ಹುಬ್ಬಳ್ಳಿ : ಕೆಲವೇ ಹೊತ್ತಿನಲ್ಲೇ ಬಿಜೆಪಿಯ ಜನಪರ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಜನಪರ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತೇವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕೆಲವೇ ಹೊತ್ತಲ್ಲೇ ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಇಂದು ವರುಣ ಕ್ಷೇತ್ರದಲ್ಲಿ ನಿಗದಿಯಾಗಿದ್ದ ಸಿಎಂ ಬೊಮ್ಮಾಯಿ ಅವರ ಪ್ರವಾಸ ರದ್ದಾಗಿದೆ. ನಾಳೆ ವರುಣ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಹ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನ ವರುಣ ಪ್ರವಾಸ ರದ್ದಾಗಿದೆ.
Author: main-admin
ಗಡ್‌ಚಿರೋಲಿ (ಮಹಾರಾಷ್ಟ್ರ): ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಭಾನುವಾರ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮಾವೋವಾದಿ ದಳದ ಕಮಾಂಡರ್ ಸೇರಿದಂತೆ ಮೂವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲೆಯ ಕೆದ್ಮಾರಾ ಅರಣ್ಯದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಗಡ್‌ಚಿರೋಲಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನೀಲೋತ್‌ಪಾಲ್, “ಮನೆ ರಾಜಾರಾಂ ಮತ್ತು ಪೆರಿಮಿಲಿ ಸಶಸ್ತ್ರ ಚೌಕಟ್ಟಿನ ನಡುವಿನ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ಪೆರಿಮಿಲಿ ಮತ್ತು ಅಹೇರಿ ದಳದ ಸದಸ್ಯರು ಮೊಕ್ಕಾಂ ಹೂಡಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಜಂಗಲ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲು ಸಿ-60 ಪೋಲೀಸರ ತುಕಡಿಗಳನ್ನು ಕಳುಹಿಸಲಾಗಿದೆ. ಶೋಧ ಕಾರ್ಯಾಚರಣೆಯ ವೇಳೆ ಮಾವೋವಾದಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದರು. ನಂತರ ಪೊಲೀಸರು ಪ್ರತಿದಾಳಿ ನಡೆಸಿದರು. ಗುಂಡಿನ ಚಕಮಕಿ ನಂತ್ರ ಮೂವರು ಪುರುಷ ಮಾವೋವಾದಿಗಳ ಶವಗಳನ್ನು ಶಸ್ತ್ರಾಸ್ತ್ರಗಳು ಮತ್ತು ಇತರ ಸಾಮಗ್ರಿಗಳೊಂದಿಗೆ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
ನವದೆಹಲಿ : ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 171.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 1856.50 ರೂ. ಇದೆ. ಮೇ. 1 ರ ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 171.50 ರೂ.ಗೆ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,856.50 ರೂ.ಇದೆ ಆದಾಗ್ಯೂ, ದರಗಳ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರ. ದೇಶೀಯ ಎಲ್ಪಿಜಿ ಅನಿಲ ಗ್ರಾಹಕರಿಗೆ ಬೆಲೆಯಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ಗ್ಯಾಸ್ ಸಿಲಿಂಡರ್ಗಳ ದರಗಳು ಕಳೆದ ತಿಂಗಳಂತೆಯೇ ಉಳಿದಿವೆ. ಎಲ್ಪಿಜಿ ಬೆಲೆ, ಹೆಚ್ಚಾಗಿ ಅಂತರರಾಷ್ಟ್ರೀಯ ಕಚ್ಚಾ ಬೆಲೆಗಳ ಮೇಲೆ ಅವಲಂಬಿತವಾಗಿದೆ. ಇವುಗಳು ಹೆಚ್ಚಾದಾಗ, ಎಲ್ಪಿಜಿ ಸಿಲಿಂಡರ್ ದರಗಳು ಸಹ ಹೆಚ್ಚಾಗುತ್ತವೆ. ಬಡ ವರ್ಗಗಳಿಗೆ, ಸರ್ಕಾರವು ಈ ಬೆಲೆಗಳಿಗೆ ಸಬ್ಸಿಡಿ ನೀಡಿದೆ. ನವದೆಹಲಿಯಲ್ಲಿ ಇಂದು ಸಬ್ಸಿಡಿ ರಹಿತ…
ಪುತ್ತೂರು: ಪುತ್ತೂರಿನ ಮಂಜಲ್ಪಡ್ಪು ಬೈಪಾಸ್ ಜಂಕ್ಷನ್ ಬಳಿ ಡಿಯೋ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಭಾನುವಾರ ಮಧ್ಯಾಹ್ನ ನಡೆಯಿತು. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸಿಗೆ ಎದುರಿನಿಂದ ಬಂದ ಡಿಯೋ ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ ಹೊಡೆದಿದೆ.ಸವಾರನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಸವಾರ ಪವಾಡಸದೃಶವಾಗಿ ಪಾರಾಗಿದ್ದಾನೆ.
