Author: main-admin

ಮಂಗಳೂರು: ಆನ್‌ಲೈನ್‌ನಲ್ಲಿ ಹಣ ದ್ವಿಗುಣ ಮಾಡಲು ಹೋಗಿ ವಂಚನೆಗೊಳಗಾಗಿ ವ್ಯಕ್ತಿಯೊಬ್ಬರು 8.78 ಲಕ್ಷ ರೂ. ಕಳೆದುಕೊಂಡ ಬಗ್ಗೆ ನಗರದ ಸೆನ್ ಠಾಣೆಗೆ ದೂರು ದಾಖಲಿಸಿದ್ದಾರೆ ದೂರುದಾರ ವ್ಯಕ್ತಿಯ ವಾಟ್ಸ್ಆ್ಯಪ್ ಗೆ ಅಪರಿಚಿತ ವ್ಯಕ್ತಿಯ +447468726354 ದೂರವಾಣಿ ಸಂಖ್ಯೆಯಿಂದ . ಮಾ.13ರಂದು ಪಾರ್ಟ್‌ ಟೈಂ ಉದ್ಯೋಗದ ಸಂದೇಶ ಬಂದಿತ್ತು. ಬಳಿಕ ಟಾಸ್ಕ್ ನೀಡಿದ ಅಪರಿಚಿತ 100 ರೂ. ಪಾವತಿಸಲು ಸೂಚಿಸಿದ್ದ. ಅದರಂತೆ ದೂರುದಾರ ತಮ್ಮ ಫೋನ್ ಪೇಯಿಂದ ಹಣ ಪಾವತಿಸಿದ್ದಾರೆ. ಬಳಿಕ ಅಪರಿಚಿತ ವ್ಯಕ್ತಿಯು ಟೆಲಿಗ್ರಾಂ ಆ್ಯಪ್ ಲಿಂಕ್ ಕಳುಹಿಸಿ ಅದರಲ್ಲಿ ಹಣವನ್ನು ಆನ್‌ಲೈನ್ ಮೂಲಕ ದ್ವಿಗುಣ ಮಾಡಲು 8 ಟಾಸ್ಕ್ ಮಾಡುವಂತೆ ಸೂಚಿಸಿ ವಿವಿಧ ಬ್ಯಾಂಕ್‌ಗಳಿಗೆ ಹಂತ ಹಂತವಾಗಿ 4,25,068 ರೂ. ವರ್ಗಾಯಿಸಿಕೊಂಡಿದ್ದ. ಆ ಬಳಿಕ ಅಪರಿಚಿತ ಬಜಾಜ್ ಲೋನ್‌ನ ಆಫರ್ ನೀಡಿ ಪ್ರೋಸೆಸ್ ಚಾರ್ಜಸ್, ಟಿಡಿಎಸ್, ಜಿಎಸ್‌ಟಿ, ಬ್ಯಾಂಕ್ ಸೆಕ್ಯುರಿಟಿ ಡಿಪಾಸಿಟ್ ಎಂಬುದಾಗಿ ನಂಬಿಸಿ ವಿವಿಧ ಬ್ಯಾಂಕ್ ಖಾತೆಗಳಿಗೆ ಮತ್ತೆ 4,53,638 ರೂ.ವನ್ನು ವರ್ಗಾಯಿಸಿದ್ದಾನೆ. ಈ ಮೂಲಕ ಒಟ್ಟು 8,78,706…

Read More

ಬಂಟ್ವಾಳ : ನಿನ್ನೆ ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ತಡರಾತ್ರಿ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬುವರ ಪುತ್ರ, ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13) ಮೃತ ಬಾಲಕ. ನಿನ್ನೆ ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಲ್ಲಿ ತನ್ನ ಸ್ನೇಹಿತರೊಂದಿಗೆ ಇದ್ದುದನ್ನು ಆ ಪರಿಸರದ ಮಂದಿ ಗಮನಿಸಿದ್ದರು, ಆದರೆ ಮಧ್ಯಾಹ್ನದ ಬಳಿಕ ಬಾಲಕ ಹಠಾತ್ ಕಾಣೆಯಾಗಿದ್ದ. ಬಾಲಕನನ್ನು ಸಾಕಷ್ಟು ಹುಡುಕಾಟ ನಡೆಸಿದರು ಸಿಕ್ಕಿರಲಿಲ್ಲ. ಬಾಲಕನ ಕೈಯಲ್ಲಿದ್ದ ಮೊಬೈಲ್ ರಿಂಗಿಣಿಸುತ್ತಿದ್ದರೂ ಕರೆ ಸ್ವೀಕಾರ ಆಗದ ಹಿನ್ನಲೆಯಲ್ಲಿ ಆತಂಕಗೊಂಡ ಪೋಷಕರು ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದರು. ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ದೊರೆತ ಮಾಹಿತಿಯಂತೆ ಕಳ್ಳಿಗೆ ಗ್ರಾಮದ ಕೆರೆಯ ಬಳಿ ಹುಡುಕಾಟ ನಡೆಸಿದಾಗ ಕೆರೆಯ ಮೇಲ್ಭಾಗದಲ್ಲಿ ಬಾಲಕ…

