ಮಂಗಳೂರು: ಮುಂಬೈ- ಮಂಗಳೂರು ರೈಲಿನಲ್ಲಿ ಊರಿಗೆ ಮರಳುತ್ತಿದ್ದ ವ್ಯಕ್ತಿಯೊಬ್ಬರು ರೈಲಿನ ಶೌಚಾಲಯದಲ್ಲೇ ಮೃತಪಟ್ಟಿದ್ದು, ಈ ವಿಷಯ ರೈಲಿನ ಸಿಬ್ಬಂದಿಯ ಗಮನಕ್ಕೇ ಬಾರದೆ ಮೃತದೇಹವು ಮತ್ತೆ ಅದೇ ರೈಲಿನಲ್ಲಿ ಮುಂಬಯಿಗೆ ಹೋಗಿರುವ ಘಟನೆ ನಡೆದಿದೆ. ಕಿನ್ನಿಗೋಳಿಯ ಮೆನ್ನ ಬೆಟ್ಟಿ ನವರಾದ ಮೋಹನ್ ಬಂಗೇರ (56) ಅವರು ಮುಂಬಯಿಯಿಂದ ಊರಿಗೆ ಮರಳುವ ವೇಳೆಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆದರೆ ಈ ವಿಷಯ ಗೊತ್ತಾಗದೆ ಅವರ ಕುಟುಂಬಿಕರು ಮುಂಬಯಿವರೆಗೂ ಹುಡುಕಾಡಿದ್ದಾರೆ. ಆದರೆ ಅವರಿದ್ದ ಬೋಗಿಯ ಶೌಚಾಲಯ ಸಹಿತ ತಪಾಸಣೆ ಮಾಡಬೇಕಿದ್ದ ರೈಲು ಸಿಬಂದಿ ಕರ್ತವ್ಯಲೋಪ ಮಾಡಿದ್ದಲ್ಲದೆ ತಾವು ತಪಾಸಣೆ ಮಾಡಿದ್ದಾಗಿ ವರದಿ ಕೊಟ್ಟಿ ರುವುದು ನೋವು ತಂದಿದೆ.ಮೃತದೇಹವನ್ನು ರೈಲಿನಲ್ಲೇ ಮತ್ತೆ ಹಿಂದೆ ಕಳುಹಿಸಲು, ಮರಣೋತ್ತರ ಪರೀಕ್ಷೆಗೆ 10 ಸಾವಿರ ರೂ.ಗಳನ್ನು ಪಾವತಿಸಿದ್ದು ಏಜೆನ್ಸಿಯೊಂದು ಪ್ಯಾಕ್ ಮಾಡಿ ಕಳಿಸಿದೆ. ಆದರೆ ಪಾರ್ಸೆಲ್ ಇಲ್ಲಿಗೆ ಬರುವಾಗ ದೇಹ ಪೂರ್ಣ ಕೊಳೆತು ದುರ್ವಾಸನೆ ಬೀರುತ್ತಿತ್ತು.ಮೋಹನ್ ಬಂಗೇರ ಹಲವು ವರ್ಷ ಗಳಿಂದ ಮುಂಬಯಿನಲ್ಲಿ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರರು ಕಿನ್ನಿಗೋಳಿಯ…
Author: main-admin
ಮಂಗಳೂರು ಎಪ್ರಿಲ್ 25 : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಕೇಂದ್ರ ನಾಯಕರ ದಂಡೆ ಇದೀಗ ಕರ್ನಾಟಕದತ್ತ ಆಗಮಿಸುತ್ತಿದ್ದು, ಇದೀಗ ಕರಾವಳಿಗೆ ಪ್ರಚಾರಕ್ಕೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬಿಜೆಪಿ ವತಿಯಿಂದ ಮುಲ್ಕಿಯಲ್ಲಿ ಮೇ 3ರಂದು ಹಮ್ಮಿಕೊಂಡಿರುವ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ಮೇ 6 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದು, ಸಮಾವೇಶ ಏರ್ಪಡಿಸುವ ಸ್ಥಳ ಇನ್ನೂ ನಿಗದಿ ಆಗಿಲ್ಲ. ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಕೂಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು. ಫಕೀರ ಎಂದು ಕರೆಸಿಕೊಳ್ಳುವ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು 7 ಕೋಟಿಗೂ ಹೆಚ್ಚು ಆಸ್ತಿ ಘೋಷಿಸಿದ ಕುರಿತು ಪ್ರತಿಕ್ರಿಯಿಸಿದ ಕೋಟ, ಅವರು ಯಾವುದೋ ದೀಕ್ಷೆ ತೊಟ್ಟು ಬರಿಗಾಲಿನಲ್ಲಿ ನಡೆಯುತ್ತಾರೆ. ಹಾಗಾಗಿ…
ಬೆಳಗಾವಿ : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಧುರೀಣ ಡಿ.ಬಿ ಇನಾಂದಾರ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಚಿಕಿತ್ಸೆ ಫಲಿಸದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 74ವರ್ಷದ ಇನಾಂದಾರ್ ಶ್ವಾಸಕೋಶ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಸಿರಸಂಗಿ ದೇಸಾಯಿ ಫೌಂಡೇಷನ್ ಟ್ರಸ್ಟ್ ಕಾಯಂ ಸದಸ್ಯರಾಗಿದ್ದರು.ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು.
