Author: main-admin

ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ಬಂಧಿತ ಆರೋಪಿ. ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳೆ ನಡೆಸಿದ್ದಾರೆ. ಬಂಧಿತನಿಂದ 12 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ ವಸ್ತುವನ್ನು ಮಾರಾಟ ಮಾಡಲು ಉಪಯೋಗಿಸಿದ ಆಟೋ ರಿಕ್ಷಾವನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ. ವಶಕ್ಕೆ ಪಡೆದ ಒಟ್ಟು ಸ್ವತ್ತುಗಳ ಮೌಲ್ಯ 95,000 ಆಗಬಹುದು ಎಂದು ಅಂದಾಜಿಸಲಾಗಿದೆ. ಉಳ್ಳಾಲ ಪೊಲೀಸ್ ನಿರೀಕ್ಷಕ ಸಂದೀಪ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಠಾಣ ಉಪನಿರೀಕ್ಷಕ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಶೋಕ್, ಮಂಜುನಾಥ್ ದಾಳಿ ಮಾಡಿ ಪ್ರಕರಣ ಬೇಧಿಸಿದ್ದಾರೆ. ಆರೋಪಿ ಹಲವು ವರ್ಷಗಳಿಂದ ತನ್ನ ರಿಕ್ಷಾವನ್ನು ಕೂಡ ಅಪರಿಮಿತ ವೇಗದಿಂದ ಚಲಾಯಿಸುತ್ತಿದ್ದು, ಹಲವು ರೀತಿಯ ಅಪಘಾತಗಳು…

Read More

ಬೆಳ್ತಂಗಡಿ: ಬೆಳ್ತಂಗಡಿ ಮಾಜಿ ಕಾಂಗ್ರೆಸ್ ಶಾಸಕ ವಸಂತ ಬಂಗೇರ ಧರ್ಮಸ್ಥಳ ಸೌಜನ್ಯ ರೇಪ್ ಅಂಡ್ ಮರ್ಡರ್ ಕೇಸ್ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಳ್ತಂಗಡಿಯಲ್ಲಿ ಹೇಳಿಕೆ ನೀಡಿದ ಅವರು, ಸೌಜನ್ಯ ಪ್ರಕರಣದ ಈ ರಹಸ್ಯವನ್ನು ಬಿಚ್ಚಿಟ್ಟರೆ ನನ್ನನ್ನೂ ಸಾಯಿಸಬಹುದು ಎಂದು ಬಹಿರಂಗವಾಗಿ ಹೇಳಿದ್ದಾರೆ. “ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ ” ಆದರೆ, ಸಿಬಿಐ ತನಿಖೆಯ ದಾರಿ ತಪ್ಪಿಸಲಾಗಿತ್ತು ಎಂದರು. ನನ್ನನ್ನ ಕರೆದು ಹೇಳಿದ್ರು ಇದನ್ನ ಪ್ರಸ್ತಾಪ ಮಾಡಬೇಡ …ಈ ಕೇಸನ್ನ ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ, ನಾನು ಸುಮಾರು ಒಂದೂ ಗಂಟೆಗೂ ಅಧಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದೆ. ಕೇವಲ ಸೌಜನ್ಯ ಪ್ರಕರಣ ಮಾತ್ರವಲ್ಲ ಬೆಳ್ತಂಗಡಿಯಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ತಿಳಿಸಿದೆ. ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯ ಪ್ರಕರಣವನ್ನ ಸಿಬಿಐಗೆ ವಹಿಸಿದೆ ಎಂದರು. ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತೆ ಎಂಬ ನಂಬಿಕೆ ನನಗಿತ್ತು. ಆದರೆ ಸಿಬಿಐ ತನಿಖೆಯ ಅರ್ಧದಲ್ಲಿ ಇದರಲ್ಲಿ…

Read More

ಮಂಗಳೂರು : ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್ ಅಟ್ಯಾಕ್ ಆಗಿ  ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ  ಪ್ರೀತಿಸಿ  ಮದುವೆಯಾಗಿದ್ದರು. ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ.

