Author: main-admin

ಮಂಗಳೂರು: ವಿದ್ಯಾರ್ಥಿಗಳ ಗುಂಪೊಂದು ನಡುರಸ್ತೆಯಲ್ಲಿಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಮುಂಭಾಗದ ರಸ್ತೆಯಲ್ಲಿ ಎರಡು ಪ್ರತ್ಯೇಕ ಬಣ್ಣದ ಯುನಿಫಾರಂ ಧರಿಸಿರುವ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿಗಳ ನಡುವೆ ಹಿಗ್ಗಾಮುಗ್ಗಾವಾಗಿ ಹಲ್ಲೆ ನಡೆಸುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಸದ್ಯ ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.

Read More

ಮಂಗಳೂರು: ಪ್ರವಾಹ ಪೀಡಿತವಾಗಿರುವ ಪ್ರದೇಶಗಳಿಗೆ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತಿ ವರ್ಷ ಅದ್ಯಪಾಡಿಯಲ್ಲಿ ಫಲ್ಗುಣಿ ನದಿಯ ನೆರೆ ಪ್ರವಾಹದಿಂದ ಸಂತ್ರಸ್ತರಾಗುತ್ತಿರುವ ಬಗ್ಗೆ ಸ್ಥಳೀಯರು ಸಚಿವರ ಗಮನ ಸೆಳೆದರು. ಅಕ್ಕ ಪಕ್ಕದ ಗ್ರಾಮಗಳು ಜಲಾವೃತವಾಗಿರುವ ಬಗ್ಗೆಯೂ ಮಾಹಿತಿ ನೀಡಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶಕ್ಕೆ ಭೇಟಿ ನೀಡಿದ ದಿನೇಶ್ ಗುಂಡೂರಾವ್ ಅಲ್ಲಿನ ಸ್ಥಿತಿ ನೋಡಿ ಶಾಕ್ ಆದರು. ಈ ವೇಳೆ ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಲ್ಲಿನ ಸ್ಥಿತ ನೋಡಿದರೆ ಭಯದ ವಾತಾವರಣ ನಿರ್ಮಾಣವಾಗಿದೆ. ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಮಣ್ಣು ಗಣಿಗಾರಿಕೆ ಮಾಡಲಾಗಿದೆ. ದೊಡ್ಡ ಪ್ರಮಾಣದ ಲೋಪದೋಷವಾಗಿರುವುದು ಕಂಡು ಬಂದಿದೆ ಎಂದು ಸಚಿವರು ಹೇಳಿದರು. ಇಲ್ಲಿ ಗುಡ್ಡ ಅಪಾಯಕಾರಿಯಾಗಿರುವ ಬಗ್ಗೆ ಫೆಬ್ರವರಿ ತಿಂಗಳಲ್ಲೇ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಮುನ್ಸೂಚನೆ ನೀಡಿತ್ತು. ಪಾಲಿಕೆ ಯಾವ ಕ್ರಮ ಕೈಗೊಂಡಿದೆ ಎಂದು ಪರಿಶೀಲನೆ ನಡೆಸಲಾಗುವುದು. ಗಣಿ ಭೂ ವಿಜ್ಞಾನ ಇಲಾಖೆ…

Read More

ಉಡುಪಿ: ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದರಲ್ಲಿ ನಾಲ್ವರು ವ್ಯಕ್ತಿಗಳು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲಾಟ್‌ನ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್‌ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವುದು ಕಂಡುಬಂದಿದೆ. ಮುಸುಕುಧಾರಿಗಳು ಒಳನುಗ್ಗಲು ಯತ್ನಿಸಿದ ಫ್ಲಾಟ್‌ನಲ್ಲಿ ವಯಸ್ಸಾದ ದಂಪತಿಗಳು ವಾಸಿಸುತ್ತಿದ್ದರು. ಈ ದಂಪತಿಗಳು ಒಂದು ವಾರದ ಹಿಂದಷ್ಟೇ ಮುಂಬೈಗೆ ಪ್ರಯಾಣ ಬೆಳೆಸಿದ್ದರು. ಇದೀಗ ಈ ದಂಪತಿಗಳ ಫ್ಲಾಟ್‌ಗೆ ಮುಸುಕುಧಾರಿಗಳು ನುಗ್ಗಲು ಪ್ರವೇಶಿಸುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ನಾಲ್ವರು ಶಸ್ತ್ರಸಜ್ಜಿತ ಮುಸುಕುಧಾರಿಗಳು ಹಲವಾರು ಖಾಲಿ ಅಪಾರ್ಟ್ ಮೆಂಟ್‌ಗಳಿಗೆ ನುಗ್ಗಿ ಬೆಲೆಬಾಳುವ ವಸ್ತುಗಳ ಹುಡುಕಾಡುವ ಜೊತೆಗೆ ಅಪಾರ ಹಾನಿಯನ್ನುಂಟು ಮಾಡಿರುತ್ತಾರೆ. ಇನ್ನು ಈ ನಾಲ್ವರು ಒಂದೇ ಬಡಾವಣೆಯ ಒಟ್ಟು ಮೂರು ಅಪಾರ್ಟ್ ಮೆಂಟ್‌ ಕಟ್ಟಡಗಳಲ್ಲಿ ದರೋಡೆಗೆ…

