ಬಾಲ್ಯವಿವಾಹ ನಿಷೇಧ ಕಾಯಿದೆ -2006 ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಅವನ ಅಥವಾ ಅವಳ ಧರ್ಮದ ಹೊರತಾಗಿ ಅನ್ವಯಿಸುತ್ತದೆ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಏಕೆಂದರೆ ಪ್ರತಿಯೊಬ್ಬ ಭಾರತೀಯನು ಮೊದಲು ನಾಗರಿಕನಾಗಿರುತ್ತಾನೆ ಮತ್ತು ನಂತರ ಒಂದು ಧರ್ಮದ ಸದಸ್ಯನಾಗುತ್ತಾನೆ ಎಂದು ಹೇಳಿದೆ. ಪಾಲಕ್ಕಾಡ್‌ನಲ್ಲಿ ಬಾಲ್ಯವಿವಾಹದ ವಿರುದ್ಧ 2012ರಲ್ಲಿ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಕುರಿತು ಇತ್ತೀಚೆಗೆ ನೀಡಿದ ಆದೇಶದಲ್ಲಿ ನ್ಯಾಯಮೂರ್ತಿ ಪಿ.ವಿ. ಕುಂಞಿಕೃಷ್ಣನ್ ಅವರು, ಯಾವುದೇ ಧರ್ಮದ ಭೇದವಿಲ್ಲದೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿ ಹೀಗೆ ಎಲ್ಲರಿಗೂ ಕಾಯ್ದೆ ಅನ್ವಯವಾಗುತ್ತದೆ ಎಂದಿದ್ದಾರೆ. ಆಗಿನ ಅಪ್ರಾಪ್ತ ಬಾಲಕಿಯ ತಂದೆ ಸೇರಿದಂತೆ ಅರ್ಜಿದಾರರು ನ್ಯಾಯಾಲಯದ ಮುಂದೆ ವಾದಿಸಿದರು. ಮುಸ್ಲಿಂ ಆಗಿರುವ ಆಕೆ ಪ್ರೌಢಾವಸ್ಥೆಯನ್ನು ಪಡೆದ ನಂತರ ಅಂದರೆ 15 ನೇ ವಯಸ್ಸಿನಲ್ಲಿ ಮದುವೆಯಾಗುವ ಧಾರ್ಮಿಕ ಹಕ್ಕನ್ನು ಹೊಂದಿದ್ದಾಳೆ ಎಂದು ಹೇಳಿದ್ದಾರೆ. ಒಬ್ಬ ವ್ಯಕ್ತಿ ಮೊದಲು ಭಾರತದ ಪ್ರಜೆ. ನಂತರ ಅವನ ಧರ್ಮ ಬರುತ್ತದೆ. ಧರ್ಮವು ಗೌಣ ಮತ್ತು ಪೌರತ್ವವು ಮೊದಲು…
Author: main-admin
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ 80 ಬಡಗಬೆಟ್ಟು ಗ್ರಾಮದ ಖಾಸಗಿ ಲಾಡ್ಜ್ ಒಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.ರೂಮ್‌ನಲ್ಲಿದ್ದ ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ. ಈಕೆಯಿಂದ ಕೃತ್ಯದ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಸಂತ್ರಸ್ತೆ ನೀಡಿರುವ ಮಾಹಿತಿಯಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಅರಣ್ಯಾಧಿಕಾರಿ ರಾಘವ ಪಾಟಾಳಿ, ಅವರ ಪತ್ನಿ ಮತ್ತು ಪುತ್ರಿಯ ವಿರುದ್ದ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣವನ್ನು ವಜಾಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ. 