Read More

ಬೆಂಗಳೂರು: ರೌಡಿ ಶೀಟ್‌ನಲ್ಲಿ ಫೈಟರ್ ರವಿ ಅಲಿಯಾಸ್ ಬಿ.ಎಂ. ಮಲ್ಲಿಕಾರ್ಜುನ ಅವರ ಹೆಸರನ್ನು ಮುಂದುವರಿಸುವುದಕ್ಕೆ ಹೈಕೋರ್ಟ್ ತಡೆ ನೀಡಿದೆ. ರೌಡಿ ಶೀಟ್‌ನಿಂದ ಹೆಸರು ಕೈಬಿಡಲು ನಿರಾಕರಿಸಿದ್ದ ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಈ ಮೊದಲು ಮಲ್ಲಿಕಾರ್ಜುನ ಅವರು ತಮ್ಮ ಹೆಸರನ್ನು ರೌಡಿ ಶೀಟ್‌ನಲ್ಲಿ ಸೇರಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 2019ರಲ್ಲಿ ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ‘ರೌಡಿ ಶೀಟ್‌ನಿಂದ ಮಲ್ಲಿಕಾರ್ಜುನ ಅವರ ಹೆಸರು ತೆಗೆಯುವ ಕುರಿತಾದ ಮನವಿಯನ್ನು ಪರಿಗಣಿಸಿ’ ಎಂದು ಪೊಲೀಸ್ ಇಲಾಖೆಗೆ ನಿರ್ದೇಶಿಸಿತ್ತು. ಆದರೆ, ಮಲ್ಲಿಕಾರ್ಜುನ ಅವರು ಸಲ್ಲಿಸಿದ್ದ ಮನವಿಯನ್ನು ಪೊಲೀಸ್ ಇಲಾಖೆ 2020ರಲ್ಲಿ ತಿರಸ್ಕರಿಸಿ, ರೌಡಿಶೀಟ್‌ನಲ್ಲಿ ಹೆಸರನ್ನು ಮುಂದುವರಿಸಿತ್ತು. ಇದನ್ನು ಆಕ್ಷೇಪಿಸಿ ಮಲ್ಲಿಕಾರ್ಜುನ ಇದೇ 5ರಂದು ಮತ್ತೆ ರಿಟ್ ಅರ್ಜಿ ಸಲ್ಲಿಸಿದ್ದರು. ‘ಈ ಹಿಂದೆ ನನ್ನ ವಿರುದ್ಧ ದಾಖಲಾಗಿದ್ದ ಆರು ಅಪರಾಧ ಪ್ರಕರಣಗಳನ್ನು ಹೈಕೋರ್ಟ್ ಈಗಾಗಲೇ ರದ್ದುಪಡಿಸಿದೆ.…

