Author: main-admin

ನವದೆಹಲಿ: ಶಿವಮೊಗ್ಗ ಮೂಲದ ಭಯೋತ್ಪಾದಕ ಸಂಚುಗಾರ ಅರಾಫತ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ ತಂಡ (ಎನ್​ಐಎ) ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮೂಲತಃ ತೀರ್ಥಹಳ್ಳಿ ಮೂಲದ ಅರಾಫತ್ ಅಲಿ 2020ರ ಬಳಿಕ ತಲೆಮರೆಸಿಕೊಂಡಿದ್ದ. ನೈರೋಬಿಯಾದಿಂದ ದೆಹಲಿಗೆ ವಾಪಾಸ್ ಆಗುತ್ತಿದ್ದಾಗ ಎನ್​ಐಎ ಬಲೆಗೆ ಬಿದ್ದಿದ್ದಾನೆ. ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗದಿದ್ದರೂ, ಮಂಗಳೂರು ಕುಕ್ಕರ್ ಬಂದ್ ಸ್ಪೋಟದ , ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮಂಗಳೂರಿನ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಪೋತ ನಡೆಸುವ ಸಲುವಾಗಿ ಕುಕ್ಕರ್ ಬಾಂಬ್ ತೆಗೆದುಕೊಂಡು ಹೋಗಿದ್ದ ಮೊಹಮ್ಮದ್ ಶಾರೀಖ್ ಜತೆಯೂ ಸಂಪರ್ಕದಲ್ಲಿದ್ದ ಎಂದು ಎನ್ ಐಎ ತಿಳಿಸಿದೆ. 2020ರಲ್ಲಿ ಕರ್ನಾಟಕದ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಮತೀನ್ ಜೊತೆಗೆ ಅರಾಫತ್ ಅಲಿ ದೇಶ ಬಿಟ್ಟು ಹೋಗಿದ್ದನು.

Read More

ಮಂಗಳೂರು : ಗಡಿ ಭಾಗದ ಮಂಜೇಶ್ವರ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂದಿತು ಆರೋಪಿಗಳನ್ನು ಉಪ್ಪಳ ಪತ್ವಾಡಿಯ ನೂರ್ ಅಲಿ(42), ಉಪ್ಪಳ ಹಿದಾಯತ್‌ ನಗರದ ಅಫ್ಜಲ್ (38) ಮತ್ತು ಕೆ.ಎಸ್.ಸತ್ತಾರ್ (37) ಎಂದು ಗುರುತಿಸಲಾಗಿದೆ. ನೂರ್ ಅಲಿ ಕೆಲ ವರ್ಷಗಳ ಹಿಂದೆ ತಲಪಾಡಿಯಲ್ಲಿ ಉಪ್ಪಳದ ಕಾಲಿಯಾ ರಫೀಕ್‌ನನ್ನು ಗುಂಡಿಕ್ಕಿ ಕೊಲೆಗೈದ ಪ್ರಕರಣದ ಆರೋಪಿ ಯಾಗಿದ್ದಾನೆ. ಎರಡು ವಾರಗಳ ಹಿಂದೆ ಉಪ್ಪಳ ಹಿದಾಯತ್ ನಗರದಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಬಂಧಿಸಲಾಗಿ ದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರ ಸಂಖ್ಯೆ ಐದಕ್ಕೇರಿದೆ. ಜಿಪಂ ಸದಸ್ಯ ಗೋಲ್ಡನ್‌ ಅಬ್ದುರಹ್ಮಾನ್ ಸೇರಿದಂತೆ ಇಬ್ಬರನ್ನು ಈ ಹಿಂದೆ ಬಂಧಿಸಲಾಗಿತ್ತು. ಇನ್ನೋರ್ವ ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲ್ಲೆಯಿಂದ ಮಂಜೇಶ್ವರ ಠಾಣಾ ಸಬ್‌ಇನ್‌ಸ್ಪೆಕ್ಟರ್ ಅನೂಪ್‌ ಸೇರಿದಂತೆ ಇಬ್ಬರು ಪೊಲೀಸರು ಗಾಯಗೊಂಡಿದ್ದರು.

Read More

ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಒಬ್ಬರಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚಿತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿರುವ ಮಾಹಿತಿ ಬಹಿರಂಗವಾಗಿದೆ. ಸಿಸಿಬಿ ಕಚೇರಿಯಲ್ಲಿ ನಿನ್ನೆ ವಿಚಾರಣೆಗೆ ಹಾಜರಾಗಿದ್ದ ವೇಳೆಯೂ ಏಕಾಏಕಿ ಚೈತ್ರಾ ಕುಂದಾಪುರ ಕುಸಿದುಬಿದ್ದಿದ್ದರು. ವಿಚಾರಣೆ ಬಳಿಕ ಅವರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಇದೀಗ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಚೈತ್ರಾ ಕುಂದಾಪುರ, ಮತ್ತೆ ಮೂರ್ಛೆ ಹೋಗಿದ್ದು, ಆಕೆಯ ಬಾಯಿಯಲ್ಲಿ ನೊರೆ ಕೂಡ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚೈತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

