Author: main-admin

ಮಂಗಳೂರು : ಕಳೆದ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರದ ಬಂದರು ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನಗರದ ನ್ಯೂಚಿತ್ರ ಟಾಕೀಸಿನ ಬಳಿಯ ಸುಬ್ಬಯ್ಯಶೆಟ್ಟಿ ಕಂಪೌಂಡ್ ನ ರಾಜೇಶ್(52) ಬಂಧಿತ ಆರೋಪಿಯಾಗಿದ್ದಾನೆ. ಕೇರಳದ ಕಾಸರಗೋಡಿನಲ್ಲಿ ಬಂದರು ಠಾಣಾ ಎಎಸ್‌ಐ ಓಂ ದಾಸ್ ಮತ್ತು ಹೆಡ್ ಕಾನ್ಸ್‌ಟೇಬಲ್ ಮಚ್ಚೇಂದ್ರನಾಥ ಅವರು ಆರೋಪಿ ರಾಜೇಶ್‌ನನ್ನು ಬಂಧಿಸಿ ಮಂಗಳೂರಿಗೆ ಕರೆ ತಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Read More

ಬೆಂಗಳೂರು: ದುಷ್ಟರಿಂದ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದ ಸೌಜನ್ಯಳಿಗೆ ನ್ಯಾಯ ಸಿಗಬೇಕೆಂದು ಹೋರಾಟ ಕರಾವಳಿಯಲ್ಲಿ ಮುಂದುವರೆದಿದ್ದು, ಈ ನಡುವೆ ಕರಾವಳಿಯ ಶಾಸಕರು ಪ್ರಕರಣದ ಮರುತನಿಖೆ ನಡೆಸಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಶಾಸಕರು ಸಂಸದ ನಳಿನ್ ಕುಮಾರ್ ಸಾರಥ್ಯದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಸಹೋದರಿ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಸಿಗಬೇಕು ಮತ್ತು ಪ್ರಕರಣದ ಮರು ತನಿಖೆ ಆಗಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಈ ಮೊದಲು ಸಿಎಂ ಸಿದ್ದರಾಮ್ಯ ಅವರನ್ನು ಭೇಟಿ ಮಾಡಿದ ಶಾಸಕರ ನಿಯೋಗ ಪ್ರಕರಣದ ಮರುತನಿಖೆಗೆ ಮನವಿ ಮಾಡಿದೆ.

Read More

ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಒಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಗರ ನಿವಾಸಿ 24 ವರ್ಷ ಪ್ರಾಯದ ವಿರಾಜ್ ಮೆಂಡನ್ ಎಂದು ಗುರುತಿಸಲಾಗಿದೆ. ಈತ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ,ಒಳ್ಳೆಯ ಕ್ರೀಡಾಪಟು ಎಂಬ ಹೆಸರನ್ನು ಪಡೆದಿದ್ದ. ಇಂದು ಶಾಂತಿನಗರದಲ್ಲಿರುವ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Read More

