Author: main-admin

ಬಂಟ್ವಾಳ: ಅಕ್ರಮವಾಗಿ ಮರ ಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆಯವರು ಆರೋಪಿ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ವಾಹನ ಮತ್ತು ಅಮಾನತು ಪಡಿಸಿದ ಸೊತ್ತಿನ ಸಮೇತ ಮೌಲ್ಯವೊಟ್ಟು 7 ಲಕ್ಷ ಆಗಿದೆ. ಅಗಸ್ಟ್ 29ರಂದು ಬಂಟ್ವಾಳ ತಾಲೂಕು ಬಂಟ್ವಾಳ ಮೂಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರ ಬಿಸಿ ರೋಡ್ ಜಂಕ್ಷನ್ ಎಂಬಲ್ಲಿ ಅಕ್ರಮವಾಗಿ ವಿವಿಧ ಜಾತಿಯ ಕಟ್ಟಿಗೆಯನ್ನು ಸಾಗಾಟ ಮಾಡುವ ತಕ್ಷಿರು ಪತ್ತೆ ಹಚ್ಚಿದ್ದಾರೆ. ಹಾಗೂ ಕೇಸು ದಾಖಲಿಸಿಕೊಂಡಿದ್ದಾರೆ.ಪ್ರಕರಣದಲ್ಲಿ ಬಂಟ್ವಾಳ ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ ಉಪವಲಯ ಅರಣ್ಯಾಧಿಕಾರಿ ಪ್ರೀತಮ್ ಎಸ್, ಯಶೋಧರ, ಗಸ್ತು ಅರಣ್ಯ ಪಾಲಕರಾದ ಜಿತೇಶ್ ಪಿ, ದಯಾನಂದ, ಶೋಭಿತ್ ಹಾಗೂ ಇಲಾಖಾ ವಾಹನ ಹಂಗಾಮಿ ಚಾಲಕ ಜಯರಾಮ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.ಪ್ರಕರಣದ ಮುಂದಿನ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಎಸ್ ಮರಿಯಪ್ಪ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ…

Read More

ಮದುವೆ ಸಮಾರಂಭದಲ್ಲಿ ಊಟ ಸೇವಿಸಿದ್ದ 100ಕ್ಕೂ ಹೆಚ್ಚು ಜನರಿಗೆ ವಾಂತಿ ಬೇಧಿಯಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಚಿಕ್ಕೋಡಿಯ ಹಿರೇಕೋಡಿ ಹೊರವಲಯದಲ್ಲಿ ನಡೆದಿದೆ. ಸೋಮವಾರ ಹಿರೇಕೋಡಿ ಹೊರವಲಯದಲ್ಲಿ ಪಟೇಲ್ ಕುಟುಂಬದ ಮದುವೆ ನಡೆಯಿತು. ಅಲ್ಲಿ ಮಾಂಸಾಹಾರ ಹಾಗೂ ಸಸ್ಯಾಹಾರ ಊಟವನ್ನು ತಯಾರು ಮಾಡಲಾಗಿತ್ತು. ಮಾಂಸಾಹಾರ ಸೇವಿಸಿದ 100ಕ್ಕೂ ಅಧಿಕ ಮಂದಿ ವಾಂತಿ-ಬೇಧಿಯಾಗಿ ಅಸ್ವಸ್ಥಗೊಂಡಿದ್ದಾರೆ. ಇನ್ನು ಮದುವೆ ಸಮಾರಂಭಕ್ಕೆ ಮಹಾರಾಷ್ಟ್ರದ ಮಿರಜ್‌ನಿಂದಲೂ ಸಂಬಂಧಿಕರು ಆಗಮಿಸಿದ್ದರು. ಮಿರಜ್‌ನಿಂದ ಆಗಮಿಸಿದವರಿಗೂ ವಾಂತಿ ಭೇದಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಸಿಕ್ಕಿದೆ. ಇನ್ನು ಈ ಘಟನೆ ಸಂಬಂಧ ಹಿರೇಕೋಡಿಯಲ್ಲಿ ಡಿಎಚ್‌ಒ ಡಾ.ಸುಕುಮಾರ್ ಭಾಗಾಯಿ ಮಾತನಾಡಿ, ಮದುವೆ ಊಟ ಮಾಡಿ ಮನೆಗೆ ಬಂದವರಿಗೆ ತಡರಾತ್ರಿ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಿದ್ದು ಅನೇಕರು ರಾತ್ರಿಯೇ ತಮ್ಮ ಗ್ರಾಮದ ಸುತ್ತಮುತ್ತಲಿನ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ತೀವ್ರ ಅಸ್ವಸ್ಥಗೊಂಡವರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಐವರು ವೈದ್ಯರು, 15 ವೈದ್ಯಕೀಯ ಸಿಬ್ಬಂದಿ ನಿಯೋಜನೆ ಮಾಡಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಮದುವೆಯಲ್ಲಿ ಊಟ…