ಮುಡಿಪು : ಮುಡಿಪು ಜನ ಶಿಕ್ಷಣ ಟ್ರಸ್ಟ್ ನಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಮತ್ತು ಮತದಾರರ ಸ್ವಯಂ ಜಾಗೃತಿ, ಸಂಪೂರ್ಣ ಮತದಾನ ಸಂವಾದ ಸಂಕಲ್ಪ ಕಾರ್ಯಕ್ರಮ ಮೇ1 ರಂದು ಆಯೋಜಿಸಲಾಗಿದೆ. ಬೆಳಿಗ್ಗೆ 10.30 ರಿಂದ 11.30 ರ ತನಕ ಕಾರ್ಯಕ್ರಮ ನಡೆಯಲಿದೆ. ಕಾಯಕ ಯೋಗಿಗಳ ಬದುಕಿಗೆ ಬೆಳಕು ಚೆಲ್ಲುವ,, ಪ್ರಜಾಪ್ರಭುತ್ವದಲ್ಲಿ ಮತದಾರನ ಪಾತ್ರ, ಸ್ವಚ್ಛ-ಸಂಪೂರ್ಣ ಮತದಾನದ ಮಹತ್ವದ ಸಂದೇಶ ಸಾರುವ ಈ ಕಾರ್ಯಕ್ರಮದಲ್ಲಿ ನುಡಿ ಮತ್ತುಗಳು, ಶಕ್ತಿವಾಣಿಗಳು,ಕವನ,ನೃತ್ಯ ಪ್ರಸ್ತುತಿಯಿದೆ. ಜಾಗೃತ ಮತದಾರರು, ಮತದಾರರ ಜಾಗೃತಿ ವೇದಿಕೆ ಸದಸ್ಯರು, ಕೌಶಲ್ಯ ತರಭೇತಿ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಪಾಲ್ಗೊಳ್ಳುವಿಕೆಯಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮಕ್ಕೆ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲ ಸಚಿವರು, ಕುಲಪತಿಗಳ ವಿಶೇಷಾಧಿಕಾರಿಗಳು ಹಾಗೂ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳನ್ನು ಅಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪಂಜಾಬ್: ಲುಧಿಯಾನದ ಗಿಯಾಸ್ಪುರ ಪ್ರದೇಶದಲ್ಲಿ ಅನಿಲ ಸೋರಿಕೆ ಘಟನೆಯಿಂದಾಗಿ 9 ಜನರು ಸಾವನ್ನಪ್ಪಿದ್ದು, ಇತರ 10 ಜನರು ಅಸ್ವಸ್ಥರಾಗಿರುವ ಘಟನೆ ವರದಿಯಾಗಿದೆ. ಎನ್‌ಡಿಆರ್‌ಎಫ್ ತಂಡಗಳು ಕಾರ್ಖಾನೆಗೆ ಧಾವಿಸಿದ್ದು, ವೈದ್ಯರ ತಂಡ ಮತ್ತು ಅಗ್ನಿಶಾಮಕ ದಳವೂ ಸ್ಥಳಕ್ಕೆ ತಲುಪಿದೆ. ರಕ್ಷಣಾ ಕಾರ್ಯಾಚರಣೆ ನಡೆಸಿ ಪ್ರಗತಿಯಲ್ಲಿದೆ.ಪೊಲೀಸ್ ಅಧಿಕಾರಿಗಳು ಗಸ್ತು ತಿರುಗುತ್ತಿದ್ದು, ಮುಖವಾಡಗಳನ್ನು ಧರಿಸಿ ಮತ್ತು ಸುತ್ತುವರಿದ ಪ್ರದೇಶದಿಂದ ಸ್ಥಳೀಯರನ್ನು ಹೊರಗುಳಿಯುವಂತೆ ತಿಳಿಸಿದ್ದಾರೆ.
