ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶೇಷಾದ್ರಿಪುರ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಚೇತನ್ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎನ್ನುವ ಆರೋಪ ಬಂತು. ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಸದ್ಯ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಹಿಂದೂಪರ ಸಂಘಟನೆಗಳು ಚೇತನ್ ವಿರುದ್ಧ ದೂರು ನೀಡಿದ್ದವು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
Author: main-admin
ಮಂಗಳೂರು: ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ರೈಲುಗಾಡಿಯ ಡಿ3 ಬೋಗಿಯ ಶೌಚಾಲಯದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಭಾನುವಾರ ಪತ್ತೆಯಾಗಿದೆ. ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದಾರೆ. ಸಿಮೆಂಟ್ ಬಣ್ಣದ ಜರ್ಸಿ, ಕೇಸರಿ ಬಣ್ಣದ ಟಿ-ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಅದರೊಳಗೆ ಕಪ್ಪು ಬಣ್ಣದ ಮಾಸಲು ಪ್ಯಾಂಟ್ ಧರಿಸಿದ್ದು, ಕುತ್ತಿಗೆಯಲ್ಲಿ ಮಣಿ ಸರವಿದೆ. ಈ ಕುರಿತು ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಸುದಾರರು ಇದ್ದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
ಮಂಗಳೂರು: ಚಿತ್ರ ನಟ ಹಾಗೂ ರಂಗಕರ್ಮಿ ನವೀನ್ ಡಿ ಪಡೀಲ್ ಅವರ ತಾಯಿ ಸೇಸಮ್ಮ ಕೋಟ್ಯಾನ್ (80) ನಗರದ ಆಸ್ಪತ್ರೆಯೊಂದರಲ್ಲಿ ಭಾನುವಾರ ನಿಧನರಾದರು. ಅವರು ನವೀನ್ ಡಿ.ಪಡೀಲ್ ಅವರ ಪಡೀಲ್‌ನ ಮನೆಯಲ್ಲೇ ವಾಸವಿದ್ದರು. ಅವರಿಗೆ ನಾಲ್ಕು ವರ್ಷಗಳ ಹಿಂದೆ ಅಪಘಾತದಲ್ಲಿ ಮೂಳೆ ಮುರಿತಕ್ಕೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ಬಳಿಕ ಅವರ ಆರೋಗ್ಯ ಸುಧಾರಿಸಿತ್ತು. ಎರಡು ತಿಂಗಳಿಂದ ಅವರ ಆರೋಗ್ಯ ಮತ್ತೆ ಹದಗೆಟ್ಟಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಇಬ್ಬರು ಪುತ್ರರು ಹಾಗೂ ಒಬ್ಬ ಮಗಳು ಇದ್ದಾರೆ.
