Author: main-admin

ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ ಪೊಲೀಸ್ ಕಾನ್‌ಸ್ಟೆಬಲ್ ಪೂರ್ಣೇಶ್ ಎಂಬವರ ಶವ ಪತ್ತೆಯಾಗಿದೆ ಎಂದು ಗುರುತಿಸಲಾಗಿದೆ. ಇವರು ಮದ್ಯ ವ್ಯಸನಿಯಾಗಿದ್ದು, ಇವರು ಆಗುಂಬೆ, ತೀರ್ಥಹಳ್ಳಿ, ಮಾಳೂರು, ಕುಂಸಿಯಲ್ಲಿ ಪೂರ್ಣೇಶ್ ಸೇವೆ ಸಲ್ಲಿಸಿದ್ದರು. ಕೆಲ ದಿನಗಳ ಹಿಂದೆ ಕೆಲಸದಿಂದ ವಜಾಗೊಂಡಿದ್ದರು. ಪೂರ್ಣೇಶ್‌ ಅವರ ತಲೆಯ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆಗುಂಬೆ, ತೀರ್ಥಹಳ್ಳಿ, ಮಾಳೂರು, ಕುಂಸಿಯಲ್ಲಿ ಪೂರ್ಣೇಶ್ ಸೇವೆ ಸಲ್ಲಿಸಿದ್ದರು. ಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು. ತೀರ್ಥಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.

Read More

ಕುಂದಾಪುರ: ಟಿಪ್ಪರ್‌ವೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟ ಘಟನೆ ಶುಕ್ರವಾರ ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಕೋಟೇಶ್ವರ ಕಡೆಯಿಂದ ತಲ್ಲೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್, ರಸ್ತೆ ದಾಟುತ್ತಿದ್ದ ಕುಮಾರ್ ಎಂಬುವರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಕುಮಾರ್ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ನಗರದ ಬೆಂದೂರ್‌ವೆಲ್‌ನಲ್ಲಿ ಖಾಸಗಿ ಬಸ್‌ನಡಿಗೆ ಮಗುವೊಂದು ಬಿದ್ದು ಸಾವನ್ನಪ್ಪಿ, ಮಗುವಿನ ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಮೃತಪಟ್ಟ ಮಗುವನ್ನು ಹಾರ್ದಿಕ್‌(7), ಗಾಯಾಳು ತಾಯಿಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಇಂದು ಅಪರಾಹ್ನ 2.45 ರ ಹೊತ್ತಿಗೆ ಸ್ವಾತಿ ತನ್ನ ಪುಟ್ಟ ಮಗನೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಸ್ಕೂಟಿಯ ಹ್ಯಾಂಡಲ್‌ ಬಸ್‌ಗೆ ತಾಗಿ ಮಗುವಿನ ಸಮೇತ ತಾಯಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಸ್‌ನ ಚಕ್ರದಡಿಗೆ ಮಗು ಸಿಲುಕಿ ಮೃತಪಟ್ಟಿದೆ. ಘಟನೆಯಲ್ಲಿ ತಾಯಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಮಂಗಳೂರು ನಗರ ಪೂರ್ವ ಟ್ರಾಫಿಕ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿಯಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರಿದೆ. ಕ್ರಮ ಸಂಖ್ಯೆ – ಕ್ಷೇತ್ರದ ಸಂಖ್ಯೆ – ಮೀಸಲು – ಅಭ್ಯರ್ಥಿ ಹೆಸರು – ವಿಧಾನಸಭಾ ಕ್ಷೇತ್ರ 2 – ಚಿಕ್ಕೋಡಿ – ಸದಲಗಾ ಗಣೇಶ ಹುಕ್ಕೇರಿ 2. 4 – ಕಾಗವಾಡ – ಭರಮಗೌಡ ಆಲಗೌಡ ಕಾಗೆ 3. 5 – ಕುಡಚಿ – ಎಸ್‌ಸಿ ಮಹೇಂದ್ರ ಕೆ.ತಮ್ಮಣ್ಣನವರ್ 4. 7…