ಉಡುಪಿ ವಿಧಾನಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯಯವರು ತುಳುನಾಡ ರಕ್ಷಣಾ ವೇದಿಕೆಯ ಬೆಂಬಲಯಾಚಿಸಿದರು. ಇತ್ತೀಚೆಗೆ ಕರಾವಳಿ ಭಾಗದಲ್ಲಿ ತುಳು ಭಾಷೆಯಾಗಿರಬಹುದು ತುಳುವಿನ ಬಗ್ಗೆ ಜನರಲ್ಲಿ ಅಪಾರವಾದ ಅಭಿಮಾನ ಅದೇ ರೀತಿ ಬೇಡಿಕೆ ಉಂಟಾಗಿದ್ದು ಈ ಸಂದರ್ಭದಲ್ಲಿ ಎಲ್ಲಾ ಪಕ್ಷದ ಅಭ್ಯರ್ಥಿಗಳು ತುಳು ಶಾಲು,ತುಳು ಫ್ಲಾಗ್ ಗಳನ್ನು ಬಳಸುತ್ತಿರುವುದು ಕಂಡು ಬಂದಿದೆ. ಈ ಮಧ್ಯೆ ಹಲವಾರು ಅಭ್ಯರ್ಥಿಗಳು ಬೇರೆ ಬೇರೆ ತುಳು ಪರ ಸಂಘಟನೆ ಮುಖಂಡರುಗಳನ್ನು ಭೇಟಿಯಾಗಿ ಬೆಂಬಲ ಯಾಚಿಸುವುದು ಕಂಡು ಬಂದಿದೆ. ಈ ಮಧ್ಯೆ ಉಡುಪಿ ವಿಧಾನಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿಯವರು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು, ಉಡುಪಿ ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿ ಹಾಗೂ ಉಡುಪಿ ಪ್ರಧಾನ ಕಾರ್ಯದರ್ಶಿ ಅಝರುದ್ದೀನ್ ಸುಬ್ರಹ್ಮಣ್ಯ ನಗರ, ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬರವರಲ್ಲಿ ಮಾತುಕತೆ ನಡೆಸಿ ಬೆಂಬಲ ನೀಡುವಂತೆ ಕೋರಿದರು. ತುಳುನಾಡ ತುಳು ಭಾಷೆ ತುಳು ಅಭಿವೃದ್ಧಿಗೋಸ್ಕರ ಶ್ರಮಿಸುವುದು ಅದೇ…
ಬೆಂಗಳೂರು: ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ಶರತ್ ಬಾಬು ಅವರ ಆರೋಗ್ಯ ಸ್ಥಿತಿ ಬಹು ಅಂಗಾಂಗ ಹಾನಿಯಿಂದ ಮತ್ತಷ್ಟು ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ನಿನ್ನೆಯಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲ ದಿನಗಳಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಹಿರಿಯ ನಟ ಶರತ್ ಬಾಬು ಅವರನ್ನು, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಸ್ಯಾಂಡಲ್ ವುಡ್ ನಟ ಶರತ್ ಬಾಬು ಅವರು ಬಹು ಅಂಗಾಂಗ ಹಾನಿಯಿಂದ ಬಳಲುತ್ತಿದ್ದು, ಕಿಡ್ನಿ, ಲಂಗ್ಸ್, ಲಿವರ್ ಸೇರಿದಂತೆ ಮತ್ತಿತರೇ ಅಂಗಗಳು ತೊಂದರೆಗೆ ಒಳಗಾಗಿರುವುದಾಗಿ ತಿಳಿದು ಬಂದಿದೆ. ಶ್ವಾಸಕೋಶ ಸಮಸ್ಯೆಯಿಂದಲೂ ಬಳಲುತ್ತಿರುವಂತ ಅವರಿಗೆ ವೆಂಟಿಲೇಟರ್ ನಲ್ಲಿ ಹೈದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಬಹು ಅಂಗಾಂಗ ತೊಂದರೆಯಿಂದ ಬಳಲುತ್ತಿರುವಂತ ಅವರಿಗೆ ಸೂಕ್ತ ಕಾಲದಲ್ಲಿ ಚಿಕಿತ್ಸೆ ಸಿಗದೇ ಹೋದ್ರೇ, ಬಹು ಅಂಗಾಂಗ ವೈಫಲ್ಯದಿಂದ ಜೀವಕ್ಕೂ ಹಾನಿ ಉಂಟಾಗಲಿದೆ ಎನ್ನಲಾಗುತ್ತಿದೆ. ಅಂದಹಾಗೆ…
