Author: main-admin

ಮಂಗಳೂರು : ಗಾಂಜಾ ನಶೆ ಏರಿಸಿಕೊಂಡಿದ್ದ ಯುವಕನೊಬ್ಬ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ದಾಂಧಲೆ ನಡೆಸಿದ್ದು, ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನ್ನು ಸಿನಿಮೀಯ ರೀತಿಯಲ್ಲಿ ಹಿಡಿದು ಜೈಲಿಗಟ್ಟಿದ್ದಾರೆ. ಬಂಧಿತನನ್ನು ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್ ಎಂದು ಗುರುತಿಸಲಾಗಿದೆ. ಈತ ನಾಟೆಕಲ್ ಜಂಕ್ಷನ್ ನಲ್ಲಿ ನಶೆಯಲ್ಲಿ ರಸ್ತೆ ಮಧ್ಯದ ಡಿವೈಡರ್ ನಲ್ಲಿ ಕಲ್ಲು ಮತ್ತು ಚೂರಿ ಹಿಡಿದು ಧಾಂದಲೆ ನಡೆಸುತ್ತಿದ್ದ. ಈ ವೇಳೆ ಯಾರೋ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಕೊಣಾಜೆ ಮತ್ತು ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮೀಯ ರೀತಿಯಲ್ಲಿ ಸಿದ್ಧೀಕನ್ನ ಲಾಕ್ ಮಾಡಿ ಪೊಲೀಸ್ ವಾಹನಕ್ಕೆ ತಳ್ಳಿದ್ದಾರೆ. ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಮಾಜಿ ಯೋಧ ಸಂತೋಷ್ ಎಂಬವರು ಚಾಣಾಕ್ಷತನದಿಂದ ಸಿದ್ಧೀಕನ್ನ ಲಾಕ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯನ್ನ ಯಾರೋ ಮೊಬೈಲಲ್ಲಿ ರೆಕಾರ್ಡ್ ಮಾಡಿದ್ದು ವೀಡಿಯೋ ತುಣುಕು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಬ್ಬೂಬಕ್ಕರ್ ಸಿದ್ಧೀಕ್ ನನ್ನು…

Read More

ಮಂಗಳೂರು: ನಗರ ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯಲ್ಲಿ ದನಗಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ತಾಲೂಕಿನ 30 ವರ್ಷದ ಇರ್ಫಾನ್ ಮತ್ತು ಬಂಟ್ವಾಳ ತಾಲೂಕಿನ 32 ವರ್ಷದ ಮೊಹಮ್ಮದ್ ಆರಿಫ್ ಎಂಬವರನ್ನು ಬಂಧಿಸಿದ್ದಾರೆ. ಆಗಸ್ಟ್ 14 ರಂದು ಈ ಕಳ್ಳತನ ಪ್ರಕರಣ ನಡೆದಿದೆ. ಕಳ್ಳತನ ಮಾಡಿದ ಮೂರು ದನಗಳ ವಿರುದ್ಧ ಗೋಹತ್ಯಾ ನಿಷೇಧ ಕಾಯ್ದೆಯಂತೆ ದಾಖಲಾದ ದೂರಿನಂತೆ ಬಜಪೆ ಪೊಲೀಸರು ಶನಿವಾರದಂದು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 5 ಲಕ್ಷರೂಪಾಯಿ ಮೌಲ್ಯದ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.ಬಜಪೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Read More

ಮಂಗಳೂರು : ವೆನ್ಲಾಕ್ ಆಸ್ಪತ್ರೆಯಿಂದ ಚಿಕಿತ್ಸೆಯಲ್ಲಿದ್ದ ವೇಳೆ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಸಜೀವನಡು ನಿವಾಸಿ ಎಸ್.ಎಮ್ ನೌಫಾಲ್(32) ಬಂಧಿತ ಆರೋಪಿ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎನ್‌ಡಿಪಿಎಸ್ ಪುಕರಣಕ್ಕೆ ಸಂಬಂಧಿಸಿದಂತೆ ಎಸ್.ಎಮ್ ನೌಫಾಲ್ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದನು. ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಈತನನ್ನು ಪೊಲೀಸ್ ಭದ್ರತೆಯಲ್ಲಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನೌಫಾಲ್ ಆಗಸ್ಟ್ 16ರಂದು 5.06ಕ್ಕೆ ವೆನ್ಲಾಕ್ ಆಸ್ಪತ್ರೆಯಿಂದ ಪೊಲೀಸ್ ಭದ್ರತೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು. ಈ ಬಗ್ಗೆ ಆರೋಪಿಯ ಗಾರ್ಡ್ ಕರ್ತವ್ಯದಲ್ಲಿದ್ದ ಸಚಿನ್ ಕೆ.ಎಸ್ ನೀಡಿದ ದೂರಿನಂತೆ ಮಂಗಳೂರು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಸ್ಟ್ 19ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪಿ.ಎಸ್.ಐ ಮನೋಹರ್ ಪ್ರಸಾದ್‌ ಹಾಗೂ ಸಿಬ್ಬಂದಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

