Author: main-admin

ಮಂಗಳೂರು: ಮಂಗಳೂರು ಹೊರವಲಯದ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಿಲ್ಲಿಸಲಾಗುತ್ತಿದ್ದ ವಾಹನಗಳ ಬ್ಯಾಟರಿಗಳನ್ನು ಕಳವು ಗೈಯುತ್ತಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು , ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೂಡುಪೆರಾರ ಈಶ್ವರ ಕಟ್ಟೆ ಮಿತ್ತ ಕೊಳಪಿಲದ ನಿವಾಸಿಯಾಗಿರುವ ಪ್ರತಾಪ್‌ (20)ಮತ್ತು ಕಂದಾವರ ಚರ್ಚ್‌ ರಸ್ತೆಯ ನಿವಾಸಿ ಅನಿಲ್‌ ಯಾನೆ ಅನೀ (23) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಬಜಪೆ ಠಾಣೆ ವ್ಯಾಪ್ತಿಯ ಅಡ್ಡೂರು, ಕೈಕಂಬ ಮತ್ತು ಗುರುಪುರ ಪರಿಸರಗಳಲ್ಲಿ ನಿಲ್ಲಿಸಿದ್ದ ಟಿಪ್ಪರ್‌ ಲಾರಿ, ಜೆಸಿಬಿ ಮತ್ತು ಇತರ ವಾಹನಗಳಿಂದ ಬ್ಯಾಟರಿಗಳು ಕಳವಾಗಿರುವ ಬಗ್ಗೆ ಬಜಪೆ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ತನಿಖೆ ಆರಂಭಿಸಿದ ಪೊಲೀಸ್‌ ನಿರೀಕ್ಷಕ ಪ್ರಕಾಶ ಅವರ ತಂಡ ಮಂಗಳವಾರ ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದ ಕಲದಲ್ಲಿ ಕಳವುಗೈದ ಬ್ಯಾಟರಿಗಳನ್ನು ಮಾರಾಟ ಮಾಡಲು ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಸುಮಾರು 4 ಲಕ್ಷ ರೂ. ಮೌಲ್ಯದ ಕಾರು ಮತ್ತು 1.50 ಲಕ್ಷ…

Read More

ಬೆಳ್ತಂಗಡಿ: ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್‌ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡಿದ ಬಳಿಕ ಮಗು ಸಾವನ್ನಪ್ಪಿದ ಪ್ರಕರಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ 1.5 ತಿಂಗಳ ಹೆಣ್ಣು ಮಗು ಅಂಶಿಕಾಳನ್ನು ಕಫ ಸಮಸ್ಯೆ ಕಾರಣಕ್ಕೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಡಾಕ್ಟರ್ ಇಲ್ಲದ ಕಾರಣ ನರ್ಸ್ ಇಂಜೆಕ್ಷನ್ ನೀಡಿದ್ದು, ಬಳಿಕ ಮಗು ಸಾವನ್ನಪ್ಪಿದೆ ಎಂದು ಮನೆಮಂದಿ ಆರೋಪಿಸಿದ್ದಾರೆ. ಘಟನೆಯ ಮಾಹಿತಿ ಅರಿತ ಮಾಜಿ ಶಾಸಕ ವಸಂತ ಬಂಗೇರ ಆಸ್ಪತ್ರೆಗೆ ದೌಡಾಯಿಸಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡಿದ್ದು, ಮಗುವಿನ ತಂದೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿಲು ಸಲಹೆ ನೀಡಿದ್ದಾರೆ.