Read More

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ನನ್ನು ಬಂಧಿಸಿದ್ದಾರೆ.ಬಂಧಿತನಿಂದ 12 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ ವಸ್ತುವನ್ನು ಮಾರಾಟ ಮಾಡಲು ಉಪಯೋಗಿಸಿದ ಆಟೋರಿಕ್ಷವನ್ನು ವಶಕ್ಕೆ ಪಡೆದು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗಿದೆ.95,000 ಮೌಲ್ಯದ ಒಟ್ಟು ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಉಳ್ಳಾಲ ಪೊಲೀಸ್ ನಿರೀಕ್ಷಕ ಸಂದೀಪ್ ರವರ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್ ಠಾಣ ಉಪನಿರೀಕ್ಷಕ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿಗಳಾದ ರಂಜಿತ್,ಅಶೋಕ್, ಮಂಜುನಾಥ್ ರವರುಗಳು ದಾಳಿ ಮಾಡಿ ಪ್ರಕರಣ ಬೇಧಿಸಿದ್ದಾರೆ.ಆರೋಪಿ ಹಲವು ವರ್ಷಗಳಿಂದ ತನ್ನ ರಿಕ್ಷಾವನ್ನು ಕೂಡ ಅಪರಿಮಿತ ವೇಗದಿಂದ ಚಲಾಯಿಸುತ್ತಿದ್ದು, ಹಲವು ರೀತಿಯ ಅಪಘಾತಗಳು ಸ್ವಲ್ಪ ಅಂತರದಲ್ಲಿ ತಪ್ಪಿದೆ.

Read More

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹಾಕಿರುವ ಬ್ಯಾನರ್‌ಗಳ ತೆರವಿಗೆ ಆದೇಶ ಹೊರಡಿಸಲಾಗಿದೆ. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವಿಗೆ ಸೂಚನೆ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ಞಾವಂತ ನಾಗರಿಕರು, ಬೆಳ್ತಂಗಡಿ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವು ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು‌ ನೀಡಲಾಗಿತ್ತು. ಈ ದೂರಿನಲ್ಲಿ ದೂರಿನಲ್ಲಿ ಕು. ಸೌಜನ್ಯ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ‘ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡುವ ನಿಟ್ಟಿನಲ್ಲಿ’, ‘ಯಾರು ಯಾರನ್ನೋ ಆರೋಪಿತರನ್ನಾಗಿ ಬಿಂಬಿಸಿಕೊಂಡು’ ‘ಧರ್ಮ ಧರ್ಮಗಳ ನಡುವೆ ಒಡಕು ಉಂಟು ಮಾಡಲಾಗುತ್ತಿದೆ’ ‘ಇದರಿಂದಾಗಿ ಸಮಾಜದಲ್ಲ, ಅಶಾಂತಿ ಉಂಟಾಗಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ’ ‘ಆದುದರಿಂದ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ’ ‘ಕಾನೂನು ಬಾಹಿರವಾಗಿ ಅಳವಡಿಸಿರುವ…

Read More

ಮಂಗಳೂರು : ಯಶಸ್ವಿ ಉದ್ಯಮಿಯೋರ್ವರು ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಗೈದ ಘಟನೆ ಮಂಗಳೂರು ನಗರದ ಬೆಂದೂರ್‌ವೆಲ್ ಬಳಿ ಭಾನುವಾರ ನಡೆದಿದೆ. ನಗರದ ಬಿಲ್ಡರ್, ಯುವ ಉದ್ಯಮಿ ಮೋಹನ್ ಅಮೀನ್ (48) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ. ಬಹುಮಹಡಿ ಕಟ್ಟಡದ 17 ನೇ ಮಹಡಿಯಿಂದ ಇಂದು ಮುಂಜಾನೆ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದು ಬಂದಿಲ್ಲ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದಾರೆ.