ಬೆಳಗಾವಿ : ವಿಧಾನಸಭೆ ಚುನಾವಣೆ ಹೊತ್ತಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಯುವ ಸಮಾವೇಶ ನಡೆಸುತ್ತಿದ್ದು, ಕಾಂಗ್ರೆಸ್ 4 ನೇ ಗ್ಯಾರೆಂಟಿ ಘೋಷಿಸಿದೆ. ಪದವೀಧರರಿಗೆ ಮಾಸಿಕ 3 ಸಾವಿರ ಹಣ, ಡಿಪ್ಲೋಮಾ ಪದವೀಧರರಿಗೆ ಮಾಸಿಕ 1500 ರೂ ನಿರುದ್ಯೋಗ ಭತ್ಯೆ ನೀಡುತ್ತೇವೆ ಎಂದು ರಾಹುಲ್ ಗಾಂಧಿ ಘೋಷಣೆ ಘೋಷಿಸಿದರು. ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಸಮಾವೇಶ ನಡೆಸುತ್ತಿದ್ದು, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತಿತರರಿದ್ದಾರೆ. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಯುವ ಕ್ರಾಂತಿ ಸಮಾವೇಶ ನಡೆಯುತ್ತಿದೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ರಾಜ್ಯಕ್ಕೆ ಭೇಟಿ ಭೇಟಿ ನೀಡಿದ್ದು, ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಯುವ ಕ್ರಾಂತಿ ಸಮಾವೇಶ ಆಯೋಜನೆಗೊಂಡಿದ್ದು, ಇದನ್ನು ರಾಹುಲ್ ಗಾಂಧಿ ಉದ್ಘಾಟಿಸಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯುವ ಕ್ರಾಂತಿ ಸಮಾವೇಶಕ್ಕಾಗಿ ಬೆಳಗಾವಿ ನಗರದ ಸಿಪಿ ಇಡ್ ಮೈದಾನದಲ್ಲಿ ಬೃಹತ್…
ಪ್ರಾಣಿಗಳ ಮೇಲೆ ಕ್ರೌರ್ಯ ಮೆರೆಯುವ ಹೃದಯ ವಿದ್ರಾವಕ ಘಟನೆಯೊಂದರಲ್ಲಿ, ನಾಯಿಯೊಂದನ್ನು ಬೈಕಿಗೆ ಕಟ್ಟಿಕೊಂಡು ಅದನ್ನು ಒಂದು ಕಿಮೀ ದೂರ ಎಳೆದೊಯ್ದ ಘಟನೆ ಘಾಜ಼ಿಯಾಬಾದ್‌ನಲ್ಲಿ ಜರುಗಿದೆ. ಭಾನುವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದೆ. ಇಲ್ಲಿನ ಪ್ರತಾಪ್ ವಿಹಾರದಲ್ಲಿ ಈ ಅಮಾನುಷ ಘಟನೆ ಸಂಭವಿಸಿದ್ದು, ಪ್ರತ್ಯಕ್ಷದರ್ಶಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಸುರ್ಭಿ ರಾವತ್ ಹಾಗೂ ಪತ್ರಕರ್ತ ಸುನೀಲ್ ಗೌತಮ್ ಈ ವಿಡಿಯೋ ಶೇರ್ ಮಾಡಿದ್ದಾರೆ. ಈ ನಿರ್ದಯಿ ಮನುಷ್ಯನಿಂದ ನಾಯಿಯನ್ನು ರಕ್ಷಿಸಲು ಮುಂದಾದ ಸುತ್ತಲಿನ ಜನತೆ, ನಾಯಿಯನ್ನು ಬೈಕ್‌ನಿಂದ ಬಿಡಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಐಪಿಸಿಯ 429ನೇ ವಿಧಿ (ಜಾನುವಾರುಗಳಿಗೆ ಚಿತ್ರಹಿಂಸೆ ಕೊಡುವುದು ಅಥವಾ ಕೊಲ್ಲುವುದು) ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನಾಯಿಯನ್ನು ವೈದ್ಯಕೀಯ ಶುಶ್ರೂಷೆ ನೀಡಲು ಕಳುಹಿಸಿದ್ದಾರೆ.
