Author: main-admin

ಭಾರತದ ಮಾಜಿ ಕ್ರಿಕೆಟಿಗ ಯೋಗರಾಜ್ ಸಿಂಗ್ ವೆಬ್ ಸರಣಿಯಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಚಂಡೀಗಢ ಪೊಲೀಸರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆದ ನಂತರ ಐಪಿಸಿ ಮತ್ತು ಐಟಿ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದು ಯೋಗರಾಜ್ ಸಿಂಗ್ ಅವರ ಮೊದಲ ವಿವಾದವಲ್ಲ, ಹಿಂದೆ ಕೂಡ ಅವರು ಧೋನಿ ವಿರುದ್ಧ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ವೆಬ್ ಸರಣಿಯೊಂದರ ಸಂಭಾಷಣೆಯಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಚಂಡೀಗಢ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವರದಿ ಪ್ರಕಾರ, ವೆಬ್ ಸರಣಿಯ ವೀಡಿಯೊ ತುಣುಕೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಯೋಗರಾಜ್ ಸಿಂಗ್ ಪಾತ್ರವು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಂವಹನ ನಡೆಸುತ್ತಿರುವುದನ್ನು ಕಾಣಬಹುದು.…

Read More

ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ 2026ರ ಮೇ 14ರಂದು ನಡೆದ ಭವ್ಯ ಸಮಾರಂಭದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನಾಲ್ವರು ಡಿಸ್ಕಾಲ್ಡ್ ಕಾರ್ಮೆಲೈಟ್ ಡೀಕನ್‌ಗಳಾದ ವಂ. ಆಲ್ವಿನ್ ಡಿಸೋಜಾ, ವಂ. ಲೋಯ್ ಜಾಕ್ಸನ್ ಕ್ರಾಸ್ತಾ, ವಂ. ಎಲ್ಸ್ಟನ್ ಮೊಂತೇರೊ ಮತ್ತು ವಂ.ಹಿಲರಿ ರೊಡ್ರಿಗಸ್ ಅವರಿಗೆ ಪವಿತ್ರ ಗುರುದೀಕ್ಷೆ ನೀಡಿದರು. ಈ ಸಂದರ್ಭದಲ್ಲಿ ಪ್ರವಚನ ನೀಡಿದ ಬಿಷಪ್ ಅವರು, ಗುರುತ್ವವು ಮಾನವಕುಲದ ರಕ್ಷಣೆಗಾಗಿ ತನ್ನನ್ನೇ ಅರ್ಪಿಸಿಕೊಂಡ ದೇವಕುರಿ ಯೇಸುಕ್ರಿಸ್ತರನ್ನು ಅನುಕರಿಸುವ ಕರೆಯಾಗಿದ್ದು, ಪ್ರತಿಯೊಬ್ಬ ಗುರುವು ಬಲಿಪೀಠದ ಮುಂದೆ “ಯಾಜಕ ಮತ್ತು ಬಲಿಪಶು” ಆಗಿ ತನ್ನ ಜೀವನವನ್ನೇ ಬಲಿದಾನವಾಗಿ ಅರ್ಪಿಸಬೇಕು ಎಂದು ಕರೆ ನೀಡಿದರು. ಸಂತ ಪಾದ್ರೆ ಪಿಯೋ ಅವರ ಉದಾಹರಣೆಯನ್ನು ನೀಡುತ್ತಾ, ಗುರುಗಳು ಜನರೊಂದಿಗೆ ನಿಕಟವಾಗಿರಬೇಕು ಮತ್ತು ಪ್ರವಾದಿ ಎಲಿಜಾರಂತೆ ದೈವಿಕ ಉತ್ಸಾಹದೊಂದಿಗೆ ಆಧುನಿಕ ಕಾಲದ ಸುಗಮ ಮಾರ್ಗಗಳನ್ನು ಬಳಸಿ ಸುಸಂದೇಶ ಸಾರಬೇಕು ಎಂದು ಬಿಷಪ್ ಆಶಿಸಿದರು. ಇದೇ ಅವಧಿಯಲ್ಲಿ ಕರ್ನಾಟಕ-ಗೋವಾ ಪ್ರಾಂತ್ಯದ…

