ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಜೀಪ ಮುನ್ನೂರು ಗ್ರಾಮದ ನಂದಾವರ ಕೋಟೆ ನಿವಾಸಿ ಮಹಮ್ಮದ್ ಶಾಕಿಬ್ ಹಾಗೂ ಬಿ.ಮೂಡ ಗ್ರಾಮದ ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆರೀಫ್ ಬಂಧಿತ ಆರೋಪಿ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ನಂದಾವರ ಎಂಬಲ್ಲಿ ಶಾಲಾ ಬಳಿ ಇಬ್ಬರು ಯುವಕರು ಮಾದಕ ವಸ್ತುವನ್ನು ಸೇವಿಸಿ ನಶೆ ಹೊಂದಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ ಸ್ಥಳೀಯರು ನೀಡಿದ ದೂರಿನಂತೆ ಸ್ಥಳಕ್ಕೆ ಬೇಟಿ ನೀಡಿದ ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್ ಐ ರಾಮಕೃಷ್ಣ ನೇತ್ರತ್ವದ ಪೊಲೀಸ್ ತಂಡ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ. ಬಳಿಕ ವೈದ್ಯರ ಬಳಿ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಬಗ್ಗೆ ಅಧಿಕೃತವಾದ ವೈದ್ಯಕೀಯ ದೃಡಪತ್ರ ಸಿಕ್ಕಿದೆ. ಇಬ್ಬರು ಆರೋಪಿಗಳನ್ನು ಸೂಕ್ತವಾದ ಕಾನೂನು ಕ್ರಮಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Author: main-admin
ಮಂಗಳೂರು: ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದ್ದಾರೆ.ಈ ವೇಳೆ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಮಂಗಳೂರು: ಅಪ್ರಾಪ್ತೆಯನ್ನು ಅಪಹರಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಪಣಂಬೂರು ಪೊಲೀಸರು ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರಿನ ಕಸಬಾ ಬೆಂಗ್ರೆ ನಿವಾಸಿ ಮೊಹಮ್ಮದ್ ಸರ್ಫಾಝ್ ( 22) ಬಂಧಿತ ಆರೋಪಿ ಅಪ್ರಾಪ್ತೆಯನ್ನು ಅಪಹರಿಸಿರುವ ಪ್ರಕರಣಕ್ಕೆ ಸಂಬಂದಿಸಿದಂತೆ ಆಗಸ್ಟ್ 10ರಂದು ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಅಪಹರಣಕ್ಕೊಳಗಾದ ಬಾಲಕಿಯನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಸರ್ಫ್‌ರಾಝ್ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಇದೀಗ ಆರೋಪಿ ಮೇಲೆ ಪೊಕ್ಸೊ ಕಾಯ್ದೆಯನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಬೆಂಗಳೂರು: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೊಡುವ ರಾಷ್ಟ್ರಪತಿ ಪದಕ ಈ ಬಾರಿ ಕರ್ನಾಟಕದ 20 ಪೊಲೀಸ್ ಅಧಿಕಾರಿಗಳಿಗೆ ಘೋಷಿಸಿಸಲಾಗಿದೆ. ಕರ್ನಾಟಕ ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದು, ಐಪಿಎಸ್ ಅಧಿಕಾರಿಗಳಾದ ಸಿಮಂತ್ ಕುಮಾರ್ ಸಿಂಗ್, ಎಸ್. ಮುರುಗನ್, ಸಂದೀಪ್ ಪಾಟೀಲ್, ಸಿಐಡಿ ಎಸ್ಪಿ ರಾಘವೇಂದ್ರ ಕೆ.ಹೆಗ್ಡೆ, ಬಿ. ಎಸ್. ಮೋಹನ್ ಕುಮಾರ್, ಶಿವಶಂಕರ್, ಎಂ.ಬಿ.ಎನ್. ಶ್ರೀನಿವಾಸ್, ಅನಿಲ್ ಕುಮಾರ್. ಪಿ. ಸೇರಿದಂತೆ ಒಟ್ಟು 20 ಮಂದಿ ಅಧಿಕಾರಿಗಳ ಹೆಸರು ಘೋಷಣೆಯಾಗಿದೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಕೂಡ ಸಾಧಕ ಪೊಲೀಸರಿಗೆ ರಾಷ್ಟ್ರಪತಿ ಪದಕ ನೀಡಲಾಗುತ್ತದೆ.