2016ರಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ರಾಘವ ಪಾಟಾಳಿ ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿ ಅವರ ಹಾಗೂ ಅವರ ಪತ್ನಿ, ಪುತ್ರಿಯ ವಿರುದ್ಧ ಪ್ರಕರಣ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ವಿಶೇಷ ನ್ಯಾಯಾಧೀಶೆ ಸಂಧ್ಯಾ ಅವರು ಪ್ರಕರಣವನ್ನು ಸಾಬೀತುಪಡಿಸವಲ್ಲಿ ಜಾರಿ ನಿರ್ದೇಶನಾಲಯ ವಿಫಲವಾಗಿದೆಯೆಂದು ಪ್ರಕರಣವನ್ನು ವಜಾಗೊಳಿಸಿ ಆರೋಪಿಗಳನ್ನು ಬಿಡುಗಡೆಗೊಳಿಸಿ ಅದೇಶಿಸಿದ್ದಾರೆ ಹಾಗೂ ಜಪ್ತಿಪಡಿಸಿಕೊಂಡ ನಗದು ಮತ್ತು ಮುಟ್ಟುಗೊಲು ಮಾಡಿದ್ದ ಕಟ್ಟಡಗಳನ್ನು ರಾಘವ ಪಾಟಾಳಿ ಹಾಗೂ ಕುಟುಂಬದವರಿಗೆ ಹಸ್ತಾಂತರ ಮಾಡುವಂತೆ ಜಾರಿ ನಿರ್ದೆಶನಾಲಯಕ್ಕೆ ನಿರ್ದೇಶನ ನೀಡಿದ್ದಾರೆ. ರಾಘವ ಪಾಟಾಳಿ ಹಾಗೂ ಇತರರ ಪರವಾಗಿ ಬೆಂಗಳೂರಿನ ನ್ಯಾಯವಾದಿ ಶಂಕರ್ ಪಿ. ಹೆಗ್ಡೆ ಹಾಗೂ ಮಂಗಳೂರಿನ ನ್ಯಾಯಾವಾದಿ ಜಲಜಾಕ್ಷಿ ಎಂ. ಎಂ. ವಾದಿಸಿದ್ದರು.
ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಶಿಕ್ಷೆಗೊಳಗಾದವನು. 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿ ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದನು. ಪರಿಣಾಮ ಬಾಲಕಿ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತ್ತು. 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್ಎ ವರದಿಗಳು, ಸಾಕ್ಷ್ಯ, ಪೂರಕ ಸಾಕ್ಷ್ಯಪರಿಗಣಿಸಿ ಹಾಗೂ ವಾದ ವಿವಾದ ಆಲಿಸಿದ ನ್ಯಾಯಾಲಯವು ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ. ಆ.2ರಂದು ನ್ಯಾಯಾಧೀಶರಾದ…
ನವದೆಹಲಿ:ವಾಯು, ರಸ್ತೆ, ರೈಲ್ವೆ ಮತ್ತು ಜಲಮಾರ್ಗಗಳಂತಹ ವಿವಿಧ ಪ್ರಯಾಣ ವಿಧಾನಗಳ ಮೂಲಕ ಮಾನವ ಅಂಗಗಳನ್ನು ತಡೆರಹಿತವಾಗಿ ಸಾಗಿಸಲು ಕೇಂದ್ರ ಆರೋಗ್ಯ ಸಚಿವಾಲಯವು ಮೊದಲ ಬಾರಿಗೆ ಎಸ್‌ಒಪಿಗಳನ್ನು ಹೊರತಂದಿದೆ. ಸರ್ಕಾರ ಹೊರಡಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ದೇಶಾದ್ಯಂತ ಅಂಗಾಂಗ ಕಸಿಯಲ್ಲಿ ತೊಡಗಿರುವವರಿಗೆ ಮಾರ್ಗದರ್ಶಿ ದಾಖಲೆಯಾಗಿ ಕಾರ್ಯನಿರ್ವಹಿಸುತ್ತದೆ. “ಅಂಗಾಂಗ ಸಾಗಣೆ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸುವ ಮೂಲಕ, ಅಮೂಲ್ಯ ಅಂಗಗಳ ಬಳಕೆಯನ್ನು ಗರಿಷ್ಠಗೊಳಿಸುವ ಗುರಿಯನ್ನು ನಾವು ಹೊಂದಿದ್ದೇವೆ ಮತ್ತು