ಉಡುಪಿ: ಉಡುಪಿ, ದ.ಕನ್ನಡದಲ್ಲಿ ಬೇಸಿಗೆಯ ಕಾಲದಲ್ಲಿ ಬಿಯರ್ ಗೆ ಹೆಚ್ಚು ಡಿಮ್ಯಾಂಡ್ ಇದ್ದು, ಬೇಡಿಕೆಗೆ ಸ್ಪಂದಿಸಿ ಸೂಕ್ತ ರೀತಿಯ ಸರಬರಾಜು ಕಂಪೆನಿಯವರು ಮಾಡುತ್ತಿಲ್ಲ.ಇಲಾಖೆ, ಕೆಎಸ್‌ಬಿಸಿಎಲ್ ಹಾಗೂ ಡಿಪೋದವರ ಹತ್ತಿರ ವಿನಂತಿಸಿದ್ದೇವೆ. ಎಲ್ಲೂ ಕೂಡ ಸರಬರಾಜು ಆಗುತ್ತಿಲ್ಲ”ಎಂದ ಕರ್ನಾಟಕ ರಾಜ್ಯ ಮಧ್ಯ ಮಾರಾಟಗಾರರ ಒಕ್ಕೂಟದ ಪ್ರದಾನ ಕಾರ್ಯದರ್ಶಿ ಗೋವಿಂದ ರಾಜ್ ಹೇಳಿದ್ದಾರೆ. ಕರಾವಳಿಯಲ್ಲಿ ಸೆಕೆಯಿಂದಾಗಿ ಬಿಯರ್ ಬೇಡಿಕೆ ಜಾಸ್ತಿಯಾಗಿದೆ.ಮಳೆಗಾಲದಲ್ಲಿ ದಿನಕ್ಕೆ 10 ಬಾಕ್ಸ್ ಖಾಲಿಯಾದರೆ,ಈಗ 30 ಬಾಕ್ಸ್ ಬಿಯರ್ ಖಾಲಿಯಾಗುತ್ತದೆ. ಆ ಬೇಡಿಕೆಗೆ ಸರಿಯಾಗಿ ಸರಬರಾಜಾಗುತ್ತಿಲ್ಲ. ಜಾಸ್ತಿ ಮಾರಾಟವಾಗುವ ಬಿಯರ್ ಗಳು ಸಿಗುವುದೇ ಇಲ್ಲ. ಸರಬರಾಜಾಕ್ಕೆ ವಾರಕ್ಕೆ ಒಂದು ಬಾರಿ ಬರುತ್ತದೆ ಎಂದು ಹೇಳಿದ್ದಾರೆ”ಒಂದು ತಿಂಗಳಿನಿಂದ ಈ ಸಮಸ್ಯೆ ಇದ್ದು, ಈ ಸಮಸ್ಯೆ ಮುಂದುವರೆದರೆ, ಸರಕಾರಕ್ಕೆ ಬಾರ್ ಗಳಲ್ಲಿ ಶೇಂದಿ ಮಾರಲು ಅನುಮತಿಯನ್ನು ಕೇಳುವ ಸಂದರ್ಭ ಉದ್ಭವಿಸುತ್ತದೆ,ಮೂರ್ತೆದಾರರ ಸಂಘದವರ ಹತ್ತಿರ ನಮಗೂ ಸರಬರಾಜು ಮಾಡಿ ಎಂದು ಕೇಳುವಂತಹ ಪ್ರಮೇಯ ಉದ್ಭವಿಸುತ್ತದೆ. ಇದನ್ನ ಸರಕಾರ ನಿರ್ಮಾಣ ಮಾಡಿಕೊಳ್ಳಬಾರದು. ನಮಗೆ ಸರಿಯಾಗಿ ಬಿಯರ್ ಸರಬರಾಜು ಆಗುವಂತೆ ತಯಾರಕರು…
Author: main-admin
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳು, ಸ್ಟಾರ್ ಪ್ರಚಾರಕರ ಅಬ್ಬರ ಜೋರಾಗಿದೆ. ಈ ನಡುವೆ ಏಪ್ರಿಲ್ 29ರ ಶನಿವಾರದ ಇಂದಿನಿಂದ ವಿಧಾನಸಭಾ ಚುನಾವಣೆಗೆ ಮತದಾನ ಆರಂಭಗೊಳ್ಳಲಿದೆ. 