Author: main-admin

ಉಳ್ಳಾಲ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು 12 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚಿಸಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆ ನಡೆಸಿದ ಲೀನಾ ಲೋಬೋ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿತೇಶ ಕ್ಲಿಶನ್ ಡಿ ಸೋಜಾ, ರಿಕ್ಸನ್ ಸಂತಾನಿಸ್, ಎಡ್ಲಿನ್ ಕ್ಲಿಂಟನ್ ಡಿ ಸೋಜಾ, ಗ್ಲಾನ್ಸಿಲ ಫೆರ್ನಾಂಡೀಸ್, ಜೋಸೆಫ್ ಡಿ ಸೋಜಾ, ಗ್ಲಾನೆಟ್ ಫೆರ್ನಾಂಡೀಸ್, ಸಚಿನ್ ಪಸನ್ನ, ವಿನಯ್ ಜೋಯ್ ಅಲ್ವಾರಿಸ್, ಜೀವನ್ ಕ್ಲಿಫರ್ಡ್ ಡಿ ಸೋಜಾ, ನಾಗೇಂದ್ರ ಗಣಪತಿ, ಅವಿಶ್ ಡಿ ಸೋಜ, ಜೋಯ್ ಸನ್ ಲೂವಿಸ್ ಎಂಬವರಿಂದ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದ ಲೀನಾ ಅವರಿಂದ ಫೆ.2 ರಿಂದ ಮಾ.12 ರವರೆಗೆ ಹಂತಹಂತವಾಗಿ ಗೂಗಲ್ ಪೇ ಮೂಲಕ ಒಟ್ಟು ರೂ.2.82.000/- ಹಣವನ್ನು ಪಡೆದು, ನಂತರ ಉದ್ಯೋಗವನ್ನು ಕೊಡಿಸದೆ ವಂಚಿಸಿದ್ದಾರೆ. ದೂರುದಾರರು ಹಣವನ್ನು ವಾಪಸ್ಸು ಕೇಳಿದರೂ ಹಿಂತಿರುಗಿಸದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Read More

ಉಡುಪಿ : ಸಿಎಂ ಹೆಲಿಕಾಪ್ಟರ್‌ ಲ್ಯಾಂಡ್‌ ಆಗುತ್ತಿದ್ದ ಹೆಲಿಪ್ಯಾಡ್‌ ಬಳಿ ಬೆಂಕಿ ಕಾಣಿಸಿಕೊಂಡಿದ್ದು,ಬೈಂದೂರಿನ ಅಗ್ನಿಶಾಮಕ ಸಿಬ್ಬಂದಿಗಳಿಂದ ಕೂಡಲೇ ಬೆಂಕಿ ನಂದಿಸಲಾಗಿದೆ.ಕ್ಷಣಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್‌ ಬಳಿ ಬೆಂಕಿ ಸಿಎಂ ಹೆಲಿಕಾಪ್ಟರ್‌ ಲ್ಯಾಂಡ್‌ ಆಗುತ್ತಿದ್ದ ಬೆಂಕಿ ಕಾಣಿಸಿಕೊಂಡಿದ್ದು,ಭಯಭೀತರಾಗಿದ್ದಾರೆ. ಅರೆಶಿರೂರು ಹೆಲಿಪ್ಯಾಡ್‌ನಲ್ಲಿ ಸಿಎಂ ಇಳಿದು ಕೊಲ್ಲೂರು ಮೂಕಾಂಬಿಕಾ ದೇಗುಲದ ದರ್ಶನಕ್ಕೆ ಎಸ್ಕಾರ್ಟ್‌ ಮೂಲಕ ತೆರಳಿದ್ದಾರ ಎಂದು ತಿಳಿದು ಬಂದಿದೆ.

