ಇನ್ನು ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಬೆಳಗಾವಿ ಕಮಿಷನರ್ ಕಚೇರಿಯಲ್ಲಿ ಇಂದು ಸಿಐಡಿ ಡಿಐಜಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ಸ್ಥಳೀಯ ಅಧಿಕಾರಿಗಳ ಜೊತೆ 2 ಗಂಟೆ ಕಾಲ ಸಭೆ ಮಾಡಿದರು. ನೀಲಣ್ಣವರ್ ಕೇಸ್‌ಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅಧಿಕೃತವಾಗಿ ಸಿಐಡಿಗೆ ಹಸ್ತಾಂತರಿಸಿದರು. ನಿನ್ನೆವರೆಗೆ ನಡೆಸಿದ ತನಿಖಾ ವರದಿ ಸೇರಿದಂತೆ ಎಲ್ಲಾ ಮಹತ್ವದ ದಾಖಲೆಗಳನ್ನು ಹಸ್ತಾಂತರಿಸಲಾಗಿದೆ. ಪ್ರಕರಣದ ಬಗ್ಗೆ ಸುದೀರ್ಘವಾಗಿ ಮಾಹಿತಿ ಪಡೆದ ಸಿಐಡಿ ತಂಡ ಬಳಿಕ ಬೆಂಗಳೂರಿಗೆ ತೆರಳಿತು. ಕಮಿಷನರ್ ಭೂಷಣ್ ಬೊರಸೆ ಹೇಳಿದ್ದಿಷ್ಟು ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಮಿಷನರ್ ಭೂಷಣ್ ಬೊರಸೆ, ಶಿವಂ ಅಸೋಸಿಯೇಟ್ ಮಾಲೀಕ ಶಿವಾನಂದ ನೀಲಣ್ಣವರ್ ಬಂಧನವಾಗಿದೆ. ಈ ಪ್ರಕರಣದ ವ್ಯಾಪ್ತಿ ಅಂತಾರಾಜ್ಯಕ್ಕೂ ವ್ಯಾಪಿಸಿದೆ. 50 ಕೋಟಿ ರೂಪಾಯಿಗೂ ಹೆಚ್ಚು ಅವ್ಯವಹಾರ ಆಗಿದೆ. ಈ ಕಾರಣಕ್ಕೆ ಡಿಜಿ-ಐಜಿಪಿ ಕೇಸ್ ಸಿಐಡಿಗೆ ವಹಿಸಿದ್ದಾರೆ. ಸಿಐಡಿ ಡಿಐಜಿ ಬಂದು ನಮ್ಮ ಬಳಿ ಮಾಹಿತಿ ಪಡೆದಿದ್ದಾರೆ. ನಾವು ಮಾಡಿರುವ ತನಿಖೆ ಅವರಿಗೆ ನೀಡಿದ್ದೇವೆ.…
Author: main-admin
ಬೆಂಗಳೂರು: ಸಮಾಜದಲ್ಲಿ ಹಳೆಯ ದ್ವೇಷಕ್ಕೆ, ರೋಷಕ್ಕೆ ಕೊಲೆ ನಡೆದ ಉದಾಹರಣೆಗಳಿವೆ. ಹೆಣ್ಣಿಗಾಗಿ, ಹಣಕ್ಕಾಗಿಯೂ ಕೊಲೆ, ಸುಲಿಗೆಗಳು ನಡೆಯುತ್ತವೆ. ಆದರೆ ಕೇವಲ 200 ರೂ. ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿದ ಪ್ರಕರಣ ಇದೇ ಮೊದಲಿರಬಹುದು. ಹೌದು, ಟೀ ಅಂಗಡಿ ಮಾಲೀಕ ಬಾಕಿ ಇರುವ ಹಣ ನೀಡುವಂತೆ ಕೇಳಿದ ಕಾರಣಕ್ಕೇ ದೊಡ್ಡಬಳ್ಳಾಪುರ ತಾಲೂಕಿನ ಅಪ್ಪಕಾರನಹಳ್ಳಿ ಗೇಟ್ನಲ್ಲಿ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ. ಇನ್ನು ಮುಂದೆ ಸಾಲ ಕೊಡುವುದಿಲ್ಲ ಎಂದಿದ್ದ ಮಾಲೀಕ ದ್ಯಾವಸಂದ್ರ ಗ್ರಾಮದ ಮಂಜುನಾಥ (40) ಕೊಲೆಯಾದ ದುರ್ದೈವಿ. ಮೇ 12 ರಂದು ಅಪ್ಪಕಾರನಹಳ್ಳಿಯ ಮುನಿಯಪ್ಪ ಎಂಬಾತ ಮಂಜುನಾಥ್ ಅವರ ಟೀ ಅಂಗಡಿಗೆ ಬಂದು ಮತ್ತೆ ಸಾಲ ಕೇಳಿದ್ದ. ಈ ವೇಳೆ ಮಾಲೀಕ ಮಂಜುನಾಥ್, ಹಳೆಯ ಟೀ ಸಾಲದ ಬಾಕಿ ಹಣ 200 ರೂ.ಕೊಡು, ಇನ್ನು ಮುಂದೆ ಸಾಲ ಕೊಡುವುದಿಲ್ಲ ಎಂದು ಹೇಳಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಆರೋಪಿ ಮುನಿಯಪ್ಪ, ಪಕ್ಕದಲ್ಲೇ ಇದ್ದ…