ಮಂಗಳೂರು: ಹನ್ನೊಂದು ವರ್ಷಗಳಿಂದ ಸರ್ಕಾರ ನನಗೆ ನೀಡಿದ್ದ ಗನ್ ಮ್ಯಾನ್ ಭದ್ರತೆಯನ್ನು ಚುನಾವಣೆ ಘೋಷಣೆಯಾದ ದಿನದಿಂದ ವಾಪಸ್ ಪಡೆಯಲಾಗಿದ್ದು ಭಯದಿಂದ ಬದುಕಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದ್ದಾರೆ. ತಾಯಿ ಜತೆ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, 2012 ರಲ್ಲಿ ಅಕಾಡೆಮಿ ಅಧ್ಯಕ್ಷನಾಗಿದ್ದಾಗ ಏಳು ಮಂದಿಯ ತಂಡ ಕಚೇರಿಗೆ ನುಗ್ಗಿ ಯದ್ವಾತದ್ವಾ ಕೊಚ್ಚಿ ಕೊಲೆಯತ್ನ ನಡೆಸಿತ್ತು. ಅದರಲ್ಲಿ ಇಬ್ಬರು ಆರೋಪಿಗಳ ಆರೋಪ ಸಾಬೀತಾಗಿ ನ್ಯಾಯಾಲಯ ನಾಲ್ಕೂವರೆ ವರ್ಷ ಸಜೆ ವಿಧಿಸಿದೆ. ಆರೋಪಿಗಳು ಇದರ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ ಅಲ್ಲಿ ತೀರ್ಪು ಬರುವ ಮೊದಲೇ ಗನ್ ಮ್ಯಾನ್ ಭದ್ರತೆ ವಾಪಸ್ ಪಡೆದುಕೊಳ್ಳಲಾಗಿದೆ. ಇದರಿಂದ ಭಯ ಮತ್ತು ನನಗೆ ಆತಂಕ ನನ್ನನ್ನು ಕಾಡುತ್ತಿದೆ ಎಂದರು. ನನ್ನ ತಾಯಿಯವರ ಮನವೊಲಿಸಿ ಪ್ರಕರಣವನ್ನು ಹಿಂದಕ್ಕೆ ಪಡೆಯಲು ಆರೋಪಿಗಳು ಪ್ರಯತ್ನಿಸಿದ್ದಾರೆ. ಅಷ್ಟೇ ಅಲ್ಲ ನನ್ನ ಗನ್‌ಮ್ಯಾನ್‌ಗೂ ಬೆದರಿಕೆ ಹಾಕಿದ್ದರು. ಇಷ್ಟೆಲ್ಲಾ ಇದ್ದರೂ ನನ್ನ ಗನ್‌ಮ್ಯಾನ್ ಹಿಂದಕ್ಕೆ ಪಡೆದುಕೊಂಡಿರುವುದು ಎಷ್ಟು…
ನವದೆಹಲಿ: ತಿರುವನಂತಪುರಂ ಮತ್ತು ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಂದ್ರೆ, ನಾಳೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್‌ನಲ್ಲಿ ಚಾಲನೆ ನೀಡಲಿದ್ದಾರೆ. ಪ್ರಧಾನಿ ಕಾರ್ಯಾಲಯದ ಪ್ರಕಾರ, ವಂದೇ ಭಾರತ್ ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಥಳೀಯವಾಗಿ ತಯಾರಿಸಿದ, ಅರೆ-ಹೈ ಸ್ಪೀಡ್ ಮತ್ತು ಸ್ವಯಂ ಚಾಲಿತ ರೈಲು ಸೆಟ್ ಆಗಿದೆ. ರೈಲು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿದ್ದು, ಪ್ರಯಾಣಿಕರಿಗೆ ವೇಗವಾದ, ಹೆಚ್ಚು ಆರಾಮದಾಯಕ ಮತ್ತು ಹೆಚ್ಚು ಅನುಕೂಲಕರ ಪ್ರಯಾಣದ ಅನುಭವವನ್ನು ಒದಗಿಸುತ್ತದೆ. ಅ.25ರಂದು ಕೇರಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು 3,200 ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ. ನಗರದೊಂದಿಗೆ ತಡೆರಹಿತ ಸಂಪರ್ಕಕ್ಕಾಗಿ ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ಹೈಬ್ರಿಡ್ ಬೋಟ್‌ಗಳ ಮೂಲಕ ಕೊಚ್ಚಿ ಸುತ್ತಮುತ್ತಲಿನ 10…
ಉಡುಪಿ: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತರಬೇತಿ ಸಂದರ್ಭದಲ್ಲಿ ಚುನಾವಣಾ ಕರ್ತವ್ಯ ಸಂಬಂಧಿತ ಕಾರ್ಯಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು, ಅವುಗಳ ಬಗ್ಗೆ ಇರುವ ಸಂದೇಹಗಳನ್ನು ಬಗೆಹರಿಸಿಕೊಂಡು, ಮತದಾನ ದಿನದಂದು ಯಾವುದೇ ಗೊಂದಲಗಳಿಗೆ ಒಳಗಾಗದಂತೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಉಡುಪಿಯ ಸೈಂಟ್ ಸಿಸಿಲಿ ವಿದ್ಯಾಸಂಸ್ಥೆಯಲ್ಲಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ತರಬೇತಿ ಸಮಯದಲ್ಲಿ ಇ.ವಿ.ಎಂ ಗಳ ಬಳಕೆ, ವಿವಿ ಪ್ಯಾಟ್ ಬಳಕೆ ಸೇರಿದಂತೆ , ಮತದಾನ ದಿನದಂದು ಚುನಾವಣಾ ಆಯೋಗದ ನಿರ್ದೇಶನಗಳ ಅನ್ವಯ ನಡೆಯುವ ಎಲ್ಲಾ ಪ್ರಕ್ರಿಯೆಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವ ಬಗ್ಗೆ ಸವಿವರವಾಗಿ ತಿಳಿದುಕೊಳ್ಳುವಂತೆ ಹಾಗೂ ಈ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ತರಬೇತುದಾರರಿಂದ ಅದನ್ನು ಬಗೆಹರಿಸಿಕೊಂಡು, ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಚುನಾವಣಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.ಚುನಾವಣಾ ಪ್ರಕ್ರಿಯೆಯ ಯಶಸ್ಸಿಗೆ ಮತಗಟ್ಟೆ ಮಟ್ಟದಲ್ಲಿ ನಡೆಯುವ ಕಾರ್ಯವು ಅತ್ಯಂತ ಪ್ರಮುಖವಾಗಿರುವುದರಿಂದ ,ಎಲ್ಲಾ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಮತ್ತು ಪರಸ್ಪರ ಸಮನ್ವಯದಿಂದ…