Read More

ಎಟಿಎಂಗೆ (ATM) ಹಣ ತುಂಬುವ 3 ವಾಹನಗಳನ್ನು ಹೆಬ್ಬಗೋಡಿ ಪೊಲೀಸರು ಜಪ್ತಿ ಮಾಡಿದ್ದಾರೆ. ಚುನಾವಣಾ‌ ನೀತಿ ಸಂಹಿತೆ (Election Code of Conduct) ಜಾರಿ ಹಿನ್ನೆಲೆಯಲ್ಲಿ ಪೊಲೀಸರು ವಾಹನಗಳನ್ನು ಪರಿಶೀಲಿಸುತ್ತಿದ್ದು, ಹಣದ ಕುರಿತು ದಾಖಲೆ ಕೇಳಲಾಗಿತ್ತು. ಈ ವೇಳೆ ಮೂರು ವಾಹನದ ಪೈಕಿ ಒಂದು ವಾಹನದಲ್ಲಿ ಹೆಚ್ಚುವರಿ ಹಣ ಪತ್ತೆಯಾಗಿದೆ. ಸಿಬ್ಬಂದಿ ಹೇಳಿದ ಲೆಕ್ಕಕ್ಕೂ ವಾಹನದ ಒಳಗಡೆ ಇದ್ದ ಹಣಕ್ಕೂ ತಾಳೆಯಾಗುತ್ತಿರಲಿಲ್ಲ. 10‌ ಲಕ್ಷ ರೂ. ಹೆಚ್ಚುವರಿ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ರೈಟರ್ಸ್ ಕಂಪನಿಯ ವಾಹನವನ್ನು ವಶಕ್ಕೆ ಪಡೆಯಲಾಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಳ್ಳಾಲ: ರಾ.ಹೆ66 ರ ಕೋಟೆಕಾರು ಬಳಿಯಿಂದ ಪಿಕಪ್ ವಾಹನ ಕಳವು ನಡೆಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಆತನಿಂದ ಕಳವು ನಡೆಸಿದ ಪಿಕಪ್ ವಾಹನ ವಶಪಡಿಸಿಕೊಳ್ಳಲಾಗಿದೆ. ಕೇರಳ ಮೇಲ್ಪರಂಬ ಮಾಂಗಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ. ಜ.3 ರಂದು ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು.ಈ ಕುರಿತು ಮಾಲೀಕ ಮಹಮ್ಮದ್ ಶರೀಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಪೊಲೀಸರು ಅಂತರಾಜ್ಯ ವಾಹನ ಕಳ್ಳರ ಜಾಡು ಹಿಡಿದಾಗ, ಆರೋಪಿ ರಮ್ಸಾನ್ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ ಪಿಕಪ್ ವಾಹನ ಕಳವು ಬೆಳಕಿಗೆ ಬಂದಿದೆ. ಆರೋಪಿ ವಿರುದ್ದ ಉಳ್ಳಾಲ, ಬೆಳ್ತಂಗಡಿ, ಮಡಿಕೇರಿ, ಕೇರಳದ ಹೊಸದುರ್ಗ, ಕಾಸರಗೋಡು, ಕುಂಬಳೆ, ಬೇಡಗಂ, ಬೇಕಲ ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣಗಳು ಇವೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್, ಎಸ್.ಐ ಕೃಷ್ಣ ಕೆ.ಹೆಚ್, ಸಂತೋಷ್, ಮಂಜೇಶ್ವರ ಚಂದಾವರ, ಎಎಸ್ ಐ ಶೇಖರ…

Read More

ಉಡುಪಿ: ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶ ವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗಲಿದ್ದು, ಇಂತಹ ಅಕ್ರಮಗಳನ್ನು ತಡೆಯಲು ಹಾಗು ಇವುಗಳ ವಿರುದ್ದ ತ್ವರಿತಗತಿಯಲ್ಲಿ, ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸಿ ವಿಜಿಲ್ (cVIGIL) ಆಯಪ್‌ನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಚುನಾವಣಾ ಸಮಯದಲ್ಲಿ ಮತದಾರರಿಗೆ ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯ ಅಮಿಷ ನೀಡಬಹುದಾದ, ಹಣ ವಿತರಣೆ, ಉಡುಗೊರೆಗಳು ಹಾಗೂ ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿಯಿಲ್ಲದ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಆಸ್ತಿ ವಿರೂಪ, ಧಾರ್ಮಿಕ ಅಥವಾ ಕೋಮು ಭಾಷಣಗಳು/ಸಂದೇಶಗಳು, ಮತಗಟ್ಟೆಯ 200 ಮೀ.ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದ ಯಾವುದೇ ರೀತಿಯ ಪ್ರಲೋಭನೆ ಹಾಗೂ ಬೆದರಿಕೆ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ…

Read More

ಕುಂದಾಪುರ:  ವಿದ್ಯಾರ್ಥಿಯೊಬ್ಬ ನೀರುಪಾಲಾಗಿ ನಾಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಪಾಲ್ಸ್ ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಘಟನೆಯಲ್ಲಿ ನಾಪತ್ತೆಯಾದ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ(20) ಎಂದು ತಿಳಿದುಬಂದಿದೆ. ಮಂಗಳೂರಿನ ಬಳ್ಳಾಲ್ ಭಾಗ್ ನ ಶ್ರೀ ದೇವಿ ಕಾಲೇಜ್ ನಲ್ಲಿ ಎರಡನೇ ವರ್ಷದ ಬಿಕಾಂ ಜೊತೆಗೆ ಏವಿಯೇಷನ್‌ ಕೊರ್ಸ ಕಲಿಯುತ್ತಿದ್ದ ಚಿರಾಂತ್ ಶೆಟ್ಟಿ ಪಿಜಿಯಲ್ಲಿ ಉಳಿದುಕೊಂಡಿದ್ದ. ಗುಡ್ ಪ್ರೈಡೆ ರಜೆ ಕಳೆಯಲು ತನ್ನ ತರಗತಿಯ ಹಾಗೂ ಪಿಜಿಮೆಟ್ ಬೈಂದೂರಿನ ಕಿರ್ತನ್ ದೇವಾಡಿಗ (20), ಅಕ್ಷಯ್ ಆಚಾರಿ (20) ರವರ ಮನೆಗೆ ತನ್ನ ತರಗತಿಯವರಾದ ಆಲ್ವಿನ್, ಧರಣ್, ರೆಯಾನ್ ರವರೊಂದಿಗೆ ಬೈಂದೂರಿಗೆ ಗುರುವಾರ ರಾತ್ರಿ ಬಂದು ಅಕ್ಷಯ್ ಆಚಾರಿ ಮನೆಯಲ್ಲಿ ಉಳಿದುಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೀರ್ತನ್ ದೇವಾಡಿಗನ ಮನೆಯಲ್ಲಿ ಊಟ ಮುಗಿಸಿ 3.30ರ ಸುಮಾರಿಗೆ ಬೈಕ್ ನಲ್ಲಿ ಕೊಸಳ್ಳಿ ಪಾಲ್ಸ್ ಗೆ ಹೋಗಿದ್ದರು. ಚಿರಾಂತ್ ಶೆಟ್ಟಿ ಹೊರತು ಪಡಿಸಿ…

