Author: main-admin

ಬೆಂಗಳೂರು: ನಗರದ ಪೊಲೀಸರ ಕಾರ್ಯ ಚಟುವಟಿಕೆಯಲ್ಲಿ ಪಾರದರ್ಶಕತೆ ತರುವ ಸಲುವಾಗಿ, ಇನ್ಮುಂದೆ ಬೆಂಗಳೂರು ನಗರ ಪೊಲೀಸ್ ಹೊಯ್ಸಳ ಗಸ್ತು ವಾಹನದ ಅಧಿಕಾರಿಗಳಿಗೂ ಬಾಡಿ ಕ್ಯಾಮೆರಾ ಕಡ್ಡಾಯಗೊಳಿಸಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದು, ಹೊಯ್ಸಳ ವಾಹನದ ಗಸ್ತು ಪೊಲೀಸ್ ಅಧಿಕಾರಿ ಕರ್ತವ್ಯ ನಿರ್ವಹಣೆ ವೇಳೆ ಬಾಡಿ ವೋರ್ನ್ ಕ್ಯಾಮೆರಾ ಧರಿಸಲಿದ್ದಾರೆ. ಸಾರ್ವಜನಿಕರು ಈ ಕ್ರಮವನ್ನು ಪ್ರಶಂಸಿಸುವುದಾದರೇ ಹೊಯ್ಸಳ ಗಸ್ತು ವಾಹನದ ಅಧಿಕಾರಿಗಳ ಜೊತೆಗೆ ಸೆಲ್ಫೆ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇನ್ನೂ ಸ್ವತಹ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಕೂಡ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರುವ ತಮ್ಮ ಪೋಟೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಗಸ್ತು ವಾಹನದ ಪೊಲೀಸ್ ಅಧಿಕಾರಿ ಇನ್ಮುಂದೆ ಬಾಡಿ ವೋರ್ನ್ ಕ್ಯಾಮೆರಾ ಧರಿಸಲಿದ್ದಾರೆ. ಹೀಗೆ ಧರಿಸುವುದು ಕಡ್ಡಾಯವಾಗಿದೆ ಎಂದಿದ್ದಾರೆ.

