ಮಕ್ಕಳಿಬ್ಬರು ಪೋಷಕರಿಗೆ ಗೊತ್ತಿಲ್ಲದೇ ಹೊಳೆಗೆ ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ-ಕೇರಳ ಗಡಿಭಾಗದ ಅಡೂರು ಎಂಬಲ್ಲಿ ಸಂಭವಿಸಿದೆ. ಪೋಷಕರಿಗೆ ತಿಳಿಯದೇ ನದಿಗೆ ಹೋಗಿದ್ದು ನದಿ ನೀರಿನಲ್ಲಿ ಮುಳುಗಿ ಕಂದಮ್ಮಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅಡೂರು ದೇವರಡ್ಕದ ನಿವಾಸಿ ಶಾಫಿ ಎಂಬವರ ಪುತ್ರ ಮುಹಮ್ಮದ್ ಆಶೀಕ್ (7) ಮತ್ತು ಹಸೈನಾರ್ ರವರ ಪುತ್ರ ಮುಹಮ್ಮದ್ ಫಾಸಿಲ್(9) ನೀರಿನಲ್ಲಿ ಮುಳುಗಿ ಮೃತಪಟ್ಟವರು . ಮೃತದೇಹಗಳನ್ನು ಕಾಸರಗೋಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
Author: main-admin
ಧಾರವಾಡ : ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಭಾಗ ಸಂಖ್ಯೆ 94 ರ ಮತಗಟ್ಟೆ ಅಧಿಕಾರಿಯಾಗಿದ್ದ ನವೀನ ಡಿ. ಸೂರ್ಯವಂಶಿ ಅವರು ಚುನಾವಣಾ ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೋರಿ, ಕಾರ್ಯಲೋಪ ಮಾಡಿರುವುದರಿಂದ ತಕ್ಷಣ ಸರಕಾರಿ ಸೇವೆಯಿಂದ ಅವರನ್ನು ಅಮಾನತ್ತುಗೊಳಿಸಿ, ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ಆದೇಶ ಹೊರಡಿಸಿದ್ದಾರೆ. ನವೀನ್ ಸೂರ್ಯವಂಶಿ ಅವರು 2023 ರ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯಲೋಪ ಮಾಡಿದ್ದಲ್ಲದೇ, ಸಕಾಲಕ್ಕೆ ಮಾಹಿತಿ, ದಾಖಲೆಗಳನ್ನು ನೀಡದೇ ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 134 ಉಲ್ಲಂಘನೆ ಮಾಡಿದ್ದರಿಂದ ಅವರನ್ನು ಸರಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಲಾಗಿದೆ. ಅಮಾನತ್ತು ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ಅನ್ವಯ ಜೀವನಾಂಶ ಭತ್ಯೆ ಪಡೆಯಲು ಅರ್ಹರಿದ್ದು, ತಮ್ಮ ಕಚೇರಿ ಮುಖ್ಯಸ್ಥರ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡಬಾರದೆಂದು ಜಿಲ್ಲಾಧಿಕಾರಿಗಳು ಆಗಿರುವ…
ಬೆಂಗಳೂರು : ಚುನಾವಣೆ ಘೋಷಣೆಗೂ ಮುನ್ನ ಶೋಧನೆಯ ಅಧಿಕಾರವಿಲ್ಲ ಎಂದು ಹೈಕೋರ್ಟ್ ಪೀಠ ಮಹತ್ವದ ಆದೇಶ ಹೊರಡಿಸಿದೆ. ಚುನಾವಣೆಯ ಘೋಷಣೆಗೂ ಮುನ್ನ ಶೋಧನೆಯ ಅಧಿಕಾರವಿಲ್ಲ, ಸಾಮಾಗ್ರಿಗಳನ್ನು ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಏಕಸದಸ್ಯಪೀಠ ಮಹತ್ವದ ಆದೇಶ ನೀಡಿದೆ.