Author: main-admin

ಮಂಗಳೂರು: ಗಡಿಭಾಗದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಚಂಪಾರೆಯಲ್ಲಿ ತಾಯಿ ತನ್ನ ಒಂದೂವರೆ ತಿಂಗಳ ಹೆಣ್ಣು ಮಗುವನ್ನು ಕೆಸರು ನೀರಿನಲ್ಲಿ ಮುಳುಗಿಸಿ ಕೊಲೆಗೈದ ಘಟನೆ ನಡೆದಿದೆ. ಮೃತ ಒಂದೂವರೆ ತಿಂಗಳ ಶಿಶು ಸುಮಂಗಲಿ-ಸತ್ಯನಾರಾಯಣ ದಂಪತಿಯ ಪುತ್ರಿ ಎಂದು ಗುರುತಿಸಲಾಗಿದ್ದು,ತಾಯಿ ಮತ್ತು ಮಗು ನಾಪತ್ತೆಯಾದುದರಿಂದ ಮನೆಯವರು ಹುಡುಕಾಡಿದಾಗ ತಾಯಿಯನ್ನು ಮನೆಯ ಅಲ್ಪದೂರದಿಂದ ಪತ್ತೆ ಹಚ್ಚಲಾಗಿದ್ದು, ಮಗು ನಾಪತ್ತೆಯಾಗಿತ್ತು, ಈ ಬಗ್ಗೆ ವಿಚಾರಿಸಿದಾಗ ಮಗುವನ್ನು ಸಮೀಪದ ಬಯಲಿನಲ್ಲಿ ಕೆಸರು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಳು, ಕೂಡಲೇ ಮಗುವನ್ನು ಮೇಲಕ್ಕೆತ್ತಿ ಉಪ್ಪಳದ ಮಂಗಲ್ಪಾಡಿ ಆಸ್ಪತ್ರೆಗೆ ಕರೆದೊಯ್ದರೂ ಆಗಲೇ ಮೃತಪಟ್ಟಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥತೆಯಂತೆ ವರ್ತಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೇರೆ ಯಾವುದಾದರೂ ಕಾರಣ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Read More

ನವದೆಹಲಿ: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು , ಸಿಬ್ಬಂದಿಗಳು ನಿಗದಿಪಡಿಸಿದ ಚುನಾವಣಾ ಕೇಂದ್ರದಲ್ಲಿ ನಿರ್ದಿಷ್ಟ ಮಾದರಿಯಲ್ಲೇ ಅಂಚೆ ಮತ ಚಲಾವಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ. ಅಂಚೆ ಮತದಾನದ ದುರ್ಬಳಕೆ ತಡೆಯಲು ಕೇಂದ್ರ ಚುನಾವಣಾ ಆಯೋಗ ಪ್ರಸ್ತಾಪಿಸಿದ್ದ ಹಿನ್ನಲೆ ಶಿಫಾರಸ್ಸನ್ನು ಕೇಂದ್ರ ಕಾನೂನು ಸಚಿವಾಲಯ ಅಂಗೀಕರಿಸಿ ಅಧಿಸೂಚನೆ ಹೊರಡಿಸಿದೆ. ನಿಯೋಜಿಸಲಾದ ಅಧಿಕಾರಿಗಳಿಗೆ ಚುನಾವಣೆಯ ದಿನ ರಾತ್ರಿ 8ರ ವರೆಗೂ ಮತ ಚಲಾವಣೆಗೆ ಅವಕಾಶವಿದೆ.ಈ ವೇಳೆ ಅದನ್ನು ಮತಗಟ್ಟೆ ಹೊರಗೆ ಒಯ್ದು ನಂತರ ಚುನಾವಣಾಧಿಕಾರಿಗೆ ಮತದಾನ ಮಾಡಲು ಅವಕಾಶ ನೀಡುತ್ತಿದ್ದರು. ಆದರೆ ಹೆಚ್ಚಿನ ಸಮಯ ಮತ ಚೀಟಿ ಅವರ ಬಳಿ ಇದ್ದಷ್ಟೂ ಅವರು ರಾಜಕೀಯ ಪಕ್ಷಗಳ ಅಥವಾ ಅಭ್ಯರ್ಥಿಗಳ ಬೆದರಿಕೆ, ಲಂಚ, ಒತ್ತಡಕ್ಕೆ ಒಳಗಾಗಿ ಮತ ಚಲಾವಣೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಇದಕ್ಕಾಗಿ ಈ ಬದಲಾವಣೆ ತರಲಾಗಿದೆ ಎನ್ನಲಾಗಿದೆ.