Read More

ಮಂಗಳೂರು: ಲೋನ್ ಆ್ಯಪ್‌ ದಂಧೆಕೋರರು ಸಾಲ ಪಡೆದವರ ಜೀವ ಹಿಂಡುತ್ತಿರುವುದು ಸುದ್ದಿಯಾಗುತ್ತಲೇ ಇದೆ‌. ಇದೀಗ ಲೋನ್ ಪಡೆದ ವ್ಯಕ್ತಿಯ ಭಾವಚಿತ್ರವನ್ನು ಲೋನ್ ಆ್ಯಪ್ ನವರು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರು ಲೋನ್ ಆ್ಯಪ್ ನಲ್ಲಿ 3500 ರೂ. ಸಾಲಕ್ಕೆ ಅರ್ಜಿ ಹಾಕಿದ್ದರು. ಲೋನ್ ಮಂಜೂರು ಆಗಿ ಬ್ಯಾಂಕ್ ಖಾತೆಗೆ 2800 ರೂ. ಸಾಲ ಜಮಾ ಆಗಿದೆ. ಈ ಸಾಲವನ್ನು ಜು.26ಕ್ಕೆ ಮುಂಚಿತವಾಗಿ ಮರುಪಾವತಿ ಮಾಡಬೇಕಿತ್ತು. ಆದ್ದರಿಂದ ಜು.19ರಂದು 1400 ರೂ. ಬ್ಯಾಂಕ್ ಖಾತೆಯಿಂದ ಪಾವತಿ ಮಾಡಿದ್ದಾರೆ. ಉಳಿದ ಹಣವನ್ನು ಜು.26ರಂದು ಲೋನ್ ಕಳುಹಿಸಿಕೊಟ್ಟ ವ್ಯಕ್ತಿಗೆ ಹಂತಹಂತವಾಗಿ 4,200 ರೂ. ಪಾವತಿ ಮಾಡಿರುತ್ತಾರೆ. ಆದರೂ ಲೋನ್ ನೋಡಿರುವ ಅಪರಿಚಿತ ದೂರುದಾರರ ಮೊಬೈಲ್ ಕಾಂಟಾಕ್ಟ್ ಲೀಸ್ಟ್‌ನಲ್ಲಿರುವ ಅವರ ತಂದೆಯ, ಸಂಬಂಧಿಕರ ಕಾಲೇಜು ಅಧ್ಯಾಪಕರ ಹಾಗೂ ಸಂಪರ್ಕದಲ್ಲಿರುವ ಇತರರ ವಾಟ್ಸ್ಆ್ಯಪ್ ಗೆ ಎಡಿಟ್ ಮಾಡಿದ ಅಶ್ಲೀಲ ಭಾವಚಿತ್ರವನ್ನು ರವಾನಿಸಿದ್ದಾರೆ. ಅಲ್ಲದೆ ದೂರುದಾರ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 46 ಗ್ರೇಡ್-1 ಹಾಗೂ ಗ್ರೇಡ್-2 ದರ್ಜೆಯ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಕಂದಾಯ ಇಲಾಖೆಯ ತಹಶೀಲ್ದಾರ್ ಗ್ರೇಡ್-1 ಮತ್ತು ತಹಶೀಲ್ದಾರ್ ಗ್ರೇಡ್-2 ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಿದೆ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ತಹಶೀಲ್ದಾರ್ ಗ್ರೇಡ್-1 ಅಂಜುಂ ತಬಸುಮ್ ಅವರನ್ನು ಪ್ರಸ್ತುತ ನಿರ್ವಹಿಸುತ್ತಿರುವ ಸ್ಥಳದಲ್ಲಿಯೇ ಮುದುವರೆಸಿದೆ. ಬೇಲೂರು ತಾಲೂಕು ತಹಶೀಲ್ದಾರ್ ಮಮತ.ಎಂ ಅವರುನ್ನು ಪ್ರಸ್ತುತ ನಿರ್ವಹಿಸುತ್ತಿರುವ ಸ್ಥಳದಲ್ಲಿಯೇ ಮುಂದುವರೆಸಿದೆ. ಕುರಗೋಡು ತಾಲ್ಲೂಕು ತಹಶೀಲ್ದಾರ್ ಗುರುರಾಜ್ ಎಂ ಚಲವಾದಿ ಅವರನ್ನು ಬಳ್ಳಾರಿ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಿದೆ. ಬೀದರ್ ನ ಚಿಟಗುಪ್ಪಾ ತಾಲೂಕು ತಹಶೀಲ್ದಾರ್ ರವೀಂದ್ರ ದಾಮ ಅವರನ್ನು ಅಲ್ಲಿಯೇ ಮುಂದುವರೆಸಿದೆ. ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದಂತ ತಹಶೀಲ್ದಾರ್ ಗ್ರೇಡ್-2 ವೈ.ಕೆ ಗುರುಪ್ರಸಾದ್ ಅವರನ್ನು ಚಾಮರಾಜನಗರದ ಹನೂರು ತಾಲ್ಲೂಕು ತಹಶೀಲ್ದಾರ್ ಆಗಿ ನಿಯೋಜಿಸಿದೆ. ಕಾಗವಾಡ ತಹಶೀಲ್ದಾರ್ ಮುಜಫರ ಎನ್…