ಮಂಗಳೂರು: ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಲಿಂಕ್ ಕಳುಹಿಸಿ ಟಾಸ್ಕ್ ನೀಡಿ 1.45 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ. 20ರಂದು ಫೇಸ್‌ಬುಕ್‌ನಲ್ಲಿ “ವರ್ಕ್ ಫ್ರಂ ಹೋಮ್ ವಿದ್ ಅಮೆಜಾನ್’ ಎಂಬ ಜಾಹೀರಾತು ಕಂಡ ವ್ಯಕ್ತಿಯೊಬ್ಬರು ಅದನ್ನು ಕ್ಲಿಕ್ ಮಾಡಿದಾಗ ವಾಟ್ಸ್‌ಆ್ಯಪ್ ಪೇಜ್ ತೆರೆದುಕೊಂಡಿತ್ತು. ಅದರಲ್ಲಿ ಲಿಂಕ್‌ವೊಂದನ್ನು ಕಳುಹಿಸಲಾಗಿತ್ತು. ಫೆ.21ರಂದು ಲಿಂಕ್‌ನ್ನು ಕ್ಲಿಕ್ ಮಾಡಿ ಅದರಲ್ಲಿ ತಿಳಿಸಿದಂತೆ ನೋಂದಣಿ ಮೊತ್ತವಾಗಿ 200 ರೂ. ಪಾವತಿಸಿದ್ದರು. ಇನ್ನು ಟೆಲಿಗ್ರಾಂನಲ್ಲಿ ದೂರುದಾರ ವ್ಯಕ್ತಿಯನ್ನು ಸಂಪರ್ಕಿಸಿದ ಅಪರಿಚಿತ ವ್ಯಕ್ತಿ ಹಲವು ಟಾಸ್ಕ್‌ಗಳನ್ನು ಪೂರೈಸಿ ಕಮಿಷನ್ ಪಡೆದುಕೊಳ್ಳುವಂತೆ ತಿಳಿಸಿ 500 ರೂ. ವರ್ಗಾಯಿಸಿಕೊಂಡಿದ್ದಾರೆ.ಫೆ.23ರಂದು ಟಾಸ್ಕ್ ನೆಪದಲ್ಲಿ ಆದಾಯ ತೆರಿಗೆ, ಕಮಿಷನ್ ಮೊದಲಾದ ಹಲವು ಕಾರಣಗಳನ್ನು ತಿಳಿಸಿ ಹಂತ ಹಂತವಾಗಿ ಒಟ್ಟು 1,45,225 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದು, ಈ ಬಗ್ಗೆ ದೂರು ದಾಖಲಾಗಿದೆ.
