಿಯೂ ಅದೇ ರೂಮ್​ನಲ್ಲಿ ತಂಗಿದ್ದಳು ಎಂದು ಲಾಡ್ಜ್​ನ ಮ್ಯಾನೇಜರ್ ತಿಳಿಸಿದ್ದಾರೆ. ಗುರುತಿನ ಚೀಟಿಗಾಗಿ ತನ್ನ ಪಾಸ್‌ಪೋರ್ಟ್ ನೀಡಿದ್ದ ಆತ, ಮರುದಿನ (ಏಪ್ರಿಲ್ 28) ಬೆಳಗ್ಗೆ ಕೊಠಡಿಯಿಂದ ಚೆಕ್-ಔಟ್ ಆಗಿದ್ದ.“ಬುಲೆಟ್ ಇಟ್ಟಿದ್ದೀನಿ, ಎತ್ತಿಡಿ” ಎಂದು ಕರೆ ಮಾಡಿದ ಆರೋಪಿಹೋಟೆಲ್‌ನಿಂದ ಹೋದ ಸ್ವಲ್ಪ ಹೊತ್ತಿನ ಬಳಿಕ ರಿಸೆಪ್ಷನ್‌ಗೆ…

Read More