ಬಂಟ್ವಾಳ : ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸೋರ್ನಾಡು ಎಂಬಲ್ಲಿ ನಡೆದಿದೆ.1ಮೃತರನ್ನು ಜಕ್ರಿಬೆಟ್ಟು ಪಲ್ಲಿಕಂಡ ನಿವಾಸಿ ರಾಬರ್ಟ್ ವೇಗಸ್ (51) ಎಂದು ಗುರುತಿಸಲಾಗಿದೆ. ವಿಜಯ್ ಎಂಬ ಪೇಂಟಿಂಗ್ ಗುತ್ತಿಗೆದಾರನ ಜೊತೆ ರಾಬರ್ಟ್ ವೇಗಸ್ ಅವರು ಪೇಂಟಿಂಗ್ ಕೆಲಸಕ್ಕೆ ಇದ್ದು, ಸೋರ್ನಾಡು ಎಂಬಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 1 ಗಂಟೆ ವೇಳೆಗೆ ಆಕಸ್ಮಿಕವಾಗಿ ಮೇಲಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಇವರನ್ನು ಚಿಕಿತ್ಸೆ ಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಗಂಭೀರವಾಗಿ ಗಾಯಗೊಂಡ ರಾಬರ್ಟ್ ಅವರು ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಕಾಸರಗೋಡು;ಇಬ್ಬರು ಮದ್ರಸಾ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮದ್ರಾಸ ಅಧ್ಯಾಪಕನಿಗೆ 53 ವರ್ಷ ಕಠಿಣ ಸಜೆ ಮತ್ತು 3.25 ಲಕ್ಷ ದಂಡ ನ್ಯಾಯಾಲಯ ವಿಧಿಸಿದೆ. ವಿಟ್ಲ ಮೂಲದ ಅಬ್ದುಲ್ ಹನೀಫ್ ಮದನಿ(44)ಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು ಈ ಶಿಕ್ಷೆಯನ್ನು ವಿಧಿಸಿದೆ. ದಂಡ ಪಾವತಿಸದೆ ಇದ್ದರೆ ಮೂರುವರೆ ವರ್ಷ ಹೆಚ್ಚುವರಿ ಶಿಕ್ಷೆ ಅನುಭವಿಸುವಂತರ ಸೂಚಿಸಲಾಗಿದೆ.ಪೋಕ್ಸೋ ಎರಡು ಪ್ರಕರಣಗಳಲ್ಲಿ ತಲಾ 20 ವರ್ಷ ಹಾಗೂ ಐಪಿಸಿಯ ಇತರ ಸೆಕಸನ್ ಗಳಡಿ 53 ವರ್ಷ ಶಿಕ್ಷೆ ವಿಧಿಸಲಾಗಿದೆ. ಒಟ್ಟು 53 ವರ್ಷ ಶಿಕ್ಷೆ ವಿಧಿಸಲಾಗಿದೆ. ಅಂಬಲತ್ತರ ಪೊಲೀಸ್ ಠಾಣೆಯಲ್ಲಿ ಮದ್ರಸಾ ಶಿಕ್ಷಕನ ವಿರುದ್ಧ ಬಾಲಕರಿಗೆ( ಅಸಹಜ) ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿತ್ತು.ಇದೀಗ ಪ್ರಕರಣದ ವಿಚಾರಣೆ ನಡೆದು ನ್ಯಾಯಾಲಯ ತೀರ್ಪು ನೀಡಿದೆ. ಈ ಮೊದಲು ಕೂಡ ಇದೇ ಶಿಕ್ಷಕನಿಗೆ ಇನ್ನೊಂದು ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವರದಿ ತಿಳಿಸಿದೆ
ಮಂಗಳೂರು : ದಕ್ಷಿಣ ಕನ್ನಡದಲ್ಲೂ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯಮಗ್ನವಾಗಿದೆ. ಕ್ರಿಮಿನಲ್ ಚಟುವಟಿಕೆ, ಹಿಂದೆ ಗಂಭಿರ ಅಪರಾಧಗಳಲ್ಲಿ ತೊಗಡಿಗೊಂಡಿದ್ದವರ ಲೀಸ್ಟ್ ಸಿದ್ದ ಪಡಿಸಿ ಅವರ ಮೇಲೂ ಕ್ರಮ ಕೈಗೊಳ್ಳುವ ಕಾರ್ಯ ಆರಂಭಿಸಿದೆ. ಜಿಲ್ಲಾ ಕೇಂದ್ರ ಸ್ಥಾನ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾರ್ಚ್ 31 ರಂದು ಅಪರಾಧ ಚಟುವಟಿಗಳಲ್ಲಿ ಗುರುತಿಸಿಕೊಂಡಿದ್ದ ವಿವಿಧ ರೌಡಿ ಶೀಟರಗಳ ಮನೆಗಳಿಗೆ ದಾಳಿ ನಡೆಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪ್ರಮುಖ 60 ರೌಡಿ ಶೀಟರ್ ಗಳ ಮನೆಗೆ ಬೆಳಗ್ಗಿನ ಜಾವ ದಾಳಿ ನಡೆಸಿದ ಪೊಲೀಸ್ ಅಧಿಕಾರಿಗಳು ಮನೆಗಳನ್ನು ಶೋಧಿಸಿ ವಿಚಾರಣೆ ನಡೆಸಿದ್ದಾರೆ. ಆಯಾಯಾ ಪ್ರದೇಶಗಳಲ್ಲಿ ಪ್ರಾಬಲ್ಯವಿರುವ ರೌಡಿ ಶೀಟರ್‌ಗಳು ಚುನಾವಣೆಯಲ್ಲಿ ಪ್ರಭಾವ ಬೀರುವ ಸಾಧ್ಯತೆಗಳಿರುವ ಕಾರಣ ಮುಂಜಾಗೃತಾ ಕ್ರಮವಾಗಿ ಈ ದಾಳಿಗಳನ್ನು ಸಂಘಟಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಉಪ ಆಯುಕ್ತರು ಮಾಹಿತಿ ನೀಡಿದ್ದಾರೆ