ಮಂಗಳೂರು: ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಬೆಳಿಗ್ಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ. ತಲಪಾಡಿ ಗ್ರಾಮದ ನಾರ್ಲ, ಪಡೀಲ್ ನಿವಾಸಿ ಪೈಝಲ್ (24) ಆತ್ಮಹತ್ಯೆಗೈದ ಯುವಕ. ಫೈಝಲ್ ಇಂದು ಬೆಳಿಗ್ಗೆ ತನ್ನ ಮನೆಯ ಮೊದಲ ಅಂತಸ್ತಿನ ಕೊಠಡಿಯ ಫ್ಯಾನ್‌ಗೆ ನೈಲಾನ್ ಬಟ್ಟೆಯಿಂದ ಕುಣಿಕೆ ಬಿಗಿದು ಆತ್ಮಹತ್ಯೆಗೈದಿದ್ದಾನೆ. ಮನೆಯಲ್ಲಿ ಫೈಸಲ್ ತಾಯಿ, ತಂಗಿ ಮತ್ತು ಅಜ್ಜಿ ಇದ್ದು ತಾಯಿ ಮನೆಯ ಮೇಲಿನ ಅಂತಸ್ತಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಫೈಝಲ್ ನಿತ್ಯವೂ ಬೆಳಗ್ಗೆ 9:00 ರಿಂದ 10ಗಂಟೆ ಅವಧಿಯಲ್ಲಿ ಗಾಂಜಾ ಸೇದುವ ಚಟ ಬೆಳೆಸಿದ್ದನಂತೆ. ಇಂದು ಗಾಂಜಾ ಸಿಗದ ಕಾರಣದಿಂದ ಜಿಗುಪ್ಸೆಗೊಂಡು ಆತ್ಮಹತ್ಯೆಗೈದಿರುವುದಾಗಿ ತಿಳಿದು ಬಂದಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ಎಂಬಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲಿ ಫೈಝಲ್ ನನ್ನ ಪೊಲೀಸರು ಬಂಧಿಸಿದ್ದು ಮೃತ ಫೈಝಲ್ ಪ್ರಕರಣವನ್ನ ಎದುರಿಸುತ್ತಿದ್ದ. ಇಷ್ಟಲ್ಲದೆ ಉಳ್ಳಾಲ…

Read More

ವಿಟ್ಲ: ಶಾಲೆಗೆ ನುಗ್ಗಿದ ಕೆಲ ಕಿಡಿಗೇಡಿಗಳು ಸ್ವತ್ತುಗಳಿಗೆ ಹಾನಿ ಮಾಡಿ, ಗೋಡೆಯ ಮೇಲೆ ಅಶ್ಲೀಲ ಬರಹಗಳನ್ನು ಬರೆದಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಶಾಲೆಯ ಎಲ್ಲ ತರಗತಿ ಕೊಠಡಿಯ ಬಾಗಿಲ ಬಳಿ ಮೊಟ್ಟೆ ಒಡೆದಿದ್ದಾರೆ. ಅಲ್ಲದೇ ಒಂದು ಕೊಠಡಿಯ ಕಿಟಕಿಯ ಗಾಜನ್ನು ಒಡೆದಿರುವುದಲ್ಲದೇ, ಮಕ್ಕಳ ಸೃಜನಾತ್ಮಕತೆಗೆ ಒದಗಿಸಿದ ಸೂಚನಾ ಫಲಕದ ಗಾಜು, ಜೊತೆಗೆ ಶಾಲೆಯ ಟ್ಯೂಬ್ ಲೈಟ್‌ಗಳನ್ನು ಒಡೆದು ಹಾಕಿದ್ದಾರೆ. ಪ್ರಾಥಮಿಕ ಶಾಲೆಯ ಗೇಟ್ ಮತ್ತು ಅಡುಗೆ ಕೋಣೆಯ ಬಾಗಿಲಿಗೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ವಿದ್ಯಾರ್ಥಿಗಳು ಬಿಡಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಹರಿದು ಹಾಕಿದ್ದಾರೆ. ಅಲ್ಲದೆ ಶಾಲೆ ಗೋಡೆ ಮೇಲೆ ಅಶ್ಲೀಲ ಬರಹಗಳನ್ನು ಬರೆದಿದ್ದಾರೆ. ಇದರಿಂದಾಗಿ ಶಾಲೆಯ ದೈನಂದಿನ ತರಗತಿಗೆ ತೊಂದರೆ ಉಂಟಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ವಿಟ್ಲ ಠಾಣೆಯಲ್ಲಿ ದೂರು…