Read More

ಮಂಗಳೂರು : ಮಂಗಳೂರು ನಗರ ಪೊಲೀಸ್ ಸೇವೆಯಲ್ಲಿದ್ದ ಉತ್ತರ ಕರ್ನಾಟಕದ ಪೊಲೀಸ್ ಕಾನ್ಸ್‌ಟೇಬಲ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವದತ್ತಿಯ ಮಹೇಶ್ (31) ಜೀವಾಂತ್ಯ ಮಾಡಿಕೊಂಡ ಪೊಲೀಸ್ ಸಿಬಂದಿಯಾಗಿದ್ದಾರೆ. ನಗರದ ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು  ಕೌಟುಂಬಿಕ ಕಲಹವೇ ಮಹೇಶ್ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಒಂದುವರೆ ತಿಂಗಳ ಹಿಂದೆಯಷ್ಟೇ ಮಹೇಶ್ ವಿವಾಹವಾಗಿದ್ದರು ಎನ್ನಲಾಗಿದ್ದು ಕಪಿತಾನಿಯೋ ಬಳಿಯ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ಕಂಟೇನರ್ ಲಾರಿಯಲ್ಲಿ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಲ್ಪೆಯ ತೊಟ್ಟಂನಲ್ಲಿ ಇಂದು ನಡೆದಿದೆ. ಮೃತರನ್ನು ಒರಿಸ್ಸಾ ಮೂಲದ ಬಾಬುಲ್ಲ (38) ಹಾಗೂ ಭಾಸ್ಕರ್ (40) ಎಂದು ಗುರುತಿಸಲಾಗಿದೆ. ತೊಟ್ಟಂನಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಮನೆಗೆ ಗ್ರಾನೈಟ್ ತರಲಾಗಿತ್ತು. ಕಂಟೇನರ್ ಲಾರಿಯಲ್ಲಿದ್ದ ಗ್ರಾನೈಟ್ ಇಳಿಸುವಾಗ ಆಕಸ್ಮಿಕವಾಗಿ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಜೀವ ರಕ್ಷಕ ಈಶ್ವರ್ ಮಲ್ಪೆ ತಂಡದವರು ಮೃತದೇಹವನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Read More

ಮಂಗಳೂರು : ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಯ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಈಗಾಗಲೇ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ಹಲವರನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಮೊದಲ ಬಾರಿಗೆ ಚೈತ್ರಾ ಕುಂದಾಪುರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ”ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಗೆ ಬರುತ್ತದೆ..” ಎಂದು ಹೇಳಿದ್ದಾರೆ. ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆ ತಂದ ವೇಳೆ ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ ಎಂದಿದ್ದಾಳೆ. “‘ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಗೆ ಬರುತ್ತದೆ. ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ. ಇಂದಿರಾ ಕ್ಯಾಂಟೀನ್ ಬಿಲ್ ಬಾಕಿಯಿದೆ, ಅದಕ್ಕೆ ಈ ಷಡ್ತಂತ್ರ ಮಾಡಲಾಗಿದೆ. ಎ1 ಆರೋಪಿ ನಾನೇ ಆಗಿರಲಿ, ಆದರೆ ಸತ್ಯ ಹೊರಬರುತ್ತದೆ” ಎಂದು ಚೈತ್ರಾ ಹೇಳಿದ್ದಾರೆ. ಮಂಗಳವಾರ ರಾತ್ರಿಯಿಂದಲೇ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಹಿಂದೂ ಕಾರ್ಯಕರ್ತೆ, ಭಾಷಣಕಾರಿಣಿ ಚೈತ್ರಾ ಕುಂದಾಪುರ (28), ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಗನ್‌ ಕಡೂರು (30),…

Read More

ಬೆಂಗಳೂರು: ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧಿಸಲಾಗಿದೆ. ಅವರ ಬಂಧನದ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ಚೈತ್ರಾ ಕುಂದಾಪುರ ಅವರನ್ನ ಸಿಸಿಬಿ ಪೊಲೀಸರ ಬಂಧನದ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದಂತ ಅವರು, ನನಗೆ ಬಂದ ಮಾಹಿತಿ ಪ್ರಕಾರ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ ಎಂದರು. ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣದಲ್ಲಿ ಹಾಲಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತದೆ. ಪೊಲೀಸರು ಸುಮೊಟೋ ಕೇಸ್​ ದಾಖಲಿಸಿಲ್ಲ. ಕಂಪ್ಲೆಂಟ್ ಆಧಾರದ ಮೇಲೆ ಚೈತ್ರಾ ಕುಂದಾಪುರ ಬಂಧನ ಆಗಿದೆ ಎಂದರು. ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದು…

Read More

ಮಂಗಳೂರು: ಗಣೇಶ ಚತುರ್ಥಿ ಆಚರಣೆಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಮನವಿ ಮೇರೆಗೆ ಸಚಿವರು ಈ ಸೂಚನೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ರಜೆ ಬದಲಾವಣೆ ಕುರಿತಂತೆ ನಿರ್ಧಾರ ಇನ್ನೂ ಆಗಿಲ್ಲ.