ಇಷ್ತಿಯಾಕ್ ಅಹಮದ್ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಆದೇಶ ಹೊರಡಿಸಿದ್ದು, ಚುನಾವಣೆ ಘೋಷಣೆಗೂ ಮುನ್ನ ಚುನಾವಣೆ ಘೋಷಣೆಗೂ ಮುನ್ನ ಚುನಾವಣಾ ಅಧಿಕಾರಿಗಳು ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳುವ ಅಧಿಕಾರವಿಲ್ಲ ಎಂದು ಹೇಳಿದ್ದಾರೆ. ಮಾ.19 ರಂದು ಚುನಾವಣಾಧಿಕಾರಿಗಳು ಶಿವಾಜಿನಗರ ಕ್ಷೇತ್ರದಲ್ಲಿ ಆಹಾರ ಸಾಮಾಗ್ರಿ ಹಂಚಿಕೆ ವೇಳೆ ದಾಳಿ ನಡೆಸಿ ಆಹಾರ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಸಂಬಂಧ ಇಷ್ತಿಯಾಕ್ ಎಂಬುವವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಮಾರ್ಚ್ 29 ರಂದು ಚುನಾವಣೆ ಘೋಷಣೆ ಹಿನ್ನೆಲೆ ಮಾ.19 ರಂದು ಆಹಾರ ಸಾಮಗ್ರಿ ವಶಕ್ಕೆ ಪಡೆದಿದ್ದ ಚುನಾವಣಾಧಿಕಾರಿಗಳ ಕ್ರಮವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಉಡುಪಿ: ಉಡುಪಿಯಲ್ಲಿ ಹದಿಹರೆಯದ ಯುವತಿ ನಾಪತ್ತೆಯಾಗಿದ್ದಾಳೆ. ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ(19) ನಾಪತ್ತೆಯಾದ ಯುವತಿಯಾಗಿದ್ದಾಳೆ. ಏಪ್ರಿಲ್ 7 ರಂದು ಶ್ರೀ ಲಕ್ಷ್ಮೀ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು : ಐಎಎಸ್ ಅಧಿಕಾರಿ ಆಕಾಶ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದ್ದು, ಪತ್ನಿ ವಂದನಾ ಬೆಂಗಳೂರು ಪೂರ್ವ ವಿಭಾಗದ ಮಹಿಳಾ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ ಡಾ. ಆಕಾಶ್ ಶಂಕರ್ ವಿರುದ್ಧ ಪತ್ನಿ ಡಾ.ಎಸ್. ವಂದನಾ ಬೆಂಗಳೂರು ಪೂರ್ವ ವಿಭಾಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಐಎಸ್ ಅಧಿಕಾರಿ ಡಾ. ಅಕಾಶ್ ಅವರ ತಂದೆ, ತಾಯಿ, ಸಹೋದರ ವಿರುದ್ಧವೂ ದೂರು ದಾಖಲಾಗಿದ್ದು, ವಿವಾಹ ಸಂದರ್ಭದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಆಭರಣಗಳನ್ನು ಉಡುಗೊರೆಯಾಗಿ ನೀಡಿದ್ದರೂ. ಸಹ ಬೆಂಗಳೂರಿನಲ್ಲಿ ಮನೆ ಕೊಡಿಸಬೇಕು ಎಂದು ವರದಕ್ಷಿಣ ಕಿರುಕುಳ ನೀಡುತ್ತಿದ್ದಾರೆ ಎಂದು ವಂದನಾ ಆರೋಪಿಸಿದ್ದಾರೆ.
ಉಡುಪಿ: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿಯ ಯುವಕನೋರ್ವ ಮೃತಪಟ್ಟಿರುವುದಾಗಿ ವರದಿಯಾಗಿದೆ. ಎರಡು ವಾರದ ಹಿಂದೆ ಸೌದಿಯಲ್ಲಿ ರಸ್ತೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಕಾಪು ನಿವಾಸಿ ಮಜೂರು ಕೊಂಬಗುಡ್ಡೆ ನಿವಾಸಿ ಮುಹಮ್ಮದ್ ರಿಯಾಝ್(27) ಜುಬೈಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.ಮಾರ್ಚ್ 25ರಂದು ಜುಬೈಲ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮುಹಮ್ಮದ್ ರಿಯಾಝರನ್ನು ಜುಬೈಲ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ರವಿವಾರ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ತಂದೆತಾಯಿ, ಪತ್ನಿಯನ್ನು ಅಗಲಿದ್ದಾರೆ.