Read More

ಸುಳ್ಯ: ಆಹಾರ ಅರಸುತ್ತ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ ಕೆರೆಗೆ ಎರಡು ಮರಿಯಾನೆ ಮತ್ತು ಎರಡು ದೊಡ್ಡ ಆನೆ ಬಿದ್ದಿವೆ. ಆಹಾರ ಅರಸುತ್ತಾ ಬಂದಿದ್ದ ಕಾಡಾನೆಗಳು ತೋಟದಲ್ಲಿ ಬಾಳೆಗಿಡ- ಅಡಿಕೆ ಮರ ಹುಡಿ ಮಾಡಿದ್ದು, ಬಳಿಕ ಕೆರೆಗೆ ಬಿದ್ದಿವೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಆಗಮಿಸಿ ಕಾರ್ಯಾಚರಣೆಗೆ ಸಿದ್ದತೆ ನಡೆಸಿದ್ದಾರೆ. ಜೆಸಿಬಿ ಬಳಸಿ ಕೆರೆಯನ್ನು ಅಗಲ ಮಾಡಿ ಕಾಡಾನೆಗಳನ್ನು ಹೊರತೆಗೆಯಲು ಪ್ರಯತ್ನ ಮಾಡುತ್ತಿದ್ದಾರೆ. ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರ ಮಾಡುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ. ಸುಳ್ಯ ಅಜ್ಜಾವರ, ಮಂಡೆಕೋಲು ಮುಂತಾದ ಭಾಗದಲ್ಲಿ ಕಾಡಾನೆ ಹಾವಳಿ ಇದೆ.

Read More

ಬಂಟ್ವಾಳ;ಕೆಎಸ್‌ಆರ್ ಟಿಸಿ ಬಸ್- ಬೈಕ್ ಗೆ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಸರಪಾಡಿ ನಿವಾಸಿ ಯುವಕ ಶ್ರೇಯಸ್ (30) ಮೃತ ದುರ್ದೈವಿ. ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಶ್ರೇಯಸ್, ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಶ್ರೇಯಸ್ ಬಿಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ವೇಗವಾಗಿ ಬರುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬೈಕಿಗೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿದ್ದ, ಅಪಘಾತಕ್ಕೆ ಸ್ಥಳದಲ್ಲಿ ರಕ್ತದೋಕುಳಿ ಹರಿದಿತ್ತು. ಕೂಡಲೇ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕೊಂಡು ಹೋಗಿದ್ದರು ,ಆದರೆ ಗಂಭೀರವಾಗಿ ಗಾಯಗೊಂಡಿದ್ದ ಕಾರಣ 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Read More

ಬೆಂಗಳೂರು : ಐತಿಹಾಸಿಕ ಬೆಂಗಳೂರು ಕರಗ ಹೊತ್ತಿದ್ದ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ ಸಂಬಂಧ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದ ನಿವಾಸಿ ಆದಿ ನಾರಾಯಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಆದಿನಾರಾಯಣ ಕರಗ ಹೊತ್ತಿದ್ದ ಪೂಜಾರಿ ಜ್ಞಾನೇಂದ್ರ ಮೇಲೆ ರಾಸಾಯನಿಕ ದಾಳಿ ಮಾಡಿದ್ದರು. ಬೆಂಗಳೂರು ಕರಗೋತ್ಸವದ ವೇಳೆ ಕರ ಹೊತ್ತಿದ್ದ ಪೂಜಾರಿ ಮೇಲೆ ರಾಸಾಯನಿಕ ದಾಳಿ ನಡೆದಿತ್ತು. ಏಪ್ರಿಲ್ 6 ರಂದು ಬೆಂಗಳೂರು ರಕಗೋತ್ಸವ ಹಿನ್ನೆಲೆಯಲ್ಲಿ ಪೂಜಾರಿ ಜ್ಞಾನೇಂದ್ರ ಕರಗ ಹೊತ್ತಿದ್ದರು. ಅಂದು ಮಧ್ಯರಾತ್ರಿ ಭಕ್ತಾದಿಗಳ ಗುಂಪಿನಲ್ಲಿ ಆರೋಪಿ ಆದಿನಾರಾಯಣ ರಾಸಾಯನಿಕ ದ್ರಾವಣ ಸಿಂಪಡಿಸಿದ್ದ. ಇದರಿಂದ ಪೂಜಾರಿಯ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಸುಟ್ಟ ಗಾಯಗಳಾಗಿವೆ.

