ಮಂಗಳೂರು: ವಿದೇಶದಲ್ಲಿ ಉದ್ಯೋಗ, ವೀಸಾ ಕೊಡಿಸುವುದಾಗಿ ಹೇಳಿಕೊಂಡು ಹಲವಾರು ಮಂದಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸುಧೀರ್ ರಾವ್ ವಿ.ಆರ್.(42) ಎಂದು ಗುರುತಿಸಲಾಗಿದೆ. ಬಲ್ಗೇರಿಯಾ ದೇಶದಲ್ಲಿ ಉದ್ಯೋಗ-ವೀಸಾ ದೊರಕಿಸಿಕೊಡುವುದಾಗಿ ಹೇಳಿಕೊಂಡು 30ಕ್ಕೂ ಅಧಿಕ ಮಂದಿಯಿಂದ 50 ಲಕ್ಷ ರೂಪಾಯಿಗೂ ಅಧಿಕ ಹಣ ಪಡೆದು ಬಳಿಕ ವಂಚಿಸಿರುವ ಆರೋಪ ಈತನ ಮೇಲೆ ಇದೆ. ಈ ಬಗ್ಗೆ ಮೂಡಬಿದ್ರೆ ಮತ್ತು ಬಂಟ್ವಾಳ ನಗರ ಠಾಣೆಯಲ್ಲಿ 8 ಪ್ರಕರಣಗಳು ದಾಖಲಾಗಿವೆ. ಈ ಹಿಂದೆಯೂ ಸುಧೀರ್ ರಾವ್ ಕಾರು ಖರೀದಿಸುವ ಸಲುವಾಗಿ ನಕಲಿ ದಾಖಲೆ ಪತ್ರ ಸೃಷ್ಟಿಸಿ ಸೊಸೈಟಿಯಲ್ಲಿ ಅದನ್ನಿಟ್ಟು ಕಾರು ಖರೀದಿಸಿದ್ದ. ಬಳಿಕ ಕಂತು ಪಾವತಿಸದೆ ವಂಚಿಸಿದ್ದ. ಇದರಿಂದ ಜಾಮೀನು ನಿಂತವರು ಸಂಕಷ್ಟಕ್ಕೀಡಾಗಿದ್ದರು. ಈ ಬಗ್ಗೆ ಸುರತ್ಕಲ್‌ನಲ್ಲಿ 2, ಕದ್ರಿಯಲ್ಲಿ 2, ಕಂಕನಾಡಿ ನಗರ ಮತ್ತು ಪಾಂಡೇಶ್ವರ ಠಾಣೆಯಲ್ಲಿ ತಲಾ ಒಂದು ಸಹಿತ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ಆರೋಪಿಯು ಪ್ರಕರಣ ದಾಖಲಾದ ಬಳಿಕ ಪೊಲೀಸರ ಕೈಗೆ ಸಿಗದೆ…
Author: main-admin
ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮದ್ಯೆ ಗುರುವಾರ ಮಾರಾಮಾರಿ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದ ಮೆರೆವಣಿಗೆಯ ವೇಳೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮೆರೆವಣಿಗೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆನ್ನಲಾಗಿದ್ದು, ಈ ವೇಳೆ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಮುಖಂಡರ 10ಕ್ಕೂ ಹೆಚ್ಚು ಕಾರುಗಳು ಜಖಂಗೊಂಡಿವೆ. ಕಾರುಗಳ ಗಾಜು ಪುಡಿ ಪುಡಿಯಾಗಿವೆ. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಲ್ಕೈದು ಜನ ಕಾರ್ಯಕರ್ತರೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಬಂಟ್ವಾಳ : ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿತ್ತು. ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು. ರಸ್ತೆಯ ಎರಡೂ ಬಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿರ ಬೇಕು ಎಂದು ಹೇಳಲಾಗುತ್ತಿದೆಯಾದರೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ. ಬಿಸಿರೋಡು ಮುಖ್ಯ ಪೇಟೆ ಹಾಗೂ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಇಕ್ಕೆಲಗಳಲ್ಲಿ ಬೆಂಕಿ ಬಿದ್ದ ಕಾರಣ ಕೆಲ ಹೊತ್ತು ಆತಂಕದ ವಾತವರಣ ನಿರ್ಮಾಣ ವಾಗಿತ್ತು. ಬಂಟ್ವಾಳ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಜನರನ್ನು ಚದುರಿಸಲು ಬಂಟ್ವಾಳ ನಗರ ಠಾಣಾ ಎಸ್ ಐ ರಾಮಕೃಷ್ಣ ಮತ್ತು ತಂಡದವರು ಹರಸಾಹಸ ಪಟ್ಟರು.
