Author: main-admin

ಸುಳ್ಯ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿ ದರ್ಖಾಸು ಎಂಬಲ್ಲಿ ಏ. 20 ರಂದು ಸಂಭವಿಸಿದೆ.ಸುಬ್ಬಪ್ಪ (60)ಎಂಬವರೇ ಮೃತ ವ್ಯಕ್ತಿ. ಪಡ್ಪಿನಂಗಡಿ ದರ್ಖಾಸು ಎಂಬಲ್ಲಿರುವ ವಿಮಲ ರವರ ವಾಸದ ಮನೆಯ ಜಗಲಿಯಲ್ಲಿ ಛಾವಣಿಯ ಪಕ್ಕಾಸಿಗೆ ಶಾಲನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊಚ್ಚಿ: ಮಲಯಾಳಂನ ಖ್ಯಾತ ನಟ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ (93) ಶುಕ್ರವಾರ (ಏಪ್ರಿಲ್ 21 ರಂದು) ನಿಧನರಾದರು. ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಭಾರತ ಸಿನಿಮಾರಂಗದ ಖ್ಯಾತ ನಟರಾಗಿರುವ ಮಮ್ಮುಟ್ಟಿ ಅವರ ತಾಯಿ ಕಳೆದ ಕೆಲ ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ವರದಿಯ ಪ್ರಕಾರ ಶುಕ್ರವಾರ ಸಂಜೆ ಕೊಟ್ಟಾಯಂನ ಚೆಂಪುವಿನ ಅವರ ಹುಟ್ಟೂರಲ್ಲಿ ದಫನ ಕಾರ್ಯ ನಡೆಯಲಿದೆ. ಫಾತಿಮಾ ಇಸ್ಮಾಯಿಲ್ ಅವರಿಗೆ ಮಮ್ಮುಟ್ಟಿ,ಇಬ್ರಾಹಿಂ ಕುಟ್ಟಿ , ಶಫೀನಾ, ಅಮೀನಾ, ಸೌದಾ ಮತ್ತು ಜಕರಿಯಾ ಎನ್ನುವ ಮಕ್ಕಳಿದ್ದಾರೆ. ಮಮ್ಮುಟ್ಟಿ ಹಿರಿಯ ಮಗನಾಗಿದ್ದಾರೆ. ಮಮ್ಮುಟ್ಟಿ ಅವರ ತಾಯಿಯ ನಿಧನಕ್ಕೆ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

Read More

 ಪುತ್ತೂರಿನ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಂಡಿದೆ. ರಾಮಕಥಾ ಗಾಯಕಿ ಪ್ರೇಮಲತಾ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಸಂತ್ರಸ್ತೆ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹಿನ್ನೆಲೆ 2014ರ ಸೆ.1ರಂದು ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶಾಸ್ತ್ರಿ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಆರೋಪಪಟ್ಟಿ ದಾಖಲಿಸಿದ್ದರು. ನ್ಯಾ.ಹೇಮಂತ ಚಂದನಗೌಡರ್‌ರಿದ್ದ ಹೈಕೋರ್ಟ್‌ ಪೀಠ ಶ್ರೀಗಳ ಮತ್ತು ಕಲ್ಲಡ್ಕ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿದೆ.ರಾಘವೇಶ್ವರ ಭಾರತಿ ಸ್ವಾಮಿ ವಿರುದ್ಧ ಕೇಳಿ ಬಂದಿದ್ದ ಅತ್ಯಾಚಾರದ ಆರೋಪದಲ್ಲಿ ಶ್ಯಾಮ್ ಪ್ರಸಾದ್ ಶಾಸ್ತ್ರಿ ಪ್ರಮುಖ ಸಾಕ್ಷಿಯಾಗಿದ್ದರು. ಶ್ಯಾಮ್ ​ಪ್ರಸಾದ್ ಶಾಸ್ತ್ರಿ ಸಂತ್ರಸ್ತೆ ಮಹಿಳೆಯ ಮೈದುನ. 2014, ಆಗಸ್ಟ್ 31ರಂದು ಅವರು ತಮ್ಮ ಮನೆಯಲ್ಲಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ…

Read More

ಬಂಟ್ವಾಳ: ಯುವಕನೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ಮಾಡಮೆ ಎಂಬಲ್ಲಿ ನಡೆದಿದೆ. ಸಿದ್ದಕಟ್ಟೆ ದೇವಸ್ಯ ನಿವಾಸಿ ದುರ್ಗಾ ಪ್ರಸಾದ್ ಮೃತರು ಎಂದು ಗುರುತಿಸಲಾಗಿದೆ.ದುರ್ಗಾ ಪ್ರಸಾದ್ ಸಿದ್ಧಕಟ್ಟೆ ಸಮೀಪದ ಮಾಡಮೆ ಎಂಬಲ್ಲಿ ಮನೆಯೊಂದರಲ್ಲಿ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ‌ದೂರು ದಾಖಲಾಗಿದೆ.