Read More

ಪುತ್ತೂರು: ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಂಪಾಡಿ ಗುಮ್ಮಟಗದ್ದೆ ಎಂಬಲ್ಲಿ ವರದಿಯಾಗಿದೆ. ಗುಮ್ಮಟಗದ್ದೆಯ ನಿವಾಸಿ ಬಾಲಕೃಷ್ಣ ಎಂಬವರ ಪುತ್ರಿ ಪುಣ್ಯಶ್ರೀ(32)ಮೃತ ಯುವತಿ. ಪುಣ್ಯಶ್ರೀಯನ್ನು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಉದ್ದದಪಳಿಕೆ ನಿವಾಸಿ ಪುರುಶೋತ್ತಮ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಪುಣ್ಯಶ್ರೀ ಕಳೆದ ಕೆಲ ದಿನಗಳ ಹಿಂದೆ ಬೆಳ್ತಂಗಡಿಯ ಪತಿಯ ಮನೆಯಿಂದ ತನ್ನ ತವರು ಮನೆಯಾದ ಗುಮ್ಮಟಗದ್ದೆಗೆ ಆಗಮಿಸಿದ್ದರು ಎನ್ನಲಾಗಿದೆ.ಎ.10ರಂದು ತನ್ನ ಪತಿಗೆ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಅಲ್ಲದೆ ಅದೇ ದಿನ ತನ್ನ ಚಿಕ್ಕಮ್ಮನಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಮೃತರು ಪತಿ,ಇಬ್ಬರು ಮಕ್ಕಳನ್ನು ಅಗಲಿದ್ದಾರೆ.ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ ಹಣಕ್ಕಾಗಿ ಎರಡು ವರ್ಷದ ಬಾಲಕಿಯನ್ನು ಕೊಂದು ಚೀಲದಲ್ಲಿ ಬಚ್ಚಿಟ್ಟ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿ ರಾಘವೇಂದ್ರನನ್ನು ಇದೀಗ ಬಂಧಿಸಲಾಗಿದೆ. ಆರೋಪಿ ಮನೆಯಿಂದ ದುರ್ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ನೆರೆಹೊರೆಯವರು ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 7 ರಂದು ರಾಘವೇಂದ್ರ ಬಾಲಕಿ ಮಾನ್ಸಿಯನ್ನು ಅಪಹರಿಸಿ ಆಕೆಯ ಪೋಷಕರಾದ ಶಿವಕುಮಾರ್ ಮತ್ತು ಮಂಜು ಅವರಿಂದ 2 ಲಕ್ಷ ರೂ. ಹಣಕ್ಕಾಗಿ ವಿಮೋಚನೆಗಾಗಿ ಬೇಡಿಕೆಯಿಡಲು ಯೋಜಿಸಿದ್ದ. ಬಾಲಕಿಯ ಪೋಷಕರು ದೇವ್ಲಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಐದು ವರ್ಷಗಳಿಂದ ರಾಘವೇಂದ್ರ ಅವರಿಗೂ ಅವರ ಪರಿಚಯವಿತ್ತು. ರಾಘವೇಂದ್ರ ಕೆಲ ದಿನಗಳ ಹಿಂದೆ ಕೆಲಸ ಕಳೆದುಕೊಂಡಿದ್ದ. ಪತಿ ತನ್ನ ಬ್ಯಾಂಕ್ ಖಾತೆಯಲ್ಲಿ ಸುಮಾರು 10 ಲಕ್ಷ ರೂ. ಇಟ್ಟಿರುವುದಾಗಿ ಬಾಲಕಿಯ ತಂದೆ ಮಂಜು ಹೇಳುವುದನ್ನು ರಾಘವೇಂದ್ರ ಕೇಳಿಸಿಕೊಂಡಿದ್ದಾನೆ. ಹಣದ ಅವಶ್ಯಕತೆಯಿದ್ದ ರಾಘವೇಂದ್ರ ಬಾಲಕಿಯನ್ನು ಅಪಹರಿಸಿದ್ದಾನೆ. ಮಗಳು ಕಾಣದಿದ್ದಾಗ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದರಿಂದ ಭಯಭೀತನಾದ ರಾಘವೇಂದ್ರ…