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಬ್ಯಾಲೆಟ್ ಪೇಪರ್ ವೋಟಿಂಗ್ ಪ್ರಕ್ರಿಯೆ ನಾಳೆಯಿಂದಲೇ ಆರಂಭಗೊಳ್ಳಲಿದೆ. ಈಗಾಗಲೇ ಈ ಬಗ್ಗೆ ಚುನಾವಣಾ ಆಯೋಗದಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 29ರಿಂದ ಮೇ.6ರವರೆಗೆ 80 ವರ್ಷ ಮೇಲ್ಪಟ್ಟವರಿಗೆ, ಅಂಗವಿಕಲರು ಹಾಗೂ ವಿಕಲಚೇತನರಿಗೆ ಚುನಾವಣಾ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ ನೀಡುವ ಮೂಲಕ ಮತದಾನ ಪ್ರಕ್ರಿಯೆಯನ್ನು ನಡೆಸಲಿದ್ದಾರೆ ಎಂದಿದೆ. ರಾಜ್ಯದಲ್ಲಿ 12.15 ಲಕ್ಷದಷ್ಟು 80 ವರ್ಷ ಮೇಲ್ಪಟ್ಟವರಿದ್ದಾರೆ. ಅವರಿಗೆಲ್ಲ ಇಂದಿನಿಂದ ಮನೆ ಮನೆಗೆ ತೆರಳಿ ಚುನಾವಣಾ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ ನೀಡಿ, ಮತದಾನ ಪ್ರಕ್ರಿಯೆಯನ್ನು ನಡೆಸಲಿದ್ದಾರೆ. ಇನ್ನೂ ಬೆಂಗಳೂರಿನಲ್ಲಿ 80 ವರ್ಷ ಮೇಲ್ಪಟ್ಟವರ ಸಂಖ್ಯೆ 2 ಲಕ್ಷಕ್ಕೂ ಹೆಚ್ಚು ಮಂದಿ ಇದ್ದಾರೆ. ಇವರಲ್ಲಿ 9,152 ಮಂದಿ ಮತದಾರರು ಮನೆಯಿಂದಲೇ ಬ್ಯಾಲೆಟ್ ಪೇಪರ್ ವೋಟಿಂಗ್…
ನವದೆಹಲಿ: ಯಾವುದೇ ದ್ವೇಷ ಭಾಷಣ ( Hate Speech ) ಮಾಡಿದಾಗ, ಯಾವುದೇ ದೂರುಗಳಿಲ್ಲದೆ ಎಫ್‌ಐಆರ್ ದಾಖಲಿಸಲು ಸ್ವಯಂಪ್ರೇರಿತ ಕ್ರಮ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ( Supreme Court ) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಸಂವಿಧಾನದ ಪೀಠಿಕೆಯಲ್ಲಿ ಸೂಚಿಸಿರುವ ಭಾರತದ ಜಾತ್ಯತೀತ ಗುಣಲಕ್ಷಣವನ್ನು ಸಂರಕ್ಷಿಸಲು ಭಾಷಣ ಮಾಡಿದ ವ್ಯಕ್ತಿಗಳ ಧರ್ಮವನ್ನು ಲೆಕ್ಕಿಸದೆ ಅಂತಹ ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ದ್ವೇಷ ಭಾಷಣ ಪ್ರಕರಣಗಳನ್ನು ದಾಖಲಿಸುವಲ್ಲಿನ ವಿಳಂಬವನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ದ್ವೇಷ ಭಾಷಣವನ್ನು ಗಂಭೀರ ಅಪರಾಧವೆಂದು ಕರೆದಿದೆ, ಇದು ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಸಾಮರ್ಥ್ಯವನ್ನು ಹೊಂದಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದೆ.
