ಬೆಂಗಳೂರು: ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ಅಕ್ರಮ ಸಂಪತ್ತು ಪತ್ತೆ ಹಚ್ಚಲಾಗಿದೆ ಎನ್ನಲಾಗಿದೆ. ಚಿತ್ರದುರ್ಗದ ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್, ಪತ್ನಿ BBMP ಎಇ ಹೆಚ್.ಭಾರತಿ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾವಣಗೆರೆಯ ಜಯನಗರದಲ್ಲಿರುವ ಮಹೇಶ್ ಮನೆ ಮೇಲೂ ದಾ ನಡೆಸಲಾಗಿದೆ. ಇದಲ್ಲದೇ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿಯ ಕಾನ್ಸ್ಟೇಬಲ್ ವಿಜಯಕುಮಾರ್ ಮನೆ ಮೇಲೂ ದಾಳಿ ಮಾಡಲಾಗಿದೆ. ಧಾರವಾಡದ ನಗರದ ಸಪ್ತಾಪುರ ಬಡಾವಣೆಯ ಮಿಚಿಗನ್ ಲೇಔಟ್ನಲ್ಲಿರುವ ಸಂತೋಷ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಕೊಡಗು ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಮನೆ ಮೇಲೆ ದಾಳಿ ನಡೆಸಿದ್ದಾರೆ.ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತದ…
Author: main-admin
ಉಡುಪಿ: ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ(ಸಿಐಡಿ) ತನ್ನ ಮೊದಲ ಹಂತದ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ತನಿಖಾಧಿಕಾರಿ(ಐಒ) ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತನಿಖಾ ತಂಡ, ಈಗಾಗಲೇ ಉಡುಪಿಯ ನೇತ್ರ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಮತ್ತು ಸಂತ್ರಸ್ತೆ, ಆರೋಪಿಗಳು ಹಾಗೂ ಕಾಲೇಜು ಆಡಳಿತ ಮಂಡಳಿಯ ಪ್ರತಿನಿಧಿಗಳ ಹೇಳಿಕೆ ದಾಖಲಿಸಿದೆ ಎಂದು ಅವರು ಹೇಳಿದ್ದಾರೆ. ಘಟನೆಯ ಬಗ್ಗೆ ಸಂತ್ರಸ್ತೆ ಅಧಿಕೃತವಾಗಿ ದೂರು ನೀಡದಿದ್ದರೂ, ಉಡುಪಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಡಿವೈಎಸ್ಪಿ ಮಟ್ಟದ ತನಿಖೆ ಪ್ರಾರಂಭಿಸಿದ್ದರು. ಆದರೆ ಬಿಜೆಪಿ ಪ್ರತಿಭಟನೆ ಮುಂದುವರಿಸಿದ ನಂತರ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಆ.8ರಂದು ಉಡುಪಿಗೆ ಆಗಮಿಸಿದ್ದ ಸಿಐಡಿ ತಂಡ, ಸ್ಥಳ ಪರಿಶೀಲನೆ ನಡೆಸಿ, ಸಂತ್ರಸ್ತೆ, ಕಾಲೇಜು ಆಡಳಿತ ಮಂಡಳಿ ಹಾಗೂ ಆರೋಪಿ ವಿದ್ಯಾರ್ಥಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡು, ಬೆರಳಚ್ಚು ಸಂಗ್ರಹಿಸಿ ಈ…