Read More

ರಾಜ್ಯದ ಹಲವೆಡೆ ನಡೆದಿರುವ ಇಡಿ, ಐಟಿ ಅಧಿಕಾರಿಗಳ ದಾಖಲೆ ಪರಿಶೀಲನೆ ಕಾರ್ಯ ಉಡುಪಿಯಲ್ಲಿ ಕೂಡಾ ನಡೆದಿದ್ದು, ಉಡುಪಿಯ ಹಲವು ಉದ್ಯಮಿ, ಕಂಟ್ರಾಕ್ಟರ್ ದಾರರ ಮನೆಗಳಲ್ಲಿ ದಾಖಲೆ ಪರೀಶೀಲನೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಇಡಿ ಅಧಿಕಾರಿಗಳು ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರ ಸುದೇಶ್ ಶೆಟ್ಟಿ ಯ ಮಾಲಿಕತ್ವದ ಮಲ್ಪೆಯಲ್ಲಿರುವ ಗೆಸ್ಟ್ ಹೌಸ್ ನ ಕಚೇರಿ, ರೆಸ್ಟೋರೆಂಟ್, ಅಂಗಡಿ, ಮನೆ ಮತ್ತು ಇತರ ಕಡೆಗಳಲ್ಲಿ 10 ರಿಂದ 12 ಜನ ಡಿ ಅಧಿಕಾರಿಗಳು ಏಕಕಾಲಕ್ಕೆ ದಾಖಲೆ ಪರೀಶೀಲನೆ ನಡೆಸಿದ್ದಾರೆ.ಮತ್ತೊಂದು ಘಟನೆಯಲ್ಲಿ ಉಡುಪಿಯ ಪ್ರಥಮ ದರ್ಜೆ ಪಿ ಡ್ಬ್ಲೂಡಿ ಕಂಟ್ರಕ್ಟರ್ ಡಾ. ಜಿ ಶಂಕರ್ ಸಂಸ್ಥೆಗಳಲ್ಲಿ ಕೂಡಾ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನೋಂದಣಿಯ ವಾಹನದಲ್ಲಿ ಆಗಮಿಸಿದ ಅಧಿಕಾರಿಗಳು ಏಕಕಾಲದಲ್ಲಿ ಜಿ.ಶಂಕರ್ ಮನೆ ಸೇರಿ, ಸಂಸ್ಥೆಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

Read More

ಕಡಬ: ಗ್ಯಾಸ್‌ ದರವು ಕಡಿಮೆಯಾಗಿದ್ದರು ಹಿಂದಿನ ದರವನ್ನೇ ಪಡೆದ ಸಿಬ್ಬಂದಿಯನ್ನು ಆಟೋ ಚಾಲಕ ಪ್ರಶ್ನಿಸಿದಾಗ ಉಡಾಫೆ ಉತ್ತರ ನೀಡಿದ್ದು, ಇದರಿಂದ ಆಕ್ರೋಶಗೊಂಡ ಆಟೋ ಚಾಲಕರು ಪಂಪ್‌ಗೆ ಮುತ್ತಿಗೆ ಹಾಕಿದ ಕಡಬದಲ್ಲಿ ನಡೆದಿದೆ ಆಟೋ ಎಲ್‌ಪಿಜಿ ದರದಲ್ಲಿ ಕಡಿತವಾಗಿದ್ದರೂ ಮುಂಜಾನೆ 6ರಿಂದ 9ರವರೆಗೆ ಎಲ್‌ಪಿಜಿ ಪಂಪಿನಲ್ಲಿ ಹಳೆ ದರದಲ್ಲಿಯೇ ಗ್ಯಾಸ್ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಆಟೋ ಚಾಲಕನಿಗೆ ಗ್ಯಾಸ್‌ ಸಿಬ್ಬಂದಿ “ಹೋಗಿ ಹಗ್ಗ ತಗೊಳ್ಳಿ” ಎಂದು ಉಡಾಫೆ ಉತ್ತರ ನೀಡಿದ್ದಾರೆನ್ನಲಾಗಿದೆ. ಈ ವಿಷಯ ತಿಳಿದು ಆಟೋ ಚಾಲಕರು ಪಂಪ್‌ಗೆ ದೌಡಾಯಿಸಿ ಆಟೋ ಚಾಲಕರಿಂದ ಪಡೆದ ಅಧಿಕ ದರವನ್ನು ವಾಪಾಸು ನೀಡುವುದಲ್ಲದೆ ಸಿಬ್ಬಂದಿ ಕ್ಷಮೆ ಹೇಳಬೇಕೆಂದು ಹಠ ಹಿಡಿದಿದ್ದಾರೆ. ಕೂಡಲೇ ಸೇಲ್ಸ್ ಮ್ಯಾನೇಜರ್ ಮಧ್ಯಪ್ರವೇಶಸಿ ಸಿಬ್ಬಂದಿಗಳಿಂದ ಆಗಿರುವ ಪ್ರಮಾದವನ್ನು ಒಪ್ಪಿಕೊಂಡು, ಬೆಳಿಗ್ಗೆ 6 ಗಂಟೆಯಿಂದ 9 ಗಂಟೆ ತನಕ ಗ್ಯಾಸ್ ಹಾಕಿರುವ ಆಟೋಗಳಿಂದ ಹೆಚ್ಚುವರಿಯಾಗಿ ಪಡೆದುಕೊಂಡಿರುವ ಹಣವನ್ನು ತಮ್ಮ ವೈಯುಕ್ತಿಕ ಖಾತೆಯಿಂದ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಗಳೂರು: ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ. ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ (22) ಮೃತರು.ಇನ್ನು ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್‌ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಅದರಲ್ಲಿ ಜೆಸಿಬಿಯ ಚಾಲಕ ಸಿಲುಕಿಕೊಂಡ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ಧಾವಿಸಿ ಬಂದಿದ್ದರು. ಸ್ಥಳೀಯರು ಹಾಗೂ ಎರಡು ಜೆಸಿಬಿ ಸಹಾಯದಿಂದ ಮಣ್ಣು ತೆಗೆಯಲಾಯಿತಾದರೂ, ಅದಾಗಲೇ ಚಾಲಕ ಮೃತಪಟ್ಟಿದ್ದರು ಎನ್ನಲಾಗಿದೆ.

