Author: main-admin

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಇಬ್ಬರು ಮಕ್ಕಳಾದ ಎರಡೂವರೆ ವರ್ಷದ ಮೋಕ್ಷಾ, ಎಂಟು ತಿಂಗಳ ಸೃಷ್ಟಿ (8 ತಿಂಗಳು) ಎಂದು ಗುರುತಿಸಲಾಗಿದೆ. ಶೀಗೆಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಈ ಘಟನೆ ಸಂಭವಿಸಿದೆ. ದಂಪತಿ ಆಂಧ್ರ ಮೂಲದವರಾಗಿದ್ದಾರೆ. ಮೃತ ವೀರಾರ್ಜುನ್ ಐಟಿಪಿಎಲ್‍ನಲ್ಲಿರೋ ಯೂರೋ ಪಿಲ್ಸ್ ಅನ್ನೋ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೂ ಮುನ್ನ ಮಕ್ಕಳನ್ನ ಕೊಲೆಗೈದು ಪತ್ನಿಯೊಂದಿಗೆ ವೀರಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಕಾಡುಗೋಡಿ ಠಾಣಾ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು:ಜಾಮೀನಿಗಾಗಿ ವಕೀಲರನ್ನೇ ಕಿಡ್ನಾಪ್ ಮಾಡಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.ಜೈಲಿನಲ್ಲಿರುವ ತನ್ನ ಕಡೆಯ 8 ಜನರಿಗೆ ಜಾಮೀನು ಕೊಡಿಸಲು ಮೂರು ಜನ ರೌಡಿಶೀಟರ್ ವಕೀಲ ಗಿರಿಧರ್‌ನನ್ನು ಕಿಡ್ನಾಪ್ ಮಾಡಿದ್ದಲ್ಲದೇ ವಕೀಲರಿಂದ ಹಣಕಸಿದುಕೊಂಡಿದ್ದಾರೆ. ವಕೀಲ ಗಿರಧರ್ ಎಂಬುವವರನ್ನು ಅವರ ಕಾರ್‌ನಲ್ಲೇ ಅಪಹರಿಸಿ ಜೈಲಿನಲ್ಲಿರುವ ತಮ್ಮ‌ ಕಡೆಯ 8 ಜನರಿಗೂ ಬೇಲ್ ವ್ಯವಸ್ಥೆ ಮಾಡಬೇಕು ಎಂದು ಹೇಳಿ, ಬ ಳಿಕ ವಕೀಲರ ಬಟ್ಟೆ ಬಿಚ್ಚಿಸಿ ಕಾರಿನ ಜಾಕ್ ರಾಡ್ ಹಾಗೂ ಸ್ಪಾನರ್ ಬಳಸಿ ಹಲ್ಲೆ ಮಾಡಲಾಗಿದೆ. 5 ಲಕ್ಷ ರೂ. ಹಣ ತಂದು ಕೊಡಬೇಕು ಅಲ್ಲದೇ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆಯನ್ನೂ ಒಡ್ಡಿದ್ದಾರೆ. ಬಳಿಕ ಗಿರಿಧರ್ ರಿಂದ 10 ಸಾವಿರ ರೂ. ಕಸಿದುಕೊಂಡು ಕಳಿಸಿದ್ದಾರೆ. ರೌಡಿಶೀಟರ್‍ ಗಳಾದ ರಾಜೇಶ್ ಅಲಿಯಾಸ್ ಕೋಳಿ ರಾಜೇಶ್, ಹರ್ಷಿತ್ ಅಲಿಯಾಸ್ ಆಪಲ್, ಜಾನ್ ಹಾಗೂ ಭರತ್ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಟಗಿದ್ದಯ, ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ…

Read More

ವಿಟ್ಲ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧನ ಮೇಲೆ ತಂಡವೊಂದು ಹಲ್ಲೆಗೆ ಯತ್ನಿಸಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನಾರ್ಶ ಅಲದಡಿ ಎಂಬಲ್ಲಿ ನಡೆದಿದೆ. ವೃದ್ಧ ಇಸ್ಮಾಯಿಲ್ ಮತ್ತು ಆತನ ಪುತ್ರನ ಮೇಲೆ ನಾರ್ಶ ನಿವಾಸಿ ಈಚು ಯಾನೆ ಇಸುಬು ಮತ್ತು ಆತನ ಕುಟುಂಬದವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನ ನಡೆಸಿದ್ದಲ್ಲದೇ, ಮನೆಗೆ ಕಲ್ಲು ತೂರಾಟ ನಡೆಸಿ ಜೀವಬೆದರಿಕೆಯೊಡ್ಡಿದ್ದಾರೆ. ಈ ಪ್ರಕರಣ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