ಸವಣೂರು: ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಿಂದ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34 ವ.) ಎಂದು ಗುರುತಿಸಲಾಗಿದೆ. ಗೋಪಾಲಕೃಷ್ಣ ಅವರು ಪಾಲ್ತಾಡಿ ಗ್ರಾಮದ ಕಾಪುತಮೂಲೆ ಎಂಬಲ್ಲಿರುವ ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಒಬ್ಬನೇ ತೆರಳಿದವನು ವಾಪಾಸು ಬಾರದೇ ಇದ್ದುದರಿಂದ ಮನೆಯವರು ಕೆರೆಯ ಬಳಿ ಹೋಗಿ ನೋಡಿದಾಗ ಗೋಪಾಲಕೃಷ್ಣನ ಚಪ್ಪಲಿ ಕೆರೆಯ ನೀರಿನಲ್ಲಿ ತೇಲುತ್ತಿದ್ದುರಿಂದ ಸಂಶಯಗೊಂಡು ಮರದ ದೋಂಟಿಯೊಂದನ್ನು ಕೆರೆಯ ನೀರಿಗೆ ಹಾಕಿ ನೋಡಿದಾಗ ಗೋಪಾಲಕೃಷ್ಣನ ಅಂಗಿ ದೋಂಟಿಯ ಕೊಕ್ಕೆ ಸಿಕ್ಕಿಕೊಂಡಿದ್ದು, ದೂರುದಾರ ಮೃತರ ತಂದೆ ಮೋನಪ್ಪ ನಾಯ್ಕ ಅವರು ಕೂಡಲೇ ಅಣ್ಣ ಶೇಷಪ್ಪ ನಾಯ್ಕ ಮತ್ತು ಅವರ ಮಗ ಸುಬ್ರಾಯ ನಾಯ್ಕರವರನ್ನು ಕರೆದು ಗೋಪಾಲಕೃಷ್ಣನ ದೇಹವನ್ನು ಮೇಲಕ್ಕೆತ್ತಿ ಆಟೋ ರಿಕ್ಷಾವೊಂದರಲ್ಲಿ ಕೆಯ್ಯೂರುವರೆಗೆ ತೆಗೆದುಕೊಂಡು ಬಂದು ಅಲ್ಲಿಂದ ಅಂಬ್ಯುಲೆನ್ಸ್ ವಾಹನವೊಂದರಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ…
ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ. ಅಮ್ಟಾಡಿ ನಿವಾಸಿ 35 ವರ್ಷದ ಸಂದೀಪ್ ಲೋಬೊ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಅಕಾಶ್ ಎಂಬಾತ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು ಬಿಸಿರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲಕ ಕಾರು ಚಲಾಯಿಸಿಕೊಂಡು ಬಂದ ಪರಿಣಾಮ ಈ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಸಂದೀಪ್ ಲೋಬೋ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅಸುನೀಗಿದ್ದು, ಆಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸ್…
ಕಡಬ: ಅಸ್ವಸ್ಥಗೊಂಡು ತಿರುಗಾಡುತ್ತಿದ್ದ ಕಾಡಾನೆಯೊಂದು ಕಡಬ ಸಮೀಪದ ಕೊಂಬಾರು ಸಮೀಪದ ಬಗ್ಪುಣಿ ಎಂಬಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕಾಡಾನೆಯುವ ಸಂಪೂರ್ಣ ನಿತ್ರಾಣಗೊಂಡ ಸ್ಥಿತಿಯಲ್ಲಿ ಕೊಂಬಾರು ನಿನ್ನೆ ಚೇರು ಎಂಬಲ್ಲಿ ಬಳಿ ಹಳ್ಳವೊಂದರಲ್ಲಿ ನಿತ್ರಾಣ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಎರ್ಮಾಯಿಲ್ ಎಂಬಲ್ಲಿ ರಸ್ತೆಯಲ್ಲೇ ನಡೆದಾಡಲು ಕಷ್ಟಪಡುವ ರೀತಿಯಲ್ಲಿ ಈ ಕಾಡಾನೆ ಸ್ಥಳೀಯರಿಗೆ ಕಾಣಸಿತ್ತು. ಅರಣ್ಯ ಅಧಿಕಾರಿಗಳ ತಂಡ ಮಾಹಿತಿ ಮಾಹಿತಿ ಲಭ್ಯವಾದ ತಕ್ಷಣವೇ ನುರಿತ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲನೆಗೂ ಮುಂದಾಗಿದ್ದರು.ವೈದ್ಯಕೀಯ ತಜ್ಞರು ಹೇಳುವ ಪ್ರಕಾರ ವಯೋ ಸಹಜ ತೊಂದರೆಗಳಿಂದ ಬಳಲುತ್ತಿರುವುದಲ್ಲದೆ ಆನೆಯ ಹಲ್ಲುಗಳು ಉದುರಿರುವ ಶಂಕೆ ವ್ಯಕ್ತಪಡಿಸಿದ್ದರು.
