Author: main-admin

ಬೆಳ್ತಂಗಡಿ : ರಾತ್ರೋರಾತ್ರಿ ಸುಮಾರು ಹತ್ತು ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿಯಾದ ಘಟನೆ ಮೇ 18 ರಂದು ರಾತ್ರಿ ನಡೆದಿದೆ.ಕೋರ್ಟ್‌ ರಸ್ತೆಯ ಧರ್ಮಶ್ರೀ ಬಿಲ್ಡಿಂಗ್ ನ ಸಮೃದ್ಧಿ ಎಂಟರ್ಪ್ರೈಸಸ್ ನಿಂದ ಸುಮಾರು 1.50 ಲಕ್ಷ ನಗದು ಹಾಗೂ ಸಿಸಿ ಕ್ಯಾಮೆರಾ ವನ್ನು ಹಾನಿಗೊಳಿಸಿ ಮೆಮೊರಿ ಕಾರ್ಡ್ ನ್ನು ಪಡೆದು ಪರಾರಿಯಾಗಿದ್ದಾರೆ. ಹಾಗೂ ಅದೇ ಕಟ್ಟಡದ ಮಹಮ್ಮದ್ ಹನೀಫ್ ರವರ ಟಿ.ಎಚ್ ರಿಯಲ್ ಎಸ್ಟೇಟ್ ಕಚೇರಿ, ಕಟ್ಟಡ ಮಾಲಕರ ಕಚೇರಿ ಸೇರಿದಂತೆ ವಕೀಲರುಗಳಾದ ರಾಧಾಕೃಷ್ಣ, ಉಷಾ ಎನ್‌.ಜಿ, ಯತೀಶ್ ಶೆಟ್ಟಿ ಪಿ ಕಚೇರಿಗಳಿಗೆ ನುಗ್ಗಿದ್ದಾರೆ.ಮೂರು ಮಾರ್ಗದ ಬಳಿ ಇರುವ ಮಾತೃಶ್ರೀ ಹೋಟೆಲ್ ನಿಂದ ಡಬ್ಬಿಯಿಂದ ರೂ.5000 ಹಾಗೂ ಡ್ರಾವರ್ ನಿಂದ 2000ಸಾವಿರ, ಶಬರಿ ಎಂಟರ್ಪ್ರೈಸಸ್ ಸುಮಾರು 2ಸಾವಿರ, ಜಯರಾಮ ಮಣಿಯಾಣಿ ವಕೀಲರ ಕಚೇರಿ, ಮೆ। ಹಿಮಾಲಯ ಫೈನಾನ್ಸ್ ಮತ್ತು ಇನ್ವೆಸ್ಟೆಂಟ್, ಜಿತೇಶ್‌ ಕೆ ವಕೀಲರ ಕಚೇರಿಗೆ ನುಗ್ಗಿದ್ದಾರೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Read More