Read More

ನವದೆಹಲಿ: ಇಂದು (ಏಪ್ರಿಲ್ 20) ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದ್ದು, ಭಾರತೀಯ ಕಾಲಮಾನದ ಸೂರ್ಯಗ್ರಹಣವು ಬೆಳಗ್ಗೆ 7:04 ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 12:29 ಕ್ಕೆ ಕೊನೆಗೊಳ್ಳುತ್ತದೆ. ಒಟ್ಟು ಸಮಯವು ಐದು ಗಂಟೆಗಳಿಗಿಂತ ಹೆಚ್ಚು ಇರುತ್ತದೆ. ಸೂರ್ಯಗ್ರಹಣ ಎಲ್ಲೆಲ್ಲಿ ಗೋಚರಿಸುತ್ತದೆ? ಗ್ರಹಣವು ಆಸ್ಟ್ರೇಲಿಯಾ, ಪೂರ್ವ ಮತ್ತು ದಕ್ಷಿಣ ಏಷ್ಯಾ, ಪೆಸಿಫಿಕ್ ಮಹಾಸಾಗರ, ಅಂಟಾರ್ಟಿಕಾ ಮತ್ತು ಹಿಂದೂ ಮಹಾಸಾಗರದಿಂದ ಗೋಚರಿಸುತ್ತದೆ. ಆದರೆ ಭಾರತದಲ್ಲಿ ಗೋಚರಿಸುವುದಿಲ್ಲ. ‘ವಾರ್ಷಿಕ ರಿಂಗ್ ಆಫ್ ಫೈರ್’ಸಮಯದಲ್ಲಿ ಇದು ಭಾರತೀಯ ಮತ್ತು ಪೆಸಿಫಿಕ್ ಸಾಗರಗಳಲ್ಲಿ ಕೆಲವು ಸೆಕೆಂಡುಗಳ ಕಾಲ ಗೋಚರಿಸುತ್ತದೆ. ಸ್ಪೇಸ್ ಡಾಟ್ ಕಾಮ್ ಪ್ರಕಾರ, ಎಕ್ಸ್‌ಮೌತ್, ವೆಸ್ಟರ್ನ್ ಆಸ್ಟ್ರೇಲಿಯಾ, ಟಿಮೋರ್ ಲೆಸ್ಟೆ ಮತ್ತು ವೆಸ್ಟ್ ಪಪುವಾ ಸೇರಿದಂತೆ ಭೂಮಿಯ ಮೇಲಿನ ಮೂರು ಸ್ಥಳಗಳಲ್ಲಿ ಮಾತ್ರ ಸಂಪೂರ್ಣ ಗ್ರಹಣ ಗೋಚರಿಸುತ್ತದೆ. ಈ ಗ್ರಹಣವು ಒಂದು ವಿಧದ ಸೂರ್ಯಗ್ರಹಣವಾಗಿದ್ದು, ಅದು ವಾರ್ಷಿಕ ಸೂರ್ಯಗ್ರಹಣ ಅಥವಾ ಸಂಪೂರ್ಣ ಸೂರ್ಯಗ್ರಹಣದಂತೆ ಕಾಣುತ್ತದೆ. ಇದು ಕೇಂದ್ರ ಗ್ರಹಣದ ಹಾದಿಯಲ್ಲಿ ವೀಕ್ಷಕರ ಸ್ಥಳವನ್ನು ಅವಲಂಬಿಸಿರುತ್ತದೆ. ಸೌರ ಗ್ರಹಣದ ಸಮಯದಲ್ಲಿ,…