Read More

ಮಂಗಳೂರು: ನಗರದ ಕೆಂಜಾರಿನಲ್ಲಿರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಸಾಗಾಟದ 14.50 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕ ಮಂಗಳೂರು ಏರ್ಪೋರ್ಟ್‌ನಲ್ಲಿ ಬಂದಿಳಿದಿದ್ದಾನೆ‌. ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ‌. ಈ ವೇಳೆ ಈತ ನಾಲ್ಕು ರಟ್ಟಿನ ಪೆಟ್ಟಿಗೆಯ ಒಳಭಾಗದಲ್ಲಿ ಇರಿಸಲಾಗಿದ್ದ ನಾಲ್ಕು ನೀಲಿ ಬಣ್ಣದ ಕಾರ್ಬನ್ ನ ದಪ್ಪದ ಕಾಗದದ ಹಾಳೆಗಳ ಎರಡು ಪದರಗಳ ನಡುವೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡು 242 ಗ್ರಾಂ ಚಿನ್ನದ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 14.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

Read More

ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು 7 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿರುವ ಚೈತ್ರ ಕುಂದಾಪುರ ತಡರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಬಲೆಗೆ ಬಿದ್ದಿದ್ದಾಳೆ. ಕಳೆದ ಕೆಲದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಈಕೆಯ ಜೊತೆಗೆ ಮತ್ತಿಬ್ಬರು ಆರೋಪಿಗಳನ್ನೂ ವಶಕ್ಕೆ ಪಡೆಯಲಾಗಿದೆ. ಸದ್ಯ ಪ್ರಕರಣದಲ್ಲಿ ಚೈತ್ರ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Read More

ಕೇರಳ: ನಿಫಾ ವೈರಸ್ ಸೋಂಕಿನಿಂದ ಶಂಕಿತ ಎರಡು ಅಸ್ವಾಭಾವಿಕ ಸಾವುಗಳ ನಂತರ ಕೇರಳದ ಆರೋಗ್ಯ ಇಲಾಖೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಆರೋಗ್ಯ ಎಚ್ಚರಿಕೆ ನೀಡಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದಾರೆ ಎಂದು ಆರೋಗ್ಯ ಇಲಾಖೆ ಸೋಮವಾರ ರಾತ್ರಿ ಪ್ರಕಟಣೆಯಲ್ಲಿ ತಿಳಿಸಿದೆ. ಜ್ವರದ ನಂತರ ಎರಡು ಅಸ್ವಾಭಾವಿಕ ಸಾವುಗಳು ಖಾಸಗಿ ಆಸ್ಪತ್ರೆಯಿಂದ ವರದಿಯಾಗಿದ್ದು, ಇವು ನಿಫಾ ವೈರಸ್‌ನಿಂದ ಉಂಟಾಗಿರಬಹುದು ಎಂದು ಶಂಕಿಸಲಾಗಿದೆ. ಮೃತರಲ್ಲಿ ಒಬ್ಬರ ಸಂಬಂಧಿಕರನ್ನೂ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. 2018 ಮತ್ತು 2021 ರಲ್ಲಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕಿನಿಂದ ಸಾವುಗಳು ವರದಿಯಾಗಿವೆ. ದಕ್ಷಿಣ ಭಾರತದಲ್ಲಿ ಮೊದಲ ನಿಫಾ ವೈರಸ್ ಏಕಾಏಕಿ ಕೋಝಿಕ್ಕೋಡ್‌ನಲ್ಲಿ ಮೇ 19, 2018 ರಂದು ವರದಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ನಿಫಾ ವೈರಸ್ ಸೋಂಕು ಪ್ರಾಣಿಗಳಿಂದ ಜನರಿಗೆ ಹರಡುವ ಝೂನೋಟಿಕ್ ಕಾಯಿಲೆಯಾಗಿದೆ ಮತ್ತು ಕಲುಷಿತ ಆಹಾರದ ಮೂಲಕ ಅಥವಾ ನೇರವಾಗಿ ವ್ಯಕ್ತಿಯಿಂದ ವ್ಯಕ್ತಿಗೆ…

Read More

ಬೆಂಗಳೂರು: ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ‌ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.‌ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ರೀತಿ ಸೂಚನೆ ನೀಡಿದರು. ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಅವರಿಗೆ ಗ್ರಾಮ ಪಂಚಾಯ್ತಿಯಲ್ಲೇ ಒಂದು ಕೊಠಡಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸಿಎಂ ನೀಡಿದ ಉಳಿದ ಸೂಚನೆಗಳು : ಸರ್ವೇ ಗೆ ಸಂಬಂಧಿಸಿದ ವ್ಯಾಜ್ಯಗಳು ಶೀಘ್ರ ವಿಲೇವಾರಿಗಾಗಿ ಕ್ರಮ, ಭೂ ಮಾಪಕರಿಂದ ಸರ್ವೇ ಪ್ರಕರಣಗಳು ಬಾಕಿ ಉಳಿಯಬಾರದು. ರೈತರು ಸರ್ವೇ ವ್ಯಾಜ್ಯಗಳಿಗಾಗಿ ಕಚೇರಿಗೆ ಅಲೆಯುವುದನ್ನು ತಕ್ಷಣದಿಂದ ತಪ್ಪಿಸಿ ಕಂದಾಯ ಇಲಾಖೆಯಲ್ಲಿ ಕಡತಗಳು ಅನಲೈನ ನಲ್ಲಿ 5-10 ದಿನದೊಳಗೆ ವಿಲೇವಾರಿ ಆಗಬೇಕು, ಸರ್ವೇ mismatch ಗಳನ್ನು ಭೂ ಮಾಪಕರು, ಎಸಿ, ತಹಸೀಲ್ದಾರ್…

Read More

ಉಡುಪಿ: ಕ್ಯೂ ಆರ್ ಕೋಡ್ ಬಳಸಿ ಗೂಗಲ್ ಪೇ ಮೂಲಕ ಖಾತೆಯಿಂದ ಹಣ ವರ್ಗಾಯಿಸಿ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಉಷಾ ಕಿರಣ್ ಎಂಬವರು ಆಗಸ್ಟ್ 27ರಂದು ಸೊತ್ತು ಮಾರಾಟದ ಬಗ್ಗೆ ಓಎಲ್‌ಎಕ್ಸ್‌ನಲ್ಲಿ ಮಾಹಿತಿ ಹಾಕಿದ್ದು ಮಹಿಳೆಯೊಬ್ಬರು ಕರೆ ಮಾಡಿ ತಾನು ಸೊತ್ತುಗಳನ್ನು ಖರೀದಿಸುವುದಾಗಿ ತಿಳಿಸಿ, ಉಷಾ ಕಿರಣ್ ಅವರ ಗೂಗಲ್ ಪೇ ನಂಬರನ್ನು ಪಡೆದುಕೊಂಡಿದ್ದರು. ಬಳಿಕ ಉಷಾ ಕಿರಣ್ ಅವರ ಮೊಬೈಲ್‌ಗೆ ತುಂಬಾ ಕ್ಯೂ‌ ಕೋಡ್‌ಗಳು ಬಂದಿದ್ದು ಇದನ್ನು ತೆರೆದು ನೋಡಿದಾಗ ಉಷಾ ಕಿರಣ್ ಅವರ ಗೂಗಲ್ ಪೇ ಆಪ್ ತೆರೆದುಕೊಂಡಿತು. ಇದರಿಂದ ಆಗಸ್ಟ್ 27 ಮತ್ತು 28ರಂದು ಇವರ ಮೂರು ಬ್ಯಾಂಕ್‌ ಖಾತೆಗಳಿಂದ ಒಟ್ಟು 1,28,496ರೂ. ಹಣ ಬೇರೆ ಖಾತೆಗೆ ವರ್ಗಾವಣೆ ಆಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