ಕಾಸರಗೋಡು: ಬದಿಯಡ್ಕ ಸಮೀಪದ ಮಾರ್ಪನಡ್ಕದಲ್ಲಿ ನಡೆದ ಬ್ಯಾಂಕ್ ಕಾವಲುಗಾರನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬದಿಯಡ್ಕ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಂಬ್ಡಾಜೆಯ ಕಿರಣ್ (30) ಮತ್ತು ಕರುವತ್ತಡ್ಕದ ಅಖಿಲೇಶ್ (25) ಎಂದು ಗುರುತಿಸಲಾಗಿದೆ.ಮಾರ್ಪನಡ್ಕ ಬೆದ್ರಕೂಡ್ಲುವಿನ ನಿವಾಸಿಯಾಗಿದ್ದ ಸುರೇಶ್ (42) ಅವರು ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಕಾವಲುಗಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಬ್ಯಾಂಕ್ ಆವರಣದಲ್ಲೇ ನಡೆದ ಕ್ರಿಕೆಟ್ ಪಂದ್ಯಾಟದ ವಿಚಾರಕ್ಕೆ ಸಂಬಂಧಿಸಿದ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದು ಹಲ್ಲೆಗೆ ತಿರುಗಿದೆ ಎನ್ನಲಾಗಿದೆ.ಘಟನೆಯ ವೇಳೆ ಆರೋಪಿಗಳ ತಂಡ ಸುರೇಶ್ ಅವರಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದು, ಬಳಿಕ ಅವರು ಮೃತಪಟ್ಟಿದ್ದರು. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬದಿಯಡ್ಕ ಪೊಲೀಸರು ತಕ್ಷಣ ತನಿಖೆ ಆರಂಭಿಸಿ, ಕೃತ್ಯ ನಡೆದ 24 ಗಂಟೆಯೊಳಗೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಕೋಲಾರ: ಆಟವಾಡುವಾಗ ಆಕಸ್ಮಿಕವಾಗಿ ಬೆಟ್ಟದ ನೆಲ್ಲಿಕಾಯಿಯನ್ನು ನುಂಗಿದ ಎರಡು ವರ್ಷದ ಮಗು, ಅದು ಗಂಟಲಿನಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಮಾಲೂರು ಪಟ್ಟಣದ ಗಾಂಧಿ ಸರ್ಕಲ್ ಬಳಿ ಸೋಮವಾರ ನಡೆದಿದೆ.ಮಾಲೂರು ನಿವಾಸಿಗಳಾದ ರವಿ ಹಾಗೂ ಮಾಲಾ ದಂಪತಿಯ ಎರಡು ವರ್ಷದ ಪುತ್ರ ವಿಜಯೇಂದ್ರ ಮೃತಪಟ್ಟ ದುರ್ದೈವಿ.ಮಗು ವಿಜಯೇಂದ್ರ ಮನೆಯಲ್ಲಿ ಎಂದಿನಂತೆ ಆಟವಾಡುತ್ತಿದ್ದಾಗ ಅಲ್ಲಿದ್ದ ಬೆಟ್ಟದ ನೆಲ್ಲಿಕಾಯಿಯನ್ನು ಬಾಯಿಗೆ ಹಾಕಿಕೊಂಡಿದ್ದಾನೆ. ಈ ವೇಳೆ ನೆಲ್ಲಿಕಾಯಿ ಆಕಸ್ಮಿಕವಾಗಿ ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡಿದೆ. ಪರಿಣಾಮ ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಗಾಬರಿಗೊಂಡ ಪೋಷಕರು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಧಾವಿಸಿದ್ದಾರೆ. ಆದರೆ, ಅಷ್ಟರಲ್ಲೇ ಗಂಟಲಿನಲ್ಲಿ ಸಿಲುಕಿದ್ದ ನೆಲ್ಲಿಕಾಯಿಯನ್ನು ಹೊರತೆಗೆಯಲಾಗದೆ ಮಗು ಉಸಿರುಗಟ್ಟಿ ಕೊನೆಯುಸಿರೆಳೆದಿದೆ. ಕಣ್ಣೆದುರೇ ಆಡುತ್ತಿದ್ದ ಪುಟ್ಟ ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Read More

ವಿಟ್ಲ: ಮಾಣಿ ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಮಹಿಂದ್ರಾ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಘಟನೆ ನಡೆದಿದೆ. ಕಬಕ ನಿವಾಸಿ, ಸೋಫಾ ಹಾಗೂ ವಾಹನಗಳ ಕುಶನ್ ಕೆಲಸ ಮಾಡಿಕೊಂಡಿದ್ದ ಸಲೀಂ (52) ಮೃತಪಟ್ಟ ದುರ್ದೈವಿ. ಸಾಧು ಸ್ವಭಾವದ ಸಲೀಂ ಅವರು ಮಿತ್ತೂರು ದಾರುಲ್ ಇಸ್ಲಾಂ ಶಿಕ್ಷಣ ಸಂಸ್ಥೆಯ ವಾಹನದ ಕೆಲಸವನ್ನು ನೋಡಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.ಕಬಕ ಕಡೆಯಿಂದ ಮಿತ್ತೂರು ಕಡೆಗೆ ಮಿತಿಮೀರಿದ ವೇಗದಲ್ಲಿ ಬಂದ ಮಹಿಂದ್ರಾ ಪಿಕಪ್ ವಾಹನವು ಸಲೀಂ ಅವರ ಆಕ್ಟಿವಾ ಸ್ಕೂಟರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಸಲೀಂ ಅವರು ಹೆಲ್ಮೆಟ್ ಧರಿಸಿದ್ದರೂ ಅವರ ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಹಾಗೂ ದಾರಿಹೋಕರು ಸೇರಿ ಗಾಯಾಳುವನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸ್ಕೂಟರ್‌ಗೆ ಡಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿದ ಮಹಿಂದ್ರಾ ಪಿಕಪ್…