Read More

ಮಂಗಳೂರು: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಆ.21ರಿಂದ ಸೆ.3ರ ಅವಧಿಯಲ್ಲಿ ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ 207 ಮಂದಿಯ (ಚಾಲಕರು/ಸವಾರರು) ಚಾಲನಾ ಅನುಜ್ಞಾ ಪತ್ರ (ಡೈವಿಂಗ್ ಲೈಸನ್ಸ್) ಅಮಾನತುಪಡಿಸಲು ಪ್ರಾದೇಶಿಕ ಸಾರಿಗೆ ಕಚೇರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್‌ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ. ಅತೀವೇಗ, ದುಡುಕತನ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿದ 59, ಮದ್ಯಸೇವಿಸಿ ವಾಹನ ಚಲಾಯಿಸಿದ 8, ಸರಕು ಸಾಗಾಟ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸಿರುವ 34, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡಿದ 4, ಟ್ರಿಪಲ್ ರೈಡಿಂಗ್ ನಡೆಸಿದ 4, ಹೆಲೈಟ್ ಧರಿಸದೆ ಸವಾರಿ ಮಾಡಿದ 79, ಸೀಟ್ ಬೆಲ್ಟ್ ಹಾಕದಿರುವ 6, ಏಕಮುಖಸಂಚಾರ, ನೋ ಎಂಟ್ರಿ ನಿಯಮ ಉಲ್ಲಂಘಿಸಿದ 13 ಹೀಗೆ ಅಮಾನತಿಗೆ ಪ್ರಸ್ತಾವ ಸಲ್ಲಿಸಿರುವ ಪ್ರಕರಣಗಳು ಸೇರಿವೆ ಎಂದು ಆಯುಕ್ತರು ತಿಳಿಸಿದ್ದಾರೆ. ಕಳೆದ 15 ದಿನಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ನಿಷೇಧಿತ ಸ್ಥಳದಲ್ಲಿ ವಾಹನ ಪಾರ್ಕಿಂಗ್…

Read More

 ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಸಹಿತ 35 ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.ಹುದ್ದೆಯ ನಿರೀಕ್ಷೆಯಲ್ಲಿದ್ದ‌ 2008ರ ಬ್ಯಾಚ್‌ನ ಅನುಪಮ್ ಅಗರ್ವಾಲ್ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ.ಕುಲದೀಪ್ ಕುಮಾರ್ ಜೈನ್‌ಗೆ ಯಾವುದೇ ಹುದ್ದೆ ತೋರಿಸಿಲ್ಲ. ಕೋಸ್ಟಲ್ ಸೆಕ್ಯುರಿಟಿ ಪೊಲೀಸ್ ಉಡುಪಿ ಇಲ್ಲಿನ ಎಸ್ಪಿಯಾಗಿದ್ದ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ. ಉಳಿದಂತೆ ಡಾ. ಶರಣಪ್ಪ, ಅಂಶುಕುಮಾರ್, ಹರಿರಾಂ ಶಂಕರ್, ಸೋನಾವಣೆ ರಿಷಿಕೇಶ್‌ ಭಗವಾನ್, ವರ್ತಿಕಾ ಕಟಿಯಾರ್, ಸಾರಾ ಫಾತಿಮಾ, ಕೆ. ಸಂತೋಷ್ ಬಾಬು ಅವರನ್ನು ‌ಕೂಡಾ ವರ್ಗಾವಣೆಗೊಳಿಸಲಾಗಿದೆ.

Read More

ಮಂಗಳೂರು: ಕಳೆದ ಹದಿಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಜಪ್ಪಿನಮೊಗರು ನಿವಾಸಿ ಪ್ರೀತಮ್ ಆಚಾರ್ಯ(38) ಬಂಧಿತ ಆರೋಪಿ. ಪ್ರೀತಮ್ ಆಚಾರ್ಯ ಪ್ರಕರಣವೊಂದರಲ್ಲಿ ಭಾಗಿಯಾಗಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದಿದ್ದರಿಂದ ಈತನ ಮೇಲೆ ಎಲ್.ಪಿ.ಸಿ ವಾರೆಂಟ್ ಜ್ಯಾರಿಯಾಗಿತ್ತು. ಅದರಂತೆ ಈತನು ಮುಂಬಯಿಯ ಬೌಚ ದಕ್ಕ ಹೊಟೇಲ್ ನಲ್ಲಿ ಮ್ಯಾನೇಜರ್ ಆಗಿ ಕೆಲಸದಲ್ಲಿದ್ದಾಗಿ ದೊರೆತ ಖಚಿತ ಮಾಹಿತಿಯಂತೆ ಉರ್ವ ಠಾಣೆಯ ಪೊಲೀಸರು ವಿಶೇಷ ಕರ್ತವ್ಯದಲ್ಲಿ ಮುಂಬೈಗೆ ತೆರಳಿ ಸೆಪ್ಟೆಂಬರ್ 3 ರಂದು ಮಧ್ಯಾಹ್ನ 11ಗಂಟೆಗೆ ಈತನು ಕೆಲಸ ಮಾಡುತ್ತಿದ್ದ ಹೊಟೇಲ್ ನಲ್ಲಿ ವಶಕ್ಕೆ ಪಡೆದಿದ್ದಾರೆ. ನವೆಂಬರ್ ಸೆಪ್ಟೆಂಬರ್ 4ರಂದು ಬೆಳಗ್ಗೆ 11ಗಂಟೆಗೆ ಉರ್ವ ಪೊಲೀಸ್ ಠಾಣೆಗೆ ಕರೆತರಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Read More

