ಕಲ್ಲಡ್ಕ; ರೈಲಿನಡಿಗೆ ಬಿದ್ದು ಯುವಕ ಮೃತಪಟ್ಟ ಘಟನೆ ಗೋಳ್ತಮಜಲು ಬಳಿ ರೈಲ್ವೇ ಹಳಿಯಲ್ಲಿ ನಡೆದಿದೆ. ಮಾಣಿ ಮಜಲು ನಿವಾಸಿ ಅರ್ಜುನ್((26)ಮೃತ ದುರ್ದೈವಿ.ಇಂದು ಬೆಳಿಗ್ಗೆ ಘಟನೆ ನಡೆದಿದೆ.ಇದು ಅಪಘಾತವೋ ಆತ್ಮಹತ್ಯೆಯೋ ಎಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Author: main-admin
ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೋಲ್ಪೆ ಬಂಗಾರಕೋಡಿ ನಿವಾಸಿ ವೀರಪ್ಪ ಗೌಡ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೃಷಿಕರಾಗಿರುವ ಇವರು ಸಾಲಭಾದೆಯಿಂದ ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತರು ಇಬ್ಬರು ಪುತ್ರರಾದ ಮುರಳಿ ಮತ್ತು ತೇಜಸ್ ಅವರನ್ನು ಅಗಲಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಉಡುಪಿ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24ಕ್ಕೂ ಅಧಿಕ ಸಂಖ್ಯೆಯ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಉಡುಪಿ ಪೊಲೀಸರು ಅವರನ್ನು ನ್ಯಾಯಾಲಯಗಳಿಗೆ ಹಾಜರು ಪಡಿಸಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಹಚ್ಚಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೇಂದ್ರ ಹಾಕೆ ಅವರು ವಿಶೇಷ ತಂಡಗಳನ್ನು ರಚಿಸಿದ್ದು, ಈ ತಂಡಗಳು ಸುಮಾರು 15 ದಿನಗಳಲ್ಲಿ ಹೊರ ಜಿಲ್ಲೆ ಹಾಗೂ ಹೊರರಾಜ್ಯಗಳಲ್ಲಿ ಸಂಚರಿಸಿ ಒಟ್ಟು 24ಕ್ಕೂ ಅಧಿಕ ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಎಸ್ಪಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪೈಕಿ ಭಾರತ-ನೇಪಾಳ ಗಡಿ ಪ್ರದೇಶದಲ್ಲಿ ಒಬ್ಬ, ಮಧ್ಯಪ್ರದೇಶದಲ್ಲಿ ಒಬ್ಬ, ಕೇರಳ-3, ಹೊರಜಿಲ್ಲೆಗಳಲ್ಲಿ-4 ಹಾಗೂ ಉಳಿದವರನ್ನು ಜಿಲ್ಲೆಯಲ್ಲಿ ಪತ್ತೆ ಹಚ್ಚಲಾಗಿದೆ. ಇವರಲ್ಲಿ 12 ವರ್ಷಗಳಿಂದ ತಲೆಮರೆಸಿಕೊಂಡವರು-2, 10 ವರ್ಷಗಳಿಂದ ತಲೆಮರೆಸಿಕೊಂಡವರು-2, 7 ವರ್ಷಗಳಿಂದ-2, 6ವರ್ಷಗಳಿಂದ-1, 5ವರ್ಷಗಳಿಂದ ತಲೆಮರೆಸಿಕೊಂಡವರು-2, 4 ವರ್ಷಗಳಿಂದ ತಲೆಮರೆಸಿಕೊಂಡವರು-2, ಮೂರು ವರ್ಷಗಳಿಂದ ತಲೆಮರೆಸಿ ಕೊಂಡವರು-1, ಎರಡು ವರ್ಷಗಳಿಂದ-4 ಹಾಗೂ ಉಳಿದ…
ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲದ ಕೋಟೆಪುರ ಬಸ್ ನಿಲ್ದಾಣದ ಸಮೀಪ ಗುರುವಾರ ಸಂಜೆ ವೇಳೆ ಬೆಳಕಿಗೆ ಬಂದಿದೆ. ದೆಹಲಿ ಮೂಲದ 35-40 ರ ಹರೆಯದ ಮಹಿಳೆ ಹತ್ಯೆ ನಡೆದಿದೆ. ಈಕೆ ಜತೆಗಿದ್ದ ಅದೇ ಊರಿನ ನಯೀಮ್ (35) ಎಂಬಾತ ತಲೆಮರೆಸಿಕೊಂಡಿದ್ದಾನೆ. ಎರಡು ದಿನಗಳ ಹಿಂದೆ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್ ಎಂಬವರ ಬಾಡಿಗೆ ಮನೆಯನ್ನು ಪಡೆದುಕೊಂಡಿದ್ದರು. ಮನೆಗೆ ಬರುವಾಗ ಬಟ್ಟೆ ವ್ಯಾಪಾರ ನಡೆಸುವವರು ಎಂದು ತಿಳಿಸಿದ್ದು, ಇನ್ನೇನು ಬಟ್ಟೆಗಳು ಬರಬೇಕಿದೆ ಎಂದು ತಿಳಿಸಿ ಮನೆಯಲ್ಲಿದ್ದರು. ಇಂದು ಸಂಜೆ ವೇಳೆ ಇಬ್ಬರೂ ಮನೆಯಿಂದ ಹೊರಬಾರದೇ ಇರುವುದನ್ನು ಗಮನಿಸಿ ಯುವಕನೋರ್ವ ಮನೆಯನ್ನು ಗಮನಿಸಿದಾಗ ಶೌಚಾಲಯದೊಳಕ್ಕೆ ಮಹಿಳೆ ಮೃತದೇಹ ಚೂರಿಯಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಳ್ಯ : ವೇಶ್ಯಾವಾಟಿಕೆ ಅಡ್ಡೆ ಮೇಲೆ ಸುಳ್ಯ ಪೊಲೀಸರ ಸಮ್ಮುಖದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸುಳ್ಯ ನಗರ ಕಾರ್ಯಕರ್ತರು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಅನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಜತೆಗೂಡಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸುಳ್ಯ ನಗರ ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಇಪ್ಪತ್ತೆರಡರಿಂದ ಇಪ್ಪತ್ತಮೂರು ವಯಸ್ಸಿನ ಇಬ್ಬರು ಯುವತಿಯರು ಹಾಗೂ ಓರ್ವ ರೂಂ ಬಾಯ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ದಾಳಿ ವೇಳೆ ಇಬ್ಬರು ಏಜೆಂಟರು ತಲೆ ಮರೆಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಸದ್ಯ ಇಬ್ಬರು ಬಂಧಿತರು ಸುಳ್ಯ ಪೊಲೀಸರ ವಶದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಪುತ್ತೂರು, ಕಡಬ ಮೂಲದ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆಗೆ ಯತ್ನ ನಡೆಸಲಾಗುತ್ತಿತ್ತು ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