Read More

ಪಾಟ್ನಾ: ಭಾನುವಾರ ಸಂಜೆ ಬಿಹಾರದ ಮುಜಫರ್‌ಪುರ ಬಳಿ ಮೂರು ಪ್ಯಾಸೆಂಜರ್ ರೈಲುಗಳನ್ನು ಗುರಿಯಾಗಿಸಿಕೊಂಡು ನಡೆದ ಸರಣಿ ಕಲ್ಲು ತೂರಾಟವು ಪ್ರಯಾಣಿಕರಲ್ಲಿ ಭೀತಿ ಮೂಡಿಸಿದ್ದು, ಈ ಪ್ರದೇಶದಲ್ಲಿ ರೈಲ್ವೆ ಭದ್ರತೆಯ ಬಗ್ಗೆ ಭಾರೀ ಕಳವಳವನ್ನು ಹುಟ್ಟುಹಾಕಿದೆ. ಭಾರತೀಯ ರೈಲ್ವೆಯ ಪ್ರೀಮಿಯಂ ಸೆಮಿ-ಹೈ-ಸ್ಪೀಡ್ ಸೇವೆಗಳಲ್ಲಿ ಒಂದಾದ ಪಾಟಲಿಪುತ್ರ-ಗೋರಖ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ ನಡೆದಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಈ ಘಟನೆಯ ಸಮಯದಲ್ಲಿ ರೈಲಿನ ಮೂರು ಬೋಗಿಗಳ ಕಿಟಕಿಗಳು ಛಿದ್ರಗೊಂಡಿವೆ. ಮುಜಫರ್‌ಪುರ ಜಂಕ್ಷನ್ ಮತ್ತು ರಾಮದಯಾಳು ನಗರ ನಿಲ್ದಾಣದ ನಡುವೆ ಈ ಘಟನೆಗಳು ನಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಜೌಲಿಯಾ ಮತ್ತು ಖಬ್ರಾ ಬಳಿ ರೈಲನ್ನು ಟಾರ್ಗೆಟ್ ಮಾಡಲಾಗಿದ್ದು, ಅಲ್ಲಿ ಹಲವಾರು ಬೋಗಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಈ ಅಪಘಾತದಲ್ಲಿ 3 ಬೋಗಿಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ವಂದೇ ಭಾರತ್ ರೈಲಿನಲ್ಲಿ ನಡೆದ ಘಟನೆಯ ಸ್ವಲ್ಪ ಸಮಯದ ನಂತರ ಪಾಟ್ನಾ-ಜಯನಗರ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಮತ್ತು ರೈಲು…

Read More

ಮಂಗಳೂರು: ಪ್ರಜ್ವಲ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಬಹುನಿರೀಕ್ಷಿತ ತುಳು ಚಲನಚಿತ್ರ ಗಜಾನನ ಕ್ರಿಕೆಟರ್ಸ್ ಚಿತ್ರದ ಟ್ರೈಲರ್‌ನ್ನು ಮೇ 26ರಂದು ಮಂಗಳೂರಿನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು. ಈ ಕುರಿತು ಮಾಹಿತಿ ನೀಡಿದ ನಿರ್ಮಾಪಕ ಪ್ರಜ್ವಲ್ ಶೆಟ್ಟಿ, ಚಿತ್ರವು ಮೇ 22ರಂದು ಕರಾವಳಿ ಜಿಲ್ಲೆಗಳಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು. ಮಂಗಳೂರಿನ ಅಜಂತಾ ಬಿಸಿನೆಸ್ ಸೆಂಟರ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಸಮೃದ್ಧ ಸಂಸ್ಕೃತಿ, ಸ್ನೇಹ, ಕ್ರಿಕೆಟ್ ಮೇಲಿನ ಆಸಕ್ತಿ ಮತ್ತು ಭಾವನೆಗಳನ್ನು ಒಗ್ಗೂಡಿಸಿ ಈ ಚಿತ್ರವನ್ನು ಮನಮೋಹಕ ಕಥೆಯಾಗಿ ರೂಪಿಸಲಾಗಿದೆ ಎಂದರು. ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವವರು ಕೀರ್ತನ್ ಭಂಡಾರಿ. ರೋಹನ್ ಪೆರೆರಾ ವಾಮಂಜೂರು ಮತ್ತು ಸಂತೋಷ್ ಲಾಡ್ ಸಹ ನಿರ್ಮಾಪಕರಾಗಿದ್ದಾರೆ. ಮುಖ್ಯ ನಟ ವಿನೀತ್ ಕುಮಾರ್ ಮಾತನಾಡಿ, ಈ ಚಿತ್ರವು ಕೇವಲ ಕ್ರಿಕೆಟ್ ಕುರಿತಾದದ್ದಲ್ಲ; ಗ್ರಾಮೀಣ ಜೀವನ, ಸ್ನೇಹ, ಯುವಕರ ಕನಸುಗಳು ಮತ್ತು ಜೀವನದ ಹೋರಾಟಗಳನ್ನು ಮನಸಿಗೆ ತಟ್ಟುವ ರೀತಿಯಲ್ಲಿ ಚಿತ್ರಿಸುತ್ತದೆ…