ಉಡುಪಿ : ಉಡುಪಿ ಸಮೀಪದ ಉದ್ಯಾವರ ಮಠದಕುದ್ರುವಿನ ಪಾಪನಾಶಿನಿ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಅದಮಾರು ಮಠದ ಸ್ವಾಮೀಜಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸ್ಥಳೀಯ ನಿವಾಸಿ ಭಾಸ್ಕರ್ ಕರ್ಕೇರಾ ಎಂಬವರ ಸ್ಕೂಟರ್‌ನ್ನು ದುಷ್ಕರ್ಮಿಗಳು ಹಾನಿಗೈದಿದ್ದಾರೆ. ಅದಮಾರು ಸ್ವಾಮೀಜಿ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಸುದ್ದಿಗೋಷ್ಠಿ ಕರೆದು ಅಕ್ರಮ ಮರಳು ಮಾಫಿಯದ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಈ ಸಂದರ್ಭದಲ್ಲಿ ಹಾಜರಿದ್ದ ಭಾಸ್ಕರ್ ಕರ್ಕೇರ ಎಂಬವರು ತಮ್ಮ ಮನೆಯ ಸಮೀಪ ನಿಲ್ಲಿಸಿದ್ದ ಸ್ಕೂಟರನ್ನು ದುಷ್ಕರ್ಮಿಗಳು ಅದೇ ದಿನ ರಾತ್ರಿ ಹಾನಿಗೊಳಿಸಿದ್ದಾರೆ.ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಟ್ಟು ನಿಟ್ಟಿನಲ್ಲಿ ಇಡಲು ಹಾಗೂ ಸಮಾಜಘಾತುಕ ಶಕ್ತಿಗಳ ವಿರುದ್ದ ಹದ್ದಿನಕಣ್ಣು ಇಡಲು ಉಡುಪಿ ಪೊಲೀಸರು ಆಪರೇಷನ್ ಸನ್ ಸೆಟ್ ಎಂಬ ವಿಶೇಷ ಅಭಿಯಾನ ಪ್ರಾರಂಭಿಸಿದ್ದಾರೆ.ಅದರಂತೆ ಉಡುಪಿ ಜಿಲ್ಲಾ ಪೊಲೀಸರು ಮಾರ್ಚ್ 17 ರ ಶನಿವಾರ ಸಂಜೆ 7ರಿಂದ 11ರವರೆಗೆ ಜಿಲ್ಲೆಯಾದ್ಯಂತ ‘ ಆಪರೇಷನ್ ಸನ್‌ಸೆಟ್ ’ ವಿಶೇಷ ಅಭಿಯಾನ ನಡೆಸಿದರು. ಇದರ ಅಂಗವಾಗಿ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡಗಳನ್ನು ರಚಿಸಿ ಜಿಲ್ಲೆಯ ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಮಾಡಿ ವಾಹನಗಳನ್ನು ಕೂಲಂಕುಷವಾಗಿ ತಪಾಸಣೆ ನಡೆಸಲಾಯಿತು. ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯಿದೆಯಡಿಯಲ್ಲಿ ಇಲಾಖೆಯು ಪ್ರಕರಣಗಳನ್ನು ದಾಖಲಿಸಿದ್ದಾರೆ. ಮತ್ತು ಹಠಾತ್ ತಪಾಸಣೆಯಿಂದಾಗಿ ಗಾಂಜಾ ಹಾಗೂ ಸಣ್ಣ ಪ್ರಮಾಣ ಡ್ರಗ್ಸ್ MDMA ಹೊಂದಿದ್ದ ಮೂವರು ಬಂಧಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ 45 ಲೀಟರ್ ಮದ್ಯ ಸಾಗಿಸುತ್ತಿದ್ದ ಮತ್ತೊಂದು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ಗಳ ಸಹಾಯದಿಂದ ಪೊಲೀಸರು…
ಕೊಣಾಜೆ:ಯುವಕನೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು.ಹರೀಶ್ ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿ ಯುವತಿಯನ್ನು ವಿವಾಹವಾಗಿದ್ದರು. ಮಾ.12ರಂದು ಹರೀಶ್ ತನ್ನ ಸಂಬಂದಿ ಕೊಣಾಜೆ ಮುಚ್ಚಿಲಕೋಡಿ ನಿವಾಸಿ ರಮೇಶ್ ಶೆಟ್ಟಿಗಾರ್ ಎಂಬವರಿಗೆ ಕರೆ ಮಾಡಿ ತನ್ನ ಬ್ಯಾಗಿನಲ್ಲಿ ಭಸ್ಮ ದೊರೆತಿದ್ದು, ವಾಮಾಚಾರ ಮಾಡಿದ್ದಾರೆ ಎಂದು ಹೇಳಿದ್ದರು.