Read More

ಪುತ್ತೂರು: ಒಂದು ಕಡೆ ರಾಜ್ಯದಲ್ಲಿ ರಣಭೀಕರ ಮಳೆಗೆ ಜನ ತತ್ತರಿಸಿದ್ದು, ಕಳೆದ ಕೆಲವು ದಿನಗಳಿಂದ ಶಿರಾಡಿ ಘಾಟ್ ನಲ್ಲಿ 5 ಬಾರಿ ಭೂ ಕುಸಿತ ಉಂಟಾಗಿತ್ತು. ಇದೀಗ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೌದು ಭಾರಿ ಮಳೆಯಿಂದಾಗಿ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಕರ್ನಾಟಕ ಭಾಗದ ಬಹುತೇಕ ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಇದೀಗ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಶುಕ್ರವಾರ ಮುಂಜಾನೆ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮವಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಒಂದು ಗುಡ್ಡ ಕುಸಿತವು, ನಸುಕಿನ ಜಾವದಲ್ಲಿ ನಡೆದಿದ್ದರಿಂದ ಈ ವೇಳೆ ವಾಹನ ಸಂಚಾರ ಅಷ್ಟಾಗಿರಲಿಲ್ಲ ಹಾಗಾಗಿ ಬಾರಿ ಅನಾಹುತ ಒಂದು ತಪ್ಪಿದೆ ಎಂದು ಹೇಳಲಾಗುತ್ತಿದೆ.ಸದ್ಯ…

Read More

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಅಪ್ರಾಪ್ತ ವಯಸ್ಕ ಬಾಲಕಿಯೋರ್ವಳನ್ನು ಪುಸಲಾಯಿಸಿ ಭಿನ್ನ ಕೋಮಿನ ಯುವಕರು ಪಾರ್ಕ್‌ವೊಂದಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಘಟನೆ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಫೈಜಲ್‌ ಹಾಗೂ ಲಿಕೇಶ್‌ ಬಂಧಿತ ಆರೋಪಿಗಳಾಗಿದ್ದು, ಅಫೀಕ್‌ ತಲೆಮರೆಸಿಕೊಂಡಿದ್ದಾನೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಾಲಕಿಯನ್ನು ಪಾರ್ಕಿಗೆ ಬರುವಂತೆ ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು. ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ.

Read More

ಮಂಗಳೂರು: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ (ಆಗಸ್ಟ್ 2) ಶುಕ್ರವಾರದಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

Read More

ಉಡುಪಿ : ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಮುಖ್ಯೋಪಾಧ್ಯಾಯರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಮಲ್ಪೆ ಕಲ್ಮಾಡಿಯಲ್ಲಿ ಇಂದು ಸಂಭವಿಸಿದೆ. ಮೃತರನ್ನು ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ್ ಎಂದು ಗುರುತಿಸಲಾಗಿದೆ. ಅವರು ಇಂದು ಮಧ್ಯಾಹ್ನ ತನ್ನ ದ್ವಿಚಕ್ರ ವಾಹನದಲ್ಲಿ ಆದಿಆಡುಪಿಯಿಂದ ಮಲ್ಪೆ ಕಡೆ ಹೋಗುತ್ತಿದ್ದರು. ಕಲ್ಮಾಡಿಗೆ ತಲುಪುತ್ತಿದ್ದಂತೆ ಬ್ರೇಕ್ ಫೈಲ್ ಆದ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಹಿಂಬದಿಯ ಚಕ್ರಕ್ಕೆ ಸಿಲುಕಿದ ಭಾಸ್ಕರ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು: ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ. ಉಳಿದವರನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗುವುದು ಎಂದವರು ತಿಳಿಸಿದ್ದಾರೆ.