ಗಡಿ ಪ್ರದೇಶಗಳು ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಎಫ್‌ಎಂ ರೇಡಿಯೊ ಸಂಪರ್ಕವನ್ನು ಹೆಚ್ಚಿಸುವ ಕ್ರಮದಲ್ಲಿ 18 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಧಾನಿ ಮೋದಿ ನಾಳೆ 91 ಎಫ್‌ಎಂ ರೇಡಿಯೋ ವಾಹಿನಿಗಳನ್ನು ಉದ್ಘಾಟಿಸಲಿದ್ದಾರೆ. ಮಹತ್ವಾಕಾಂಕ್ಷೆಯ ಜಿಲ್ಲೆಗಳು ಮತ್ತು ಗಡಿ ಪ್ರದೇಶಗಳು ಪ್ರಯತ್ನದ ಮೊದಲ ಕೇಂದ್ರಗಳಾಗಿವೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಈ ಹೊಸ ರೇಡಿಯೊ ಸೇವೆಗಳು ಇದುವರೆಗೆ ಮಾಧ್ಯಮಕ್ಕೆ ಪ್ರವೇಶವನ್ನು ಹೊಂದಿರದ ಹೆಚ್ಚುವರಿ ಎರಡು ಕೋಟಿ ಜನರನ್ನು ತಲುಪಲಿದೆ ಮತ್ತು ಸುಮಾರು 35,000 ಚದರ ಕಿ.ಮೀ ಪ್ರದೇಶದಲ್ಲಿ ವ್ಯಾಪ್ತಿ ಮತ್ತಷ್ಟು ಹೆಚ್ಚಾಗುತ್ತದೆ. ಪ್ರಧಾನಿಯವರ ಮಾಸಿಕ ರೇಡಿಯೋ ಕಾರ್ಯಕ್ರಮವಾದ ಮನ್ ಕಿ ಬಾತ್‌ನ ಹೆಗ್ಗುರುತಾಗಿರುವ 100 ನೇ ಸಂಚಿಕೆಗೆ ಎರಡು ದಿನಗಳ ಮೊದಲು ರೇಡಿಯೋ ಚಾನೆಲ್ ಗಳನ್ನು ವಿಸ್ತರಿಸುವ ಕ್ರಮದಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ. ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ, ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಛತ್ತೀಸ್‌ಗಢ, ಲಡಾಖ್ ಮತ್ತು ಅಂಡಮಾನ್…
ಕಡಬ: ಅಸ್ವಸ್ಥಗೊಂಡು ತಿರುಗಾಡುತ್ತಿದ್ದ ಕಾಡಾನೆಯೊಂದು ಕಡಬ ಸಮೀಪದ ಕೊಂಬಾರು ಸಮೀಪದ ಬಗ್ಪುಣಿ ಎಂಬಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕಾಡಾನೆಯುವ ಸಂಪೂರ್ಣ ನಿತ್ರಾಣಗೊಂಡ ಸ್ಥಿತಿಯಲ್ಲಿ ಕೊಂಬಾರು ನಿನ್ನೆ ಚೇರು ಎಂಬಲ್ಲಿ ಬಳಿ ಹಳ್ಳವೊಂದರಲ್ಲಿ ನಿತ್ರಾಣ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಎರ್ಮಾಯಿಲ್ ಎಂಬಲ್ಲಿ ರಸ್ತೆಯಲ್ಲೇ ನಡೆದಾಡಲು ಕಷ್ಟಪಡುವ ರೀತಿಯಲ್ಲಿ ಈ ಕಾಡಾನೆ ಸ್ಥಳೀಯರಿಗೆ ಕಾಣಸಿತ್ತು. ಅರಣ್ಯ ಅಧಿಕಾರಿಗಳ ತಂಡ ಮಾಹಿತಿ ಮಾಹಿತಿ ಲಭ್ಯವಾದ ತಕ್ಷಣವೇ ನುರಿತ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲನೆಗೂ ಮುಂದಾಗಿದ್ದರು.