Read More

ಗೃಹಜ್ಯೋತಿ ಯೋಜನೆಯಡಿ ನೋಂದಣಿ ಆಗಿರುವ ಕೆಲವು ಗ್ರಾಹಕರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ಬದಲಿಗೆ ಬಳಕೆ ಮಾಡಿದ ವಿದ್ಯುತ್ ಬಿಲ್ ನೀಡಲಾಗಿದೆ. ಇಂಧನ ಇಲಾಖೆಯ ಆದೇಶದ ಅನ್ವಯ ಜುಲೈ 27ಕ್ಕೆ ಮೊದಲೇ ನೋಂದಣಿ ಮಾಡಿಸಿಕೊಂಡಿದ್ದರೂ ಎಂದಿನಂತೆಯೇ ಬಿಲ್ ಬಂದಿದ್ದು, ಕೆಲವು ಗ್ರಾಹಕರು ಬಿಲ್ ಪಾವತಿಸಬೇಕೆ, ಬೇಡವೇ ಎನ್ನುವ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ಪಡೆದ 2.16 ಕೋಟಿ ಗ್ರಾಹಕರಲ್ಲಿ 2.14 ಕೋಟಿ ಮಂದಿ 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುತ್ತಿದ್ದು, ಇದುವರೆಗೆ 1.41 ಕೋಟಿ ಕುಟುಂಬಗಳು ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿವೆ. ಇವರೆಲ್ಲರಿಗೂ ಆಗಸ್ಟ್ ನಿಂದ ಶೂನ್ಯ ಬಿಲ್ ಬರಲಿದೆ ಎಂದು ಹೇಳಲಾಗಿತ್ತು. ಆದರೆ ಜುಲೈ 27ಕ್ಕೆ ಮೊದಲೇ ನೋಂದಾಯಿಸಿದ್ದರೂ ಶೂನ್ಯ ಬಿಲ್ ಪಡೆಯುವ ಭಾಗ್ಯ ಸಿಕ್ಕಿಲ್ಲ. ಜು. 27 ರ ನಂತರ ನೋಂದಾಯಿಸಿದವರಿಗೆ ಆಗಸ್ಟ್ ನಲ್ಲಿ ಶೂನ್ಯ ಬಿಲ್ ಬರಲಿದೆ.

Read More

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ವಿಶೇಷ ನ್ಯಾಯಾಧೀಶರು ಅಪರಾಧದ ವಿಚಾರಣೆ ಅಂಗೀಕರಿಸಿ ಆರೋಪಿಯ ವಿರುದ್ಧ ದೋಷಗಳನ್ನು ಪಟ್ಟಿ ಮಾಡಿದ ನಂತರ ಪೂರ್ವಾನುಮತಿಯ ಅಲಭ್ಯತೆ ಅಥವಾ ಅಮಾನ್ಯತೆಯ ಕಾರಣದಿಂದ ಆ ಪ್ರಕರಣದ ವಿಚಾರಣೆಯನ್ನು ಮಧ್ಯದಲ್ಲಿ ನಿಲ್ಲಿಸುವಂತಿಲ್ಲ ಅಥವಾ ತಡೆಯಾಜ್ಞೆ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನು ಒಳಗೊಂಡ ಪೀಠವು, ‘ವಿಚಾರಣೆಯ ಮಧ್ಯದಲ್ಲಿ ಪ್ರಕರಣ ರದ್ದುಗೊಳಿಸುವ ಮಧ್ಯಂತರ ಅರ್ಜಿಯು ವಿಚಾರಣೆಗೆ ಯೋಗ್ಯವಲ್ಲ. ಆದರೆ, ಪೂರ್ವಾನುಮತಿಯ ಮಂಜೂರಾತಿ ಬಗ್ಗೆ ವಿಚಾರಣೆಯ ಕೊನೆಯ ವಾದ ಪ್ರತಿವಾದದ ವೇಳೆ ಪ್ರಸ್ತಾಪಿಸಬಹುದು’ ಎಂದು ತಿಳಿಸಿದೆ. ಪೂರ್ವಾನುಮತಿ ಮಾನ್ಯತೆ ಕುರಿತು ಪ್ರಶ್ನೆಗಳಿದ್ದಲ್ಲಿ ಅದನ್ನು ಪ್ರಕರಣದ ವಿಚಾರಣೆ ಆರಂಭಿಸುವ ಮೊದಲೇ ಗಮನಕ್ಕೆ ತರುವುದು ಉತ್ತಮ ಎಂದು ಪೀಠ ಹೇಳಿದೆ. 2018ರ ಆಗಸ್ಟ್‌ 16ರಂದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್‌ 13 (2)ರೊಂದಿಗೆ ಸೆಕ್ಷನ್‌ 13 (1) (ಇ) ಅಡಿಯಲ್ಲಿ ದಾಖಲಾದ ದೋಷಾರೋಷಗಳನ್ನು ಖುಲಾಸೆಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಲೋಕಾಯುಕ್ತ ಮೇಲ್ಮನವಿ ಸಲ್ಲಿಸಿತ್ತು.…

