ಮಂಗಳೂರು: ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ಸೆ.8ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ ವಿವರ ಇಂತಿದೆ:ಸೆ.8 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.25ಕ್ಕೆ ಸಕ್ರ್ಯೂಟ್ ಹೌಸ್ ಗೆ ತೆರಳಿ ವಾಸ್ತವ್ಯ ಮಾಡುವರು. ನಂತರ ಅಲ್ಲಿಂದ 12 ಗಂಟೆಗೆ ನಗರದ ಟಿ.ಎಂ.ಎ. ಪೈ ಕನ್‍ವೆನ್‍ಶನ್ ಸಭಾಂಗಣದಲ್ಲಿ ದಿ ಫಿಸಿಯೋಥೆರಪಿ ಕಾನ್ಫರೆನ್ಸ್ ಮ್ಯಾಂಗಳೂರ್ ಫಿಸಿಯೋಕಾನ್ 2023 ಕಾರ್ಯಕ್ರಮ ಉದ್ಘಾಟಿಸುವರು. ಮಧ್ಯಾಹ್ನ 1 ಗಂಟೆಗೆ ನಗರದ ಹೋಟೆಲ್ ತಾಜ್ ವಿವಂತಾದಲ್ಲಿ ವಾಸ್ತವ್ಯ ಮಾಡುವರು. 1.30ಕ್ಕೆ ಖಾಸಗಿ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಆಡಳಿತದ ಅಧಿಕಾರಿಗಳೊಂದಿಗೆ ಸಂವಾದ ನಡೆಸುವರು. ಸಂಜೆ 5.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.
Author: main-admin
ಪುತ್ತೂರು : ಪುತ್ತೂರು ಶಾಸಕ ಅಶೋಕ್ ರೈ ಬೆಂಬಲಿಗ ಗ್ರಾಮಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಮನೆಗೆ ದರೋಡೆಕೋರರು ನುಗ್ಗಿ ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ. ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯ ಗುರುಪ್ರಸಾದ್ ರೈ ಎಂಬವರ ಮನೆಯಲ್ಲಿ ಈ ದರೋಡೆ ನಡೆದಿದ್ದು ಸೆಪ್ಟೆಂಬರ್ 7 ರ ಮುಂಜಾನೆ ಸುಮಾರು 2 ಗಂಟೆಗೆ ಮನೆಯ ಬಾಗಿಲು ಒಡೆದು ನುಗ್ಗಿದ ಸುಮಾರು 8 ಮಂದಿ ದರೋಡೆಕೋರರ ತಂಡ ಗುರುಪ್ರಸಾದ್ ಅವರನ್ನು ಕಟ್ಟಿಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ಚಿನ್ನವನ್ನು ದರೋಡೆ ಮಾಡಿದೆ. ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡ ಸುಮಾರು ಒಂದೂವರೆ ಗಂಟೆಗಳವರೆಗೆ ಮನೆಯೊಳಗೇ ಇದ್ದು, ಮನೆಯ ಎಲ್ಲಾ ಕಡೆಗಳಲ್ಲೂ ಹುಡುಕಾಡಿದೆ. ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುತ್ತಿದ್ದ ದರೋಡೆಕೋರರ ತಂಡ ಹಿಂಬಾಗಿಲಿನಿಂದ…
ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರಿಂದ ಅಧಿಕಾರ ಸ್ವೀಕರಿಸಿ ಅನುಪಮ್ ಅಗರ್ವಾಲ್ ಮಾತನಾಡಿ, ಬೇರೆ ಜಿಲ್ಲೆಗಳಲ್ಲಿ ಕೆಲಸ ಮಾಡಿದ ಸಂದರ್ಭ ಇಲ್ಲಿನ ಡ್ರಗ್ಸ್ ಸಮಸ್ಯೆಯ ಬಗ್ಗೆ ಕೇಳಿದ್ದೇನೆ. ಹಿಂದಿನ ಕಮಿಷನರ್ ಕುಲದೀಪ್ ಕುಮಾರ್ ಅವರು ಕೂಡಾ ಈ ದಿಸೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನ ಯಶಸ್ವಿ ಕಾಣುತ್ತಿದ್ದು, ನಶೆ ಮುಕ್ತ ಮಂಗಳೂರು ಕನಸು ನನಸು ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಈ ಅಭಿಯಾನವನ್ನು ಮುಂದುವರಿಸುವ ಭರವಸೆಯನ್ನು ನೀಡುವುದಾಗಿ ಅವರು ತಿಳಿಸಿದರು.