Read More

ಬೆಳ್ತಂಗಡಿ : ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಮುಗಿದು ಬುಧವಾರ ರಾತ್ರಿ ಬೆಂಗಳೂರು ಊರಿಗೆ ಲಗೇಜ್ ಜೊತೆ ತೆರಳಲು ಉಜಿರೆ ದ್ವಾರದ ಎದುರು ನಿಂತು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಅಪರಿಚಿತ ಯುವಕರ ತಂಡ ನಿನಗೆ ಹಿಂದೂ ಯುವತಿಯರೆ ಬೇಕಾ ಎಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ.ಯುವಕ ಸಧ್ಯ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಅವರ ಏಳನೇ ಪುತ್ರ ಆಟೋ ಚಾಲಕ ಮೊಹಮ್ಮದ್ ಅಶೀಕ್(22) ಮೇಲೆ ಆ‌.2 ರಂದು ರಾತ್ರಿ ಸುಮಾರು 9 ಗಂಟೆಗೆ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದ ಮುಂದೆ ಹಲ್ಲೆ ನಡೆದಿದ್ದು…

Read More

ಮ೦ಗಳೂರು: ಮಂಗಳೂರು ಜಂಕ್ಷನ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆಗಸ್ಟ್ 6ರ೦ದು ಶಿಲಾನ್ಯಾಸ ನೆರವೇರಲಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ರವಿವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು 19.32 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. 2023-24ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದೆಂದು ಘೋಷಿಸಲಾಗಿತ್ತು. ಈ ಯೋಜನೆಯ ಇತರೆ ರೈಲು ನಿಲ್ದಾಣಗಳ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದು…

Read More

ಕಾಸರಗೋಡು : ಯುವತಿಯೊಂದಿಗೆ ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಣ್ಣೂರು ನಿವಾಸಿಯೋರ್ವನನ್ನು ರೈಲ್ವೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಣ್ಣೂರು ಪರಪ್ಪನಂಗಡಿ ನಿವಾಸಿ ಜೋರ್ಜ್ ಜೋಸೆಫ್ (51) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ಕೊಯಮುತ್ತೂರು – ಮಂಗಳೂರು ಇಂಟರ್ ಸಿಟಿ ರೈಲಿ ನಲ್ಲಿ ಈ ಘಟನೆ ನಡೆದಿದ್ದು, ಶೋರ್ನೂರಿನಿಂದ ಮಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎಂದು ಆರೋಪಿಸಲಾಗಿದೆ. ಕಣ್ಣೂರು- ಪಯ್ಯ ನ್ನೂರು ನಡುವೆ ಈತ ಅಸಭ್ಯವಾಗಿ ವರ್ತಿಸಿರುವುದಾಗಿ ರೈಲ್ವೆ ಪೊಲೀಸರಿಗೆ ದೂರು ಲಭಿಸಿದ್ದು, ಈತನ ವರ್ತನೆ ಬಗ್ಗೆ ಮೊಬೈಲ್ ನಲ್ಲಿ ತೆಗೆದ ಫೋಟೋಗಳು ಪೊಲೀಸರಿಗೆ ಲಭಿಸಿದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Read More

 ವಿಟ್ಲದಲ್ಲಿ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆಘಾತಕಾರಿ ಮಾಹಿತಿಗಳು ಹೊರ ಬರುತ್ತಿದ್ದು, ಹಲವರು ನಿರಂತರವಾಗಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ. ಆದರೆ ಈ ವಿಚಾರ ಬಾಲಕಿ ಮನೆಯವರಿಗೆ ತಿಳಿದಿರಲಿಲ್ಲ. ಜುಲೈ 27ರಂದು ರಾತ್ರಿಯಿಡಿ ಬಾಲಕಿ ಮನೆಯಿಂದ ಕಾಣೆಯಾಗಿದ್ದು, ಮನೆಮಂದಿ ಹುಡುಕಾಟ ನಡೆಸಿದ್ದರು. ಮರುದಿನ ಬಾಲಕಿ ಸಮೀಪದ ಪಾಳು ಮನೆಯಲ್ಲಿ ಪತ್ತೆಯಾಗಿದ್ದಳು. ಬಾಲಕಿಯನ್ನು ಕಮಲಾಕ್ಷ ಎಂಬಾತ ಪಾಳುಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂಬುದು ಮನೆಯವರು ಪ್ರಶ್ನಿಸಿದ ವೇಳೆ ತಿಳಿದು ಬಂದಿದೆ. ಅದೇ ರೀತಿ 2019ರಲ್ಲಿ ಜಯಪ್ರಕಾಶ ಎಂಬಾತನೂ ಅತ್ಯಾಚಾರ ಮಾಡಿದ್ದ ವಿಚಾರವೂ ತಿಳಿದು ಬಂದಿದೆ. ಅದಾದ ಬಳಿಕ ಅಕ್ಷಯ್‌, ಸುಕುಮಾರ್‌ , ರಾಜಾ ಎಂಬುವರು ತನ್ನ ಮೇಲೆ ಅತ್ಯಾಚಾರ ನಡೆಸಿರುವ ಬಗ್ಗೆ ಬಾಲಕಿ ಮನೆಯವರಿಗೆ ತಿಳಿಸಿದ್ದಾಳೆ. ಒಂದೇ ವರ್ಷದಲ್ಲಿ ಹಲವು ಬಾರಿ ಅತ್ಯಾಚಾರ ನಡೆಸಿರುವುದು ತಿಳಿದು ಬಂದಿದೆ.