ಜೀವ ಉಳಿಸುವ ಕಸಿಗಾಗಿ ಕಾಯುತ್ತಿರುವ ಅಸಂಖ್ಯಾತ ರೋಗಿಗಳಿಗೆ ಭರವಸೆಯನ್ನು ನೀಡುತ್ತೇವೆ. “ಈ ಎಸ್‌ಒಪಿಗಳು ದೇಶಾದ್ಯಂತ ಅಂಗಾಂಗ ಮರುಪಡೆಯುವಿಕೆ ಮತ್ತು ಕಸಿ ಸಂಸ್ಥೆಗಳಿಗೆ ಮಾರ್ಗಸೂಚಿಯಾಗಿದ್ದು, ಉತ್ತಮ ಅಭ್ಯಾಸಗಳು ಮತ್ತು ಗುಣಮಟ್ಟದ ಮಾನದಂಡಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳುತ್ತವೆ” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಪೂರ್ವ ಚಂದ್ರ ಹೇಳಿದರು. ಅಂಗಾಂಗ ದಾನಿ ಮತ್ತು ಅಂಗ ಸ್ವೀಕರಿಸುವವರು ಇಬ್ಬರೂ ಒಂದೇ ನಗರದೊಳಗಿನ ಅಥವಾ ವಿಭಿನ್ನ ನಗರಗಳಲ್ಲಿನ ವಿಭಿನ್ನ ಆಸ್ಪತ್ರೆಗಳಲ್ಲಿದ್ದಾಗ ಜೀವಂತ ಅಂಗವನ್ನು ಆಸ್ಪತ್ರೆಗಳ ನಡುವೆ ಸಾಗಿಸಬೇಕಾಗುತ್ತದೆ. ವಿಮಾನದ ಮೂಲಕ ಸಾಗಿಸುವ ಎಸ್‌ಒಪಿಗಳ ಪ್ರಕಾರ, ಮಾನವ…
ಪುತ್ತೂರು : ದಶಕದ ಹಿಂದೆ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಎಗರಿಸಿದ್ದ ಸರಗಳ್ಳನ( chain snatcher) ನ್ನು 12 ವರ್ಷಗಳ ಬಳಿಕ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. 2012 ನೇ ಇಸವಿಯಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿತೊಟ್ಟು ಎಂಬಲ್ಲಿ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಆರೋಪಿ ಎಳೆದೊಯ್ದಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಬಂಧನಕ್ಕೊಳಗಾಗಿದ್ದ ಆರೋಪಿ ಮಹ್ಮದ್ ಶಾಫಿ ಬಳಿಕ ನ್ಯಾಯಾಲಯದಲ್ಲಿನ ವಿಚಾರಣೆಗೆ ಹಾಜರಾಗದೆ ತಲೆ ಮರೆಯಿಸಿಕೊಂಡಿದ್ದ . ತಲೆ ಮರೆಯಿಸಿಕೊಂಡಿದ್ದ ಮಹಮ್ಮದ್ ಶಾಫಿಯನ್ನು 12 ವರ್ಷಗಳ ಬಳಿಕ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸುರತ್ಕಲ್ ಬೊಕ್ಕಬೆಟ್ಟು ಗ್ರಾಮದ ಕೃಷ್ಣಾಪುರ 8 ನೇ ಬ್ಲಾಕ್ ನಿವಾಸಿಯಾಗಿರುವ ಆರೋಪಿ ಮಹಮ್ಮದ್ ಶಾಫಿ 12 ವರ್ಷಗಳ ಹಿಂದೆ ಗೋಳಿತೊಟ್ಟು ಎಂಬಲ್ಲಿ ಬೈಕಿನಲ್ಲಿ ಬಂದು ಪಾದಾಚಾರಿ ಮಹಿಳೆಯ ಚಿನ್ನಾಭರಣವನ್ನು ಎಳೆದೊಯ್ದಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಬಂಧನಕ್ಕೊಳಗಾಗಿದ್ದ ಈತ ಬಳಿಕ ನ್ಯಾಯಾಲಯದಲ್ಲಿನ ವಿಚಾರಣೆಗೆ ಹಾಜರಾಗದೆ ತಲೆ ಮರೆಯಿಸಿಕೊಂಡಿದ್ದ .ಆರೋಪಿಯ ಜಾಡು ಹಿಡಿದ ಪೊಲೀಸರು…