Read More

ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್​ಗಳು ಮತ್ತು ಎಲ್‌ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಅನಿಲ್ ಅಂಬಾನ ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (RCom) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮೇ 14) ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲಕ್ಕೆ ಶೋಧ ನಡೆಸಿದ್ದಾರೆ. ಪ್ರಮುಖರ ನಿವಾಸಗಳ ಮೇಲೆ ದಾಳಿ ರಿಲಯನ್ಸ್ ಕಮ್ಯುನಿಕೇಷನ್ಸ್‌ನಲ್ಲಿ 2015 ರಿಂದ 2017ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಸಿಇಒ (CEO), ಸಿಎಫ್‌ಒ (CFO) ಮತ್ತು ನಿರ್ದೇಶಕರ ವಸತಿ ಆವರಣಗಳ ಮೇಲೆ ಈ ದಾಳಿ ನಡೆದಿದೆ. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ನೀಡಿದ ಸರ್ಚ್ ವಾರಂಟ್ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದ್ದು, ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ತಿಳಿಸಿದೆ. 27 ಸಾವಿರ ಕೋಟಿಗೂ ಅಧಿಕ ವಂಚನೆ ಅನಿಲ್ ಅಂಬಾನಿ ನೇತೃತ್ವದ ಸಮೂಹ ಸಂಸ್ಥೆಗಳ ವಿರುದ್ಧ ಕಳೆದ ಕೆಲವು…

Read More

ಬೆಂಗಳೂರು: ಕಾನೂನುಬದ್ಧ, ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯಿಂದ ಮಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಕರ್ನಾಟಕ ಹೈಕೋರ್ಟ್ ತಾಯಿಯಿಂದ ಉಡುಗೊರೆಯಾಗಿ ಪಡೆದಿದ್ದ ಆಸ್ತಿಯನ್ನು ಹಿಂತಿರುಗಿಸುವಂತೆ 44 ವರ್ಷದ ಮಹಿಳೆಗೆ ಆದೇಶಿಸಿದ್ದ ತೀರ್ಪನ್ನು ಎತ್ತಿಹಿಡಿದಿದೆ. ತಾಯಿ ನೀಡಿದ್ದ ಗಿಫ್ಟ್ ಡೀಡ್ ರದ್ದುಗೊಳಿಸಿದ್ದ ಹಿರಿಯ ನಾಗರಿಕ ನಿರ್ವಹಣಾ ನ್ಯಾಮಂಡಳಿ ಮತ್ತು ಉಪವಿಭಾಗಾಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ಪವಿತ್ರಾ ಎಂಬ ಮಹಿಳೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ನ್ಯಾಯಮೂರ್ತಿ ಸಚಿನ್ ಎಸ್. ಮಗದುಮ್ ಅವರಿದ್ದ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಸ್ವಂತ ಆಸ್ತಿ ಹೊಂದಿದ್ದರೂ, ಅದನ್ನು ಮಕ್ಕಳಿಗೆ ವರ್ಗಾಯಿಸಿದ ಬಳಿಕ ಬಾಡಿಗೆ ಮನೆಯಲ್ಲಿ ವಾಸಿಸಲು ಒತ್ತಾಯಿತಳಾದ ಹಿರಿಯ ನಾಗರಿಕರ ಅಸಹಾಯಕ ಸ್ಥಿತಿಯನ್ನು ಈ ಪ್ರಕರಣ ಸ್ಪಷ್ಟವಾಗಿ ತೋರಿಸುತ್ತದೆ ಎಂದು ಆದೇಶದಲ್ಲಿ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ. ಪತಿ ಜೊತೆಗಿನ ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಹೇಮಾ ಸುಮಾರು ಮೂರುವರೆ ವರ್ಷಗಳ ಕಾಲ ತಮ್ಮ ಮಗಳು ಪವಿತ್ರಾ ಜೊತೆ ತಮ್ಮದೇ ಮನೆಯಲ್ಲಿ ವಾಸಿಸುತ್ತಿದ್ದರು. ಈ ವೇಳೆ, ಬಾಡಿಗೆ ಆದಾಯವನ್ನು ಅವರ ಹಿತಕ್ಕಾಗಿ ಬಳಸಲಾಗುತ್ತದೆ ಎಂಬ ಭರವಸೆಯೊಂದಿಗೆ ಆಸ್ತಿಯನ್ನು…