Read More

ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 8 ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಗಾಂಜಾ ಸಹಿತ ಮಾದಕ ವಸ್ತುವನ್ನು ಪೊಲೀಸ್ ಅಧಿಕಾರಿಗಳು ಶುಕ್ರವಾರ(ಮಾ 24) ರಂದು ನಾಶ ಪಡಿಸಿದ್ದಾರೆ. ಮಾದಕ ವಸ್ತುಗಳಾದ ಗಾಂಜಾ ಒಟ್ಟು 11 ಕೆಜಿ 194 ಗ್ರಾಂ ಮತ್ತು ಎಂಡಿಎಂಎ 0.014 ಗ್ರಾಂ ಅನ್ನು ನ್ಯಾಯಾಲಯದ ಅನುಮತಿ ಪಡೆದುಕೊಂಡು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ M/s Ramky Energy and Environment Ltd ನಲ್ಲಿ ನಾಶಪಡಿಸಲಾಯಿತು. ಪೊಲೀಸ್ ಅಧಿಕಾರಿಗಳು ಈ ವೇಳೆ ಹಾಜರಿದ್ದು, ನಾಶ ಪ್ರಕ್ರಿಯೆ ನಡೆಸಿದರು. ಈ ಪ್ರಕರಣಗಳಿಗೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

Read More

ನವದೆಹಲಿ : ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಿ ಲೋಕಸಭೆ ಸಚಿವಾಲಯ ಇಂದು ಅಧಿಸೂಚನೆ ಹೊರಡಿಸಿದೆ. ಗುರುವಾರ (ಮಾರ್ಚ್ 23) ಸೂರತ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಅವರನ್ನ ದೋಷಿ ಎಂದು ಘೋಷಿಸಿದ್ದು, ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 15,000 ರೂಪಾಯಿ ದಂಡ ವಿಧಿಸಿದೆ. 2019ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಅವ್ರನ್ನ ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿದ ಒಂದು ದಿನದ ನಂತರ ಸಂಸತ್ತು ಶುಕ್ರವಾರ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದೆ. ‘ಎಲ್ಲಾ ಕಳ್ಳರು ಮೋದಿಯನ್ನ ಸಾಮಾನ್ಯ ಉಪನಾಮವಾಗಿ ಏಕೆ ಹೊಂದಿದ್ದಾರೆ?’ ಎಂದು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸಲ್ಲಿಸಿದ ದೂರಿನ ಮೇರೆಗೆ ಗುಜರಾತ್ ನ್ಯಾಯಾಲಯವು ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ 52 ವರ್ಷದ ರಾಹುಲ್ ಗಾಂಧಿ ಅವರನ್ನ ತಪ್ಪಿತಸ್ಥರೆಂದು…

Read More

ಮಂಗಳೂರು: ಸುಮಾರು 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಮಾರ್ಚ್ 23 ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತುಂಬೆ ವ್ಯಾಪ್ತಿಯ ತಲಪಾಡಿ ನಿವಾಸಿ ಅಬ್ದುಲ್ ಅಜೀಜ್ ಅಲಿಯಾಸ್ ಅಜೀಜ್ (45) ಎಂದು ಗುರುತಿಸಲಾಗಿದೆ.ಈತ ಕೇರಳ ಮತ್ತು ಕರ್ನಾಟಕದ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅಜೀಜ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಲ್ಕು, ಉಳ್ಳಾಲದಲ್ಲಿ ಮೂರು, ಬಂಟ್ವಾಳದಲ್ಲಿ ಒಂದು ಮತ್ತು ಹಾಸನದ ಅರೇಹಳ್ಳಿ ಮತ್ತು ಕೇರಳ ರಾಜ್ಯದ ಕುಟ್ಯಾಡಿಯಲ್ಲಿ ತಲಾ ಒಂದು ಪ್ರಕರಣಗಳಿವೆ.ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರ ಆದೇಶದಂತೆ ಎಸಿಪಿ ಧನ್ಯ ಎಸ್ ನಾಯಕ್ ಅವರ ಮಾರ್ಗದರ್ಶನದಲ್ಲಿಕೊಣಾಜೆ ಇನ್ಸ್ ಪೆಕ್ಟರ್ ಕೀರ್ತಿಕುಮಾರ್, ಪಿಎಸ್ ಐ ಅಶೋಕ್, ಸಿಬ್ಬಂದಿಗಳಾದ ಶಿವಕುಮಾರ್ ಮತ್ತು ಪುರುಷೋತ್ತಮ್ ಆರೋಪಿಯನ್ನು ಬಂಧಿಸಿದ್ದಾರೆ.