Read More

ಬಂಟ್ವಾಳ: ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿ, ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಾರಣವಾದ ಕಂಪೆನಿಯ ಗುತ್ತಿಗೆದಾರರ ವಿರುದ್ಧ ಬಂಟ್ವಾಳ ಮೆಲ್ಕಾರ್  ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಸಿರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ವಹಿಸಿಕೊಂಡ ಕಂಪೆನಿ ಗುತ್ತಿಗೆದಾರ ಹಾಗೂ ಎರಡು ಲಾರಿ ಮತ್ತು ಒಂದು ರೋಲರ್ ಮೇಲೆ ಪ್ರಕರಣ ದಾಖಲಾಗಿದೆ. ಸೋಮವಾರ ಮಧ್ಯಾಹ್ನದ ವೇಳೆ ಪಾಣೆಮಂಗಳೂರು ಮತ್ತು ಮೆಲ್ಕಾರ್ ಎಂಬಲ್ಲಿ ಯಾವುದೇ ಸೂಚನಾ ಫಲಕ ಅಳವಡಿಸದೆ, ಟ್ರಾಫಿಕ್ ಪೊಲೀಸರಿಗೂ ಯಾವುದೇ ಮಾಹಿತಿ ನೀಡದೆ ಡಾಮರೀಕರಣ ಮಾಡುವ ನೆಪದಲ್ಲಿ ಎರಡು ಲಾರಿ ಹಾಗೂ ಒಂದು ರೋಲರ್ ನ್ನು ರಸ್ತೆ ಮಧ್ಯೆ ಇಟ್ಟು ಸಂಚಾರಕ್ಕೆ ಅಡಚಣೆ ಮಾಡಿದ್ದರು. ನಿಯಮ ಉಲ್ಲಂಘನೆ ಮಾಡಿ ಕಾಮಗಾರಿ ನಡೆಸುತ್ತಿದ್ದು, ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕಂಟ್ರಾಕ್ಟರ್ ಮೇಲೆ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ ಮಕ್ಕಳು ಅಂತ್ಯಕ್ರಿಯೆಗೆ ಬರಲು ಒಪ್ಪದ ಕಾರಣ ಪೊಲೀಸರು ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿಯೇ ವ್ಯಕ್ತಿಯೋರ್ವರ ಅಂತ್ಯಕ್ರಿಯೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೊಳ್ಳಿಯಲ್ಲಿ ಘಟನೆ ನಡೆದಿದೆ‌ ಮೂಲಚಂದ್ರ ಶರ್ಮಾ (72) ಮೃತರು. ಮೂಲತಃ ಮಹಾರಾಷ್ಟ್ರದ ಪುಣೆಯವರು.ಅಧಿಕಾರಿಯಾಗಿ ಕೆಲಸ ಮಾಡಿ ನಿವೃತ್ತರಾಗಿದ್ದರು. ಇಬ್ಬರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದ್ದು ಅವರು ವಿದೇಶದಲ್ಲಿ ನೆಲೆಸಿದ್ದಾರೆ.ಪತ್ನಿ ತೀರಿಕೊಂಡ ನಂತರ ಒಬ್ಬಂಟಿಯಾಗಿ ಬಳಿಕ ಪಾರ್ಶ್ವವಾಯು ಪೀಡಿತರಾಗಿದ್ದರು. ಮೂಲಚಂದ್ರ ಶರ್ಮಾ ಅವರಿಗೆ ಚಿಕಿತ್ಸೆ ಕೊಡಿಸಲು ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೋಳಿಯ ಆಸ್ಪತ್ರೆಗೆ ಒಂದೂವರೆ ತಿಂಗಳ ಹಿಂದೆ ಕರೆತರಲಾಗಿತ್ತು.ಆದರೆ ಅವರನ್ನು ಕರೆತಂದ ವ್ಯಕ್ತಿ ಅಲ್ಲಿನ ಲಾಡ್ಜ್‌ನಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ಈ ವಿಷಯ ಪಿಎಸ್‌ಐ ಬಸಗೌಡ ನೇರ್ಲಿ ಹಾಗೂ ಚಿಕ್ಕೋಡಿ ಪೊಲೀಸ್‌ ಠಾಣೆ ಸಿಬ್ಬಂದಿ ಗಮನಕ್ಕೆ ಬಂದಿತು. ಅವರು ಅಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.ಆದರೆ, ಚಿಕಿತ್ಸೆಗೆ ಸ್ಪಂದಿಸದೆ ವೃದ್ಧ ಮೃತಪಟ್ಟಿದ್ದಾರೆ. ಅಂತ್ಯಕ್ರಿಯೆಗೆ ವಿದೇಶಗಳಲ್ಲಿ ನೆಲೆಸಿರುವ ಅವರ ಮಕ್ಕಳು ಬರಲು ನಿರಾಕರಿಸಿದ್ದರಿಂದ ಸ್ಥಳೀಯ…