Read More

ಅಹಮದಾಬಾದ್ : ಹೆಸರಾಂತ ಆಭರಣ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ 1.66 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹರ್ಷಿದಾ ಶೆಟ್ಟಿ ಎಂಬಾಕೆ ಕಳ್ಳತನ ಮಾಡಿದ ಆರೋಪಿ. ಈಕೆ ಕಳೆದ 11 ತಿಂಗಳಿನಿಂದ ದರ್ಶನ್ ಭಾಯ್ ಎಂಬುವವರಿಗೆ ಸೇರಿದ ಆಭರಣದ ಶೋ ರೂಂನಲ್ಲಿ ಸೇಲ್ಸ್ ವುಮೆನ್ ಆಗಿ ಕೆಲಸ ಮಾಡುತ್ತಿದ್ದಳು. ಕಳ್ಳತನ ಮಾಡಿದ ಬಳಿಕ “ತುರ್ತು ಕೆಲಸಕ್ಕಾಗಿ ಮಾಲೀಕರೇ ನನಗೆ ರಜೆ ನೀಡಿದ್ದಾರೆ” ಎಂದು ಸಹೋದ್ಯೋಗಿಗಳಿಗೆ ಸುಳ್ಳು ಹೇಳಿ ಆಕೆ ಹೊರನಡೆದಿದ್ದಳು. ಸಂಜೆ ಗ್ರಾಹಕರಿಗೆ ಆಭರಣ ತೋರಿಸುವಾಗ ಚಿನ್ನದ ಬಳೆಯೊಂದು ನಾಪತ್ತೆಯಾಗಿರುವುದನ್ನು ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣ ಮಾಲೀಕರಿಗೆ ವಿಷಯ ಮುಟ್ಟಿಸಿದಾಗ, ತಾವು ಹರ್ಷಿದಾಗೆ ರಜೆ ನೀಡಿಲ್ಲ ಎಂಬ ಸತ್ಯ ಹೊರಬಂದಿದೆ. ಬಳಿಕ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಹರ್ಷಿದಾ ಕಪಾಟಿನಿಂದ ಚಿನ್ನಾಭರಣಗಳನ್ನು ತೆಗೆದು ತನ್ನ ಸಮವಸ್ತ್ರ ಮತ್ತು ಬ್ಯಾಗ್‌ನಲ್ಲಿ ಬಚ್ಚಿಟ್ಟುಕೊಂಡು ಹೋಗುತ್ತಿರುವುದು ಸ್ಪಷ್ಟವಾಗಿದೆ.ಸ್ಟಾಕ್ ಪರಿಶೀಲನೆ ನಡೆಸಿದಾಗ ಸುಮಾರು ₹1.66 ಕೋಟಿ…