Read More

ಮಂಗಳೂರು : ನಗರದ ಜಪ್ಪು ಕಿಂಗ್ಸ್ ಗಾರ್ಡನ್ ಬಳಿಯ ಜಪ್ಪು ಮಜಿಲ ರಸ್ತೆಯಲ್ಲಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಬಿಕಾಂ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಡ್ರೈವರ್ ಆಗಿ ವೃತ್ತಿ ನಿರ್ವಹಿಸುತ್ತಿರುವ ತಲಪಾಡಿ ನಿವಾಸಿ ಅಬ್ದುಲ್ ರವೂಫ್(30) ಕೇರಳ ರಾಜ್ಯದ ಕಣ್ಣೂರು ನಿವಾಸಿ, ಕೂಳೂರು ಯೇನೆಪೋಯಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ ಉಬೈದ್ ಕುಲುಮಾನ್(21) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ, ಚಿಕನ್ ಶಾಪ್ ಉದ್ಯೋಗಿ ಮೊಹಮ್ಮದ್ ಇರ್ಷಾದ್(21) ಬಂಧಿತ ಆರೋಪಿಗಳು. ಆಗಸ್ಟ್ 18 ರಂದು ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿ ಮಂಗಳೂರು ನಗರದ ಜೆಪ್ಪು ಕಿಂಗ್ಸ್ ಗಾರ್ಡನ್ ಬಳಿ ಜೆಪ್ಪು ಮಜಿಲ ರಸ್ತೆ ಬದಿಯಲ್ಲಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 13,750 ರೂ. ಮೌಲ್ಯದ ಒಟ್ಟು 5.071 ಗ್ರಾಂ ಎಂದಿಎಂಎ ಮಾದಕದ್ರವ್ಯ, 1500 ರೂ‌.‌ ನಗದು ಹಣ, ತೂಕ ಮಾಪನ, ಮೊಬೈಲ್ ಫೋನ್ ಹಾಗೂ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ…

Read More

ಮೈಸೂರು : ಎರಡನೇ ತರಗತಿಯ ಶಾಲಾ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಿಸಲು ಯತ್ನ ನಡೆಸಿ ವಿಫಲರಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ. ನಿನ್ನೆ ಶೌಚಾಲಯಕ್ಕೆ ಕೇಳಿದ ವೇಳೆ ಇಬ್ಬರು ಅಪರಿಚಿತರಿಂದ ಈ ಅಪಹರಣ ಘಟನೆ ನಡೆದಿದ್ದು ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದ್ದಾರೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯನ್ನು ಅಲ್ಲೇ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆಶಾಲೆ ಮುಖ್ಯ ಶಿಕ್ಷಕರಿಂದ ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದೆ. ಅಲ್ಲದೆ ಕಳೆದ ತಿಂಗಳು ಬೆಳಗಾವಿಯಲ್ಲಿ ಕೂಡ ಇದೇ ತರಹದ ಘಟನೆ ನಡೆದಿದ್ದು ಫ್ಲೈ ಓವರ್ ಮೇಲೆ ಶಾಲಾ ವಿದ್ಯಾರ್ಥಿನಿ ಒಬ್ಬಳು ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ವ್ಯಕ್ತಿ ಒಬ್ಬ ವಿದ್ಯಾರ್ಥಿಯನ್ನು ಹಗಲ ಮೇಲೆ ಹೊತ್ತುಕೊಂಡು ಅಪರಿಸಿಕೊಂಡು ಹೋಗುತ್ತಿರುವಾಗ ವಿದ್ಯಾರ್ಥಿನಿಯು ಜೋರಾಗಿ ಕಿರುಚಾಡಿದ್ದಾಳೆ. ಈ ವೇಳೆ ಅಲ್ಲಿ ಸುತ್ತಮುತ್ತ ಇದ್ದ ಸ್ಥಳೀಯರು ವಿದ್ಯಾರ್ಥಿನಿಯ ಕಿರುಚಾಟಕ್ಕೆ ಆಗಮಿಸಿದಾಗ ವಿದ್ಯಾರ್ಥಿಯನ್ನು ಬಿಟ್ಟು ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ. ನಂತರ ಪೊಲೀಸರು ಶೋಧ…