Read More

ಸಂಗಾರೆಡ್ಡಿ:ತೆಲಂಗಾಣದ ಆಘಾತಕಾರಿ ಘಟನೆಯೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಹಾಸ್ಟೆಲ್ ಆವರಣದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಪ್ರಾಂಶುಪಾಲರು ಮಗುವನ್ನು 15 ಕಿಮೀ ದೂರದ ಕಸದ ತೊಟ್ಟಿಯಲ್ಲಿ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ ಮಾಧ್ಯಮ ವರದಿಯ ಪ್ರಕಾರ, ಈ ಘಟನೆಯು ನಾರಾಯಣಖೇಡ್‌ನ ತೆಲಂಗಾಣ ಅಲ್ಪಸಂಖ್ಯಾತರ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಜೂನಿಯರ್ ಕಾಲೇಜಿನಲ್ಲಿ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ ಎಂಬಿಟಿ (ಮಜ್ಲಿಸ್ ಬಚಾವೋ ತೆಹ್ರೀಕ್) ವಕ್ತಾರ ಅಮ್ಜೆದ್ ಉಲ್ಲಾ ಖಾನ್ ಅವರು ಪೊಲೀಸರ ಬಳಿ ಘಟನೆಯ ಬಗ್ಗೆ ವಿಚಾರಿಸಿದ್ದಾರೆ. ವಿದ್ಯಾರ್ಥಿನಿಯು ಅಪ್ರಾಪ್ತ ವಯಸ್ಸಿನವಳಾಗಿದ್ದು, ಪ್ರಸ್ತುತ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ ಎನ್ನಲಾಗಿದೆ. ಎಂಬಿಟಿ (ಮಜ್ಲಿಸ್ ಬಚಾವೋ ತೆಹ್ರೀಕ್) ವಕ್ತಾರ ಅಮ್ಜೆದ್ ಉಲ್ಲಾ ಖಾನ್ ಮಾತನಾಡಿ ಮಾರ್ಚ್ 24 ರಂದು, ಖಾಜಾಪುರ ಗ್ರಾಮದ ನಿವಾಸಿಗಳು ಕಸದ ತೊಟ್ಟಿಯಲ್ಲಿ ಮಗುವನ್ನು ಎಸೆದಿರುವುದನ್ನು ಕಂಡು, ನಂತರ ಅವರು ಘಟನೆಯನ್ನು ಸಿರ್ಗಾಪುರ ಪೊಲೀಸರಿಗೆ ತಿಳಿಸಿದರು. ಪೊಲೀಸ್ ಸಿಬ್ಬಂದಿ ಹೆಣ್ಣು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿ ಚಿಕಿತ್ಸೆ ನೀಡಿದ ನಂತರ…

Read More

ಪುತ್ತೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಡ್ರೈವರ್ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಎ.7 ರಂದು ನಡೆದಿದೆ. ಮೃತರನ್ನು ಬೆಳಂದೂರು ಗ್ರಾಮದ ಅಬೀರ ಕುಸುಮಾಧರ ಎಂದು ಗುರುತಿಸಲಾಗಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಇವರು ಸುಮಾರು 9 ವರ್ಷಗಳಿಂದ ಕೆ.ಎಸ್.ಆರ್.ಟಿ.ಸಿ ಉದ್ಯೋಗಿಯಾಗಿದ್ದು, ಡ್ರೈವರ್ ಕಮ್ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ರಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read More

ಮೂಡುಬಿದಿರೆ : ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

Read More