ತಾಯಿ, ಮಗ ಬರ್ಬರವಾಗಿ ಹತ್ಯೆಗೀಡಾದ ಘಟನೆ ಬೆಂಗಳೂರಿನ ಬಾಗಲಗುಂಟೆಯ ರವೀಂದ್ರನಗರದಲ್ಲಿ ನಡೆದಿದೆ. ನವನೀತಾ(33), ಸೃಜನ್(11) ಕೊಲೆಯಾದವರು. ಪತಿ ಚಂದ್ರುನೇ ತನ್ನ ಪತ್ನಿ ಹಾಗೂ ಮಗನನ್ನು ಕೊಂದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬಾಗಲಗುಂಟೆ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಗಲಗುಂಟೆ ಪೊಲೀಸರು ಇದೀಗ ಪರಾರಿಯಾದ ಚಂದ್ರು ಪತ್ತೆಗಾಗಿ ಶೋಧ ನಡೆಸಿದ್ದಾರೆ. ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿ ಪತಿ ಚಂದ್ರುವೇ ಕೊಂದಿರಬಹುದೆಂದು ಮೃತ ನವನೀತಾ ಕುಟುಂಬಸ್ಥರು ಅರೋಪಿಸಿದ್ದಾರೆ. ಕೊಲೆಯಾದ ಮಹಿಳೆ ಆಂಧ್ರ ಪ್ರದೇಶ ಮೂಲದವರಾಗಿದ್ದು, ಕಳೆದ ಮೂರು ವರ್ಷಗಳಿಂದ ರವೀಂದ್ರ ನಗರದಲ್ಲಿ ವಾಸವಿದ್ದರು. ಆದ್ರೆ, ಪತಿಯಿಂದ ಕಳೆದ 2 ವರ್ಷಗಳಿಂದ ದೂರವಾಗಿ ಪ್ರತ್ಯೇಕ ಮನೆಯಲ್ಲಿ ವಾಸಿಸುತ್ತಿದ್ದಳು. ಇನ್ನು ಈ ಪ್ರಕರಣ ಭೇದಿಸಲು ಡಿಸಿಪಿ ಶಿವಪ್ರಕಾಶ್ ದೇವರಾಜ ಅವರು ವಿಶೇಷ ತಂಡವನ್ನು ರಚಿಸಿದ್ದಾರೆ.
ಬಂಟ್ವಾಳ: ಜಮೀನಿಗೆ ನುಗ್ಗಿ ಅಡಿಕೆ ಕದ್ದ ಆರೋಪ ಹೊತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಹಿಡಿದು ಅವರನ್ನು ವಿಚಾರಿಸುತ್ತಿರುವ ವಿಡಿಯೋ ವೈರಲ್ ಆಗಿದೆ ಮಣಿನಾಲ್ಕೂರು ಗ್ರಾಮದ ಹಂಡೀರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಸಿಕ್ಕಿಬಿದ್ದ ಆರೋಪಿಗಳು ಈ ಹಿಂದೆಯೂ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲ ಸಮಯದಿಂದ ಇಬ್ಬರು ಆರೋಪಿಗಳು ಬೇರೆ ಬೇರೆ ಜಮೀನುಗಳಿಗೆ ನುಗ್ಗಿ ಅಡಿಕೆ ಉತ್ಪನ್ನಗಳ ಕಳ್ಳತನದಲ್ಲಿ ತೊಡಗಿದ್ದರು ಎಂದು ಹೇಳಲಾಗುತ್ತದೆ.ಇದೇ ಕೃತ್ಯ ಮುಂದುವರಿಸಿದ ಸಂದರ್ಭದಲ್ಲಿ ಕೃಷಿಕರ ಕೈಗೆ ಸಿಕ್ಕಿ ಬಿದ್ದು ಅವರನ್ನು ವಿಚಾರಿಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆ ಅಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವಿಟರ್‌ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಚಾರಿತ್ರಿಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿದೆ. ಈ ನಡುವೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗದೇ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಕೇಂದ್ರಗಳಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು ಅಥವಾ ಸ್ವಯಂಸೇವಕ ‘ಪ್ರಜಾಪ್ರತಿನಿಧಿಗಳು’ ಮನೆ ಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡುತ್ತಾರೆ.