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಪ್ರಸಿದ್ಧ ‘ಮನ್ ಕೀ ಬಾತ್’ನ 100ನೇ ಕಂತಿನ ವಿಶೇಷ ಭಾಷಣ ಭಾನುವಾರ ಬೆಳಿಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ಪ್ರಸಾರವಾಗಲಿದೆ. 2014ರಲ್ಲಿ ಮೋದಿ ಪ್ರಧಾನಿಯಾದ ಬಳಿಕ ಆರಂಭಿಸಿದ ಈ ರೇಡಿಯೋ ಭಾಷಣದ ಶತಕದ ಸಂಭ್ರಮವನ್ನು ಭರ್ಜರಿ ಯಶಸ್ವಿಗೊಳಿಸಲು ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ದೇಶಾದ್ಯಂತ 4 ಲಕ್ಷ ಸ್ಥಳಗಳಲ್ಲಿ ಜನರಿಗೆ ಭಾಷಣ ಕೇಳಿಸಲು ಸನ್ನದ್ಧವಾಗಿದೆ. ಜೊತೆಗೆ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲೂ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ತಿಂಗಳ ಕೊನೆಯ ಭಾನುವಾರ ಪ್ರಧಾನಿ ಮೋದಿ ‘ಮನ್ ಕೀ ಬಾತ್’ ಹೆಸರಿನಲ್ಲಿ ರೇಡಿಯೋ ಭಾಷಣ ಮಾಡುತ್ತಾ ಬಂದಿದ್ದಾರೆ. ಪ್ರತಿ ಭಾಷಣದಲ್ಲೂ ಒಂದೊಂದು ವಿಷಯವನ್ನು ಅವರು ಆಯ್ದುಕೊಳ್ಳುತ್ತಾರೆ. ಜೊತೆಗೆ ದೇಶದ ಮೂಲೆಮೂಲೆಯಿಂದ ಅಪರೂಪದ ಸಾಧಕರನ್ನು ಹುಡುಕಿ ಅವರ ಜೊತೆ ಭಾಷಣದ ನಡುವೆ ಮಾತನಾಡುತ್ತಾರೆ. ಇದು ಇಂದು ಅತ್ಯಂತ ಜನಪ್ರಿಯ ರೇಡಿಯೋ ಭಾಷಣವಾಗಿ ಹೊರಹೊಮ್ಮಿದ್ದು, ಇದೀಗ 100ನೇ ಭಾಷಣದ ಮೈಲುಗಲ್ಲನ್ನು ‘ಐತಿಹಾಸಿಕ’ ರೀತಿಯಲ್ಲಿ ಯಶಸ್ವಿಯಾಗಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.…
ಪುತ್ತೂರು : ದರ್ಬೆ ಲಿಟ್ಲ್ ಫ್ಲವರ್ ಶಾಲಾ ಸಮೀಪದ ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್ (49 ವ.) ತಮ್ಮ ಶಾಪ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೇಶ್ ಜೇಸಿಐ ಸದಸ್ಯರಾಗಿಯೂ ಗುರುತಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ಕಡಬ : ಕಡಬ ಠಾಣಾ ವ್ಯಾಪ್ತಿಯ ಆತೂರು ಚೆಕ್ ಪೋಸ್ಟ್ ನಲ್ಲಿ ಪೋಲೀಸರ ಸೂಚನೆಯನ್ನೂ ಲೆಕ್ಕಿಸದೆ ದನದ ಮಾಂಸ ಸಾಗಾಟ ಮಾಡುತ್ತಿದ್ದ ಎನ್ನಲಾದ ಪಿಕ್ ಅಪ್ ವಾಹನವೊಂದು ಪರಾರಿಯಾದ ಘಟನೆ ಶನಿವಾರ ಮಧ್ಯಾಹ್ನದ ವೇಳೆಗೆ ನಡೆದಿದೆ. ಚೆಕ್ಕ್ ಪೋಸ್ಟ್ ನಲ್ಲಿ ಹಾಕಲಾದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಬದಿಗೆ ತಳ್ಳಿರುವುದಲ್ಲದೆ ಕರ್ತವ್ಯದಲ್ಲಿದ್ದ ಪೋಲೀಸ್ ಸಿಬ್ಬಂದಿಯ ಮೇಲೆಯೂ ಪಿಕ್ ಅಪ್ ಹಾಯಿಸಲು ಹೋಗಿದ್ದು, ಪೋಲೀಸ್ ಸಿಬ್ಬಂದಿ ಬದಿಗೆ ಹಾರಿ ಅಪಾಯನ್ನು