ಮಂಗಳೂರು : ರಾತ್ರಿ 9.30 ಕ್ಕೆ ಬೆಂಗಳೂರಿಗೆ ತೆರಳಬೇಕಿದ್ದ ದುರ್ಗಂಬಾ ಮೋಟರ್ಸ್ KA 51B 3129, ಬಸ್ಸು, ಪ್ರಯಾಣಿಕರ ಮೇಲೆ ಯಾವುದೇ ಕಾಳಜಿ ತೋರಿಸದೆ,ಯಾವುದೇ ಬದಲಿ ವ್ಯವಸ್ಥೆ ಮಾಡದೇ,ಬಹಳ ತಡವಾಗಿ ತಡರಾತ್ರಿ 1.15 ಕ್ಕೆ ಜ್ಯೋತಿ ಯಿಂದ ಹೊರಟಿತು. ದುರ್ಗಂಬಾ ಮೋಟರ್ಸ್ ನ ಬಸ್ಸು ಮಣ್ಣಗುಡ್ಡೆಯಲ್ಲಿ ಒಂದು ಜೀಪ್ ಗೆ ಡಿಕ್ಕಿ ಹೊಡೆದ ಕಾರಣದಿಂದ, ಕದ್ರಿ ಸ್ಟೇಷನ್ ನಲ್ಲಿ ನಿಲ್ಲಿಸಿದರೂ, ಪಾಂಡೇಶ್ವರ ಠಾಣೆಯ ಪರಿಧಿಗೆ ಬರುವುದರಿಂದ ಪುನಹ ಜ್ಯೋತಿಯಲ್ಲಿ ಬಸ್ಸನ್ನು ನಿಲ್ಲಿಸಲಾಯಿತು. ಅಧಿಕ ಬಸ್ ಗಳನ್ನು ಹೊಂದಿರುವ ದುರ್ಗಂಬ ಮೋಟರ್ಸ್ ನವರು, ಕೂಡಲೇ ಬದಲಿ ವ್ಯವಸ್ಥೆ ಮಾಡದುದರಿಂದ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲಾ ಶಾಪ ಹಾಕಿದರು. ಕೊನೆಗೆ ಡ್ರೈವರ್ ನ ಅಲ್ಕೋಹೋಲಿಕ್ ಟೆಸ್ಟ್ ನ ನಂತರ, ಕೇಸನ್ನು ಧಾಖಲಿಸುವ ಒಪ್ಪಂದದ ಮೇರೆಗೆ, ಅದೇ ಚಾಲಕನು ಬಸ್ ನ್ನು ಚಲಾಯಿಸಿಕೊಂಡು ತಡರಾತ್ರಿ 1.15 ಕ್ಕೆ ಜ್ಯೋತಿಯಿಂದ ತೆರಳಲಾಯಿತು. ದುರ್ಗಂಬ ಮೋಟರ್ಸ್ ನವರು ಪ್ರಯಾಣಿಕರ ಮೇಲೆ ತೋರಿಸಿದ ಕಡೆಗಣಿಸುವ ಮನೋಭಾವವನ್ನು ಇಲ್ಲಿ ನೆರೆದಿದ್ದ ಜನರು ಖಂಡಿಸಿದರು.
ಮಂಗಳೂರು: ಅನಾಮಧೇಯ ವ್ಯಕ್ತಿಯೋರ್ವನು ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರ ಮೊಬೈಲ್ ಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯನ್ನೊಡ್ಡಿರುವ ಬಗ್ಗೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ದೂರು ದಾಖಲಾಗಿದೆ. ಎಪ್ರಿಲ್ 20ರಂದು ಮಧ್ಯಾಹ್ನ 2.28ರ ಸುಮಾರಿಗೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಮ್ಮ ಕಚೇರಿಯಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕರೊಂದಿಗೆ ಸಭೆ ನಡೆಸುತ್ತಿದ್ದರು. ಈ ವೇಳೆ 7353998242 ಮೊಬೈಲ್ ಸಂಖ್ಯೆಯಿಂದ ಜಿಲ್ಲಾಧಿಕಾರಿಯವರ ಮೊಬೈಲ್ ಗೆ ಕರೆ ಬಂದಿದೆ. ಜಿಲ್ಲಾಧಿಕಾರಿಯವರು ಕಾಲ್ ರಿಸೀವ್ ಮಾಡಿದಾಗ ಅತ್ತ ಕಡೆಯಿಂದ ಅಪರಿಚಿತ ವ್ಯಕ್ತಿಯೋರ್ವನು ಅನವಶ್ಯಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ ಜಿಲ್ಲಾಧಿಕಾರಿಯವರನ್ನು ಉದ್ದೇಶಿಸಿ ‘ಒಂದೂವರೆ ತಿಂಗಳ ಕಾಣಿಕೆ ನೀಡುತ್ತೇವೆ. ತಕ್ಷಣ ಓರ್ವ ಕೆಎಂಎಫ್ ಸಿಬ್ಬಂದಿಯನ್ನು ಮಂಗಳೂರಿನಿಂದ ತುಮಕೂರಿಗೆ ಕಳುಹಿಸಿಕೊಡಬೇಕು’ ಎಂದು ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.