Read More

ಬೆಂಗಳೂರು: ಥೈಲಾಂಡ್ ನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಇಂದು ರಾತ್ರಿ 11 ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದೆ. ನಾಳೆ (ಬುಧವಾರ) ಮಧ್ಯಾಹ್ನ 12 ಗಂಟೆ ವರೆಗೆ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ಬಿ.ಕೆ.ಶಿವರಾಂ ಮನೆ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಥೈಲಾಂಡ್ ನಲ್ಲಿ ಸ್ಪಂದನಾ ಅವರ ಮೃತದೇಹವನ್ನು ಶವ ಪರೀಕ್ಷೆ ನಡೆಸಲಾಗಿದ್ದು, ಅಂತಿಮ ಕಾನೂನು ಕ್ರಮಗಳನ್ನು ಮುಗಿಸಲಾಗಿದೆ. ವಿಶೇಷ ವಿಮಾನದಲ್ಲಿ ಇಂದು ರಾತ್ರಿ 11 ಗಂಟೆಗೆ ಬೆಂಗಳೂರು ತಲುಪಲಿದೆ.

Read More

ಪುತ್ತೂರು: ನಗರದ ಚಿನ್ನಾಭರಣಗಳ ಮಳಿಗೆಯೊಂದರಿಂದ ಮಹಿಳೆಯೊಬ್ಬರು ಗಿರಾಕಿಯಂತೆ ಬಂದು ಚಿನ್ನದ ಚೈನೊಂದನ್ನು ಎಗರಿಸಿ ಪರಾರಿಯಾದ ಘಟನೆ ಆ.7ರಂದು ನಡೆದಿದೆ. ಆ.7ರಂದು ಸುಮಾರು 12 ಗಂಟೆ ವೇಳೆ ನಗರದ ಕೋರ್ಟ್‌ ರಸ್ತೆಯಲ್ಲಿರುವ ಬಾವಾ ಜ್ಯುವೆಲ್ಲರ್ಸ್‌ ಗೆ ಬುರ್ಕಾ ಧರಿಸಿ ಸಣ್ಣ ಮಗುವಿನೊಂದಿಗೆ ಬಂದ ಮಹಿಳೆಯೊಬ್ಬರು ಈ ಕೃತ್ಯ ಎಸಗಿದ್ದಾರೆ. ಗಿರಾಕಿಯಂತೆ ಬಂದ ಮಹಿಳೆ 8 ಗ್ರಾಂ, 4ಗ್ರಾಂ ನ ಚೈನು(ಸರ) ಬೇಕೆಂದು ಬೇರೆ ಬೇರೆ ಡಿಸೈನ್‌ ನ ಸರಗಳನ್ನು ನೋಡಿದ್ದಾರೆ. ಸ್ವಲ್ಪ ಹೊತ್ತಿನ ಬಳಿಕ ಆ ಮಹಿಳೆ ಮಗುವಿಗೆ ಎದೆ ಹಾಲು ಕೊಡಲು ಶುರು ಮಾಡಿದೆ. ಈ ವೇಳೆ ಕೌಂಟರ್‌ ನಲ್ಲಿದ್ದ ಇಬ್ಬರು ಸೇಲ್ಸ್‌ ಹುಡುಗರ ಪೈಕಿ ಓರ್ವ ಈಚೆ ಬಂದಿದ್ದು, ಮತ್ತೋರ್ವ ಅಲ್ಲಿಯೇ ನಿಂತಿದ್ದ. ಬುರ್ಕಾದೊಳಗಡೆ ಮಗುವಿಗೆ ಹಾಲುಣಿಸುತ್ತಿದ್ದ ಮಹಿಳೆ ಬ್ರಾಸ್ಲೆಟ್‌ ತೋರಿಸುವಂತೆ ಕೌಂಟರ್‌ ನಲ್ಲಿದ್ದ ಹುಡುಗನನ್ನು ಕೇಳಿದ್ದಾಳೆ. ಸೇಲ್ಸ್‌ ಮ್ಯಾನ್‌ ಹುಡುಗ ಶೋಕೇಸ್ ನಿಂದ ಬ್ರಾಸ್ಲೆಟ್‌ ತೆಗೆಯಲು ತಿರುಗುವ ವೇಳೆ ಕೌಂಟರ್‌ ಶೋಕೇಸ್‌ ನ ಮೇಲೆ ಇಟ್ಟಿದ್ದ ಚೈನುಗಳ ಟ್ರೇಯಿಂದ…