Read More

ಉಡುಪಿ: ಬಿಟ್ ಕಾಯಿನ್‌ನಲ್ಲಿ ಹೂಡಿದ ಲಕ್ಷಾಂತರ ರೂ. ಹಣವನ್ನು ವಾಪಾಸು ನೀಡದೆ ಮೋಸ ಮಾಡಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ರೇಯ ಆಚಾರ್ಯ ಎಂಬವರಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯಿಸಿಕೊಂಡ ತುಷಾರ್ ಕಪೂರ್ ಎಂಬಾತ ಬಿಟ್ ಕಾಯಿನ್‌ನಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಬರುವ ಬಗ್ಗೆ ಆಸೆ ತೋರಿಸಿದ್ದ. ಅದಕ್ಕಾಗಿ ಆತ್ರೇಯ ಆಚಾರ್ಯಗೆ ವೆಬ್‌ಸೈಟ್‌ನಲ್ಲಿ ವ್ಯಾಲೆಟ್ ಓಪನ್ ಮಾಡಿ ಹಣ ಪಾವತಿಸುವಂತೆ ತಿಳಿಸಿದ್ದ. ಇದನ್ನು ನಂಬಿದ ಆತ್ರೇಯ ಆಚಾರ್ಯ, ಮಾರಚ್ 19ರಿಂದ ಎಪ್ರಿಲ್ 9ರ ಮಧ್ಯಾವಧಿಯಲ್ಲಿ ತುಷಾರ್ ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಒಟ್ಟು 25,52,300ರೂ. ಹಣವನ್ನು ಆನ್ ಲೈನ್ ಮೂಲಕ ವರ್ಗಾವಣೆ ಮಾಡಿದ್ದರು. ಆ ಬಳಿಕ ವ್ಯಾಲೇಟ್‌ನಲ್ಲಿದ್ದ ಬಿಟ್ ಕಾಯಿನ್‌ನ್ನು ತುಷಾರ್ ಎಪ್ರಿಲ್ 9ರಂದು ವರ್ಗಾವಣೆ ಮಾಡಿ, ಬಿಟ್ ಕಾಯಿನ್ ನೀಡದೆ, ಪಡೆದ ಹಣ ವಾಪಾಸು ಕೊಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ.

Read More

ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಹೇಳಿದರು.

Read More

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಬಿಜೆಪಿ ಪಕ್ಷದಿಂದ ( BJP Party ) ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಮೊದಲ ಪಟ್ಟಿ ಬಿಡುಗಡೆಯಾಗಿದೆ. 189 ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಇಂದು ಘೋಷಣೆ ಮಾಡಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕರ್ನಾಟಕ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸೋ ಸಂಬಂಧ ಜಿಲ್ಲಾ ಹಂತದಲ್ಲಿ, ತಾಲೂಕು ಹಂತದಲ್ಲಿ, ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಲಾಗಿದೆ ಎಂದರು. ಬಿಎಸ್ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹಲವು ಸುತ್ತಿನ ಮಾತುಕತೆಯನ್ನು ಚರ್ಚಿಸಲಾಗಿದೆ. ಬಿಜೆಪಿಯಿಂದ ನಡೆಸಿದಂತ ಬೂತ್ ಲೆವೆಲ್ ನಿಂದ ರಾಜ್ಯ ಮಟ್ಟದವರೆಗಿನ ವರದಿಯನ್ನು ಆಧರಿಸಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಎಲ್…

Read More