Read More

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಮಂಗಳೂರು ‌ನಗರ ಪೊಲೀಸರು ಬಂಧಿಸಿದ್ದಾರೆ. ಅದೇ ರೀತಿ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬಾಳೆಪುಣಿಯ ಮುಡಿಪು ಚರ್ಚ್ ಬಳಿಯ ನಿವಾಸಿ ಮೊಹಮ್ಮದ್ ರಫೀಕ್ ಯಾನೆ ಮುಡಿಪು ರಫೀಕ್, ಮಂಗಳೂರಿನ ಮನ್ನೂರು ಗ್ರಾಮದ ಮದನಿನಗರದ ಅಬ್ದುಲ್ ರಾಝೀಕ್ ಬಂಧಿತರು. ಮೊಹಮ್ಮದ್ ರಫೀಕ್ ಯಾನೆ ಮುಡಿಪು ರಫೀಕ್ ನನ್ನು ಬಂಧಿಸಿ ಮುಂದಿನ ಕ್ರಮಕ್ಕಾಗಿ ಮಹಿಳಾ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಈತ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಾಗೂ ಕೇರಳದ ತಲಶ್ಶೇರಿ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಈತನನ್ನು ಬೆಂಗಳೂರಿನ ಹೊಸಕೋಟೆಯಿಂದ ವಶಪಡಿಸಿಕೊಳ್ಳಲಾಗಿದೆ. ಮಂಗಳೂರಿನ ಮುನ್ನೂರು ಗ್ರಾಮದ ಮದನಿನಗರದ ಅಬ್ದುಲ್ ರಾಝೀಕ್ ಎನ್ ಡಿಪಿಎಸ್ ಕಾಯ್ದೆಯಲ್ಲಿ ಬಂಧನಕ್ಕೊಳಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

Read More

ಮಂಗಳೂರು :ಉರ್ವಾ ಮೈದಾನದ ಬಳಿಯಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉರ್ವಾ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಮಂಗಳೂರಿನ ಚಿಲಿಂಬಿ ನಿವಾಸಿ ಗೋಕುಲ್‌ದಾಸ್ ಶೆಣೈ (55) ಹಾಗೂ ಕೋಡಿಕಲ್ ನಿವಾಸಿ ದೀಪಕ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳು ನಗರದ ಉರ್ವ ಮೈದಾನದ ಬಳಿಯ ಪಾಲಿಕೆ ಕಟ್ಟಡದ ಮುಂಭಾಗದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದರು. ಆರೋಪಿಗಳಿಂದ ನಗದು, ಮಟ್ಕಾ ಚೀಟಿಗಳು, ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ಮಟ್ಕಾಕ್ಕೆ ಸಂಬಂಧಿಸಿದ ₹ 4,24,490 ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

Read More

ಸುಳ್ಯ : ಲಂಚ ಸ್ವೀಕಾರ ಮಾಡುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಸುಳ್ಯದ ಸಂಪಾಜೆ- ಅರಂತೋಡಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಬಂಧಿಸಿದ್ದಾರೆ. ಅರಂತೋಡಿನ ವ್ಯಕ್ತಿಯೊಬ್ಬರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಡತ ವಿಲೇವಾರಿಗಾಗಿ ಲೆಕ್ಕಾಧಿಕಾರಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಇಂದು ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೋಲಿಸರ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಸುಳ್ಯ ತಾಲೂಕು ಕಚೇರಿಯಲ್ಲಿ ಇದೀಗ ಗ್ರಾಮ ಲೆಕ್ಕಾಧಿಕಾರಿಯ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಎಷ್ಟು ಹಣ ತೆಗೆದುಕೊಂಡಿದ್ದಾರೆ ಅನ್ನುವುದು ಇನ್ನೂ ಗೊತ್ತಾಗಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಈ ಮೂಲಕ ಲಂಚ ಭ್ರಷ್ಟಾಚಾರ ಸುಳ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅನ್ನುವುದು ಸಾಬೀತಾದಂತಾಗಿದೆ. ಎಸ್ಪಿ ಸೈಮನ್, ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Read More