ಕುಂದಾಪುರ: ಗಂಗೊಳ್ಳಿಯ ಸಮುದ್ರತೀರದಲ್ಲಿ ಗೋಣಿಚೀಲದಲ್ಲಿ ಕಟ್ಟಿ ಎಸೆಯಲಾದ ಗೋವಿನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿನ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಗಂಗೊಳ್ಳಿಯ ಕಡಲ ತೀರದಲ್ಲಿ ಗೋಣೆ ಚೀಲದಲ್ಲಿ ದನದ ಅವಶೇ? ತೇಲಿಕೊಂಡು ಬಂದಿದ್ದು, ಚೀಲದಲ್ಲಿ ದನದ ತಲೆಯ ಭಾಗ ಹಾಗೂ ದವಡೆಯ ಮೂಳೆ ಹಾಗೂ ದನದ ಕಳೆಬರಗಳು ಪತ್ತೆಯಾಗಿದೆ. ಗೋವನ್ನು ವಧೆ ಮಾಡಿ ಅದರ ಕಳೆಬರವನ್ನು ಚೀಲದಲ್ಲಿ ಹಾಕಿ ಸಮುದ್ರಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪದೇ ಪದೇ ಗೋವನ್ನು ಕಳ್ಳತನ ಮಡಿ, ಗೋವನ್ನು ವಧೆ ಮಾಡಿ ಅವರ ಕಳೆಬರವನ್ನು ಸಮುದ್ರ ಹಾಗೂ ನದಿಯಲ್ಲಿ ಎಸೆದು ವಿಕೃತಿ ಮೆರೆದು ಹಿಂದುಗಳ ಭಾವನೆಗೆ ನೋವುಂಟು ಮಾಡುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಹಿಂದು ಪರ ಸಂಘಟನೆಗಳು ಆಗ್ರಹಿಸಿವೆ. ಈ ಬಗ್ಗೆ ಮೋಹನ್ ಎಂಬುವರು ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು:- ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರು ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿದೆ. ಆರೋಪಿ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್ವೈ ರಿಯಾಜ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಆರೋಪಿಗೆ ಮನ್ಸೂರ್, ರಿಯಾಜ್ ಆಶ್ರಯ ನೀಡಿದ್ದರು. ಮೇ 5ರಂದು ಸಕಲೇಶಪುರದಲ್ಲಿ ಮುಸ್ತಫಾ ನನ್ನು ಬಂಧಿಸಿದ್ದು, ವಿದೇಶಕ್ಕೆ ಪರಾರಿಯಾಗುಲು ಯತ್ನಿಸಿದ್ದ ರಿಯಾಜ್ ನನ್ನು ಜೂ.3ರಂದು ಮುಂಬೈ ಏರ್ಪೋರ್ಟ್ನಲ್ಲಿ ಬಂಧಿಸಲಾಗಿತ್ತು. ನನ್ನ ಪತಿಯ ಹತ್ಯೆಯಲ್ಲಿ ಮುಸ್ತಫಾ ಪೈಚಾರ್ನೇ ಪ್ರಮುಖ ಆರೋಪಿಯಾಗಿದ್ದಾನೆ. ಅವನನ್ನು ಬಂಧಿಸಿದ್ದಕ್ಕೆ ನಮಗೆ ತುಂಬಾ ಖುಷಿಯಾಗಿದೆ ಎಂದು ಪ್ರವೀಣ ನೆಟ್ಟಾರು ಪತ್ನಿ ನೂತನಾ ಹೇಳಿದ್ದರು. ಈ ಪ್ರಕರಣದ ಎಲ್ಲ ಆರೋಪಿಗಳಿಗೂ ಮರಣ ದಂಡನೆಯಾಗಬೇಕು. ಸಮಾಜದಲ್ಲಿ ಇಂತಹ ಪ್ರಕರಣ ಮರುಕಳಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರವೀಣ್ ನೆಟ್ಟಾರು ಕೊಲೆ ಕೇಸ್ನಲ್ಲಿ ಇದುವರೆಗೆ ಎನ್ಐಎ 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ದ ಚಾರ್ಶೀಟ್ ಸಲ್ಲಿಕೆ ಮಾಡಿತ್ತು.
ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ಗೋಳಪಟ್ಟ 7 ನೇ ವಾರ್ಡ್ ಬಾಕ್ರಬೈಲ್ ಬಳಿಯ ಕಜೆ ಎಂಬಲ್ಲಿ ಮಳೆಗೆ ಸುಮಾರು 2 ಫೀಟ್ ನೆಲ ಕುಸಿದು ಹೋಗಿದೆ. ಬಜಿಲಾಡಿ ಎಂಬ ಎತ್ತರದ ಗುಡ್ಡ ಪ್ರದೇಶದ ಕೆಳಗಡೆ ಹಲವಾರು ಮನೆಗಳಿವೆ. ಅಲ್ಲದೆ ಪಕ್ಕದಲ್ಲಿರುವ ಗುಡ್ಡೆ ಕೂಡಾ ಕುಸಿಯುವ ಭೀತಿಯಲ್ಲಿದ್ದು, ಈ ಪರಿಸರ ಪ್ರದೇಶ ಇದೀಗ ಅಪಾಯದಲ್ಲಿದ್ದೆ. ಇಲ್ಲಿ 5 ಮನೆಗಳಿದ್ದು, ಮನೆಮಂದಿ ಆತಂಕದಿಂದ ದಿನ ಕಳೆಯುವಂತಾಗಿದೆ. ಈ ಬಗ್ಗೆ ವರ್ಕಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ, ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಪಂಚಾಯತ್ ಅಧಿಕಾರಿಗಳು ಇವರಿಗೆ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ಇನ್ನಷ್ಟೇ ತಿಳಿದುಬರಬೇಕಾಗಿದೆ.
ಬೆಳ್ತಂಗಡಿ : ಮನೆಯ ಬಾವಿಗೆ ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿನ ಸೀಡ್ ಫಾರ್ಮ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಸುಮಾಲಿನಿ ಜೈನ್ (63) ಮನೆಯ ಬಾವಿಗೆ ಬಿದ್ದು ಮೃತಪಟ್ಟವರು. ಮಹಿಳೆ ಬಾವಿಗೆ ಬಿದ್ದಿರುವುದನ್ನು ಅವರ ಪತಿ ಗಮನಿಸಿ ತಕ್ಷಣ ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಆ್ಯಂಬುಲೆನ್ಸ್ ಸಿಬ್ಬಂದಿ ಜಲೀಲ್ ಹಾಗೂ ಅಲ್ಪಾಸ್ ಲಾಯಿಲ ಸೇರಿ ಬಾವಿಗೆ ಹಗ್ಗ ಹಾಕಿ ಸುಮಾಲಿನಿ ಜೈನ್‌ರನ್ನು ಮೇಲಕ್ಕೆತ್ತಿದ್ದಾರೆ. ಆ ತಕ್ಷಣವೇ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಆ ವೇಳೆಗೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.