ಬೆಂಗಳೂರು : 2022-23ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ 26 ಗ್ರೇಸ್ ಅಂಕ ಪಡೆಯುವ ಅವಕಾಶ ಇದೆ. ಈ ಕುರಿತು ಮಾಹಿತಿ ನೀಡಿರುವ ಎಸ್‌ಎಸ್ ಎಲ್ ಸಿ ಬೊರ್ಡ್ ನಿರ್ದೇಶಕ ರಾಮಚಂದ್ರ, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ.10 ರಷ್ಟು ಗ್ರೇಸ್ ಅಂಕ ನೀಡಲಾಗುವುದು. ಮೂರು ವಿಷಯಗಳಿಗೆ ಮಾತ್ರ ಗ್ರೇಸ್ ಮಾರ್ಕ್ ಅಂಕ ನೀಡಲಾಗುತ್ತದೆ. ತೇರ್ಗಡೆ ಕಡಿಮೆ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ. ಎಸೆಸೆಲ್ಸಿಯ 6 ವಿಷಯಗಳ ಪೈಕಿ 3 ವಿಷಯಗಳಲ್ಲಿ ಉತ್ತೀರ್ಣರಾಗಿದ್ದರೆ, ಉಳಿದ 3 ವಿಷಯಗಳಿಗೆ ತಲಾ ಶೇ. 10ರಷ್ಟು ಆದರೆ ಒಟ್ಟು 26 ಅಂಕ ಮೀರದಂತೆ ಕೃಪಾಂಕ ದೊರೆಯಲಿದೆ. ಪ್ರಥಮ ಭಾಷೆಯಲ್ಲಿ ಗರಿಷ್ಠ 10 ಅಂಕ ಮತ್ತು ಉಳಿದ ವಿಷಯಗಳಲ್ಲಿ ಗರಿಷ್ಠ 8 ಅಂಕವನ್ನು ಕೃಪಾಂಕದ ರೂಪದಲ್ಲಿ ಪಡೆಯಬಹುದಾಗಿದೆ.
ನವದೆಹಲಿ : ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 2,028 ರೂ. ಇದೆ. ಏಪ್ರಿಲ್ 1 ರ ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗೆ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,028 ರೂ.ಇದೆ ಆದಾಗ್ಯೂ, ದರಗಳ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರ. ದೇಶೀಯ ಎಲ್ಪಿಜಿ ಅನಿಲ ಗ್ರಾಹಕರಿಗೆ ಬೆಲೆಯಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ಗ್ಯಾಸ್ ಸಿಲಿಂಡರ್ಗಳ ದರಗಳು ಕಳೆದ ತಿಂಗಳಂತೆಯೇ ಉಳಿದಿವೆ. ಕಳೆದ ತಿಂಗಳು ಕೇಂದ್ರವು ದೇಶೀಯ ಅಡುಗೆ ಅನಿಲದ ಬೆಲೆಯನ್ನು 50 ರೂ.ಗೆ ಹೆಚ್ಚಿಸಿತ್ತು. ಎಲ್ಪಿಜಿ ಬೆಲೆ, ಹೆಚ್ಚಾಗಿ ಅಂತರರಾಷ್ಟ್ರೀಯ ಕಚ್ಚಾ ಬೆಲೆಗಳ ಮೇಲೆ ಅವಲಂಬಿತವಾಗಿದೆ. ಇವುಗಳು ಹೆಚ್ಚಾದಾಗ, ಎಲ್ಪಿಜಿ ಸಿಲಿಂಡರ್ ದರಗಳು ಸಹ ಹೆಚ್ಚಾಗುತ್ತವೆ. ಬಡ…
ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಚೆರ್ವತ್ತೂರು ಕೊವ್ವಲ್‌ನಲ್ಲಿ ನಡೆದಿದೆ. ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು. ದೀಪಕ್ ಖಾಸಗಿ ಬಸ್ಸಿನ ಚಾಲಕರಾಗಿದ್ದರು. ಶೋಭಿತ್ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಸ್ನೇಹಿತರಾಗಿದ್ದ ಇವರು ರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಇನ್ನು ಮೃತ ದೇಹಗಳನ್ನು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಿದೆ.