ಬೆಂಗಳೂರು: ಇನ್ನುಂದ ವಾಹನ ಚಾಲನಾ ಅನುಜ್ಞಾ ಪತ್ರ (ಡಿಎಲ್), ವಾಹನ ನೋಂದಣಿ ಪ್ರಮಾಣಪತ್ರ (ಆರ್ ಸಿ) ಸ್ಟಾರ್ಟ್‌ ಕಾರ್ಡ್‌ಗಳು ಅರ್ಜಿದಾರರ ಮನೆಬಾಗಿಲಿಗೆ ತಲುಪಿಸುವುದಕ್ಕೆ ರಾಜ್ಯ ಸಾರಿಗೆ ಇಲಾಖೆ ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಾರಿಗೆ ಇಲಾಖೆ ಸಚಿವ ಆರ್‌ ರಾಮಲಿಂಗರೆಡ್ಡಿಯವರು ಈ ಸಂಬಂಧ ಸಾರಿಗೆ ಇಲಾಖೆ ಮತ್ತು ಅಂಚೆ ಇಲಾಖೆ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದ್ದು, ಇದಕ್ಕೆ ಸರಕಾರ ಶುಕ್ರವಾರ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ನಿತ್ಯ ಮುದ್ರಿತವಾಗುವ ಡೈವಿಂಗ್ ಲೈಸೆನ್ಸ್ ಮತ್ತು ವಾಹನ ನೋಂದಣಿ ಪ್ರಮಾಣಪತ್ರ ಸ್ಟಾರ್ಟ್ ಕಾರ್ಡ್‌ಗಳನ್ನು ಸೂಚನಾ ಪತ್ರದೊಂದಿಗೆ ಲಗತ್ತಿಸಿ ಸ್ಪೀಡ್‌ ಪೋಸ್ಟ್ ಮೂಲಕ ಅರ್ಜಿದಾರರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ, ಸಾರಿಗೆ ಇಲಾಖೆ ಕಚೇರಿಯಲ್ಲಿ ಶುಕ್ರವಾರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಮ್ಮುಖದಲ್ಲಿ ಸಾರಿಗೆ ಮತ್ತು ಅಂಚೆ ಇಲಾಖೆ ಅಧಿಕಾರಿಗಳು ಈ ಸಂಬಂಧದ ಒಡಂಬಡಿಕೆಗೆ ಸಹಿ ಹಾಕಿದರು. ಇದಲ್ಲದೇ ಸಾರ್ವಜನಿಕರು ಆನ್‌ ಲೈನ್ ಆನ್‌ಲೈನ್ ಮೂಲಕ ದಾಖಲಾತಿಗಳ ಮಾಹಿತಿ ವೀಕ್ಷಿಸಬಹುದಾಗಿದೆ.

Read More

ಮಂಗಳೂರು: ಸುಮಾರು 11 ವರ್ಷಗಳ ಹಿಂದೆ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ನ್ಯಾಯಕ್ಕಾಗಿ ಹೋರಾಡುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗಾಗಿ ರಾಜ್ಯ ಸರಕಾರವು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ. ಮಹೇಶ್ ಶೆಟ್ಟಿ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಸರಕಾರದ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ. ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದ ವಸಂತ ಬಂಗೇರ ಮಹೇಶ್ ಶೆಟ್ಟಿ ಅವರಿಗೆ ಇಬ್ಬರು ಗನ್ ಮ್ಯಾನ್ ಒದಗಿಸುವಂತೆ ಮನವಿ ಮಾಡಿದ್ದರು. ಇದೀಗ ಪರಮೇಶ್ವರ್ ದಕ್ಷಿಣ ಕನ್ನಡ ಎಸ್.ಪಿ. ರಿಷ್ಯಂತ್ ಅವರಿಗೆ ಸೂಚನೆ ನೀಡಿ ಗನ್ ಮ್ಯಾನ್ ಒದಗಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಕಳೆದ ತಿಂಗಳು ಎಸ್.ಪಿ.ಗೆ ಮನವಿ ನೀಡಿದ್ದ ಮಹೇಶ್ ಶೆಟ್ಟಿ ಗನ್ ಮ್ಯಾನ್ ಒದಗಿಸುವಂತೆ ಕೇಳಿಕೊಂಡಿದ್ದರು. ಆದರೆ ಯಾವುದೇ ಜೀವ ಬೆದರಿಕೆ ಕರೆ ಇಲ್ಲವೆಂದು ಗುಪ್ತಚರ ಇಲಾಖೆ ವರದಿ ನೀಡಿದ ಹಿನ್ನಲೆಯಲ್ಲಿ ಅಂದಿನ…

Read More