ಮಂಗಳೂರು : ನಾಡಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷ ಮುಕ್ತರಾಗಿದ್ದಾರೆ ಎಂದು ಮಂ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ತ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ತೀರ್ಪು ನೀಡಿದ್ದಾರೆ.2012ರ ಜುಲೈ 28ರಂದು ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂಸ್ಟೇ ಮೇಲೆ ದಾಳಿ ನಡೆದಿತ್ತು. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಈ ದಾಳಿ ನಡೆಸಿದ್ದರು ಎಂದು ಅಪಾದಿಸಲಾಗಿತ್ತು. ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದ ಯುವಕ-ಯುವತಿಯರ ಮೇಲೂ ತಂಡ ದಾಳಿ ಮಾಡಿತ್ತು ಎಂದು ಮಂಗಳೂರು ಗ್ರಾಮಾಂತರ ಪೊಲೀಸರು 44 ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದರು.ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ಸೇರ್ಪಡೆಗೊಂಡಿದ್ದ ಪತ್ರಕರ್ತ ನವೀನ್…
Author: main-admin
ಬೆಂಗಳೂರು : ರಾಜ್ಯ ಸರ್ಕಾರವು ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದರೆ, ಕಾರ್ಮಿಕ ಕಾರ್ಡ್ ಹೊಂದಿದ್ದಲ್ಲಿ ಮಂಡಳಿಯು ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ನೀವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದಲ್ಲಿ ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು * ಪಿಂಚಣಿ ಸೌಲಭ್ಯ * ಕುಟುಂಬ ಪಿಂಚಣಿ ಸೌಲಭ್ಯ * ದುರ್ಬಲತೆ ಪಿಂಚಣಿ * ಟೂಲ್ ಕಿಟ್ ಸೌಲಭ್ಯ * ಹೆರಿಗೆ ಸೌಲಭ್ಯ * ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹರಾಶಿ ಸಹಾಯಧನ * ಶೈಕ್ಷಣಿಕ ಸಹಾಯಧನ * ವೈದ್ಯಕೀಯ ಸಹಾಯಧನ * ಅಪಘಾತ ಪರಿಹಾರಧನ * ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ * ಮದುವೆ ಸಹಾಯಧನ * ತಾಯಿ ಮಗು ಸಹಾಯ ಹಸ್ತ
ಮಂಗಳೂರು: ಮೊಬೈಲ್‌ನಲ್ಲಿ ಪಬ್‌ಜಿ ಆನ್‌ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೆಲಿಸ್ತಾ ಫೆರಾವೊ (18) ನಾಪತ್ತೆಯಾಗಿದ್ದವರು. ಕೆಲಿಸ್ತಾ ಅವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದರು. ಜುಲೈ 30 ರಂದು ಈಕೆ ಮನೆಯಿಂದ ಹೊರಕ್ಕೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಈ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಬಳಿಕ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಸದ್ಯ ಯುವತಿ ಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.
ಉಡುಪಿ: ನಿಂತಿದ್ದ ಬಸ್ ಗೆ ದಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕಿನ್ನಿಮುಲ್ಕಿಯ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ ಇಂದು ರಾತ್ರಿ ನಡೆದಿದೆ.