ಇದಕ್ಕೆ ಸಹೋದರ ರಮೇಶ್ ಮಾ.19ರಂದು ಮನೆಗೆ ಬಾ ಮಾತನಾಡುವ ಎಂದು ಹೇಳಿದ್ದರಂತೆ. ಅದರಂತೆ ಹರೀಶ್ ಅವರು ಮನೆಗೆ ಬರುವಾಗ ಕೈಯಲ್ಲಿ ಪೆಟ್ರೋಲ್ ನ್ನು ಕ್ಯಾನಿನಲ್ಲಿ ಹಿಡಿದುಕೊಂಡು ಬಂದಿದ್ದಾರೆ. ಮಾತುಕತೆ ಆರಂಭವಾಗುವ ಮುನ್ನವೇ ಅಂಗಳದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಮಾಡಲಾಗಿತ್ತು. ಕನ್ನಡ ಪ್ರೇಕ್ಷಕರು ಚಿತ್ರವನ್ನು ಅಪ್ಪಿಕೊಂಡು, ಹಾಡಿಹೊಗಳಿದ ಬಳಿಕ ಬೇರೆ ಬೇರೆ ಭಾಷೆಯ ಪ್ರೇಕ್ಷರಿಂದ ಬೇಡಿಕೆ ಹೆಚ್ಚಾಯಿತು. ಬಳಿಕ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್ ಮಾಡಿ ರಿಲೀಸ್ ಮಾಡಲಾಯಿತು. ಎಲ್ಲಾ ಭಾಷೆಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದಲ್ಲದೆ ಭರ್ಜರಿ ಕಲೆಕ್ಷನ್ ಕೂಡ ಆಯಿತು. ಒಟಿಟಿ ಪ್ರೇಕ್ಷಕರಿಗಾಗಿ ಇಂಗ್ಲಿಷ್ ವರ್ಷನ್ ಕೂಡ ರಿಲೀಸ್ ಆಯಿತು. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇಟಾಲಿಯನ್ ಮತ್ತು ಸ್ಪ್ಯಾನಿಶ್ ಭಾಷೆಗಳಿಗೆ ಡಬ್ ಆಗುತ್ತಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬಹಿರಂಗ ಪಡಿಸಿದೆ. ‘ಈ ವಿಷಯ ತಿಳಿಸಲು ನಮಗೆ ತುಂಬಾ ಖುಷಿಯಾಗಿದೆ. ಅಂತಾರಾಷ್ಟ್ರೀಯ ಪ್ರೇಕ್ಷಕರಿಂದ ಬೇಡಿಕೆ ಬಂದಿರುವುದಕ್ಕೆ ಧನ್ಯವಾದಗಳು. ಇಟಾಲಿಯನ್ ಮತ್ತು ಸ್ಪ್ಯಾನಿಶ್ ಭಾಷೆಯಲ್ಲಿ ಕಾಂತಾರ ಚಿತ್ರವನ್ನು ಎಡಿಟ್ ಮಾಡಲಾಗುತ್ತಿದೆ’ ಎಂದು ಇಟಾಲಿಯನ್ ಭಾಷೆಯಲ್ಲಿ ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ. ಹೊಂಬಾಳೆ…
ಮಧ್ಯಾಹ್ನದ ಅಡುಗೆಗೆ ಏನು ಮಾಡುವುದು ಎಂಬ ಚಿಂತೆಯಲ್ಲಿದ್ದೀರಾ.? ಮನೆಯಲ್ಲಿ ತರಕಾರಿ ಇಲ್ಲದೇ ಇದ್ದಾಗ ಅಥವಾ ಸಾಂಬಾರು ತಿನ್ನುವುದಕ್ಕೆ ಬೇಜಾರು ಅನಿಸಿದಾಗ ನೆಲ್ಲಿಕಾಯಿ ಬಳಸಿ ಮಾಡಿ ಈ ತಂಬುಳಿ. ಮೊದಲಿಗೆ 3 ನೆಲ್ಲಿಕಾಯಿಯನ್ನು ಚೆನ್ನಾಗಿ ತೊಳೆದು ಅದರ ಬೀಜ ತೆಗೆದು ಕತ್ತರಿಸಿಕೊಳ್ಳಿ. ನಂತರ ¼ ಸ್ಪೂನ್ ಎಣ್ಣೆಯನ್ನು ಒಂದು ಚಿಕ್ಕ ಪ್ಯಾನ್ ಗೆ ಹಾಕಿಕೊಂಡು ಅದಕ್ಕೆ 1/4 ಟೀ ಸ್ಪೂನ್ ಜೀರಿಗೆ ಹಾಕಿ ನಂತರ 1 ಹಸಿಮೆಣಸು ಕತ್ತರಿಸಿ ಹಾಕಿ ಫ್ರೈ ಮಾಡಿ. ಇದು ತಣ್ಣಗಾದ ಮೇಲೆ ಇದನ್ನು ಮಿಕ್ಸಿ ಜಾರಿಗೆ ಹಾಕಿ ಇದಕ್ಕೆ 2 ಟೇಬಲ್ ಸ್ಪೂನ್ ತೆಂಗಿನಕಾಯಿ ತುರಿ ಸೇರಿಸಿ ತುಸು ನೀರು ಹಾಕಿ ರುಬ್ಬಿಕೊಳ್ಳಿ. ನಂತರ ಇದನ್ನು ಒಂದು ಬೌಲ್ ಗೆ ಹಾಕಿ ಇದಕ್ಕೆ 1 ಕಪ್ ಮೊಸರು ಸೇರಿಸಿ ರುಚಿಗೆ ತಕ್ಕಷ್ಟು ಉಪ್ಪು ಬೆರೆಸಿ ಮಿಕ್ಸ್ ಮಾಡಿದರೆ ರುಚಿಯಾದ ತಂಬುಳಿ ಸವಿಯಲು ಸಿದ್ಧ.