Read More

ಬಂಟ್ವಾಳ: ಪೋಲಿಸರ ಮೇಲೇಯೇ ಹಲ್ಲೆ ಗೆ ಯತ್ನ ಮಾಡಿರುವ ಘಟನೆ ನಡೆದಿದೆ . ಬಂಟ್ವಾಳ ತಾಲೂಕಿನ ಬಿಸಿ ರೋಡಿನಲ್ಲಿ ಈ ಘಟನೆ ನಡೆದಿದ್ದು, ಪೋಲಿಸ್‌ ಸಿಬ್ಬಂದಿ ಪತ್ನಿ ಮತ್ತು ಪತ್ನಿಯ ಸಹೋದರಿಯ ಜೊತೆಗೆ ಜೂನ್‌ 27 ರಂದು ಊಟ ಮಾಡಿಕೊಂಡು ಹೋಗುತ್ತಿದ್ದ ಸಮಯದಲ್ಲಿ ಇಬ್ಬರು ಯುವಕರು ಅಡ್ಡಗಟ್ಟಿ ಎಲ್ಲಿಗೆ ಹೋಗುತ್ತಿದ್ದೀಯಾ ಅಂತ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ನಾನು ಪೋಲಿಸು ಅಂದ್ರು ಕೂಡ ಇಬ್ಬರು ಆರೋಪಿಗಳು ಪೋಲಿಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ಪೋಲಿಸ್ ಸಿಬ್ಬಂದಿ ಮೊದಲು ಡಿವೈಎಸ್‌ಪಿ ಕಚೇರಿಯಲ್ಲಿ ಕೆಲಸದಲ್ಲಿ ಇದ್ದರು ಎನ್ನಲಾಗಿದ್ದು, ಈಗ ಎನ್‌ಐಎ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರ ಅಂತ ತಿಳಿದು ಬಂದಿದೆ. ಸದ್ಯ ಘಟನೆ ಸಂಬಂಧ ಮನೀಶ್‌ ಪೂಜಾರ್‌, ಮಂಜುನಾಥ್‌ ಆಚಾರ್ಯ ಎನ್ನುವರನ್ನು ವಶಕ್ಕೆ ಪಡೆದುಕೊಂಡಿದ್ದು, ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸದ್ಯ ಬಂಟ್ವಾಳ ಪೋಲಿಸ್‌ ಠಾಣೆಯಲ್ಲಿ ದಾಖಲಾಗಿದೆ.

Read More

ಉಡುಪಿ: ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರು ತಮ್ಮ ವಕೀಲರ ಮೂಲಕ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಪೀಠ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

Read More

ಮಂಗಳೂರು: ಉದ್ದಿಮೆ ಪರವಾನಗಿ ಪಡೆಯದೇ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಕಾನೂನು ಬಾಹಿರವಾಗಿ ರಸ್ತೆ ಬದಿಯಲ್ಲಿ ಹಾಗೂ ಫುಟ್ ಪಾತ್‍ಗಳಲ್ಲಿ ಬೀದಿ-ಬದಿ ವ್ಯಾಪಾರಸ್ಥರು ಅನಧಿಕೃತವಾಗಿ ಅಂಗಡಿಗಳು, ಗೂಡಂಗಡಿ ಮೂಲಕ ಇತರೆ ವ್ಯಾಪಾರ ವಹಿವಾಟುಗಳನ್ನು ಎಲ್ಲೆಂದರಲ್ಲಿ ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಓಡಾಡಲು ಹಾಗೂ ವಾಹನ ಸವಾರನಿಗೆ ರಸ್ತೆತಡೆ ಉಂಟಾಗಿ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಆದ ಕಾರಣ ಟೈಗರ್ ಕಾರ್ಯಾಚರಣೆ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಬೀದಿ-ಬದಿ ವ್ಯಾಪಾರಸ್ಥರ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕಾಸರಗೋಡು: ಆವರಣ ಇಲ್ಲದ ಬಾವಿಗೆ ಬಿದ್ದು ಪಾಕತಜ್ಞರೋರ್ವರು ಮೃತಪಟ್ಟ ಘಟನೆ ಪೆರ್ಲ ಸಮೀಪದ ಕಾಟುಕುಕ್ಕೆ ಕುಡ್ತಡ್ಕದಲ್ಲಿ ಗುರುವಾರ ಸಂಜೆ ನಡೆದಿದೆ. ಜನಾರ್ಧನ ನಾಯಕ್ (42) ಮೃತಪಟ್ಟವರೆಂದು ಗುರುತಿಸಲಾಗಿದೆ. ಮನೆ ಸಮೀಪದ ಬಾವಿಗೆ ಬಿದ್ದು ಈ ದುರ್ಘಟನೆ ನಡೆದಿದೆ. ಸಂಜೆ ನೀರು ಸೇದಲು ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಆಕಸ್ಮಿಕವಾಗಿ ಬಿದ್ದಿರಬಹುದೆಂದು ಶಂಕಿಸಲಾಗಿದೆ. ತವರು ಮನೆಗೆ ತೆರಳಿದ್ದ ಪತ್ನಿ ಮತ್ತು ಮಗು ಸಂಜೆ ಮನೆಗೆ ಬಂದಾಗ ಜನಾರ್ಧನ ನಾಪತ್ತೆಯಾಗಿದ್ದು, ಪರಿಸರ ವಾಸಿಗಳಿಗೆ ಮಾಹಿತಿ ನೀಡಿ, ಸುತ್ತಮುತ್ತಲು ಪರಿಶೀಲಿಸಿದಾಗ ಬಾವಿಗೆ ಬಿದ್ದಿರುವುದು ಪತ್ತೆಯಾಗಿದೆ. ಪರಿಸರವಾಸಿಗಳು ಮತ್ತು ಮುಳುಗು ತಜ್ಞರ ಸಹಾಯದಿಂದ ಮೃತ ದೇಹವನ್ನು ಮೇಲಕ್ಕೆತ್ತಲಾಯಿತು. ಬದಿಯಡ್ಕ ಪೊಲೀಸರು ಮಹಜರು ನಡೆಸಿ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಬಂಧಿಕರಿಗೆ ಬಿಟ್ಟು ಕೊಡಲಿದ್ದಾರೆ.