ಮಂಗಳೂರು: ರಬ್ಬರ್ ಪ್ಲ್ಯಾಂಟೇಷನ್ ಟ್ಯಾಪರ್ ಗಳಿಗೆ ನೀಡುವ ಬೋನಸ್ ಅನ್ನು 12% ಹೆಚ್ಚುವರಿ ಮಾಡಿ ಒಟ್ಟು 20% ಬೋನಸ್ ಅನ್ನು ಇಂದು ಮಂಗಳೂರಿನಲ್ಲಿ ನಡೆದ ಫಲಾನುಭವಿಗಳ ಸಭೆಯಲ್ಲಿಯೇ ಘೋಷಣೆ ಮಾಡಿದರು. ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿಯರು, ರಬ್ಬರ್ ಪ್ಲ್ಯಾಂಟೇಷನ್ ಟ್ಯಾಪರ್ ಗಳಿಗೆ ನೀಡುವ ಬೋನಸ್ ಅನ್ನು 8%ನಿಂದ 12%ಗಳಿಗೆ ಏರಿಕೆ ಮಾಡಲಾಗುತ್ತದೆ ಎಂದು ಘೋಷಿಸುತ್ತಿದ್ದರು. ಈ ವೇಳೆ ಸಚಿವ ಅಂಗಾರ ವೇದಿಕೆಯಲ್ಲಿಯೇ ಅದನ್ನು 20%ಗೆ ಏರಿಕೆ ಮಾಡಬೇಕೆಂದು ಸಿಎಂಗೆ ಮನವಿ ಮಾಡಿದರು. ಅವರ ಮನವಿಗೆ ಅಸ್ತು ಎಂದ ಸಿಎಂ ಬೋನಸ್ ಅನ್ನು 12% ಏರಿಕೆ ಮಾಡಿ ಒಟ್ಟು 20% ಬೋನಸ್ ಕೊಡುವುದಕ್ಕೆ ತೀರ್ಮಾನಿಸಿದ್ದೇನೆ ಎಂದು ಫಲಾನುಭವಿಗಳ ಸಭೆಯಲ್ಲಿಯೇ ಘೋಷಣೆ ಮಾಡಿದರು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗೆ ಯಾವ ಬೆಲೆಯಿಲ್ಲ. ಅದನ್ನು ಬ್ಯಾಂಕ್ ನಲ್ಲಿ ಇಡುವುದಕ್ಕೆ ಆಗುತ್ತಾ. ಉಪ್ಪಿನಕಾಯಿ ಹಾಕಿ ನಕ್ಕೋಕೆ ಆಗುತ್ತದೆ. ಗ್ಯಾರಂಟಿ…
ಮಂಗಳೂರು : ಕಾರ್ಯಕ್ರಮವೊಂದರಲ್ಲಿ ಶಿವಧೂತ ಗುಳಿಗ ನಾಟಕದ ಬಗ್ಗೆ ಅವಹೇಳನ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇದೀಗ ಕರಾವಳಿ ಜನ ಸಿಡಿದೆದ್ದಿದ್ದು ಭಾರೀ ಆಕ್ರೋಶ ಕೇಳಿ ಬಂದಿದೆ. ಮಾರ್ಚ್ 15 ರಂದು ತೀರ್ಥಹಳ್ಳಿಯ ಸಾರ್ವಜನಿಕ ಕ್ರೀಡಾಂಗಣದಲ್ಲಿ ವಿಜಯ ಕುಮಾರ್ ಕೊಡಿಯಾಲಬೈಲ್ ರಚಿಸಿ ನಿರ್ದೇಶಿಸಿದ ‘ಶಿವದೂತೆ ಗುಳಿಗ’ ನಾಟಕ ಪ್ರದರ್ಶನ ಕಂಡಿದೆ. ಅಲ್ಲದೇ ಪ್ರಚಾರಕ್ಕೆ ಬ್ಯಾನರ್ ಗಳು ಮತ್ತು ಪೋಸ್ಟರ್ ಗಳನ್ನು ಅಂಟಿಸಲಾಗಿತ್ತು.ಮರುದಿನ ಬಿಜೆಪಿಯಿಂದ ನಡೆದ ರೈತ ಸಮಾವೇಶದಲ್ಲಿ ಭಾಗವಹಿಸಿದ ಆರಗ ಜ್ಞಾನೇಂದ್ರ, ಕಿಮ್ಮನೆ ರತ್ನಾಕರ್ ಸಂಘಟಿಸಿದ ನಾಟಕಕ್ಕೆ ಹತ್ತು ಸಾವಿರಕ್ಕೂ ಹೆಚ್ಚು ಜನರು ಸೇರಿರುವುದು ತಿಳಿಯುತ್ತಲೇ ಸ್ವಲ್ಪ ವಿಚಲಿತರಾಗಿದ್ದಾರೆ. ಮಾತ್ರವಲ್ಲ ಅಸಹನೆಯಿಂದ ಸಭೆಯಲ್ಲಿ ತುಳುನಾಡಿನ ಜನರ ಆರಾಧ್ಯ ದೈವ ಗುಳಿಗನ ಬಗ್ಗೆ ಅಪಹಾಸ್ಯ ಮಾಡಿ ಮಾತನಾಡಿದ್ದು ದೈವಾರಾಧಕರು ಮತ್ತು ನಾಟಕ ಪ್ರಿಯರು ಆಕ್ರೋಶಗೊಳ್ಳುವಂತೆ ಮಾಡಿದೆ. ಆರಗ ಹೇಳಿದ್ದೇನು..?: ಯಾವುದೋ ಗುಳಿಗೆ ಕೊಡ್ತಾರಂತೆ, ಜಪಾಲ್ ಗುಳಿಗೆ ಕೊಟ್ರು ಕೊಡಬಹುದು. ಹೊಸ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ನಿಂದಿಸಿರುವುದು ತೀರ್ಥಹಳ್ಳಿಯಲ್ಲಿ…