ಬಂಟ್ವಾಳ: ಫರಂಗಿಪೇಟೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ ಹೊಡೆದು ಪಲ್ಟಿಯಾದ ಕಾರು ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಸೋಮವಾರ ನಡೆದಿದೆ. ಬಿಸಿರೋಡಿನಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಳಿಕ ಬೈಕಿಗೆ ಢಿಕ್ಕಿಯಾಗಿದೆ.ಘಟನೆಯಲ್ಲಿ ಪ್ರದೀಪ್ ಸೋಮನಾಥ ಬೆಳ್ಚಾಡ, ಕಸ್ತೂರಿ, ಸಲೋರಿ ವಿನಯಕುಮಾರ್, ಕಿಶೋರಿ ವಿನಯಕುಮಾರ್ ಎಂಬವರು ಗಾಯಗೊಂಡಿದ್ದು, ಇವರ ಪೂರ್ಣವಾದ ವಿವರ ಇನ್ನೂ ಕೂಡ ತಿಳಿದುಬಂದಿಲ್ಲ.ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ.
ಉಳ್ಳಾಲ : ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆಯೊಂದರ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10 ರಂದು ಬೆಳಗ್ಗೆ ಸಂಭವಿಸಿರುತ್ತದೆ. ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್‌ಗಳಿಗೆ ಸಂಬಂಧಿಸಿದ ಹೊಲಿಗೆ ನೂಲು ಸೇರಿದಂತೆ ಇತರ ಕಚ್ಚಾ ವಸ್ತುಗಳನ್ನು ಪೂರೈಸುವ ಅಂಗಡಿಯನ್ನು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಗೈದಿದ್ದಾರೆ. ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿ ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದಿದ್ದಾರೆ ಎಂದು ಹೇಳಲಾಗಿದೆ. ಮೃತರು ತಾಯಿ, ಪತ್ನಿ ಪುತ್ರನನ್ನು ಅಗಲಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ:ವಿಶ್ವದ ಶ್ರೇಷ್ಠ ಬೌದ್ಧ ಧರ್ಮಗುರು ದಲೈಲಾಮಾ ಅವರು ಬಾಲಕನ ತುಟಿಗೆ ಮುತ್ತು ಕೊಟ್ಟಿದ್ದು, ತನ್ನ ನಾಲಗೆಯನ್ನು ಹೀರುವಂತೆ ಹೇಳಿದ್ದಾರೆ ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ವಿಡಿಯೋಗೆ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ. ವಿಡಿಯೋದಲ್ಲಿ ದಲೈಲಾಮ ಅವರು ಬಾಲಕನ ತುಟಿಗೆ ಮುತ್ತು ಕೊಟ್ಟಿರುವುದು ಮಾತ್ರವಲ್ಲದೇ, ತನ್ನ ನಾಲಿಗೆಯನ್ನು ಹೀರುವಂತೆಯೂ ಕೇಳಿರುವುದನ್ನು ಕಾಣಬಹುದು. ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಜೂಸ್ಟ್ ಬ್ರೋಕರ್ಸ್ ಎಂಬವರು, “ದಲೈ ಲಾಮಾ ಬೌದ್ಧ ಸಮಾರಂಭದಲ್ಲಿ ಭಾರತೀಯ ಹುಡುಗನನ್ನು ಚುಂಬಿಸುತ್ತಿದ್ದಾರೆ.ಅವನ ನಾಲಿಗೆಯನ್ನು ಸ್ಪರ್ಶಿಸಲು ಪ್ರಯತ್ನಿಸುತ್ತಿದ್ದಾರೆ.”ನನ್ನ ನಾಲಿಗೆಯನ್ನು ಹೀರು” ಎಂದು ಹೇಳುತ್ತಾರೆ.ಹೀಗೆ ಮಾಡಿರುವುದೇಕೆ” ಎಂದು ಪ್ರಶ್ನಿಸಿದ್ದಾರೆ. ಇನ್ನು ಕೆಲವರು ದಲೈಲಾಮಾ ಅವರ ವರ್ತನೆಯನ್ನು ಯಾರೂ ಕೂಡಾ ಸಮರ್ಥಿಸಬಾರದು ಎಂದು ಸಾಮಾಜಿಕ ಜಾಲತಾಣ ಬಳಕೆದಾರರಾದ ದೀಪಿಕಾ ಪುಷ್ಕರ್ ನಾಥ್ ಟ್ವೀಟ್ ಮಾಡಿದ್ದಾರೆ. ಕೆಲವು ನೆಟ್ಟಿಗರು, ಸರಿಯಾದ ಹಿನ್ನೆಲೆ ತಿಳಿಯದೇ ಟೀಕಿಸುವುದು ಸರಿಯಲ್ಲ. ಸಾರ್ವಜನಿಕವಾಗಿ ಆಲಂಗಿಸುವುದು, ಮುತ್ತು ನೀಡುವುದು, ಕೆನ್ನೆಗಳಿಗೆ ಚುಂಬಿಸುವುದು ಟಿಬೆಟ್ ಸಂಸ್ಕೃತಿಯಲ್ಲ. ಆದರೆ ನಾಲಿಗೆಯ ಮೂಲಕ ಶುಭ ಕೋರುವುದು ಬೌದ್ಧ…
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ ಗ್ರಾಮದ ಪಡುಶೆಡ್ಡೆ ಕಡೆಗೆ ಹೋಗುವ ಕಾಂಕ್ರಿಟ್ ರಸ್ತೆಯಲ್ಲಿ ಆಪಾದಿತ ಯುವಕನಾದ ಸುಹಾನ್ ಎಸ್.ಪೂಜಾರಿ( 23 ವರ್ಷ) ಎಂಬಾತನು ಗಾಂಜಾ ಮಾದಕ ಪದಾರ್ಥವನ್ನು ಸ್ಕೂಟರ್ ನಲ್ಲಿರಿಸಿ ಮಾರಾಟ ಮಾಡಲು ಬಂದವನನ್ನು ಪೊಲೀಸರು ವಶಕ್ಕೆ ಪಡೆದು, ಆಪಾದಿತನು ಮಾರಾಟ ಮಾಡಲು ತಂದಿದ್ದ ಖಾಕಿ ಬಣ್ಣದ ಪ್ಯಾಕೇಟ್ ನಲಿದ್ದ 1 ಕೆ.ಜಿ 990 ಗ್ರಾಂ ಗಾಂಜಾವನ್ನು, ಕೃತ್ಯಕ್ಕೆ ಬಳಸಿದ ಮೋಬೈಲ್ ಪೋನ್ ಹಾಗೂ ಸ್ಕೂಟರನ್ನು ಮುಂದಿನ ಕ್ರಮದ ಬಗ್ಗೆ ಸ್ವಾಧೀನಪಡಿಸಿ ಕೊಂಡಿದ್ದು, ಸದ್ರಿ ಸೊತ್ತುಗಳ ಒಟ್ಟು ಮೌಲ್ಯ: 76,000- ರೂ ಆಗಬಹುದು ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಗುರುರಾಜ್ ರವರು ಕೇಸು ದಾಖಲಿಸಿಕೊಂಡಿರುತ್ತಾರೆ. ಮಂಗಳೂರು ನಗರದ ಮಾನ್ಯ ಪೊಲೀಸ್ಆಯುಕ್ತರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆಯನ್ನು ಮಾನ್ಯ ಉಪ ಪೊಲೀಸ್ ಆಯುಕ್ತರಾದ ಆಯುಕ್ತರಾದ (ಕಾ&ಸು) ಮತು (ಅಪರಾಧ ಮತು ಸಂಚಾರ) ರವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಉಪ ಪೊಲೀಸ್ ಆಯುಕ್ತರ…