ತಪ್ಪಿಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಪರಾರಿಯಾದ ಪಿಕ್ ಅಪ್ ನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೆನ್ನಟ್ಟಿದಾಗ ಚಾಲಕ ಪಿಕ್ ಅಪ್ ನ್ನು ಗೋಳಿತ್ತಡಿ ಸಮೀಪದ ಶಾರದಾನಗರದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಪಿಕ್ ಅಪ್ ನಲ್ಲಿ ದ್ದ ಮಾಂಸದ ಕಟ್ಟನ್ನು ಚಾಲಕ ವಾಹನದಿಂದ ತಪ್ಪಿಸಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೋಲೀಸರು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ವಾಹನ ಸದಾ ಗೋಮಾಂಸ ಹಾಗೂ ಅಕ್ರಮ ಗೋಸಾಗಾಟ ನಡೆಸುತ್ತಿರುವ ವಾಹನ ಎನ್ನಲಾಗಿದೆ. ಕೊಯಿಲ ಪರಿಸರದಲ್ಲಿ ನಿರಂತರ ಅಕ್ರಮ ಗೋವಧೆ ನಡೆಯುತ್ತಿದ್ದು, ಇಲ್ಲಿಂದಲೇ ವಾಹನಗಳಲ್ಲಿ ಇತರೆಡೆಗೆ ಮಾಂಸ ಸಾಗಾಟವಾಗುತ್ತಿದೆ ಎಂದು ಹೇಳಲಾಗಿದೆ. ವಿಶೇಷವೆಂದರೆ ದಿನಾ ಬೆಳ್ಳಂಬೆಳಿಗ್ಗೆ ವಾಹನಗಳಲ್ಲಿ ಚೆಕ್ ಪೋಸ್ಟ್ ಮೂಲಕವೇ ಹಾದು ಹೋಗುತ್ತದೆ. ಇದರಿಂದಾಗಿ ಪೋಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿರುವ ಸಾರ್ವಜನಿಕರು ಪೋಲೀಸರ ಅನುಮತಿಯಲ್ಲೇ ಅಕ್ರಮ ಗೋಮಾಂಸ ಸಾಗಾಟವಾಗುತ್ತಿದೆ ಎಂದು ಆರೋಪಿಸುತ್ತಾರೆ. ಇಲ್ಲಿ ಪೋಲೀಸರು ಜೀವ ಭಯದಿಂದಲೇ ಕರ್ತವ್ಯ ನಿರ್ವಹಿಸಬೇಕಾಗಿದೆ. ಈ ಹಿಂದೆ ಇದೇ ಆತೂರು ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸನೆ ವೇಳೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಪೋಲೀಸರ ಮೇಲೆ ಹಲ್ಲೆಗೆ ಮುಂದಾಗಿ ಚೆಕ್ ಪೋಸ್ಡ್ ನ ಶೆಡ್ಡನ್ನು ಧ್ವಂಸ ಮಾಡಿದ್ದರು, ಈ ಸಂದರ್ಭದಲ್ಲಿ ಪೋಲೀಸರು ಲಾಟಿ ಚಾರ್ಜ್ ಮಾಡಿ ಕಿಡಿಗೇಡಿಗಳನ್ನು ಚದುರಿಸಿದ್ದರು. ಇದೀಗ ಮತ್ತೊಮ್ಮೆ ಅಕ್ರಮ ವ್ಯವಹಾರದ ವ್ಯಕ್ತಿಗಳಿಂದ ಅಟ್ಟಹಾಸ ನಡೆದಿದೆ. ಇಲ್ಲಿ ಯಾವುದೇ ಜೀವಭದ್ರತೆಯಿಲ್ಲದೆ ಕರ್ತವ್ಯ ನಿರ್ವಹಿಸುವ ಹೋಂಗಾರ್ಡ್ ಗಳು ಕರ್ತವ್ಯದಲ್ಲಿರುತ್ತಾರೆ. ಅವರಿಗೇನಾದರೂ ಸಮಸ್ಯೆಯಾದರೆ ಅವರ ಕುಟುಂಬವನ್ನು ನೋಡುವವರು ಯಾರು ಎಂದು ಪ್ರಶ್ನಿಸುವ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆರೋಪಿಯನ್ನು ಶೀಘ್ರ ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಜರಗಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.