Read More

ಪಾಟ್ನಾ: ಹಣದ ವ್ಯಾಮೋಹ ಮತ್ತು ಕೌಟುಂಬಿಕ ಕಲಹಕ್ಕೆ ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅತ್ಯಂತ ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಿರಿಯ ಸಹೋದರನೇ ತನ್ನ ಅಣ್ಣ, ಅತ್ತಿಗೆ ಹಾಗೂ ಅವರ ಇಬ್ಬರು ಮುಗ್ಧ ಮಕ್ಕಳನ್ನು ಉಸಿರುಗಟ್ಟಿಸಿ, ಚಾಕುವಿನಿಂದ ಇರಿದು ಕೊಂದಿದ್ದಾನೆ. ಅಷ್ಟಕ್ಕೇ ನಿಲ್ಲದ ಈತನ ಕ್ರೌರ್ಯ, ಸಾಕ್ಷ್ಯ ನಾಶಪಡಿಸಲು ನಾಲ್ವರ ಶವಗಳನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್‌ಕೇಸ್‌ ಹಾಗೂ ಚೀಲಗಳಲ್ಲಿ ತುಂಬಿ ವಿವಿಧ ನದಿ, ಕಾಲುವೆಗಳಿಗೆ ಎಸೆದಿದ್ದಾನೆ. ರಹಸ್ಯ ಬಯಲಾಗಿದ್ದು ಹೇಗೆ? ಮೇ 10 ರಂದು ಕೈಮೂರ್ ಜಿಲ್ಲೆಯ ನದಿಯೊಂದರ ಕೆಳಗೆ ಎರಡು ಶಂಕಾಸ್ಪದ ಸೂಟ್‌ಕೇಸ್‌ಗಳು ತೇಲುತ್ತಿದ್ದವು. ಪೊಲೀಸರು ಇವುಗಳನ್ನು ವಶಕ್ಕೆ ಪಡೆದು ತೆರೆದಾಗ, ಅದರಲ್ಲಿ ಕತ್ತರಿಸಿದ ಮಾನವ ದೇಹದ ಭಾಗಗಳು ಪತ್ತೆಯಾಗಿದ್ದವು. ಆರಂಭದಲ್ಲಿ ಇವು 3 ರಿಂದ 4 ಜನರ ಶವದ ಅವಶೇಷಗಳಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ನಂತರ ಮೇ 12 ರಂದು ರಾಮಗಢದ ಕಾಲುವೆಯ ಬಳಿ ಇನ್ನು ಎರಡು ಚೀಲಗಳಲ್ಲಿ ಹೆಚ್ಚಿನ ಭಾಗಗಳು ಪತ್ತೆಯಾಗಿದ್ದವು.…