ಉಪ್ಪಿನಂಗಡಿ : ಮಹಿಳೆಯೋರ್ವರು ಪ್ರತಿಷ್ಠಿತ ರಾಜಕಾರಣಿ ಹಾಗೂ ಜನಪ್ರತಿನಿಧಿಯ ಜೊತೆಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ಮಹಿಳೆಯು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಈ ಹಿಂದೆ ರಾಜಕೀಯದಲ್ಲಿ ಸಕ್ರಿಯವಾಗಿದ್ದ ನೆಕ್ಕಿಲಾಡಿ ಸಮೀಪದ ಮಹಿಳೆ ಎ.5 ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಪೋಟೊವನ್ನು ನಕಲು ಮಾಡಲಾಗಿದೆಯೋ ಎಂಬ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಫೋಟೊಗಳು ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದ್ದು, ಮುಂಬರುವ ವಿಧಾನ ಸಭಾ ಚುನಾವಣೆಯ ಮೇಲೆ ಈ ಫೋಟೋಗಳು ಪರಿಣಾಮ ಬೀರುವ ಸಾಧ್ಯತೆಯಿದೆಯೆಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ..
ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ನಡೆದ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ. ಗುತ್ತಿಗೆದಾರ ನಾಸಿರ್ ಎಂಬವರ ಇನ್ನೋವಾ ಕಾರು ಮಂಗಳೂರಿನಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹಣ್ಣು ಹಂಪಲು ಮಾರುತ್ತಿದ್ದ ಅಂಗಡಿಗೆ ನುಗ್ಗಿದೆ. ಅಲ್ಲಿಗೆ ನಿಲ್ಲದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಎಸ್ ಕ್ರಾಸ್ ಕಾರಿಗೆ ಢಿಕ್ಕಿ ಹೊಡೆದಿದೆ. ಆ ಕಾರು ಸೂಚನ ಫಲಕದ ಕಂಬಕ್ಕೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿರುವ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ಸಂಭವಿಸಿದೆ. ಆ ಕಾರು ಎದುರುಗಡೆಯಿರುವ ರಸ್ತೆ ಸೂಚನ ಫಲಕದ ಕಂಬಕ್ಕೆ ಢಿಕ್ಕಿ ಹೊಡೆದು ಅದಕ್ಕೂ ಹಾನಿಯಾಗಿ ಸರಣಿ ಅಪಘಾತ ಸಂಭವಿಸಿದೆ.
ಮಂಗಳೂರು:ಗೋಕಳ್ಳತನದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮೆಮಾರ್ ನಿವಾಸಿ ಸಾಹುಲ್ ಹಮೀದ್(33) ಮತ್ತು ಮಹಮ್ಮದ್ ಸಾದಿಕ್ ಬಂಧಿತ ಆರೋಪಿಗಳು. ಆರೋಪಿಗಳು ಫೆಬ್ರವರಿ 11ರಂದು ಕಾವೂರು ಗಾಂಧಿನಗರದಲ್ಲಿ ಗೋವಿನ ಕರುವನ್ನು ಕಳವು ಮಾಡಿದ್ದರು ಎನ್ನಲಾಗಿದೆ. ಬಂಧನದ ವೇಳೆ ಪೊಲೀಸರು ಆರೋಪಿಗಳಿಂದ 1,50,000 ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಠಾಣೆಗಳಲ್ಲಿ ಈ ಮೊದಲು ಪ್ರಕರಣ ದಾಖಲಾಗಿತ್ತು ಎಂದು ವರದಿ ತಿಳಿಸಿದೆ.
ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿನೇಶ್, ಸಚಿನ್, ನಿತೇಶ್ ತೋಟಂತಾಡಿ, ಅವಿನಾಶ್ ಯಾನೆ ರಾಹುಲ್ ಬಂಧಿತ ಆರೋಪಿಗಳು. ಕಕ್ಕಿಂಜೆ ನಿವಾಸಿ ಮೊಹಮ್ಮದ್ ಜಾಹೀರ್ ಎಂಬುವರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಆರೋಪಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಸೋಮವಾರ ಊರಿಗೆ ಬಸ್ ಲ್ಲಿ ಬರುತ್ತಿದ್ದ ವೇಳೆ ಪರಿಚಯದ ಯುವತಿಯೊಂದಿಗೆ ಮೊಹಮ್ಮದ್ ಜಾಹೀರ್ ಮಾತನಾಡಿದ್ದ. ಯುವತಿ ಬೆಳ್ತಂಗಡಿಯಲ್ಲಿ ಇಳಿದು ಮನೆಗೆ ತೆರಳಿದ್ದು, ಜಾಹೀರ್ ಯುವತಿಯೊಂದಿಗೆ ಮಾತನಾಡಿದ ವಿಚಾರ ತಿಳಿದ ಯುವಕರ ತಂಡ ಬಸ್ ನಿಂದ ಆತನನ್ನು ಕೆಳಗೆ ಇಳಿಸಿ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಜಾಹೀರ್ ಬೆಳ್ತಂಗಡಿ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಚೆನ್ನೈ: ದಾರುಣ ಘಟನೆಯೊಂದರಲ್ಲಿ ಐವರು ಇಂದು ಚೆನ್ನೈನ ದೇವಸ್ಥಾನದ ಬಳಿಯ ಸಾರ್ವಜನಿಕ ಕಲ್ಯಾಣಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನದ ಭಕ್ತರು ಪಂಗುನಿ ಆಚರಣೆಯ ಅಂಗವಾಗಿ ಧಾರ್ಮಿಕ ಕ್ರಿಯೆಗಳಿಗಾಗಿ ತೊಟ್ಟಿಯಲ್ಲಿ ಜಮಾಯಿಸಿದಾಗ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ‘ಮೊದಲಿಗೆ ಒಬ್ಬರು ಜಾರಿಬಿದ್ದರು, ಮತ್ತು ನಂತರ ಅವರನ್ನು ರಕ್ಷಿಸಲು ಪ್ರಯತ್ನಿಸಿದವರೂ ನೀರಿನಲ್ಲಿ ಮುಳುಗಿದರು. ಪ್ರೋಟೋಕಾಲ್ಗಳನ್ನು ಅನುಸರಿಸಲಾಗಿದೆಯೇ ಎಂಬುದರ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ’ ಎಂದು ಚೆನ್ನೈ ಪೊಲೀಸ್ ಕಮಿಷನರ್ ಶಂಕರ್ ಜಿವಾಲ್ ಹೇಳಿದ್ದಾರೆ. ಪೊಲೀಸರ ಪ್ರಕಾರ, ಎಲ್ಲಾ ಐದು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ವಿಷಯದ ಬಗ್ಗೆ ತನಿಖೆ ನಡೆಯುತ್ತಿದೆ ಅಂತ ತಿಳಿಸಿದ್ದಾರೆ. ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಟ್ಯಾಂಕ್‌ನಲ್ಲಿ ತಮ್ಮ ಶೋಧ ಕಾರ್ಯಾಚರಣೆಯನ್ನು ಮುಂದುವರೆಸುತ್ತಿವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಡಿಜಿಪಿ ಅಭಾಷ್ ಕುಮಾರ್ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ನೀರಿನಲ್ಲಿ ಮುಳುಗಿದ ಐವರೂ ಚೆನ್ನೈನ ಮೂರು ವಿಭಿನ್ನ ಪ್ರದೇಶಗಳಿಗೆ ಸೇರಿದವರು ಎನ್ನಲಾಗಿದೆ.