ಪುತ್ತೂರು : ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಘಟನೆ ಬಡಗನ್ನೂರಿನಲ್ಲಿ ನಡೆದಿದೆ. ಬಡಗನ್ನೂರು ಕುಡ್ಕಾಡಿ ನಿವಾಸಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಎಂಬವರ ಮನೆಯಿಂದ ಚಿನ್ನಾಭರಣವನ್ನು ದೋಚಿದ್ದಾರೆನ್ನಲಾಗಿದೆ. ಗುರುಪ್ರಸಾದ್ ರೈ ಹಾಗೂ ಅವರ ತಾಯಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಕಳ್ಳತನ ಮಾಡಿದ್ದಾರೆನ್ನಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ನವದೆಹಲಿ: ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆಗಳಿಗಾಗಿ ಹಿನ್ನಡೆ ಮತ್ತು ಪ್ರಕರಣಗಳನ್ನು ಎದುರಿಸುತ್ತಿರುವ ಉದಯನಿಧಿ ಸ್ಟಾಲಿನ್ ಬುಧವಾರ (ಸೆಪ್ಟೆಂಬರ್ 6) ವರದಿಗಾರನ ಪ್ರಶ್ನೆಗೆ ಕ್ಷಮೆಯಾಚಿಸಿದರು, ಆದರೆ ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆಗೆ ಕ್ಷಮೆಯಾಚಿಸಲು ನಿರಾಕರಿಸಿದರು. ವರದಿಗಾರರು ಉದಯನಿಧಿ ಸ್ಟಾಲಿನ್ ಗೆ ಕ್ಷಮೆಯಾಚಿಸಲು ಬಯಸುತ್ತೀರಾ? ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಸ್ಟಾಲಿನ್ “ಕ್ಷಮಿಸಿ, ಇದು ಅವರಿಗೆ ಕ್ಷಮೆಯಾಚನೆಯಲ್ಲ, ಇದು ನಿಮ್ಮ ಪ್ರಶ್ನೆಗಾಗಿ” ಎಂದು ಉತ್ತರಿಸಿದ್ದಾರೆ. ಉದಯನಿಧಿ ಸ್ಟಾಲಿನ್ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ’ ಕುರಿತ ಹೇಳಿಕೆಗಳು ರಾಷ್ಟ್ರವ್ಯಾಪಿ ವಿವಾದವನ್ನು ಹುಟ್ಟುಹಾಕಿದವು ಮತ್ತು ಉದಯನಿಧಿ ಅವರ ಹೇಳಿಕೆಗಳನ್ನು ಬೆಂಬಲಿಸಿ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳು ಮಂಗಳವಾರ (ಸೆಪ್ಟೆಂಬರ್ 5) ಉತ್ತರ ಪ್ರದೇಶದ ರಾಂಪುರದಲ್ಲಿ ಉಭಯ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲು ಕಾರಣವಾಯಿತು. ಇಬ್ಬರು ನಾಯಕರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ, 295 ಎ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವಕೀಲರು ದೂರು…
ಮಂಗಳೂರು: ಡ್ರಗ್ಸ್ ಮುಕ್ತಕ್ಕೆ ಪಣ ತೊಟ್ಟು, ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಿರುವ ಹಾಗೂ ಇನ್ನಿತರ ಅಕ್ರಮಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ಮಂಳೂರಿನ ಪೊಲೀಸ್ ಕಮಿಷನರ್ ವರ್ಗಾವಣೆಗೊಂಡಿರುವುದು ಮಂಗಳೂರು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಫೆ.24ರಂದು ಕುಲದೀಪ್ ಆರ್. ಜೈನ್ ಅಧಿಕಾರ ವಹಿಸಿಕೊಂಡಿದ್ದರು. ಬಳಿಕ ನಗರದಲ್ಲಿ ನಡೆಯುತ್ತಿದ್ದ ಡ್ರಗ್ಸ್ ದಂಧೆ, ಮಟ್ಕಾ ದಂಧೆ, ಅಕ್ರಮ ಮರಳು ಸಾಗಾಟ ಸೇರಿದಂತೆ ಇನ್ನಿತರ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಿದ್ದರು. ಈ ವೇಳೆ ಯಾವ ಲಾಬಿಗೂ ಮಣಿಯದೆ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರನ್ನು, ಅಪರಾಧ ಕೃತ್ಯಗಳಲ್ಲಿ ತೊಡಗಿ ತಲೆಮರೆಸಿಕೊಂಡಿರುವವರ ಹೆಡೆಮುರಿಕಟ್ಟಿ ಬಂಧಿಸಿ ಕಂಬಿ ಹಿಂದೆ ಕಳುಹಿಸಿದ್ದರು. ಆದರೆ ಮಂಗಳೂರಿನಲ್ಲಿ ಇಷ್ಟೆಲ್ಲಾ ಉತ್ತಮ ಕೆಲಸ ಮಾಡಿ ಜನಮನ್ನಣೆ ಪಡೆದ ಅಧಿಕಾರಿಯನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಮಗೆ ಮತ್ತೆ ಅದೇ ಕಮಿಷನರ್ ಬೇಕು ಎಂಬ ಕೂಗು ಕೇಳಿ ಬರುತ್ತಿದೆ. ದಕ್ಷ ಕಾರ್ಯವೈಖರಿ ಇರುವ ಪೊಲೀಸ್ ಅಧಿಕಾರಿಯನ್ನೇ…
ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ.ಈ ವೇಳೇ ಸಾವಿರಾರು ಜನ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಅಧಿಕವಿರಲಿದ್ದಾರೆ ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶಿಸಿದ್ದಾರೆ.