Read More

ಬೆಳ್ತಂಗಡಿ: ಹೆರಿಗೆ ವೇಳೆ ಉಂಟಾದ ಗಾಯದ ನೋವು ತಾಳಲಾಗದೆ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವೇಣೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ಜಾರಿಗೆದಡಿ ನಿವಾಸಿ ಆನಂದ ಮಲೆಕುಡಿಯ ಅವರ ಪತ್ನಿ ಸುಪ್ರೀತಾ (25) ಆ. 1ರಂದು ಉಡುಪಿಯಲ್ಲಿ ಹೆರಿಗೆಯಾಗಿದ್ದು, ಈ ಸಮಯ ಉಂಟಾದ ಗಾಯಕ್ಕೆ ಬಳಿಕ ಜಾರಿಗೆದಡಿ ಎಂಬಲ್ಲಿ ಹೊಲಿಗೆ ಹಾಕಲಾಗಿತ್ತು. ಅನಂತರ ವಿಪರೀತ ನೋವು ಕಂಡುಬಂದಿದ್ದು ಆ. 26ರಂದು ನೋವು ತಾಳಲಾಗದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತತ್‌ಕ್ಷಣ ಅವರಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಳ್ಳಾಲ: ಸ್ನೇಹಿತರ ಜತೆ ಸ್ನಾನಕ್ಕೆಂದು ತೆರಳಿ ಕೊಳಕ್ಕೆ ಇಳಿದ ಯುವಕನೋರ್ವ ನೀರುಪಾಲಾಗಿರುವ ಘಟನೆ ಕೆಳಗಿನ ತಲಪಾಡಿ ಬಳಿ ಸಂಭವಿಸಿದೆ.ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ದಿ. ಸುಬ್ರಾಯ ಆಚಾರ್ಯ-ಉಮಾವತಿ ದಂಪತಿ ಪುತ್ರ ಹರಿಪ್ರಸಾದ್‌ ಆಚಾರ್ಯ(36) ಮೃತರು. ತಲಪಾಡಿಯಲ್ಲಿರುವ ಖಾಸಗಿ ಜಾಗದಲ್ಲಿರುವ ಕೊಳಕ್ಕೆ ಸ್ನಾನಕ್ಕೆಂದು ಬಂದಿದ್ದ ನಾಲ್ವರ ಪೈಕಿ ಹರಿಪ್ರಸಾದ್‌ ನೀರಿನಡಿಯ ಕೆಸರಿನಲ್ಲಿ ಸಿಲುಕಿ ಮುಳುಗಿದ್ದಾರೆ. ಇದರಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಮಂಗಳೂರಿನಿಂದ ಅಗ್ನಿ ಶಾಮಕ ದಳದವರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಮೃತರು ವೆಲ್ಡಿಂಗ್‌ ವೃತ್ತಿ ನಡೆಸುತ್ತಿದ್ದರು. ಮೃತರು ಅವಿವಾಹಿತರಾಗಿದ್ದು, ತಾಯಿ, ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