Read More

ಬಂಟ್ವಾಳ: ತನ್ನ ಪತ್ನಿ ಮನೆಗೆ ಬಂದಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದಲ್ಲಿ ನಡೆದಿದೆ. ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಆತ್ಮಹತ್ಯೆಗೈದ ವ್ಯಕ್ತಿ. ರವೀಂದ್ರ ಅವರು ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮಧ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನು ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಪತ್ನಿಯ ಮನೆ ವಾಪಸ್ಸಾಗಿದ್ದರು. ಸಂಜೆ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ಗಾಬರಿಗೊಂಡ ಪತ್ನಿ ನೆರೆಮನೆಯವರಲ್ಲಿ ವಿಚಾರಿಸಿದ್ದಾರೆ. ಅವರು ಮನೆ ಕಡೆ ತೆರಳಿದಾಗ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ. ಆರ್ಥಿಕವಾಗಿ ನೊಂದು ಕೃತ್ಯ ಎಸಗಿರುವ ಶಂಕೆಯಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು: ಮಂಗಳೂರು ಪಣಂಬೂರು ಬೀಚ್ ಪರಿಸರದಲ್ಲಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸಿದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಡುಪಿಯ ಸಾಲಿಗ್ರಾಮ ನಿವಾಸಿ ಜಯಕರ, ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ ಆದಿತ್ಯ, ಹಾವೇರಿ ಜಿಲ್ಲೆಯ ನಿವಾಸಿ ಲೋಹಿತ್ ಕುಮಾರ್ ಗುರಪ್ಪನವರ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಪಣಂಬೂರು ಬೀಚ್ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್ ಗ್ರೀಸ್(ತಿಮಿಂಗಲ ವಾಂತಿ)ನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮೂವರು ವ್ಯಕ್ತಿಗಳನ್ನು ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಸೆರೆ ಹಿಡಿಯುವುದಲ್ಲಿ ಯಶಸ್ವಿಯಾಗಿರುತ್ತಾರೆ. 900 ಗ್ರಾಂ ತೂಕದ 90 ಲಕ್ಷ ಬೆಲೆಬಾಳುವ ಅಂಬರ್ ಗ್ರೀಸನ್ನು ಈ ಮೂವರ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ. ಈ ದಾಳಿಯು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು ನಡೆಸಿರುತ್ತಾರೆ.

Read More

ಮಂಗಳೂರು: ಕನ್ನಡ ಚಿತ್ರರಂಗದಲ್ಲಿ ಕನಸಿನ ರಾಣಿಯಾಗಿ ಚಿತ್ರರಸಿಕರ ಮನ ಗೆದ್ದಿರುವ ಆಕ್ಷನ್ ಕ್ಲೀನ್ ಮಾಲಾಶ್ರೀ ಅಭಿನಯದ ಮತ್ತೊಂದು ಆಕ್ಷನ್ ಚಿತ್ರ ಮಾರಕಾಸ್ತ್ರ ತೆರೆಗೆ ಬರಲು ಸಿದ್ಧವಾಗಿದೆ.ಈ ಚಿತ್ರದಲ್ಲಿ ಮಾಲಾಶೀ ಔಟ್ ಅಂಡ್ ಔಟ್ ಅಕ್ಷನ್ ಲುಕ್ ನಲ್ಲಿ ಕಾಣಿಸಿಕೊಂಡಿರುವುದು ಚಿತ್ರರಸಿಕರಲ್ಲಿ ನಿರೀಕ್ಷೆಯನ್ನು ಮೂಡಿಸಿದೆ. ಚಿತ್ರದ ನಾಯಕನಾಗಿ ‘ಆನಂದ್ ಆರ್ಯ, ನಾಯಕಿಯಾಗಿ ಹರ್ಷಿಕಾ ಪುಣಚ್ಚಾ, ಅಯ್ಯಪ್ಪ ಶರ್ಮಾ,ಮೈಕೋ ನಾಗರಾಜ್, ಉಗ್ರಂ ಮಂಜು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಸುಮಾರು ಹಿರಿಯ, ಕಿರಿಯ ಕಲಾವಿದರು ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಗುರುಮೂರ್ತಿ ಸುನಾಮಿ ನಿರ್ದೇಶಿಸಿದ್ದಾರೆ. ನೃತ್ಯ ನಿರ್ದೇಶಕ ಮತ್ತು ನಿರ್ದೇಶಕ ರಾಗಿರುವ ಧನು ಕುಮಾರ್ ಕ್ರಿಯೇಟಿವ್ ಹೆಡ್ ಆಗಿದ್ದಾರೆ.ಗಾಯನದಲ್ಲಿ ಅತೀವ ಆಸಕ್ತಿ ಹೊಂದಿ, ಸ್ವತ: ಗಾಯಕರಾಗಿರುವ ಡಾ| ನಟರಾಜ ಈ ಚಿತ್ರದಲ್ಲಿ ಹಾಡು ಹಾಡುವುದರೊಂದಿಗೆ ನಟನೆ ಮಾಡಿದ್ದಾರೆ. ಕೋಮಲ ನಟರಾಜ ನಿರ್ಮಾಪಕರಾಗಿದ್ದು ಮಂಜುನಾಥ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ‘ಮಾರಕಾಸ್ತ್ರ’ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಗುರುಮೂರ್ತಿ ಸುನಾಮಿ, ‘ನಾನು ಮೂಲತಃ ಬಳ್ಳಾರಿಯವನು. ಇದು ನನ್ನ ನಿರ್ದೇಶನದ ಮೊದಲ…

Read More