ಉಡುಪಿ: ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ಯುವತಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಅಕ್ಷತಾ ಅವರಿಗೆ ಆ. 9ರಂದು ವಾಟ್ಸ್‌ಆಯಪ್‌ನಲ್ಲಿ ಹಣ ದ್ವಿಗುಣಗೊಳಿಸುವ ಬಗ್ಗೆ ಸಂದೇಶ ಬಂದಿದ್ದು, ಅದನ್ನು ನಂಬಿದ ಅವರು ಹಂತಹಂತವಾಗಿ ಒಟ್ಟು 1,01,000 ರೂ.ಗಳನ್ನು ಆರೋಪಿಗಳು ನೀಡಿದ ಖಾತೆಗೆ ವರ್ಗಾಯಿಸಿದ್ದಾರೆ. ಆದರೆ ಆರೋಪಿಗಳು ಹಣ ಹಿಂದಿರುಗಿಸದೆ ವಂಚಿಸಿದ್ದಾರೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಮಗ ಆತ್ಮಹತ್ಯೆ ಮಾಡಿಕೊಂಡ 32 ದಿನಗಳ ಬಳಿಕ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತರನ್ನು ಆತ್ಮಹತ್ಯೆ ಮಾಡಿಕೊಂಡ ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂದು ಗುರುತಿಸಲಾಗಿದ್ದು ಅವರ ಮೃತದೇಹ ಸೋಮವಾರ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಪುತ್ರ ರಾಜೇಶ್ (26) ಕಳೆದ ಜುಲೈ 10 ರಂದು ನಾಪತ್ತೆಯಾಗಿದ್ದ, ಎರಡು ದಿನಗಳ ಬಳಿಕ ರಾಜೇಶ್ ನ ಮೃತದೇಹ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಂತ್ಯಕ್ರಿಯೆ ಕಳೆದ ಬಳಿಕ ತಂದೆ ಲೋಕೇಶ್ ನೊಂದುಕೊಂಡಿದ್ದು, ಅಲ್ಲದೆ ಮಗನ ಸಾವಿನ ಬಳಿಕ ಮಾನಸಿಕವಾಗಿ, ಕುಗ್ಗಿ ಹೋಗಿದ್ದರು. ಅಗಸ್ಟ್ 13 ರಂದು ಬೆಳಗ್ಗೆ 9.00 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ ಮೂಲಕ ವಾಟ್ಸಪ್ ಸಂದೇಶ ಕಳುಹಿಸಿ “ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು” ನಾನು ಮೊಬೈಲ್…
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪುರುಷರನ್ನು ಆಕರ್ಷಿಸಿ ಅವರನ್ನು ಹನಿಟ್ರ್ಯಾಪ್ ಗೆ ಬೀಳಿಸುತ್ತಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಬಲೆಗೆ ಬೀಳಿಸಿದ್ದು, ಒರ್ವ ಮಹಿಳೆ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಇಲ್ಲಿಯವರೆಗೆ 12ಕ್ಕೂ ಹೆಚ್ಚು ಪುರುಷರನ್ನು ವಂಚಿಸಿದ ಮೂವರು ಪುರುಷರು ಹಾಗೂ ಮಹಿಳೆಯನ್ನು ಬಂಧಿಸಿದ್ದಾರೆ. ಆರೋಪಿಗಳು ಸಂತ್ರಸ್ತರಿಂದ ಸುಮಾರು 30 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಬಂಧಿತರನ್ನು ನೇಹಾ ಅಲಿಯಾಸ್ ಮೆಹರ್, ಶರಣ್ ಪ್ರಕಾಶ್, ಅಬ್ದುಲ್ ಖಾದರ್ ಮತ್ತು ಯಾಸಿನ್ ಬಂಧಿತರು. ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರನ್ನು ಟ್ರ್ಯಾಪ್ ಮಾಡಿ ನಂತರ ಆತ್ಮೀಯ ಕ್ಷಣಗಳನ್ನು ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನೇಹಾ ಅಲಿಯಾಸ್ ಮೆಹರ್ ಎಂಬ ಮಹಿಳೆಗಾಗಿ ಬೆಂಗಳೂರು ಪೊಲೀಸರು ಹುಡುಕಾಟ ನಡೆಸಿದ್ದರು. ಹಲವು ದಿನಗಳ ಶೋಧ ಕಾರ್ಯಾಚರಣೆಯ ನಂತರ ಮಹಿಳೆಯನ್ನು ಮುಂಬೈನಲ್ಲಿ ಪತ್ತೆ ಹಚ್ಚಿ ಮಂಗಳವಾರ ಬೆಂಗಳೂರಿಗೆ ಕರೆತರಲಾಯಿತು . ನೇಹಾ ತನ್ನ ಗ್ರಾಹಕರನ್ನು ಟೆಲಿಗ್ರಾಮ್ ಮೂಲಕ ಸಂಪರ್ಕಿಸುತ್ತಿದ್ದರು. ಮಹಿಳೆಯು ಪುರುಷರೊಂದಿಗೆ ಸಂಪರ್ಕವನ್ನು ಸ್ಥಾಪಿಸಿದ ನಂತರ,…
ಮಂಗಳೂರು: ಉದ್ಯೋಗಕ್ಕೆಂದು ಮಂಗಳೂರಿಗೆ ಬಂದಿದ್ದ ಯುವತಿ ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೊನ್ನಾವರದ ಸೋನಿಯಾ ರೋಡ್ರಿಗಸ್ (23) ನಾಪತ್ತೆಯಾಗಿರುವ ಯುವತಿಯಾಗಿದ್ದಾಳೆ.ಈಕೆ ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದು, ಸೋನಿಯಾ ಬೆಂದೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದಳು. ಇತ್ತೀಚೆಗೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್ ಮೆಂಟ್‌ನ ನಿವಾಸಿಗಳು ಹೇಳಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ನಾಪತ್ತೆ ಪ್ರಕರಣ ದಾಖಲಾಗಿದೆ.
ಕಡಬ : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ನಡೆದಿದ್ದು, ಬೈಕ್ ಸವಾರ ಗಾಯಗೊಂಡಿದ್ದು ಆಸ್ಪತ್ರಗೆ ದಾಖಲಿಸಲಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಆಲಂಕಾರು ಗ್ರಾಮದ ಕಕ್ವೆ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಅವರು ಮನೆಯಿಂದ ಉಪ್ಪಿನಂಗಡಿಗೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಆತೂರು ಅಶ್ವಿನಿ ಆಸ್ಪತ್ರೆ ಮುಂಭಾಗ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಢಿಕ್ಕಿಯಾಗಿದೆ.ಘಟನೆಯಲ್ಲಿ ಬೈಕ್ ಪಲ್ಟಿಯಾಗಿ ಸವಾರ ಸುಧಾಕರ ಅವರು ಕೆಳಕ್ಕೆ ಎಸೆಯಲ್ಪಟ್ಟು ಗಾಯಗೊಂಡಿದ್ದರು. ಢಿಕ್ಕಿಯಾದರೂ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಬೈಕ್ ಸವಾರ ಸುಧಾಕರ ಅವರು ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪರಾರಿಯಾದ ಕಾರಿನ ಗುರುತು ಪತ್ತೆಗಾಗಿ ಸ್ಥಳೀಯ ಅಂಗಡಿಯಲ್ಲಿನ ಸಿಸಿ ಟಿವಿ ಫೂಟೇಜ್‌ಗಳನ್ನು ಪರಿಶೀಲಿಸಲಾಗಿದೆ.
ಮುಂಬಯಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೆನಡಾ ಪೌರತ್ವವನ್ನು ತ್ಯಜಿಸಿ ಭಾರತೀಯ ಪೌರತ್ವ ಹಾಗೂ ಪಾಸ್ ಪೋರ್ಟ್‌ನ್ನು ಮರಳಿ ಪಡೆದುಕೊಂಡಿದ್ದಾರೆ. ಕೆನಡಾ ಪೌರತ್ವ ಸಲ್ಲಿಸಿದ್ದು ಯಾಕೆ?: ಬಾಲಿವುಡ್ ನಲ್ಲಿ ನಟಿಸಿ, ಭಾರತೀಯರ ಅಪಾರ ಅಭಿಮಾನವನ್ನು ಗಳಿಸಿರುವ ನಟ ಅಕ್ಷಯ್ ಕುಮಾರ್ ಕೆನಡಾ ದೇಶದ ಪೌರತ್ವವನ್ನು ಹೊಂದಿದ್ದರು. 90 ದಶಕದಲ್ಲಿ ಅವರ ಸಾಲು ಸಾಲ ಸಿನಿಮಾಗಳು ಸೋಲುತ್ತಿದ್ದವು. ಇದರಿಂದ ಮನನೊಂದಿದ್ದ ಅವರು ಬೇರೆ ಏನಾದರೂ ಕೆಲಸ ಮಾಡುವ ನಿಟ್ಟಿನಲ್ಲಿ ಅವರ ಸ್ನೇಹಿತರೊಬ್ಬರ ಸಲಹೆಯಂತೆ ಕೆನಡಾಕ್ಕೆ ತೆರಳಿದ್ದರು. ಆ ಬಳಿಕ ಅಲ್ಲಿನ ಪೌರತ್ವಕೆ ಅರ್ಜಿ ಸಲ್ಲಿಸಿದ್ದರು. ಇದಾದ ಬಳಿಕ ಅವರ ಒಂದೊಂದೇ ಸಿನಿಮಾಗಳು ಹಿಟ್ ಆಗುತ್ತಾ ಹೋಯಿತು. ಆ ಕಾರಣದಿಂದ ಅವರು ಮತ್ತೆ ಭಾರತಕ್ಕೆ ಬಂದಿದ್ದರು. ಆದರೆ ಈ ವೇಳೆ ಅವರು ಪೌರತ್ವ ಹಾಗೂ ಪಾಸ್ ಪೋರ್ಟ್ ಎರಡನ್ನೂ ಬದಲಾಯಿಸಿಕೊಂಡಿರಲಿಲ್ಲ. ವಿವಾದಕ್ಕೆ ಕಾರಣವಾಗಿದ್ದ ಸಂದರ್ಶನ: 2019 ರಲ್ಲಿ ಪ್ರಧಾನಿ ಮೋದಿ ಅವರನ್ನು ಸಂದರ್ಶನ ಮಾಡಿದ್ದರು. ಈ ವೇಳೆ ಅಕ್ಷಯ್ ಅವರ ಪೌರತ್ವದ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು.…
ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಜೀಪ ಮುನ್ನೂರು ಗ್ರಾಮದ ನಂದಾವರ ಕೋಟೆ ನಿವಾಸಿ ಮಹಮ್ಮದ್ ಶಾಕಿಬ್ ಹಾಗೂ ಬಿ.ಮೂಡ ಗ್ರಾಮದ ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆರೀಫ್ ಬಂಧಿತ ಆರೋಪಿ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ನಂದಾವರ ಎಂಬಲ್ಲಿ ಶಾಲಾ ಬಳಿ ಇಬ್ಬರು ಯುವಕರು ಮಾದಕ ವಸ್ತುವನ್ನು ಸೇವಿಸಿ ನಶೆ ಹೊಂದಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ ಸ್ಥಳೀಯರು ನೀಡಿದ ದೂರಿನಂತೆ ಸ್ಥಳಕ್ಕೆ ಬೇಟಿ ನೀಡಿದ ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್ ಐ ರಾಮಕೃಷ್ಣ ನೇತ್ರತ್ವದ ಪೊಲೀಸ್ ತಂಡ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ. ಬಳಿಕ ವೈದ್ಯರ ಬಳಿ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಬಗ್ಗೆ ಅಧಿಕೃತವಾದ ವೈದ್ಯಕೀಯ ದೃಡಪತ್ರ ಸಿಕ್ಕಿದೆ. ಇಬ್ಬರು ಆರೋಪಿಗಳನ್ನು ಸೂಕ್ತವಾದ ಕಾನೂನು ಕ್ರಮಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು: ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದ್ದಾರೆ.ಈ ವೇಳೆ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.