ಭೋಪಾಲ್ : ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ಮಾರ್ಗದಲ್ಲಿ ಸಂಚರಿಸುತ್ತಿದ್ದ 12431 ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬಿ-1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲೂನಿ ರಿಚ್ಛಾ ಮತ್ತು ವಿಕ್ರಮ್‌ಗಢ್ ಅಲೋಟ್ ರೈಲು ನಿಲ್ದಾಣಗಳ ಮಧ್ಯೆ ಈ ಅವಘಡ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಸುಮಾರು 5.15ರ ವೇಳೆಗೆ ರೈಲಿನ ಹಿಂಭಾಗದ SLR ಹಾಗೂ B1 ಕೋಚ್‌ನಿಂದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಗಮನಿಸಿದ ರೈಲ್ವೆ ಸಿಬ್ಬಂದಿ ತಕ್ಷಣ ಎಚ್ಚರಿಕೆ ಕ್ರಮ ಕೈಗೊಂಡರು.ಕೋಚ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಬೇರೆ ಬೋಗಿಗಳಿಗೆ ಸ್ಥಳಾಂತರಿಸಲಾಯಿತು. ಬಳಿಕ ಬೆಂಕಿ ತಗುಲಿದ ಕೋಚ್ ಅನ್ನು ರೈಲಿನಿಂದ ಬೇರ್ಪಡಿಸಿದ ಪರಿಣಾಮ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಬೆಂಕಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ರೈಲ್ವೆ ಇಲಾಖೆ ತನಿಖೆ ಆರಂಭಿಸಿದ್ದು, ತಾಂತ್ರಿಕ ದೋಷ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದೆಂದು ಪ್ರಾಥಮಿಕ ಶಂಕೆ ವ್ಯಕ್ತವಾಗಿದೆ. ಈ…
ಸುಳ್ಯ: ಪೆರಾಜೆ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಮೂವರು ಗಾಯಗೊಂಡ ಘಟನೆ ವರದಿಯಾಗಿದೆ. ಕಾರು ಸುಳ್ಯ ಕಡೆಯಿಂದ ಮಡಿಕೇರಿ ಕಡೆ ತೆರಳುತ್ತಿತ್ತು. ಗಾಯಾಳುಗಳನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಕಾರಿನ ಟಯರ್ ಒಡೆದು ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಚಂಡೀಗಢ: ಪಂಜಾಬ್‌ನ ಹೊಶಿಯಾರ್‌ಪುರ ಜಿಲ್ಲೆಯ ಚಕ್ ಸಮಾನಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ತೆರೆದ ಕೊಳವೆಬಾವಿಗೆ ಬಿದ್ದಿದ್ದ ನಾಲ್ಕು ವರ್ಷದ ಬಾಲಕನನ್ನು ಸುಮಾರು 9 ಗಂಟೆಗಳ ಕಾಲ ನಡೆಸಿದ ರೋಮಾಂಚಕ ಜಂಟಿ ಕಾರ್ಯಾಚರಣೆಯ ಮೂಲಕ ಶನಿವಾರ ಮುಂಜಾನೆ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಗುರ್ಕರನ್ ಸಿಂಗ್ ಎಂಬ 4 ವರ್ಷದ ಬಾಲಕ ಶುಕ್ರವಾರ ರಾತ್ರಿ ತನ್ನ ಮನೆಯ ಸಮೀಪ ಆಟವಾಡುತ್ತಿದ್ದಾಗ, ಇತ್ತೀಚೆಗಷ್ಟೇ ಕೊರೆಯಲಾಗಿದ್ದ ತೆರೆದ ಕೊಳವೆಬಾವಿಗೆ ಆಕಸ್ಮಿಕವಾಗಿ ಜಾರಿ ಬಿದ್ದಿದ್ದ. ಮಗು ಸುಮಾರು 20 ರಿಂದ 30 ಅಡಿ ಆಳದಲ್ಲಿ ಸಿಲುಕಿಕೊಂಡಿರುವುದು ಬೆಳಕಿಗೆ ಬರುತ್ತಿದ್ದಂತೆಯೇ ಆತಂಕಗೊಂಡ ಪೋಷಕರು ತಕ್ಷಣವೇ ಜಿಲ್ಲಾಡಳಿತಕ್ಕೆ ಮಾಹಿತಿ ರವಾನಿಸಿದ್ದರು. ತಡಮಾಡದೆ ಕಾರ್ಯಪ್ರವೃತ್ತರಾದ ರಕ್ಷಣಾ ಪಡೆಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಜಂಟಿ ಕಾರ್ಯಾಚರಣೆ ಆರಂಭಿಸಿದವು. ಘಟನಾ ಸ್ಥಳದ ಮಣ್ಣು ಅತ್ಯಂತ ಸಡಿಲವಾಗಿದ್ದರಿಂದ ಜೆಸಿಬಿ ಯಂತ್ರಗಳ ಮೂಲಕ ಅಗೆಯುವಾಗ ಮಣ್ಣು ಸತತವಾಗಿ ಕುಸಿಯುತ್ತಿತ್ತು. ಇದು ಕಾರ್ಯಾಚರಣೆಗೆ ಭಾರಿ ದೊಡ್ಡ ತಾಂತ್ರಿಕ ಸವಾಲನ್ನು ಒಡ್ಡಿತಾದರೂ ಧೃತಿಗೆಡದ ಸಿಬ್ಬಂದಿ, ಕೊಳವೆಬಾವಿಗೆ ಸಮನಾಂತರವಾಗಿ ಮತ್ತೊಂದು ಗುಂಡಿಯನ್ನು ತೋಡಿದರು. ಅಲ್ಲಿಂದ ಕೊಳವೆಬಾವಿಯ…
ರಾಯಚೂರು: ಕಾವಿ ಬಟ್ಟೆ ಹಾಕಿಕೊಂಡು, ಸಾಧು ಸಂತರಂತೆ ಬಂದು ನಿಮ್ಮನ್ನ ಹಾಡಿ ಹೊಗಳುವವರನ್ನು ನಂಬುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ರಾಯಚೂರಿನ ಸಿಂಧನೂರು ನಗರದಲ್ಲಿ ನಡೆದ ಘಟನೆಯೇ ಸಾಕ್ಷಿ. ನಗರದಲ್ಲಿ ಸಾಧು ಸಂತರ ಸೋಗಿನಲ್ಲಿ ಬಂದು, ಹೂವುಗಳನ್ನು ನೀಡಿ, ಸಮ್ಮೋಹನ ಮಾಡುವ ಮೂಲಕ ಸಾರ್ವಜನಿಕರ ಹಣ ಮತ್ತು ಚಿನ್ನಾಭರಣಗಳನ್ನು ದೋಚುತ್ತಿರುವ ಖದೀಮರ ಕೃತ್ಯ ಈಗ ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಸಿಕ್ಕಿದೆ. ಧರ್ಮ, ಭಕ್ತಿ ಮತ್ತು ಸತ್ಕಾರದ ಹೆಸರಿನಲ್ಲಿ ಜನರನ್ನು ಮಂಕುಬೂದಿ ಎರಚಿ ಲೂಟಿ ಮಾಡುವ ‘ಖದೀಮ ಸಾಧುಗಳ’ ಗ್ಯಾಂಗ್ ಈಗ ಜಿಲ್ಲೆಯಲ್ಲಿ ತೀವ್ರ ಆತಂಕ ಮೂಡಿಸಿದೆ. ಸತ್ಕಾರ ಮಾಡಿದ್ದಕ್ಕೆ ಸಿಕ್ಕಿದ್ದೇನು? ಸಿಂಧನೂರು ನಗರದ ಪ್ರಮುಖ ರಸ್ತೆಯಲ್ಲಿರುವ ‘ಸಾಯಿ ಮೆಡಿಕಲ್ಸ್’ ಫಾರ್ಮಸಿಗೆ ಸಾಧುವೊಬ್ಬರು ಆಗಮಿಸಿದ್ದರು. ಬಿಸಿಲಿನ ಬೇಗೆಯಿಂದ ಬಳಲಿದ್ದ ಆ ಸಾಧು, ಕುಡಿಯಲು ನೀರು ಕೇಳಿದ್ದಾರೆ. ಮೆಡಿಕಲ್ ಅಂಗಡಿಯ ಮಾಲೀಕರಾದ ವಿಷ್ಣುದತ್ತು ಮಾನವೀಯತೆ ಮತ್ತು ಸಾಧುಗಳ ಮೇಲಿನ ಭಕ್ತಿಯಿಂದ ತಕ್ಷಣವೇ ಫ್ರಿಡ್ಜ್‌ನಿಂದ ತಣ್ಣನೆಯ ನೀರನ್ನು ತಂದುಕೊಟ್ಟು ಸತ್ಕರಿಸಿದ್ದಾರೆ. ನೀರು ಕುಡಿದ ಸಾಧು, ಮಾಲೀಕರ ಭಕ್ತಿಗೆ ಮೆಚ್ಚುಗೆ ಸೂಚಿಸುವಂತೆ ನಟಿಸಿದ್ದಾನೆ. ನಿನಗೆ…