Read More

ಉಡುಪಿ: ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿದ್ದ ಮತ್ತು ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ವಹಿಸಿದೆ.ನಿನ್ನೆ ಈ ಸಂಬಂಧ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಇಂದು ಸಿಐಡಿ ತಂಡ ಉಡುಪಿಗೆ ಆಗಮಿಸಿದೆ. ತಂಡವು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿ ಸೂಕ್ತ ಮಾಹಿತಿ ಪಡೆದುಕೊಂಡಿತು. ತನಿಖಾ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆಗಳೂ ಇವೆ. ಬಳಿಕ ತನಿಖಾಧಿಕಾರಿಗಳು ಘಟನೆಯ ಸಂಪೂರ್ಣ ವಿವರಗಳನ್ನು ಸಿಐಡಿ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿದೆ. ಸಿಐಡಿ ತಂಡದ ನೇತೃತ್ವವನ್ನು ಅಂಜುಮಾಲಾ ನಾಯಕ್ ವಹಿಸಿದ್ದಾರೆ.

Read More

ಸುಳ್ಯ: ಅರಂತೋಡಿಯಲ್ಲಿ ಪಾದಚಾರಿಗೆ ಓಮಿನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಉಳುವಾರು ನಿವಾಸಿ ತೀರ್ಥರಾಮ ಮೃತಪಟ್ಟ ವ್ಯಕ್ತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು ಢಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಿಸದೇ ಮೃತಪಟಿರುತ್ತಾರೆ.ಈ ಬಗ್ಗೆ ಸುಳ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಮಂಗಳೂರು: ಜುಲೈ 19ರಂದು ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಗರದ ಕಾರ್ ಸ್ಟ್ರೀಟ್ ನಲ್ಲಿ ಮನೋಹರ್ ಶೇಟ್ ಎಂಬಾತನ ಅಂಗಡಿಯಿಂದ 48 ಸಾವಿರ ರೂ. ಮೌಲ್ಯದ ತಲಾ 40 ಬಾಂಗ್ ಚಾಕೋಲೇಟ್‌ ತುಂಬಿರುವ 300 ಪ್ಯಾಕೇಟ್ ಗಳನ್ನು ಮತ್ತು 592 ಬಿಡಿ ಚಾಕ್ಲೇಟ್‌ಗಳನ್ನು ವಶಪಡಿಸಿಕೊಂಡಿದ್ದರು. ಅದೇ ದಿನ ಹೈಲ್ಯಾಂಡ್‌ ಬಳಿಯ ಗೂಡಂಗಡಿಯಿಂದ 55 ಸಾವಿರ ಮೌಲ್ಯದ ಚಾಕೋಲೇಟ್‌ ವಶಪಡಿಸಿಕೊಂಡಿದ್ದರು. ಅಲ್ಲದೆ ಆರೋಪಿ ಟೆಟಿನ್‌ ಸೋನ್ನೆ ಎಂಬಾತನ್ನು ವಶಕ್ಕೆ ಪಡೆದಿದ್ದರು. ಸ್ವಾಧೀನಪಡಿಸಿಕೊಂಡಿರುವ ಬಾಂಗ್ ಚಾಕೇಟ್ ಗಳನ್ನು ಅದರಲ್ಲಿರುವ ಮಾದಕ ಗಾಂಜಾ ಅಂಶದ ಪತ್ತೆ ಬಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ಬಾಂಗ್ ಟಾಕೇಟ್ ಗಳಲ್ಲಿ ಗಾಂಜಾ ಅಂಶವಿರುವುದಾಗಿ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿ ಬಂದಿರುವುದರಿಂದ ಆರೋಪಿತರ ವಿರುದ್ಧ ಎನ್.ಡಿ.ಪಿ.ಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ ಆರೋಪಿತರನ್ನು ನ್ಯಾಯಾಲಯಲಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಅರೋಪಿತರು ಪ್ರಸ್ತುತ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Read More

