Author: main-admin

ಮಣಿಪಾಲ: ಮಣಿಪಾಲ ಠಾಣಾ ವ್ಯಾಪ್ತಿಯ ವಿದ್ಯಾರತ್ನನಗರದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಮನೆಗೆ ದಾಳಿ ನಡೆಸಿರುವ ಮಣಿಪಾಲ ಪೊಲೀಸರು , ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ಠಾಣಾ ಇನ್ಸ್ ಪೆಕ್ಟರ್ ದೇವರಾಜ್ ಟಿ.ವಿ. ಅವರಿಗೆ ಬಂದ ಖಚಿತ ಮಾಹಿತಿಯಂತೆ ಕಳೆದ ರಾತ್ರಿ ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಗೆ ದಾಳಿ ನಡೆಸಿದ್ದಾರೆ.ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಸಲಾಮತ್ ಹಾಗೂ ಚಂದ್ರ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖ ಆರೋಪಿ ಖಾಲಿದ್ ಎಂಬಾತ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. 4 ಮೊಬೈಲ್ ಪೋನ್, 10000 ರೂ. ನಗದು, ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Read More

ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ತಂಡ ದಿಂದ ಹಲ್ಲೆಯಾದ ಬಗ್ಗೆ ದೂರು ದಾಖಲಾಗಿದ್ದು, ಬೀಚ್ ತೆರಳಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಬಂದು ತಂಡವೊಂದು ಹಲ್ಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ಎ ಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೆಜ್ಮೆಂಟ್ ಕೋರ್ಸ್ ಸಂಸ್ಥೆ ವಿದ್ಯಾರ್ಥಿಗಳು ಪಣಂಬೂರು ಬೀಚ್ ವಿಹಾರಕ್ಕೆ ತೆರಳಿದ್ದರು. ವಿದ್ಯಾರ್ಥಿನಿಯರು ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ ತೆರಳಿದ್ದರು. ಬೀಚ್‌ ನಿಂದ ಹಿಂಬಾಲಿಸಿಕೊಂಡು ಬಂದ ತಂಡ ವಿದ್ಯಾರ್ಥಿ ಹಫೀಸ್‌ (20) ಮೇಲೆ ಬಿಜೈ ಕಾಪಿಕಾಡ್‌ನಲ್ಲಿ ಹಲ್ಲೆ ನಡೆಸಿದೆ. ಗಾಯಗೊಂಡ ವಿದ್ಯಾರ್ಥಿ ಉರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ 2.75 ಲಕ್ಷಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದು, 2.4 ಲಕ್ಷಕ್ಕೂ ಹೆಚ್ಚು ಮಕ್ಕಳು ಪತ್ತೆಯಾಗಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. ಕಾಣೆಯಾದವರಲ್ಲಿ, 2.12 ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಹುಡುಗಿಯರೇ ಇದ್ದು, ಹುಡುಗರ ಸಂಖ್ಯೆ 62,000 ಆಗಿದೆ. ಕರ್ನಾಟಕದಲ್ಲಿಯೇ 27,000 ಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದಾರೆ, ಈ ವಿಷಯದಲ್ಲಿ ರಾಜ್ಯವು ಮೂರನೇ ಸ್ಥಾನದಲ್ಲಿದೆ. ಜನವರಿ 2018 ಮತ್ತು ಜೂನ್ 2023 ರ ನಡುವೆ ಕಾಣೆಯಾದ ಮಕ್ಕಳ ಸಂಖ್ಯೆಯ ಕುರಿತು ಹಿಸಾರ್‌ನ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ಕೇಳಿದ ಪ್ರಶ್ನೆಗೆ ಲೋಕಸಭೆಯಲ್ಲಿ ಈ ಸಂಖ್ಯೆಗಳನ್ನು ಒದಗಿಸಲಾಗಿದೆ. ಕಾಣೆಯಾದ ಒಟ್ಟು ಮಕ್ಕಳ ಸಂಖ್ಯೆ 2,75,125, ಮತ್ತು ಇದರಲ್ಲಿ 2,12,825 ಹುಡುಗಿಯರು ಮತ್ತು 62,237 ಗಂಡುಮಕ್ಕಳು ಮತ್ತು 63 ತೃತೀಯಲಿಂಗಿಗಳಿದ್ದಾರೆ. ಕಾಣೆಯಾದ 61,102 ಮಕ್ಕಳು, 49,024 ಹುಡುಗಿಯರು ಮತ್ತು 12,075 ನಾಪತ್ತೆಯಾದ ಹುಡುಗರೊಂದಿಗೆ ಮಧ್ಯಪ್ರದೇಶ ಅಗ್ರಸ್ಥಾನದಲ್ಲಿದೆ. ಇದರ…