Read More

ನವದೆಹಲಿ: ಭಾರತದ ಮೂರನೇ ಚಂದ್ರಯಾನ ಯಾತ್ರೆ ಚಂದ್ರಯಾನ-3 ಇಂದು (ಶನಿವಾರ) ತನ್ನ ಪ್ರಯಾಣದಲ್ಲಿ ನಿರ್ಣಾಯಕ ಹಂತವನ್ನು ಇಂದು ತಲುಪಲಿದೆ. ಹೌದು. ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಟ್ವೀಟ್ ಮೂಲಕ ತಿಳಿಸಿದೆ. ಭೂಮಿಯಿಂದ ಉಡಾವಣೆಯಾದ ಚಂದ್ರಯಾನ ನೌಕೆಯು, ಈಗ ತನ್ನ ಉದ್ದೇಶಿದ ಗುರಿಯಾದ ಚಂದ್ರನ ಕಕ್ಷೆಯನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಪ್ರವೇಶಿಸುವ ಮೂಲಕ ಮತ್ತೊಂದು ಹಂತವನ್ನು ಸಫಲವಾಗಿ ಪೂರ್ಣಗೊಳಿಸಿದಂತಾಗಿದೆ. ಇದು ಇಸ್ರೋದ ಯೋಜನೆಯ ಮತ್ತೊಂದು ಯಶಸ್ಸಾಗಿದೆ. ಮುಂದಿನ ಕಾರ್ಯಾಚರಣೆಯಾದ ಕಕ್ಷೆಯ ಸಂಕೋಚನ ಪ್ರಕ್ರಿಯೆಯನ್ನು ಆಗಸ್ಟ್ 6ರ ಭಾನುವಾರ ರಾತ್ರಿ 11 ಗಂಟೆ ಹಾಗೆ ನಿಗದಿಪಡಿಸಲಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ಮಾಹಿತಿ ನೀಡಿದೆ. ಜುಲೈ 14 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾದ ಚಂದ್ರಯಾನ-3, ಭಾರತದ ಮೂರನೇ ಚಂದ್ರನ ಅನ್ವೇಷಣೆಯಾಗಿದೆ. ಈ ಮಿಷನ್ ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಮಾಡುವ ಗುರಿಯನ್ನು ಹೊಂದಿದೆ. ಇದು ಎಂಟು…

Read More

ಪುತ್ತೂರು: ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ವಿಷ್ಣು ಕಲ್ಲುರಾಯರ ಎಂಬವರ ಮನೆಯಿಂದ ಅಡಿಕೆ ಯನ್ನು ಕದ್ದ ಕಳ್ಳರನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಪುತ್ತೂರಿನ ನಿವಾಸಿಗಳಾದ ಕಿರಣ್ ಕುಮಾರ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದೆ. ಆರೋಪಿಗಲು ಜುಲೈ ತಿಂಗಳಲ್ಲಿ ವಿಷ್ಣುಕಲ್ಲುರಾಯ ಅವರ ಮನೆಯಿಂದ 2 ಕ್ವಿಂಟಾರ ಒಣ ಅಡಿಕೆ ಹಾಗೂ ಹುಲ್ಲು ತೆಗೆಯುವ ಮೇಷಿನ್ ಕಳ್ಳತನ ಮಾಡಿದ್ದರು. ಈ ಕುರಿತಂತೆ ದೂರು ದಾಖಲಾಗಿತ್ತು, ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 1 ಕ್ವಿಂಟಾಲ್ ಅಡಿಕೆ ಮತ್ತುಹುಲ್ಲು ತೆಗೆಯುವ ಮೇಷಿನ್ ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಕಾರನ್ನು ವಶ ಪಡಿಸಿಕೊಂಡಿದ್ದಾರೆ.

Read More