ಬೆಳ್ತಂಗಡಿ: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಹೆಡ್‍ಕಾನ್ಸ್ಟೇಬಲ್‍ರೋರ್ವರ ಮನೆಗೆ ಕಳ್ಳರು ನುಗ್ಗಿ ಸುಮಾರು 15.80 ಲಕ್ಷ ರೂ. ಮೌಲ್ಯದ ನಗ- ನಗದನ್ನು ಕದ್ದೊಯ್ದ ಘಟನೆ ಮೇ 15ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದ ಗಾಡಕೋಡಿ ಎಂಬಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ರಾಜ್ಯ ಮೀಸಲು ಪೊಲೀಸ್ ಪಡೆಯ (KSRP) ಗುಪ್ತವಾರ್ತೆ ವಿಭಾಗದ ಹೆಡ್ ಕಾನ್ಸ್ಟೇಬಲ್ ಆಗಿರುವ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಸುಮಾರು 13 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 1 ಲಕ್ಷ ರೂಪಾಯಿ ನಗದು ಹಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಹಾಸನ ಜಿಲ್ಲೆಯ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಗುಪ್ತವಾರ್ತೆ ಸಂಗ್ರಹದ ಕಾರ್ಯನಿರ್ವಹಿಸುತ್ತಿರುವ ಕರುಣಕಾರ ಗೌಡ ಪದ್ಮುಂಜ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಕರುಣಾಕರ ಗೌಡರು ಗ್ರಾಮದ ತನ್ನ ಮೂಲ ಮನೆಯಲ್ಲಿ ಒಬ್ಬರೇ ಇದ್ದು, ಪತ್ನಿ ಉದ್ಯೋಗ ನಿಮಿತ್ತ ಬೇರೆ ಊರಿನಲ್ಲಿರುವುದರಿಂದ ಮಕ್ಕಳು ಅವರ ಜೊತೆಗಿದ್ದಾರೆ. ಮನೆಯಲ್ಲಿ ಪತ್ನಿ ತನ್ನ ಕೊಠಡಿಯಲ್ಲಿ ಚಿನ್ನಾಭರಣವನ್ನು…
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ನಿವಾಸಿ ಭರತ್ ಜಯರಾಮ್ ದಾಸ (34) ಗಡಿಪಾರು ಶಿಕ್ಷೆಗೆ ಒಳಗಾದ ವ್ಯಕ್ತಿ. ಆರೋಪಿ ಭರತ್ ವಿರುದ್ಧ ಈಗಾಗಲೇ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಒಟ್ಟು ಮೂರು ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಒಂದು ಪ್ರಕರಣದಲ್ಲಿ ಈತನಿಗೆ ಶಿಕ್ಷೆಯಾಗಿದ್ದು, ಉಳಿದ ಎರಡು ಪ್ರಕರಣಗಳು ತನಿಖಾ ಹಂತದಲ್ಲಿವೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 14ರಂದು ಎಸ್‌ಪಿ ಅವರು ಈ ಆದೇಶ ಜಾರಿಗೊಳಿಸಿದ್ದಾರೆ. ಗಡಿಪಾರಾದ ಆರೋಪಿಯನ್ನು ಬೆಂಗಳೂರು ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಡುಪಿ: ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಹಾಗೂ ವಾರಂಟ್ ಆರೋಪಿಯನ್ನು ಕಾಪು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಭಿಜಿತ್ (34) ಎಂದು ಗುರುತಿಸಲಾಗಿದ್ದು, ಈತನನ್ನು ಪುಂಜಾಲಕಟ್ಟೆಯಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ.ಆರೋಪಿಯು 2016ರಲ್ಲಿ ಮಲ್ಲಾರು ಪಕೀರಣಕಟ್ಟೆಯ ಬಳಿ ಮಹಿಳೆಯೊಬ್ಬರ ಮಾನಭಂಗಕ್ಕೆ ಯತ್ನಿಸಿದ್ದ. ಈ ಪ್ರಕರಣದ ವಿಚಾರಣೆ ಹಂತದಲ್ಲಿರುವಾಗ ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಕಳೆದ ಆರು ವರ್ಷಗಳಿಂದ ಕಾಪು ಪೊಲೀಸರು ಈತನಿಗಾಗಿ ಹುಡುಕಾಟ ನಡೆಸುತ್ತಿದ್ದರು.ಸದ್ಯ ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೇ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಸ್ತುತ ಆತನನ್ನು ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಯ ವಿರುದ್ಧ ಮೈಸೂರಿನ ನರಸಿಂಹರಾಜಪುರ ಮತ್ತು ಬಜಪೆ ಪೊಲೀಸ್ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಆ ಪ್ರಕರಣಗಳಲ್ಲೂ ಈತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.ಕಾರ್ಕಳ ಉಪವಿಭಾಗದ ಡಿವೈಎಸ್ಪಿ ವಿಜಯ್ ಪ್ರಸಾದ್ ಮತ್ತು ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಕಾಪು ಎಸ್‌ಐಗಳಾದ…
ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಹಾಗೂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿನಾಂಕ 14 ಮೇ 2026ರಂದು ಬೆಳಿಗ್ಗೆ ಸುಮಾರು 7 ಗಂಟೆ ವೇಳೆಗೆ PSI ಕೃಷ್ಣಪ್ಪ ಹಾಗೂ ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಜಾ ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಪೊಲೀಸರು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ವಾಹನ ತಪಾಸಣೆ ನಡೆಸಿದರು. ಈ ವೇಳೆ KA19MK4265 ಸಂಖ್ಯೆಯ ಬೂದು ಬಣ್ಣದ ಮಾರುತಿ ಬ್ರೀಜಾ ಕಾರು ಬಂದಿದ್ದು, ನಿಲ್ಲಿಸಲು ಸೂಚಿಸಿದರೂ ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ವಾಹನವನ್ನು ಬೆನ್ನಟ್ಟಿದಾಗ, ಕಾರು ಗುಂಡುಕಲ್ಲು 5 ಸೈಂಟ್ಸ್ ರಸ್ತೆಯಲ್ಲಿರುವ ಸಾಹುಲ್ ಹಮೀದ್ ಅವರ ಮನೆ ಸಮೀಪ ನಿಲ್ಲಿಸಲಾಗಿತ್ತು.ವಾಹನದಲ್ಲಿದ್ದ ಹಂಡೇಲಿನ ಮೊಹಮ್ಮದ್ ಆರಿಫ್ ಹಾಗೂ ಗಂಟಾಲಕಟ್ಟೆಯ ಇಮ್ರಾನ್ @ ಇಬ್ರಾಹಿಂ ಓಡಿಹೋಗಲು ಯತ್ನಿಸಿದರೂ ಪೊಲೀಸರು…