Read More

ಕಾರ್ಕಳ: ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ನಡೆಸಿದ ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರನ್ನು ಬಂಧಿಸಿದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಮತ್ತು ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಆರೋಪಿಗಳು ಇವರ ಕಾರನ್ನು ಹಿಂಬಾಲಿಸಿ ಮತ್ತೊಂದು ಕಾರಿನಲ್ಲಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ್ದಾರೆ.ಈ ವೇಳೆ ಕಾರಿನಲ್ಲಿದ್ದ ಮಹಿಳೆಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದವರನ್ನು ವಿಭಿನ್ನ ಕೋಮಿನವರು ಎಂದು ತಿಳಿದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಚಿತ್ ಸಫಲಿಗ ಆರೋಪಿಗಳು. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು…

Read More

ಬಂಟ್ವಾಳ: RSS ಮುಖಂಡ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಹೆಸರಲ್ಲಿ ನಕಲಿ ಖಾತೆ ತೆರೆದು ಆಕ್ಷೇಪಾರ್ಹ ಬರಹಗಳನ್ನು ಪೋಸ್ಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಮ್ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ. ಕಲ್ಲಡ್ಕ ಡಾ ಭಟ್ ಅವರ ಪೇಸ್ ಬುಕ್ ಖಾತೆಯಾಗಲಿ, ಅಥವ ಇನ್ನಿತರ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಖಾತೆಯನ್ನು ಹೊಂದಿರುವುದಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.ಅಲ್ಲದೆ ಈ ಖಾತೆಯ ಮೂಲಕ ಸಮಾಜದಲ್ಲಿ ಅಶಾಂತಿ ಹಬ್ಬಿಸುವ ಪ್ರಯತ್ನ ಮತ್ತು ಹೆಸರನ್ನು ಕೆಡಿಸುವ ಕೆಲಸ ಮಾಡಲಾಗುತ್ತಿದ್ದು ಈ ಬಗ್ಗೆ ಪೋಲೀಸರು ಸೂಕ್ತವಾದ ತನಿಖೆ ನಡೆಸುವಂತೆ ಮತ್ತು ಅವರ ಮೇಲೆ ಕಾನೂನು ಕ್ರಮವನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಪೋಲೀಸರು ‌ನಿಗಾವಹಿಸುವಂತೆಯೂ ಅವರು ತಿಳಿಸಿದ್ದಾರೆ.

Read More

ಮೂಡಿಗೆರೆ: ಇತ್ತೀಚಿಗೆ ಕುಂದಾಪುರದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ದಾವಣಗೆರೆಯ ಶರತ್ ಸಾವನ್ನಪ್ಪಿದ್ದ ಈ ಘಟನೆ ನಡೆದ ಬಳಿಕವೂ ಪ್ರವಾಸಿಗರು ಜಲಪಾತಗಳಲ್ಲಿ ಅಪಾಯಕಾರಿಯಾಗಿ ಸೆಲ್ಫಿ, ರೀಲ್ಸ್ ಮಾಡುವುದು ಕಂಡುಬಂದಿದೆ. ಅಲ್ಲದೆ ಚಾರ್ಮಾಡಿ ಘಾಟಿಯಲ್ಲಿ ಇರುವ ಜಲಪಾತಗಳಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿ ಸೆಲ್ಫಿ ತೆಗೆದುಕೊಳ್ಳುವ ಪ್ರಕರಣಗಳು ಹೆಚ್ಚಾಗಿದ್ದು, ಇದಕ್ಕೆಲ್ಲಾ ಕಡಿವಾಣ ಹಾಕಲು ಇದೀಗ ಜಲಪಾತದ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಚಾರ್ಮಾಡಿ ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಕುಣಿಯುತ್ತಿದ್ದ ಪ್ರವಾಸಿಗರು ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದರು, ಅಷ್ಟು ಮಾತ್ರವಲ್ಲದೆ ರಸ್ತೆ ಮಧ್ಯೆ ಕುಣಿಯೋ ಧಾವಂತದಲ್ಲಿ ವಾಹನಗಳಿಗೂ ಅಡ್ಡ ಹೋಗುತ್ತಿದ್ದರು ಇದರಿಂದ ಒಮ್ಮೆ ರೋಗಿ ಹೊತ್ತ ಆಂಬುಲೆನ್ಸ್ ಕೂಡ ಪರದಾಟ ನಡೆಸಿತ್ತು, ಬಂಡೆ ಮೇಲಿಂದ ಬಿದ್ದು ಕೈ-ಕಾಲು ಮುರಿದುಕೊಂಡವರು ಇದ್ದಾರೆ, ಜಾರೋ ಬಂಡೆ ಕೆಲವರ ಜೀವಕ್ಕೂ ಸಂಚಾಕಾರ ತಂದಿದೆ. ಇದೀಗ ಜಲಪಾತಗಳ ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ ಮಾಡಲಾಗಿದ್ದು ಇಡೀ ದಿನ ಪೊಲೀಸರು…

Read More