ಉಡುಪಿ: ದೂರವಾಣಿ ಕರೆ ಮಾಡಿದ ವ್ಯಕ್ತಿಯೊಬ್ಬ ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಎಂದು ಮಹಿಳೆಯೊಬ್ಬರನ್ನು ನಂಬಿಸಿ, ಕಾರ್ಡ್ ಸಂಖ್ಯೆ ಪಡೆದು ಬ್ಯಾಂಕ್ ಖಾತೆಯಿಂದ 1,04,500 ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ನಡೆದಿದೆ. ಪ್ರತಿಭಾ ಎಸ್. ಹೆಗ್ಡೆ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ, ತಾನು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಈ ಕೂಡಲೇ ರಿನೀವಲ್ ಮಾಡುವಂತೆ ತಿಳಿಸಿ, ಕಾರ್ಡ್ ನಂಬ್ರ ಹಾಗೂ ಒಟಿಪಿಯನ್ನು ಪಡೆದು, ಕೆನರಾ ಬ್ಯಾಂಕ್ ಬ್ರಹ್ಮಾವರ ಶಾಖೆಯಲ್ಲಿ ಹೊಂದಿದ್ದ ಖಾತೆಯಿಂದ ಕ್ರಮವಾಗಿ 50,000, 50,000, 2,000 ಮತ್ತು 2,500 ರೂ. ವರ್ಗಾವಣೆ ಮಾಡಿದ್ದಾರೆ ಎಂದು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಹಾರ ತಿನ್ನುವಾಗ ಗಂಟಲಿನಲ್ಲಿ ಸಿಲುಕಿಕೊಳ್ಳುವುದು ಬದಲು ಗುದನಾಳದಲ್ಲಿ ಸಿಲುಕಿರುವುದನ್ನು ಎಲ್ಲಿಯಾದರೂ ಕೇಳಿದ್ದೀರಾ ? ಆದರೆ ಕೊಲಂಬಿಯಾದ ಬಾರಾನೋವಾದಿಂದ ಬಂದ 40 ವರ್ಷದ ವ್ಯಕ್ತಿಯೊಬ್ಬನಿಗೆ ಹೀಗೆಯೇ ಆಗಿದೆ. ವಿಪರೀತ ಹಿಂಬದಿ ನೋವು ಅನುಭವಿಸುತ್ತಿದ್ದು, ನಡೆದಾಡಲು ಕಷ್ಟಪಡುತ್ತಿದ್ದ ಈ ವ್ಯಕ್ತಿಯನ್ನು ಪರಿಶೀಲಿಸಿದಾಗ ಗುದನಾಳದಲ್ಲಿ ಸೌತೆಕಾಯಿ ಇರುವುದು ತಿಳಿದುಬಂದಿದೆ. ಈ ಬಗ್ಗೆ ಕೇಳಿದಾಗ ವ್ಯಕ್ತಿ ತಾನು ಹೆಚ್ಚಿನ ಪ್ರಮಾಣದಲ್ಲಿ ಸೌತೆಕಾಯಿ ಸೇವಿಸುತ್ತೇನೆ. ಹೀಗಾಗಿ ಹೊಟ್ಟೆಯಲ್ಲಿ ಸೌತೆಕಾಯಿ ಬೆಳೆದು ಹೀಗಾಗಿರಬಹುದು ಎಂದಿದ್ದಾನೆ. ಆತನ ಮಾತಿಗೆ ವೈದ್ಯರು ದಂಗಾಗಿದ್ದಾರೆ. ತೀವ್ರ ನೋವಿನಿಂದ ಬಂದಾಗ ಎಕ್ಸ್ರೇ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸೌತೆಕಾಯಿ ಸಿಲುಕಿ ಹಾಕಿಕೊಂಡಿರುವುದು ಗೋಚರಿಸಿದೆ. ಸೌತೆಕಾಯಿ ತನ್ನ ದೇಹದೊಳಗೆ ಹೇಗೆ ಸಿಲುಕಿಕೊಂಡಿದೆ ಎಂದು ತನಗೆ ತಿಳಿದಿಲ್ಲ ಎಂದು ವ್ಯಕ್ತಿ ಹೇಳಿದ್ದಾನೆ. ಬಹಳಷ್ಟು ಸೌತೆಕಾಯಿಗಳನ್ನು ತಿನ್ನುವ ಕಾರಣ ಸೌತೆಕಾಯಿ ಬೀಜದಿಂದಾಗಿ ಜೀರ್ಣಾಂಗ ವ್ಯವಸ್ಥೆಯೊಳಗೆ ಸೌತೆಕಾಯಿ ಬೆಳೆದಿರಬಹುದು ಎಂದು ಆತ ತಿಳಿಸಿದ್ದಾನೆ. ಇದು ಕಾರಣವಲ್ಲದಿದ್ದರೂ ವೈದ್ಯರು ಮಾತ್ರ ಈಗ ನಿಜ ಕಾರಣ ತಿಳಿಯಲು ಉತ್ಸುಕರಾಗಿದ್ದಾರೆ.