Read More

ರಾಯಚೂರು: ಹದಿಹರೆಯದ ಮಕ್ಕಳಿದ್ದಾಗ ಪೋಷಕರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸರಿ ತಪ್ಪುಗಳ ಅರಿವಿಲ್ಲದ ಬಾಲಕ-ಬಾಲಕಿಯರು ದುಡುಕು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರು ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕಿ ನಾಪತ್ತೆಯಾಗುತ್ತಿರುವ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ. ಈಗಾಗಲೇ 19 ಕೇಸ್​ಗಳು ದಾಖಲಾಗಿದ್ದು, ಪಾಲಕರು ಕಂಗಾಲಾಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆ ಹಲವು ಪ್ರಯತ್ನಗಳನ್ನು ಕೈಗೊಂಡಿದ್ದು, ಪೋಷಕರು ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದ್ದಾರೆ. ಪರೀಕ್ಷೆ ಮುಗಿದ ಬೆನ್ನಲ್ಲೇ ಎಸ್ಕೇಪ್! ಜಿಲ್ಲೆಯಲ್ಲಿ ಪ್ರತಿ ವರ್ಷ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ಮುಗಿದು ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆ ಇಂತಹ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಮನೆಯಿಂದ ಫ್ರೆಂಡ್ಸ್ ಮನೆಗೆ ಹೋಗಿ ಬರುತ್ತೇನೆ, ನೋಟ್ಸ್ ತರುತ್ತೇನೆ ಎಂದು ಪೋಷಕರಿಗೆ ಸುಳ್ಳು ಹೇಳಿ ಹೊರಡುವ ಬಾಲಕಿಯರು ವಯಸ್ಕ ಯುವಕರ ಜೊತೆ ನಾಪತ್ತೆಯಾಗುತ್ತಿದ್ದಾರೆ. ಪೋಷಕರು ಹಗಲಿರುಳು ಹುಡುಕಾಟ ನಡೆಸಿ, ಮಕ್ಕಳ ಸುಳಿವು ಸಿಗದೇ ಇದ್ದಾಗ ಕೊನೆಗೆ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಸದ್ಯ ಜಿಲ್ಲೆಯ ವಿವಿಧ ಪೊಲೀಸ್…

Read More

ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್‌ ಅನ್ನು ರಿಕ್ಷಾ ಚಾಲಕರೊಬ್ಬರು ವಾರೀಸುದಾರರಿಗೆ ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.ಬಸ್ ನಿಲ್ದಾಣದ ಬಳಿ 50,000ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ರಿಕ್ಷಾ ಚಾಲಕ ಜಗದೀಶ ಅವರಿಗೆ ದೊರೆತಿದ್ದು, ಅವರು ಮತ್ತು ಆಶಾಲತಾ ಎಂಬವರು ಅದನ್ನು ಪಡುಬಿದ್ರಿ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದರು.ಬಳಿಕ ಪೊಲೀಸರು ಬ್ಯಾಗಿನ ಮಾಲಕಿ ಫಾತಿಮಾ ಮಂಗಳೂರು ಅವರನ್ನು ಪತ್ತೆ ಹಚ್ಚಿ, ಅವರಿಗೆ ಬ್ಯಾಗ್‌ ಅನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪಡುಬಿದ್ರೆ ಠಾಣಾಧಿಕಾರಿ ಸಕ್ತಿವೇಲು ಹಾಜರಿದ್ದರು

Read More

ಕುಂದಾಪುರ: ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಜೀಪ್ ಹಾಗೂ ಮೀನು ಸಾಗಾಟದ ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಮೂವರು ಪುಟಾಣಿ ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಜೀಪ್‌ನಲ್ಲಿದ್ದ ಪ್ರವಾಸಿಗರು ಹಾಗೂ ಚಾಲಕ ಸೇರಿದಂತೆ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಯನ್ (5), ಅವನಿ (8), ಅರ್ಜುನ್ (9), ಮಿನಿ (60), ಅಭಿ (36), ಅನೂಪ್ (37), ಜ್ಯೋತಿಷ್ (43) ಮತ್ತು ಜೀಪು ಚಾಲಕ ದೇವರಾಜ್ ಎಂದು ಗುರುತಿಸಲಾಗಿದೆ. ಇವರೆಲ್ಲರಿಗೂ ಕುಂದಾಪುರ ಹಾಗೂ ಮಣಿಪಾಲದ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮತ್ತು ಗಾಯಾಳುಗಳೆಲ್ಲರೂ ಕೇರಳ ರಾಜ್ಯದ ಒಂದೇ ಕುಟುಂಬದ ಪ್ರವಾಸಿಗರು ಎಂದು ತಿಳಿದುಬಂದಿದೆ. ಕೊಡಚಾದ್ರಿ ಬೆಟ್ಟ ವೀಕ್ಷಿಸಿ ಕೊಲ್ಲೂರಿನತ್ತ ಮರಳುತ್ತಿದ್ದ ಜೀಪ್ ಹಾಗೂ…

Read More