Read More

ಮಂಗಳೂರು: ಸಂಚಾರಿ ನಿಯಮಗಳನ್ನು ಪಾಲಿಸದ ವಾಹನ ಚಾಲಕರಿಗೆ ಇದೀಗ ಪೊಲೀಸರು ಸರಿಯಾಗೇ ತಿರುಗೆಟು ನೀಡಲು ಮುಂದಾಗಿದ್ದು, ದಂಡದ ಜೊತೆಗ ಇದೀಗ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಮುಂದಾಗಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಈಗಾಗಲೇ 222 ಮಂದಿ ವಾಹನ ಚಾಲಕರ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಆರ್ ಟಿಓಗೆ ಶಿಫಾರಸ್ಸು ಮಾಡಿದ್ದಾರೆ. ಸಂಚಾರಿ ನಿಯಮ ಪಾಲಿಸದೇ ಎಸ್ಕೇಪ್ ಆಗುತ್ತಿದ್ದವರಿಗೆ ಇದು ಶಾಕಿಂಗ್ ನ್ಯೂಸ್ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 14 ದಿನದಲ್ಲಿ ಅಂದರೆ ಜುಲೈ 13 ರಿಂದ ಜುಲೈ 26 ರವರೆಗೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿರುವ ಹಾಗೂ ಸಂಚಾರ ನಿಯಮ ಪಾಲನೆ ಮಾಡದೇ ಇರುವ ವಾಹನ ಚಾಲಕರ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಆರ್ ಟಿಓಗೆ ಶಿಫಾರಸು ಮಾಡಿದ್ದಾರೆ. ಸದ್ಯ 222 ಚಾಲಕರ ಡಿಎಲ್ ರದ್ದು ಮಾಡುವಂತೆ ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡಲಾಗಿದೆ. ಅದರಲ್ಲಿ ಅತೀವೇಗ ಮತ್ತು ನಿರ್ಲಕ್ಷ್ಯದ ಚಾಲನೆ – 113ಡ್ರಿಂಕ್ ಆಂಡ್ ಡ್ರೈವ್ –…