Read More

ಕಡಬ: ಬೈಕ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಆ.28ರಂದು ನಡೆದಿದೆ. ಬೈಕ್ ಸವಾರ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಎಂಬವರು ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲ್ಯಾಡಿಯಿಂದ ಮಂಗಳೂರಿಗೆ ತೆರಳುತ್ತಿರುವ ಆಲ್ಟೊ ಕಾರು ಹಾಗೂ ಪೆಟ್ರೋಲ್ ಬಂಕ್ ನಿಂದ ಪೆಟ್ರೋಲ್ ಅನ್ನು ತುಂಬಿಸಿಕೊಂಡು ಬರುತ್ತಿದ್ದ ಲಕ್ಷ್ಮೀ ನಾರಾಯಣರ ಅವರ ಬೈಕಿನ ಮಧ್ಯೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಳ್ತಂಗಡಿ: ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಯಾತ್ರಾರ್ಥಿಯ ಕಾರಿನ ಗಾಜು ಒಡೆದು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗದಗ ಮಾಗಡಿ ಗ್ರಾಮದ ನಿವಾಸಿ ಬಸವರಾಜ ಗುಡಸಲಮನಿ ಎಂಬವರು ಆ.26ರಂದು ಬೆಳಗ್ಗೆ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ತಮ್ಮ ಕಾರಿನಲ್ಲಿ ಬಂದಿದ್ದರು. ಕಾರನ್ನು ಧರ್ಮಸ್ಥಳ ಅಣ್ಣಪ್ಪ ಬೆಟ್ಟದ ಸಮೀಪ ಲಾಕ್ ಮಾಡಿ ನಿಲ್ಲಿಸಿ ದೇವರ ದರ್ಶನಕ್ಕೆ ಹೋಗಿದ್ದ ವೇಳೆ ಕಳ್ಳತನ ನಡೆದಿದೆ.ದರ್ಶನ ಮುಗಿಸಿ ಹಿಂತಿರುಗಿದ ವೇಳೆ ನಿಲ್ಲಿಸಿದ್ದ ಕಾರಿನ ಗ್ಲಾಸನ್ನು ಒಡೆದಿರುವುದು ಕಂಡು ಬಂದದ್ದು ಪರಿಶೀಲಿಸಿದಾಗ ಕಾರಿನಲ್ಲಿ ವ್ಯಾನಿಟಿ ಬ್ಯಾಗ್‌ ನಲ್ಲಿಟ್ಟಿದ್ದ ಅಂದಾಜು 1,96,000 ರೂ. ಮೌಲ್ಯದ 40 ಗ್ರಾಂ ತೂಕದ ಮಾಂಗಲ್ಯ ಸರ, 4,000 ರೂ. ಮೌಲ್ಯದ 1 ಮೊಬೈಲ್ ಫೋನ್ ಕಳವಾಗಿದ್ದು, ಇವುಗಳ ಒಟ್ಟು ಅಂದಾಜು ಮೌಲ್ಯ 2,00,000 ರೂ. ಆಗಿರಬಹುದು ಎಂದು ದೂರಿನಲ್ಲಿ ದೂರುದಾರರು ಉಲ್ಲೇಖಿಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ಕಳವು‌ ಮಾಡಿದ ಘಟನೆ ಇರಾದಲ್ಲಿ ನಡೆದಿದೆ. ಉಳ್ಳಾಲ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮನೆಯಿಂದ ಕಳವು ನಡೆದಿದ್ದು, 112000 ಮೌಲ್ಯದ 4 ಪವನ್ ತೂಕದ ಚಿನ್ನದ ನೆಕ್ಲಸ್, ಹಾಗೂ 11000 ಸಾವಿರ ರೂ ನಗದು ಒಟ್ಟು 1,23,000 ರೂ ಮೌಲ್ಯ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ. ಅಬ್ದುಲ್ ಹಮೀದ್ ಅವರು ಅಗಸ್ಟ್ 26 ರಂದು ರಾತ್ರಿ 9.30 ರ ಬಳಿಕ ಮನೆಗೆ ಬೀಗ ಹಾಕಿ ಅತ್ತೆ ಮನೆಗೆ ಹೋಗಿದ್ದರು. ಇಂದು ಬೆಳಿಗ್ಗೆ ಮನೆಗೆ ಬಂದು ‌ನೋಡಿದಾಗ ಹಿಂಬದಿಯ ಬಾಗಿಲು ತೆರೆದಿತ್ತು. ಸಂಶಯದಿಂದ ಮನೆಯೊಳಗೆ ಹೋಗಿ ನೋಡಿದಾಗ ಬೆಡ್ ರೂಮಿನಲ್ಲಿ ಇದ್ದ ಗೊಡ್ರೇಜ್ ನಲ್ಲಿ ಇರಿಸಲಾಗಿದ್ದ ನಗನಗದು ಕಳವು ವಾಗಿರುವುದು ಗಮನಕ್ಕೆ ಬಂದಿದೆ. ಸ್ಥಳಕ್ಕೆ ಬಂಟ್ವಾಳ ಅಪರಾಧ ವಿಭಾಗದ ಎಸ್. ಐ.ಮೂರ್ತಿ, ಶ್ವಾನದಳ, ಬೆರಳಚ್ಚು ತಜ್ಞರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೋಲೀಸ್…