Read More

ಬೆಂಗಳೂರು: ಆಗಸ್ಟ್‌ ತಿಂಗಳು ಆರಂಭವಾಗುತ್ತಲೆ ತೈಲ ಮಾರುಕಟ್ಟೆ ಕಂಪನಿಗಳು ಭಾರತೀಯ ಮನೆಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಏರಿಕೆ ಮಾಡಿದೆ. 14.2 ಕೆಜಿ LPG ಸಿಲಿಂಡರ್‌ಗಳ ಬೆಲೆಗಳು ಯಾವುದೇ ಬದಲಾವಣೆ ಮಾಡದಿದ್ದರೂ, ಆಗಸ್ಟ್ 1, 2024 ರಿಂದ ಜಾರಿಗೆ ಬರುವಂತೆ 19 ಕೆಜಿ ಸಿಲಿಂಡರ್‌ಗಳ ಬೆಲೆಗಳಲ್ಲಿ 8.50 ರೂ. ಏರಿಕೆ ಮಾಡಿದೆ. 14 ಕೆಜಿಯ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಿಂದ ಮುಂಬೈವರೆಗೆ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗಳ ಬೆಲೆ ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ವೆಬ್​ಸೈಟ್ ಪ್ರಕಾರ, ದೇಶದ ರಾಜಧಾನಿ ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಈಗ 1652.50 ರೂ.ಗೆ ಲಭ್ಯವಿದೆ. ಮೊದಲು ಈ ಬೆಲೆ 1646 ರೂ. ಇಲ್ಲಿ 6.50 ರೂ. ಇತ್ತು. ಈ ಸಿಲಿಂಡರ್ ಈಗ ಕೋಲ್ಕತ್ತಾದಲ್ಲಿ 1764.50 ರೂ.ಗೆ ಲಭ್ಯವಿದೆ. ಚೆನ್ನೈನಲ್ಲಿ 1817 ರೂ. ಆಗಿದೆ. 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಹಳೆಯ ಬೆಲೆ ಕೋಲ್ಕತ್ತಾದಲ್ಲಿ 1756…

Read More

ಬೆಂಗಳೂರು: ಯಾವುದೇ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆಸಿಕೊಳ್ಳುವಾಗ ನೀಡುವ ನೋಟಿಸ್‌ನಲ್ಲಿ ಎಫ್‌ಐಆರ್ ಪ್ರತಿ, ಅಪರಾಧ ಏನು ಎಂಬ ಬಗೆಗಿನ ಮಾಹಿತಿ, ದೂರಿನ ಸಂಕ್ಷಿಪ್ತ ರೂಪ ಮತ್ತು ಅಪರಾಧ ಸಂಖ್ಯೆ ಒಳಗೊಂಡ ಚೆಕ್‌ಲಿಸ್ಟ್‌ ಅನ್ನು ಕಡ್ಡಾಯವಾಗಿ ನಮೂದಿಸಿರಬೇಕು ಎಂದು ಕರ್ನಾಟಕ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಅವಗಾಹನೆಗಾಗಿ ರಾಜ್ಯ ಗೃಹ ಕಾರ್ಯದರ್ಶಿ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕು ಎಂದು ನಿರ್ದೇಶಿಸಿದೆ. ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಮೊಬೈಲ್‌ ಫೋನ್‌ನಲ್ಲಿ ವಾಟ್ಸ್‌ ಆಯಪ್‌ ಮೂಲಕ, ನಾಳೆ ನೀವು ಠಾಣೆಗೆ ಹಾಜರಾಗಬೇಕು ಎಂದು ಕಳುಹಿಸಿದ್ದ ಸಂದೇಶವನ್ನು ಪ್ರಶ್ನಿಸಿ ಪತ್ರಕರ್ತ ಟಿ ವಿ ಶಿವಪ್ರಸಾದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಭಾರತೀಯ ನ್ಯಾಯ ಸಂಹಿತೆ-2023ರ ಸೆಕ್ಷನ್‌ 35ರ ಅನುಸಾರ ಆರೋಪಿಗೆ ಚೆಕ್‌ ಲಿಸ್ಟ್‌ ಒದಗಿಸದೇ ಹೋದಲ್ಲಿ ಅಂತಹ ಆರೋಪಿಯು ಠಾಣಾಧಿಕಾರಿ ಮುಂದೆ…

Read More