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬ0ದಿಸಿದ0ತೆ, ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಪೇಸ್‌ಬುಕ್ ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ , ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ) ಇಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಎಂಸಿಎ0ಸಿ ಯಿಂದ ಪೂರ್ವಾನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುತ್ತಿರುವುದನ್ನು ಪರಿಶೀಲಿಸಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಪ್ರತ್ಯೇಕ ಕಚೇರಿಯನ್ನು ತೆರೆದಿದ್ದು, ಇಲ್ಲಿ 24*7 ಜಾಹೀರಾತುಗಳನ್ನು ಪರಿಶೀಲಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರಸಾರವಾಗುವ ಎಲ್ಲಾ ಸ್ಥಳೀಯ ಟಿವಿ ಚಾನೆಲ್ ಗಳಲ್ಲಿನ ಕಾರ್ಯಕ್ರಮಗಳನ್ನು ನಿರಂತರವಾಗಿ ವೀಕ್ಷಿಸಲು 3 ಪಾಳಿಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿದ್ದು, 8 ಟಿವಿ ಪರದೆಗಳ ಮೂಲಕ ಸದ್ರಿ ಚಾನೆಲ್ ಗಳಲ್ಲಿ ಪ್ರಸಾರವಾಗುತ್ತಿರುವ ಎಲ್ಲಾ ಕಾರ್ಯಕ್ರಮಗಳನ್ನು ವೀಕ್ಷಿಸಿ ಅದರಲ್ಲಿ ಬರುವ ಎಲ್ಲಾ ರೀತಿಯ ಕಾರ್ಯಕ್ರಮಗಳ…
ಬೆಂಗಳೂರು: 18 ವರ್ಷದೊಳಗಿನ ಅಪ್ರಾಪ್ತರಿಗೆ ಪ್ರೀತಿ ಮಾಡಲು ಅನುಮತಿ ಇರಬಹುದೇನೋ ಆದರೆ ದೈಹಿಕ ಸಂಪರ್ಕ ಬೆಳೆಸಲು ಅಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಆರೋಪಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೊ ಕಾಯ್ದೆಯ ಸೆಕ್ಷನ್ 4 ರ ಅಡಿಯಲ್ಲಿ ಶಿಕ್ಷಾರ್ಹವಾದ ಪೋಕ್ಸೊ ಕಾಯ್ದೆಯ ಸೆಕ್ಷನ್ 3 ರ ವ್ಯಾಪ್ತಿಯನ್ನು ಪರಿಗಣಿಸುವಾಗ ಅರ್ಜಿದಾರರು ಮತ್ತು ಸಂತ್ರಸ್ತ ಹುಡುಗಿಯ ನಡುವೆ ನಡೆದಿದೆ ಎಂದು ಹೇಳಲಾದ ಲೈಂಗಿಕ ದೌರ್ಜನ್ಯಕ್ಕೆ ಸಂತ್ರಸ್ತ ಬಾಲಕಿಯ ಒಪ್ಪಿಗೆ ಮುಖ್ಯವಲ್ಲ ಎಂದು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ನ್ಯಾಯಪೀಠ ಹೇಳಿದೆ. ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಬುಜ್ಜಿ ಅಲಿಯಾಸ್ ಬಾಬು (23) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್, ಸಂತ್ರಸ್ತೆಯ ಸ್ವಯಂಕೃತ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಜಾಮೀನು ಕೋರಿದ ಆರೋಪಿಯ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿದೆ. ಪೋಕ್ಸೋ ಕಾಯ್ದೆ ಪ್ರಕಾರ 18 ವರ್ಷ ಒಳಗಿನವರು ಅಪ್ರಾಪ್ತರೆಂದು ಪರಿಗಣಿಸಲ್ಪಡುತ್ತಾರೆ. ಈ ಪ್ರಕರಣದ ಸಂತ್ರಸ್ತೆ 18…