ಮಂಗಳೂರು : ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು , ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ. ಮೃತರನ್ನು ಮೈಸೂರಿನ ವಾಣಿ ವಿಲಾಸ ಬಡಾವಣೆಯ ದೇವೆಂದ್ರಪ್ಪ, ಅವರ ಪತ್ನಿ ನಿರ್ಮಲಾ ,ಮತ್ತಯ ಅವರ ಅವಳಿ ಮಕ್ಕಳಾದ ಚೈತ್ರಾ ಮತ್ತು ಚೈತ್ರಿಯಾ ಎಂದು ಗುರುತ್ತಿಸಲಾಗಿದೆ. ಆರ್ಥಿಕ ಮುಗ್ಗಟ್ಟಿನಿಂದ ಈ ಕುಟುಂಬ ಮಂಗಳೂರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ದೇವೇಂದ್ರಪ್ಪ ಪತ್ನಿ ಮತ್ತು ಮಕ್ಕಳಿಗೆ ಮೊದಲು ವಿಷ ಉಣಿಸಿ ಬಳಿಕ ತಾನು ನೇಣಿಗೆ ಕೊರಳೊಡ್ಡಿದ್ದಾನೆ. ಸಾವಿಗೂ ಮುನ್ನ ಡೆತ್ ನೋಟನ್ನು ಬರೆದಿದ್ದು ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಭಮದು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಮೃತರ ಕುಟುಂಬ್ಥರನ್ನು ಸಂಪರ್ಕಿಸುವ ಪ್ರಯತ್ನ ನಡೆಸಲಾಗುತ್ತಿದೆ.
ಕಾರ್ಕಳ : ನಗರದ ಬಂಗ್ಲೆಗುಡ್ಡೆಯಲ್ಲಿ ಆ್ಯಂಬುಲೆನ್ಸ್ ಪಲ್ಟಿಯಾದ ಘಟನೆ ಮಾ. 30ರ ಸಂಜೆ ನಡೆದಿದ್ದು, ಪರಿಣಾಮ ಅದರಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಕಾರ್ಕಳ ರೋಟರಿ ಆಸ್ಪತ್ರೆಯ ಆ್ಯಂಬುಲೆನ್ಸ್ ಕಾರ್ಕಳದಿಂದ ಎಳ್ಳಾರೆ ಸಾಗುತ್ತಿದ್ದ ವೇಳೆ ಬಂಗ್ಲೆಗುಡ್ಡೆಯಲ್ಲಿ ಬೈಕ್ ಒಂದು ಅಡ್ಡ ಬಂದ ಪರಿಣಾಮ ಆ್ಯಂಬುಲೆನ್ಸ್ ಚಾಲಕ ಅದನ್ನು ತಪ್ಪಿಸಲು ಯತ್ನಿಸಿದ್ದರು. ಈ ಸಂದರ್ಭ ಆ್ಯಂಬುಲೆನ್ಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಆ್ಯಂಬುಲೆನ್ಸ್‌ನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಎಳ್ಳಾರೆ ಭಾಗದ ನಾಲ್ವರು ರೋಟರಿ ಆಸ್ಪತ್ರೆಯಲ್ಲಿ ಕಣ್ಣಿನ ಶಿಬಿರದಲ್ಲಿ ಸರ್ಜರಿ ಮಾಡಿಸಿಕೊಂಡು ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಚಾಲಕ ಯಾವುದೇ ರೀತಿಯ ಗಾಯವಾಗದೇ ಪಾರಾಗಿದ್ದಾರೆ. ಗಾಯಗೊಂಡವರನ್ನು ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆಯೊಯ್ಯಲಾಗಿದ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ.