Read More

ಮಂಗಳೂರು: ನಗರದ ಬಂದರು ಪ್ರದೇಶದ ಧಕ್ಕೆಯ ಶೌಚಾಲಯದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು 3.378 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಸ್ಬಾ ಬೆಂಗ್ರೆ ನಿವಾಸಿಗಳಾದ ಅಬ್ದುಲ್ ರಹೀಂ ಮತ್ತು ಮೊಹಮ್ಮದ್ ಅಶ್ರಫ್ ಎಂಬವರು ಬಂಧಿತ ಆರೋಪಿಗಳು. ಮಂಗಳೂರು ನಗರದ ಬಂದರು ಉತ್ತರ ಧಕ್ಕೆಯಲ್ಲಿರುವ ಹಳೆಯ ಸಾರ್ವಜನಿಕ ಶೌಚಾಲಯದ ಬಳಿ ಆರೋಪಿಗಳು ಬುಧವಾರ ಆ್ಯಕ್ಟಿವಾ ಹೋಂಡಾ ಸ್ಕೂಟರ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು‌. ಈ ಬಗ್ಗೆ ಖಚಿತ ಮಾಹಿತಿ ಅನುಸಾರ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಅವರಲ್ಲಿದ್ದ 1,67,000 ರೂ. ಮೌಲ್ಯದ ಒಟ್ಟು 3.378 ಕೆಜಿ ಗಾಂಜಾ, ತೂಕಮಾಪನ, 4,940 ರೂ. ನಗದು ಹಾಗೂ ಆ್ಯಕ್ಟಿವಾ ಹೋಂಡಾ ಸ್ಕೂಟರನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 83/2023 U/s 8(c), 20(b) (ii) (B) NDPS ACT ರನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

Read More

ಮಂಗಳೂರು: ಎರಡು ಮೂರು ದಿನಗಳಿಂದ ಮಂಗಳೂರಿನಲ್ಲಿ ಗೂಡಂಗಡಿ ಹಾಗೂ ಬೀದಿಬದಿ ವ್ಯಾಪಾರಿಗಳನ್ನು ಮಟ್ಟ ಹಾಕಲು ಮತ್ತು ಸಿಗರೇಟು ಬಾಂಗ್ ಗಳಂತಹ ಮಾದಕ ಪದಾರ್ಥಗಳನ್ನು ಮಾರುವುದು ಹಾಗೂ ಉಪಯೋಗಿಸುವುದನ್ನು ನಿಲ್ಲಿಸುವ ಒಳ್ಳೆಯ ಉದ್ದೇಶದಿಂದ ಮಂಗಳೂರು ಮಹಾನಗರಪಾಲಿಕೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಪರವಾನಿಗೆ ಇಲ್ಲದ ಗೂಡಂಗಡಿಗಳನ್ನು ತೆರವು ಮಾಡುವ ಕಾರ್ಯ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಮಂಗಳೂರಿನ ಹೃದಯ ಭಾಗದಲ್ಲಿರುವ ಸೆಂಟ್ರಲ್ ರೈಲು ನಿಲ್ದಾಣದ ಜಾಗ ಹಾಗೂ ಎದುರು ಭಾಗದಲ್ಲಿ ಒಂದು ಗೂಡಂಗಡಿಯನ್ನು ಇರಿಸಲಾಗಿದೆ. ಇದರಲ್ಲಿ ರೈಲ್ವೆ ಅಧಿಕಾರಿಗಳು ಮತ್ತು ರೈಲ್ವೆ ಪೊಲೀಸರು ಶಾಮೀಲಾಗಿರಬಹುದೆಂದು ಸಂಶಯಿಸಲಾಗಿದೆ.ಅನಧಿಕೃತ ಗೂಡಂಗಡಿಯು ತಲೆ ಎತ್ತಿದ್ದು, ಮಹಾನಗರ ಪಾಲಿಕೆ ಮತ್ತು ರೈಲ್ವೇ ಅಧಿಕಾರಿಗಳು ತಕ್ಷಣ ತೆರವುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

Read More