Read More

ಮಂಗಳೂರು : 27 ವರ್ಷಗಳ ಹಿಂದಿನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕೇರಳದ ಕಲ್ಲಿಕೋಟೆಯ ನಿವಾಸಿ 52 ವಷರ್ದ ಮನೋಜ್ (52) ಎಂದು ಗುರುತಿಸಲಾಗಿದೆ. ಆರೋಪಿ ಅಶೋಕ ನಗರದ ವಿನ್ಸೆಂಟ್ ಪಿರೇರಾ ಎಂಬವರಿಗೆ ಸೇರಿದ ಕಾರನ್ನು ಅದರ ಚಾಲಕ ದಾಮೋದರ ಎಂಬವರು ಕೊಟ್ಟಾರದ ರಸ್ತೆ ಬದಿ 1996ರ ಡಿಸೆಂಬರ್ 24ರಂದು ಪಾರ್ಕ್ ಮಾಡಿದ್ದು, ಮರುದಿನ ನೋಡಿದಾಗ ಅದು ಕಾಣೆಯಾಗಿತ್ತು. ಈ ಬಗ್ಗೆ ಮರುದಿನ ವಿನ್ಸೆಂಟ್ ಪಿರೇರಾ ದೂರು ನೀಡಿದ್ದರು.ಈ ಕಾರನ್ನು ಕಳವುಗೈದಿದ್ದ ಆರೋಪಿ ಮನೋಜ್ ಎಂಬಾತ ಕಲ್ಲಿಕೋಟೆಯಲ್ಲಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಉರ್ವ ಪೊಲೀಸರು ಆಗಸ್ಟ್ 23ರಂದು ಕಲ್ಲಿಕೋಟೆಯಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.ಕಳೆದ 27 ವರ್ಷದಿಂದ ತಲೆಮರೆಸಿಕೊಂಡಿದ್ದ ಈತನನ್ನು ಆಗಸ್ಟ್ 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Read More