Read More

ಮಂಗಳೂರು : ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ವಿಚಾರವಾಗಿ  ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿಕೆ ನೀಡಿದ್ದಾರೆ. ನಮ್ಮ ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಆಗಿದೆ, ಮತ್ತೆ ಮತ್ತೆ ಕ್ರೈಂ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವ ಕೆಲಸ ಆಗ್ತಿದೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟೀಸ್ ಮಾಡಲಾಗಿದೆ. ನೈತಿಕ ಪೊಲೀಸ್ ಗಿರಿ ಸಂಬಂಧಿಸಿ ಮೂವರ ಮೇಲೆ ಠಾಣೆಯಿಂದ ಪ್ರಸ್ತಾವನೆ ಬಂದಿದೆ. ಅವರನ್ನ ಗಡೀಪಾರು ಮಾಡಲು ಠಾಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು, ಹೀಗಾಗಿ ಅವರಿಗೆ ನೋಟೀಸ್ ಮಾಡಿದ್ದೇವೆ, ಗಡಿಪಾರು ಪ್ರಕ್ರಿಯೆ ಆಗಲಿದೆ. ರೌಡಿ ಶೀಟ್ ತೆರೆಯೋದು ಅಥವಾ ಗೂಂಡಾ ಕಾಯ್ದೆ ಹಾಕುವ ಕೆಲಸವೂ ಆಗ್ತಿದೆ. ನಿರಂತರ ಸಮಾಜ ವಿರೋಧಿ ಚಟುವಟಿಕೆಗಳನ್ನು ನಡೆಸೋರನ್ನ ಗುರುತಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಹೇಳಿದ್ದಾರೆ.

Read More

ಬೆಂಗಳೂರು : ನೈಜ ಘಟನೆ ಆಧರಿಸಿ ಅನೇಕ ಸಿನೆಮಾಗಳು ಮೂಡಿ ಬಂದಿದ್ದು, ಈ ಹಿನ್ನಲೆಯಲ್ಲಿ ಈಗ ಧರ್ಮಸ್ಥಳದಲ್ಲಿ ನಡೆದ ಘಟನೆ ಆಧರಿಸಿ ಸ್ಯಾಂಡಲ್ ವುಡ್‌ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೇ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಘಟನೆ ನಡೆದಿದ್ದು 2012ರಲ್ಲಿ. ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಕ್ಟೋಬರ್ 9ರಂದು ಅಪಹರಿಸಲಾಯಿತು. ಅದೇ ದಿನ ರಾತ್ರಿ ಮಿಸ್ಸಿಂಗ್ ಕೇಸ್ ಕೂಡ ದಾಖಲಾಯಿತು. 2012ರ ಅಕ್ಟೋಬರ್ 10 ರಂದು ಧರ್ಮಸ್ಥಳದ ಮಣ್ಣಸಂಖದಲ್ಲಿ ಅವರ ಶವ ಪತ್ತೆ ಆಯಿತು. ಸೌಜನ್ಯ ಮೇಲೆ ಅತ್ಯಾಚಾರ ಕೂಡ ನಡೆದಿತ್ತು. ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಸಂತೋಷ್ ರಾವ್ ಅವರು ನಿರ್ದೋಷಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು. ಈ ಪ್ರಕರಣದಲ್ಲಿ ಯಾರಿಗೂ ಶಿಕ್ಷೆ ಆಗಿಲ್ಲ. ಸೌಜನ್ಯ ಅವರ ಜೀವನ ಆಧರಿಸಿ ಸಿನಿಮಾ ಮಾಡಲಾಗುತ್ತಿದೆ…