ಬೆಂಗಳೂರು : ನಟ ಉಪೇಂದ್ರ ವಿರುದ್ಧ ಜಾತಿನಿಂದಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ಮಧ್ಯಂತರ ತಡೆಯಾಜ್ಞೆ ನೀಡಿ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಉಪೇಂದ್ರ ಅವರು ‘ಸಮುದಾಯದ ವಿರುದ್ಧ ನಾನು ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಒಳ್ಳೇದನ್ನು ಮಾಡುವಾಗ ಟೀಕಿಸುವರು ಇದ್ದೇ ಇರುತ್ತಾರೆ.ಈ ಮಾತಿಗೆ ಪೂರಕವಾಗಿ ಮಾತ್ರವೇ ಗಾದೆ ಬಳಸಲಾಗಿದೆ ಹೊರತು ಆಕ್ಷೇಪ ವ್ಯಕ್ತವಾದ ಕೂಡಲೇ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದೇನೆ. ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿ ನಿಂದನೆ ಅಲ್ಲ. ಪ್ರಚಾರ ಪಡೆಯಲೆಂದು ಉಪೇಂದ್ರ ದೂರು ದಾಖಲಿಸಿದ್ದಾರೆ. ವಾಟ್ಸಪ್ ಮೂಲಕ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ FIR ರದ್ದು ಕೋರಿ ಮನವಿ ಮಾಡಿದ್ದಾರೆ. ಇದಕ್ಕೂ ಮುಂಚೆ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಿಂದ ದೂರುದಾರರ ಸಮ್ಮುಖದಲ್ಲಿ ಉಪೇಂದ್ರ ಅವರ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದರು.
ಮಂಗಳೂರು: ನಿಷೇಧಿತ ಪಿಎಫ್ಐ ಸಂಘಟನೆಗೆ ವಿದೇಶದಿಂದ ಫಂಡಿಗ್ ಮಾಡಲಾಗಿದೆ ಎಂಬ ಪ್ರಕರಣದಲ್ಲಿ ಮಂಗಳೂರಿನ ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕಿನ್ಯಾ, ವಳಚ್ಚಿಲ್ ಪದವು ಮತ್ತು ಮೆಲ್ಕಾರ್‌ನಲ್ಲಿ ಎನ್ಐಎ ದಾಳಿ ನಡೆದಿದೆ. ಇಲ್ಲಿನ ಇಬ್ರಾಹಿಂ ಎಂಬವವರ ಮನೆಯಲ್ಲಿ ಎನ್ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕೇರಳ ರಾಜ್ಯದಲ್ಲಿ ಧಾರ್ಮಿಕ ಶಿಕ್ಷಕನಾಗಿದ್ದ ಇಬ್ರಾಹಿಂ ಪಿಎಫ್ಐ ನಿಷೆಧದ ಬಳಿಕ ಭೂಗತನಾಗಿದ್ದ. ಇದೀಗ ಇಬ್ರಾಹಿಂ ಮನೆಗೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದೆ. ಈ ದಾಳಿ ವೇಳೆ ಇಬ್ರಾಹಿಂ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಈ ಹಿಂದೆ ಪಿಎಫ್ಐ ಸಂಘಟನೆಯ ಫಂಡಿಂಗ್ ನೆಟ್ವರ್ಕ್ ಅನ್ನು ಎನ್ಐಎ ಭೇದಿಸಿತ್ತು. ಈ ವೇಳೆ ಬಂಧಿತರ ವಿಚಾರಣೆ ಸಂದರ್ಭ ಇಬ್ರಾಹಿಂ ಹೆಸರು ಪ್ರಸ್ತಾಪಗೊಂಡಿತ್ತು. ಪಿಎಫ್ಐ ಫಂಡಿಂಗ್ ನೆಟ್ವರ್ಕ್‌ಗೆ ಇಬ್ರಾಹಿಂ ಲಿಂಕ್ ಇದೆ ಎಂಬುದು ತಿಳಿದುಬಂದಿದೆ. ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಅನ್ನು ಬೇಧಿಸಿರುವ…