Read More

ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ. ಉತ್ತರ ಕ‌ನ್ನಡ ಜಿಲ್ಲೆಯ ಮಿರ್ಜಾನ್ ,ದೇವಸ್ಥಾನ ಕೇರಿಯ ಹರಿಹರ ಕೃಪಾ ನಿವಾಸಿ ರೇಷ್ಮಾ.ಆರ್.ನಾಯ್ಕ್ (23) ಎಂಬಾಕ್ಕೆ ನಾಪತ್ತೆಯಾದ ಯುವತಿಯಾಗಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನ ಬಳಿಕ ಎಲ್ಲರೂ ರೂಂ ಹೋಗಿದ್ದ ನಂತರ ರಾತ್ರಿ ಏಕಾಏಕಿ ಯುವತಿ ರೇಶ್ಮಾ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಉತ್ತರ ಕನ್ನಡದ ಕುಮಟಾದಿಂದ ರೈಲಿನ ಮೂಲಕ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಮಾ.20 ರಂದು ಕುಟುಂಬ ಸಮೇತ ಬಂದಿದ್ದು ಮಾ.21 ರಂದು ದೇವರ ದರ್ಶನ ಬಳಿಕ ಧರ್ಮಸ್ಥಳಕ್ಕೆ ಬಸ್ ಮೂಲಕ ಬಂದು ದೇವರ ದರ್ಶನ ಪಡೆದ ಬಳಿಕ ರಾತ್ರಿ 8:45 ಕ್ಕೆ ವಸತಿ ಗೃಹದಲ್ಲಿ ರೂಂ ಮಾಡಿದ್ದರು. ಈ ವೇಳೆ ಯುವತಿ ರೂಂ ನ ಹೊರಾಂಗಣದಲ್ಲಿ ಸುತ್ತಾಡುತ್ತಿದ್ದಳು, ಬಳಿಕ ಏಕಾಏಕಿ ರೇಶ್ಮಾ (23)…

Read More

ತಮಿಳುನಾಡು; ಕೋರ್ಟಿನ ಆವರಣದಲ್ಲೇ ಪತ್ನಿಯ ಮುಖದ ಮೇಲೆ ಪತಿಯೊಬ್ಬ ಆ್ಯಸಿಡ್ ಎಸೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರುನಲ್ಲಿ ನಡೆದಿದೆ. ಗುರುವಾರ ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಆ್ಯಸಿಡ್ ಎರಚಿದ್ದು, ಆಕೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಕವಿತಾ ಇಂದು ನ್ಯಾಯಾಲಯಕ್ಕೆ ಆಗಮಿಸಿದ್ದ ವೇಳೆ ಪತಿ ಶಿವಕುಮಾರ್ ಆಸಿಡ್ ಎರಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ಕಪಕ್ಕದಲ್ಲಿದ್ದ ಕೆಲವು ವಕೀಲರು ಶಿವಕುಮಾರ್ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಕವಿತಾ ಹಾಗೂ ವಕೀಲರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಯ ಹಿಂದಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ‌.

Read More

ಕಾರ್ಕಳ: ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಉಂಟಾದ ಅಗ್ನಿ ಆಕಸ್ಮಿಕಕ್ಕೆ ಇಡೀ ಕಾರ್ಖಾನೆ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷ ರೂಪಾಯಿಗೂ ಮಿಕ್ಕಿ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಅತ್ತೂರು ಚರ್ಚಿಗೆ ಸೇರಿದ್ದ ಪರ್ಪಲೆ ಗುಡ್ಡದಲ್ಲಿರುವ ಮೇಣದ ಬತ್ತಿ ತಯಾರಿಕಾ ಘಟಕದ ಇಡೀ ಕಟ್ಟಡ, ಯಂತ್ರೋಪಕರಣಗಳು ಹಾಗೂ ಮೇಣದ ಬತ್ತಿ ತಯಾರಿಕೆಗೆ ದಾಸ್ತಾನು ಇರಿಸಲಾಗಿದ್ದ ಅಪಾರ ಪ್ರಮಾಣದ ಮೇಣ ಹಾಗೂ ಉತ್ಪಾದನೆಯಾಗಿದ್ದ ಮೇಣದ ಬತ್ತಿಗಳು ಬೆಂಕಿಯ ಕೆನ್ನಾಲಗೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಸಾಯಂಕಾಲ ಏಕಾಎಕಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಘಟಕವನ್ನು ವ್ಯಾಪಿಸಿದೆ. ತಕ್ಷಣವೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಎರಡು ಅಗ್ನಿಶಾಮಕ ದಳದ ವಾಹನಗಳು ಘಟನಾಸ್ಥಳಕ್ಕೆ ಬಂದರೂ ಬೆಂಕಿ ಬಹುತೇಕ ಘಟಕವನ್ನು ವ್ಯಾಪಿಸಿದ ಹಿನ್ನಲೆಯಲ್ಲಿ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ.

Read More