Read More

ಮಂಗಳೂರು: ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಮಂಗಳೂರಿನ ಮೂವರುಬಜರಂಗದಳ ಕಾರ್ಯಕರ್ತರಿಗೆ ಗಡಿಪಾರಿಗೆ ನೋಟಿಸ್ ನೀಡಲಾಗಿದೆ. ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಪ್ರಶ್ನಿಸಿ ಆದೇಶ ಮಾಡಿ, ಪೊಲೀಸರು ನೋಟಿಸ್‌ ನೀಡಿದ್ದು,ಶುಕ್ರವಾರ ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆದೇಶ ಸಾಧ್ಯತೆಯಿದೆ. ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳಿಂದಗಡಿಪಾರಿಗೆ ವರದಿ ಪಡೆಯಲಾಗಿದ್ದು, ಕಾನೂನು ಪ್ರಕಾರ ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗಿದೆ.

Read More

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ – ಪಣಂಬೂರು ನಡುವೆ ಮಂಗಳವಾರ ನಡೆದ ಅಪಘಾತದಲ್ಲಿ ಟೈಟಸ್ ಫೆರಾವೊ (69) ಎಂಬವರು ಹೆದ್ದಾರಿಗುಂಡಿಗೆ ಬಿದ್ದು ಅವರ ಮೇಲೆಯೇ ಲಾರಿ ಹರಿದು ಮೃತಪಟ್ಟಿದ್ದರು. ಹೆದ್ದಾರಿಯ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಿಲ್ಲದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಮಂಗಳೂರು ಪೊಲೀಸರು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ. ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಕೆಂಜಾರು ನಿವಾಸಿ ಟೈಟಸ್ ಫೆರಾವೊ (69) ಅವರು ಹೆದ್ದಾರಿಯ ಗುಂಡಿ ತಪ್ಪಿಸುವ ಭರದಲ್ಲಿ ಚಲಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ರಸ್ತೆ ಗುಂಡಿಯಿಂದ ಅಪಘಾತ ಸಂಭವಿಸಿದ್ದಲ್ಲಿ ರಸ್ತೆ ನಿರ್ವಹಣೆಯ ಹೊಣೆ ಹೊತ್ತಿರುವ ಇಲಾಖೆ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಆದ್ದರಿಂದ ರಸ್ತೆ ಗುಂಡಿಯಿಂದ ಸಂಭವಿಸುವ ಅಪಘಾತದಲ್ಲಿ ಸಂಚಾರ ಪೊಲೀಸರು ಸಂಬಂಧ ಪಟ್ಟ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ಕೇಳಿಬಂದಿತ್ತು. ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಕಮಿಷನರ್ ಕುಲದೀಪ್‌ ಕುಮಾರ್…