ಹುಬ್ಬಳ್ಳಿ: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಫೋಟೋಗಳನ್ನು ಅಸಭ್ಯವಾಗಿ ಇನ್‌ಸ್ಟ್ರಾಗ್ರಾಂನಲ್ಲಿನ ಫೋಟೊಗಳನ್ನು ಫೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ತಿಳಿಸಿದರು. ನಗರದಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಮೂವರು ಆರೋಪಿಗಳು ಅದೇ ಖಾಸಗಿ ಕಾಲೇಜಿನವರಾಗಿದ್ದು, ಇನ್ನೊಂದು ಯುವಕರು ಹಾಗೂ ಯುವತಿಯ ಗುಂಪಿನ ಮೇಲೆ ರಿವೆಂಜ್ ತೀರಿಸಿಕೊಳ್ಳಲು ಮಾಡಿದ್ದು ಎಂಬ ಮಾಹಿತಿ ಬಿಚ್ಚಿಟ್ಟಿದ್ದಾರೆ. ಪ್ರಕರಣದ ಎ1 ಆರೋಪಿ ಹಾಗೂ ಮತ್ತಿಬ್ಬರನ್ನು ಮತ್ತೊಂದು ಗುಂಪಿನ ಯುವಕರು ಸೇರಿಸಿಕೊಳ್ಳುತ್ತಿರಲಿಲ್ಲ. ಹೀಗಾಗಿ ಅವರ ಕಡೆಯ ವಿದ್ಯಾರ್ಥಿನಿಯರ ಫೋಟೋಗಳನ್ನು ಅಸಭ್ಯವಾಗಿ ವೈರಲ್ ಮಾಡಿದ್ರೆ ಅವರಿಗೆ ನಾಟುತ್ತದೆ ಎಂದು ಭಾವಿಸಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಸಿದ್ದಾರೆ. ಇದರಲ್ಲಿ ಎ1 ಆರೋಪಿಯೇ ಮಾಸ್ಟರ್ ಮೈಂಡ್ ಆಗಿದ್ದು, ಸೈಬರ್ ಹಾಗೂ ಕಂಪ್ಯೂಟರ್ ಬಗ್ಗೆ ಮಾಹಿತಿ ಇದ್ದದ್ದರಿಂದ ಮೂವರು ಸೇರಿ ಈ ಕೃತ್ಯ ಮಾಡಿದ್ದಾರೆ. ಇನ್ನೂ ತನಿಖೆ ಮುಂದುವರೆದಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್…
ಬೆಳ್ತಂಗಡಿ:ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ಯುವತಿ ಲೋ ಬಿಪಿ ಆಗಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಆ 13 ರಂದು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ. ಇಲ್ಲಿನ ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿಗಳ ಮಗಳು ಸುಮಾ (19) ಮೃತ ಯುವತಿ.ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಸುಮಾ ಮನೆಗೆ ಬಂದಿದ್ದಳು. ಆಗಸ್ಟ್ 9 ರಂದು ಅನಾರೋಗ್ಯದ ಕಾರಣದಿಂದ ಸ್ಥಳೀಯ ಆಸ್ಪತ್ರೆಗೆ ತೆರಳಿ ಮಾತ್ರೆಗಳನ್ನು ಪಡೆದು ಮನೆಗೆ ತೆರಳಿದ್ದಳು. ನಂತರ ಆಗಸ್ಟ್11 ರಂದು ಮತ್ತೆ ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದು ಗುಣಮುಖವಾಗಿರುವ ಕಾರಣ ತನ್ನ ಅಕ್ಕನ ಮನೆ ಬಳ್ಳಮಂಜಕ್ಕೆ ತೆರಳಿದ್ದಳು.ಆಗಸ್ಟ್ 13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಲೋ ಬಿಪಿ ಉಂಟಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