ಗಾಯಗೊಂಡ ಯುವಕರ ವಿಳಾಸ ತಿಳಿದುಬಂದಿಲ್ಲ. ಅತೀ ವೇಗದಲ್ಲಿ ಸುಜುಕಿ ಆಕ್ಸಿಸ್ ನಲ್ಲಿ ಬಂದ ಯುವಕರಿಬ್ಬರು ರಸ್ತೆ ಬದಿ ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ಇದರ ಪರಿಣಾಮ ಸ್ಕೂಟರ್ ಸಮೇತ ರಸ್ತೆ ಬಿದ್ದ ಇಬ್ಬರಿಗೂ ಗಂಭೀರ ಗಾಯವಾಗಿದೆ. ಆ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಗಾಯಗೊಂಡ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು : ಫೊರಮ್‌ಮಾಲ್‌ನಲ್ಲಿರುವ ಶೆರ್‌ಲಾಕ್ ಪಬ್‌ನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಆ.3 ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಿವಾಸಿಗಳಾದ ಮಹೇಶ್, ವಿನಯ್,ನಿತೇಶ್,ಪ್ರೀತೆಶ್ ಅರೆಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸುಮಾರು 22 ವರ್ಷದ ಯುವತಿ ತನ್ನ ಸ್ನೇಹಿತೆಯೊಂದಿಗೆ ಮಂಗಳೂರು ನಗರದ ಪಾಂಡೇಶ್ವರ ಫೊರಮ್‌ಮಾಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಶೆರ್‌ಲಾಕ್ ಪಬ್‌ಗೆ ವೀಕೆಂಡ್ ಪಾರ್ಟಿಗೆ ಬಂದಿದ್ದು, ರಾತ್ರಿ 10.30ರ ಸುಮಾರಿಗೆ ಆರೋಪಿಗಳು ದೂರುದಾರೆ ಯುವತಿಯೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿ ಮಾನಭಂಗ ಮಾಡಲು ಯತ್ನಿಸಿದ್ದು, ಆಕೆಯ ಸ್ನೇಹಿತೆಗೂ ಅವಾಚ್ಯ ಶಬ್ದಗಳಿಂದ ಬೈದು. ಬೀಯರ್ ಬಾಟ್ಲಿಯಲ್ಲಿ ಹಲ್ಲೆ ನಡೆಸಲು ಪ್ರಯತ್ನಿಸಿದ ಘಟನೆ ನಡೆದಿದೆ. ಸಂತ್ರಸ್ತ ಯುವತಿ ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ: ಖಾಲಿ ಮನೆಗೆ ನುಗ್ಗಿದ ಕಳ್ಳರು ಲ್ಯಾಪ್‌ಟಾಪ್, ಟ್ಯಾಬ್, ಸುಮಾರು ಅಂದಾಜು 1.5 ಲ.ರೂ. ನಗದು, ಚಿನ್ನಾಭರಣಗಳನ್ನು ಕಳವು ಮಾಡಿ ಹೋದ ಘಟನೆ ನಗರದ ಬುಡ್ನಾರಿನಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ಮನೆಯ ಸಂಬಂಧಿಕರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದು, ಕದ್ದ ಸೊತ್ತುಗಳ ನಿಖರ ಮೌಲ್ಯ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ನಗರ ಠಾಣೆಯ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ. ಕೆ. ಮೊಹಮ್ಮದ್ ಅವರು 6 ತಿಂಗಳ ಹಿಂದೆಯಷ್ಟೇ ನಿಧನ ಹೊಂದಿದ್ದರು. ಕೆ. ಮೊಹಮ್ಮದ್ ಅವರಿಗೆ ಸೇರಿದ ಗ್ರೀಮ್ ಹೌಸ್‌ನಲ್ಲಿ ಈ ಘಟನೆ ನಡೆದಿದೆ. ಕಳವು ನಡೆದ ಮನೆಯಲ್ಲಿ ತಾಯಿ ಹಾಗೂ ಮಗಳು ಇಬ್ಬರೇ ವಾಸಮಾಡಿಕೊಂಡಿದ್ದರು. ಶನಿವಾರ ಸಂಜೆ ತಾಯಿ ಹಾಗೂ ಮಗಳು ಮಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಮನೆಯವರು ನಾವಿಲ್ಲದಿದ್ದರೂ ಹೊರ ಭಾಗದಲ್ಲಿ ಸ್ವಚ್ಛ ಮಾಡುವಂತೆ ತಿಳಿಸಿದ ಮೇರೆಗೆ ಕೆಲಸದಾಕೆ ರವಿವಾರ ಬೆಳಗ್ಗೆ ಬಂದಿದ್ದಾಗ ಬಾಗಿಲು ಒಡೆದಿತ್ತು. ಕೂಡಲೇ ಕೆಲಸದಾಕೆ ಈ ವಿಚಾರವನ್ನು ಪಕ್ಕದ ಮನೆಯವರ ಬಳಿ ತಿಳಿಸಿದ ಮೇರೆಗೆ…
ಮಂಗಳೂರು: ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಇಂದು ಬೆಳಗಿನ ವೇಳೆ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಬೋಟ್‌ನಲ್ಲಿದ್ದ 10 ಮೀನುಗಾರರನ್ನು ರಕ್ಷಿಸಲಾಗಿದೆ. ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹುಸೈನ್ ಎಂಬವರ ಮಾಲಕತ್ವದ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗ್ಗಿನ ಜಾವ ಸುಮಾರು 3 ರಿಂದ 4 ಗಂಟೆಯ ವೇಳೆಗೆ ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೋಟ್‌ನಲ್ಲಿದ್ದ ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ನೀಡಿದ ಬೋಟ್ ಮಾಲಕರು, ಭಾನುವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಧಕ್ಕೆಯಿಂದ ಸುಮಾರು 88 ನಾಟಿಕಲ್ ದೂರದಲ್ಲಿ ಬೋಟ್ ಮುಳುಗಿದೆ. ಜೊತೆಯಲ್ಲಿದ್ದ ಬೋಟ್ ನವರು ಅವಘಡ ಗಮನಿಸಿ ಮೀನುಗಾರರನ್ನು ರಕ್ಷಿಸಿದ್ದಾರೆ ಎಂದು ತಿಳಿಸಿದ್ದಾರೆ.