Read More

ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾದರೆ ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈಗಾಗಲೇ ಪರಿಧಮನಿಯ ಕಾಯಿಲೆ, ಅಧಿಕ ರಕ್ತದೊತ್ತಡ ಮತ್ತು ಹೃದಯಾಘಾತದಂತಹ ಸಮಸ್ಯೆಗಳಿದ್ದರೆ ತುಂಬಾ ಜಾಗರೂಕರಾಗಿರಬೇಕು. ಇಲ್ಲದಿದ್ದರೆ ಪ್ರಾಣಕ್ಕೇ ಅಪಾಯವಾಗಬಹುದು. ಹೃದಯದ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ ಹೆಚ್ಚಿನ ಟ್ರೈಗ್ಲಿಸರೈಡ್‌ಗಳು, ಅಧಿಕ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳು ಹೃದಯಾಘಾತಕ್ಕೆ ಕಾರಣವಾಗುತ್ತವೆ. ಈ ಸಮಸ್ಯೆಗಳಿಗೆ ಕಾರಣ ದೈಹಿಕ ಚಟುವಟಿಕೆಯ ಕೊರತೆ. ಒತ್ತಡ ಮತ್ತು ಅಧಿಕ ತೂಕ. ಆರಂಭದಲ್ಲಿ ಈ ಆರೋಗ್ಯ ಸಮಸ್ಯೆಗಳು ಚಿಕ್ಕದಾಗಿ ಕಾಣಿಸಬಹುದು, ಆದರೆ ಕ್ರಮೇಣ ಅವು ಹೃದಯದ ಅಪಧಮನಿಗಳನ್ನು ಹಾನಿಗೊಳಿಸುತ್ತವೆ. ಹೃದಯವನ್ನು ಆರೋಗ್ಯವಾಗಿಡಲು ಕೆಳಗಿನ ಸಲಹೆಗಳನ್ನು ಪಾಲಿಸಿ. ಆರೋಗ್ಯಕರ ಜೀವನಶೈಲಿ ಹೃದ್ರೋಗಿಗೆ ಆರೋಗ್ಯಕರ ಮತ್ತು ಸಮತೋಲಿತ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ವೈದ್ಯರು ಸೂಚಿಸಿದಂತೆ ವ್ಯಾಯಾಮ ಮತ್ತು ಯೋಗವನ್ನು ನಿಯಮಿತವಾಗಿ ಅಭ್ಯಾಸ ಮಾಡಿ. ಯಾವುದೇ ಹೊಸ ವ್ಯಾಯಾಮ ಮಾಡಬೇಡಿ. ವಾಕಿಂಗ್ ಹೋಗಬಹುದು. ಕಾಲುಗಳನ್ನು ಚಾಚಿ ಕುಳಿತುಕೊಳ್ಳುವ ಬದಲು ಮಧ್ಯೆ ಎದ್ದು ಮನೆಯಲ್ಲಿ ಎರಡು ಸುತ್ತು ಹಾಕಿ. ಕನಿಷ್ಠ 30 ನಿಮಿಷಗಳ ದೈಹಿಕ ಚಟುವಟಿಕೆಯನ್ನು…

Read More

ಮಂಗಳೂರು: ನಗರದ ಕಾವೂರಿನಲ್ಲಿ ನೀರು ತುಂಬಿದ ಬಕೆಟ್‌ಗೆ ಬಿದ್ದು ಪುಟ್ಟ ಮಗು ಸಾವನ್ನಪ್ಪಿದೆ. ಕಾವೂರು ಮಸೀದಿ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಜ್ ಅನ್ಸಾರಿ ಅವರ ಪುತ್ರಿ ಆಯಿಷಾ (1.8 ವರ್ಷ) ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿ. ಜಾರ್ಖಂಡ್ ನ ವಲಸೆ ಕಾರ್ಮಿಕರಾಗಿರುವ ಫಿರೋಜ್ ಅನ್ಸಾರಿ ದಂಪತಿ ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಬುಧವಾರ ಸಂಜೆ ಮಗು ಆಯಿಷಾ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಬಕೆಟ್‌ಗೆ ಬಿದ್ದು ಉಸಿರುಗಟ್ಟಿ ಸಾವನ್ನಪ್ಪಿದೆ.

Read More

ಮಂಗಳೂರು : ನಗರದ ಎರಡು ಕಡೆ ಮಾರಾಟ ಮಾಡುತ್ತಿದ್ದ ಸುಮಾರು 100 ಕೆಜಿ ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಗಳನ್ನು ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಮಾದಕ ವಸ್ತು ಮಿಶ್ರಿತ ಬಾಂಗ್ ಎಂಬ ಚಾಕೊಲೆಟ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಒಟ್ಟು ಸುಮಾರು 100ಕೆಜಿ ಚಾಕೊಲೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ರಥಬೀದಿಯಲ್ಲಿ ಮನೋಹರ್ ಶೇಟ್ ಮತ್ತು ನಗರದ ಫಳ್ನೀರ್ ನ ಗೂಡಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ಎಂಬವರನ್ನು ಬಂಧಿಸಲಾಗಿದೆ. ಈ ಚಾಕೊಲೆಟ್ ನ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಕಳುಹಿಸಿದ್ದು, ಮುಂಬರುವ ವರದಿಗಳ ಪ್ರಕಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

Read More