Read More

ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್’ನ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ನಿರೀಕ್ಷೆಯಂತೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಅಲಿ ಅವರಿಗೆ ಟಿಕೆಟ್ ನೀಡಲಾಗಿದೆ.‌ ಈ ಕ್ಷೇತ್ರದಲ್ಲಿ ಇನಾಯತ್ ಅಲಿ ಮತ್ತು ಮೊಯ್ದೀನ್ ಬಾವ ನಡುವೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕೊನೆಗೂ ಈ ಸ್ಪರ್ಧೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತ ಇನಾಯತ್ ಅಲಿ ಜಯಗಳಿಸಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಟಿಕೆಟ್ ವಂಚಿತ ಮೊಯ್ದೀನ್ ಬಾವ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ. ಉಳಿದಂತೆ ರಾಯಚೂರು – ಮುಹಮ್ಮದ್ ಷಾ ಆಲಂ, ಶಿಡ್ಲಘಟ್ಟ – ಜಿ.ವಿ. ರಾಜಿವ್ ಗೌಡ, ಸಿವಿ ರಾಮನ್‌ನಗರ ಎಸ್ಸಿ- ಎಸ್. ಆನಂದ್‌ ಕುಮಾರ್, ಅರಕಲಗೂಡು – ಎಚ್.ಪಿ.‌ ಶ್ರೀಧರ ಗೌಡ ಅವರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ.

Read More

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಇದೀಗ ನಾಮಪತ್ರ ಸಲ್ಲಿಕೆಯ ಪರ್ವ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳಲ್ಲಿ ಕೋಟ್ಯಧೀಶ್ವರರೇ ಅಧಿಕ ಮಂದಿ. ನಾಮಪತ್ರದೊಂದಿಗೆ ಅಭ್ಯರ್ಥಿಗಳು ಸಲ್ಲಿಸಿರುವ ಆಸ್ತಿ ವಿವರದ ಅಫಿಡವಿಟ್‌ನಲ್ಲಿ ಮಾಹಿತಿ ಪ್ರಕಾರ ಅಧಿಕ ಮಂದಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಸ್ತಿ ಹೊಂದಿದ್ದಾರೆ. ಹರೀಶ್ ಪೂಂಜ ಆಸ್ತಿ ವಿವರ ಬೆಳ್ತಂಗಡಿಯ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಸ್ವಂತ ಚರಾಸ್ತಿ ಒಟ್ಟು 1,24,46,101 ರೂ. ಹಾಗೂ 1,05,32,500 ರೂ. ಮೌಲ್ಯದ ಚರಾಸ್ತಿಯನ್ನು ಹೊಂದಿದ್ದಾರೆ. ಪತ್ನಿ ಹೆಸರಿನಲ್ಲಿ ಒಟ್ಟು 97,55,280 ರೂ. ಚರಾಸ್ತಿ ಇದ್ದು, ಯಾವುದೇ ಸ್ಥಿರಾಸ್ತಿ ಹೊಂದಿಲ್ಲ. 1,06,29,074 ರೂ. ಸಾಲ ಹೊಂದಿದ್ದರೆ, ಪತ್ನಿ 5 ಲಕ್ಷ ರೂ. ಸಾಲ ಹೊಂದಿದ್ದಾರೆ. ಬರೋಬ್ಬರಿ 2.20 ಲಕ್ಷ ರೂ.ಗಳ ಐಫೋನ್‌ಅನ್ನು ಇರುವ ಹರೀಶ್ ಪೂಂಜಾ ಇನ್ನೋವಾ ಕ್ರಿಸ್ಟಾ, ಇನ್ನೋವಾ, ಸ್ವಿಫ್ಟ್ ಮೋಟಾರ್ ಕಾರ್ ಗಳನ್ನು ಹೊಂದಿದ್ದಾರೆ. 179 ಗ್ರಾಂ ಮೌಲ್ಯದ ಚಿನ್ನ ಇದ್ದರೆ, ಪತ್ನಿ…

Read More