ರೇಷ್ಮೆ ಬೆಳೆಗೆ ಸಿಂಪಡಿಸಲು ಎಂದು ತಂದಿಟ್ಟ ಕೀಟನಾಶಕವನ್ನು ಎರಡು ವರ್ಷದ ಮಗು ಜ್ಯೂಸ್ ಎಂದು ಭಾವಿಸಿ ಕುಡಿದು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದಲ್ಲಿ ನಡೆದಿದೆ. ಜ್ಯೂಸ್ ಎಂದು ಕೀಟನಾಶಕ ಸೇವಿಸಿ ಎರಡು ವರ್ಷದ ಮಗು ಸಾವನ್ನಪ್ಪಿದೆ. ಕೃಷ್ಣಾಪುರ ಗ್ರಾಮದಲ್ಲಿ ಎರಡು ವರ್ಷದ ಯಶವಂತ್ ಕೆ ಗೌಡ ಸಾವನ್ನಪ್ಪಿರುವ ಮಗುವಾಗಿದೆ.ರೇಷ್ಮೆ ಹುಳು ಹೋಗಿ ಸಿಂಪಡಿಸಲು ಕೀಟನಾಶಕವನ್ನು ತಂದಿಟ್ಟಿದ್ದರು. ಜ್ಯೂಸ್ ಎಂದು ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಯಶಂಕ್ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ವಿಮ್ಸ್ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು. ಆದರೆ ಈ ಸಂದರ್ಭದಲ್ಲಿ ಚಿಕಿತ್ಸೆ ಫಲಿಸದೆ ಯಶಾಂಕ ಗೌಡ ಸಾವನ್ನಪ್ಪಿದ್ದಾನೆ. ಕುಟುಂಬಸ್ಥರ ಹಾಗೂ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Read More

ಬೆಂಗಳೂರು: ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಇದೇ ಸೆ.10ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದಿಂದ ಮಾಹಿತಿ ನೀಡಲಾಗಿದ್ದು, ಸೆಪ್ಟೆಂಬರ್.10ರಂದು ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ( ಸಿಎಆರ್/ಡಿಎಆರ್) ಹುದ್ದೆಗಳ ನೇಮಕಾತಿಗೆ ಬೆಂಗಳೂರಿನ 41 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ ಎಂದಿದೆ. ಸೆ.10ರಂದು ನಡೆಯಲಿರುವಂತ ಸ್ಪರ್ಧಾತ್ಮಕ ಪರೀಕ್ಷೆಗೆ 20,560 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈಗಾಗಲೇ ಅಭ್ಯರ್ಥಿಗಳ ಮಾಹಿತಿಯನ್ನು ಇಲಾಖೆಯ ಜಾಲತಾಣ https://ksp.karnataka.gov.in ಅಥವಾ https://ksp-recruitment.inನಲ್ಲಿ ಬಿಡುಗಡೆ ಮಾಡಲಾಗಿದೆ ಎಂದಿದೆ. ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತ ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು, ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ಕೋರಿದೆ.

Read More