ವೈದ್ಯಕೀಯ ತಜ್ಞರು ಹೇಳುವ ಪ್ರಕಾರ ವಯೋ ಸಹಜ ತೊಂದರೆಗಳಿಂದ ಬಳಲುತ್ತಿರುವುದಲ್ಲದೆ ಆನೆಯ ಹಲ್ಲುಗಳು ಉದುರಿರುವ ಶಂಕೆ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್, ವಿಮೆ, ಹಾಗೂ ಮೀನುಗಾರ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಈ ಪ್ರಮುಖ ಮೂರು ಯೋಜನೆಯ ಭರವಸೆಯನ್ನು ರಾಹುಲ್ ಗಾಂಧಿ ಘೋಷಿಸಿದ್ದಾರೆ. ಕಾಪುವಿನ ಉಚ್ಚಿಲ ಶಾಲಿನಿ ಡಾ.ಜಿ. ಶಂಕರ್ ಸಭಾಂಗಣದಲ್ಲಿ ಆಯೋಜಿಸಿದ ಮೀನುಗಾರರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೀನುಗಾರರಿಗೆ 10 ಲಕ್ಷ ವಿಮೆ, ಮೀನುಗಾರ ಮಹಿಳೆಯರಿಗೆ ಒಂದು ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಹಾಗೂ ಪ್ರತಿದಿನ 500 ಲೀಟರ್‌ಗೆ ಮೀನುಗಾರರಿಗೆ 25 ರೂ. ಸಬ್ಸಿಡಿ ನೀಡುವುದಾಗಿ ಭರವಸೆ ನೀಡಿದ್ದಾರೆ.ಸಹಸ್ರ ಸಂಖ್ಯೆಯಲ್ಲಿ ಮೀನುಗಾರ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶಕ್ಕೆ ಆಗಮಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಮಾಧ್ಯಮ ಜೊತೆ ಮಾತನಾಡಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ವಾಗ್ದಾಳಿ ನಡೆಡಿಸಿದ್ದಾರೆ.ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ, ದೇವಸ್ಥಾನದ ದುಡ್ಡು ಹೊಡೆದ, ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ ಅರುಣ್ ಪುತ್ತಿಲ, ಗೋ ಸಾಗಾಟ ಮಾಡುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದಾಗ ಅರುಣ್ ಕೂಡಾ ಅದರಲ್ಲಿ ಒಬ್ಬನಾಗಿದ್ದ ಅಷ್ಟೇ. ಅದು ಬಿಟ್ಟು ಬೇರೆ ಹಿಂದುತ್ವದ ಕಾರ್ಯ ಅವನಿಂದ ನಡೆಯಲಿಲ್ಲ, ಕೇಂದ್ರದ ಗೃಹಸಚಿವ ಅಮಿತ್ ಶಾ ಮಾತನಾಡುವುದಾಗಿ ಹೇಳಿದಾಗ ಧಿಕ್ಕರಿಸಿದ ವ್ಯಕ್ತಿ ಅರುಣ್ ಪುತ್ತಿಲ, ಕಾರ್ಯಕರ್ತರು ಕೆಲವರು ಈ ವಿಚಾರ ತಿಳಿಯದೆ ಅವನ ಹಿಂದೆ ಓಡಾಡುತ್ತಿದ್ದಾರೆಅವರಿಗೆ ಸದ್ಯದಲ್ಲೇ ಈ ವಿಚಾರ ತಿಳಿಯಲಿದೆ ಎಂದು ಪ್ರಭಾಕರ್ ಭಟ್ ಹೇಳಿದ್ದಾರೆ.