Read More

ನವದೆಹಲಿ: ಕಳೆದ ವರ್ಷ ನ. 10 ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಗುರುವಾರ 7,500 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದೆ. ಆರೋಪಪಟ್ಟಿಯಲ್ಲಿ 588 ಸಾಕ್ಷಿಗಳ ಹೇಳಿಕೆಗಳು, 395 ಕ್ಕೂ ಹೆಚ್ಚು ದಾಖಲೆಗಳು ಮತ್ತು 200 ಕ್ಕೂ ಹೆಚ್ಚು ವಶಪಡಿಸಿಕೊಂಡ ವಸ್ತುಗಳನ್ನ ಮಾಹಿತಿಯನ್ನು ದಾಖಲಿಸಲಾಗಿದೆ. ಒಟ್ಟು 11 ಜನರನ್ನ ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಎನ್‌ಐಎ ಶೋಧ ಕಾರ್ಯ ಮುಂದುವರಿಸಿದೆ ಎಂದು ಚಾರ್ಜ್‌ಶೀಟ್‌ ನಲ್ಲಿ ತಿಳಿಸಲಾಗಿದೆ.2025 ರ ನವೆಂಬರ್ 10 ರಂದು ಸಂಜೆ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡು 11 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಘಟನೆಯಲ್ಲಿ ಸುತ್ತಮುತ್ತಲಿನ ಹಲವಾರು ವಾಹನಗಳು ಹಾನಿಗೊಳಗಾಗಿದ್ದವು.ಈ ಪ್ರಕರಣದ ತನಿಖೆ ನಡೆಸಿದ ಎನ್‌ಐಎ ಗುರುವಾರ ಪಟಿಯಾಲ ಹೌಸ್ ಕೋರ್ಟ್‌ನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಆರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಭಾರತೀಯ ನ್ಯಾಯ ಸಂಹಿತೆ, ಸ್ಫೋಟಕ ವಸ್ತುಗಳ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು…

Read More

ಬುರ್ಖಾ ಧರಿಸಿ ಗ್ರಾಹಕಿಯಂತೆ ಚಿನ್ನದ ಅಂಗಡಿಗೆ ನುಗ್ಗಿದ ಮಹಿಳೆಯೊಬ್ಬಳು, ಮಾಲೀಕ ಮತ್ತು ಸಿಬ್ಬಂದಿಯ ಕಣ್ಣಿಗೆ ಖಾರಪುಡಿ ಎರಚಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆಭರಣಗಳನ್ನು ನೋಡುವ ನೆಪದಲ್ಲಿ ಹೊಂಚು ಹಾಕಿದ್ದ ಈ ಕಿರಾತಕಿ, ತನ್ನ ಬಳಿಯಿದ್ದ ಖಾರದಪುಡಿಯನ್ನು ಅವರ ಕಣ್ಣಿಗೆ ಎಸೆದು ಆಭರಣಗಳನ್ನು ಎಗರಿಸಲು ಯತ್ನಿಸಿದ್ದಾಳೆ. ಈ ಇಡೀ ದರೋಡೆ ಯತ್ನದ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಪೊಲೀಸರು ಸಿಸಿಟಿವಿ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ ಎಂದು ವರದಿಯಾಗಿದೆ

Read More

ಬೆಂಗಳೂರು: ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯು ರಾಜ್ಯದ ರಾಜಧಾನಿಯಲ್ಲಿ ಭಾರಿ ಪ್ರಮಾಣದ ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ವಂಚನೆ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಸುಮಾರು 2,384 ಕೋಟಿ ರೂ. ಮೊತ್ತದ ಈ ನಕಲಿ ಜಾಲಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ) ಹಾಗೂ ಸೇವಾ ವಿಶ್ಲೇಷಣೆ ಮತ್ತು ಗುಪ್ತಚರ ವಿಭಾಗದ ಅಧಿಕಾರಿಗಳು ಅತ್ಯಂತ ಚಾಣಾಕ್ಷತನದಿಂದ ಈ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಆರೋಪಿಗಳು ನಕಲಿ ಕಂಪನಿಗಳನ್ನು ಸೃಷ್ಟಿಸಿ, ಯಾವುದೇ ಸರಕು ಅಥವಾ ಸೇವೆಗಳ ಪೂರೈಕೆ ಮಾಡದೆಯೇ ಬಿಲ್‌ಗಳನ್ನು ಸೃಷ್ಟಿಸುವ ಮೂಲಕ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದರು. ನಕಲಿ ಐಟಿಸಿ ಹಗರಣಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆಯು ಈ ವರ್ಷ ತನಿಖೆಯನ್ನು ತೀವ್ರಗೊಳಿಸಿದ್ದು, ಈ ಇಬ್ಬರ ಬಂಧನದೊಂದಿಗೆ ಈ ವರ್ಷ ಒಟ್ಟು ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು…