Read More

ವಿಟ್ಲ: ಇಲ್ಲಿನ ಕುದ್ದುಪದವು ಎಂಬಲ್ಲಿನ ನಿವಾಸುಗಳಾದ ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೈರ ಮೂಲದ ಕುದ್ದುಪದವು ನಿವಾಸಿಗಳಾದ ಪವನ್ ಮತ್ತು ಪೃಥ್ವಿರಾಜ್ ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ಸಹೋದರರು. ವಿಷ ಸೇವನೆಯಿಂದ ತೀವ್ರ ಅಸ್ವಸ್ಥರಾದ ಇವರಿಬ್ಬರನ್ನು ವಿಟ್ಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಎರಡು ಪ್ರತ್ಯೇಕ ವಾಹನಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ . ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇವರ ತಂದೆ ಮೃತಪಟ್ಟಿದ್ದು, ತಾಯಿ ಮೈರ ಎಂಬಲ್ಲಿದ್ದಾರೆ. ಸಹೋದರರು ಅಜ್ಜಿ ಮನೆಯಲ್ಲಿ ವಾಸವಾಗಿದ್ದಾರೆ.

Read More

ಮಂಗಳೂರು : ಕೇರಳದಲ್ಲಿ ಇಬ್ಬರನ್ನು ಬಲಿ ಪಡೆದಿರುವ ನಿಫಾ ವೈರಸ್ ಬಗ್ಗೆ ದ.ಕ.ಜಿಲ್ಲೆಯ ಜನತೆಗೆ ಆತಂಕ ಬೇಡ. ಆದರೆ ಜಾಗ್ರತೆಯಿರಲಿ. ಜ್ವರ ಕಂಡು ಬಂದಲ್ಲಿ ನಿರ್ಲಕ್ಷ್ಯ ಬೇಡ. ತಕ್ಷಣ ವೈದ್ಯರನ್ನು ಕಾಣುವಂತೆ ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ‌.ಸುದರ್ಶನ್ ಸಲಹೆ ನೀಡಿದರು. ದ.ಕ.ಜಿಲ್ಲಾ ಆರೋಗ್ಯಾಧಿಕಾರಿಯವರ ಕಚೇರಿಯಲ್ಲಿ ಮಾತನಾಡಿದ ಅವರು, ನಿಫಾ ವೈರಸ್ ಸೋಂಕು ದ.ಕ.ಜಿಲ್ಲೆಗೆ ಹರಡಿಲ್ಲ. ಆದರೆ ಮುನ್ನೆಚ್ಚರಿಕಾ ಹಿನ್ನೆಲೆಯಲ್ಲಿ ಈಗಾಗಲೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಜ್ವರ ಸಮೀಕ್ಷೆ ನಡೆಸಲಾಗುತ್ತದೆ. ಎಲ್ಲಾ ಆಸ್ಪತ್ರೆಗಳಲ್ಲಿ ಔಷಧಿ ದಾಸ್ತಾನು ಇರಿಸಲು ಸೂಚನೆ ನೀಡಲಾಗಿದೆ. ತಾಲೂಕು, ಆಸ್ಪತ್ರೆಗಳಲ್ಲಿ ಐಸೋಲೇಷನ್ ವ್ಯವಸ್ಥೆ ಮಾಡಲಾಗಿದೆ. ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಐಸಿಯು ವ್ಯವಸ್ಥೆಯನ್ನು ಮಾಡಲಾಗಿದೆ. ಸಾಮಾನ್ಯ ವೈರಲ್ ಜ್ವರದಂತೆ ನಿಫಾ ಲಕ್ಷಣವಿದ್ದರೂ, ಜ್ಞಾನ ತಪ್ಪುವುದು, ಮಾನಸಿಕ ಗೊಂದಲ ಮತ್ತು ಫಿಟ್ಸ್ ಲಕ್ಷಣವಿದ್ದಲ್ಲಿ ತಕ್ಷಣ ಆಸ್ಪತ್ರೆಗೆ ದಾಖಲಾಗಬೇಕು ಎಂದು ಸೂಚನೆ ನೀಡಿದರು. ಶಂಕಿತ ನಿಫಾ ಸೋಂಕಿತರಿದ್ದಲ್ಲಿ ಅವರನ್ನು ಪ್ರತ್ಯೇಕವಾಗಿಡುವುದು, ಹಸ್ತಲಾಘವ ಮಾಡಬಾರದು, ರೋಗಿಗಳ ಉಪಚಾರದ ವೇಳೆ ಮಾಸ್ಕ್ , ಗ್ಲೌಸ್ ಧರಿಸುವುದು ಕಡ್ಡಾಯ. ನಿಫಾ…

Read More