ಬಂಟ್ವಾಳ ಸಮೀಪ ಯುವಕರ ಎರಡು ತಂಡಗಳು ಹೊಡೆದಾಡಿಕೊಂಡು ಒಂದಷ್ಟು ಯುವಕರು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್‌ನಲ್ಲಿ ಸಂಭವಿಸಿದೆ. ಬಂಟ್ವಾಳ ಹಾಗೂ ಬಿ.ಸಿ. ರೋಡಿನ ಯುವಕರು ಹೊಡೆದಾಡಿಕೊಂಡಿದ್ದಾರೆ. ಮೂರರಿಂದ ನಾಲ್ಕು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಕೆಲವರು ಬಂಟ್ವಾಳ ಆಸ್ಪತ್ರೆಗೆ ದಾಖಲಾಗಿದ್ದು, ಒಂದಿಬ್ಬರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಾಳುಗಳ ಸ್ಪಷ್ಟ ವಿವರ ತಿಳಿದುಬಂದಿಲ್ಲ. ಹೊಡೆದಾಡಿಕೊಂಡ ಯುವಕರು ಒಂದೇ ಕೋಮಿಗೆ ಸೇರಿದವರಾಗಿದ್ದು, ಆದರೆ ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದು ಗೊತ್ತಾಗಿಲ್ಲ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಈ ವೇಳೆ ಹೊಡೆದಾಡಿಕೊಂಡ ಯುವಕರ ಗುಂಪು ಚದುರಿದೆ. ಹೆತ್ತವರಿಗೆ ಬೈದ ವಿಚಾರಕ್ಕೆ ಸಂಬಂಧಿಸಿ ಮಾತುಕತೆಯ ವೇಳೆ ಸಂಘರ್ಷ ಉಂಟಾಗಿದೆ ಎಂದು ಮಾಹಿತಿ ತಿಳಿಯಲಾಗಿದೆ. ಈ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಬಿಡಿದಿ ಬಳಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಮ್ಮೇಗೌಡರು ಬೆಂಗಳುರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಳ್ಳಂ ಬೆಳಗ್ಗೆ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿ ಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ಹಿಂದೆ ಬಂದು ಹಿಂಸೆ ನೀಡಿದ್ದಾನೆ. ಈ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 02ರ ಬೆಳಗಿನ ಜಾವ ಐದು ಘಂಟೆಗೆ ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿದ್ದಾರೆ. ಆದರೆ, ಪೊಲೀಸರು ಸರಿಯಾದ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ ಸಿಲಿಕಾನ್ ಸಿಟಿ ಬೆಂಗಳೂರಿನ ಮಹಿಳೆಯರು ಒಂಟಿಯಾಗಿ ಮನೆಯಿಂದ ಹೊರ ಬರುವಂತೆ ಇಲ್ಲವಾ? ಎಂಬ ಪ್ರಶ್ನೆ ಮೂಡಿದೆ. ಹೌದು, ಬೆಳಗ್ಗೆ 5 ಘಂಟೆ ಸಮಯದಲ್ಲಿ ನಡೆದ ಒಂದು ಘಟನೆ ನಿಜಕ್ಕೂ ಭಯ ಹುಟ್ಟಿಸುತ್ತಿದೆ.