ಮಂಗಳೂರು: ಇಂದು ಮಂಗಳೂರಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ನಡೆಯಲಿದೆ. ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಸಚಿವರಾದ ಎಸ್.ಅಂಗಾರ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಹೆತ್ತವರಿಂದ ಪರಿತ್ಯಕ್ತಕೊಂಡು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಗಂಡು ಮಗುಚಿಕಿತ್ಸೆ ಫಲಕಾರಿಯಾಗದೆ ಮಾ.14 ರಂದು ಮೃತಪಟ್ಟಿದೆ. ಫೆ.16 ರಂದು ಸರ್ವೀಸ್ ಬಸ್ ನಿಲ್ದಾಣದ ಹೈಮಾಸ್ಟ್ ದೀಪದ ಕಟ್ಟೆಯಲ್ಲಿ ರಾತ್ರಿ 7 ರ ಹೊತ್ತಿಗೆ ಮಗುವನ್ನು ಬಿಟ್ಟು ಪೋಷಕರು ಹೋಗಿದ್ದರು, ಶಿಶುವಿನ ತುರ್ತು ಚಿಕಿತ್ಸೆ ಅವಶ್ಯಕತೆ ಇದ್ದುದರಿಂದ ವೆನ್ಲಾಕ್ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಇದುವರೆಗೆ ತಂದೆ ತಾಯಿ ನೋಡಲು ಬಂದಿಲ್ಲ. ಅವರ ಮಾಹಿತಿ ಇದ್ದಲ್ಲಿ ತಿಳಿಸುವಂತೆ ಪಾಂಡೇಶ್ವರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪುಣೆ: 44 ವರ್ಷದ ಸಾಫ್ಟ್‌ವೇರ್ ವೃತ್ತಿಪರ, ಆತನ ಪತ್ನಿ ಮತ್ತು ಎಂಟು ವರ್ಷದ ಮಗ ಪುಣೆಯ ಔಂಧ್ ಪ್ರದೇಶದಲ್ಲಿನ ಅವರ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಟೆಕ್ಕಿ ಮೊದಲು ತನ್ನ ಹೆಂಡತಿ ಮತ್ತು ಮಗನನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಂತೆ ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸುದೀಪ್ತೋ ಗಂಗೂಲಿ, ಅವರ ಪತ್ನಿ ಪ್ರಿಯಾಂಕಾ ಮತ್ತು ಪುತ್ರ ತನಿಷ್ಕಾ ಎಂದು ಗುರುತಿಸಲಾಗಿದೆ. ದಂಪತಿ ದೂರವಾಣಿ ಕರೆಗಳಿಗೆ ಸ್ಪಂದಿಸದ ಕಾರಣ ಬೆಂಗಳೂರಿನಲ್ಲಿ ನೆಲೆಸಿರುವ ಸುದೀಪ್ತೋ ಅವರ ಸಹೋದರ ಮನೆಗೆ ಭೇಟಿ ನೀಡುವಂತೆ ಸ್ನೇಹಿತನನ್ನು ಕೇಳಿದ್ದಾನೆ. ಫ್ಲಾಟ್‌ಗೆ ಬೀಗ ಹಾಕಿರುವುದನ್ನು ಕಂಡು ಅವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ಆದರೆ, ಸ್ಥಳದ ದತ್ತಾಂಶದ ಪ್ರಕಾರ ದಂಪತಿಯ ಮೊಬೈಲ್ ಫೋನ್‌ಗಳು ಫ್ಲಾಟ್‌ನೊಳಗೆ ಇರುವುದನ್ನು ಪೊಲೀಸರು ಪತ್ತೆ ಮಾಡಿದರು. ನಕಲಿ ಕೀ ಬಳಸಿ ಒಳಗೆ ಪ್ರವೇಶಿಸಿದ ನಂತರ ಪೊಲೀಸರು ಸುದೀಪ್ತೋ ನೇಣು ಬಿಗಿದುಕೊಂಡಿರುವುದು ಕಂಡುಬಂದರೆ, ಅವರ ಪತ್ನಿ ಮತ್ತು ಮಗುವಿನ ಮುಖಕ್ಕೆ ಪಾಲಿಥಿನ್ ಚೀಲಗಳನ್ನು ಸುತ್ತಿದ್ದು ಶವವಾಗಿ ಪತ್ತೆಯಾಗಿದ್ದಾರೆ.…