Read More

ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಬೈಕ್ ಬಾಕ್ಸ್‌ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ಬೇತಮಂಗಲ ನ್ಯೂಟೌನ್ ನಿವಾಸಿ ರಮೇಶ್ ಎಂಬುವವರು ಕೆನರಾ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿ ಬೈಕ್ ಬಾಕ್ಸ್​ನಲ್ಲಿ ಇರಿಸಿದ್ದರು. ಬೈಕ್ ನಿಲ್ಲಿಸಿ ರಮೇಶ್ ಅಂಗಡಿಯೊಂದಕ್ಕೆ ಹೋದ ಸಂದರ್ಭದಲ್ಲಿ ಹೊಂಚು ಹಾಕಿದ್ದ ಕಳ್ಳರು ಹಣವನ್ನು ದೋಚಿದ್ದಾರೆ. ಅಚ್ಚರಿಯ ವಿಷಯವೆಂದರೆ ಈ ಕೃತ್ಯ ಬೇತಮಂಗಲ ಪೊಲೀಸ್ ಠಾಣೆಯ ಸಮೀಪವೇ ನಡೆದಿದೆ. ಕಳ್ಳರು ಹಣದೊಂದಿಗೆ ಪರಾರಿಯಾಗುತ್ತಿದ್ದಂತೆ ರಮೇಶ್ ಅವರ ಮಗ ಜೋರಾಗಿ ಕೂಗಿಕೊಂಡಿದ್ದಾರೆ. ತಕ್ಷಣ ಎಚ್ಚೆತ್ತ ಸ್ಥಳೀಯರು ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಪೊಲೀಸ್ ಠಾಣೆ ಎದುರೇ ಇಂತಹ ಘಟನೆ ನಡೆದಿದ್ದರೂ ಪೊಲೀಸರು ತಕ್ಷಣ ಸ್ಪಂದಿಸದ ಬಗ್ಗೆ ಸ್ಥಳೀಯರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

Read More

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದೊಳಗೆ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ತಕ್ಷಣ ಜಾರಿಗೆ ಬರುವಂತೆ ಸೆಪ್ಟೆಂಬರ್ 30ರವರೆಗೆ ಸಂಪೂರ್ಣ ನಿಷೇಧ ಹೇರಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಬರುವ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಈ ಆದೇಶ ಹೊರಡಿಸಿದೆ. ಈ ನಿಷೇಧವು ಕಚ್ಚಾ ಸಕ್ಕರೆ, ಬಿಳಿ ಸಕ್ಕರೆ, ಮತ್ತು ಸಂಸ್ಕರಿಸಿದ ಸಕ್ಕರೆ ಸೇರಿದಂತೆ ಎಲ್ಲಾ ರೀತಿಯ ಸಕ್ಕರೆ ರಫ್ತುಗಳಿಗೂ ಅನ್ವಯವಾಗುತ್ತದೆ.ಸಕ್ಕರೆ ರಫ್ತು ನೀತಿಯನ್ನು ಈ ಹಿಂದೆ ಇದ್ದ ನಿರ್ಬಂಧಿತ ವರ್ಗದಿಂದ ನಿಷೇಧಿತ ವರ್ಗಕ್ಕೆ ಬದಲಾವಣೆ ಮಾಡಲಾಗಿದೆ. ಇನ್ನು ನಿಗದಿತ ಕೋಟಾದಡಿ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕ ದೇಶಗಳಿಗೆ ಮಾಡುವ ಸಕ್ಕರೆ ರಫ್ತುಗಳಿಗೆ ಈ ನಿಷೇಧ ಅನ್ವಯಿಸುವುದಿಲ್ಲ. ಭಾರತ ಸರ್ಕಾರದಿಂದ ವಿಶೇಷವಾಗಿ ಅನುಮೋದಿಸಲ್ಪಟ್ಟ ರಫ್ತು ಸರಕುಗಳು ಮತ್ತು ಈಗಾಗಲೇ ಸಾಗಣೆಯಲ್ಲಿರುವ ಆರ್ಡರ್‌ಗಳಿಗೆ ವಿನಾಯಿತಿ ನೀಡಲಾಗಿದೆ.

Read More