ಉಳ್ಳಾಲ: ಪುಂಜಾಲಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ನಿವಾಸಿಗಳಾದ ತನಿಯ ಮತ್ತು ಚೋಮು ದಂಪತಿ ಪುತ್ರ ರಾಜೇಶ್ (27)ಮೃತ ಯುವಕ. ರಾಜೇಶ್ ಕಳೆದ ಶುಕ್ರವಾರ ಸಂಜೆ 4 ಗಂಟೆಗೆ ಮನೆಯಿಂದ ತೆರಳಿದ್ದು ವಾಪಾಸಾಗಿರಲಿಲ್ಲ. ಈ ಬಗ್ಗೆ ಪೋಷಕರು ಪೂಂಜಾಲಕಟ್ಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ನಿನ್ನೆ ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ರಾಜೇಶ್ ಅವರ ಬೈಕ್ ದೊರಕಿತ್ತು. ಇಂದು ಬೆಳಿಗ್ಗೆ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನ ಸ್ಥಳೀಯ ಮೀನುಗಾರರಾದ ಪ್ರೇಮ್ ಪ್ರಕಾಶ್ ಡಿ ಸೋಜಾ ಮತ್ತು ಸ್ನೇಹಿತರು ಎಳೆದು ದಡಕ್ಕೆ ಹಾಕಿದ್ದಾರೆ. ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸರು ಮೃತದೇಹವನ್ನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ರವಾಣಿಸಿದ್ದು ರಾಜೇಶ್ನ ಪೋಷಕರು ಶವದ ಗುರುತು ಪತ್ತೆ ಹಚ್ಚಿದ್ದಾರೆ.
ಉಡುಪಿ: ನಿಗದಿತ ಅವಧಿ ಮೀರಿ ಪಬ್‌ಗಳು ಕಾರ್ಯಚರಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಪೊಲೀಸರು, ಕಾರ್ಯಾಚರಣೆ ನಡೆಸಿ ಪಬ್ ಗಳ ಡಿಜೆಯನ್ನು ಸ್ಥಗಿತಗೊಳಿಸಿ ಎಚ್ಚರಿಕೆ ನೀಡಿದ್ದಾರೆ. ವಾರಾಂತ್ಯವಾದ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಮಣಿಪಾಲದಲ್ಲಿ ಅನಧಿಕೃತ ಪಬ್ ಗಳು ಮತ್ತು ಅವಧಿ ಮೀರಿ ಕಾರ್ಯಾಚರಿಸುತ್ತಿರುವ ಪಬ್ ಗಳ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಇತ್ತೀಚೆಗೆ ದೂರು ನೀಡಿದ್ದರು.ಈ ದೂರಿನ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿನ 6 ಅಕ್ರಮ ಪಬ್‌ನ ಡಿಜೆ ನಿಲ್ಲಿಸಿ ಅವುಗಳ ಮಾಲೀಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹಲವು ಪಬ್‌ಗಳಲ್ಲಿ ರಾಜಕೀಯ ನಾಯಕರ ಬೆಂಬಲದಿಂದ ತಡರಾತ್ರಿವರೆಗೂ ಮದ್ಯ, ಗಾಂಜಾ, ಧ್ವನಿವರ್ಧಕ ಬಳಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಜಿಲ್ಲಾ ಭೇಟಿ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಬ್‌ಗಳನ್ನು ನಿಗದಿತ ಅವಧಿ ರಾತ್ರಿ 12 ಗಂಟೆಯ ಒಳಗೆ ಮುಚ್ಚಲು ಪೊಲೀಸರು ತಾಕೀತು ಮಾಡಿದ್ದಾರೆ. ಮದ್ಯ ಹೊರತು ಯಾವುದೇ ಧ್ವನಿವರ್ಧಕ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.