ಕಲಬುರಗಿ: ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ಹೆಡ್‌ಕಾನ್‌ಸ್ಟೇಬಲ್‌ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೆಟ್ರೋಲ್ ಬಂಕ್ ಬಳಿ ಸೋಮವಾರ ವರದಿಯಾಗಿದೆ. ಮೃತರನ್ನು ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಮೋಮಿನಪುರದ ಮುಇಝ್ಝುದ್ದೀನ್ (52) ಎಂದು ಗುರುತಿಸಲಾಗಿದೆ. ಘಟನೆಯಿಂದ ಅವರ ಸಹೋದರ ನಜುಮುದ್ದಿನ್ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇವರು ಕಲಬುರಗಿಯಿಂನದ ಕಾರಿನಲ್ಲಿ ಸೇಡಂಗೆ ಹೋಗುತ್ತಿದ್ದಾಗ ಮಳಖೇಡ ಹತ್ತಿರ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿದೆ ಎಂದು ಹೇಳಲಾಗಿದೆ.ಘಟನೆ ಸಂಬಂಧ ಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಪೊಲೀ್ಸು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಅಮರ್‌ ಮತ್ತು ಸೂರಜ್‌ ಬಂಧಿತ ಆರೋಪಿಗಳು. ಇವರು ಅತ್ತಾವರದಲ್ಲಿ ನಡೆದುಕೊಂಡು ಹೋಗುವ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ, ಮಕ್ಕಳು ಹಾದು ಹೋಗುವಾಗ ಹಿಂಬಾಲಿಸಿ, ಕೆಟ್ಟ ದೃಷ್ಠಿಯಿಂದ ನೋಡುವ ಆರೋಪ ಕೇಳಿಬಂದಿತ್ತು. ಮಂಗಳೂರು ಪೊಲೀಸ್ ಆಯುಕ್ತರ ಫೋನ್‌-ಇನ್‌ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಈ ದೂರು ಬಂದಿತ್ತು. ಕಮಿಷನರ್‌ ಕುಲದೀಪ್‌ ಕುಮಾರ್‌ ಜೈನ್‌ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದೆ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ಬಂಧಿತ ಆರೋಪಿ. ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳೆ ನಡೆಸಿದ್ದಾರೆ. ಬಂಧಿತನಿಂದ 12 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ ವಸ್ತುವನ್ನು ಮಾರಾಟ ಮಾಡಲು ಉಪಯೋಗಿಸಿದ ಆಟೋ ರಿಕ್ಷಾವನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ. ವಶಕ್ಕೆ ಪಡೆದ ಒಟ್ಟು ಸ್ವತ್ತುಗಳ ಮೌಲ್ಯ 95,000 ಆಗಬಹುದು ಎಂದು ಅಂದಾಜಿಸಲಾಗಿದೆ. ಉಳ್ಳಾಲ ಪೊಲೀಸ್ ನಿರೀಕ್ಷಕ ಸಂದೀಪ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಠಾಣ ಉಪನಿರೀಕ್ಷಕ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಶೋಕ್, ಮಂಜುನಾಥ್ ದಾಳಿ ಮಾಡಿ ಪ್ರಕರಣ ಬೇಧಿಸಿದ್ದಾರೆ. ಆರೋಪಿ ಹಲವು ವರ್ಷಗಳಿಂದ ತನ್ನ ರಿಕ್ಷಾವನ್ನು ಕೂಡ ಅಪರಿಮಿತ ವೇಗದಿಂದ ಚಲಾಯಿಸುತ್ತಿದ್ದು, ಹಲವು ರೀತಿಯ ಅಪಘಾತಗಳು…

Read More